Tag: Waqf Row

  • ಸಿಎಂ ತವರಿನಲ್ಲೂ ವಕ್ಫ್ ಬೋರ್ಡ್ ಜಾದೂ; 2020 ರಲ್ಲಿ ಹಿಂದೂ ಜಾಗ, 2024 ರಲ್ಲಿ ವಕ್ಫ್‌ ಆಸ್ತಿ!

    ಸಿಎಂ ತವರಿನಲ್ಲೂ ವಕ್ಫ್ ಬೋರ್ಡ್ ಜಾದೂ; 2020 ರಲ್ಲಿ ಹಿಂದೂ ಜಾಗ, 2024 ರಲ್ಲಿ ವಕ್ಫ್‌ ಆಸ್ತಿ!

    ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಸ್ಮಶಾನದ ಜಾಗದ ಮೇಲೆ ವಕ್ಫ್ ಕಣ್ಣು ಬಿದ್ದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ವರುಣಾ ಕ್ಷೇತ್ರ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಸರ್ವೇ ನಂಬರ್ 257ರ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ.

    ಮುಸ್ಲಿಮರ ಖಬ್ರಸ್ಥಾನ ಎಂದು ಇತ್ತೀಚಿನ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಈ ಮೊದಲು ಅಂದರೆ 2019-20 ರ ಪಹಣಿಯಲ್ಲಿ ಕಪನಯ್ಯತೋಪು ಎಂದು ನಮೂದಿಸಲಾಗಿತ್ತು. ಅಲ್ಲದೇ ಹಿಂದೂ ಸಮುದಾಯದ ರುದ್ರಭೂಮಿಯಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಹಿಂದೂ ಸಮುದಾಯದ ಪುರಾತನ ಸಮಾಧಿಗಳು ಇಲ್ಲಿವೆ.

    ಸದರಿ ಜಾಗದ ಈಗಿನ ಪಹಣಿಯಲ್ಲಿ ಸುನ್ನಿವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಕಾವೇರಿ ನದಿ ತೀರದಿಂದ ಕೇವಲ 200 ಮೀಟರ್ ಅಂತರದಲ್ಲಿರುವ ಜಾಗ ಇದ್ದಾಗಿದ್ದು, ರಂಗಸಮುದ್ರ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಘಟಕವೂ ಇದೇ ಸ್ಥಳದಲ್ಲಿದೆ. ಈ ಜಾಗವನ್ನು ಏಕಾಏಕಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ವಕ್ಫ್ ವಿವಾದ; ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    ವಕ್ಫ್ ವಿವಾದ; ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    – ಸಿಎಂ ಸಿದ್ದರಾಮಯ್ಯ, ಜಮೀರ್‌ ವಿರುದ್ಧ ಆಕ್ರೋಶ

    ಉಡುಪಿ: ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗುತ್ತಾ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು.

    ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

    ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂದೆ ಪ್ರತಿಭಟನಾ ಸಭೆ ಆಯೋಜಿಸಿದ್ದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು.

    ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟವಾಯಿತು. ಜಿಲ್ಲಾಧಿಕಾರಿ ಕಚೇರಿಯ ದ್ವಾರಕ್ಕೆ ಬಂದ ಡಿಸಿ ಡಾ.ವಿದ್ಯಾ ಕುಮಾರಿ ಅವರಿಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.

    ಮುಂದಿನ ದಿನಗಳಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಪಹಣಿ ಪರಿಶೀಲನೆ ಅಭಿಯಾನ ನಡೆಸಲಿದ್ದಾರೆ. ತಾಲೂಕು ಕಚೇರಿಗಳಿಗೆ ತೆರಳಿ ಬಿಜೆಪಿ ಕಾರ್ಯಕರ್ತರುಪರಿಶೀಲನೆ ನಡೆಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆ ಹಾಗೂ ಸರ್ಕಾರಕ್ಕೆ ಒತ್ತಡ ಹೇರಲು ತಂತ್ರಗಾರಿಕೆ ರೂಪಿಸಿದ್ದಾರೆ.

  • ನ.7 ರಂದು ಕರ್ನಾಟಕಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಭೇಟಿ

    ನ.7 ರಂದು ಕರ್ನಾಟಕಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಭೇಟಿ

    ನವದೆಹಲಿ: ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್‌ (Jagdambika Pal) ಅವರು ನ.7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

    ಕರ್ನಾಟಕದಲ್ಲಿ ವಕ್ಫ್‌ ವಿವಾದ ಜೋರಾಗಿದೆ. ಇದರ ಬೆನ್ನಲ್ಲೇ ಜಗದಾಂಬಿಕ ಪಾಲ್‌ ಅವರು ಹುಬ್ಬಳ್ಳಿ ಭೇಟಿ ನೀಡುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಪತ್ರ ಬರೆದಿದ್ದರು. ರೈತರ ಅಹವಾಲು ಆಲಿಸಲು, ರೈತರನ್ನು ವಕ್ಫ್ ನಿಯಮಗಳ ತಿದ್ದುಪಡಿಗೆ ಸಾಕ್ಷ್ಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು.

    ಅಂದು ವಕ್ಫ್ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ರೈತರು, ಮಠ, ದೇವಸ್ಥಾನಗಳ ಪ್ರಮುಖರ ಜೊತೆ ಜೆಪಿಸಿ ಅಧ್ಯಕ್ಷ ಪಾಲ್ ಅವರು ಸಭೆ ನಡೆಸಿದ್ದರು.

    ಅತಿಕ್ರಮಣವನ್ನು ತೆರವುಗೊಳಿಸಬೇಕು ಎಂದು ವಿಜಯಪುರ ರೈತರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದಾಗಿನಿಂದ ರಾಜ್ಯದಲ್ಲಿ ವಿವಾದ ಹುಟ್ಟುಕೊಂಡಿದೆ. ಇದೇ ರೀತಿ ಕರ್ನಾಟಕದ ಕೆಲವು ಭಾಗಗಳಲ್ಲಿ ಜಾಗ ತಮ್ಮದೆಂದು ವಕ್ಫ್‌ ಬೋರ್ಡ್‌ ನೋಟಿಸ್‌ ಹೊರಡಿಸಿದೆ. ಇದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

    ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಬೋರ್ಡ್‌ ಹೊರಡಿಸಿದ್ದ ನೋಟಿಸ್‌ ಹಿಂಪಡೆಯಲು ನಿರ್ಧರಿಸಿದೆ.

  • Waqf Row| ಬಿಜೆಪಿ ಅವಧಿಯಲ್ಲಿ ರೈತರಿಗೆ ನೋಟಿಸ್‌ – ಕಾಂಗ್ರೆಸ್‌ ದಾಖಲೆ ಬಿಡುಗಡೆ

    Waqf Row| ಬಿಜೆಪಿ ಅವಧಿಯಲ್ಲಿ ರೈತರಿಗೆ ನೋಟಿಸ್‌ – ಕಾಂಗ್ರೆಸ್‌ ದಾಖಲೆ ಬಿಡುಗಡೆ

    ವಿಜಯಪುರ: ವಕ್ಫ್‌ ವಿಚಾರದಲ್ಲಿ (Waqf Row) ಕಾಂಗ್ರೆಸ್‌ ಈಗ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಸಿಎಂ ಬೊಮ್ಮಾಯಿ (CM Basavaraj Bommai) ಅವಧಿಯಲ್ಲಿ ರೈತರಿಗೆ ನೀಡಿದ್ದ ನೋಟಿಸ್‌ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

    ವಿಜಯಪುರ (Vijayapura) ನಗರದ ಮಹಲ್ ಬಾಗಾಯತ್ ಹಳ್ಳಿಯ 10 ರೈತರಿಗೆ 2022 ರ ಸೆಪ್ಟೆಂಬರ್‌ ಮತ್ತು ನವೆಂಬರ್‌ ತಿಂಗಳಿನಲ್ಲಿ ನೀಡಲಾಗಿದ್ದ ವಕ್ಫ್‌ ನೋಟಿಸ್‌ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ಈಗ ವಕ್ಫ್‌ ಆಸ್ತಿ!

    ಆನಂದ ಹಡಪದ್, ಅಶೋಕ ಬಣ್ಣದ, ಬಡೈಲ್ ಲಾಹೋರಿ, ಗೋವಿಂದ ಲಿಂಗಸಾ, ಗಿರಮಲ್ಲ ಚನ್ನಾಳ, ಸಂಜಯಕುಮಾರ್ ಜೈನ್, ಮಹಾವೀರ ಶಂಕರಲಾಲ್, ರವಿ ಮಾದರ್, ಬಸಪ್ಪ ಬಣಾರಿ, ಮಾಲಿಂಗಯ್ಯ ಹಿರೇಮಠ ಎಂಬುವರಿಗೆ ಬಸವರಾಜ್ ಬೊಮ್ಮಾಯಿ ಸಿಎಂ‌ ಇದ್ದಾಗ ನೋಟಿಸ್‌ ನೀಡಲಾಗಿತ್ತು. ಇದನ್ನೂ ಓದಿ: ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ಈಗ ವಕ್ಫ್‌ ಆಸ್ತಿ!

    ಬಿಜೆಪಿ ನಾಯಕರು ರಾಜಕೀಯಕ್ಕಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕ ರಾಜು ಆಲಗೂರ್ ಕಿಡಿಕಾರಿದ್ದಾರೆ.