Tag: Ward

  • ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ (ICU) ವಾರ್ಡ್‌ಗೆ (Ward) ಶಿಫ್ಟ್ ಮಾಡಲಾಗಿದೆ.

    ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ

    ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ಚೆನ್ನಾಗಿ ಮಾತನಾಡಿದರು. ಅವರು ಬೇಗ ಗುಣಮುಖರಾಗಿ ಬರುತ್ತಾರೆ ಎಂದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಪತ್ರೆಯ ಬೆಡ್ ಮೇಲೆ ನಾಯಿ ವಿಶ್ರಾಂತಿ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಗರಂ

    ಆಸ್ಪತ್ರೆಯ ಬೆಡ್ ಮೇಲೆ ನಾಯಿ ವಿಶ್ರಾಂತಿ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಗರಂ

    ಲಕ್ನೋ: ಕೊರೊನಾ ಸಮಯದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅಂತಹದರಲ್ಲಿ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ನಾಯಿಯೊಂದು ಬೆಡ್ ಮೇಲೆ ಬೆಚ್ಚಗೆ ಕುಳಿತು ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಬೆಳಕಿಗೆ ಬಂದಿದೆ.

     

    ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಉತ್ತರ ಪ್ರದೇಶದ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿದೆ. ಆಸ್ಪತ್ರೆಯ ಈ ಅವ್ಯವಸ್ಥೆಯು ರೋಗಿಗಳ ನಿದ್ದೆಯನ್ನು ಕೆಡಿಸುತ್ತಿದೆ.

    ಈ ವಿಚಾರವಾಗಿ ತನಿಖೆ ನಡೆಸಲಾಗುತ್ತಿದ್ದು, ಸಿವಿಲ್ ಲೈನ್ಸ್ ಪ್ರದೇಶದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಶಸ್ತ್ರಚಿಕಿತ್ಸಾ ವಾರ್ಡ್ ನಲ್ಲಿ ಬೀದಿ ನಾಯಿ ಪತ್ತೆಯಾಗಿದ್ದು, ಆಸ್ಪತ್ರೆಯ ಆವರಣದಲ್ಲಿ ನಾಯಿ ಸುತ್ತಾಡುವುದು ಸಾಮಾನ್ಯವಾಗಿ ಹೋಗಿದೆ ಇದರಲ್ಲಿ ಯಾವುದೇ ರೀತಿಯ ಆಶ್ಚರ್ಯವೇನಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಮತ್ತು ಸಿಬ್ಬಂದಿಯಲ್ಲಿನ ಅಸಡ್ಡೆ ಎಲ್ಲರಿಗೂ ಕಾಣಿಸುತ್ತಿದೆ ಎಂದು ಸ್ಥಳೀಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

    ಜೊತೆಗೆ ಆಸ್ಪತ್ರೆಯ ಅಧಿಕಾರಿಗಳು ಆ ವಾರ್ಡ್ ನಲ್ಲಿ ಯಾರನ್ನು ದಾಖಲಿಸಿಕೊಳ್ಳದೆ ಇದ್ದರಿಂದ ಆ ಬೆಡ್ ಖಾಲಿ ಇತ್ತು. ಅದೇ ಸಮಯದಲ್ಲಿ ನಾಯಿ ಬಂದು ಕುಳಿತಿದೆ ತಿಳಿಸಿದರು. ಇನ್ನೂ ಈ ದೃಶ್ಯದ ಮೂಲಕ ಆಸ್ಪತ್ರೆ ಅವ್ಯವಸ್ಥೆ, ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದೆ.

    ಈ ಹಿಂದೆ ಕರ್ನಾಟಕದ ಮಂಡ್ಯ ಜಿಲ್ಲೆಯ ಆಸ್ಪತ್ರಯೊಂದರಲ್ಲಿ ಕೂಡ ಇದೇ ರೀತಿ ಬೀದಿ ನಾಯಿಗಳು ವಾರ್ಡ್‍ವೊಂದರ ಬೆಡ್ ನಲ್ಲಿ ರಾಜಾರೋಷವಾಗಿ ವಿಶ್ರಾಂತಿಸುತ್ತಿದ್ದ ಘಟನೆ ನಡೆದಿತ್ತು. ಘಟನೆ ಕುರಿತಂತೆ ಅಲ್ಲಿನ ರೋಗಗಳು ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದರು.

  • ಕೊರೊನಾ ಸೋಂಕಿತರಿಗೆ ಸಿದ್ಧವಾಗುತ್ತಿದೆ ರೈಲ್ವೆ ಆಸ್ಪತ್ರೆ!

    ಕೊರೊನಾ ಸೋಂಕಿತರಿಗೆ ಸಿದ್ಧವಾಗುತ್ತಿದೆ ರೈಲ್ವೆ ಆಸ್ಪತ್ರೆ!

    ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶಾದ್ಯಂತ ಏಪ್ರಿಲ್ 14ರವರೆಗೂ ಲಾಕ್‍ಡೌನ್ ಘೋಷಿಸಿದರೂ ಹೇಳಿಕೊಳ್ಳವ ಮಟ್ಟಿಗೆ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಒಂದು ವೇಳೆ ದೇಶದಲ್ಲಿರುವ ಆಸ್ಪತ್ರೆಗಳಲ್ಲಿ ವಾರ್ಡ್‍ಗಳ ಸಮಸ್ಯೆಯಾದರೆ ರೈಲಿನಲ್ಲೇ ಕ್ವಾರಂಟೈಮ್ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಲಾಕ್‍ಡೌನ್ ಘೋಷಣೆಗೂ ಮುನ್ನವೇ ರೈಲ್ವೆ ಇಲಾಖೆ ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಇತ್ತ ದೇಶಾದ್ಯಂತ ಕೊರೊನಾ ಶಂಕಿತರು ಮತ್ತು ಸೋಂಕಿತರ ಚಿಕಿತ್ಸೆಗೆ ಐಸೋಲೇಶ್ ವಾರ್ಡ್ ಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ತನ್ನಲ್ಲಿರುವ ಅಪಾರ ಪ್ರಮಾಣದ ರೈಲುಗಳನ್ನ ಐಸೋಲೇಶನ್ ವಾರ್ಡ್ ಗಳಾಗಿ ಬಳಕೆ ಮಾಡುವ ಆಫರ್ ಮುಂದಿಟ್ಟಿದೆ.

    ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಸಿಗಲಿದೆ. ವೈದ್ಯ ಸಿಬ್ಬಂದಿ, ಸೋಂಕಿತರು, ಶಂಕಿತರು ಸೇರಿದಂತೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದರೆ ರೈಲ್ವೆ ಇಲಾಖೆಯು 20 ಸಾವಿರ ಬೋಗಿಗಳನ್ನು 10 ಸಾವಿರ ಐಸೋಲೇಶನ್ ವಾರ್ಡ್ ಗಳಾಗಿ ಮಾರ್ಪಾಡಾಗುವ ಸಾಧ್ಯತೆಯಿದೆ.

    ಪ್ರತ್ಯೇಕತೆ:
    ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡ ನಂತರ ತಮ್ಮನ್ನು ತಾವೇ ಪ್ರತ್ಯೇಕಿಸಿಕೊಳ್ಳುವ, ಮತ್ತೊಬ್ಬರಿಂದ ಅಂತರ ಕಾಯ್ದುಕೊಳ್ಳುವ ಸೌಲಭ್ಯಗಳ ಅವಶ್ಯಕತೆಯಿದೆ. ಈ ಬೇಡಿಕೆ ಈಡೇರಿಸಲು ಭಾರತೀಯ ರೈಲ್ವೆ ಒಂದು ಚತುರ ಪರಿಹಾರವನ್ನು ಕಂಡುಹಿಡಿದಿದೆ.

    ವಿದ್ಯುತ್:
    ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ತನ್ನ ರೈಲು ಬೋಗಿಗಳನ್ನು ಕ್ವಾರೆಂಟೈನ್ ಹಬ್‍ಗಳಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ವಿದ್ಯುತ್ ಸಂಪರ್ಕವಿರುವ ಸಮೀಪದಲ್ಲಿ ಬೋಗಿಗಳನ್ನು ನಿಲ್ಲಿಸಿದರೆ ಅನುಕೂಲವಾಗಲಿದೆ.

    ವಿನ್ಯಾಸ:
    ಕ್ವಾರೆಂಟೈನ್‍ಗಾಗಿ ರೈಲ್ವೆ ಇಲಾಖೆ ನಾನ್ ಎಸಿ ಕೋಚ್ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ 10 ಕ್ಯಾಬಿನ್‍ಗಳಿರುತ್ತವೆ. ಕೇವಲ ಒಂದು ಬರ್ತ್ ಬಿಟ್ಟು ಉಳಿದ ಮೂರು ಬರ್ತ್ ತೆಗೆದು ರೂಮ್ ರೀತಿ ಸಿದ್ಧಗೊಳಿಸಲಾಗಿದೆ. ಇದೇ ರೀತಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಇರುವ ರೂಮ್ ವ್ವವಸ್ಥೆ ಮಾಡಲಾಗಿದ್ದು, ಪ್ಲಾಸ್ಟಿಕ್ ಕರ್ಟನ್‍ನಿಂದ ಕ್ಯಾಬಿನ್ ಕವರ್ ಮಾಡಲಾಗಿದೆ.

    ಶೌಚಾಲಯ:
    ಒಂದು ಕ್ಯಾಬಿನ್‍ನಲ್ಲಿ 3 ಭಾರತೀಯ ಶೈಲಿ 1 ವೆಸ್ಟರ್ನ್ ಟಾಯ್ಲೆಟ್‍ಗಳಿರುತ್ತವೆ. ಈ ಪೈಕಿ ಎರಡು ಟಾಯ್ಲೆಟ್‍ಗಳನ್ನು ಸ್ನಾನದ ಕೋಣೆಯಾಗಿ ಪರಿವರ್ತಿಸಲಾಗಿದೆ. ಬಾಥ್ ರೂಮ್‍ನಲ್ಲಿ ಟ್ಯಾಪ್‍ನ ಎತ್ತರವನ್ನು ಹೆಚ್ಚಿಸಲಾಗಿದೆ. ಜೊತೆಗೆ ಹ್ಯಾಂಡ್ ಶವರ್ ಗಳನ್ನ ಹಾಕಲಾಗಿದೆ.

    ವೈದ್ಯಕೀಯ ಸಿಬ್ಬಂದಿ:
    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್ ಸೇರಿ ವೈದ್ಯಕೀಯ ಸಿಬ್ಬಂದಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ರೋಗಿ ಮತ್ತು ವೈದ್ಯರ ಕ್ಯಾಬಿನ್ ಮಧ್ಯೆ ಅಡ್ಡವಾಗಿ ಪ್ಲಾಸ್ಟಿಕ್ ಕರ್ಟನ್ ಹಾಕಲಾಗಿದೆ.

    ಆಹಾರ:
    ಬೇಸ್ ಅಡಿಗೆಮನೆಗಳಿಲ್ಲದ ನಿಲ್ದಾಣಗಳಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಂಟ್ರಿ ಕಾರುಗಳನ್ನು ಮೊಬೈಲ್ ಅಡುಗೆಮನೆಯನ್ನಾಗಿ ಪರಿವರ್ತಿಸಲು ರೈಲ್ವೆ ಯೋಜಿಸಿದೆ.

  • ಬಿಜೆಪಿ ವಾರ್ಡ್‌ಗೆ ಹೆಚ್ಚು ಅನುದಾನ – ಸರ್ಕಾರದ ತಾರತಮ್ಯಕ್ಕೆ ಕೈ, ತೆನೆ ಕಿಡಿ

    ಬಿಜೆಪಿ ವಾರ್ಡ್‌ಗೆ ಹೆಚ್ಚು ಅನುದಾನ – ಸರ್ಕಾರದ ತಾರತಮ್ಯಕ್ಕೆ ಕೈ, ತೆನೆ ಕಿಡಿ

    – ಕೋರ್ಟ್ ಮೂಲಕ ತಡೆಯಾಜ್ಞೆ

    ಕೊಪ್ಪಳ: ಸರ್ಕಾರ ಬದಲಾವಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿ ಸರ್ಕಾರ ಶಾಕ್ ಕೊಟ್ಟಿದೆ. ಬಿಜೆಪಿ ಸದಸ್ಯರು ಇರುವ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಿ, ತಾರತಮ್ಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್-ಜೆಡಿಎಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ಹೌದು, ಕೊಪ್ಪಳದ ಗಂಗಾವತಿ ನಗರ ಪ್ರದೇಶದ ವಾರ್ಡ್ ಗಳ ಅಭಿವೃದ್ಧಿಗಾಗಿ ಸಮ್ಮಿಶ್ರ ಸರ್ಕಾರ 6.28 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಆದರೆ ಸರ್ಕಾರ ಬದಲಾವಣೆಯಿಂದ ಇನ್ನೇನು ನಮ್ಮ ವಾರ್ಡ್ ಗಳಿಗೆ ಸಮನಾಗಿ ಅನುದಾನ ಬರುತ್ತದೆ ಎಂದು ಕಾದು ಕುಳಿತಿದ್ದ ಕಾಂಗ್ರೆಸ್ಸಿಗೆ ಇದೀಗ ಸರ್ಕಾರ ಶಾಕ್ ನೀಡಿದೆ.

    ಬಿಜೆಪಿ ಸರ್ಕಾರ ಬಂದಿದ್ದೇ ತಡ, ಬಿಜೆಪಿ ಸದಸ್ಯರು ಪ್ರತಿನಿಧಿಸುತ್ತಿರೋ ವಾರ್ಡ್ ಗಳಿಗೆ ಅನುದಾನ ಹಂಚಲಾಗಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಸದಸ್ಯರಿರೋ ವಾರ್ಡ್ ಗಳಿಗೆ ಒಂದೇ ಒಂದು ನಯಾಪೈಸೆ ಅನುದಾನ ಬಿಡುಗಡೆ ಆಗಿಲ್ಲ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಧಾರವಾಡ ಹೈಕೋರ್ಟ್ ಮೇಟ್ಟಿಲೇರಿ ಬಿಜೆಪಿ ವಾರ್ಡ್ ಗಳಿಗೆ ಬಿಡುಗಡೆಯಾದ ಅನುದಾನಕ್ಕೆ ತಡೆಯಾಜ್ಞೆ ತಂದಿರುವುದಾಗಿ ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ ರಾಘವೇಂದ್ರ ಹೇಳಿದ್ದಾರೆ.

    ಈ ಬಗ್ಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಅವರನ್ನು ಕೇಳಿದರೆ, ಇಲ್ಲಿ ಕಾಂಗ್ರೆಸ್, ಬಿಜೆಪಿ ವಾರ್ಡ್ ಎಂದು ಡಿವೈಡ್ ಮಾಡಿಲ್ಲ. ಸಮಸ್ಯೆ ಯಾವ ವಾರ್ಡಿನಲ್ಲಿ ಜಾಸ್ತಿ ಇದೆ, ಅಂತಹ ವಾರ್ಡ್ ಗಳಿಗೆ ಹೆಚ್ಚಿನ ಅನುದಾನ ನೀಡಿಲಾಗಿದೆ ಅಷ್ಟೇ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

    ಒಟ್ಟಿನಲ್ಲಿ ರಾಜಕೀಯ ತಿಕ್ಕಾಟಕ್ಕೆ ಗಂಗಾವತಿ ನಗರದ ಜನರು ಬಲಿಯಾಗುತ್ತಿದ್ದಾರೆ. ಈಗಲಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ತಾರತಮ್ಯ ಬಿಟ್ಟು ಸಮಾನವಾಗಿ ಎಲ್ಲಾ ವಾರ್ಡ್ ಗಳಿಗೆ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಕೈ-ತೆನೆ ಸದಸ್ಯರು ಒತ್ತಾಯಿಸುತ್ತಿದ್ದಾರೆ.

  • ಒಂದೇ ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಒಂದೇ ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಬೆಂಗಳೂರು: ನಗರದ ಪ್ರತಿ ವಾರ್ಡ್ ನಲ್ಲೊಂದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡೋದು ಸರ್ಕಾರದ ಯೋಜನೆ. ಆದರೆ ಇಲ್ಲೊಂದು ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್ ಗಳನ್ನು ನಿರ್ಮಿಸಲಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಕಾಮಾಕ್ಷಿ ಪಾಳ್ಯ ವಾರ್ಡ್ ಸ್ಥಳೀಯ ಬಿಬಿಎಂಪಿ ಸದಸ್ಯೆಯ ವಿರೋಧದ ನಡುವೆಯೂ ಕಸ ವಿಂಗಡನೆ ಘಟಕದ ಪಕ್ಕದಲ್ಲೇ ಈ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಅನ್ನೋದು ಕಾರ್ಪೋರೇಟರ್ ಪ್ರತಿಮಾ ಆರೋಪ. ಅದು ಹೋಗ್ಲಿ ಅಂದ್ರೆ ಈ ಇಂದಿರಾ ಕ್ಯಾಂಟೀನ್ ಇರುವ ರಸ್ತೆಯಲ್ಲೇ ಕೇವಲ 500 ಮೀಟರ್ ದೂರದಲ್ಲಿ ಮತ್ತೊಂದು ಕ್ಯಾಂಟೀನ್ ನಿರ್ಮಿಸಲಾಗಿದೆ. ಅದು ಪಕ್ಕದ ಗೋವಿಂದ್ ರಾಜ್ ನಗರ ವಾರ್ಡ್ ಗೆ ಸೇರಬೇಕಿದ್ದ ಕ್ಯಾಂಟೀನ್ ಅಗಿದ್ದು, ಕಾಮಾಕ್ಷಿ ಪಾಳ್ಯ ವಾರ್ಡ್ ನಲ್ಲಿ ನಿರ್ಮಿಸಿರೋದಕ್ಕೆ ಪ್ರತಿಮಾ ಆಕ್ರೋಶ ವ್ಯಕ್ತಪಡಿಸಿದ್ರು.

    ಒಂದಲ್ಲ, ಎರಡಲ್ಲ ಅಷ್ಟು ಸಾಲ್ದು ಅಂತಾ ಇದೀಗಾ ಇದೇ ವಾರ್ಡ್ ನ ಶಾರದ ಕಾಲೋನಿ ಬಸ್ ನಿಲ್ದಾಣದಲ್ಲಿ ಮತ್ತೊಂದು ಅಂದ್ರೆ ಮೂರನೇ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಪಾಯ ತೋಡಲಾಗಿದೆ. ಎಲ್ಲ ವಾರ್ಡ್ ನ ಸಾರ್ವಜನಿಕರಿಗೆ ಸಲ್ಲ ಬೇಕಿದ್ದ ಜನ ಪರ ಯೋಜನೆಯನ್ನು ಎಲ್ಲೆಂದರಲ್ಲಿ ನಿರ್ಮಾಣ ಮಾಡುತ್ತಿರೋದರ ಬೆನ್ನಲ್ಲೇ ಸಾರ್ವಜನಿಕರ ಹಿತಾಸಕ್ತಿಗಿಂತ ಕೇವಲ ಪಬ್ಲಿಸಿಟಿ ಗಿಮಿಕ್ ಮಾತ್ರ ಇದೆ ಅನ್ನೋದಾಗಿ ಆರೋಪಿಸಿದ್ರು.

    ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್ ನಿರ್ಮಾಣದ ಬಗ್ಗೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದು, ಜನರ ಹಿತಾಸಕ್ತಿಗಿಂತ ಸರ್ಕಾರಕ್ಕೆ ಲೆಕ್ಕ ತೋರಿಸೋ ಉದ್ದೇಶದಿಂದ ಈ ರೀತಿ ಹಠಕ್ಕೆ ಬಿದ್ದು ಅಕ್ಕ ಪಕ್ಕದ ವಾರ್ಡ್ ಗಳ ಇಂದಿರಾ ಕ್ಯಾಂಟೀನ್ ಗಳನ್ನು ಅನಗತ್ಯವಾಗಿ ನಿರ್ಮಿಸಿದ್ದಾರೆ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

  • ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

    ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

    ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ತನ್ನ ವಾರ್ಡ್ ಸದಸ್ಯೆಯ ಪರ ಹೇಳಿಕೆ ನೀಡಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರು ಹಲ್ಲೆ ನಡೆಸಿದ್ದಾರೆ.

    ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್‍ನಲ್ಲಿ ನನ್ನ ಭಾವಚಿತ್ರ ಹಾಕುತ್ತಿಲ್ಲ. ಶಾಸಕರಿಗೆ ಮಾಹಿತಿ ನೀಡದೆ ರಸ್ತೆಯೊಂದನ್ನು ಉದ್ಘಾಟನೆ ಮಾಡಲಾಗಿದೆ ಎಂದು ಪಕ್ಷದವರೇ ಕೆಲವರು ಆರೋಪ ಮಾಡಿದ್ದಾರೆ. ಅಲ್ಲದೆ ಕಡಿಯಾಳಿ ದೇವಸ್ಥಾನದ ಗೇಟ್ ಬಂದ್ ಮಾಡಿರುವುದರಿಂದ ಅಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಹಾಗಾಗಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸದಸ್ಯೆ ಗೀತಾ ಶೇಟ್ ಹೇಳಿದರು.

    ಈ ವೇಳೆ ಗೀತಾ ಅವರ ಪರವಾಗಿ ಹೇಳಿಕೆ ನೀಡಲು ರೋನಿ ಡೀಮೆಲ್ಲೊ ಎಂಬುವರು ಸದನದ ಒಳಗೆ ನುಗ್ಗಿದರು. ಹೀಗಾಗಿ ಕಾಂಗ್ರೆಸ್ ಸದಸ್ಯರು ಸೇರಿ ಅವರನ್ನು ತಡೆದು ಹಲ್ಲೆಮಾಡಿ ಹೊರ ದಬ್ಬಿದರು.

    ರಮೇಶ್ ಕಾಂಚನ್, ರಮೇಶ್ ಪೂಜಾರಿ, ಸುಕೇಶ್ ಹೆರ್ಗ ಎಂಬವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    https://youtu.be/0Lb4iGpcf30