Tag: War room

  • ಸಿದ್ದು ಪ್ರಚಾರಕ್ಕೆ ಕೋಲಾರದಲ್ಲಿ ವಾರ್‌ ರೂಂ ಓಪನ್‌

    ಸಿದ್ದು ಪ್ರಚಾರಕ್ಕೆ ಕೋಲಾರದಲ್ಲಿ ವಾರ್‌ ರೂಂ ಓಪನ್‌

    ಕೋಲಾರ: ಚುನಾವಣೆ ಸಮೀಪಿಸುತ್ತಿದ್ದಂತೆ ಕೋಲಾರ (Kolara) ವಿಧಾನಸಭಾ ಕ್ಷೇತ್ರದ ರಾಜಕೀಯ (Politics) ಚಟುವಟಿಕೆಗಳು ರಂಗೇರುತ್ತಿದೆ. ವಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ತಮ್ಮ  ಚುನಾವಣಾ ತಂತ್ರಗಾರಿಕೆಗಾಗಿ ವಾರ್ ರೂಂ ತೆರೆದಿದ್ದಾರೆ.

    ಟೇಕಲ್ ರಸ್ತೆಯ ಸಮೃದ್ಧಿ ಬಡಾವಣೆಯಲ್ಲಿರುವ ಸುಸಜ್ಜಿತ ಮಳಿಗೆಯಲ್ಲಿ ವಾರ್‌ ರೂ ತೆರೆಯಲಾಗಿದೆ. ವಾರ್ ರೂಮ್‌ನಲ್ಲಿ ಕ್ಷೇತ್ರದ ಚುನಾವಣಾ ಕೆಲಸ, ಪ್ರಚಾರದ ಯೋಜನೆ ರೂಪಿಸಲಾಗುತ್ತದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashnath Kishore) ಅವರ ತಂಡದಲ್ಲಿ ಕೆಲಸ ಮಾಡಿದ್ದ ಪರಿಣಿತರೇ ಈ ಪೋಲ್ ಹೌಸ್ ಏಜೆನ್ಸಿ ನಿರ್ಮಿಸಿದ್ದು, ಈ ವಾರ್ ರೂಂ ನಿರ್ವಹಣೆ ಮಾಡಲಿದೆ.

    ಕೋಲಾರ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಈ ಸಂಸ್ಥೆ ಮುಂದಿನ ಮೂರು ತಿಂಗಳು ಈ ವಾರ್ ರೂಂನಲ್ಲಿ ಕಾರ್ಯನಿರ್ವಹಿಸಲಿದೆ. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

    ಈ ವಾರ್ ರೂಂನಲ್ಲಿ 20 ರಿಂದ 40 ಜನರ ತಂಡ ಕೆಲಸ ಮಾಡಲಿದ್ದು, ವಿವಿಧ ರೀತಿಯ ಸಮೀಕ್ಷೆಗಳನ್ನು ಮಾಡಲಿದೆ. ಅಲ್ಲದೇ ಸಿದ್ದರಾಮಯ್ಯ ಬ್ರ್ಯಾಂಡಿಂಗ್, ಇಮೇಜ್ ಬಿಲ್ಡ್‌ ಮಾಡಲಿದೆ. ಕೋಲಾರ ಕ್ಷೇತ್ರದಲ್ಲಿ ಈ ತಂಡ ತಿರುಗಾಟ ಮಾಡಿ ಕಾಂಗ್ರೆಸ್‌ ನಾಯಕರು ಸೇರಿದಂತೆ ವಿರೋಧ ಪಕ್ಷಗಳ ಮುಖಂಡರ ಮೇಲೂ ಇದು ನಿಗಾ ಇಡಲಿದೆ.

    ವಿಶೇಷವಾಗಿ ಡಿಜಿಟಲ್ ಮೂಲಕ ತಂತ್ರಗಾರಿಕೆ ಹೆಣೆಯಲಿದ್ದು ಸರ್ವೇ, ಮಾಧ್ಯಮ ನಿರ್ವಹಣೆ, ಸಾಮಾಜಿಕ ಜಾಲತಾಣದ ಮೂಲಕ ಸಿದ್ದರಾಮಯ್ಯ ಸರ್ಕಾರದ ಯೋಜನೆಗೆಳನ್ನು ಪ್ರಚಾರ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹದೇವಪುರದ ವಿವಿಧೆಡೆ ವಾರ್ ರೂಮ್, ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಅರವಿಂದ ಲಿಂಬಾವಳಿ

    ಮಹದೇವಪುರದ ವಿವಿಧೆಡೆ ವಾರ್ ರೂಮ್, ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಅರವಿಂದ ಲಿಂಬಾವಳಿ

    ಬೆಂಗಳೂರು: ಮಹದೇವಪುರ ವಲಯದ ವಿವಿಧ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಟ್ರಯಾಜಿಂಗ್ ಕೇಂದ್ರಗಳನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಉದ್ಘಾಟಿಸಿದರು.

    ಈ ವೇಳೆ ಮಾತನಾಡಿದ ಅವರು, ಕೋವಿಡ್ ಸೋಂಕಿತರು ಪಾಸಿಟಿವ್ ಬಂದಿದ್ದರೂ ಹೊರಗೆ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಸೋಂಕಿತರು ಮನೆಯೊಳಗೆ ಇರಬೇಕು, ಹೊರಗೆ ತಿರುಗುವುದರಿಂದ ಇತರರಿಗೂ ಸೋಂಕು ಹಬ್ಬುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಹೊರಗೆ ಸುತ್ತುತ್ತಿರುವ ಸೋಂಕಿತರನ್ನು ಪತ್ತೆ ಮಾಡಲು ಪೊಲೀಸರ ನೆರವು ಪಡೆಯಲಾಗುವುದು ಎಂದು ತಿಳಿಸಿದರು.

    ಒಂದೇ ಶೌಚಾಲಯ ಇರುವ ಮನೆಗಳಲ್ಲಿ ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಷ್ಟ, ಅಂತಹವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಸೋಂಕಿತರು ಟ್ರೈಯಾಜಿಂಗ್ ಕೇಂದ್ರಕ್ಕೆ ಬಂದ ನಂತರ ಪರಿಶೀಲನೆ ಮಾಡಿ, ವೈದ್ಯಕೀಯ ಚಿಕಿತ್ಸೆಗೆ ಅನುಗುಣವಾಗಿ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗುವುದು ಎಂದರು.

    ಮೊದಲು ಹಾಲನಾಯಕನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೋವಿಡ್ ವಾರ್ ರೂಮ್ ಉದ್ಘಾಟನೆ ಮಾಡಲಾಯಿತು, ನಂತರ ಹಾಡೋಸಿದ್ದಾಪುರದ ಐವಿರೋಜ್ ರೆಸಾರ್, ಟ್ರೈಯಾಜ್ ಸೆಂಟರ್ ಹಾಗೂ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಯಿತು. ಮಂಡೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೋವಿಡ್ ವಾರ್ ರೂಮ್, ಬಿದರಹಳ್ಳಿ ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಹತ್ತಿರ ಟ್ರೈಯಾಜ್ ಸೆಂಟರ್ ಹಾಗೂ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಯಿತು.

  • ಕೊರೊನಾ ಭೀತಿ ಹೆಚ್ಚಳ – ಬಿಜೆಪಿಯಿಂದ ರಾಜ್ಯಾದ್ಯಂತ ವಾರ್ ರೂಂ ಓಪನ್

    ಕೊರೊನಾ ಭೀತಿ ಹೆಚ್ಚಳ – ಬಿಜೆಪಿಯಿಂದ ರಾಜ್ಯಾದ್ಯಂತ ವಾರ್ ರೂಂ ಓಪನ್

    ಮಂಗಳೂರು: ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಸಹಾಯವಾಣಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರು ಇಂದು ಚಾಲನೆ ನೀಡಿದರು.

    ಈ ಬಗ್ಗೆ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಮಾರ್ಚ್ 23ರಿಂದಲೇ ರಾಜ್ಯದ ಎಲ್ಲಾ ಜಿಲ್ಲೆ, ಮಂಡಲಗಳಲ್ಲಿ ಬಿಜೆಪಿ ವಾರ್ ರೂಂ ಆರಂಭವಾಗಿದೆ. ಬುಧವಾರದವರೆಗೆ 20,13,910 ಆಹಾರದ ಪೊಟ್ಟಣ, 1,96,150 ಮಾಸ್ಕ್ ಮತ್ತು 5,95,705 ರೇಷನ್ ಕಿಟ್‍ಗಳನ್ನು ರಾಜ್ಯಾದ್ಯಂತ ವಿತರಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದರು. ಇವತ್ತಿನಿಂದ ಬಿಜೆಪಿ ಕರ್ನಾಟಕ ಕೋವಿಡ್ ಹೆಲ್ಪ್ ಲೈನ್ ಆರಂಭವಾಗಲಿದ್ದು, 08068324040 ಈ ಸಂಖ್ಯೆ ಇಡೀ ಕರ್ನಾಟಕ ರಾಜ್ಯಕ್ಕೆ ಒಂದೇ ಆಗಲಿದೆ. 8722557733 ಈ ನಂಬರ್ ಮೂಲಕ ವಾಟ್ಸಾಪ್ ಸಂಪರ್ಕ ಮಾಡಿ ರಾಜ್ಯದ ಜನರು ಬಿಜೆಪಿಯನ್ನು ಸಂಪರ್ಕಿಸಿ ನೆರವು ಪಡೆಯಬಹುದು ಅಂತ ಹೇಳಿದರು.

    ಅನಾರೋಗ್ಯ ಪೀಡಿತರು ಆಸ್ಪತ್ರೆಗೆ ಕರೆದುಹೋಗಲು ವ್ಯವಸ್ಥೆ, ಮೆಡಿಕಲ್-ಆಹಾರ ಸಾಮಾಗ್ರಿಗಳಿಗೆ ವ್ಯವಸ್ಥೆ, ತುರ್ತು ಪರಿಸ್ಥಿತಿ ಹೀಗೆ 12 ವಿಷಯಗಳಿಗೆ ಯಾವುದೇ ಕರೆಗಳು ಬಂದಲ್ಲಿ ಎಲ್ಲಿಂದ ಕರೆ ಬಂದಿದೆಯೋ ಅಲ್ಲಿನ ಮಂಡಲ, ವಿಭಾಗಗಳಿಗೆ ತಿಳಿಸಲಾಗುವುದು. ತಕ್ಷಣ ಅಲ್ಲಿನ ಕಾರ್ಯಕರ್ತರು ಕರೆ ಮಾಡಿದವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿ ಕೊಡುತ್ತಾರೆ. ಅಲ್ಲದೆ ಆ ಬಗ್ಗೆ ಫೋಟೋ ತೆಗೆದು ಅಪ್ಡೇಟ್ ಮಾಡಲಾಗುತ್ತದೆ. ಇದರಿಂದ ಯಾವ ದೂರು ಪೂರೈಸಿದೆ ಎಂಬುದರ ಬಗ್ಗೆ ಮಾಹಿತಿ ಸುಲಭವಾಗಿ ಲಭ್ಯವಾಗಲಿದೆ. ಈ ಬಗ್ಗೆ ಪ್ರತಿ ದಿನ ರಾತ್ರಿ 9 ಗಂಟೆಗೆ ಸಭೆ ಕರೆಸಿ ಅಂದಿನ ದಿನ ಎಷ್ಟು ದೂರು ದಾಖಲಾಗಿವೆ, ಎಷ್ಟು ದೂರಿಗೆ ಪರಿಹಾರ ದೊರಕಿದೆ, ಎಷ್ಟು ದೂರುಗಳು ಬಾಕಿ ಉಳಿದಿವೆ ಎಂದು ಚರ್ಚೆ ನಡೆಸಲಾಗುವುದು ಎಂದು ನಳೀನ್ ಕುಮಾರ್ ತಿಳಿಸಿದರು.

    ಲಾಕ್‍ಡೌನ್‍ನಿಂದ ಜನರು ಸಂಕಷ್ಟಕ್ಕೆ ಒಳಗಾಗಬಾರದೆಂದು ಅಲ್ಲಲ್ಲಿ ವಾರ್ ರೂಂಗಳನ್ನು ಈಗಾಗಲೇ ತೆರೆಯಲಾಗಿದೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಪ್ರತಿಯೊಬ್ಬ ಕಾರ್ಯಕರ್ತನೂ ಐದು ಜನ ಬಡ, ನಿರ್ಗತಿಕರಿಗೆ ಊಟವನ್ನು ಒದಗಿಸಬೇಕು. ಜೊತೆಗೆ ಹೊರ ರಾಜ್ಯದ ಕೂಲಿ ಕಾರ್ಮಿಕರಿಗೆ ಆಹಾರ ಒದಗಿಸಬೇಕು ಎಂದು ಸೂಚನೆ ನೀಡಿದರು.