ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Act) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ತನ್ನ ಉತ್ತರ ನೀಡಿದೆ.
ಕಳೆದ 100 ವರ್ಷಗಳಿಂದ ವಕ್ಫ್ ಅನ್ನು ಬಳಕೆದಾರರ ನೋಂದಣಿ ನಂತರವೇ ಗುರುತಿಸಲಾಗುತ್ತಿದೆಯೇ ಹೊರತು ಮೌಖಿಕವಾಗಿ ಅಲ್ಲ. ಹೀಗಾಗಿ ತಿದ್ದುಪಡಿ ಅಗತ್ಯವಾಗಿತ್ತು ಎಂದು ಹೇಳಿದೆ. ವಕ್ಫ್ ಕೌನ್ಸಿಲ್ ಮತ್ತು ವಕ್ಫ್ ಮಂಡಳಿಯಲ್ಲಿರುವ 22 ಸದಸ್ಯರಲ್ಲಿ ಗರಿಷ್ಠ ಇಬ್ಬರು ಮುಸ್ಲಿಮೇತರರಾಗಿರಬೇಕು (Non Muslims) ಎಂದು ಕೇಂದ್ರ ಸರ್ಕಾರ ಹೇಳಿದೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲೊಬ್ಬ ಸೂಪರ್ ಹಿರೋ.. ಬಿಜೆಪಿ ಕುಟುಂಬ ಕಾಪಾಡಿದ ಕಾಶ್ಮೀರಿ ಮುಸ್ಲಿಂ!
ಇದು ವಕ್ಫ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಸರ್ಕಾರಿ ಭೂಮಿಯನ್ನು ಉದ್ದೇಶಪೂರ್ವಕವಾಗಿ ಅಥವಾ ತಪ್ಪಾಗಿ ವಕ್ಫ್ ಆಸ್ತಿ ಎಂದು ಗುರುತಿಸುವುದನ್ನು ತಡೆಯುವುದು, ಕಂದಾಯ ದಾಖಲೆಗಳನ್ನು ಸರಿಪಡಿಸುವ ಉದ್ದೇಶವಾಗಿದೆ. ಸರ್ಕಾರಿ ಭೂಮಿಯನ್ನು ಯಾವುದೇ ಧಾರ್ಮಿಕ ಸಮುದಾಯಕ್ಕೆ ಸೇರಿದ ಭೂಮಿಯೆಂದು ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಹೇಳಿದೆ. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ (Protester) ಪೊಲೀಸ್ ಅಧಿಕಾರಿಯ ಕಾರಿನಲ್ಲೇ ಡ್ರಾಪ್ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹೌದು. ವಕ್ಫ್ ಕಾಯ್ದೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ 73ರ ಸಮೀಪದ ಅಡ್ಯಾರ್ ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಕಿಲೋಮೀಟರ್‌ಗಟ್ಟಲೇ ಸ್ತಬ್ಧವಾಗಿತ್ತು. ಹೆದ್ದಾರಿ ಬಂದ್ ಮಾಡಬಾರದು ಎಂಬ ಹೈಕೋರ್ಟ್ ಸೂಚನೆ ಇದ್ದರೂ, ಪ್ರತಿಭಟನಾಕಾರರ ಗುಂಪು ಉದ್ದೇಶಪೂರ್ವಕವಾಗಿ ಹೆದ್ದಾರಿಯನ್ನು ಅಲ್ಲಲ್ಲಿ ಬಂದ್ ಮಾಡಿತ್ತು. ಇದನ್ನೂ ಓದಿ: ಮಂಗಳೂರಿನಲ್ಲಿ ವಕ್ಫ್ ಕಾಯ್ದೆ ವಿರುದ್ಧ ಹೋರಾಟ
ಮತ್ತೊಂದೆಡೆ ವಾಹನಗಳು ಕಿಲೋಮೀಟರ್ ಗಟ್ಟಲೆ ರಸ್ತೆಯಲ್ಲಿ ನಿಂತಿದ್ದವು, ಪೊಲೀಸರು ಹರಸಾಹಸ ಪಟ್ಟು ವಾಹನಗಳನ್ನು ಮುಂದಕ್ಕೆ ಕಳುಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರಿಗೆ ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರು ಬಳಸುವ ಕಾರಿನಲ್ಲಿ ಸೈರನ್, ಎಮರ್ಜೆನ್ಸಿ ಲೈಟ್ ಹಾಕಿಕೊಂಡು ಡ್ರಾಪ್ ನೀಡಲಾಗಿದೆ.
ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನ ಅಡ್ಯಾರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಸಮೀಪದ ಅಡ್ಯಾರ್ ಶಾ ಮೈದಾನದಲ್ಲಿ ಪ್ರತಿಭಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಕಿಲೋಮೀಟರ್‌ಗಟ್ಟಲೇ ಸ್ತಬ್ಧವಾಗಿತ್ತು. ಹೆದ್ದಾರಿ ಬಂದ್ ಮಾಡಬಾರದು ಎಂಬ ಕೋರ್ಟ್ ಸೂಚನೆ ಇದ್ದರೂ, ಪ್ರತಿಭಟನಾಕಾರ ಯುವಕರ ಗುಂಪು ಉದ್ದೇಶಪೂರ್ವಕವಾಗಿ ಹೆದ್ದಾರಿಯನ್ನು ಅಲ್ಲಲ್ಲಿ ಬಂದ್ ಮಾಡಿತು. ವಾಹನಗಳು ಕಿಲೋಮೀಟರ್‌ಗಟ್ಟಲೆ ರಸ್ತೆಯಲ್ಲಿ ಜಾಮ್ ಆದರು. ಇದನ್ನೂ ಓದಿ: ವಕ್ಫ್ ಕಾಯ್ದೆಯನ್ನು ರಾಷ್ಟ್ರಭಕ್ತ ಮುಸ್ಲಿಮರು ಬೆಂಬಲಿಸಬೇಕು: ಕೋಟ ಶ್ರೀನಿವಾಸ ಪೂಜಾರಿ
ಪೊಲೀಸರು ಹರಸಾಹಸ ಪಟ್ಟು ವಾಹನಗಳನ್ನು ಮುಂದಕ್ಕೆ ಕಳುಹಿಸಿದರು. ಪ್ರತಿಭಟನಾ ಮೈದಾನ ತುಂಬಿಕೊಂಡಿದ್ದರಿಂದ ಹಲವಾರು ಜನ ಸುತ್ತಮುತ್ತಲ ಕಾಂಪೌಂಡ್ ಮನೆಯ ಛಾವಣಿ, ಮರಗಳನ್ನು ಹತ್ತಿ ಕಾರ್ಯಕ್ರಮ ವೀಕ್ಷಿಸಿದರು. ಮರದ ತುದಿಯವರೆಗೂ ಕೆಲ ಯುವಕರು ಹತ್ತಿದ್ದು, ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರನ್ನು ಇಳಿಸಿದರು.
ನವದೆಹಲಿ: ವಕ್ಫ್ ಕಾಯ್ದೆಯ (Waqf Act) ಬಗ್ಗೆ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಗೆ ಮಾನದಂಡ ಏನು ಎಂದು ವಕೀಲ ವಿಷ್ಣು ಶಂಕರ್ ಜೈನ್ (Vishnu Shankar Jain) ಪ್ರಶ್ನಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಹಿಂದೂಗಳು (Hindu) ಈ ಹಿಂದೆ ವಕ್ಫ್ ಮಂಡಳಿಯ ಬಗ್ಗೆ ಅರ್ಜಿ ಸಲ್ಲಿಸಿದಾಗ ಸುಪ್ರೀಂ ಕೋರ್ಟ್ ಇಲ್ಲಿ ಯಾಕೆ ನೇರವಾಗಿ ಅರ್ಜಿ ಸಲ್ಲಿಸಿದ್ದೀರಿ. ಹೈಕೋರ್ಟ್‌ಗೆ (High Court) ಹೋಗಿ ಎಂದು ಸೂಚಿಸಿತ್ತು. ವಿವಿಧ ಹೈಕೋರ್ಟ್‌ಗಳಲ್ಲಿ 140 ಕ್ಕೂ ಹೆಚ್ಚು ಅರ್ಜಿಗಳು ದಾಖಲಾಗಿದ್ದರೂ ನಮಗೆ ಯಾವುದೇ ಮಧ್ಯಂತರ ಪರಿಹಾರ ಸಿಕ್ಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ
#WATCH | Delhi | Advocate Vishnu Shankar Jain says, “When we filed a petition in the Supreme Court regarding the Waqf board, the Court asked us why we came directly to the Supreme Court and suggested that we should go to the High Courts, and we didn’t get any interim relief even… pic.twitter.com/jw2AfuWCvO
ಈಗ ಸುಪ್ರೀಂ ಕೋರ್ಟ್‌ಗೆ ಬೇರೆ ಬೇರೆ ಅರ್ಜಿಗಳು ಸಲ್ಲಿಕೆಯಾಗುತ್ತಿದೆ ಮತ್ತು ಅವುಗಳ ವಿಚಾರಣೆ ಸಹ ನಡೆಸುತ್ತಿದೆ. ಅಷ್ಟೇ ಅಲ್ಲದೇ ಮಧ್ಯಂತರ ಆದೇಶಕ್ಕೆ ಸಂಬಂಧಿಸಿದ ವಿಷಯಗಳನ್ನು ಸಹ ಹೇಳಿದೆ. ಕಳೆದ 13 ವರ್ಷಗಳಿಂದ ಹಿಂದೂ ದೇವಾಲಯಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ 4 ರಾಜ್ಯಗಳ ಹಿಂದೂಗಳ ದತ್ತಿ ಕಾಯ್ದೆಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸಬೇಕು. ಅಂತಹ ಪ್ರಕರಣಗಳನ್ನು ನಾವು ವಿಚಾರಣೆ ಯಾಕೆ ನಡೆಸಬೇಕು ಎಂದು ಸುಪ್ರೀಂ ಪ್ರಶ್ನಿಸಿತ್ತು ಎಂದರು.
ನನ್ನ ಸಲಹೆಯೆಂದರೆ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶದಲ್ಲಿರುವ ಎಲ್ಲಾ ಪ್ರಕರಣಗಳನ್ನು ಒಂದೇ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು. ಇದಕ್ಕಾಗಿ 6 ತಿಂಗಳೊಳಗೆ ಪ್ರಕರಣಗಳನ್ನು ಆಲಿಸಲು ಸಾಂವಿಧಾನಿಕ ಪೀಠವನ್ನು ರಚಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು
ಬುಧವಾರ ಸುಪ್ರೀಂನಲ್ಲಿ ನಡೆದ ವಿಚಾರಣೆ ವೇಳೆ ವಕೀಲ ಅಭಿಷೇಕ್ ಮನು ಸಿಂಗ್ವಿ, ಕಾಯ್ದೆಯು ದೇಶಾದ್ಯಂತ ವಕ್ಫ್ ಆಸ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದ್ದರು.
ಅಯೋಧ್ಯೆ ಪ್ರಕರಣದಲ್ಲಿ ವಿಷ್ಣು ಶಂಕರ್ ಜೈನ್ ಮತ್ತು ಅವರ ತಂದೆ ಅರ್ಜಿದಾರರ ವಾದಿಸಿದ್ದರು. ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಸ್ಥಾನ, ಕೃಷ್ಣಜನ್ಮಭೂಮಿ-ಶಾಹಿ ಈದ್ಗಾ (ಮಥುರಾ) ಮತ್ತು ಸಂಭಾಲ್ ವಿವಾದದಲ್ಲಿ ಹಿಂದೂ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.
ಉಡುಪಿ: ವಕ್ಫ್ ಕಾಯ್ದೆಯನ್ನು (Waqf Act) ರಾಷ್ಟ್ರಭಕ್ತ ಮುಸ್ಲಿಮರು ಬೆಂಬಲಿಸಬೇಕು ಎಂದು ವಿನಂತಿ ಮಾಡುತ್ತಿದ್ದೇನೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿದರು.
ವಕ್ಫ್ ಕಾಯ್ದೆ ವಿರೋಧ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ಮಂಡಳಿಗೆ ಕೋರ್ಟಿಗೆ ಹೋಗುವ ಅಧಿಕಾರ ಇಲ್ಲ. ಬಿಲ್ ಜಾರಿಗೊಳಿಸುವ ಮೂಲಕ ಪಾರದರ್ಶಕತೆ ಜಾರಿಗೆ ತರಲಾಗಿದೆ. ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿ ಸ್ಪಷ್ಟವಾಗಿದೆ. ಎರಡು ಲಕ್ಷ ಕೋಟಿ ರೂಪಾಯಿ ವಕ್ಫ್ ಆಸ್ತಿ ಶ್ರೀಮಂತ ರಾಜಕಾರಣಿಗಳ ಪಾಲಾಗಿದೆ. ಶ್ರೀಮಂತ ರಾಜಕಾರಣಿಗಳು ಮೆಡಿಕಲ್ ಕಾಲೇಜು, ಶಾಲೆ ಆಸ್ಪತ್ರೆ-ವಾಣಿಜ್ಯ ವ್ಯವಹಾರಗಳನ್ನು ಮಾಡುತ್ತಿದ್ದಾರೆ. ಕಡಿಮೆ ಬೆಲೆಗೆ ಬಾಡಿಗೆ ಅಥವಾ ಲೀಸ್‌ಗೆ ಪಡೆದು ಎರಡು ಲಕ್ಷ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದವರು ಈ ಮಾಹಿತಿಯನ್ನು ನೀಡುತ್ತಿದ್ದಾರೆ. ಬಡವರು, ಮಹಿಳೆಯರಿಗೆ ಮಕ್ಕಳ ಶಿಕ್ಷಣಕ್ಕೆ ವಕ್ಫ್ ಆಸ್ತಿ ಬಳಕೆಯಾಗಬೇಕು. ಶ್ರೀಮಂತರ ಹಿಡಿತದಿಂದ ತಪ್ಪಿಸಿ ಬಡ ಮುಸ್ಲಿಮರ ಪರವಾಗಿ ಈ ಕಾಯ್ದೆ ಇದೆ. ಮತೀಯ ಮತ್ತು ಮತದ ಕಾರಣಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಕ್ಫ್ ಕಾಯ್ದೆಯನ್ನು ರಾಷ್ಟ್ರಭಕ್ತ ಮುಸ್ಲಿಮರು ಬೆಂಬಲಿಸಬೇಕು ಎಂದು ವಿನಂತಿ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಸದ್ಬಳಕೆ ಆಗಿದ್ದರೆ ಮುಸ್ಲಿಮರು ಪಂಕ್ಚರ್ ಹಾಕುತ್ತಿರಲಿಲ್ಲ: ಮೋದಿ
ಸರ್ಕಾರ ಉರುಳಿಸಲು ಮೋದಿ, ಅಮಿತ್ ಶಾ ಷಡ್ಯಂತ್ರ ಎಂಬ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ಪ್ರತಿಕ್ರಿಯಿಸಿ, ಡಿಕೆಶಿ, ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಒಗ್ಗಟ್ಟಿನ ಬಗ್ಗೆ ನಾನು ಮಾತಾಡಲ್ಲ. ಒಗ್ಗಟ್ಟಿಲ್ಲ ಅಂತ ಖರ್ಗೆಗೂ ಅನಿಸಿರಬೇಕು ಹಾಗಾಗಿ ಈ ಹೇಳಿಕೆ ಕೊಟ್ಟಿರಬಹುದು. ಬಿಜೆಪಿ ಸರ್ಕಾರವನ್ನು ವಜಾ ಮಾಡಲು ಯತ್ನಿಸಿದ್ದು ಕಾಂಗ್ರೆಸ್. ಮೋದಿ ಆಡಳಿತದಲ್ಲಿ ಈ ಥರದ ದುಷ್ಕೃತ್ಯ ಎಲ್ಲೂ ಆಗಿಲ್ಲ. ಮೋದಿ ಅವಧಿಯಲ್ಲಿ ರಾಜ್ಯಪಾಲರ ಆಡಳಿತ ತಂದ ಒಂದೇ ಒಂದು ಉದಾಹರಣೆ ಇಲ್ಲ. ಖರ್ಗೆ ಬಹಳ ದೊಡ್ಡವರು ಇತಿಹಾಸ ಗೊತ್ತಿದ್ದವರು. ನಾವಾದ್ರೆ ವಜಾ ಮಾಡ್ತಿದ್ದೆವು, ಬಿಜೆಪಿಯವರು ಬಿಟ್ಟಿದ್ದಾರೆ ಎಂಬರ್ಥದಲ್ಲಿ ಹೇಳಿರಬಹುದು. ಸರ್ಕಾರ ವಜಾ ಮಾಡುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ. ಆ ಮಾನಸಿಕತೆ ಬಿಜೆಪಿಗೆ ಇಲ್ಲ. ರಾಜ್ಯಪಾಲರಾಗಿದ್ದ ಹಂಸರಾಜ ಭಾರದ್ವಾಜ್ ಗೋಹತ್ಯೆ ನಿಷೇಧ ಕಾಯ್ದೆ ಬಿಲ್‌ಗೆ ಸಹಿ ಹಾಕಿಲ್ಲ. ಬಿಲ್ಲನ್ನು ರಾಷ್ಟ್ರಪತಿಗೆ ವರ್ಗಾವಣೆ ಮಾಡಿದ್ದರು. ರಿಸರ್ವೇಶನ್ ಬಿಲ್ಲನ್ನು ಗೆಹ್ಲೋಟ್ ರಾಷ್ಟ್ರಪತಿಗೆ ಕಳುಹಿಸಿದ್ದಾರೆ. ಅಂದು ಸ್ವಾಗತಿಸಿದ ನೀವು ಇಂದು ಈ ನಡೆಯನ್ನು ಸ್ವಾಗತಿಸಬೇಕಿತ್ತು ಎಂದು ಟಾಂಗ್ ಕೊಟ್ಟರು.
ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ ಬಗ್ಗೆ ಮಾತನಾಡಿ, ಚರ್ಚಾ ಸಮರವಾಗಲಿ, ಎಲ್ಲರ ಅಭಿಪ್ರಾಯ ವ್ಯಕ್ತವಾಗಲಿ. ನ್ಯಾಯ ಸಮ್ಮತವಾದ ತೀರ್ಮಾನ ಹೊರಬರಲಿ. ನಮ್ಮ ಮನೆಯಲ್ಲಿ ಗಣತಿ ನಡೆದಿಲ್ಲ ಎಂದು ಬಹಳಷ್ಟು ಜನ ಹೇಳಿದ್ದಾರೆ. ಸರ್ಕಾರಕ್ಕೆ ಜವಾಬ್ದಾರಿ ಇದ್ದರೆ ಸ್ಪಷ್ಟಪಡಿಸಬೇಕು, ಉತ್ತರಿಸಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಗಣತಿ ನಡೆದಿರುವುದು. ಎಲ್ಲಾ ಜಿಜ್ಞಾಸೆ ಮತ್ತು ಎಲ್ಲಾ ಪ್ರಶ್ನೆಗಳಿಗೆ ಸರ್ಕಾರ ಉತ್ತರ ಕೊಡಬೇಕು. ಜನ ನಮ್ಮನೆಗೆ ಸರ್ವೆಗೆ ಬಂದಿಲ್ಲ ಅಂತಾರೆ ಈ ವರದಿಯನ್ನು ಹೇಗೆ ಒಪ್ಪಿಕೊಳ್ಳುವುದು? ಕಾಂತರಾಜು ವರದಿಯಲ್ಲಿ ರಚನೆ ಆಗುವಾಗ ಆದ ಲೋಪಗಳೇನು? ಸಮೀಕ್ಷೆ ಮಾಡಿದ ವರದಿ ಕೊಟ್ಟವರ ಜವಾಬ್ದಾರಿಯೂ ಇದರ ಹಿಂದೆ. ನಮ್ಮನೆಯಲ್ಲಿ ಸರ್ವೆ ಆಗಿಲ್ಲ ಎಂದು ಜನ ಹೇಳುತ್ತಿದ್ದಾರೆ. ಉತ್ತರ ಕೊಡಬೇಕಾದ್ದು ಸರ್ಕಾರದ ಜವಾಬ್ದಾರಿ. ತಿರಸ್ಕರಿಸಿ, ಮರು ಸರ್ವೆ ಮಾಡಿ ಎಂದು ನಾನು ಒತ್ತಾಯಿಸುತ್ತಿಲ್ಲ. ಜಾತಿ ಜನಗಣತಿಯ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಹಿಂದುಳಿದ ವರ್ಗ, ಕಟ್ಟ ಕಡೆ ವ್ಯಕ್ತಿ ಸಾಮಾಜಿಕ ಸಮಬಾಳಿಗೆ ನ್ಯಾಯಕ್ಕಾಗಿ ಜಾತಿಗಣತಿ ಬೇಕು. ಸರ್ಕಾರ ತನ್ನ ಆಂತರಿಕ ಸಮಸ್ಯೆಯಿಂದ ಮುಕ್ತ ಆಗಲು ಜನಗಣತಿಯನ್ನು ಬಳಸುತ್ತಿದೆ. ಜಾತಿ ಜನಗಣತಿಯನ್ನು ಸರ್ಕಾರ ಗುರಾಣಿಯಾಗಿ ಬಳಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಸರಿಯ ಬಗ್ಗೆ ಚರ್ಚೆಯಾಗಲಿ, ಸಮರ ನಡೆಯಲಿ. ಯಾವುದೇ ಸಮುದಾಯವನ್ನು ಹೆಚ್ಚು ಮಾಡಿ ಕಡಿಮೆ ಮಾಡಿದ್ದರೆ ಅದು ತಪ್ಪು. ಮನೆ ಮನೆಗೆ ಹೋಗದೆ ವರದಿ ಸಿದ್ಧಪಡಿಸದಿದ್ದರೆ ಅದು ತಪ್ಪು. ಒಂದು ಸಮುದಾಯವನ್ನು ಹೆಚ್ಚು ಮಾಡುವುದು ಮತ್ತೊಂದು ಸಮುದಾಯಕ್ಕೆ ಹಲವು ಉಪಜಾತಿ ತೋರಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ವಕ್ಫ್ ಕಾಯ್ದೆ ವಿರೋಧಿಸಿ ಹಿಂಸಾಚಾರ – ಹಿಂದೂಗಳು ಮನೆಬಿಟ್ಟು ಓಡಿಹೋಗುತ್ತಿದ್ದಾರೆಂದು ಬಿಜೆಪಿ ಆರೋಪ
ಲಕ್ನೋ: ಗಲಭೆಕೋರರಿಗೆ ದಂಡವೇ ಉತ್ತಮ ಮದ್ದು ಎಂದು ವಕ್ಫ್ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ಹಿಂಸಾಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಖಂಡನೆ ವ್ಯಕ್ತಪಡಿಸಿದ್ದಾರೆ.
ಹರ್ದೋಯ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಉತ್ತರ ಪ್ರದೇಶವು ಪ್ರತಿ 2-3 ದಿನಗಳಿಗೊಮ್ಮೆ ಗಲಭೆಗಳನ್ನು ಎದುರಿಸುತ್ತಿತ್ತು. ಗಲಭೆಕೋರರಿಗೆ ದಂಡ ಮಾತ್ರ ಚಿಕಿತ್ಸೆ. ನೀವು ನೋಡಬಹುದು, ಬಂಗಾಳ ಉರಿಯುತ್ತಿದೆ. ಮುಖ್ಯಮಂತ್ರಿ ಮೌನವಾಗಿದ್ದಾರೆ. ಅವರು ಗಲಭೆಕೋರರನ್ನು ‘ಶಾಂತಿ ರಾಯಭಾರಿಗಳು’ ಎಂದು ಕರೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ನಡೆಗೆ ಯೋಗಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ
ಹೊಡೆತದ ಭಾಷೆ ಮಾತ್ರ ಅರಿತುಕೊಳ್ಳುವವರಿಗೆ, ಮಾತಿನ ಪದಗಳು ಅರ್ಥವಾಗುವುದಿಲ್ಲ. ಜಾತ್ಯತೀತತೆಯ ಹೆಸರಿನಲ್ಲಿ ಅವರು ಗಲಭೆಕೋರರಿಗೆ ಸ್ವಾತಂತ್ರ್ಯ ನೀಡಿದ್ದಾರೆ. ಸರ್ಕಾರ ಮೌನವಾಗಿದೆ. ಇಂತಹ ಅರಾಜಕತೆಯನ್ನು ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದ ನಂತರ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅನೇಕ ಕುಟುಂಬಗಳ ಮನೆಗಳು ನಾಶವಾಗಿವೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಅವರು ನಿಯಮಿತವಾಗಿ ಗಸ್ತು ತಿರುಗುತ್ತಿದ್ದಾರೆ. ಇದನ್ನೂ ಓದಿ: ವಕ್ಫ್ ಸದ್ಬಳಕೆ ಆಗಿದ್ದರೆ ಮುಸ್ಲಿಮರು ಪಂಕ್ಚರ್ ಹಾಕುತ್ತಿರಲಿಲ್ಲ: ಮೋದಿ
ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶಾಂತವಾಗಿರಲು ಮನವಿ ಮಾಡಿದ್ದಾರೆ. ಜನರು ಹಿಂಸಾಚಾರ ಮಾಡದಂತೆ ಕೇಳಿಕೊಂಡಿದ್ದಾರೆ. ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿದೆಯೇ ಹೊರತು, ರಾಜ್ಯ ಸರ್ಕಾರವಲ್ಲ ಎಂದು ಹೇಳಿದ್ದಾರೆ.
– ನದಿ ದಾಟಿ ಶಾಲೆ, ಬಂಧುಗಳ ಮನೆಯಲ್ಲಿ ಆಶ್ರಯ – ಮನೆಗೆ ಬಾಂಬ್ ಎಸೆದು ಗಂಡಸರ ಮೇಲೆ ಹಲ್ಲೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal) ವಕ್ಫ್ ಕಾಯ್ದೆ (Waqf Act) ವಿರೋಧಿ ಹೋರಾಟಗಳು ಮತ್ತಷ್ಟು ಹಿಂಸಾರೂಪ ಪಡೆದಿದ್ದು ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ.
ಮುರ್ಷಿದಾಬಾದ್‌ನಲ್ಲಿ ಮುಸ್ಲಿಮ್ (Muslims) ಪ್ರಾಬಲ್ಯದ ಪ್ರದೇಶಗಳಲ್ಲಿ ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು ಲೂಟಿಗಳು ಕೂಡ ಶುರುವಾಗಿವೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ.
#WATCH | West Bengal: Visuals from Dhuliyan town of Jangipur subdivision of Murshidabad district, where violence broke out during a protest against Waqf Amendment Act on April 11
Security personnel have been deployed here, and as per the officials, the situation is under… pic.twitter.com/9QZURVp6SJ
ಮುಸ್ಲಿಮರು ದಾಳಿ ನಡೆಸಬಹುದು ಎಂಬ ಭೀತಿಯಲ್ಲಿ ಅನೇಕ ಹಿಂದೂ ಕುಟುಂಬಗಳು ಗುಳೆ ಹೊರಟಿವೆ. ಸುತಿ, ಧುಲಿಯಾನ್, ಜಂಗೀಪುರ, ಶಂಶೇರ್‌ಗಂಜ್ ಪ್ರದೇಶಗಳಿಂದ ಹಿಂದೂಗಳು ವಲಸೆ ಹೋಗ್ತಿದ್ದಾರೆ. ಹಿಂದೂಗಳು ಭಾಗೀರಥಿ ನದಿ ದಾಟಿ ಪ್ರಾಣ ಉಳಿಸಿಕೊಂಡಿದ್ದಾರೆ. ಮಾಲ್ಡಾ ಸೇರಿ ವಿವಿಧೆಡೆ ಬಂಧುಗಳ ಮನೆ, ಶಾಲೆಗಳಲ್ಲಿ ಆಶ್ರಯ ಪಡೆದಿದ್ದಾರೆ. ದೋಣಿಗಳಲ್ಲಿ ಬರುವವರಿಗೆ ಸಹಾಯ ಮಾಡಲು ನದಿ ದಂಡೆಯಲ್ಲಿ ಸ್ವಯಂಸೇವಕರನ್ನು ನಿಯೋಜಿಸಿದೆ.
২০২৫ সালে দাঁড়িয়ে ১৯৪৭ সালের প্রতিচ্ছবি দেখছে পশ্চিমবঙ্গবাসী।
সময় থাকতে গর্জে উঠুন,নাহলে আজ যা মুর্শিদাবাদে হচ্ছে। কাল তা আপনার সাথেও ঘটবে! pic.twitter.com/f1W8koA9fh
#WATCH | Murshidabad, West Bengal: Khusbhu Das, a resident of Dhuliyan, says, “Both our shops and house were burnt. Everything was vandalized. We called the police and fire brigade to douse the fire, but no one picked up our calls. We want a permanent camp (of the BSF) here so… https://t.co/BUatLHRFtapic.twitter.com/xySeh0waWL
ನಮ್ಮ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಮಹಿಳೆಯರು ಮತ್ತು ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಕುಟುಂಬದಿಂದ ಇತರ ನಾಲ್ವರು ಸದಸ್ಯರೊಂದಿಗೆ ಧುಲಿಯನ್‌ನ ಮಂದಿರಪಾರ ಪ್ರದೇಶದಿಂದ ಓಡಿ ಪಾರಾಗಿ ಬಂದಿದ್ದೇವೆ ಎಂದು ಯುವತಿಯೊಬ್ಬಳು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾಳೆ.
ನಮ್ಮ ಮನೆಗಳ ಮೇಲೆ ಬಾಂಬ್ (Bomb) ಎಸೆದು ಗಂಡು ಮಕ್ಕಳ ಮೇಲೆ ಹಲ್ಲೆ ನಡೆಸಿದರು. ಅಷ್ಟೇ ಅಲ್ಲದೇ ನಮ್ಮ ಮನೆಗಳನ್ನು ತೊರೆಯುವಂತೆ ಸೂಚಿಸಿದರು. ಕೇಂದ್ರ ಪಡೆಗಳ ಸಹಾಯದಿಂದ ನಾವು ಪಾರಾಗಿ ಬಂದಿದ್ದೇವೆ ಎಂದು ಯುವತಿ ಹೇಳಿದಳು.
Just 24 hours of central forces—and Murshidabad goes from a warzone to silence. Not a single riot. Why? Because the moment Mamata’s state-sponsored goons lose police cover, they crawl back into the gutter.
ಹಿಂಸಾಚಾರದ ನಂತರ 400 ಜನರು ಧುಲಿಯನ್‌ನಿಂದ ಪಲಾಯನ ಮಾಡಿದ್ದಾರೆ ಎಂದು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಧಾರ್ಮಿಕವಾಗಿ ಪ್ರೇರಿತರಾದ ಮತಾಂಧರ ಭಯದಿಂದ ಮುರ್ಷಿದಾಬಾದ್‌ನ ಧುಲಿಯನ್‌ನಿಂದ 400 ಕ್ಕೂ ಹೆಚ್ಚು ಹಿಂದೂಗಳು ನದಿಯನ್ನು ದಾಟಿ ಪಾರ್ ಲಾಲ್‌ಪುರ್ ಹೈಸ್ಕೂಲ್, ದಿಯೋನಾಪುರ್-ಸೋವಾಪುರ್ ಜಿಪಿ, ಮಾಲ್ಡಾದ ಬೈಸ್ನಬ್‌ನಗರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಇದು ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದ್ದು ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಬಂಗಾಳದಲ್ಲಿ ನಡೆಯುತ್ತಿರುವ ಗಲಭೆಗಳು ಸರ್ಕಾರಿ ಪ್ರೇರಿತ ಎಂದು ಆಪಾದಿಸಿದೆ. ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕೇಸರಿ ಪಡೆ ಒತ್ತಾಯಿಸಿದೆ.
ಟಿಎಂಸಿ ಸರ್ಕಾರ ಈ ಘಟನೆಗಳನ್ನು ನಾವು ಖಂಡಿಸುತ್ತೇವೆ. ಸದ್ಯಕ್ಕೆ ಯಾವುದೇ ಸಮಸ್ಯ ಇಲ್ಲ, ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ತಿರುಗೇಟು ನೀಡಿದೆ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಗಲಭೆ-ಹತ್ಯೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಹೇಳಿದೆ.
– ಮುಸ್ಲಿಮರನ್ನ ಇಡಿಯಾಗಿ, ಹಿಂದೂಗಳನ್ನ ಒಡೆದು ಆಳುವ ನೀತಿಗೆ ನಮ್ಮ ಬೆಂಬಲವಿಲ್ಲ – ಭಯೋತ್ಪಾದನೆ ಜಾಲದ ವಿಸ್ತರಣೆಯ ಸಂಚು ಮಾಡುತ್ತಿದೆ
ಚಿಕ್ಕಮಗಳೂರು: ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿರುವವರು ಅಲ್ಪಸಂಖ್ಯಾತರಾಗುತ್ತಾರಾ ಎಂದು ಮಾಜಿ ಸಚಿವ ಸಿ.ಟಿ ರವಿ (C T Ravi) ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ (Chikkamagaluru) ಜಾತಿ ಜನಗಣತಿ ವರದಿ (Caste Census Report) ಮಾತನಾಡಿದ ಅವರು, ಸಂವಿಧಾನ ಬದ್ಧವಾಗಿ ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರಕ್ಕೆ ಇರುವುದು. ಇವರು ಸಾಮಾಜಿಕ, ಆರ್ಥಿಕ ಸಮೀಕ್ಷೆ ಎಂದು ಹೇಳಿದ್ದಾರೆ. ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಈಗಲೇ ಸತ್ಯ-ಸುಳ್ಳು ಎಂದು ಪ್ರತಿಕ್ರಿಯಿಸುವುದು ಕಷ್ಟ. ಅನಧಿಕೃತವಾಗಿ ಸೋರಿಕೆ ಆಗಿರುವುದನ್ನು ಸತ್ಯ ಎಂದು ಭಾವಿಸಿದ್ರೆ ಚರ್ಚೆ ಹುಟ್ಟು ಹಾಕುತ್ತದೆ ಎಂದರು. ಇದನ್ನೂ ಓದಿ: ಜಾತಿ ಜನಗಣತಿ ವರದಿಯೇ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು: ವಿ. ಸೋಮಣ್ಣ
ಅಲ್ಪಸಂಖ್ಯಾತರು ಯಾರು? ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿರುವವರು ಅಲ್ಪಸಂಖ್ಯಾತರಾಗುತ್ತಾರಾ? ಮೀಸಲಾತಿ ಸಂಬಂಧ ಕೋರ್ಟ್‌ನಲ್ಲಿ ಮೊಕದ್ದಮೆ ಇದ್ದಾಗ ಕೇಂದ್ರ ಮೀಸಲಾತಿ ಪರ ಪ್ರಮಾಣಪತ್ರ ಸಲ್ಲಿಸಿತ್ತು. ಬಡ್ತಿ ಮೀಸಲಾತಿ ಪರ ಪ್ರಮಾಣಪತ್ರ ಸಲ್ಲಿಸಿತ್ತು. ಇದು ಮೀಸಲಾತಿ ಬಗ್ಗೆ ಬಿಜೆಪಿಗೆ ಇರುವ ಬದ್ಧತೆ. ಸಮಾಜ ಒಡೆಯುವ ದುರುದ್ದೇಶವನ್ನ ನಾವು ಬೆಂಬಲಿಸುವುದಿಲ್ಲ. ಕೆಲ ವ್ಯಕ್ತಿ, ಸಂಘಟನೆ, ರಾಜಕೀಯ ಪಕ್ಷಗಳು ಹಿಂದೂ ಸಮಾಜವನ್ನ ಜಾತಿವಾರು ಒಡೆಯುತ್ತಿವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ – 9 ಜನರ ವಿರುದ್ಧ ಎಫ್‍ಐಆರ್
ಮುಸ್ಲಿಮರಲ್ಲೂ 56 ಜಾತಿಗಳಿವೆ, ಮುಟ್ಟಿಸಿಕೊಳ್ಳದ ಜಾತಿ ಕೂಡ ಇದ್ದಾರೆ. ಪಸ್ಮಾಂಡ ಮುಸ್ಲಿಂ ಇದ್ದಾರೆ. ಯಾರು ಪ್ರವಾದಿ ವಂಶಸ್ಥರು ಅಂತ ಭಾವಿಸುತ್ತಾರೆ ಅವರು ಹೆಣ್ಣು ಕೊಡಲ್ಲ, ಹೆಣ್ಣು ತರಲ್ಲ. ಮುಸ್ಲಿಮರನ್ನ ಹಿಡಿಯಾಗಿ, ಹಿಂದೂಗಳನ್ನ ಒಡೆದು ಆಳುವ ನೀತಿಗೆ ನಮ್ಮ ಬೆಂಬಲವಿಲ್ಲ. ಸಾಮಾಜಿಕ ನ್ಯಾಯ ಬಿಜೆಪಿ ಬದ್ಧತೆಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಎಂ.ಬಿ.ಪಾಟೀಲ್
ವಕ್ಫ್ ಬೋರ್ಡ್ ಕಾಯ್ದೆ (Waqf Board Act) ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡ್ತಿದೆ. ಹಿಂದೆ ಸಿಎಎ ವಿರುದ್ಧವೂ ಕಾಂಗ್ರೆಸ್ ಇದೇ ಅಪಪ್ರಚಾರ ಮಾಡಿತ್ತು. ಕಾಂಗ್ರೆಸ್ ನಿಲುವು ರಾಷ್ಟ್ರಘಾತುಕ ನಿಲುವು, ಈಗ ವಕ್ಫ್ ಬಿಲ್‌ನಲ್ಲೂ ಅಪಪ್ರಚಾರ ಮಾಡುತ್ತಿದ್ದಾರೆ. ನ್ಯಾಯಬದ್ಧವಾದ ಜಮೀನನ್ನ ಯಾರೂ ಕಿತ್ತುಕೊಳ್ಳಲ್ಲ. ಅಕ್ರಮವಾಗಿ ಕಬಳಿಸಿದ ಜಮೀನನ್ನು ಬಿಡಲೇಬೇಕು. ರೈತರ ಜಮೀನು, ಸಾವಿರಾರು ವರ್ಷಗಳ ದೇವಸ್ಥಾನದ ಜಮೀನು ನಮ್ಮದು ಎಂದರೆ ಬಿಡಲೇಬೇಕು. ವಿಧಾನಸೌಧ, ಸುಪ್ರೀಂ ಕೋರ್ಟ್, ಹೈಕೋರ್ಟ್, ಪಾರ್ಲಿಮೆಂಟ್ ನಮ್ಮದು ಎಂದು ಹೇಳಲು ಅವಕಾಶ ಕೊಡಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಹೈಕೋರ್ಟ್‌ಗೆ 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಅಕ್ರಮಕ್ಕೆ ಅವಕಾಶವಿಲ್ಲ. ನ್ಯಾಯಬದ್ಧವಾಗಿದ್ದರೆ ದಾಖಲೆ ನೋಡುತ್ತಾರೆ. ಗ್ರ‍್ಯಾಂಟ್ ಆಗಿದ್ಯಾ, ದಾನ ಕೊಟ್ಟಿದ್ದಾರಾ, ಕೊಂಡುಕೊಂಡಿದ್ದಾರಾ ನೋಡಬೇಕು. ಅದರಲ್ಲಿ ತಪ್ಪೇನಿದೆ. ಮಸೀದಿ ಕಿತ್ತುಕೊಳ್ತಾರೆ ಎಂದು ಅಪಪ್ರಚಾರ ಮಾಡ್ತಿದ್ದಾರೆ. ಆ ರೀತಿ ಏನು ಆಗಲ್ಲ. ಅಪಪ್ರಚಾರದ ಜೊತೆ ಕಾಂಗ್ರೆಸ್ ಬೆಂಬಲ ನೀಡುತ್ತಿರುವುದು ರಾಷ್ಟ್ರಘಾತುಕ. ಭಯೋತ್ಪಾದಕ ಸಂಘಟನೆ, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಸಂದರ್ಭದ ಲಾಭ ಪಡೆದು ಭಯೋತ್ಪಾದನೆ ಜಾಲದ ವಿಸ್ತರಣೆಯ ಸಂಚು ಮಾಡುತ್ತಿರುವ ಮಾಹಿತಿ ಬಂದಿದೆ ಎಂದು ಗುಡುಗಿದರು. ಇದನ್ನೂ ಓದಿ: ಪತ್ನಿ ಆತ್ಮಹತ್ಯೆ; ಹಳೇ ಲವರ್ ಜೊತೆಗಿದ್ದ ಅಕ್ರಮ ಸಂಬಂಧದ ಬಗ್ಗೆ ಒಪ್ಪಿಕೊಂಡ ಟೆಕ್ಕಿ ಪತಿ
ಸಂವಿಧಾನ ಬಾಹಿರವಾಗಿ ನಡೆದುಕೊಳ್ಳಬೇಕೆಂದು ಕಾಂಗ್ರೆಸ್ ಸಂಚು
ಮನವಿ ಕೊಟ್ಟರೆ ಆಗಲ್ಲ. ಒಂದೊಂದು ಊರಲ್ಲಿ 10 ಹೆಣ ಬೀಳಬೇಕು ಎಂದು ಕಾಂಗ್ರೆಸ್ ಕಾರ್ಪೋರೇಟರ್ ಕಬೀರ್ ಖಾನ್ ಹೇಳುತ್ತಾನೆ. ರೈಲು, ಬಸ್‌ಗಳನ್ನು ಸುಡಬೇಕು. ದೊಂಬಿ ನಡೆಯಬೇಕು ಆಗ ಮಾತ್ರ ಬಗ್ಗಿಸಬಹುದು ಎಂದು ಹೇಳುತ್ತಾನೆ. ಪ್ರಜಾಪ್ರಭುತ್ವ ವಿರೋಧಿಯಾಗಿ ಭಯೋತ್ಪಾದನೆ ನಡೆಸಬೇಕು ಎಂದು ಎಂದು ಹೇಳುವವನು ಕಾಂಗ್ರೆಸ್ ಪಕ್ಷ ಕಾರ್ಪೋರೇಟರ್. ಈವರೆಗೂ ಪಕ್ಷ ಅವನನ್ನ ಕಿತ್ತು ಹಾಕಿಲ್ಲ. ಫತ್ವಾ ಹೊರಡಿಸಿಲ್ಲ, ಮುಸ್ಲಿಂ ಸಂಘಟನೆಯೂ ಅದನ್ನ ತಪ್ಪು ಅಂತ ಹೇಳಿಲ್ಲ. ಸಂವಿಧಾನ ಬಾಹಿರವಾಗಿ ನಡೆದುಕೊಳ್ಳಬೇಕೆಂದು ಸಂಚು ನಡೆಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.
ಕೋಲ್ಕತ್ತಾ: ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆ ಮುಂದುವರಿದಿದೆ. ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, ಇಂದು ಬೆಳಗ್ಗೆ 12 ಮಂದಿ ಸೇರಿ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರದಿಂದಾಗಿ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್‌ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಅನ್ಯಾಯದ ವರ್ತನೆಯಲ್ಲಿ ತೊಡಗಬೇಡಿ: ಪ್ರತಿಭಟನಾಕಾರರಿಗೆ ಮಮತಾ ಬ್ಯಾನರ್ಜಿ ಮನವಿ
ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಯಿತು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಯಿತು. ಇದನ್ನೂ ಓದಿ: ಬಂಗಾಳದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ – ಘರ್ಷಣೆಯಲ್ಲಿ ಮೂವರು ಸಾವು
ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದು, ಮತ್ತೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿಗಾಗಿ ಮನವಿ ಮಾಡಿದರು ಮತ್ತು ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತದ ಗಡಿಯಲ್ಲಿ ಗುಂಡಿನ ಚಕಮಕಿ – ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಓರ್ವ ಯೋಧ ಹುತಾತ್ಮ
ಕೋಲ್ಕತ್ತಾ: ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘರ್ಷಣೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ರಾಜ್ಯವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಘೋಷಿಸಿದ್ದಾರೆ.
ನಾವು ವಕ್ಫ್ ವಿಷಯದ ಬಗ್ಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹೀಗಿದ್ದಾಗ ಗಲಭೆ ಯಾಕೆ ಎಂದು ಎಕ್ಸ್‌ನಲ್ಲಿ ಬ್ಯಾನರ್ಜಿ ಪೋಸ್ಟ್ ಹಾಕಿದ್ದಾರೆ.
ರಾಜ್ಯದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಅಲ್ಪಸಂಖ್ಯಾತರ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಶಾಂತಿ ಕಾಪಾಡುವಂತೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಭಟನೆಗಳ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವ ಯಾವುದೇ ಪ್ರಯತ್ನಗಳನ್ನು ರಾಜ್ಯ ಪೊಲೀಸರು ಸಹಿಸುವುದಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.