Tag: Water Level

  • ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

    ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ (Rain) ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್ (KRS) ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್‌ಎಸ್ ನೀರಿನ ಮಟ್ಟ (Water Level) 98 ಅಡಿಗೆ ತಲುಪಿದೆ.

    ವಾರದ ಹಿಂದಷ್ಟೇ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದಾಗಿ ಕೆಆರ್‌ಎಸ್‌ಗೆ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದರೆ ಕೆಲವೇ ದಿನದಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸದ್ಯ ಡ್ಯಾಂನಲ್ಲಿ ಸುಮಾರು 21.987 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

    ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಅಲ್ಲದೇ ಅನ್ನದಾತ ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ಮುಂದಿನ ಒಂದು ವಾರ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

    ಇಂದಿನ ಕೆಆರ್‌ಎಸ್ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 98.10 ಅಡಿ
    ಗರಿಷ್ಠ ಸಂಗ್ರಹ ಸಾಮರ್ಥ – 49.452 ಟಿಎಂಸಿ
    ಇAದಿನ ಸಗ್ರಹ – 21.978 ಟಿಎಂಸಿ
    ಒಳ ಹರಿವು – 14,135 ಕ್ಯೂಸೆಕ್
    ಹೊರ ಹರಿವು – 532 ಕ್ಯೂಸೆಕ್

  • ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ಯಾದಗಿರಿ: ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆ ನಾರಾಯಣಪುರದ ಬಸವಸಾಗರ ಜಲಾಶಯ (Basava Sagara Dam) ಸದ್ಯ ಬಹುತೇಕ ಭರ್ತಿಯಾಗಿದೆ.

    33.33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಬರೋಬ್ಬರಿ 22 TMC ನೀರು ಸಂಗ್ರಹವಾಗಿದೆ. 20 ದಿನಗಳ ಹಿಂದೆ ಮೈನಸ್ 1 ಟಿಎಂಸಿ ಡೆಡ್ ಸ್ಟೋರೇಜ್ ದಾಟಿದ್ದ ಜಲಾಶಯದ ಸದ್ಯ ಭರ್ತಿ ಆಗಿರೋದ್ರಿಂದ ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿದೆ. ಇದನ್ನೂ ಓದಿ: ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

    ಪ್ರತಿವರ್ಷ ಜೂನ್ 15ಕ್ಕೆ ನಾರಾಯಣಪುರ ಜಲಾಶಯದಿಂದ ಎಡ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದ್ರೆ ಈ ಬಾರಿ 15 ದಿನ ತಡವಾಗಿ ನಾಲೆಗೆ ನೀರು ಹರಿಸಲಾಗಿದೆ. ಆದರೂ ಬೇಸಿಗೆ ಬೆಳೆಗೆ ನೀರು ಸಿಗುವ ವಿಶ್ವಾಸದಲ್ಲಿ ಅನ್ನದಾತರಿದ್ದಾರೆ. ಇದನ್ನೂ ಓದಿ: ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ – ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

    ಆಲಮಟ್ಟಿ ಜಲಾಶಯವೂ ಭರ್ತಿ:
    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಾಹ್ದೂರ್‌ ಶಾಸ್ತ್ರಿ ಜಲಾಶಯವೂ (Almatti Dam) ಬಹುತೇಕ ಭರ್ತಿ ಆಗಿದೆ. ಮುಂಗಾರು ಮಳೆ ಕೈ ಕೊಟ್ಟ ಕಾರಣ ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆ ಜನರು ಆತಂಕಕ್ಕೆ ಒಳಗಾಗಿದ್ದರು. ಆದ್ರೆ ತಡವಾಗಿಯಾದರೂ ಜಲಾಶಯ ಭರ್ತಿ ಆಗಿದ್ದಕ್ಕೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳೆದ 5 ವರ್ಷಗಳಲ್ಲೇ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು ಸಂಗ್ರಹ

    ಕಳೆದ 5 ವರ್ಷಗಳಲ್ಲೇ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು ಸಂಗ್ರಹ

    ಮಂಡ್ಯ: ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ (Rain) ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಮಳೆ ಸುರಿಯದೇ ಇರುವುದು ಈಗ ಆತಂಕಕ್ಕೆ ಕಾರಣವಾಗಿದೆ.

    ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಲ್ಲಿ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ (KRS Dam) ನೀರಿನ ಮಟ್ಟ (Water Level) ಕುಸಿದಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?

     

    ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್‌ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡಿರುವುದರಿಂದ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

     

    ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರಿಗೆ ಅಗತ್ಯವಿರುವಷ್ಟುನೀರು ಮಾತ್ರ ಸಂಗ್ರಹವಾಗಿದೆ. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್‌, ಏಪ್ರಿಲ್‌, ಮೇ  ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಬೇಸಿಗೆ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿತ್ತು.

  • ಭಾರೀ ಮಳೆ- ಕಬಿನಿ ಒಳ ಹರಿವು ಹೆಚ್ಚಳ

    ಭಾರೀ ಮಳೆ- ಕಬಿನಿ ಒಳ ಹರಿವು ಹೆಚ್ಚಳ

    ಮೈಸೂರು: ಮುಂಗಾರು ಋತು ಚುರುಕು ಪಡೆದುಕೊಂಡಿದ್ದು, ಜಿಲ್ಲೆಯ ಕಬಿನಿ ಜಲಾನಯನ ಪ್ರದೇಶದಲ್ಲಿ ಸಹ ಭಾರೀ ಮಳೆ ಆಗುತ್ತಿದೆ. ಇದರಿಂದ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.

    ಒಟ್ಟು 2284 ಅಡಿ ಸಾಮಥ್ರ್ಯವನ್ನು ಹೊಂದಿರುವ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 2265.60 ಅಡಿಗಳು. ಜಲಾಶಯದ ಇಂದಿನ ಒಳಹರಿವು 6,407 ಕ್ಯೂಸೆಕ್ಸ್, ಜಲಾಶಯದ ಇಂದಿನ ಹೊರಹರಿವು 700 ಕ್ಯೂಸೆಕ್ಸ್. ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿಗೆ ಪಾತ್ರವಾಗಿದೆ.

    ಮುಂಗಾರು ಚುರುಕುಗೊಂಡಿದ್ದು, ಕೇರಳದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿರುವುದರಿಂದ ಕಬಿನಿ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೀಗಾಗಿ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದೆ. ರಾಜ್ಯದಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದೆ. ಬಿತ್ತನೆ ಕಾರ್ಯ ಸಹ ಅಷ್ಟೇ ಚುರುಕುಗೊಂಡಿದೆ.

  • ಕೆಆರ್‌ಎಸ್‌ ಒಳಹರಿವು ಹೆಚ್ಚಳ, ಕಬಿನಿ ಭರ್ತಿಗೆ 4 ಅಡಿ ಬಾಕಿ

    ಕೆಆರ್‌ಎಸ್‌ ಒಳಹರಿವು ಹೆಚ್ಚಳ, ಕಬಿನಿ ಭರ್ತಿಗೆ 4 ಅಡಿ ಬಾಕಿ

    ಬೆಂಗಳೂರು: ಪ್ರಾರಂಭದಲ್ಲಿ ಅಷ್ಟೇನು ಮಳೆಯಾಗಿಲ್ಲದ ಕಾರಣ ಈ ಬಾರಿ ಜಲಾಶಯಗಳು ಭರ್ತಿಯಾಗುವುದಿಲ್ಲ ಎಂಬ ಆತಂಕ ರೈತರಲ್ಲಿ ಮನೆ ಮಾಡಿತ್ತು. ಆದರೆ, ಇತ್ತೀಚೆಗೆ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೆಆರ್‌ಎಸ್‌ ಸೇರಿದಂತೆ ಎಲ್ಲ ಜಲಾಶಯಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

    ಕೊಡಗು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂನ ಒಳ ಹರಿವು 26,522 ಕ್ಯೂಸೆಕ್ ಏರಿಕೆಯಾಗಿದೆ. ಬೆಳಗ್ಗೆ 22,719 ಕ್ಯೂಸೆಕ್ ಇದ್ದ ಒಳ ಹರಿವು ಸಂಜೆ ಹೊತ್ತಿಗೆ 26,522 ಕ್ಯೂಸೆಕ್‍ಗೆ ತಲುಪಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು 88.60 ಅಡಿ ನೀರು ಸಂಗ್ರವಾಗಿದೆ. ಒಳ ಹರಿವು 26,522 ಕ್ಯೂಸೆಕ್ ಇದ್ದು, ಪ್ರಸ್ತುತ 15.121 ಟಿಎಂಸಿ ನೀರು ಸಂಗ್ರಹವಾಗಿದೆ.

    ಕೇರಳದ ವಯನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿಯೂ ಹೆಚ್ಚಳವಾಗಿದ್ದು, ಭರ್ತಿಯಾಗಲು ಕೆಲವೇ ಅಡಿಗಳಷ್ಟು ಬಾಕಿ ಇದೆ. ಹೀಗಾಗಿ ಹೊರಹರಿವು ಕೂಡ ಹೆಚ್ಚಳವಾಗಿದೆ.

    ಕಬಿನಿ ಜಲಾಶಯದ ನೀರಿನ ಮಟ್ಟ 80 ಅಡಿ ತಲುಪಿದ್ದು, ಗರಿಷ್ಠ ಮಟ್ಟ 84 ಅಡಿ ಆಗಿದೆ. ಜಲಾಶಯದ ಸದ್ಯದ ಒಳಹರಿವು 23,000 ಕ್ಯೂಸೆಕ್ ಆಗಿದ್ದು, ಹೊರಹರಿವು 10,000 ಕ್ಯೂಸೆಕ್ ಇದೆ. ಜಲಾಶಯದ ಸಂಪೂರ್ಣ ಭರ್ತಿಗೆ 4 ಅಡಿಗಳು ಮಾತ್ರ ಬಾಕಿ ಇದ್ದು, ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಜಲಾಶಯದಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ.

    ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಪಿಲಾ ನದಿಯ ಇಕ್ಕೆಲಗಳ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

    ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯ ಸಹ ಭರ್ತಿಯಾಗುತ್ತಿದ್ದು, ನೀರಿನ ಮಟ್ಟದಲ್ಲಿಯೂ ಸಹ ಹೆಚ್ಚಳವಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಆಗಿದ್ದು, 2,899.77 ಅಡಿಯಷ್ಟು ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿಯಾಗಿದ್ದು, ಒಳಹರಿವು 28,317 ಕ್ಯೂಸೆಕ್ ಆಗಿದೆ.