Tag: watermelon

  • ಸಂಕಷ್ಟದಲ್ಲಿದ್ದ ರೈತನ ಕಲ್ಲಂಗಡಿ ಖರೀದಿಸಿ ಬಡವರಿಗೆ ವಿತರಿಸಿದ ಉಪ್ಪಿ ಫ್ಯಾನ್ಸ್

    ಸಂಕಷ್ಟದಲ್ಲಿದ್ದ ರೈತನ ಕಲ್ಲಂಗಡಿ ಖರೀದಿಸಿ ಬಡವರಿಗೆ ವಿತರಿಸಿದ ಉಪ್ಪಿ ಫ್ಯಾನ್ಸ್

    ಬೀದರ್: ಲಾಕ್‍ಡೌನ್ ನಿಂದ ಬೆಳೆದ ಹಣ್ಣು, ತರಕಾರಿಯನ್ನು ಮಾರಾಟ ಮಾಡಲಾಗಿದೆ ರೈತರು ಸಂಕಷ್ಟಕ್ಕೆ ಸಿಲುಕಿರುವ ರೈತರ ಬೆನ್ನಿಗೆ ನಟ ರಿಯಲ್ ಸ್ಟಾರ್ ಉಪೇಂದ್ರ ನಿಂತಿದ್ದಾರೆ. ಉಪೇಂದ್ರ ಅಭಿಮಾನಿಗಳು ಸಂಕಷ್ಟದಲ್ಲಿದ್ದ ರೈತನ ಕಲ್ಲಂಗಡಿ ಖರೀದಿಸಿ, ಬಡವರಿಗೆ ವಿತರಿಸಿದ್ದಾರೆ.

    ಔರಾದ್ ತಾಲೂಕಿನ ರೈತ ಶಿವು ಮೊಕ್ತೆದಾರ್ ಬೆಳೆದ ಕಲ್ಲಂಗಡಿಯನ್ನು ಉಪೇಂದ್ರ ಖರೀದಿಸಿದ್ದರು. ಇಂದು ನಟ ಉಪೇಂದ್ರ ಅಭಿಮಾನಿಗಳು ಹಾಗೂ ಎನ್‍ಜಿಓ ಕನೆಕ್ಟ್ ನ ಸದಸ್ಯರು ನಗರದಲ್ಲಿ 5 ಟನ್ ಕಲ್ಲಂಗಡಿ ಹಂಚಿಕೆ ಮಾಡಿದ್ದಾರೆ. ನಟ ಉಪೇಂದ್ರ ಸೂಚನೆ ಮೇರೆಗೆ ಅವರ ಅಭಿಮಾನಿಗಳು ಬಡವರಿಗೆ, ನಿರ್ಗತಿಕರಿಗೆ, ಅಲೆಮಾರಿಗಳಿಗೆ ಕಲ್ಲಂಗಡಿ ಹಂಚಿಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಸಂಕಷ್ಟದಲ್ಲಿರುವ ರೈತನ ನೆರವಿಗೆ ನಿಲ್ಲುವ ಜೊತೆಗೆ ಬಡವರಿಗೆ ಕಲ್ಲಂಗಡಿ ಹಣ್ಣುಗಳು ಹಂಚಿಕೆ ಮಾಡಿ ರಿಯಲ್ ಸ್ಟಾರ್ ನಟ ಉಪೇಂದ್ರ ಸಾಮಾಜಿಕ ಕಳಕಳಿ ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ- ರೈತನ ಬೆನ್ನಿಗೆ ನಿಂತ ಉಪೇಂದ್ರ

  • ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ- ರೈತನ ಬೆನ್ನಿಗೆ ನಿಂತ ಉಪೇಂದ್ರ

    ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ಕಲ್ಲಂಗಡಿ ಬೆಳೆಗಾರ- ರೈತನ ಬೆನ್ನಿಗೆ ನಿಂತ ಉಪೇಂದ್ರ

    ಬೀದರ್: ಕೊರೊನಾ ಮಹಾಮಾರಿ ಅದೆಷ್ಟೋ ರೈತರ ಬದುಕನ್ನೇ ಕಿತ್ತುಕೊಂಡಿದೆ. ಸಾಲ ಮಾಡಿ ಬೆಳೆದ ಬೆಳೆಗೆ ಪ್ರತಿಫಲ ಸಿಗದೆ ಹಲವು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದೇ ರೀತಿ ರೈತರೊಬ್ಬರು ಕಲ್ಲಂಗಡಿ ಮಾರಾಟ ಮಾಡಲಾಗದೆ ಕಂಗಾಲಾಗಿದ್ದಾರೆ. ಇವರ ನೆರವಿಗೆ ಇದೀಗ ನಟ ಉಪೇಂದ್ರ ಧಾವಿಸಿದ್ದಾರೆ.

    ಜಿಲ್ಲೆಯ ಔರಾದ್ ತಾಲೂಕಿನ ತೇಗಂಪೂರ ಗ್ರಾಮದ ರೈತ ಶಿವು ಮೊಕ್ತೆದಾರ್ ಗೆ ನಟ ಉಪೇಂದ್ರ ಆರ್ಥಿಕ ವೆಚ್ಚದ ಭರವಸೆ ನೀಡಿದ್ದಾರೆ. ಒಟ್ಟು 2 ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಕಲ್ಲಂಗಡಿ ಮಾರಾಟ ಮಾಡಲಾಗಿದೆ ರೈತ ಕಂಗಾಲಾಗಿದ್ದರು. ರೈತನ ಆರ್ಥಿಕ ಸಂಕಷ್ಟದ ಬಗ್ಗೆ ಮಾಹಿತಿ ಪಡೆದ ನಟ ಉಪೇಂದ್ರ, ಆಪ್ತ ಸ್ನೇಹಿತ ರಾಜಾರಾಮ ಮೂಲಕ ಮಾತನಾಡಿಸಿ ಆರ್ಥಿಕ ಭರವಸೆ ನೀಡಿದ್ದಾರೆ. ನೀವು ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ. ನಿಮ್ಮ ಕಲ್ಲಂಗಡಿ ಹಣ್ಣು ಖರೀದಿ ಮಾಡಿ ನಿರ್ಗತಿಕರಿಗೆ, ಬಡವರಿಗೆ ಉಚಿತವಾಗಿ ಹಂಚಿಕೆ ಮಾಡುತ್ತೇವೆ ಎಂದು ಉಪೇಂದ್ರ ನೊಂದ ರೈತನ ಬೆನ್ನಿಗೆ ನಿಂತಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ನಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಕಂಗಾಲಾಗಿದ್ದೆ. ಈ ಸಮಯದಲ್ಲಿ ನಟ ಉಪೇಂದ್ರ ನನ್ನ ಖರ್ಚು ವೆಚ್ಚಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ನೊಂದ ರೈತ ಶಿವು ಮೊಕ್ತೆದಾರ್ ಉಪೇಂದ್ರ ಮತ್ತು ಅವರ ತಂಡಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ನಾಮಪತ್ರ ಸಲ್ಲಿಸಲು ಕಲ್ಲಂಗಡಿ ಹಣ್ಣನ್ನು ಹೊತ್ತುಕೊಂಡು ಬಂದ ವ್ಯಕ್ತಿ

    ನಾಮಪತ್ರ ಸಲ್ಲಿಸಲು ಕಲ್ಲಂಗಡಿ ಹಣ್ಣನ್ನು ಹೊತ್ತುಕೊಂಡು ಬಂದ ವ್ಯಕ್ತಿ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನವಷ್ಟೇ ಬಾಕಿ ಇದೆ. ಈ ನಡುವೆ ಪಕ್ಷೇತರ ಅಭ್ಯರ್ಥಿಯೋರ್ವ ಕಲ್ಲಂಗಡಿ ಹಣ್ಣನ್ನು ಹೊತ್ತುಕೊಂಡು ನಾಮಪತ್ರ ಸಲ್ಲಿಸಲು ಬಂದಿದ್ದಾನೆ. ಕ್ಷೇತ್ರದ ಸಾರ್ವಜನಿಕರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಈ ವ್ಯಕ್ತಿ ಕಲ್ಲಂಗಡಿ ಹಣ್ಣನ್ನು ಹೊತ್ತೊಕೊಂಡು ಬಂದಿರುವುದಾಗಿ ತಿಳಿಸಿದ್ದಾನೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಆತ, ತಾನು ನಾಮಪತ್ರ ಸಲ್ಲಿಸಲು ಕಲ್ಲಂಗಡಿ ಹಣ್ಣಿನೊಂದಿಗೆ ಬಂದಿದ್ದೇನೆ. ಇದು ನನ್ನ ಪಕ್ಷದ ಚುನಾವಣಾ ಚಿಹ್ನೆಯಾಗಿದೆ. ಈ ಒಂದೇ ಚಿಹ್ನೆಯನ್ನು ಬಳಸಿಕೊಂಡು ನಾನು ನಾಲ್ಕನೇಯ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಪಕ್ಷಗಳು ಬದಲಾವಣೆ ಮಾಡುವಂತೆ ಭರವಸೆ ನೀಡುತ್ತದೆ. ಸಿನಿಮಾ ನಟರು ಮತ್ತು ರಾಜಕಾರಣಿಗಳಲ್ಲಿ ಯಾವುದೇ ಬದಲಾವಣೆ ನೋಡಲು ಆಗುವುದಿಲ್ಲ. ನಮ್ಮಂತ ಜನರಿಗೆ ಅವಕಾಶ ನೀಡಬೇಕು ಎಂದು ಹೇಳಿದರು.

    ಚುನಾವಣೆ ಪ್ರಕಾರ ನಡೆಸಲು ನನ್ನ ಬಳಿ ಹಣವಿಲ್ಲ. ಮೊದಲನೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನನಗೆ 100 ಮತ ಬಂದಿತ್ತು. 2ನೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ 400 ಮತ ಗಳಿಸಿದ್ದೆ. ಆದರೆ ಈ ಬಾರಿ ಸುಮಾರು 10 ಸಾವಿರ ಮತ ಪಡೆಯುತ್ತೇನೆ ಎಂಬ ನಿರೀಕ್ಷೆ ಹೊಂದಿದ್ದೇನೆ. ಅಲ್ಲದೆ ಜನರು ಬೆಂಬಲಿಸಿದರೆ ನಾನು ಗೆದ್ದರು, ಗೆಲ್ಲುತ್ತೇನೆ ಎಂದು ನುಡಿದರು.

    ತಮಿಳುನಾಡು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 19ರ ಮಧ್ಯಾಹ್ನ 3 ಗಂಟೆಯವರೆಗೂ ಅವಕಾಶವಿದೆ. ಏಪ್ರಿಲ್ 6 ರಂದು ತಮಿಳನಾಡು ಚುನಾವಣೆ ನಡೆಯಲಿದ್ದು, ಮೇ 2 ರಂದು ಮತ ಏಣಿಕೆ ನಡೆಯಲಿದೆ.

  • ಕಲಬುರಗಿಯಲ್ಲಿ ಹಳದಿ ಕಲ್ಲಂಗಡಿ ಫುಲ್ ಫೇಮಸ್- ಯಲ್ಲೋ ವಾಟರ್‌ಮೆಲನ್‌ಗೆ ಭರ್ಜರಿ ಡಿಮ್ಯಾಂಡ್

    ಕಲಬುರಗಿಯಲ್ಲಿ ಹಳದಿ ಕಲ್ಲಂಗಡಿ ಫುಲ್ ಫೇಮಸ್- ಯಲ್ಲೋ ವಾಟರ್‌ಮೆಲನ್‌ಗೆ ಭರ್ಜರಿ ಡಿಮ್ಯಾಂಡ್

    ಕಲಬುರಗಿ: ಬೇಸಿಗೆ ಕಾಲ ಬಂದ್ರೆ ಸಾಕು ನಾವು ನೀವೆಲ್ಲ ಕೆಂಪ್ಪು ಬಣ್ಣದ ಕಲ್ಲಂಗಡಿಯ ಮೊರೆ ಹೋಗುತ್ತೇವೆ. ಆದರೆ ಕಲಬುರಗಿಯ ಓರ್ವ ಯುವಕ ವಿದೇಶಿ ತಳಿಯ ಹಳದಿ ಕಲ್ಲಂಗಡಿ ಬೆಳೆದು ಸೈ ಎನ್ನಿಸಿಕೊಂಡಿದ್ದಾನೆ.

    ಹೌದು. ಬೇಸಿಗೆ ಕಾವು ಹೆಚ್ಚಾಗ್ತಿದೆ. ಬೆಳಗ್ಗಿನಿಂದಲೇ ಸೂರ್ಯ ಶಿಕಾರಿ ಶುರುವಾಗುತ್ತೆ. ಬೇಸಿಗೆಯಲ್ಲಿ ದಾಹ ನೀಗಿಸೋದ್ರಲ್ಲಿ ಕಲ್ಲಂಗಡಿ ಹಣ್ಣಿಗೆ ಮೊದಲ ಸ್ಥಾನ. ಕಲ್ಲಂಗಡಿ ಅಂದ್ರೆ ಹಸಿರು- ಕೆಂಪು ಇರತ್ತೆ. ಆದರೆ ಹಳದಿ ಬಣ್ಣದ ಕಲ್ಲಂಗಡಿ ಅಂದ್ರೆ ನಂಬಲೇಬೇಕು. ಕಲಬುರಗಿಯ ಯುವಕ ಬೆಳೆದಿರೋ ಹಳದಿ ಬಣ್ಣದ ಕಲ್ಲಂಗಡಿ ಹಣ್ಣು ಫುಲ್ ಫೇಮಸ್ ಆಗಿದೆ.

    ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದ ನಿವಾಸಿ ಬಸವರಾಜ್ ಪಾಟೀಲ್ ಬಿ.ಕಾಂ ಪದವೀಧರ. ಆದರೂ ಕೃಷಿಯಲ್ಲಿ ಹೆಚ್ಚು ಉತ್ಸಾಹ ಇರೋದ್ರಿಂದ 2 ಎಕರೆ ಪ್ರದೇಶದಲ್ಲಿ ಮಲೇಷಿಯಾದಲ್ಲಿ ಬೆಳೆಯುವ ಹಳದಿ ಕಲ್ಲಂಗಡಿ ತಳಿಯ ಹಣ್ಣನ್ನು ಬೆಳೆದಿದ್ದಾರೆ. ಇದಕ್ಕೀಗ ಮಾರ್ಕೆಟ್‍ನಲ್ಲಿ ಈ ಹಣ್ಣಿಗೆ ಫುಲ್ ಡಿಮ್ಯಾಂಡ್ ಬಂದಿದೆ.

    ಹಳದಿ ಕಲ್ಲಂಗಡಿ ಹಣ್ಣು ತುಂಬಾ ರುಚಿಕರವಾಗಿದೆ. ಹೆಚ್ಚು ಇಳುವರಿ ಸಹ ಬರುತ್ತದೆ. ಕೆಂಪು ಕಲ್ಲಂಗಡಿ ಹೋಲ್‍ಸೆಲ್ ಪ್ರತಿ ಕೆ.ಜಿಗೆ 6 ರಿಂದ 8 ರೂಪಾಯಿವರೆಗೆ ಮಾರಾಟವಾದ್ರೆ, ಮಲೇಷಿಯಾ ತಳಿಯ ಈ ಹಳದಿ ಕಲ್ಲಂಗಡಿ ಕೆಜಿಗೇ 15 ರೂಪಾಯಿಗೆ ಮಾರಾಟವಾಗುತ್ತಿದೆ.

    ಸದ್ಯ ಕಲಬುರಗಿಯ ಈ ವಾಟರ್‍ಮೆಲನ್ ಹೈದಾರಾಬಾದ್, ಮುಂಬೈಯ ಮಾಲ್‍ಗಳಿಗೆ ಮಾರಾಟವಾಗುತ್ತಿದೆ. ಕೃಷಿಯಲ್ಲಿಯೇ ಮನಸ್ಸು ಮಾಡಿದ್ರೆ ಲಕ್ಷಾಂತರ ರೂಪಾಯಿ ಹೇಗೆ ಸಂಪಾದಿಸಬಹುದು ಎಂಬುದನ್ನ ಬಸವರಾಜ್ ತೋರಿಸಿಕೊಟ್ಟಿದ್ದಾರೆ.

  • ಕಲಬುರಗಿಯಲ್ಲಿ ಹಳದಿ ಬಣ್ಣದ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಯುವಕ

    ಕಲಬುರಗಿಯಲ್ಲಿ ಹಳದಿ ಬಣ್ಣದ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಯುವಕ

    ಕಲಬುರಗಿ: ಬೇಸಿಗೆ ಕಾಲದಲ್ಲಿ ಹೆಚ್ಚು ಬೇಡಿಕೆ ಇರುವ ಹಣ್ಣು ಕಲ್ಲಂಗಡಿ. ಸಾಧಾರಣ ಕೆಂಪು ಬಣ್ಣದ ಕಲ್ಲಂಗಡಿಯಯನ್ನು ಎಲ್ಲರೂ ನೋಡಿರುತ್ತಾರೆ. ಆದರೆ ಕಲಬುರಗಿಯ ಯುವಕನೋರ್ವ ಮಲೇಷಿಯಾ ದೇಶದ ಹಳದಿ ತಳಿಯ ಕಲ್ಲಂಗಡಿ ಬೆಳೆದು ಸೈ ಎನಿಸಿಕೊಂಡಿದ್ದಾನೆ.

    ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದ ಬಸವರಾಜ್ ಪಾಟೀಲ್ ಬಿ.ಕಾಂ ಪದವಿಧರನಾಗಿದ್ದರು. ಕೃಷಿಯಲ್ಲಿ ಏನಾದರು ಹೊಸತನವನ್ನು ಕಂಡು ಹಿಡಿದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಕೃಷಿಯತ್ತ ಮುಖ ಮಾಡಿದ್ದರು. ಬೇಸಿಗೆ ಕಾಲ ಸಮೀಪಿಸುತ್ತಿರುವ ಹಿನ್ನೆಲೆ ಅತೀ ಹೆಚ್ಚು ಮಾರಾಟವಾಗುವ ಕಲ್ಲಂಗಡಿ ಹಣ್ಣಿನಲ್ಲಿ ಹೊಸ ತಳಿಯ ಹಣ್ಣನ್ನು ಬೆಳೆಯಬೇಕು ಎಂದು ನಿರ್ಧರಿಸಿದ್ದರು. ಅದರಂತೆ ತನ್ನ ಸ್ನೇಹಿತರ ಜೊತೆ ಚರ್ಚಿಸಿ 2 ಎಕರೆ ಪ್ರದೇಶದಲ್ಲಿ ಮಲೇಷಿಯಾದಲ್ಲಿ ಬೆಳೆಯುವ ಹಳದಿ ಕಲ್ಲಂಗಡಿ ತಳಿಯ ಹಣ್ಣನ್ನು ಬೆಳೆದಿದ್ದಾರೆ. ಇದೀಗ ಈ ಹಣ್ಣು ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದ್ದು, ಮಾರುಕಟ್ಟೆಯಲ್ಲಿ ಹಳದಿ ಬಣ್ಣದ ಕಲ್ಲಂಗಡಿಗೆ ಫುಲ್ ಡಿಮ್ಯಾಂಡ್ ಬಂದಿದೆ.

    ಹಳದಿ ಬಣ್ಣದ ಕಲ್ಲಂಗಡಿ ಕೆಂಪು ಕಲ್ಲಂಗಡಿಗಿಂತ ಅತ್ಯಂತ ರುಚಿಕರವಾಗಿದೆ ಹಾಗೂ ಹೆಚ್ಚು ಇಳುವರಿ ಸಹ ಬರುತ್ತದೆ. ಕೆಂಪು ಕಲ್ಲಂಗಡಿ ಹೊಲ್‍ಸೇಲ್ ದರದಲ್ಲಿ ಪ್ರತಿ ಕೆಜಿಗೆ 6 ರಿಂದ 8 ರೂಪಾಯಿವರೆಗೆ ಮಾರಾಟವಾದರೆ, ಮಲೇಷಿಯಾ ತಳಿಯ ಈ ಹಳದಿ ಕಲ್ಲಂಗಡಿ ಪ್ರತಿ ಕೆಜಿಗೆ 15 ರೂಪಾಯಿ ಮಾರಾಟವಾಗುತ್ತಿದೆ. ಕಲಬುರಗಿಯ ಈ ಯುವಕ ಹಳದಿ ಕಲ್ಲಂಗಡಿ ಬೆಳೆದು ಯಶಸ್ಸು ಕಂಡಿದ್ದಾರೆ.

    ಸದ್ಯ ಕಲಬುರಗಿಯ ಈ ವಾಟರ್ ಮೆಲನ್ ಹೈದರಾಬಾದ್ ಹಾಗೂ ಮುಂಬೈ ನಗರಗಳಲ್ಲಿ ಮಾರಾಟವಾಗುತ್ತಿದೆ. ಇಂದಿನ ದಿನಗಳಲ್ಲಿ ಕೃಷಿ ಬಿಟ್ಟು ಉದ್ಯೋಗಕ್ಕಾಗಿ ಪಟ್ಟಣ ಸೇರಿ ಕೈ ಸುಟ್ಟುಕೊಳ್ಳುತ್ತಿರುವ ಯುವಕರಿಗೆ ಕಲಬುರಗಿಯ ಬಸವರಾಜ್ ಮಾದರಿಯಾಗಿದ್ದು, ಕೃಷಿಯಲ್ಲಿಯೇ ಮನಸ್ಸು ಮಾಡಿದ್ರೆ ಲಕ್ಷಾಂತರ ರೂಪಾಯಿ ಸಂಪಾದಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

  • ಕಲ್ಲಂಗಡಿ ಕೊಳ್ಳೋರಿಲ್ಲ, ಸೂಕ್ತ ಮಾರುಕಟ್ಟೆ ಕಲ್ಪಿಸಿ- ಸಿಎಂಗೆ ರೈತನ ಮನವಿಯ ವಿಡಿಯೋ ವೈರಲ್

    ಕಲ್ಲಂಗಡಿ ಕೊಳ್ಳೋರಿಲ್ಲ, ಸೂಕ್ತ ಮಾರುಕಟ್ಟೆ ಕಲ್ಪಿಸಿ- ಸಿಎಂಗೆ ರೈತನ ಮನವಿಯ ವಿಡಿಯೋ ವೈರಲ್

    ಚಾಮರಾಜನಗರ: ಕಲ್ಲಂಗಡಿ ಕೊಳ್ಳುವವರಿಲ್ಲದೆ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಗಡಿ ಜಿಲ್ಲೆ ಅನ್ನದಾತ ಸೂಕ್ತ ಮಾರುಕಟ್ಟೆ ಕಲ್ಪಿಸುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸಿಎಂ ಯಡಿಯೂರಪ್ಪ ಸರ್ಕಾರದ ನಡೆ ರೈತರ ಕಡೆ ಅಂತಾರೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯೂ ಕೂಡ ರೈತರ ಕಷ್ಟ ಆಲಿಸುತ್ತಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಷ್ಟಪಟ್ಟು ಬೆಳೆದ ಕಲ್ಲಂಗಡಿ ಹಣ್ಣನ್ನು ಕೇಳುವವರಿಲ್ಲದೆ. ಮಣ್ಣು ಪಾಲಾಗುತ್ತಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೆದ್ದನಪಾಳ್ಯ ಗ್ರಾಮದಲ್ಲೇ ಹತ್ತಾರು ಎಕರೆ ಕಲ್ಲಂಗಡಿ ಬೆಳೆಯಲಾಗಿದೆ. ಆದರೆ ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.a

    ಕೊರೊನಾ ಹಿನ್ನೆಲೆ ಕೈಗೆ ಬಂದ ಕಲ್ಲಂಗಡಿ ಬೆಳೆಯನ್ನು ಯಾರೂ ಕೇಳದಂತಾಗಿದೆ. ತಮಿಳುನಾಡು-ಚಾಮರಾಜನಗರ ಜಿಲ್ಲಾ ಗಡಿಯ ಪೆದ್ದನಪಾಳ್ಯ ಗ್ರಾಮದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಸುಮಾರು 15 ಎಕರೆ ಪ್ರದೇಶದಲ್ಲಿ ಲಕ್ಷಾಂತರ ರೂ.ಖರ್ಚು ಮಾಡಿ ಕಷ್ಟಪಟ್ಟು ಬೆಳೆದಿರುವ ಕಲ್ಲಂಗಡಿ ಹಣ್ಣುಗಳು ಈಗ ನೆಲಕಚ್ಚಿವೆ.

    ಕಟಾವಿಗೆ ಬಂದ ಕಲ್ಲಂಗಡಿ ಬೆಳೆಯನ್ನು ಕೊಂಡುಕೊಳ್ಳಲು ಯಾರು ಬರುತ್ತಿಲ್ಲ. ಮಾರುಕಟ್ಟೆ ವ್ಯವಸ್ಥೆಯೂ ಇಲ್ಲ, ಇದರಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ. ಕಳೆದ ಬಾರಿ ಸಹ ಕಲ್ಲಂಗಡಿಯನ್ನು ಮಣ್ಣು ಪಾಲು ಮಾಡಲಾಗಿತ್ತು. ಈ ಬಾರಿ ಇಳುವರಿ ಹೆಚ್ಚು ಬಂದಿದ್ದು, ಹಾಳು ಮಾಡಲು ಮನಸ್ಸಾಗುತ್ತಿಲ್ಲ. ಹೀಗಾಗಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • 30 ಟನ್ ಕಲ್ಲಂಗಡಿ, ಪೇರಳೆ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ ಸತೀಶ್ ಜಾರಕಿಹೊಳಿ

    30 ಟನ್ ಕಲ್ಲಂಗಡಿ, ಪೇರಳೆ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ ಸತೀಶ್ ಜಾರಕಿಹೊಳಿ

    ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರಿಂದ ಸರ್ಕಾರ ಹೇರಲಾದ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳೆ ಬೆಳೆದ ರೈತರ ಮಾರಲಾಗದೆ ಸಂಕಷ್ಟಕೀಡಾಗಿದ್ದು, ಇದೀಗ ರೈತರ ಬೆನ್ನಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಜಿಲ್ಲೆಯ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ನಿಂತಿದ್ದಾರೆ.

    ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಂಚಿದ್ದಾರೆ. ಯಮನಕಮರಡಿ ಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ರೈತ ಹಣುಮಂತ ಎಂಬವರು ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದ 30 ಟನ್ ಕಲ್ಲಂಗಡಿ ಹಾಗೂ ಪೇರಳೆ ಹಣ್ಣು ಖರೀದಿಸಿದ್ದಾರೆ.

    ಹೀಗೆ ಖರೀದಿಸಿದ ಹಣ್ಣುಗಳನ್ನು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ಯಮಕನಮರಡಿ ಹಾಗೂ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಹಂಚಲಾಗುವುದು. ಲಾಕ್ ಡೌನ್ ನಿಂದ ರೈತರು ಬೆಳೆದ ಫಸಲು ಮಾರಾಟ ಮಾಡಲಾಗದೆ ನಾಶಪಡಿಸುತ್ತಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಣ್ಣು, ತರಕಾರಿ ಖರೀದಿಸಿ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಪ್ರತಿಯೊಬ್ಬ ಜನಪ್ರತಿನಿಧಿಗಳು ಇದೇ ರೀತಿ ಮಾಡುವ ಮೂಲಕ ರೈತರ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ.

    ಮೇ 3ರ ಬಳಿಕ ಲಾಕ್ ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಬೇಕು. ಸಂಪೂರ್ಣ ಬಂದ್ ಮಾಡಲಾಗದು, ಕಾರ್ಖಾನೆ, ಕೃಷಿ ಚಟುವಟಿಕೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಪರೇಶಗೌಡ, ಹೆಬ್ಬಾಳ ಜಿಪಂ ಸದಸ್ಯ ಮಹಾಂತೇಶ ಮಗದುಮ, ಕಿರಣ ರಜಪೂತ, ಸುಧೀರ್ ಗಿರಿಗೌಡ, ಅಪ್ಪಾಗೌಡ ಪಾಟೀಲ್, ರಾಜು ಅವಟೆ ಸೇರಿದಂತೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

  • ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

    ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

    ಚಿಕ್ಕೋಡಿ (ಬೆಳಗಾವಿ): ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಈ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.

  • ರೈತರಿಂದ 70 ಸಾವಿರ ಕಲ್ಲಂಗಡಿ ಖರೀದಿಸಿ ಬಡವರಿಗೆ ನೀಡಿದ ಈಶ್ವರಪ್ಪ

    ರೈತರಿಂದ 70 ಸಾವಿರ ಕಲ್ಲಂಗಡಿ ಖರೀದಿಸಿ ಬಡವರಿಗೆ ನೀಡಿದ ಈಶ್ವರಪ್ಪ

    ಶಿವಮೊಗ್ಗ: ಕೊರೊನಾ ಮಹಾಮಾರಿ ಸೋಂಕು ರೈತರಿಗೂ ಬೆಂಬಿಡದೇ ಕಾಡುತ್ತಿದ್ದು, ತಾವು ಬೆಳೆದ ಬೆಳೆ, ಹಣ್ಣುಗಳನ್ನು ಮಾರಾಟ ಮಾಡಲಾಗದೇ ರೈತರು ಒದ್ದಾಡುತ್ತಿದ್ದಾರೆ. ಈ ವೇಳೆ ಸರ್ಕಾರವೇನಾದರೂ ಸಹಾಯ ಮಾಡಲಿ ಎಂದು ಗೋಗರೆಯುತ್ತಿದ್ದಾರೆ.

    ಈ ರೀತಿಯ ಸಂದರ್ಭದಲ್ಲಿ ಹಣ್ಣು ಬೆಳೆದ ಬೆಳೆಗಾರರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಬೆಂಬಲವಾಗಿ ನಿಂತಿದ್ದು, ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ತಾವೇ ಸ್ವಂತ ಹಣದಿಂದ ಖರೀದಿ ಮಾಡಿದ್ದಾರೆ. ಜೊತೆಗೆ ಇದನ್ನು ಸಾರ್ವಜನಿಕರಿಗೆ ವಿತರಿಸುವ ಕೆಲಸ ಕೂಡ ಮಾಡುತ್ತಿದ್ದಾರೆ.

    ಹಣ್ಣು ಬೆಳೆಗಾರರಿಗೆ ನಷ್ಟವುಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸಚಿವರು ತಾವೇ ಖರೀದಿಸಿ, ರೈತರ ಕೈ ಹಿಡಿದಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಹಣ್ಣು ಬೆಳೆಗಾರರು ವಿವಿಧ ಹಣ್ಣುಗಳನ್ನು ಬೆಳೆದು ಕೆಲವು ಕಡೆಗಳಲ್ಲಿ ನಾಶ ಮಾಡಿದ್ದರು. ಆದರೆ ಕೆಲವು ಭಾಗದಲ್ಲಿ ಕಲ್ಲಂಗಡಿ ಬೆಳೆದು ಮಾರಾಟ ಮಾಡಲಾಗದೆ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದ ಬೆಳಗಾರರಿಗೆ ಸಚಿವ ಈಶ್ವರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ವಿವಿಧ ಬೆಳೆಗಾರರಿಂದ ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ಖರೀದಿಸಿ ಮಾನವೀಯತೆ ಮೆರೆದಿದ್ದಾರೆ.

    ಅದರಂತೆ ಇಂದು ಈ ಹಣ್ಣುಗಳ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕೋಟೆ ಸೀತಾರಾಮಾಂಜನೇಯ ದೇವಾಲಯದ ಬಳಿ ಹಣ್ಣುಗಳು ತುಂಬಿದ್ದ ವಾಹನಗಳಿಗೆ ಚಾಲನೆ ನೀಡಿದರು. ನಗರದ 35 ವಾರ್ಡ್ ಗಳಿಗೆ ತೆರಳಿ ಅಲ್ಲಿನ ಅರ್ಹ ಬಡವರಿಗೆ ಈ ಹಣ್ಣನ್ನು ಉಚಿತವಾಗಿ ಹಂಚುವ ಕಾರ್ಯವನ್ನು ಇಂದು ಸಚಿವ ಈಶ್ವರಪ್ಪ ಮಾಡುತ್ತಿದ್ದಾರೆ.

  • ನಷ್ಟಕ್ಕೆ ಬೇಸತ್ತು ಕಲ್ಲಂಗಡಿ ಜಮೀನಿಗೆ ಕುರಿ ಬಿಟ್ಟು ಬೆಳೆ ಮೇಯಿಸಿದ ರೈತ

    ನಷ್ಟಕ್ಕೆ ಬೇಸತ್ತು ಕಲ್ಲಂಗಡಿ ಜಮೀನಿಗೆ ಕುರಿ ಬಿಟ್ಟು ಬೆಳೆ ಮೇಯಿಸಿದ ರೈತ

    ಹಾವೇರಿ: ಲಾಕ್‍ಡೌನ್‍ನಿಂದಾಗಿ ಜಮೀನಿನಲ್ಲಿ ಬೆಳೆದಿದ್ದ ಕಲ್ಲಂಗಡಿಯನ್ನ ಮಾರಾಟ ಮಾಡಲಾಗದೆ ರೈತರೊಬ್ಬರು ಜಮೀನಿಗೆ ಕುರಿ ಬಿಟ್ಟು ಬೆಳೆ ಮೇಯಿಸಿ ಬೆಳೆಯನ್ನು ನಾಶ ಮಾಡಿದ್ದಾರೆ.

    ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಪ್ಪರದಹಳ್ಳಿ ಗ್ರಾಮದ ಹನುಮಂತಪ್ಪ ಗೌಡರ ಅವರು ತಮ್ಮ ಎರಡು ಎಕ್ರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದಿದ್ದರು. 40 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ಹನುಮಂತಪ್ಪ ಅವರು ಕಲ್ಲಂಗಡಿ ಬೆಳೆದಿದ್ದರು. ಆದರೆ ಲಾಕ್‍ಡೌನ್‍ನಿಂದ ಉತ್ತಮ ಬೆಲೆಯೂ ಸಿಗದೆ, ಬೆಳೆದ ಕಲ್ಲಂಗಡಿ ಮಾರಾಟ ಮಾಡಲೂ ಆಗದೆ ರೈತ ಬೆಳೆ ನಾಶ ಮಾಡಿದ್ದಾರೆ.

    ಜಮೀನಿನಲ್ಲಿ ಬೆಳೆದಿದ್ದ ಕಲ್ಲಂಗಡಿಯನ್ನು ಗ್ರಾಮಸ್ಥರಿಗೆ ತೆಗೆದುಕೊಂಡು ಹೋಗಲು ಹೇಳಿ, ನಂತರ ಜಮೀನಿಗೆ ಕುರಿಗಳ ಹಿಂಡು ಬಿಟ್ಟು ಮೇಯಿಸೋ ಮೂಲಕ ಬೆಳೆ ನಾಶಪಡಿಸಿದ್ದಾರೆ. ಕಲ್ಲಂಗಡಿ ಉತ್ತಮ ಫಸಲು ಬಂದಿದ್ದರೂ ನಿರೀಕ್ಷಿಸಿದಷ್ಟು ಬೆಳೆಗೆ ದರ ಸಿಗದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿದ್ದಾರೆ.