Tag: wakf board karnataka

  • ಶಾಲೆಯಲ್ಲಿ ಗಣೇಶನ ಕೂರಿಸ್ಬೇಡಿ ಅಂದಿಲ್ಲ- ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: BC ನಾಗೇಶ್

    ಶಾಲೆಯಲ್ಲಿ ಗಣೇಶನ ಕೂರಿಸ್ಬೇಡಿ ಅಂದಿಲ್ಲ- ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: BC ನಾಗೇಶ್

    ಬೆಂಗಳೂರು: ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಆದ್ರೆ ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

    ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಯಾವುದೇ ಮಾರ್ಗಸೂಚಿ, ಅನುಮತಿಯನ್ನು ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವ ಆಚರಿಸಿದ್ರೆ ಶಾಲೆಯಲ್ಲಿ ನಮಾಜ್‌ಗೆ ಅವಕಾಶ ನೀಡಿ

    ಹಿಂದೆ ಯಾವ ನಿಯಮಗಳು ಇದ್ದವೋ ಅದೇ ನಿಯಮ ಈಗಲೂ ಇವೆ. ಗಣೇಶ ಹಬ್ಬ ಬಿಜೆಪಿ ಸರ್ಕಾರ ಬಂದಾಗಿನಿಂದ ಮಾಡಿದ್ದು ಅಲ್ಲ. ಬ್ರಿಟಿಷರ ಕಾಲದಿಂದಲೂ ಗಣೇಶೋತ್ಸವ ಮಾಡಿಕೊಂಡು ಬರಲಾಗ್ತಿದೆ. ಹಿಂದೆ ಯಾವ ರೀತಿ ನಡೆಯುತ್ತಿತ್ತೋ ಅದೇ ರೀತಿ ನಡೆದುಕೊಂಡು ಬರಲಿದೆ. ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

    ಈಗ ಇರೋ ನಿಯಮಗಳೇ ಮುಂದೆಯೂ ಇರಲಿದೆ. ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ. ಶಾಲೆಗಳಲ್ಲಿ ಹೊಸ ಹೊಸ ಸಂಪ್ರದಾಯ ಹುಟ್ಟುಹಾಕೋಕೆ ಅವಕಾಶ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ದ್ವೇಷದ ಕಸಕ್ಕೆ ಹೋಲಿಸಿದ ನಿರ್ದೇಶಕ ಡಿಲನ್ ಮೋಹನ್ ಗ್ರೇ

    ಮುಸ್ಲಿಂ ಮುಖಂಡ ಉಮರ್ ಷರೀಫ್ ಸಹ ಈ ಬಗ್ಗೆ ಮಾತನಾಡಿದ್ದು, ಗಣಪ ಓಕೆ ಹಿಜಬ್‌ಗೂ ಹೀಗೆ ಅವಕಾಶ ಕೊಡಿ. ಒಂದು ಧರ್ಮಕ್ಕೆ ನ್ಯಾಯ ಇನ್ನೊಂದು ಧರ್ಮಕ್ಕೆ ಅನ್ಯಾಯ ಯಾಕೆ ಅಂತಾ ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶೋತ್ಸವ ಆಚರಿಸಿದ್ರೆ ಶಾಲೆಯಲ್ಲಿ ನಮಾಜ್‌ಗೆ ಅವಕಾಶ ನೀಡಿ

    ಗಣೇಶೋತ್ಸವ ಆಚರಿಸಿದ್ರೆ ಶಾಲೆಯಲ್ಲಿ ನಮಾಜ್‌ಗೆ ಅವಕಾಶ ನೀಡಿ

    ಬೆಂಗಳೂರು: ಗೌರಿ-ಗಣೇಶ ಹಬ್ಬದಂದು ಶಾಲಾ, ಕಾಲೇಜಿನಲ್ಲಿ ಗಣೇಶನ ಮೂರ್ತಿ ಕೂರಿಸಿ ವಿಜೃಂಭಣೆಯಿಂದ ಆಚರಿಸೋದು ಸಾಮಾನ್ಯ. ಆದರೀಗ ಕರ್ನಾಟಕದ ಹಿಜಬ್ ವಿವಾದ ಈಗ ಗಣಪನಿಗೆ ವಿಘ್ನ ತರುವಂತೆ ಕಂಡಿದೆ.

    ಶಾಲಾ, ಕಾಲೇಜುಗಳಲ್ಲಿ ಅವಕಾಶ ಇಲ್ಲವೆಂದ ಮೇಲೆ ಗಣಪನಿಗೆ ಯಾಕೆ ಅಂತಾ ಪ್ರಶ್ನಿಸಿದೆ. ಇದರ ವಿರುದ್ಧ ಕೆರಳಿರುವ ಮುಸ್ಲಿಂ ಸಂಘಟನೆಗಳು ಕ್ಯಾಂಪಸ್ ನಲ್ಲಿ ಗಣೇಶೋತ್ಸವ ಆಚರಣೆ ಮಾಡಿದರೆ ನಮಾಜ್‌ಗೂ ಅವಕಾಶ ಕೊಡಿ ಎಂದು ವಾದ ಮುಂದಿಟ್ಟಿವೆ. ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ- ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ FIR

    ವಕ್ಫ್ ಬೋರ್ಡ್ ಬೇಡಿಕೆಗಳೇನು?

    • ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು.
    • ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು.
    • ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು.
    • ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡುವಂತೆ ಮನವಿ.
    • ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು.
    • ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು.
    • ಇಸ್ಲಾಮಿಕ್ ಆಚರಣೆಗೂ ಕೂಡಾ ಅವಕಾಶ ಕೊಡಬೇಕು.
    • ಹಿಜಾಬ್ ಗೂ ಅವಕಾಶ ಮಾಡಿಕೊಡಿ. ಇಷ್ಟವಿದ್ದ ಮಕ್ಕಳು ಹಿಜಬ್ ಧರಿಸಲಿ.

    Live Tv
    [brid partner=56869869 player=32851 video=960834 autoplay=true]