Tag: Wall Collapses

  • Madhya Pradesh: ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳ ದುರ್ಮರಣ

    Madhya Pradesh: ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳ ದುರ್ಮರಣ

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೊಷಿಸಿದ ಸಿಎಂ

    ಭೋಪಾಲ್: ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಸಾಗರ ಜಿಲ್ಲೆಯಲ್ಲಿ ನಡೆದಿದೆ.

    ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ (Hardaul Baba temple) ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಸಾವನ್ನಪ್ಪಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ. ಇದನ್ನೂ ಓದಿ: Dengue Alert: ಒಂದು ವರ್ಷದೊಳಗಿನ 10 ಮಕ್ಕಳಿಗೆ ಡೆಂಗ್ಯೂ – ಪ್ರಕರಣಗಳ ಸಂಖ್ಯೆ 19 ಸಾವಿರಕ್ಕೆ ಏರಿಕೆ

    ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯರೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನೂ ನಡೆಸಿ ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಗಾಯಾಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಮಕ್ಕಳು 10-15 ವರ್ಷದೊಳಗಿನವರು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಇನ್ನೂ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಮೋಹನ್ ಯಾದವ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸಾ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ಒಂದು ದಿನದ ಹಿಂದೆ ಇದೇ ರೀತಿಯ ಘಟನೆ ರಾಜ್ಯದ ರೇವಾ ಜಿಲ್ಲೆಯಲ್ಲಿ ಸಂಭವಿಸಿತ್ತು. ಮನೆಯ ಗೋಡೆ ಕುಸಿದು 5 ರಿಂದ 7ನೇ ವಯಸ್ಸಿನ ನಾಲ್ಕು ಮಕ್ಕಳು ಸಾವನ್ನಪ್ಪಿದ್ದರು. ಗೋಡೆ ಕುಸಿದ ಮನೆ ಮಾಲೀಕನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಎರಡನೇ ದಿನಕ್ಕೆ ಪಾದಯಾತ್ರೆ; ರಾಜ್ಯದಿಂದ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ – ವಿಜಯೇಂದ್ರ ಕಿಡಿ

    ಮಳೆಗೆ 200 ಬಲಿ:
    ಮಧ್ಯಪ್ರದೇಶದಲ್ಲಿ ಮತ್ತೊಂದೆಡೆ ಮಳೆಯ ಆರ್ಭಟ ಜೋರಾಗಿದ್ದು, ವಿವಿಧೆಡೆ ಉಂಟಾದ ಪ್ರವಾಹ ಪರಿಸ್ಥಿತಿಗೆ ಈವರೆಗೆ 200 ಮಂದಿ ಸಾವಪ್ಪಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ 206 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 2,403 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದನ್ನೂ ಓದಿ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನ ಡಿಕೆಶಿ ಲಪಟಾಯಿಸಿದ್ದಾರೆ – ಹೆಚ್‌ಡಿಕೆ ಬಾಂಬ್‌

  • ಜೈಲು ಗೋಡೆ ಕುಸಿತ- 22 ಕೈದಿಗಳಿಗೆ ಗಾಯ

    ಜೈಲು ಗೋಡೆ ಕುಸಿತ- 22 ಕೈದಿಗಳಿಗೆ ಗಾಯ

    ಭೋಪಾಲ್: ಕಾರಾಗೃಹದ ಗೋಡೆ ಕುಸಿದು 22 ಕೈದಿಗಳು ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ 5.10ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಾರಾಗೃಹದ ನಂ.6ನೇ ಕೊಠಡಿಯ ಗೋಡೆ ಕುಸಿದುಬಿದ್ದಿದೆ. 22 ಕೈದಿಗಳು ಗಾಯಗೊಂಡಿದ್ದಾರೆ. ಅದರಲ್ಲಿ ಒಬ್ಬ ಕೈದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗ್ವಾಲಿಯರ್​ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರಿಗೆ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಿಂಡ್ ಎಸ್‍ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಿವೀಲ್ ಆಯ್ತು ವಿಕ್ರಾಂತ್ ರೋಣದಲ್ಲಿ ಜಾಕ್ವೆಲಿನ್ ಲುಕ್

    ದುರ್ಘಟನೆ ನಡೆಯುವ ಸಂದರ್ಭದಲ್ಲಿ ಕಾರಾಗೃಹದಲ್ಲಿ 225 ಕೈದಿಗಳು ಇದ್ದರು. ಗೋಡೆ ಕುಸಿತದ ಸುದ್ದಿ ಕೇಳುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದರು. ಕಾರಾಗೃಹದ ಕಟ್ಟಡ ಅತ್ಯಂತ ಹಳೆಯದಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗೋಡೆಗಳೆಲ್ಲ ಒದ್ದೆಯಾಗಿದ್ದವು. ಇದೇ ಕಾರಣಕ್ಕೆ ಕುಸಿದುಬಿದ್ದಿವೆ ಎಂದೂ ಹೇಳಿದ್ದಾರೆ.