Tag: Water Metro

  • ಕೊಚ್ಚಿಯಲ್ಲಿರುವಂತೆ ಮಂಗಳೂರಿನಲ್ಲೂ ವಾಟರ್‌ ಮೆಟ್ರೋ !

    ಕೊಚ್ಚಿಯಲ್ಲಿರುವಂತೆ ಮಂಗಳೂರಿನಲ್ಲೂ ವಾಟರ್‌ ಮೆಟ್ರೋ !

    – ಡಿಪಿಆರ್‌ ರಚನೆಗೆ ಟೆಂಡರ್‌ ಕರೆದ ಕೆಎಂಬಿ

    ಬೆಂಗಳೂರು: ಕೇರಳದ ಕೊಚ್ಚಿ (Kerala Kochi) ಮಾದರಿಯಲ್ಲಿ ಕರ್ನಾಟಕದ ಕರಾವಳಿ ನಗರ ಮಂಗಳೂರಿನಲ್ಲೂ (Mangaluru) ವಾಟರ್‌ ಮೆಟ್ರೋ (Water Metro) ಸೇವೆ ಸಿಗುವ ಸಾಧ್ಯತೆಯಿದೆ.

    ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ (MWMP) ಸಮಗ್ರವಾದ ಯೋಜನಾ ವರದಿಯನ್ನು (DPR) ತಯಾರಿಸಲು ನಿರ್ಧರಿಸಿದ್ದು ಟೆಂಡರ್‌ ಆಹ್ವಾನಿಸಿದೆ. ಈ ಸಾರಿಗೆ ಜಾಲ ನೇತ್ರಾವತಿ ಮತ್ತು ಗುರುಪುರ ನದಿಗಳ ಎರಡೂ ದಡಗಳಲ್ಲಿ ಬಜಾಲ್‌ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸಲಿದೆ.

    ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳ್ಳಲಿದೆ. ಆರಂಭದಲ್ಲಿ ನೇತ್ರಾವತಿ-ಗುರುಪುರ ನದಿ ಹಿನ್ನೀರಿನ ಉದ್ದಕ್ಕೂ ಸುಮಾರು 30 ಕಿಲೋಮೀಟರ್‌ ದೂರದವರೆಗೆ ಬೋಟ್‌ ಸಂಚರಿಸಲಿದೆ. ಈ ಮಾರ್ಗದಲ್ಲಿ ಒಟ್ಟು 17 ನಿಲ್ದಾಣಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.  ಇದನ್ನೂ ಓದಿ: ಹಾಸನಾಂಬೆ ಹುಂಡಿ ಎಣಿಕೆ – 9 ದಿನದಲ್ಲಿ 12.63 ಕೋಟಿ ಹಣ ಸಂಗ್ರಹ

    ಕೊಚ್ಚಿಯ ನಂತರ ಮಂಗಳೂರು ವಾಟರ್‌ ಮೆಟ್ರೋ ಯೋಜನೆ ಎರಡನೇ ಅತಿದೊಡ್ಡ ಜಲ ಸಾರಿಗೆ ವ್ಯವಸ್ಥೆಯಾಗಿದೆ. ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸಂಪರ್ಕಿತ ಪ್ರದೇಶಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ರಚಿಸುವುದು ಇದರ ಉದ್ದೇಶವಾಗಿದೆ. ಈ ಯೋಜನೆಯಿಂದ ಜೀವನೋಪಾಯದ ಅವಕಾಶಗಳು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ ಎಂದು ಕೆಎಂಬಿ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

    2024-2025ರ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಂಗಳೂರಿನ ಗುರುಪುರ ಮತ್ತು ನೇತ್ರಾವತಿ ನದಿಗಳಲ್ಲಿ ವಾಟರ್ ಮೆಟ್ರೋ ಸೇವೆಯನ್ನು ಆರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ಘೋಷಿಸಿದ್ದರು.

    ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ವಾಟರ್‌ ಮೆಟ್ರೋ ಯೋಜನೆಯನ್ನು ಏಪ್ರಿಲ್‌ 25ರಂದು ಉದ್ಘಾಟಿಸಿದ್ದರು. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳಲ್ಲಿ ಈ ಮೆಟ್ರೋ ಸಂಚಾರ ಮಾಡುತ್ತಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ವಾಟರ್‌ ಮೆಟ್ರೋ ಸೇವೆ ನೀಡುತ್ತಿದೆ.

     

  • ಮಂಗಳೂರಿಗೆ ವಾಟರ್‌ ಮೆಟ್ರೋ?

    ಮಂಗಳೂರಿಗೆ ವಾಟರ್‌ ಮೆಟ್ರೋ?

    ಬೆಂಗಳೂರು: ಎಲ್ಲವೂ ಅಂದುಕೊಂಡಂತೆಯೇ ಆದರೆ ದಕ್ಷಿಣ ಕನ್ನಡದಲ್ಲಿ (Dakshina Kannadad) ರಾಜ್ಯದ ಮೊದಲ ವಾಟರ್‌ ಮೆಟ್ರೋ (Water Metro) ಬರಲಿದೆ. ಈ ಮೂಲಕ ಮಂಗಳೂರಿಗೂ (Mangaluru) ವಾಟರ್‌ ಮೆಟ್ರೋ ಪ್ರಯಾಣ ಸಾಧ್ಯವಾಗುವ ಲಕ್ಷಣಗಳು ಶುರುವಾಗಿದೆ.

    ವಿಧಾನಸಭೆಯಲ್ಲಿ ಇಂದು ದಾಖಲೆಯ 15ನೇ ಬಾರಿಗೆ ಬಜೆಟ್‌ (Budget) ಮಂಡಿಸಿದ ಸಿಎಂ ಸಿದ್ದರಾಮಯ್ಯ ( CM Siddaramaiah) ಅವರು ಜಲ ಮೆಟ್ರೋ ಸೇವೆಯನ್ನು ಘೋಷಿಸಿದರು.  ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

    ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲ ಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ದೇಶದ ಮೊದಲ ಜಲ ಮೆಟ್ರೋ ಸೇವೆ ಕೇರಳದಲ್ಲಿ ಕಳೆದ ವರ್ಷ ಶುರುವಾಗಿತ್ತು. ಪ್ರಧಾನಿ ಮೋದಿ ವಾಟರ್‌ ಮೆಟ್ರೋ ಯೋಜನೆಯನ್ನು ಏಪ್ರಿಲ್‌ 25ರಂದು ಉದ್ಘಾಟಿಸಿದ್ದರು.

    ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳಲ್ಲಿ ಈ ಮೆಟ್ರೋ ಸಂಚಾರ ಮಾಡುತ್ತಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ವಾಟರ್‌ ಮೆಟ್ರೋ ಸೇವೆ ನೀಡುತ್ತಿದೆ.

     

  • ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ಕೇರಳದಲ್ಲಿ ದೇಶದ ಮೊದಲ ವಾಟರ್ ಮೆಟ್ರೋ, ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

    ತಿರುವನಂತಪುರಂ: 2 ದಿನಗಳ ಕೇರಳ (Kerala) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಿರುವನಂತಪುರಂ (Thiruvananthapuram) ಹಾಗೂ ಕಾಸರಗೋಡು (Kasargod) ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ (Vande Bharat Express Train) ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ (Water Metro) ಚಾಲನೆ ನೀಡಿದ್ದಾರೆ.

    ಮಂಗಳವಾರ ಬೆಳಗ್ಗೆ 11:10ರ ವೇಳೆಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಿಂದ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕೊಚ್ಚಿಗೆ (Kochi) ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಮೋದಿ ಚಾಲನೆ ನೀಡಿದರು.

    ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ತಿಳಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಕೂಗು – ಹಾಸನದಲ್ಲಿ ಯಾರಿಗೆ ಒಲಿಯಲಿದೆ ಜಯ?

    ಕೊಚ್ಚಿಯಲ್ಲಿ ಪ್ರಾರಂಭವಾಗಿರುವ ನೀರಿನ ಮೆಟ್ರೋ ಯೋಜನೆ ಕೊಚ್ಚಿ ಮತ್ತು ಸುತ್ತಮುತ್ತಲಿನ ಊರಿನ ಜನರಿಗೆ ಸುರಕ್ಷಿತ ಹಾಗೂ ಕೈಗೆಟಕುವ ದರದಲ್ಲಿ ಪ್ರಯಾಣವನ್ನು ಒದಗಿಸಲಿದೆ. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ನೀರಿನ ಮೆಟ್ರೋ ಯೋಜನೆ ಮೊದಲ ಹಂತದಲ್ಲಿ 2 ಮಾರ್ಗಗಳಲ್ಲಿ 8 ವಿದ್ಯುತ್ ಹೈಬ್ರಿಡ್ ದೋಣಿಗಳೊಂದಿಗೆ ನೌಕಾಯಾನವನ್ನು ಪ್ರಾರಂಭಿಸುತ್ತದೆ. ಹೈಕೋರ್ಟ್‌ನಿಂದ ವೈಪಿನ್‌ವರೆಗಿನ ಏಕಮುಖ ಪ್ರಯಾಣಕ್ಕೆ 20 ರೂ. ಇದ್ದು, ವೈಟ್ಟಿಲದಿಂದ ಕಾಕ್ಕನಾಡು ಮಾರ್ಗಕ್ಕೆ 30 ರೂ. ನಿಗದಿಪಡಿಸಲಾಗಿದೆ.

    ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂ.ಯದ್ದಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳ ಸುತ್ತ ಈ ಮೆಟ್ರೋ ಸಂಚಾರ ಮಾಡಲಿದೆ. 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿ.ಮೀ. ವ್ಯಾಪಿಸಿದ್ದು ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. ಇದನ್ನೂ ಓದಿ: ಹಾಲಿ ಸಚಿವರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ

  • ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆ – ಇಂದು ಪ್ರಧಾನಿ ಮೋದಿ ಚಾಲನೆ

    ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆ – ಇಂದು ಪ್ರಧಾನಿ ಮೋದಿ ಚಾಲನೆ

    ತಿರುವನಂತಪುರಂ: ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ (Kerala) ಕೊಚ್ಚಿ (Kochi) ಇನ್ಮುಂದೆ ಸಾಕ್ಷಿಯಾಗಲಿದೆ.

    ಹೌದು, ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ (Water Metro) ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

    ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.

    ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್ ವ್ಯಾಪಿಸಿದ್ದು, ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. ಇದನ್ನೂ ಓದಿ: ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

    ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.