ಮಂಡ್ಯ: 60 ವರ್ಷಗಳಿಂದ ಸರ್ಕಾರಿ ಸ್ಮಶಾನವಾಗಿದ್ದ (Graveyard) ಜಾಗವನ್ನು ಮುಸ್ಲಿಂ ಮಕಾನ್ ಮಾಡಿದ ಹಿನ್ನೆಲೆ ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದ (Mandya) ಹೊಸಬೂದನೂರು (Hosabudanur) ಗ್ರಾಮದಲ್ಲಿ ನಡೆದಿದೆ.
ಮಂಡ್ಯದ ಹೊಸಬೂದನೂರು ಗ್ರಾಮದಲ್ಲಿ ಕಳೆದ 1963ರಿಂದ 2017ರವರೆಗೆ ಸರ್ವೇ ನಂಬರ್ 313ರಲ್ಲಿ 1 ಎಕರೆ 13 ಗುಂಟೆ ಜಾಗದಲ್ಲಿ ಹಿಂದೂಗಳಿಗಾಗಿ ಸ್ಮಶಾನ ಇತ್ತು. ಆದರೆ 2017ರ ಬಳಿಕ ವಕ್ಫ್ ಬೋರ್ಡ್ ಆಸ್ತಿ ಇದಾಗಿದ್ದು, ಈ ಜಾಗ ಇದೀಗ ಮುಸ್ಲಿಂ ಸಮುದಾಯದ ಮಕಾನ್ (ಸ್ಮಶಾನ) ಆಗಿದೆ. ಇದನ್ನೂ ಓದಿ: ಕೊಪ್ಪಳ | KPCC ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್
ವಿಶೇಷ ಅಂದ್ರೆ ಈ ಊರಿನಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದವರ ಮನೆ ಇಲ್ಲ. ಹೀಗಿರುವಾಗ ಮುಸ್ಲಿಂ ಸಮುದಾಯಕ್ಕೆ ಹಿಂದೂ ಸ್ಮಶಾನವನ್ನು ಬಿಟ್ಟುಕೊಡಲಾಗಿದೆ. ಇದೀಗ ಈ ಊರಿನಲ್ಲಿ ಹಿಂದೂಗಳು ಸಾವನ್ನಪ್ಪಿದರೆ ಹೂಳಲು ಸ್ಮಶಾನ ಇಲ್ಲದಂತೆ ಆಗಿದೆ. ಈ ಬಗ್ಗೆ ಸಚಿವರಿಗೆ, ಜಿಲ್ಲಾಡಳಿತಕ್ಕೆ, ಶಾಸಕರಿಗೆ ಹೇಳಿದ ವೇಳೆ ಇರುವ ಜಾಗದಲ್ಲಿ 24 ಗುಂಟೆ ಜಾಗವನ್ನು ಹಿಂದೂಗಳ ಸ್ಮಶಾನಕ್ಕಾಗಿ ಬಿಟ್ಟುಕೊಡಲಾಗಿತ್ತು. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್
ಇದೀಗ ಮತ್ತೆ ಆ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ತಡೆ ಹಿಡಿಯಲಾಗಿದೆ. ಜೊತೆಗೆ ಗ್ರಾಮ ಪಂಚಾಯ್ತಿಯಿಂದ ಸ್ಮಶಾನ ಅಭಿವೃದ್ಧಿಗೆ ತಹಶೀಲ್ದಾರ್ ತಡೆ ನೀಡಿದ್ದಾರೆ. ಹೀಗಾಗಿ ಇದೀಗ ಹೊಸಬೂದನೂರು ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈಗ ಮುಸ್ಲಿಂ ಮಕಾನ್ ಮಾಡಿರುವ ಹಿಂದೂ ಸ್ಮಶಾನವನ್ನು ವಾಪಸ್ ಹಿಂದೂಗಳಿಗೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್
ನವದೆಹಲಿ: ವಕ್ಫ್ (Waqf) ಎನ್ನುವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಅದು ದಾನಧರ್ಮವಲ್ಲದೆ ಬೇರೇನೂ ಅಲ್ಲ ಎಂದು ಸುಪ್ರೀಂ ಕೋರ್ಟ್‌ಗೆ (Supreme Court) ಕೇಂದ್ರ ಸರ್ಕಾರ ಹೇಳಿದೆ. ವಕ್ಫ್ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ವಕ್ಫ್ ಒಂದು ಇಸ್ಲಾಮಿಕ್ ಪರಿಕಲ್ಪನೆ. ಆದರೆ ಅದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ವಕ್ಫ್ ಇಸ್ಲಾಂನಲ್ಲಿ ಕೇವಲ ದಾನವಾಗಿದೆ. ದಾನವು ಪ್ರತಿಯೊಂದು ಧರ್ಮದ ಭಾಗವಾಗಿದೆ ಮತ್ತು ಕ್ರಿಶ್ಚಿಯನ್ ಧರ್ಮಕ್ಕೂ ಸಹ ಇದು ಸಂಭವಿಸಬಹುದು ಎಂದು ತೀರ್ಪುಗಳು ತೋರಿಸುತ್ತವೆ. ಹಿಂದೂಗಳು ದಾನ ಮಾಡುವ ವ್ಯವಸ್ಥೆಯನ್ನು ಹೊಂದಿದ್ದಾರೆ. ಸಿಖ್‌ರು ಸಹ ಈ ಸಂಪ್ರದಾಯ ಹೊಂದಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಮೈಸೂರಲ್ಲಿ ಅನುಮಾನಾಸ್ಪದವಾಗಿ ಯುವತಿಯ ಶವ ಪತ್ತೆ – ರೇಪ್ & ಮರ್ಡರ್ ಶಂಕೆ
ಬಳಕೆದಾರರಿಂದ ವಕ್ಫ್ ತತ್ವದ ಅಡಿಯಲ್ಲಿ ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕೇಂದ್ರವು ಕಾನೂನುಬದ್ಧ ಅಧಿಕಾರ ಹೊಂದಿದೆ. ಸರ್ಕಾರಿ ಭೂಮಿಯ ಮೇಲೆ ಯಾರಿಗೂ ಹಕ್ಕಿಲ್ಲ. ಅದು ಸರ್ಕಾರಕ್ಕೆ ಸೇರಿದ್ದು, ಆಸ್ತಿ ವಕ್ಫ್ ಎಂದು ಘೋಷಿಸಲ್ಪಟ್ಟಿದ್ದರೆ ಸರ್ಕಾರವು ಆಸ್ತಿಯನ್ನು ಉಳಿಸಬಹುದು ಎಂದು ಮೆಹ್ತಾ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ದ್ವಿ-ಸದ್ಯಸ ಪೀಠಕ್ಕೆ ತಿಳಿಸಿದರು.
ಹೊಸ ಕಾನೂನಿನಲ್ಲಿ ಔಪಚಾರಿಕ ದಾಖಲೆಗಳಿಲ್ಲದಿದ್ದರೂ ಸಹ, ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೀರ್ಘಕಾಲೀನ ಬಳಕೆಯ ಆಧಾರದ ಮೇಲೆ ಆಸ್ತಿಯನ್ನು ವಕ್ಫ್ ಎಂದು ಪರಿಗಣಿಸಲು ಅನುವು ಮಾಡಿಕೊಡುತ್ತದೆ. ಬಳಕೆದಾರರಿಂದ ವಕ್ಫ್ ಮೂಲಭೂತ ಹಕ್ಕಲ್ಲ ಎಂದು ಪ್ರತಿಪಾದಿಸಿದ ಅವರು, ಬಳಕೆದಾರರಿಂದ ವಕ್ಫ್ ಅನ್ನು ಮೂರು ವಿನಾಯಿತಿಗಳೊಂದಿಗೆ ಅನುಮತಿಸಲಾಗುವುದಿಲ್ಲ, ಅದು ನೋಂದಾಯಿಸಲ್ಪಡಬೇಕು, ಖಾಸಗಿ ಆಸ್ತಿ ಮತ್ತು ಸರ್ಕಾರಿ ಆಸ್ತಿಯಾಗಿರಬೇಕು ಎಂದು ಹೇಳಿದರು.
ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ (Mangaluru) ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನ ದುರ್ಬಳಕೆಯಾಗಿರುವ ಆರೋಪ ಕೇಳಿ ಬಂದಿತ್ತು. ಹೆದ್ದಾರಿ ಬಂದ್ ವೇಳೆ ಕೆಲವು ಪ್ರತಿಭಟನಾಕಾರರನ್ನು ಎಸಿಪಿ ವಾಹನದಲ್ಲೇ ಕರೆದೊಯ್ದ ವೀಡಿಯೋ ವೈರಲ್ ಆಗಿತ್ತು. ವೈರಲ್ ಆದ ಬೆನ್ನಲ್ಲೇ ಅಪಘಾತಗೊಂಡ ಬಾಲಕನನ್ನು ಎಸಿಪಿ ಕಾರಿನಲ್ಲಿ ಸಾಗಿಸಲಾಗಿತ್ತುಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ನಡೆದಿದ್ದು ಏನು? ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇದ್ದ ಮೈದಾನದಿಂದ ಹೊರ ಬಂದ ಪ್ರತಿಭಟನಾಕಾರರು ಹೆದ್ದಾರಿಯಲ್ಲೇ ನಿಂತಿದ್ದರು. ಹೆದ್ದಾರಿ ಬಂದ್ ಮಾಡೋ ಪ್ಲಾನ್ ಪೊಲೀಸರು ಮೊದಲೇ ಮಾಡಿದ್ದರೂ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಹೆದ್ದಾರಿ ಬಂದ್ ಮಾಡದೆ ವಾಹನ ಸಂಚಾರಕ್ಕೆ ಮುಕ್ತವಾಗಿಸಿದ್ದರು. ಆದರೆ ಮೈದಾನದಲ್ಲಿರಬೇಕಾದ ಪ್ರತಿಭಟನಾಕಾರರು ಹೆದ್ದಾರಿಗೆ ಬಂದು ನಿಂತು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೆಲ ಗಂಟೆಗಳ ಕಾಲ ಕಿ.ಮೀ ದೂರದವರೆಗೆ ವಾಹನಗಳು ನಿಂತಿದ್ದವು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಕಾನೂನು ಮಾಡಿದ್ರೆ ಸಂಸತ್ತು ಭವನವನ್ನು ಮುಚ್ಚಬೇಕು: ಬಿಜೆಪಿ ಎಂಪಿ ನಿಶಿಕಾಂತ್ ದುಬೆ
ಈ ನಡುವೆ ಕಾರ್ಯಕ್ರಮ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದರು ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರ ಸರ್ಕಾರಿ ಕಾರಿನಲ್ಲಿ ಕೆಲ ಪ್ರತಿಭಟನಾಕಾರರನ್ನು ಕರೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರ ಸರ್ಕಾರಿ ವಾಹನಗಳನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಪ. ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ – ಕೇಂದ್ರಕ್ಕೆ ನಟ ಮಿಥುನ್ ಚಕ್ರವರ್ತಿ ಆಗ್ರಹ
ಪೊಲೀಸರು ಹೇಳೋದು ಏನು?
ನಗರ ಪೊಲೀಸ್ ಆಯುಕ್ತರು ಈ ಘಟನೆಗೆ ಸ್ಪಷ್ಟನೆ ನೀಡಿದ್ದು ಇದು ಪ್ರತಿಭಟನಾಕಾರರನ್ನು ಸಾಗಿಸಿದ್ದು ಅಲ್ಲ. ಈ ಸಂದರ್ಭದಲ್ಲಿ ಟೆಂಪೋ ಟ್ರಾವೆಲ್ಲರ್ ಬಾಲಕನಿಗೆ ಗುದ್ದಿತ್ತು. ಬಾಲಕನ ಕಾಲಿನ ಮೇಲೆ ಚಕ್ರ ಹರಿದು ಹೋಗಿತ್ತು. ಬಾಲಕನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಎಸಿಪಿ ಅವರ ಕಾರಿನಲ್ಲಿ ಸಾಗಿಸಿದ್ದಾರೆ. ಆ ವೇಳೆ ಗಾಯಾಳುವಿನ ಜೊತೆ ಇತರರು ಇದ್ದರು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
– ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಆರಂಭ – ಐತಿಹಾಸಿಕ ಕಟ್ಟಡಗಳಿಗೆ ದಾಖಲೆಗಳಿಲ್ಲ ಹೇಗೆ ನೋಂದಣಿ ಮಾಡುತ್ತೀರಿ? – ವಕ್ಫ್ ಕಾಯ್ದೆಯಿಂದ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಎಂದ ಅರ್ಜಿದಾರರು – ಧಾರ್ಮಿಕ ಸಂಸ್ಥೆಯ ಮೇಲೆ ಹಸ್ತಕ್ಷೇಪ ಇಲ್ಲ, ಪಾರದರ್ಶಕತೆ ಉದ್ದೇಶ ಎಂದ ಕೇಂದ್ರ
ನವದೆಹಲಿ: ಮುಸ್ಲಿಮರು (Muslims) ಹಿಂದೂ (Hindu) ದತ್ತಿ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ ಎಂದು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾ. ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿತು.
ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ವಿರುದ್ಧ ಸಲ್ಲಿಸಿದ್ದ ಅರ್ಜಿದಾರರ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಗ್ವಿ, ರಾಜೀವ್ ಧವನ್, ಹುಜೇಫಾ ಅಹ್ಮದಿ ತೀಕ್ಷ್ಣವಾದ ವಾದಗಳನ್ನು ಮಂಡಿಸಿದರು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕಾಯ್ದೆಯನ್ನು ಸಮರ್ಥಿಸಿಕೊಂಡರು.
ಅರ್ಜಿದಾರರು ಕಾಯ್ದೆಯು ಸಂವಿಧಾನದ 14 (ಸಮಾನತೆ), 15 (ತಾರತಮ್ಯ ನಿಷೇಧ), 25 (ಧಾರ್ಮಿಕ ಸ್ವಾತಂತ್ರ್ಯ), 26 (ಧಾರ್ಮಿಕ ಸಂಸ್ಥೆಗಳ ಸ್ವಾಯತ್ತತೆ) ಮತ್ತು 300ಎ (ಆಸ್ತಿ ಹಕ್ಕು) ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ರೀಲ್ಸ್ ಕೇಸ್ – ರಜತ್ ಜೈಲಿಗೆ, ವಿನಯ್‌ಗೆ 500 ರೂ. ದಂಡ
ಕಾಯ್ದೆಯ ಕೆಲವು ನಿಬಂಧನೆಗಳು, ವಿಶೇಷವಾಗಿ ‘ವಕ್ಫ್ ಬೈ ಯೂಸರ್’ (ಉಪಯೋಗದಿಂದ ವಕ್ಫ್ ಎಂದು ಗುರುತಿಸುವ ಪರಿಕಲ್ಪನೆ) ರದ್ದುಗೊಳಿಸಿರುವುದು, ದಾಖಲೆ ಇಲ್ಲದ ಐತಿಹಾಸಿಕ ವಕ್ಫ್ ಆಸ್ತಿಗಳನ್ನು ಕಳೆದುಕೊಳ್ಳುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಮಿಯತ್ ಉಲಮಾ-ಎ-ಹಿಂದ್ ಮತ್ತು ಇತರರ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal), ಕಾಯ್ದೆಯ ಸೆಕ್ಷನ್ 3(ಆರ್) ಅನ್ನು ಪ್ರಶ್ನಿಸಿದರು. ವಕ್ಫ್ ದಾನ ನೀಡಲು ವ್ಯಕ್ತಿಯು ಕಳೆದ 5 ವರ್ಷಗಳಿಂದ ಇಸ್ಲಾಂ ಧರ್ಮವನ್ನು ಆಚರಿಸಿರಬೇಕು ಎಂಬ ಷರತ್ತು ಸಂವಿಧಾನದ 25 ಮತ್ತು 26ನೇ ಅನುಚ್ಛೇಧವನ್ನು ಉಲ್ಲಂಘಿಸುತ್ತದೆ. ರಾಜ್ಯವು ಒಬ್ಬ ವ್ಯಕ್ತಿಯ ಧರ್ಮವನ್ನು ಪರೀಕ್ಷಿಸುವ ಹಕ್ಕನ್ನು ಹೇಗೆ ಹೊಂದಿದೆ ಎಂದು ವಾದಿಸಿದರು.
ವಕ್ಫ್ ಬೈ ಯೂಸರ್ ರದ್ದತಿಯನ್ನು ಖಂಡಿಸಿದ ಅವರು, ಶತಮಾನಗಳಿಂದ ವಕ್ಫ್ ಆಗಿ ಉಪಯೋಗದಲ್ಲಿರುವ ಆಸ್ತಿಗಳಿಗೆ ದಾಖಲೆ ಇರುವುದಿಲ್ಲ. ಇಂತಹ ಆಸ್ತಿಗಳನ್ನು ರದ್ದುಗೊಳಿಸುವುದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದರು. ಸೆಕ್ಷನ್ 7(ಎ) ಕುರಿತು ವಾದಿಸಿ ಆಸ್ತಿಗಳ ಸ್ಥಿತಿಯನ್ನು ಪರಿಶೀಲಿಸಲು 20 ವರ್ಷಗಳ ಕಾಲಾವಕಾಶ ಬೇಕಾಗಬಹುದು ಎಂದು ತಿಳಿಸಿದರು.
ಅಭಿಷೇಕ್ ಮನು ಸಿಂಗ್ವಿ ವಾದಿಸಿ, ಕಾಯ್ದೆಯು ದೇಶಾದ್ಯಂತ ವಕ್ಫ್ ಆಸ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು. ವಕ್ಫ್ ಕೌನ್ಸಿಲ್‌ನಲ್ಲಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಸಂವಿಧಾನದ 26ನೇ ನಿಯಮದ ಸ್ಪಷ್ಟ ಉಲ್ಲಂಘನೆ ಎಂದು ಕರೆದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು – ಉರ್ದು ಭಾರತದ ಭಾಷೆ, ಒಂದು ಧರ್ಮಕ್ಕೆ ಸೀಮಿತವಲ್ಲ
ಹುಜೇಫಾ ಅಹ್ಮದಿ ವಾದ ಮಂಡಿಸಿ, ವಕ್ಫ್ ಬೈ ಯೂಸರ್ ಇಸ್ಲಾಂನ ಸ್ಥಾಪಿತ ಆಚರಣೆಯಾಗಿದೆ. ಇದನ್ನು ಕಿತ್ತುಕೊಳ್ಳುವಂತಿಲ್ಲ. ಈ ನಿಬಂಧನೆಯ ರದ್ದತಿಯು ರಾಮಜನ್ಮಭೂಮಿ-ಬಾಬರಿ ಮಸೀದಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ನಿಂದ ಗುರುತಿಸಲ್ಪಟ್ಟ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದರು. ರಾಜೀವ್ ಧವನ್ ಮತ್ತು ಇತರರು ವಾದಿಸಿ, ವಕ್ಫ್ ಆಸ್ತಿಗಳ ಮೇಲಿನ ರಾಜ್ಯದ ಹೆಚ್ಚಿನ ನಿಯಂತ್ರಣವು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತದೆ ಎಂದು ಒತ್ತಿ ಹೇಳಿದರು.
ಅರ್ಜಿದಾರರ ವಾದಗಳಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಾಯ್ದೆಯು ಯಾವುದೇ ಧಾರ್ಮಿಕ ವ್ಯವಸ್ಥೆ ಅಥವಾ ಸಂಸ್ಥೆಯ ಮೇಲೆ ಹಸ್ತಕ್ಷೇಪ ಮಾಡುವುದಿಲ್ಲ. ಇದು ವಕ್ಫ್ ಆಸ್ತಿಗಳ ದುರ್ಬಳಕೆ ತಡೆಯಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ, ತಂತ್ರಜ್ಞಾನ-ಆಧಾರಿತ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿಯನ್ನು ಹೊಂದಿದೆ ಎಂದು ಸಮರ್ಥಿಸಿಕೊಂಡರು.
ವಕ್ಫ್ ಬೈ ಯೂಸರ್ ರದ್ದತಿಯ ಬಗ್ಗೆ ವಾದ ಮಂಡಿಸಿದ ಅವರು, ಇದು ದುರ್ಬಳಕೆಯನ್ನು ತಡೆಯಲು ಮಾಡಿರುವ ಕ್ರಮವಾಗಿದೆ. ಆದರೆ, ನ್ಯಾಯಾಲಯದಿಂದ ವಕ್ಫ್ ಎಂದು ಘೋಷಿತವಾದ ಆಸ್ತಿಗಳ ಸ್ಥಿತಿಯನ್ನು ಬದಲಾಯಿಸಲಾಗುವುದಿಲ್ಲ. ಜಂಟಿ ಸಂಸದೀಯ ಸಮಿತಿಯು 38 ಸಭೆಗಳನ್ನು ನಡೆಸಿ, 98.2 ಲಕ್ಷ ಮನವಿ ಪತ್ರಗಳನ್ನು ಪರಿಶೀಲಿಸಿ ಕಾಯ್ದೆಗೆ ಶಿಫಾರಸು ಮಾಡಿದೆ ಎಂದು ತಿಳಿಸಿದರು.
ವಿಚಾರಣೆ ವೇಳೆ ನ್ಯಾಯಧೀಶರು ಹಲವು ಪ್ರಶ್ನೆ ಕೇಳಿದರು. ವಕ್ಫ್ ಬೈ ಯೂಸರ್ ರದ್ದತಿಯಿಂದ ಶತಮಾನಗಳಿಂದ ವಕ್ಫ್ ಆಗಿರುವ ಆಸ್ತಿಗಳಿಗೆ ದಾಖಲೆ ಇಲ್ಲದಿದ್ದರೆ ಏನು ಮಾಡುವಿರಿ? ಇದು ದೊಡ್ಡ ಸಮಸ್ಯೆಯನ್ನು ಉಂಟುಮಾಡಬಹುದು? 13, 14, 15ನೇ ಶತಮಾನಗಳಲ್ಲಿ ನಿರ್ಮಿತವಾದ ಮಸೀದಿಗಳಿಗೆ ಖರೀದಿ ದಾಖಲೆ ತೋರಿಸಲು ಸಾಧ್ಯವಿಲ್ಲ. ಇಂತಹ ಆಸ್ತಿಗಳನ್ನು ಹೇಗೆ ನೋಂದಾಯಿಸುವಿರಿ? ಎಂದು ಎಂದು ಸಿಜೆಐ ಸಂಜೀವ್ ಖನ್ನಾ ಕೇಂದ್ರವನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮೆಹ್ತಾ, ಕಾಯ್ದೆಯು ನ್ಯಾಯವಿಚಾರಣೆಯ ಹಕ್ಕನ್ನು ಕಿತ್ತುಕೊಂಡಿಲ್ಲ ಎಂದು ಉತ್ತರಿಸಿದರು. ಇದನ್ನೂ ಓದಿ:ರೀಲ್ಸ್ ಕೇಸ್: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ರಜತ್
ಹಿಂಸಾಚಾರದ ಬಗ್ಗೆ ಆತಂಕ: ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ನ್ಯಾಯಾಲಯವು ಆತಂಕ ವ್ಯಕ್ತಪಡಿಸಿತು. ಪ್ರಕರಣವು ನ್ಯಾಯಾಲಯದ ಮುಂದಿರುವಾಗ ಹಿಂಸಾಚಾರ ನಡೆಯುವುದು ತೀರಾ ತೊಂದರೆದಾಯಕ ಎಂದು ಮುಖ್ಯ ನ್ಯಾಯಮೂರ್ತಿ ಖನ್ನಾ ಅಭಿಪ್ರಾಯಪಟ್ಟರು. ಮುರ್ಷಿದಾಬಾದ್‌ನಲ್ಲಿ ಮೂವರು ಸಾವನ್ನಪ್ಪಿದ ಘಟನೆಯನ್ನು ಉಲ್ಲೇಖಿಸಿ, 221 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಯಿತು. ಪ್ರತಿಭಟನೆ ಮೂಲಕ ವ್ಯವಸ್ಥೆಯ ಮೇಲೆ ಒತ್ತಡ ಹೇರಬಹುದು ಎಂದು ಭಾವಿಸಿದ್ದಾರೆ ಎಂದು ಮೆಹ್ತಾ ಹೇಳಿದರು. ಇದಕ್ಕೆ ಆಕ್ರೋಶಗೊಂಡ ಸಿಬಲ್ ಯಾರು ಒತ್ತಡ ಹೇರುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಮಧ್ಯಪ್ರವೇಶ ಮಾಡಿದ ಸಿಜೆಐ ಖನ್ನಾ, ಕಾಯ್ದೆಯಲ್ಲಿ ಹಲವು ಉತ್ತಮ ಅಂಶಗಳಿಗೆ ಸರಿಪಡಿಸಿಕೊಳ್ಳಲು ಇದು ಸಕಾಲ ಎಂದು ಹೇಳಿ ಬಳಿಕ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸದೇ ವಿಚಾರಣೆಯನ್ನು ನಾಳೆಗೆ ಮುಂದೂಡಿತು.
– ಕರ್ನಾಟಕದ ಗುತ್ತಿಗೆ ಮೀಸಲಾಗಿ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ
– ಕಾಂಗ್ರೆಸ್ ಮೂಲಭೂತವಾದಿಗಳನ್ನ ಓಲೈಸುತ್ತಿದೆ ಎಂದು ಕಿಡಿ
ಚಂಡೀಗಢ (ಹಿಸಾರ್): ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕಾಂಗ್ರೆಸ್ (Congress) ತನ್ನ ನಿಲುವುಗಳ ಮೂಲಕ ಮೂಲಭೂತವಾದಿಗಳನ್ನು ಓಲೈಸುತ್ತಿದೆ ಮತ್ತು ಅದು ಮತಬ್ಯಾಂಕ್ (Vote Bank) ರಾಜಕೀಯಕ್ಕಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದರು.
हरियाणा लगातार तीसरी बार, डबल इंजन सरकार के विकास की डबल रफ्तार देख रहा है। आज यमुनानगर में विभिन्न विकास परियोजनाओं का लोकार्पण और शिलान्यास कर बेहद प्रसन्न हूं। https://t.co/hpFWZRiVa4
ಹರಿಯಾಣದ (Haryana) ಹಿಸಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಮೂಲಭೂತವಾದಿಗಳನ್ನು ಮಾತ್ರ ಓಲೈಸಿದೆ. ಇದಕ್ಕೆ ದೊಡ್ಡ ಪುರಾವೆ ವಕ್ಫ್ ಕಾನೂನು. ವಕ್ಫ್ ಹೆಸರಿನಲ್ಲಿ ಲಕ್ಷಾಂತರ ಹೆಕ್ಟೇರ್ ಭೂಮಿಯನ್ನು ಮೀಸಲಿಡಲಾಗಿತ್ತು. ಆದರೆ ಬಡ ಮುಸ್ಲಿಮರು ಎಂದಿಗೂ ಪ್ರಯೋಜನ ಪಡೆಯಲಿಲ್ಲ ಕೇವಲ ಭೂ ಮಾಫಿಯಾ ಇದರ ಲಾಭ ಗಳಿಸಿತು. ಇದನ್ನೂ ಓದಿ: ಗುಜರಾತ್ ಕರಾವಳಿಯಲ್ಲಿ ಭರ್ಜರಿ ಬೇಟೆ – 1,800 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಬಡವರ ಭೂಮಿಯನ್ನು ವಕ್ಛ್ (Waqf) ಹೆಸರಿನಲ್ಲಿ ಕಿತ್ತುಕೊಳ್ಳಲಾಗುತ್ತಿತ್ತು, ಈ ಲೂಟಿ ಈಗ ಹೊಸ ಕಾನೂನಿನೊಂದಿಗೆ ನಿಲ್ಲುತ್ತದೆ, ತಿದ್ದುಪಡಿ ಮಾಡಿದ ವಕ್ಫ್ ಕಾನೂನಿನಡಿಯಲ್ಲಿ ವಕ್ಫ್ ಮಂಡಳಿಯು ಯಾವುದೇ ಆದಿವಾಸಿ ಭೂಮಿಯನ್ನು ಪಡೆಯಲು ಸಾಧ್ಯವಿಲ್ಲ. ಬಡ ಮುಸ್ಲಿಮರ ಹಕ್ಕುಗಳನ್ನು ಖಾತರಿಪಡಿಸುವುದು ನಿಜವಾದ ಸಾಮಾಜಿಕ ನ್ಯಾಯ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ
ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ದೃಷ್ಟಿಕೋನಕ್ಕೆ ದ್ರೋಹ ಬಗೆದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳನ್ನು 2ನೇ ದರ್ಜೆಯ ನಾಗರಿಕರು ಎಂದು ಪರಿಗಣಿಸಿದೆ. ಡಾ. ಅಂಬೇಡ್ಕರ್ ಬಡವರು ಮತ್ತು ಹಿಂದುಳಿದವರಿಗೆ ಘನತೆಯ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಮತ ಬ್ಯಾಂಕ್ ರಾಜಕೀಯದ ವೈರಸ್ ಅನ್ನು ಹರಡಿತು ಮತ್ತು ಅವರ ದೃಷ್ಟಿಕೋನವನ್ನು ನಿರ್ಬಂಧಿಸಿತು ಎಂದು ಅವರು ಹೇಳಿದರು. ಅಂಬೇಡ್ಕರ್ ಜೀವಂತವಾಗಿದ್ದಾಗ ಅವರನ್ನು ಅವಮಾನಿಸಿದರು, ಚುನಾವಣೆಯಲ್ಲಿ ಸೋಲುವಂತೆ ಮಾಡಿದರು ಮತ್ತು ಅವರ ಪರಂಪರೆಯನ್ನು ಅಳಿಸಲು ಪ್ರಯತ್ನಿಸಿದರು.
ನಮ್ಮ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನಿಷೇಧಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿಗಳಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಆದರೆ ಕಾಂಗ್ರೆಸ್ ಈ ಬಗ್ಗೆ ಎಂದು ಎಂದಿಗೂ ಚಿಂತಿಸಲಿಲ್ಲ ಬಾಬಾ ಸಾಹೇಬ್ ಅಂಬೇಡ್ಕರ್ ಕಂಡ ಕನಸನ್ನು ಕಾಂಗ್ರೆಸ್ ನನಸಾಗಿಸಲಿಲ್ಲ, ಸಂವಿಧಾನದ ನಿಬಂಧನೆಗಳನ್ನು ಸಮಾಧಾನಪಡಿಸುವ ಸಾಧನವನ್ನಾಗಿ ಮಾಡಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ. ಆದರೆ ಅಂಬೇಡ್ಕರ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ ಈ ನಿಯಮವನ್ನು ಕಾಂಗ್ರೆಸ್ ಉಲ್ಲಂಘಿಸಿದೆ ಎಂದರು.
ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಸಂವಿಧಾನವನ್ನು ಅಧಿಕಾರಕ್ಕಾಗಿ ಒಂದು ಸಾಧನವನ್ನಾಗಿ ಪರಿವರ್ತಿಸಿದೆ ಮತ್ತು ಅದರ ಸಾಂವಿಧಾನಿಕ ಮನೋಭಾವದ ಹೊರತಾಗಿಯೂ ಸಾಮಾನ್ಯ ನಾಗರಿಕ ಕಾನೂನನ್ನು ಜಾರಿಗೆ ತರುವುದನ್ನು ವಿರೋಧಿಸಿದೆ ಎಂದು ಹೇಳಿದರು. ಉತ್ತರಾಖಂಡದಲ್ಲಿ ಈಗ ಜಾತ್ಯತೀತ ನಾಗರಿಕ ಸಂಹಿತೆ ಜಾರಿಯಲ್ಲಿದೆ. ಕಾಂಗ್ರೆಸ್ ಇನ್ನೂ ಅದನ್ನು ವಿರೋಧಿಸುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್
ಪ್ರಧಾನಿ ಮೋದಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರ ಆದರ್ಶಗಳ ಬಗ್ಗೆ ತಮ್ಮ ಪಕ್ಷದ ದಾಖಲೆಯನ್ನು ಸಮರ್ಥಿಸಿಕೊಂಡು ಬಿಜೆಪಿ ಐತಿಹಾಸಿಕ ಬೂಟಾಟಿಕೆ ಎಂದು ಆರೋಪಿಸಿದರು. ಈ ಜನರು ಅಂದು ಬಾಬಾ ಸಾಹೇಬರ ಶತ್ರುಗಳಾಗಿದ್ದರು, ಇಂದಿಗೂ ಹಾಗೆಯೇ ಇದ್ದಾರೆ ಎಂದು ಖರ್ಗೆ ಹೇಳಿದರು. ಬಾಬಾಸಾಹೇಬರು ಬೌದ್ಧಧರ್ಮವನ್ನು ಸ್ವೀಕರಿಸಿದಾಗ, ಅವರು ಅಸ್ಪೃಶ್ಯರು, ಬುದ್ಧನನ್ನು ಅಸ್ಪೃಶ್ಯರನ್ನಾಗಿ ಮಾಡಲಾಗಿದೆ ಎಂದು ಸಹ ಅವರು ಹೇಳಿದರು. ಅವರನ್ನು ಅಂದು ವಿರೋಧಿಸಿದ್ದು ಹಿಂದೂ ಮಹಾಸಭಾ ಎಂದರು.
ಮಹಿಳಾ ಶಾಸನದಲ್ಲಿ ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್‌ನ ಒತ್ತಾಯವನ್ನು ಖರ್ಗೆ ಸ್ಮರಿಸಿದರು. ಎರಡು ವರ್ಷಗಳ ಹಿಂದೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲ್ಪಟ್ಟಾಗ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾಗಳನ್ನು ತಕ್ಷಣದ ಅನುಷ್ಠಾನ ಮತ್ತು ಸೇರ್ಪಡೆಗೆ ಒತ್ತಾಯಿಸಿದ್ದು ಕಾಂಗ್ರೆಸ್. ಇದಕ್ಕಾಗಿಯೇ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಇದೇ ಮೊದಲು – ಭಾರತದ ಸೇನಾ ಬತ್ತಳಿಕೆಗೆ ಲೇಸರ್ ಅಸ್ತ್ರ, ಪ್ರಯೋಗ ಯಶಸ್ವಿ
ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf) ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್
ಕೋಲ್ಕತ್ತಾದಲ್ಲಿ (Kolkatta) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಕಾನೂನಿನ ಜಾರಿಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದರು. ವಕ್ಫ್ ಆಸ್ತಿ ಸಮಸ್ಯೆಯಿಂದ ನಿಮಗೆ ನೋವಾಗಿದೆ ಎಂದು ನನಗೆ ಅರ್ಥವಾಗಿದೆ. ನನ್ನ ಮೇಲೆ ದಯವಿಟ್ಟು ನಂಬಿಕೆ ಇಡಿ, ಬಂಗಾಳದಲ್ಲಿ ಒಡೆದು ಆಳುವಂತದ್ದು ಏನೂ ಸಂಭವಿಸುವುದಿಲ್ಲ. ದೀದಿ ಇಲ್ಲಿದ್ದಾರೆ, ದೀದಿ ನಿಮ್ಮನ್ನು ಮತ್ತು ನಿಮ್ಮ ಆಸ್ತಿಯನ್ನು ರಕ್ಷಿಸುತ್ತಾರೆ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳನ್ನು ಕಾಪಾಡುವ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ರಾಜಕೀಯ ಪ್ರಚೋದನೆಗಳಿಗೆ ಬಲಿಯಾಗದಂತೆ ಸಮುದಾಯಕ್ಕೆ ಎಚ್ಚರಿಕೆ ನೀಡಿದರು. ಸಹಬಾಳ್ವೆಯ ಮಹತ್ವವನ್ನು ಒತ್ತಿ ಹೇಳಿದ ಅವರು, ಬದುಕಿ ಮತ್ತು ಬದುಕಲು ಬಿಡಿ. ನಾವು ಒಗ್ಗಟ್ಟಿನಿಂದ ಇರಬೇಕು. ಬಂಗಾಳದಲ್ಲಿ ವಿಭಜಕ ರಾಜಕೀಯ ಬೇರೂರಲು ಬಿಡಬಾರದು. ಬಾಂಗ್ಲಾದೇಶದ (Bangladesh) ಪರಿಸ್ಥಿತಿ ಉಲ್ಲೇಖಿಸಿ, ವಕ್ಫ್ ಮಸೂದೆ ಅಂಗೀಕಾರಕ್ಕೆ ಈ ಸಮಯವು ಸೂಕ್ತವಲ್ಲ. ನಾವು ಈಗ ಈ ಮಸೂದೆಯನ್ನು ಅಂಗೀಕರಿಸಬಾರದಿತ್ತು ಎಂದು ಕೆಲವು ಪ್ರದೇಶಗಳಲ್ಲಿ ಇದು ಉಂಟುಮಾಡಿರುವ ಅಶಾಂತಿಯ ಬಗ್ಗೆ ಗಮನ ಸೆಳೆದರು.ಇದನ್ನೂ ಓದಿ: ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: “ದೇಶದ ವಕ್ಫ್ ಬೋರ್ಡ್‌ಗಳಿಂದ (Waqf Board) ಕನಿಷ್ಟ ವರ್ಷಕ್ಕೆ 12 ಸಾವಿರ ಕೋಟಿ ರೂ. ಆದಾಯ ಸಿಗಬೇಕು. ಆದರೆ ವಕ್ಫ್‌ನಿಂದ ಸಿಕ್ಕಿದ್ದು ಕೇವಲ 166 ಕೋಟಿ ರೂ. ಆದಾಯ”
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Bill) ಮಂಡಿಸಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ ರಿಜಿಜು (Kiren Rijiju) ಕಾಂಗ್ರೆಸ್ ನೇತೃತ್ವದ ಯುಪಿಎ (UPA) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Watch: Union Minister Kiren Rijiju says, “On our own WAMSI portal, we have reviewed the records. The Sachar Committee, which was formed in 2006, has also provided detailed information on this matter. In 2006, there were 4.9 lakh Waqf properties, and do you know what the total… pic.twitter.com/bclDQLBTOp
ವಕ್ಫ್ ಆಸ್ತಿಯನ್ನು ಸರಿಯಾಗಿ ಬಳಸಿಕೊಂಡರೆ ವರ್ಷಕ್ಕೆ 12,000 ಕೋಟಿ ರೂ. ಆದಾಯ ಗಳಿಸಬಹುದು ಎಂದು ಸಾಚಾರ್ ಸಮಿತಿ ಹೇಳಿತ್ತು. 2006 ರಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಸಾಚಾರ್ ಸಮಿತಿಯು, ಈ ಆಸ್ತಿಗಳನ್ನು ಸಮರ್ಥ ಮತ್ತು ಮಾರುಕಟ್ಟೆ ಬಳಕೆಗೆ ಒಳಪಡಿಸಿ ಕನಿಷ್ಟ 10% ರಷ್ಟು ಬಳಕೆ ಮಾಡಿದರೆ ವರ್ಷಕ್ಕೆ ಸುಮಾರು 12,000 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಬಹುದು ಎಂದು ಉಲ್ಲೇಖಿಸಿತ್ತು.
Watch: BJP MP Anurag Thakur says, “…Look at this report—it clearly names several Congress leaders in the Karnataka Assembly who were involved in misusing Waqf properties and committing scams worth thousands of crores. This is why you don’t want transparency; this is why you… pic.twitter.com/vpFCmM5Rmw
ವಕ್ಫ್ ಆಸ್ತಿ ಎಷ್ಟಿದೆ?
ಸರ್ಕಾರಿ ಮಾಹಿತಿಯ ಪ್ರಕಾರ, ವಕ್ಫ್ ಮಂಡಳಿಗಳು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ 8.7 ಲಕ್ಷ ಆಸ್ತಿಗಳ ನಿಯಂತ್ರಣ ಹೊಂದಿದೆ. ಈ ಎಲ್ಲಾ ಆಸ್ತಿಗಳ ಮೌಲ್ಯ 1.2 ಲಕ್ಷ ಕೋಟಿ ರೂ. ಸಶಸ್ತ್ರ ಪಡೆಗಳು ಮತ್ತು ಭಾರತೀಯ ರೈಲ್ವೆಯ ನಂತರ, ವಕ್ಫ್ ಮಂಡಳಿಯು ಭಾರತದಲ್ಲಿ ಅತಿಹೆಚ್ಚು ಭೂಮಿಯನ್ನು ಹೊಂದಿದ ಸಂಸ್ಥೆಯಾಗಿದೆ.
ವಕ್ಫ್ ಮಂಡಳಿಯ ಅಡಿಯಲ್ಲಿ 8,72,328 ಸ್ಥಿರ ಮತ್ತು 16,713 ಚರ ಆಸ್ತಿಗಳನ್ನು ನೋಂದಣಿ ಮಾಡಲಾಗಿದೆ. ವಕ್ಫ್ ಮಂಡಳಿಯ ಅಡಿಯಲ್ಲಿ 3,56, 051 ವಕ್ಫ್ ಎಸ್ಟೇಟ್‌ಗಳು ನೋಂದಾಯಿಸಲ್ಪಟ್ಟಿದೆ. ಅತಿ ಹೆಚ್ಚು ವಕ್ಫ್ ಆಸ್ತಿ ಇರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ (2,32,547) ಮೊದಲ ಸ್ಥಾನದಲ್ಲಿದ್ದರೆ ಪಶ್ಚಿಮ ಬಂಗಾಳ (80,480) ಎರಡನೇ ಸ್ಥಾನ ಹೊಂದಿದೆ.
ನವದೆಹಲಿ: 2014ರಲ್ಲಿ ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಾರದೇ ಇದ್ದರೆ ಸಂಸತ್ತು, ವಿಮಾನ ನಿಲ್ದಾಣವನ್ನು (Airtport) ಕಾಂಗ್ರೆಸ್ ವಕ್ಫ್‌ಗೆ ನೀಡುತ್ತಿತ್ತು ಎಂದು ಕೇಂದ್ರ ಸಂಸದೀಯ ಖಾತೆ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು (Waqf Amendment Bill) ಲೋಕಸಭೆಯಲ್ಲಿ ಮಂಡಿಸಿದ ಬಳಿಕ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರವು ಶಾಸನಕ್ಕೆ ಮಾಡಿದ ಬದಲಾವಣೆಗಳು ಇತರ ಕಾನೂನುಗಳಿಗಿಂತ ಹೆಚ್ಚಿನ ಪರಿಣಾಮವನ್ನು ನೀಡಿದ್ದರಿಂದ ಹೊಸ ತಿದ್ದುಪಡಿಗಳು ಅಗತ್ಯವಾಗಿವೆ ಎಂದು ಸಮರ್ಥಿಸಿಕೊಂಡರು.
ಈ ಮಸೂದೆಯು ಬಡ ಮುಸ್ಲಿಮರು ಮತ್ತು ಮಹಿಳೆಯರ ಹಿತಾಸಕ್ತಿಗಾಗಿ ಮತ್ತು ಆಸ್ತಿಗಳನ್ನು ನಿರ್ವಹಿಸುವಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ. ವಿರೋಧ ಪಕ್ಷಗಳು ಹೇಳುತ್ತಿರುವಂತೆ ಮುಸ್ಲಿಂ ಸಮುದಾಯದ ಭೂಮಿ ಅಥವಾ ಮಸೀದಿಗಳನ್ನು ಕಿತ್ತುಕೊಳ್ಳುವ ಗುರಿಯನ್ನು ಮಸೂದೆ ಹೊಂದಿಲ್ಲ. ಆ ಜಾಗಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.
ರಿಜಿಜು ವಿರುದ್ಧ ಕಾಂಗ್ರೆಸ್ ಆರೋಪವನ್ನು ಮುಂದಿಟ್ಟ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಈ ಶಾಸನವು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ, ಅಲ್ಪಸಂಖ್ಯಾತ ಸಮುದಾಯವನ್ನು ಮಾನಹಾನಿಗೊಳಿಸುತ್ತದೆ ಮತ್ತು ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ದೂರಿದರು. ಇದನ್ನೂ ಓದಿ: ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ
ಗೃಹ ಸಚಿವ ಅಮಿತ್ ಶಾ ಮಾತನಾಡಿ, ವಕ್ಫ್ ಮಸೂದೆಯ ಎಲ್ಲಾ ಅಂಶಗಳನ್ನು ಜೆಪಿಸಿಯಲ್ಲಿ ಚರ್ಚಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಚರ್ಚೆ ಮಾಡದೇ ಕಾನೂನುಗಳನ್ನು ಅಂಗೀಕರಿಸಿತ್ತು. ನಮ್ಮ ಸಮಿತಿಯು ಚರ್ಚಿಸುತ್ತದೆ ಮತ್ತು ಬದಲಾವಣೆಗಳನ್ನು ಮಾಡುತ್ತದೆ ಎಂದರು.
543 ಸದಸ್ಯರ ಲೋಕಸಭೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 293 ಸದಸ್ಯರನ್ನು ಹೊಂದಿದೆ. ಮಸೂದೆ ಅಂಗೀಕಾರಕ್ಕೆ ಪರವಾಗಿ 272 ಮತಗಳು ಬೇಕಾಗುತ್ತವೆ. ರಾಜ್ಯಸಭೆಯಲ್ಲಿ ಎನ್‌ಡಿಎ 125 ಸಂಸದರ ಬೆಂಬಲವನ್ನು ಹೊಂದಿದೆ. ರಾಜ್ಯಸಭೆಯಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕು.
ನವದೆಹಲಿ: ವಿಪಕ್ಷಗಳು ಮತ್ತು ಮುಸ್ಲಿಮರ (Muslims) ವಿರೋಧದ ನಡುವೆ ಲೋಕಸಭೆಯಲ್ಲಿ (Lokasabha) ಬುಧವಾರ ವಕ್ಫ್ ತಿದ್ದುಪಡಿ ಮಸೂದೆ (Waqf Act Amendment Bill ಮಂಡನೆ ಆಗಲಿದೆ. ಮಧ್ಯಾಹ್ನ 12:15ಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಸೂದೆ ಮಂಡಿಸಲಿದ್ದಾರೆ.
ವಕ್ಫ್ ಮಸೂದೆ ಮೇಲಿನ ವಿಸ್ತೃತ ಚರ್ಚೆಗಾಗಿ 8 ಗಂಟೆ ಮೀಸಲು ಇಡಲಾಗಿದೆ. ಈ ಮಸೂದೆಯನ್ನು ಎನ್‌ಡಿಎ (NDA) ಒಕ್ಕೂಟದ 298 ಸಂಸದರು ಬೆಂಬಲಿಸುವ ಸಾಧ್ಯತೆ ಇದೆ. ನಾಳೆಯೇ ವೋಟಿಂಗ್ ನಡೆಯೋ ಸಾಧ್ಯತೆ ಹೆಚ್ಚಿರುವ ಕಾರಣ ಎನ್‌ಡಿಎಯ ಎಲ್ಲಾ ಸಂಸದರು ಕಡ್ಡಾಯವಾಗಿ ಕಲಾಪಕ್ಕೆ ಬರಬೇಕೆಂದು ಆಯಾ ಪಕ್ಷಗಳು ವಿಪ್ ಜಾರಿ ಮಾಡಿದೆ. ಇದನ್ನೂ ಓದಿ: ಗ್ಯಾರಂಟಿ ಸರ್ಕಾರದಿಂದ ಶಾಕ್ – ಡೀಸೆಲ್ ದರ 2 ರೂ. ಏರಿಕೆ
ಇಂದು ವಕ್ಫ್ ಬಿಲ್ ಮೇಲಿನ ಚರ್ಚೆಗೆ ಸಮಯ ನಿಗದಿ ಮಾಡಲು ಸ್ಪೀಕರ್ ಕರೆದಿದ್ದ ಬಿಎಸಿ ಸಭೆಯಲ್ಲೂ, ಕಡಿಮೆ ಸಮಯ ಎಂದು ಹೇಳಿ ವಿಪಕ್ಷಗಳು ಆಕ್ಷೇಪ ಎತ್ತಿ ಸಭೆಯನ್ನು ಬಹಿಷ್ಕರಿಸಿದ್ದವು. ವಿಪಕ್ಷಗಳ ಧೋರಣೆಗೆ ಕಿರಣ್ ರಿಜಿಜು ಆಕ್ರೋಶ ಹೊರಹಾಕಿದ್ದಾರೆ.
ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ (2025 Budget Session) ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು. ಆದ್ರೆ ಕೇಂದ್ರವು ಈ ಆರೋಪವನ್ನು ನಿರಾಕರಿಸಿತು.
ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈ ಮೂಲಕ ಮಾರ್ಚ್ 10 ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಗುರಿ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಂಡ್ಯ | KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ (Jagdambika Pal) ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿತು. ಇದನ್ನೂ ಓದಿ: ರಾಜ್ಯದಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆ – ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆ