Tag: Waqf Land

  • ನನ್ನ ವಿರುದ್ಧದ ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ, ಇಲ್ಲದಿದ್ರೆ ನೀವು ಕೊಡಿ – ಅನುರಾಗ್ ಠಾಕೂರ್‌ಗೆ ಖರ್ಗೆ ಸವಾಲು

    ನನ್ನ ವಿರುದ್ಧದ ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ, ಇಲ್ಲದಿದ್ರೆ ನೀವು ಕೊಡಿ – ಅನುರಾಗ್ ಠಾಕೂರ್‌ಗೆ ಖರ್ಗೆ ಸವಾಲು

    – ಪುಷ್ಪಾ ಸ್ಟೈಲ್‌ನಲ್ಲಿ ತಗ್ಗೋದೇ ಇಲ್ಲ ಎಂದ ಖರ್ಗೆ
    – ಶಿಸ್ತು ಸಮಿತಿಯ ಪರಿಶೀಲನೆಗೆ ನೀಡಿದ ಧನಕರ್

    ನವದೆಹಲಿ: ವಕ್ಫ್ ಬಿಲ್ ಮಂಡನೆಗೆ ಮುನ್ನವೇ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗರಂ ಆದ ಪ್ರಸಂಗ ನಡೆಯಿತು. ವಕ್ಫ್ ಭೂಮಿ ಕಬ್ಜಾ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಅನುರಾಗ್ ಠಾಕೂರ್ (Anurag Thakur) ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ರು. ಇಂತಹ ರಾಜಕೀಯ ದಾಳಿಗಳಿಗೆ ನಾನು ಬೆದರುವ ಮಾತೇ ಇಲ್ಲ ಎಂದು ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಬ್ಬರಿಸಿದ್ರು.

    ಅನುರಾಗ್ ಠಾಕೂರ್ ಅರೋಪಕ್ಕೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ಆಸ್ತಿ (Waqf  Property) ಕಬಳಿಕೆ ಆರೋಪಕ್ಕೆ ತಿರುಗೇಟು ನೀಡಿದರು. ನನ್ನ ಜೀವನ ತೆರದ ಪುಸ್ತಕ, ಜೀವನದಲ್ಲಿ ಕಷ್ಟ ಮತ್ತು ಹೋರಾಟವಿದೆ. ಸಾರ್ವಜನಿಕ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. 60 ವರ್ಷ ರಾಜಕೀಯದಲ್ಲಿ ಇದನ್ನು ಬಯಸಿರಲಿಲ್ಲ. ಇಂತಹ ಆಧಾರ ರಹಿತ ಆರೋಪ ನಿರೀಕ್ಷಿಸರಲಿಲ್ಲ. ಅನುರಾಗ್ ಠಾಕೂರ್ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ. ಅದನ್ನು ನಮ್ಮ ಸಂಸದರು ವಿರೋಧಿಸಿದ ಬಳಿಕ ಈ ಹೇಳಿಕೆ ವಾಪಸ್ ಪಡೆದುಕೊಂಡಿದ್ದಾರೆ. ಆದರೆ ಡ್ಯಾಮೇಜ್ ಆಗಿ ಹೋಗಿದೆ, ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ನನ್ನ ಚಾರಿತ್ರ‍್ಯ ಮತ್ತು ಗೌರವಕ್ಕೆ ಧಕ್ಕೆಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ವಕ್ಫ್‌ ಮಸೂದೆ | ದಾನದ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್‌ಡಿಡಿ

    ದೇವೇಗೌಡರು ಇದನ್ನು ಕೇಳಿಸಿಕೊಳ್ಳಬೇಕು. ಅವರ 50 ವರ್ಷದಿಂದ ನೋಡಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷನಾಗಿ ನಾನು ಒತ್ತಾಯ ಪೂರ್ವಕವಾಗಿ ಎದ್ದು ನಿಲ್ಲಬೇಕಿದೆ. ಅನುರಾಗ್ ಠಾಕೂರ್ ಹೇಳಿಕೆಯನ್ನು ವಿರೋಧಿಸಬೇಕಿದೆ, ಠಾಕೂರ್ ಈ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದಿದ್ದರೇ ಅವರು ರಾಜೀನಾಮೆ ನೀಡಬೇಕು. ಅವರು ಸಾಬೀತರಾದರೇ ನಾನು ರಾಜೀನಾಮೆ ನೀಡುತ್ತೇನೆ. ನಾನು ಇಂತಹ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಸಿದ್ರು.  ಇದನ್ನೂ ಓದಿ: 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

    ನಾನು ಕಾರ್ಮಿಕನ ಮಗ, ಕಾರ್ಮಿಕ ನಾಯಕ, ಅಲ್ಲಿಂದ ಕಾಂಗ್ರೆಸ್ ಅಧ್ಯಕ್ಷನಾಗಿದ್ದೇನೆ. ದೇವೇಗೌಡರಿಗೆ ಎಲ್ಲವೂ ಗೊತ್ತಿದೆ. ವಿಧಾನಸಭೆಯಲ್ಲಿ ಯಾರು ನನಗೆ ಬೆರಳು ಎತ್ತಿ ಮಾಡನಾಡಿಲ್ಲ. ಈ ಬಿಜೆಪಿ ನಾಯಕರು ಬೆದರಿಕೆ ಬಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಒಡೆದು ಹೊಗ್ತಿನಿ, ಬಗ್ಗುವುದಿಲ್ಲ, ನಾನು ಒಂದಿಂಚು ಭೂಮಿ ಕಬಳಿಸಿಲ್ಲ, ಅನುರಾಗ್ ಠಾಕೂರ್ ಕ್ಷಮೆ ಕೇಳಲೇಬೇಕು ಎಂದು ಒತ್ತಾಯಿಸಿದರು. ಬಳಿಕ ಈ ಚರ್ಚೆಯನ್ನು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್‌ ಶಿಸ್ತು ಸಮಿತಿಯ ಪರಿಶೀಲನೆಗೆ ನೀಡಿದರು.  ಇದನ್ನೂ ಓದಿ: ರಾಹುಲ್ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಂಥನ – ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

  • Waqf Land Row | ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌

    Waqf Land Row | ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌

    – ನೋಟಿಸ್ ಹಿಂಪಡೆಯುವಂತೆ ಸಂಸದ ರಮೇಶ್‌ ಜಿಗಜಿಣಗಿ ಆಗ್ರಹ

    ವಿಜಯಪುರ: ಸ್ಮಾರಕಗಳೂ ಸೇರಿದಂತೆ ವಿಜಯಪುರ (Vijayapura) ಜಿಲ್ಲೆಯ 43 ಪ್ರವಾಸಿ ತಾಣಗಳು (Tourist Place) ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್‌ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್‌ ಮಂಡಳಿ (Waqf Board) ನೋಟಿಸ್ ನೀಡಿತ್ತು. ಇದನ್ನೂ ಓದಿ: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

    ಕಳೆದ ಒಂದು ದಿನದ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ವಿಜಯಪುರದಲ್ಲಿ ಪ್ರವಾಸಿ ತಾಣಗಳಿಗೆ ನೋಟಿಸ್‌ ನೀಡಿರುವುದು ಬೆಳಕಿಗೆ ಬಂದಿದೆ.

    ವಿಜಯಪುರದ 43 ಪ್ರವಾಸಿ ತಾಣಗಳಿಗೆ ವಕ್ಫ್‌ ನೋಟಿಸ್‌ ನೀಡಿದ್ದು, ಇದಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ತೇಜಸ್ವಿ ಸೂರ್ಯ

    ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ನೀಡಿರುವ ವಕ್ಫ್‌ ನೋಟಿಸ್‌ಗಳನ್ನು ಹಿಂಪಡೆಯುವಂತೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

  • Haveri| ವಕ್ಫ್ ಆಸ್ತಿ ಗಲಾಟೆ- 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

    Haveri| ವಕ್ಫ್ ಆಸ್ತಿ ಗಲಾಟೆ- 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

    ಹಾವೇರಿ: ರಾಜ್ಯಾದ್ಯಂತ ಈಗ ವಕ್ಫ್ ಆಸ್ತಿಗಳ (Waqf Property) ಒತ್ತುವರಿ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿವೆ. ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕು ಕಡಕೋಳ ಗ್ರಾಮದಲ್ಲಿ ವಕ್ಫ್ ಆಸ್ತಿ ಗಲಾಟೆ ನಡೆದಿದ್ದು, 28ಕ್ಕೂ ಅಧಿಕ ಮಂದಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಮನೆಗಳ ಖಾತಾ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗುತ್ತಿದೆ ಎಂಬ ಆತಂಕದಿಂದ ಉದ್ರಿಕ್ತರು ಗಲಾಟೆ ನಡೆಸಿದ್ದರು. ಉದ್ರಿಕ್ತ ಗುಂಪು ಇನ್ನೊಂದು ಗುಂಪಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ, ಹಲ್ಲೆ ನಡೆಸಿತ್ತು. ಗಲಾಟೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸವಣೂರು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಚನ್ನಪಟ್ಟಣ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತೆ: ಪೊನ್ನಣ್ಣ

    ಮುಸ್ಲಿಂ ಮುಖಂಡ ಮಹಮದ್ ರಫಿ ಎಂಬುವರ ಮನೆ ಮೇಲೆ ಉದ್ರಿಕ್ತ ಗುಂಪಿನಿಂದ ದಾಳಿ ನಡೆದಿದೆ. ಕಲ್ಲು ತೂರಾಟ ನಡೆಸಿ ಮನೆ ಮುಂದಿರೋ ಬೈಕ್ ಒಡೆದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಕೋಳ ಗ್ರಾಮಕ್ಕೆ ಡಿಸಿ ವಿಜಯ್ ಮಹಾಂತೇಶ್, ಎಸ್‌ಪಿ ಅಂಶು ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಹಿತಕರ ಘಟನೆಗಳಾಗದಂತೆ ಗ್ರಾಮಸ್ಥರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಪರ್ವತಕ್ಕೆ ಅಪ್ಪಳಿಸಿದ ಗ್ಲೈಡರ್ – ಪ್ರವಾಸಿಗ ದುರ್ಮರಣ

    ಗ್ರಾಮದಲ್ಲಿ 100ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಐಜಿಪಿ ರಮೇಶ್ ಬಾನೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 28ಕ್ಕೂ ಅಧಿಕ ಜನರನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪೊಲೀಸ್ ಬಿಗಿಭದ್ರತೆ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ:  ಮುಸ್ಲಿಮರು ಮತಾಂತರ ಬಿಟ್ಟು ಈಗ ಜಮೀನಾಂತರ ಮಾಡ್ತಿದ್ದಾರೆ: ಆರ್.ಅಶೋಕ್

  • ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    – ನಾವು ಅನ್ನದಾತರ ಆಸ್ತಿ ಮುಟ್ಟೋಕೆ ಸಾಧ್ಯನಾ?

    ಹುಬ್ಬಳ್ಳಿ: ಮುಜರಾಯಿ ವಕ್ಫ್ ಎರಡೂ ಒಂದೇ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ. ಅಲ್ಲಾ ನಮ್ಮ ನಂಬಿಕೆ, ಜೋಶಿ ಏನಾದರೂ ಹೇಳಲಿ. ನಾನು ಮೊದಲು ಹಿಂದೂಸ್ತಾನಿ. ಆಮೇಲೆ ಮುಸ್ಲಿಂ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ. ಬೇರೆಯವರ ಆಸ್ತಿ ತೆಗೆದುಕೊಳ್ಳಲು ನಾವು ಯಾರು? ರೈತರು ಅನ್ನದಾತರು, ನಾವು ಅವರ ಆಸ್ತಿ ಮುಟ್ಟೋದಕ್ಕೆ ಸಾಧ್ಯನಾ? ವಕ್ಫ್ ಆಸ್ತಿ 1.12 ಲಕ್ಷ ಎಕರೆ ಇದೆ. ನಮ್ಮ ಬಳಿ ದಾಖಲೆ ಇದೆ. ಮುಜರಾಯಿ ವಕ್ಫ್ ಎರಡೂ ಒಂದೇ ಆಗಿದೆ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ ಎಂದು ಹೇಳಿದರು. ಇದನ್ನೂ ಓದಿ: ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು

    ಬಿಜೆಪಿಯವರು (BJP) ಈ ತರಹ ರಾಜಕಾರಣ ಮಾಡಬಾರದು. ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ ಅವರು ನಾಲಾಯಕ್. ನಾವು ಜಾತಿ ನೋಡಿದ್ರೆ ನಿರ್ನಾಮ ಆಗುತ್ತೇವೆ. ಬಿಜೆಪಿಯವರ ಕಾಲದಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾನು ಅದಕ್ಕೆ ದಾಖಲೆ ಕೊಡುತ್ತೇನೆ. ಇದಕ್ಕೆ ಮಾನ್ಯ ಯತ್ನಾಳ್ ಏನು ಹೇಳುತ್ತಾರೆ? ಮುಜರಾಯಿ ಇಲಾಖೆ ಆಸ್ತಿ ಕೂಡಾ ಒತ್ತುವರಿ ಆಗಿದೆ. ಅದನ್ನು ಉಳಿಸೋಣ ನಡೀರಿ. ನನಗೆ ಹಿಂದೂ ಬ್ರದರ್ಸ್ ಮತ ಕೊಟ್ಟಿದ್ದಾರೆ. ನನಗೆ ಎಲ್ಲ ಸಮಾಜ ಒಂದೇ. ಎಲ್ಲ ಸಮಾಜವನ್ನು ಜೊತೆಗೆ ತೆಗೆದುಕೊಂಡು ಹೋಗುವವರೇ ರಾಜಕಾರಣಿ ಎಂದರು. ಇದನ್ನೂ ಓದಿ: ತುಮಕೂರು| ಅಂತಾರಾಜ್ಯ ಕಳ್ಳನ ಬಂಧನ – 42 ಬೈಕ್ ಜಪ್ತಿ
    ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಇಲ್ಲವೇ ಇಲ್ಲ. ಇರೋದು ಕೇವಲ 12 ಎಕರೆ. ಅಲ್ಲಿ 11 ಎಕರೆ ಸ್ಮಶಾನ ಇದೆ. ನಾವು ಒಂದಿಂಚೂ ಜಾಗ ತೆಗೆದುಕೊಂಡಿಲ್ಲ. ನಮಗೆ 1.12 ಲಕ್ಷ ಎಕರೆ ದಾನ ಮಾಡಿದ್ದಾರೆ. ನಾನು 11 ಜಿಲ್ಲೆಯಲ್ಲಿ ವಕ್ಫ್ ಅದಾಲತ್ ಮಾಡಿದ್ದೇನೆ. ಅಧಿಕಾರಿಗಳ ಸಭೆ ಮಾಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಸಭೆ ಮಾಡಿದಾಗ ಯತ್ನಾಳ್‌ಗೆ ಆಹ್ವಾನ ಕೊಟ್ಟಿದ್ದೆವು. ರೈತರಿಗೆ ಅನ್ಯಾಯ ಆದ್ರೆ ಯತ್ನಾಳ್ ಯಾಕೆ ಸಭೆಗೆ ಬರಲಿಲ್ಲ? ರೈತರ ಆಸ್ತಿ ತೆಗೆದುಕೊಳ್ಳಲು ಸಾಧ್ಯನಾ? ಅಧಿಕಾರಿಗಳು ಅಷ್ಟು ಸುಲಭವಾಗಿ ಮಾಡ್ತಾರಾ? ರೈತರ ಆಸ್ತಿಯನ್ನು ಮುಟ್ಟೋಕೆ ಆಗಿಲ್ಲ. ಇದೊಂದು ರಾಜಕೀಯ ಪಿತೂರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರಿನ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲೂ ರಾಜಕೀಯ – ಜಯನಗರಕ್ಕಿಲ್ಲ ಫಂಡ್; ಆಕ್ರೋಶ

  • ಜಮೀನುಗಳು ವಕ್ಫ್ ಆಸ್ತಿಗೆ ಜೋಡಣೆ – ಧಾರವಾಡದಲ್ಲೂ ರೈತರ ಪರದಾಟ

    ಜಮೀನುಗಳು ವಕ್ಫ್ ಆಸ್ತಿಗೆ ಜೋಡಣೆ – ಧಾರವಾಡದಲ್ಲೂ ರೈತರ ಪರದಾಟ

    ಧಾರವಾಡ: ಪಿತ್ರಾರ್ಜಿತವಾಗಿ ಉಳುಮೆ ಮಾಡುತ್ತ ಬಂದಿರುವ ರೈತರ ಜಮೀನುಗಳು ಇದೀಗ ವಕ್ಫ್ ಆಸ್ತಿಗೆ (Waqf Land) ಒಳಪಡುತ್ತಿವೆ. ಧಾರವಾಡ (Dharawada) ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಅನೇಕ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟಿರುವುದಾಗಿ ಪಹಣಿ ಪತ್ರದಲ್ಲಿ ನಮೂದಾಗಿದ್ದು, ಇದರ ತಿದ್ದುಪಡಿಗಾಗಿ ರೈತರು ಪರದಾಡುತ್ತಿದ್ದಾರೆ. ಇತ್ತೀಚೆಗೆ ವಿಜಯಪುರದಲ್ಲಿ ವಕ್ಫ್‌ ಮಂಡಳಿ ರೈತರಿಗೆ ನೋಟಿಸ್‌ ನೀಡಿದ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

    ತಮ್ಮ ಜಮೀನನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಈ ರೈತರೆಲ್ಲ ಉಪ್ಪಿನ ಬೆಟಗೇರಿ ಗ್ರಾಮದವರು. 3 ಎಕರೆ, 5 ಎಕರೆ ಹಾಗೂ 20 ಎಕರೆ ಹೊಲಗಳ ಪಹಣಿ ಪತ್ರದಲ್ಲಿ 2021, 2022 ಹಾಗೂ 2023 ರಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟಿವೆ ಎಂದು ನಮೂದಾಗಿದೆ. ಇದೇ ಪಹಣಿ ಪತ್ರದಲ್ಲಿ 2018, 2019ರಲ್ಲಿ ತೆಗೆದು ನೋಡಿದಾಗ ಅದರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿಲ್ಲ. 2021, 2022ರಲ್ಲಿ ಈ ರೀತಿ ಪಹಣಿ ಪತ್ರದ ಋಣಗಳು ಕಾಲಂನಲ್ಲಿ ವಕ್ಫ್ ಆಸ್ತಿಗೆ ಜಮೀನು ಒಳಪಟ್ಟಿದೆ ಎಂದು ನಮೂದಾಗಿದೆ. ಇದನ್ನೂ ಓದಿ: ಇದು ರಾಜ್ಯದ ಭವಿಷ್ಯ ರೂಪಿಸುವ ಉಪಚುನಾವಣೆ, ನಿಖಿಲ್ ಗೆಲ್ಲಿಸಿ ಬದಲಾವಣೆಗೆ ಮುಂದಾಗಬೇಕು: ಯದುವೀರ್ ಒಡೆಯರ್

    ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ (Betageri) ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ಕುಟುಂಬಕ್ಕೆ ಸೇರಿದ ಜಮೀನುಗಳು ಪಿತ್ರಾರ್ಜಿತವಾಗಿದ್ದು, ಅವುಗಳನ್ನು ಈ ರೈತರು ಯಾರಿಂದಲೂ ದಾನವಾಗಿ ಪಡೆದಿಲ್ಲ ಆದರೂ ಇವರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಗೆ ಈ ಜಮೀನು ಒಳಪಟ್ಟಿದೆ ಎಂದು ನಮೂದಾಗಿದ್ದು, ಅದನ್ನು ತೆಗೆದು ಹಾಕಲು ರೈತರು ವಕ್ಫ್ ಕಚೇರಿ, ತಹಶೀಲ್ದಾರ್ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದನೆ ನೀಡಲಿಲ್ಲ. ಇದನ್ನೂ ಓದಿ: ಸಂಡೂರು| ಅಭ್ಯರ್ಥಿ ಪರ ಪ್ರಚಾರದಿಂದ ಕಾಂಗ್ರೆಸ್‌ ಶಾಸಕರು ದೂರ ದೂರ

    ಮರಬಸಪ್ಪ ಮಸೂತಿ ಅವರಿಗೆ ಸೇರಿದ 3 ಎಕರೆ 13 ಗುಂಟೆ, ಮಲ್ಲಿಕಾರ್ಜುನ ಹುಟಗಿ ಅವರಿಗೆ ಸೇರಿದ 5 ಎಕರೆ 37 ಗುಂಟೆ ಹಾಗೂ ಜವಳಗಿ ಅವರ ಕುಟುಂಬಕ್ಕೆ ಸೇರಿದ ಒಟ್ಟು 20 ಎಕರೆ ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿದೆ. ಪಿತ್ರಾರ್ಜಿತವಾಗಿ ಸಾಗುವಳಿ ಮಾಡುತ್ತ ಬಂದಿರುವ ಆಸ್ತಿ ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿರುವುದರಿಂದ ರೈತರಿಗೆ ಬರಸಿಡಿಲು ಬಡಿದಂತಾಗಿದ್ದು, ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಈಗ ಹೋರಾಟ ಮಾಡುವಂತಾಗಿದೆ.  ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಅಬ್ಬರದ ಪ್ರಚಾರ – 10,000 ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದ ಭರತ್ ಬೊಮ್ಮಾಯಿ

  • ವಕ್ಫ್‌ ಜಾಗದಲ್ಲಿ ಹೊಸ ಸಂಸತ್‌ ಭವನ ನಿರ್ಮಾಣ: ಬದ್ರುದ್ದೀನ್ ಅಜ್ಮಲ್ ವಿವಾದ

    ವಕ್ಫ್‌ ಜಾಗದಲ್ಲಿ ಹೊಸ ಸಂಸತ್‌ ಭವನ ನಿರ್ಮಾಣ: ಬದ್ರುದ್ದೀನ್ ಅಜ್ಮಲ್ ವಿವಾದ

    ಗುವಾಹಟಿ: ವಕ್ಫ್‌ ಆಸ್ತಿಯ (Waqf Land) ಜಾಗದಲ್ಲಿ ಹೊಸ ಸಂಸತ್ತಿನ (Parliament) ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಹೇಳುವ ಮೂಲಕ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಸತ್‌ ಕಟ್ಟಡ, ರಾಷ್ಟ್ರ ರಾಜಧಾನಿಯ ವಸಂತ ವಿಹಾರ್ ಸುತ್ತಮುತ್ತ ವಿಮಾನ ನಿಲ್ದಾಣದವರೆಗಿನ (Airport) ಪ್ರದೇಶ ವಕ್ಫ್‌ ಆಸ್ತಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಇಸ್ರೇಲ್‌ ರಾಯಭಾರಿ ಭೇಟಿ

     

    ಅನುಮತಿ ಇಲ್ಲದೆ ವಕ್ಫ್ ಭೂಮಿಯನ್ನು ಬಳಸುವುದು ಸರಿಯಲ್ಲ. ವಕ್ಫ್‌ ಬೋರ್ಡ್‌ ಸಮಸ್ಯೆ ಇತ್ಯರ್ಥವಾದ ಕೂಡಲೇ ತಮ್ಮ ಸಚಿವಾಲಯದ ಜಾಗವನ್ನು ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದರು.

    15 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಿದ ಅಜ್ಮಲ್ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ನಾನು 15 ವರ್ಷಗಳ ಕಾಲ ಸಂಸತ್ತಿನಲ್ಲಿದ್ದೆ ಮತ್ತು ವಕ್ಫ್ ಭೂಮಿಯಲ್ಲಿ ಸಂಸತ್ತು ನಿರ್ಮಿಸಲಾಗಿದೆ ಎಂಬ ವದಂತಿಗಳಿವೆ. ಅದಕ್ಕಾಗಿಯೇ ನಾನು ಈ ಬಗ್ಗೆ ತನಿಖೆಗೆ ಆಗ್ರಹಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ವಕ್ಫ್‌ ಮಸೂದೆಯನ್ನು ಪ್ರಶ್ನಿಸಲು ಜಮಿಯತ್ ಉಲೇಮಾ-ಎ-ಹಿಂದ್ ಅಸ್ಸಾಂನಲ್ಲಿ ವಕ್ಫ್ ಬೋರ್ಡ್ ಜಮೀನುಗಳ ಸಮೀಕ್ಷೆಯನ್ನು ನಡೆಸಲಿದೆ.ವಕ್ಫ್ ಮಸೂದೆಯ ಮೇಲಿನ ಕಾನೂನು ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದರು.