Tag: Wayanad

  • ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವ

    ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವ

    – ಭೂಕುಸಿತದಿಂದ ತತ್ತರಿಸಿದ್ದ ಪ್ರದೇಶದಲ್ಲಿ ಮತ್ತೊಂದು ಭೀತಿ!

    ತಿರುವನಂತಪುರಂ: ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಭೂಕಂಪದ (Wayanad Earthquake) ಭೀತಿ ಎದುರಾಗಿದೆ. ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

    ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎನ್ನಲಾಗಿದೆ. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದರು. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.

    ಆರಂಭದಲ್ಲಿ ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಇದನ್ನೂ ಓದಿ: ಜಾಮೀನು ನಿರಾಕರಿಸುವ ಮೂಲಕ ಕೆಳ ಹಂತದ ನ್ಯಾಯಲಯಗಳು ಸುರಕ್ಷಿತ ಆಟವಾಡುತ್ತಿವೆ: ಸುಪ್ರೀಂ ಆಕ್ರೋಶ

    ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 225 ಜನರು ಸಾವನ್ನಪ್ಪಿದ್ದಾರೆ. 131 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ.

  • Wayanad Landslides | 7 ದಿನವಾದ್ರೂ ನಿಲ್ಲದ ಶೋಧ – 40 ಕಿಮೀ ಉದ್ದಕ್ಕೂ ಶವಗಳಿಗಾಗಿ ಹುಡುಕಾಟ

    Wayanad Landslides | 7 ದಿನವಾದ್ರೂ ನಿಲ್ಲದ ಶೋಧ – 40 ಕಿಮೀ ಉದ್ದಕ್ಕೂ ಶವಗಳಿಗಾಗಿ ಹುಡುಕಾಟ

    ವಯನಾಡು: ಇಲ್ಲಿ ಭೂಕುಸಿತ (Wayanad Landslides) ದುರಂತ ನಡೆದು ಏಳು ದಿನ ಕಳೆದಿದೆ. ಮೃತರ ಸಂಖ್ಯೆ 400 ದಾಟಿದೆ. ಇನ್ನೂ 250ಕ್ಕೂ ಹೆಚ್ಚು ಜನ ಪತ್ತೆಯಾಗಬೇಕಿದೆ. ಮುಂಡಕ್ಕೈ, ಚುರಲ್ಮಲದಲ್ಲಿ ಸೋಮವಾರವೂ(ಆ.5) ಶೋಧಕಾರ್ಯ ಮುಂದುವರಿದಿದೆ.

    ಚಲಿಯಾರ್ ನದಿ ವ್ಯಾಪ್ತಿಯ 40 ಕಿಲೋಮೀಟರ್ ಉದ್ದಕ್ಕೂ ಶವಗಳಿಗಾಗಿ ಹುಡುಕಾಟ ನಡೆದಿದೆ. ಕಾಂತನ್‌ಪಾರಾ ಬಳಿ ಅಪಾಯಕ್ಕೆ ಸಿಲುಕಿದ್ದ 18 ರಕ್ಷಣಾ ಸಿಬ್ಬಂದಿಯನ್ನ ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ.

    ಮಧ್ಯರಾತ್ರಿ ಗುಡ್ಡ ಕುಸಿತ ಸಂಭವಿಸುತ್ತಲೇ ಚುರುಲ್ಮಲದ (chooralmala) ನೀತು ಜೋಜೋ ಎಂಬಾಕೆ ಫೋನ್ ಮಾಡಿ ಸಹಾಯಕ್ಕೆ ಮೊರೆ ಇಟ್ಟಿದ್ರು. ಕೆಲವೇ ನಿಮಿಷ ನಿಮ್ಮನ್ನು ತಲುಪ್ತೀವಿ ಎಂದು ರಕ್ಷಣಾ ಪಡೆಗಳು ಭರವಸೆ ನೀಡಿದ್ವು. ಆದ್ರೆ, ಜಲಸ್ಫೋಟದ ತೀವ್ರತೆಯಿಂದ ಅವರನ್ನು ತಲುಪಲಾಗಲಿಲ್ಲ. ನಿನ್ನೆ ರಾತ್ರಿ ನೀತು ಅವರ ಶವ ಸಾವಿನ ದಿಬ್ಬದಲ್ಲಿ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೇಶ ತೊರೆದ ಶೇಖ್ ಹಸೀನಾಗೆ ಭಾರತ ಆಶ್ರಯ – ʻಮಹಾ ಪಲಾಯನʼ ಬೆನ್ನಲ್ಲೇ ಉದ್ರಿಕ್ತರಿಂದ ಸಂಭ್ರಮಾಚರಣೆ

    ಇನ್ನು, ಚುರಲ್ಮಲದಲ್ಲಿ 16 ಮಂದಿಯ ಕೂಡು ಕುಟುಂಬದಲ್ಲಿ ಈಗ ಒಬ್ಬರಷ್ಟೇ ಉಳಿದಿದ್ದಾರೆ. ಅದು ಅವರು ಬೇರೆ ಕಡೆ ಹೋಗಿದ್ದರಿಂದ ಜೀವಂತವಾಗಿದ್ದಾರೆ. ಅಂದಿನಿಂದ ತಮ್ಮವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈವರೆಗೂ ನಾಲ್ವರ ಶವಗಳಷ್ಟೇ ಸಿಕ್ಕಿವೆ. ಉಳಿದವರಿಗಾಗಿ ರಸೂಲ್ ಶೋಧ ಕಾರ್ಯ ಮಾಡ್ತಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ದುರಂತದಲ್ಲಿ ಬಚಾವ್ ಆದವರು ಬಿಕ್ಕಿ ಅಳುತ್ತಿದ್ದಾರೆ. ಮುಂದೆನು? ಎಲ್ಲಿಗ್ ಹೋಗೋದು? ನಮಗ್ಯಾರು ಗತಿ? ಅಂತ ದಿಕ್ಕು ತೋಚದಂತೆ ಕುಳಿತಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ – ಹೆಚ್‌ಡಿಡಿ ಬೇಸರ

  • Wayanad Landslides | ಸೂಚಿಪ್ಪಾರ ಫಾಲ್ಸ್‌ನಲ್ಲಿ 11 ಶವ ಪತ್ತೆ – ಕಣ್ಣಿಗೆ ರಾಚುತ್ತಿದೆ ಹೃದಯವಿದ್ರಾವಕ ದೃಶ್ಯ

    Wayanad Landslides | ಸೂಚಿಪ್ಪಾರ ಫಾಲ್ಸ್‌ನಲ್ಲಿ 11 ಶವ ಪತ್ತೆ – ಕಣ್ಣಿಗೆ ರಾಚುತ್ತಿದೆ ಹೃದಯವಿದ್ರಾವಕ ದೃಶ್ಯ

    ವಯನಾಡು: ಭೀಕರ ಭೂಕುಸಿತಕ್ಕೆ (Wayanad Landslides) ವಯನಾಡು ನಲುಗಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ಒಟ್ಟು ಮೃತರ ಸಂಖ್ಯೆ 350ರ ಗಡಿ ದಾಟಿದೆ. ಸೇನಾ ಕಾರ್ಯಾಚರಣೆ 6ನೇ ದಿನವಾದ ಭಾನುವಾರಕ್ಕೆ ಕಾಲಿಟ್ಟಿದ್ದು, ಘಟನಾ ಸ್ಥಳಗಳಲ್ಲಿ ಹೃದಯವಿದ್ರಾವಕ ದೃಶ್ಯಗಳು ಕಣ್ಣಿಗೆ ರಾಚುತ್ತಿವೆ.

    ಸೂಚಿಪ್ಪಾರ ಫಾಲ್ಸ್‌ನಲ್ಲಿ 11 ಶವ ಪತ್ತೆ:
    ದುರಂತ ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ವೇಳೆ ಕೇರಳದ ಸೂಚಿಪ್ಪಾರ ಫಾಲ್ಸ್‌ನಲ್ಲಿ (Soochipara Falls) 11 ಮೃತದೇಹಗಳು ಪತ್ತೆಯಾಗಿವೆ. ಮುಂಡಕ್ಕೈ ಹಾಗೂ ಚೂರುಲ್ಮಲದಿಂದ 5 ಕಿಮೀ ದೂರದಲ್ಲಿ ಫಾಲ್ಸ್ ಇದ್ದು, ಚಲಿಯಾರ್ ನದಿ ರಭಸವಾಗಿ ಹರಿದ ಪರಿಣಾಮ ಗ್ರಾಮದಲ್ಲಿದ್ದ ಕಾರು, ಸಿಲಿಂಡರ್, ಕುಕ್ಕರ್ ಸೇರಿ ಅನೇಕ ಗೃಹೋಪಯೋಗಿ ವಸ್ತುಗಳು ಕೂಡ ಕೊಚ್ಚಿಕೊಂಡು ಬಂದಿವೆ. ಅಷ್ಟರ ಮಟ್ಟಿಗೆ ಅಂದು ರಾತ್ರಿ ನೀರು ಹರಿದಿದೆ. ಈ ಹಿನ್ನಲೆಯಲ್ಲಿ ಫಾಲ್ಸ್ ಅಕ್ಕಪಕ್ಕದಲ್ಲಿಯೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶಿರಾಡಿಘಾಟ್‌ ಭೂಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿಯೇ ಕಾರಣ – ಕೇಂದ್ರಕ್ಕೆ ಮನವರಿಕೆ ಮಾಡುತ್ತೇವೆಂದ ಸಿಎಂ

    30 ಶವ ಪತ್ತೆ ಹಚ್ಚಿರುವ `ಡಿಕ್ಸಿʼ
    ಇನ್ನು ದುರಂತ ಸ್ಥಳ ಚೂರಲ್‌ಮಲ ಭಾಗದಲ್ಲಿ ಉತ್ತರ ಪ್ರದೇಶದ ಮೇರಠ್‌ನಿಂದ ಬಂದಿರುವ ಶ್ವಾನಗಳು ಮೃತದೇಹಗಳ ಹುಡುಕಾಟದಲ್ಲಿ ತೊಡಗಿವೆ. ಈಗಾಗಲೇ 30 ಶವಗಳನ್ನು ಪತ್ತೆ ಹಚ್ಚಿದ್ದು, ಡಿಕ್ಸಿ ಹೆಸರಿನ ಶ್ವಾನ ಇದಕ್ಕೆ ಎಕ್ಸ್‌ಪರ್ಟ್‌ ಆಗಿದೆ. ಈ ಮಧ್ಯೆ ಮುಂಡಕೈ ಗ್ರಾಮಕ್ಕೆ ನಟ ಹಾಗೂ ಸೇನಾಧಿಕಾರಿ ಮೋಹನ್ ಲಾಲ್ ಭೇಟಿ ನೀಡಿ ದುರಂತ ಸ್ಥಳ ವೀಕ್ಷಿಸಿದ್ದಾರೆ. ಇದನ್ನೂ ಓದಿ: ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ! 

  • ಪ್ರೀತಿಯ ಭಾರತೀಯ ಸೇನೆ..; ವಯನಾಡಲ್ಲಿ ರಕ್ಷಣೆಗೆ ನಿಂತ ಸೈನಿಕರಿಗೆ ಪುಟ್ಟ ಬಾಲಕ ಸೆಲ್ಯೂಟ್‌

    ಪ್ರೀತಿಯ ಭಾರತೀಯ ಸೇನೆ..; ವಯನಾಡಲ್ಲಿ ರಕ್ಷಣೆಗೆ ನಿಂತ ಸೈನಿಕರಿಗೆ ಪುಟ್ಟ ಬಾಲಕ ಸೆಲ್ಯೂಟ್‌

    – ನಾನೂ ಭಾರತೀಯ ಸೇನೆ ಸೇರ್ತೀನಿ: ಯೋಧರಿಗೆ 3ನೇ ತರಗತಿ ಬಾಲಕನ ಹೃದಯಸ್ಪರ್ಶಿ ಪತ್ರ

    ತಿರುವನಂತರಪುರಂ: ಭೂಕುಸಿತ ಪೀಡಿತ ಕೇರಳದ (Kerala) ವಯನಾಡ್‌ನಲ್ಲಿ (Wayanad) ಸೈನಿಕರ ರಕ್ಷಣಾ ಕಾರ್ಯಾಚರಣೆ ಮೆಚ್ಚಿ ಪುಟ್ಟ ಬಾಲಕನೊಬ್ಬ ಭಾರತೀಯ ಸೇನೆಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾನೆ.

    3ನೇ ತರಗತಿ ವಿದ್ಯಾರ್ಥಿ ಮಾಸ್ಟರ್‌ ರಾಯನ್‌, ಭಾರತೀಯ ಸೇನೆಗೆ (Indian Army) ಪತ್ರ ಬರೆದ ಹುಡುಗ. ಸೈನಿಕರ ರಕ್ಷಣಾ ಕಾರ್ಯಾಚರಣೆಯಿಂದ ಪ್ರೇರೇಪಿತನಾದ ಬಾಲಕ, ಮುಂದೊಂದು ದಿನ ತಾನೂ ಸೇನೆಗೆ ಸೇರಲು ಆಕಾಂಕ್ಷಿಯಾಗಿದ್ದೇನೆಂದು ಆಶಯ ವ್ಯಕ್ತಪಡಿಸಿದ್ದಾನೆ. ಇದನ್ನೂ ಓದಿ: ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ!

    ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು. ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು ಎಂದು ಮಲಯಾಳಂ ಭಾಷೆಯಲ್ಲಿ ಭಾರತೀಯ ಸೇನೆಗೆ ಬಾಲಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾನೆ.

    ಸಂತ್ರಸ್ತರ ಹಸಿವು ನೀಗಿಸುವ ಮತ್ತು ಸೇತುವೆಯನ್ನು ನಿರ್ಮಿಸುವ ವೀಡಿಯೊವನ್ನು ನಾನು ನೋಡಿದೆ. ಆ ದೃಶ್ಯವು ನನ್ನ ಎದೆಯಾಳಕ್ಕೆ ಇಳಿಯಿತು. ನಾನು ಮುಂದೊಂದು ದಿನ ಭಾರತೀಯ ಸೇನೆಗೆ ಸೇರಲು ಮತ್ತು ನನ್ನ ರಾಷ್ಟ್ರವನ್ನು ರಕ್ಷಿಸಲು ಆಶಿಸುತ್ತೇನೆ ಎಂದು ಬಾಲಕ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಇದನ್ನೂ ಓದಿ: Wayanad LandSlides | ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ರಾಹುಲ್‌

    ಬಾಲಕನ ಕೃತಜ್ಞತೆಗೆ ಪ್ರತಿಕ್ರಿಯಿಸಿರುವ ಭಾರತೀಯ ಸೇನೆ ಧನ್ಯವಾದ ತಿಳಿಸಿದೆ. ‘ಯುವ ಯೋಧನಿಗೆ’ ಧನ್ಯವಾದ ಎಂದಿದೆ. ನಿಮ್ಮ ಮನದಾಳದ ಮಾತುಗಳು ನಮ್ಮನ್ನು ಆಳವಾಗಿ ಮುಟ್ಟಿವೆ. ಸಂಕಷ್ಟದ ಸಮಯದಲ್ಲಿ, ನಾವು ಭರವಸೆಯ ದಾರಿದೀಪವಾಗಲು ಗುರಿ ಹೊಂದಿದ್ದೇವೆ. ನಿಮ್ಮ ಪತ್ರವು ಈ ಧ್ಯೇಯವನ್ನು ಪುನರುಚ್ಚರಿಸಿದೆ. ನಿಮ್ಮಂತಹ ವೀರರು ನಮ್ಮ ಕೈಲಾದದ್ದನ್ನು ನೀಡಲು ನಮಗೆ ಸ್ಫೂರ್ತಿ ನೀಡುತ್ತಾರೆ. ನೀವು ಸಮವಸ್ತ್ರವನ್ನು ಧರಿಸಿ ನಮ್ಮೊಂದಿಗೆ ನಿಲ್ಲುವ ದಿನಕ್ಕಾಗಿ ನಾವು ಕುತೂಹಲದಿಂದ ಕಾಯುತ್ತಿದ್ದೇವೆ. ಒಟ್ಟಾಗಿ, ನಾವು ನಮ್ಮ ದೇಶದ ಬಗ್ಗೆ ಹೆಮ್ಮೆಪಡುತ್ತೇವೆ. ಯುವ ಯೋಧರೇ, ನಿಮ್ಮ ಧೈರ್ಯ ಮತ್ತು ಸ್ಫೂರ್ತಿಗಾಗಿ ಧನ್ಯವಾದಗಳು ಎಂದು ಬಾಲಕನ ಪತ್ರಕ್ಕೆ ಭಾರತೀಯ ಸೇನೆ ಪ್ರತಿಕ್ರಿಯಿಸಿದೆ.

    ಮಂಗಳವಾರ ಮುಂಜಾನೆ ದೇವರ ನಾಡು ಕೇರಳದ ವಯನಾಡಿನಲ್ಲಿ ಸಂಭವಿಸಿದ ಅವಳಿ ಭೂಕುಸಿತಕ್ಕೆ 200ಕ್ಕೂ ಹೆಚ್ಚು ಜನರು ಬಲಿಯಾದರು. ಸಾವಿನ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಭಾರತೀಯ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಸಿಬ್ಬಂದಿಯಲ್ಲಿ 500 ಕ್ಕೂ ಹೆಚ್ಚು ಸೈನಿಕರನ್ನು ಹೊಂದಿರುವ ಸೇನಾ ತಂಡಗಳು ಭೂಕುಸಿತದಿಂದ ಹಾನಿಗೊಳಗಾದ ಭಾಗಗಳಲ್ಲಿ ರಕ್ಷಣಾ ಕಾರ್ಯ ಕೈಗೊಂಡಿವೆ. ಇದನ್ನೂ ಓದಿ: Wayanad Landslides | ಪ್ರತಿ ವರ್ಷ ಮೆಪ್ಪಾಡಿಯಲ್ಲಿ ತಲೆ ಎತ್ತುತ್ತಿವೆ 380 ಹೊಸ ಕಟ್ಟಡಗಳು

  • ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ!

    ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ!

    – 20 ಅಡಿ ಆಳದಲ್ಲಿ ಹೂತುಹೋಗಿರುವ ಗ್ರಾಮ, 340ರ ಗಡಿ ದಾಟಿದ ಸಾವಿನ ಸಂಖ್ಯೆ

    ವಯನಾಡು: ಭೀಕರ ಭೂಕುಸಿತಕ್ಕೆ (Wayanad Landslides) ದೇವರನಾಡೇ ನಲುಗಿ ಹೋಗಿದೆ. ಸಾವಿನ ಸುರಿʻಮಳೆʼಗೆ ವಯನಾಡಲ್ಲಿ ಮೃತರ ಸಂಖ್ಯೆ 340ರ ಗಟಿ ದಾಟಿದ್ದು, 5ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದೆ. ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರೇ (Doctors) ಸುಸ್ತಾಗಿದ್ದಾರೆ. ಘಟನಾ ಸ್ಥಳಗಳಲ್ಲಿ ಹೃದಯವಿದ್ರಾವಕ ದೃಶ್ಯಗಳು ಕಣ್ಣಿಗೆ ರಾಚುತ್ತಿವೆ.

    ಭೂಕುಸಿತ, ಪ್ರವಾಹಕ್ಕೆ ಛಿದ್ರಗೊಂಡಿರುವ ದೇಹಗಳು ಘಟನೆಯ ಭೀಕರತೆ ಬಿಚ್ಚಿಡುತ್ತಿವೆ. ಚಲಿಯಾರ್ ನದಿಯಲ್ಲೇ 135ಕ್ಕೂ ಹೆಚ್ಚು ದೇಹಗಳ ಅಂಗಾಂಗಳು ಪತ್ತೆಯಾಗಿವೆ. ಯಾರ ದೇಹ ಯಾರದ್ದು ಅನ್ನೋದೇ ತಿಳಿಯದಂತಹ ಪರಿಸ್ಥಿತಿ. ಪ್ರವಾಹದ (Flood) ರಭಸಕ್ಕೆ ದೇಹಗಳು ನಜ್ಜುಗುಜ್ಜಾಗಿ ಹೋಗಿವೆ. ದುರಂತ ಸ್ಥಳದ ಒಂದೊಂದು ದೃಶ್ಯಗಳು ಕಣ್ಣೀರು ತರಿಸುತ್ತೆ.

    ಮುಂಡಕ್ಕೈ, ಚೂರಲ್‌ಮಲದಲ್ಲಿ (Chooralmala) ಸೇನಾ ಕಾರ್ಯಾಚರಣೆ 5ನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ (ಆ.3ರಂದು) ಸಹ 3 ಸಾವಿರ ಜನರು ಶವಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಬಂಡೆಗಳ ಕೆಳಗೆ, ಕೆಸರು, ಕಾಡಿನ ಅಂಚಿನಲ್ಲಿ ಶೋಧ ನಡೆಸ್ತಿದ್ದು, 50ಕ್ಕೂ ಹೆಚ್ಚು ಜೆಸಿಬಿಗಳು ಕಾರ್ಯಾಚರಣೆಗಿಳಿದಿವೆ. ಕೆಲ ಗ್ರಾಮಗಳು 20 ಅಡಿ ಆಳದಲ್ಲಿ ಹೂತು ಹೋಗಿರುವ ಕಾರಣ ಅಲ್ಲಿಂದ ಶವಗಳ ಹೊರ ತೆಗೆಯಲು ಭಾರೀ ಸಂಖ್ಯೆಯಲ್ಲಿ ಜೆಸಿಬಿಗಳ ಬಳಸಲಾಗುತ್ತಿದೆ. ನಾಪತ್ತೆಯಾಗಿರುವ 250ಕ್ಕೂ ಹೆಚ್ಚು ಜನರಿಗಾಗಿ ಶೋಧ ಕಾರ್ಯ ಭರದಿಂದ ಸಾಗುತ್ತಿದೆ.

    Wayanad landslides

    30 ಶವ ಪತ್ತೆ ಹಚ್ಚಿರುವ `ಡಿಕ್ಸಿʼ:
    ಇನ್ನು ದುರಂತ ಸ್ಥಳ ಚೂರಲ್‌ಮಲ ಭಾಗದಲ್ಲಿ ಉತ್ತರ ಪ್ರದೇಶದ ಮೇರಠ್‌ನಿಂದ ಬಂದಿರುವ ಶ್ವಾನಗಳು ಮೃತದೇಹಗಳ ಹುಡುಕಾಟದಲ್ಲಿ ತೊಡಗಿವೆ. ಈಗಾಗಲೇ 30 ಶವಗಳನ್ನು ಪತ್ತೆ ಹಚ್ಚಿದ್ದು, ಡಿಕ್ಸಿ ಹೆಸರಿನ ಶ್ವಾನ ಇದಕ್ಕೆ ಎಕ್ಸ್‌ಪರ್ಟ್‌ ಆಗಿದೆ. ಈ ಮಧ್ಯೆ ಮುಂಡಕೈ ಗ್ರಾಮಕ್ಕೆ ನಟ ಹಾಗೂ ಸೇನಾಧಿಕಾರಿ ಮೋಹನ್ ಲಾಲ್ ಭೇಟಿ ನೀಡಿ ದುರಂತ ಸ್ಥಳ ವೀಕ್ಷಿಸಿದ್ದಾರೆ.

    ಕೇರಳದ (Kerala) ವಯನಾಡಿನಲ್ಲಿ ಭಯಾನಕ ಭುಕುಸಿತ ಸಂಭವಿಸಿ 5 ದಿನವಾದರೂ ಸಾವಿನ ಕೇಕೆ, ಸಂತ್ರಸ್ತರ ಆಕ್ರಂದನ ನಿಂತಿಲ್ಲ. ಈ ನಡುವೆ ಗುಡ್ಡ ಕುಸಿತವಾದ ಮೊದಲ ಸ್ಥಳದ ದೃಶ್ಯಗಳು ಡ್ರೋನ್ ಕಣ್ಣಲ್ಲಿ ಸೆರೆಯಾಗಿವೆ. ಬೆಟ್ಟದ ಮೇಲಿನಿಂದ ಭೂಕುಸಿತ ಆರಂಭವಾಗಿತ್ತು. ಬೆಟ್ಟದ ಸಾಲುಗಳಿಂದ ನೀರು ಹರೀತಿದೆ. ಅಕ್ಕ-ಪಕ್ಕ ಹಸಿರಿನ ರಾಶಿಯನ್ನೇ ಆವರಿಸಿರುವ ಬೆಟ್ಟ ಸಾವಿನ ಗುಡ್ಡವಾಗಿ ಪರಿಣಮಿಸಿದ ಆರಂಭದ ದೃಶ್ಯಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ಇನ್ನೂ ವಯನಾಡಿನಲ್ಲಿ ಮತ್ತೆ ಭಾರೀ ಮಳೆಯ ಆತಂಕ ಎದುರಾಗಿದ್ದು, ವಯನಾಡು, ಕೋಝಿಕ್ಕೋಡ್, ಕಣ್ಣೂರು ಕಾಸರಗೋಡು ಜಿಲ್ಲೆಗಳಲ್ಲಿ ಆಗಸ್ಟ್ 7ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಸಹಿತ 65 ಮಿಲಿಮೀಟರ್‌ನಿಂದ 115 ಮಿಲಿಮೀಟರ್‌ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

  • Wayanad Landslides- ಸೇನಾ ಸಮವಸ್ತ್ರ ಧರಿಸಿ ಕಾರ್ಯಾಚರಣೆ ಸ್ಥಳಕ್ಕೆ ಬಂದ ನಟ ಮೋಹನ್ ಲಾಲ್

    Wayanad Landslides- ಸೇನಾ ಸಮವಸ್ತ್ರ ಧರಿಸಿ ಕಾರ್ಯಾಚರಣೆ ಸ್ಥಳಕ್ಕೆ ಬಂದ ನಟ ಮೋಹನ್ ಲಾಲ್

    ಲಯಾಳಂ ಸಿನಿಮಾ ರಂಗದ ಖ್ಯಾತ ನಟ ಮೋಹನ್ ಲಾಲ್‍ (Mohanlal) ಸೇನಾ ಸಮವಸ್ತ್ರ ಧರಿಸಿ ವಯನಾಡಿನ ದುರಂತ ಸ್ಥಳಕ್ಕೆ ಬಂದಿದ್ದಾರೆ. ಸೇನಾ ಶಿಬಿರಕ್ಕೆ ಮೊದಲು ಆಗಮಿಸಿದ್ದ ಮೋಹನ್ ಲಾಲ್‍ ಆರ್ಮಿ (Army)  ಮಾಡ್ತಿರೋ ಕೆಲಸವನ್ನು ಶ್ಲ್ಯಾಘಿಸಿದ್ದಾರೆ. ಜೊತೆಗೆ ಹಾನಿಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ನಡೆಯುತ್ತಿರುವ ಕಾರ್ಯಚರಣೆಯನ್ನು ವೀಕ್ಷಿಸಿದ್ದಾರೆ.

    ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರೋ ಮೋಹನ್ ಲಾಲ್, ತನ್ನದೇ ಸೇನೆ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ಸೇನಾ ಸಮವಸ್ತ್ರದಲ್ಲೇ ಆಗಮಿಸಿದ್ದರು. ಅಲ್ಲಿನ ಸೇನಾ ಮುಖ್ಯಸ್ಥರು ಮತ್ತು ಸೈನಿಕರ ಕೆಲಸವನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಜೊತೆಗೆ ವಯನಾಡಿನ ನೋವಿಗೆ ವೈಯಕ್ತಿಕವಾಗಿ ಸ್ಪಂದಿಸುವ ಕುರಿತು ಅವರು ಮಾತನಾಡಿದ್ದಾರೆ.

    ಈಗಾಗಲೇ ಮೂರು ಕೋಟಿಗೂ ಅಧಿಕ ಹಣವನ್ನು ಪರಿಹಾರ ನಿಧಿಗೆ ನೀಡಿರುವ ಮೋಹನ್ ಲಾಲ್, ಇನ್ನೂ ಸಹಾಯ ಮಾಡುವುದಾಗಿಯೂ ಹೇಳಿಕೊಂಡಿದ್ದಾರೆ. ದುರಂತದಲ್ಲಿ ಮಡಿದ ಕುಟುಂಬಗಳಿಗೆ ಧೈರ್ಯ ಹೇಳುವಂತಹ ಕೆಲಸವನ್ನೂ ಮೋಹನ್ ಲಾಲ್ ಮಾಡಿದ್ದಾರೆ. ಮೋಹನ್ ಲಾಲ್ ಕಾರ್ಯಕ್ಕೆ ಸಾಕಷ್ಟು ಜನರು ಶ್ಲ್ಯಾಘನೆ ವ್ಯಕ್ತ ಪಡಿಸಿದ್ದಾರೆ.

    ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ.

     

    ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ. ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

  • ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ

    ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ

    ಕೇರಳ/ವಯನಾಡು: ವಯನಾಡು ಭೀಕರ ಭೂಕುಸಿತದಿಂದ (Wayanad Landslides) ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ ಸುಜಾತ ಹಾಗೂ ಕುಟುಂಬಕ್ಕೆ ಇಡೀ ರಾತ್ರಿ ಕಾವಲಾಗಿತ್ತು. ಇದು ಆಶ್ಚರ್ಯ ಎನಿಸಿದರು ಸತ್ಯ. ಈ ಕುರಿತು ಖುದ್ದು ಸುಜಾತ ಅವರೇ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ.

    ವಯನಾಡು ಭೂಕುಸಿತದಲ್ಲಿ ಇಡೀ ಊರಿಗೆ ಊರೇ ಮಣ್ಣು ಪಾಲಾದರೂ ಈ ಕುಟುಂಬ ಬದುಕಿದ್ದು ಮಾತ್ರ ರೋಚಕ. ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಗಜರಾಜ ಕಾವಲಾಗಿ ನಿಂತಿದ್ದಾನೆ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಆಡಿಯೋದಲ್ಲಿ ಏನಿದೆ?
    ರಾತ್ರಿ 4 ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.

    ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ ತಿಳಿಸಿದ್ದಾರೆ.

  • ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ!

    ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ!

    ಕೇರಳ: ವಯನಾಡ್‌ನಲ್ಲಿ (Wayanad Landslide) ಸರಣಿ ಭೂಕುಸಿತಕ್ಕೆ ಅಪಾರ ಪ್ರಮಾಣದ ಜೀವ ಹಾನಿಯಾಗಿದೆ. ಮುಂಡಕ್ಕೈನಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು, ಮುಂಡಕ್ಕೈ ಮತ್ತು ಚೂರಲ್ಮಾಲಕ್ಕೆ ಭಾರತೀಯ ಸೇನೆಯಿಂದ ತಾತ್ಕಾಲಿಕ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.

    ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. 20 ಘಂಟೆಯಲ್ಲಿ 190 ಅಡಿ ಬೈಲಿ ಸೇತುವೆಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಮೇಜರ್ ಸೀತಾ ಅಶೋಕ್ ಶೆಲ್ಕೆ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್, ಬೆಂಗಳೂರಿನಿಂದ ಈ ಸೇತುವೆ ನಿರ್ಮಾಣವಾಗಿತ್ತು. ಭಾರತೀಯ ಸೇನೆ ಕರ್ನಾಟಕ-ಕೇರಳ ಉಪ ವಿಭಾಗದ 200ಕ್ಕೂ ಹೆಚ್ಚು ಸೈನಿಕರು ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾಗಿದ್ದರು. ಸೀತಾ ಅಶೋಕ್ ಶೆಲ್ಕೆ, ಬ್ರಿಡ್ಜ್ ಆಪರೇಷನ್‌ನ ನೇತೃತ್ವ ವಹಿಸಿಕೊಂಡಿದ್ದರು.

    ಬುದುವಾರ ರಾತ್ರಿ 9:30 ಕ್ಕೆ ಆರಂಭವಾಗಿ ಗುರುವಾರ ಸಂಜೆ 5:30ಕ್ಕೆ ಬ್ರಿಡ್ಜ್ ಕಾಮಗಾರಿ ಮುಗಿದಿತ್ತು. ಕೆಲವೇ ಗಂಟೆಗಳಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ, ಮುಂಡಕ್ಕೈ ಚೂರಾಲ್ಮಾಲ ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಯ್ತು. ಇನ್ನೂ ದೆಹಲಿ, ಬೆಂಗಳೂರಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ 17 ಟ್ರಕ್‌ಗಳ ಮೂಲಕ ವಯನಾಡ್‌ಗೆ ಸೇತುವೆ ನಿರ್ಮಾಣಕ್ಕೆ ಸಾಮಗ್ರಿಗಳನ್ನ ತರಲಾಗಿತ್ತು. ಇದನ್ನೂ ಓದಿ: Wayanad Landslide | ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ: ವಿಜ್ಞಾನಿಗಳಿಗೆ ಕೇರಳ ಸರ್ಕಾರ ನಿರ್ಬಂಧ

  • Wayanad Landslide | ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ: ವಿಜ್ಞಾನಿಗಳಿಗೆ ಕೇರಳ ಸರ್ಕಾರ ನಿರ್ಬಂಧ

    Wayanad Landslide | ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ: ವಿಜ್ಞಾನಿಗಳಿಗೆ ಕೇರಳ ಸರ್ಕಾರ ನಿರ್ಬಂಧ

    – ಟೀಕೆ ವ್ಯಕ್ತವಾಗುತ್ತಿದ್ದಂತೆ ಆದೇಶ ಹಿಂಪಡೆದ ಸರ್ಕಾರ

    ತಿರುವನಂತಪುರಂ: ವಯನಾಡ್ ಭೂಕುಸಿತದ (Wayanad Landslide) ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ಅಧ್ಯಯನ ವರದಿಗಳನ್ನು ಸರ್ಕಾರದ ಅನುಮತಿ ಇಲ್ಲದೇ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಕೇರಳ ಸರ್ಕಾರ (Government of Kerala) ವಿಜ್ಞಾನಿಗಳಿಗೆ (Scientist) ನಿರ್ಬಂಧ ಹೇರಿದೆ.

    ರಾಜ್ಯ ಪರಿಹಾರ ಆಯುಕ್ತ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿಕು ಬಿಸ್ವಾಲ್ ಅವರು ಕೇರಳದ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗಳಿಗೆ ವಿಪತ್ತು ಎಂದು ಗುರುತಿಸಲಾಗಿರುವ ವಯನಾಡಿನ ಮೆಪ್ಪಾಡಿ ಪಂಚಾಯತ್‌ ವ್ಯಾಪ್ತಿಯ ಜಾಗಗಳಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿದ್ದಾರೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ರಾಜ್ಯ ಮತ್ತು ದೇಶದಲ್ಲಿರುವ ವಿಜ್ಞಾನಿಗಳು ಈ ಜಲಪ್ರಳಯಕ್ಕೆ ಅರಣ್ಯ ನಾಶ, ಗಣಿಗಾರಿಕೆ, ಹವಾಮಾನ ಬದಲಾವಣೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಂತೆ ಕೇರಳ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇದನ್ನೂ ಓದಿ: 206 ಮಂದಿ ನಾಪತ್ತೆ – ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಶೋಧ ಕಾರ್ಯ

    ಸಾಮಾಜಿಕ ಜಾಲತಾಣದಲ್ಲಿ ಈ ಆದೇಶಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕೇರಳ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆದಿದೆ.

  • ಬೆಂಗಳೂರಿನಿಂದ  ವಯನಾಡಿಗೆ ಬಸ್ಸು ಸಂಚಾರ ಆರಂಭ

    ಬೆಂಗಳೂರಿನಿಂದ ವಯನಾಡಿಗೆ ಬಸ್ಸು ಸಂಚಾರ ಆರಂಭ

    ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ (Satellite Bus Stand) ಪ್ರವಾಹ ಪೀಡಿತ ವಯನಾಡಿಗೆ (Wayanad LandSlide) ಬಸ್ ಸಂಚಾರ (Bus Service) ಗುರುವಾರ ರಾತ್ರಿಯಿಂದ ಆರಂಭವಾಗಿದೆ.

    ಕೇರಳ ರಾಜ್ಯ ರಸ್ತೆ ಸಾರಿಗೆಯ 5 ಬಸ್ಸುಗಳ ಸಂಚಾರ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಪ್ರತಿ ಗಂಟೆಗೆ ಒಂದು ಬಸ್ಸು ಹೊರಡುತ್ತಿದೆ. ಒಟ್ಟು 23 ಬಸ್ಸುಗಳು ಕಾರ್ಯಾಚರಣೆ ಮಾಡಲಿದೆ.  ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

     

    ಮೈಸೂರು-ಸುಲ್ತಾನ್ ಬತ್ತೇರಿ ಮಾರ್ಗ ಮತ್ತು ಮೈಸೂರು – ಮಾನಂದವಾಡಿ ಮಾರ್ಗದ ಮೂಲಕ ಬಸ್ಸುಗಳು ವಯನಾಡಿಗೆ ತೆರಳುತ್ತಿವೆ. ಇಂದು ಮತ್ತು ನಾಳೆ ಕಾರ್ಯಾಚರಣೆ ಮಾಡಲಿರುವ ಬಸ್ಸುಗಳ ಎಲ್ಲಾ ಸೀಟ್‌ಗಳು ಬುಕ್‌ ಆಗಿವೆ. ಇದನ್ನೂ ಓದಿ: 206 ಮಂದಿ ನಾಪತ್ತೆ – ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಶೋಧ ಕಾರ್ಯ