Tag: Water Theft

  • ಬೆಂಗಳೂರಿನಲ್ಲಿ ನೀರಿನ ಕಳ್ಳತನ ತಡೆಯಲು ವಿಜಿಲೆನ್ಸ್ ಪಡೆ ಸ್ಥಾಪನೆ: ಬೊಮ್ಮಾಯಿ

    ಬೆಂಗಳೂರಿನಲ್ಲಿ ನೀರಿನ ಕಳ್ಳತನ ತಡೆಯಲು ವಿಜಿಲೆನ್ಸ್ ಪಡೆ ಸ್ಥಾಪನೆ: ಬೊಮ್ಮಾಯಿ

    ಬೆಂಗಳೂರು: ನಗರದಲ್ಲಿ ನೀರಿನ ಕಳ್ಳತನ (Water Theft) ತಡೆಯಲು ಬಿಡಬ್ಲ್ಯುಎಸ್‌ಎಸ್‌ಬಿಗೆ (BWSSB) ವಿಶೇಷ ವಿಜಿಲೆನ್ಸ್ ಪಡೆ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಬೆಂಗಳೂರು (Bengaluru) ನೀರಿನ ಅಕ್ರಮದ ಬಗ್ಗೆ ಪ್ರಶ್ನೆ ಕೇಳಿ ಅಕ್ರಮ ನೀರಿನ ಸಂಪರ್ಕಗಳಿಗೆ ಕಡಿವಾಣ ಹಾಕಬೇಕು. ಪೋಲಾಗುತ್ತಿರುವ ನೀರನ್ನು ತಡೆಯಬೇಕು ಎಂದು ಒತ್ತಾಯ ಮಾಡಿದರು.

    ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರಕ್ಕೆ ಕಾವೇರಿ ಮೂಲದಿಂದ 1,450 ದಶಲಕ್ಷ ಲೀಟರ್ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಪ್ರಸ್ತುತ 10.64 ಲಕ್ಷ ಸಂಪರ್ಕಗಳಿಂದ ನಿತ್ಯ 3.83 ಕೋಟಿ ಬಿಲ್ಲು ಸಂಗ್ರಹವಾಗುತ್ತಿದೆ. 29% ನೀರು ಬೆಂಗಳೂರಿನಲ್ಲಿ ಪೋಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಬಿಡಬ್ಲ್ಯುಎಸ್‌ಎಸ್‌ಬಿ ಮೊದಲಿನಿಂದಲೂ ಅನೇಕ ಸಮಸ್ಯೆ ಎದುರಿಸುತ್ತಿದೆ. ಸರಿಯಾದ ಪೈಪ್ ಲೈನ್ ಇಲ್ಲ, ನೀರಿನ ಸೋರಿಕೆ ಇದೆ. 30-40 ವರ್ಷದಿಂದ ಇದು ನಡೆದುಕೊಂಡು ಬಂದಿದೆ. 50 ವರ್ಷಗಳ ಹಿಂದೆ ಪೈಪ್ ಹಾಕಲಾಗಿತ್ತು. ಇಲ್ಲಿ ನೀರಿನ ಸೋರಿಕೆ ಆಗುತ್ತಿದೆ. ಈಗ ಹೊಸದಾಗಿ ಪೈಪ್ ಹಾಕುತ್ತಿದ್ದೇವೆ. ನಾನು ಸಿಎಂ ಆಗುವ ಮುನ್ನ 37% ಅನಧಿಕೃತ ನೀರು ಸರಬರಾಜು ಇತ್ತು. ಈಗ 29% ಕ್ಕೆ ಇದನ್ನು ಇಳಿಸಿದ್ದೇವೆ. ಇದನ್ನು 0% ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ: ಬೊಮ್ಮಾಯಿ

    ಸದ್ಯ 22 ಕಿ.ಮೀ ಹೊಸದಾಗಿ ಪೈಪ್ ಹಾಕುತ್ತಿದ್ದೇವೆ.ನೀರು ಕಳ್ಳತನ ತಡೆಯಲು ಬಿಡಬ್ಲ್ಯುಎಸ್‌ಎಸ್‌ಬಿಗೆ ಒಂದು ವಿಶೇಷ ವಿಜಿಲೆನ್ಸ್ ಪಡೆ ಸ್ಥಾಪನೆ ಮಾಡುತ್ತೇವೆ. ನೀರಿನ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲು ಆಗಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ನೀರಿನ ಸಂಪರ್ಕದ ಲೆಕ್ಕ ಇಡಲು ಸಂಪೂರ್ಣ ಸಂಪರ್ಕಗಳಿಗೆ ಮೀಟರ್ ಅಳವಡಿಕೆ ಮಾಡುತ್ತೇವೆ ಎಂದು ಭರವಸೆಯನ್ನು ಕೊಟ್ಟರು. ಇದನ್ನೂ ಓದಿ: ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಯತ್ನಾಳ್ ಖಂಡನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 73 ಕೋಟಿ ರೂ. ಮೌಲ್ಯದ ನೀರು ಕಳ್ಳತನ

    73 ಕೋಟಿ ರೂ. ಮೌಲ್ಯದ ನೀರು ಕಳ್ಳತನ

    ಮುಂಬೈ: 73 ಕೋಟಿ ರೂ. ಮೌಲ್ಯದ ಅಂತರ್ಜಲ ಕಳ್ಳತನದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಳ್ಳತನ ಆರೋಪದಡಿಯಲ್ಲಿ ಕಾಲಬಾದೇವಿಯಲ್ಲಿರುವ ಬೋಮಾನಜಿ ಮಾಸ್ಟರ್ ಲೈನ್, ಪಾಂಡ್ಯ ಮೇಂಶನ್ ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಳೆದ 11 ವರ್ಷಗಳಲ್ಲಿ ಆರೋಪಿ ನೀರು ಸರಬರಾಜು ವ್ಯಕ್ತಿಗಳ ಜೊತೆ ಸೇರಿ 73.19 ಕೋಟಿ ರೂ. ಮೌಲ್ಯದ ನೀರು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

    ಆರ್‍ಟಿಐ ಕಾರ್ಯಕರ್ತ ಸುರೇಶ್‍ಕುಮಾರ್ ಎಂಬವರು ಪಾಂಡ್ಯ ಮೇಂಶನ್ ಕಂಪನಿ ವಿರುದ್ಧ ಸಾಕ್ಷಿ ಸಮೇತವಾಗಿ ದೂರು ದಾಖಲಿಸಿದ್ದಾರೆ. ಪಾಂಡ್ಯ ಮೇಂಶನ್ ಕಂಪನಿ ಮಾಲೀಕರಾಗಿರುವ ತ್ರಿಪುರಪ್ರಸಾದ್ ಪಾಂಡ್ಯ ಮತ್ತು ಸಹಭಾಗಿತ್ವದ ಕಂಪನಿಯ ನಿರ್ದೇಶಕರಾದ ಪ್ರಕಾಶ್ ಪಾಂಡ್ಯ ಹಾಗೂ ಮನೋಜ್ ಪಾಂಡ್ಯ ತಮ್ಮ ನಿವೇಶನದಲ್ಲಿ ಅಕ್ರಮವಾಗಿ ಕೊಳವೆ ಬಾವಿ ತೆರೆದು ನೀರು ಕಳ್ಳತನ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಆರೋಪಿಸಿದ್ದಾರೆ.

    6.10 ಲಕ್ಷ ಟ್ಯಾಂಕರ್ ನೀರು ಮಾರಾಟ:
    ಪಾಂಡ್ಯ ಈ ಕೊಳವೆಬಾವಿಗಳಿಗೆ ಪಂಪ್ ಜೋಡಿಸಿ, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡು ನೀರು ಎತ್ತಿದ್ದಾರೆ. ಮೇಲ್ಕೆತ್ತಿದ್ದ ನೀರನ್ನು ಟ್ಯಾಂಕರ್ ಮಾಲೀಕರಾದ ಅರುಣ್ ಮಿಶ್ರಾ, ಶ್ರವಣ್ ಮಿಶ್ರಾ ಮತ್ತು ಧೀರಜ್ ಮಿಶ್ರಾ ಎಂಬವರ ಮುಖಾಂತರ ಮಾರಾಟ ಮಾಡಿದ್ದಾರೆ. 2006ರಿಂದ 2017ರ ನಡುವೆ ಒಟ್ಟು 6.10 ಲಕ್ಷ ಲೀ. ಟ್ಯಾಂಕರ್ ನೀರು ಮಾರಿದ್ದಾರೆ ಎಂದು ಎಫ್‍ಐಆರ್ ದಾಖಲಾಗಿದೆ.

    ಒಂದು ಟ್ಯಾಂಕರ್ 10 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದೆ. ಮಾರುಕಟ್ಟೆಯಲ್ಲಿ ಗ್ರಾಹಕರು ಒಂದು ಟ್ಯಾಂಕರ್ ಅಂದಾಜು 12 ಸಾವಿರ ರೂ. ನೀಡಿ ಖರೀದಿಸುತ್ತಾರೆ. ಈ ಬಾವಿಗಳನ್ನು ಶಾಶ್ವತವಾಗಿ ಮುಚ್ಚುವಂತೆ ಹಸಿರು ನ್ಯಾಯಮಂಡಳಿ ಆದೇಶಿಸಿದೆ.