Tag: Waqf Dispute

  • ಯತ್ನಾಳ್‌ ಸಹ ಜನಪ್ರಿಯ ನಾಯಕರು – ಪ್ರತಾಪ್‌ ಸಿಂಹ

    ಯತ್ನಾಳ್‌ ಸಹ ಜನಪ್ರಿಯ ನಾಯಕರು – ಪ್ರತಾಪ್‌ ಸಿಂಹ

    – ಬೆಳಗಾವಿಯಲ್ಲಿ ಯತ್ನಾಳ್‌ & ಟೀಮ್ ವಕ್ಫ್‌ ವಿರುದ್ಧ ಜನಜಾಗೃತಿ ಸಮಾವೇಶ

    ಬೆಳಗಾವಿ: ಬೀದರ್‌ ಬಳಿಕ ಬೆಳಗಾವಿಯಲ್ಲೂ (Belagavi) ರೆಬಲ್‌ ನಾಯಕರು ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು, ವಕ್ಫ್‌ ಬೋರ್ಡ್‌ ವಿರುದ್ಧ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದಾರೆ.

    ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ರೆಬಲ್‌ ನಾಯಕರ ಬೃಹತ್ ಹೋರಾಟ ಹಮ್ಮಿಕೊಂಡಿದ್ದು ವಕ್ಫ್‌ ಬೋರ್ಡ್ (Waqf Board) ಭೂಕಬಳಿಕೆ ವಿರುದ್ಧ ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ Basanagouda Patil Yatnal), ಮಾಜಿ ಸಚಿವ ರಮೇಶ್ ನೇತೃತ್ವದಲ್ಲಿ ನಡೆಯುತ್ತಿರುವ ವಕ್ಫ್‌ ವಿರುದ್ಧ ಹೋರಾಟ ನಡೆಯುತ್ತಿದೆ. ಇದನ್ನೂ ಓದಿ: Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    ಬೀದರ್ ಬಳಿಕ ಬೆಳಗಾವಿಯಲ್ಲೂ ವಕ್ಫ್‌ ಬೋರ್ಡ್ ವಿರುದ್ಧ ಹೋರಾಟಕ್ಕೆ ರೆಬಲ್ಸ್ ನಾಯಕರು ಅಣಿಯಾಗಿದ್ದು ಬೆಳಗಾವಿ ಚೆನ್ನಮ್ಮ ವೃತ್ತದಿಂದ ಹೋರಾಟ ಶುರುವಾಗಲಿದೆ. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಬೆಳಿಗ್ಗೆ 10.30ಕ್ಕೆ ಸಮಾವೇಶದ ಸ್ಥಳ ಗಾಂಧಿ ಭವನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha), ಜಿಎಂ ಸಿದ್ದೇಶ್ವರ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿ.ಪಿ ಹರೀಶ, ಎನ್.ಆರ್ ಸಂತೋಷ್‌ ಸೇರಿ ಹಲವರು ಸಾಥ್ ಕೊಡಲಿದ್ದಾರೆ. ಇದನ್ನೂ ಓದಿ: Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಯತ್ನಾಳ್‌ ವಕ್ಫ್‌ ಬಗ್ಗೆ ಜಾಗೃತಿ ಮೂಡಿಸಲು ಹೋರಾಟ ಮಾಡುತ್ತಿದ್ದಾರೆ. ವಿಜಯೇಂದ್ರ ಅವರು ನಮ್ಮ ರಾಜಾಧ್ಯಕ್ಷರು, ಅವರು ನ.20ರಂದು ಸುದ್ದಿಗೋಷ್ಠಿ ಮಾಡಲು ಕರೆಕೊಟ್ಟಿದ್ದರು. ಅದರಂತೆ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ಮಾಡಿದ್ದೇವೆ. ನ.22ರಂದು ಎಲ್ಲಾ ಜಿಲ್ಲೆಯ ಡಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಕರೆಕೊಟ್ಟಿದ್ದರು, ಅದೇ ರೀತಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದೇವೆ. ಅದೇ ರೀತಿ ಯತ್ನಾಲ್‌ ಅವರು ಬಿಜಾಪುರದಿಂದ ಹೋರಾಟ ಆರಂಭ ಮಾಡಿದ್ದರು. ಆ ಹೋರಾಟದಲ್ಲಿ ಕೇಂದ್ರ ಸಚಿವರು ಭಾಗಿಯಾದ್ರು, ಹೀಗಾಗಿ ಈ ಹೋರಾಟದಲ್ಲಿ ಅಪಸ್ವರ, ಬಣ ಹೋರಾಟ ಎಂಬುದು ಅಪ್ರಸುತ್ತ ಅಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ಯತ್ನಾಳ್‌ ಸಹ ಜನಪ್ರಿಯ ನಾಯಕರು:
    ನಿನ್ನೆ ಸಹ ನಾನು ಹೇಳಿದ್ದೆ ಅಪ್ರಸ್ತುತ ವ್ಯಕ್ತಿಗಳು, ಜನರಿಂದ ತಿರಸ್ಕೃತವಾಗಿದ್ದವರು, ಮೂಲೆ ಗುಂಪಾಗಿದ್ದವರ ಬಗ್ಗೆ ಉತ್ತರ ಕೊಡುವ ಅಗತ್ಯವಿಲ್ಲ. ಹೋರಾಟದ ದಿಕ್ಕು ತಪ್ಪಿಸುವರ ಬಗ್ಗೆ ಮಾತನಾಡುದಿಲ್ಲ. ಇಡೀ ಬಿಜೆಪಿ ವಕ್ಫ್‌ ವಿರುದ್ಧ ವಿಜಯೇಂದ್ರ-ಯತ್ನಾಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕಾಗಿ ಯಾಕೆ ಅಪಸ್ವರ ಬರುತ್ತಿದೆ ನನಗೆ ಗೋತ್ತಿಲ್ಲ. ಯತ್ನಾಳ್‌ ಕೂಡ ಜನಪ್ರಿಯ ನಾಯರಾಗಿದ್ದಾರೆ. ಅವರ ನೇತೃತ್ವದಲ್ಲಿ ಹೋರಾಟ ಆರಂಭವಾಗಿದೆ. ವಕ್ಫ್‌ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.

  • Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!

    Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವಕ್ಫ್‌ ಆಸ್ತಿ ವಿವಾದ ಜೋರಾಗುತ್ತಿದೆ. ರೈತರ ಜಮೀನು, ಹಿಂದೂ ದೇಗುಲದ ಬಳಿಕ ಸರ್ಕಾರಿ ಶಾಲೆ ಜಾಗ (Government School Land) ಮೇಲೂ ವಕ್ಫ್‌ ಬೋರ್ಡ್‌ ಕಣ್ಣಿಟ್ಟಂತೆ ಕಾಣುತ್ತಿದೆ.

    ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ (Waqf Property) ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ ಶಾಲೆ ಇದೆ. ಈ ಶಾಲೆಯ ಜಾಗದ ಪಹಣಿ ಪತ್ರದಲ್ಲಿ ವಕ್ಫ್‌ ಆಸ್ತಿ ನಮೂದಾಗಿದೆ. ಸರ್ಕಾರಿ ಶಾಲೆ ಜಾಗ ಕಬಳಿಕೆಗೆ ಮುಂದಾದ ವಕ್ಫ್ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ಕಿಡಿ ಕಾರಿ ರಾಜ್ಯದ ವಕ್ಫ್ ಮಂಡಳಿ ವಜಾಗೊಳಿಸಲು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

    ಚಿಕ್ಕಮ ದೇವಿ ದೇವಸ್ಥಾನದ ಮೇಲೂ ವಕ್ಫ್‌ ಕಣ್ಣು:
    ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಎಂಬ ಗ್ರಾಮದಲ್ಲಿ 6 ಗುಂಟೆ ವ್ಯಾಪ್ತಿಯಲ್ಲಿ ಚಿಕ್ಕಮ್ಮ ದೇವಿ ಎಂಬ ದೇವಸ್ಥಾನ ಇದೆ. ಹಲವು ವರ್ಷಗಳ ಹಿಂದೆಯೇ ಈ ದೇವಸ್ಥಾನ ಕಟ್ಟಿಸಿ ಈ ಗ್ರಾಮದ ಜನರು ಚಿಕ್ಕಮ್ಮ ದೇವಿಯನ್ನು ಪೂಜಿಸುತ್ತಾ ಬರುತ್ತಿದ್ದಾರೆ. 2023 ಜುಲೈ 17ರ ವರೆಗೆ ಈ‌ ದೇವಸ್ಥಾನದ 6 ಗುಂಟೆ ಜಾಗದ ಆರ್‌ಟಿಸಿಯಲ್ಲಿ ಬಂಜರು ಎಂದು ಉಲ್ಲೇಖವಾಗಿದೆ, ಅಂದರೆ ಇದು ಸರ್ಕಾರಿ ಜಮೀನು ಎಂದರ್ಥ. ಇನ್ನೊಂದೆಡೆ ಸಾಗುವಳಿ ಕಾಲಂನಲ್ಲಿ ಚಿಕ್ಕಮ್ಮನ ದೇವಸ್ಥಾನ ಎಂದು ಹೆಸರಿತ್ತು. ಆದರೆ ಇದೀಗ ಈ ದೇವಸ್ಥಾನ ಹಾಗೂ ಜಾಗವನ್ನು ವಕ್ಫ್ ಆಸ್ತಿ ಎಂದು ಮಾಡಲಾಗಿದೆ.

    2023 ಜುಲೈ 17ರಲ್ಲಿ ಕೋರ್ಟ್ ಆದೇಶ ಎಂದು ಪಾಂಡವಪುರ ಉಪವಿಭಾಗ ಅಧಿಕಾರಿ ದೇವಸ್ಥಾನದ ಜಾಗವನ್ನು ವಕ್ಛ್ ಆಸ್ತಿ ಎಂದು ಮ್ಯುಟೇಶನ್ ಮಾಡಿದ್ದಾರೆ. ಇದೀಗ ಈ ಗ್ರಾಮಸ್ಥರು ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿಯ ವಿವಾದದ ನಂತರ ದೇವಸ್ಥಾನದ ಸರ್ವೇ ನಂಬರ್‌ನಲ್ಲಿ ಆರ್‌ಟಿಸಿ ನೋಡಿದಾಗ ಇದು ಬೆಳಕಿಗೆ ಬಂದಿದೆ. ಗ್ರಾಮಸ್ಥರ ಗಮನಕ್ಕೆ ಬಾರದೇ ಹಿಂದೂ ದೇವಸ್ಥಾನವನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿರೋದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನ ಹಳೆಯ ಕ್ರಸ್ಟ್‌ಗೇಟ್‌ ಮಾರಾಟ ಮಾಡಲು ಹುನ್ನಾರ

    ಹಿಂದೂ ದೇವಸ್ಥಾನವನ್ನು ವಕ್ಫ್ ಆಸ್ತಿ ಎಂದು ಮಾಡುವ ಮೂಲಕ ಅಧಿಕಾರಿಗಳು ಬಹುದೊಡ್ಡ ವಂಚನೆ ಮಾಡಿದ್ದಾರೆ. ಇದೀಗ ಮಂಡ್ಯ ಜಿಲ್ಲಾಡಳಿತ ಇದನ್ನು ಹೇಗೆ ಸರಿಪಡಿಸುತ್ತೆ? ಜನರ ಆಕ್ರೋಶವನ್ನು ಹೇಗೆ ಕಡಿಮೆ ಮಾಡುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.