Tag: Wayanad

  • ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರೋ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್‌ ಕೇಸ್‌

    ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರೋ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್‌ ಕೇಸ್‌

    ತಿರುವನಂತಪುರಂ: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿರುವ ಕೆ.ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ.

    ಶಾಸನಬದ್ಧ ಅವಶ್ಯಕತೆಗಳ ಭಾಗವಾಗಿ, ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಪ್ರಕರಣಗಳ ವಿವರಗಳನ್ನು ಮೂರು ಪುಟಗಳಲ್ಲಿ ಪ್ರಕಟಿಸಿದ್ದರು. ಸುರೇಂದ್ರನ್‌ ಬಿಜೆಪಿ ರಾಜ್ಯಾಧ್ಯಕ್ಷರೂ ಹೌದು. ಅದೇ ರೀತಿ, ಬಿಜೆಪಿ ಪಕ್ಷದ ಎರ್ನಾಕುಲಂ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ.

    ಹೆಚ್ಚಿನ ಪ್ರಕರಣಗಳು 2018 ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿವೆ. ಈ ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಪಕ್ಷದ ಮುಖಂಡರು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ತಿಳಿಸಿದ್ದಾರೆ.

    ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ವಿವರಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ. ಏತನ್ಮಧ್ಯೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಶುಕ್ರವಾರ ಸುರೇಂದ್ರನ್, ರಾಧಾಕೃಷ್ಣನ್, ಪಕ್ಷದ ಅಲಪ್ಪುಳದ ಅಭ್ಯರ್ಥಿ ಶೋಭಾ ಸುರೇಂದ್ರನ್ ಮತ್ತು ವಟಕರ ಅಭ್ಯರ್ಥಿ ಪ್ರಫುಲ್ ಕೃಷ್ಣ ವಿರುದ್ಧದ ಪ್ರಕರಣಗಳ ವಿವರಗಳನ್ನು ಟ್ವೀಟ್ ಮಾಡಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ ಎಂದು ಕೇರಳ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಬಿಜೆಪಿ ರಾಜ್ಯ ಮುಖ್ಯಸ್ಥರ ವಿರುದ್ಧದ ಪ್ರಕರಣಗಳ ವಿವರವನ್ನು ನೀಡಿದ ಕುರಿಯನ್, ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ 237 ಮತ್ತು ಕೇರಳದಲ್ಲಿ ವಿವಿಧ ಆಂದೋಲನಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.

  • ರಾಗಾ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್‌ ಸ್ಪರ್ಧೆ – ಕಾಂಗ್ರೆಸ್‌ ಭದ್ರಕೋಟೆ ಛಿದ್ರವಾಗುತ್ತಾ?

    ರಾಗಾ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್‌ ಸ್ಪರ್ಧೆ – ಕಾಂಗ್ರೆಸ್‌ ಭದ್ರಕೋಟೆ ಛಿದ್ರವಾಗುತ್ತಾ?

    ತಿರುನಂತಪುರಂ: 2024ರ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಫಿಕ್ಸ್‌ ಆಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ (Rahul Gandhi) ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು (Wayanad) ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

    ಅಮೇಥಿಯಲ್ಲಿ ಸೋಲು ಕಂಡಿದ್ದ ರಾಗಾ:
    2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ಸೋಲು ಕಂಡಿದ್ದ ರಾಗಾ, ವಯನಾಡಿನಲ್ಲಿ ಗೆದ್ದಿದ್ದರು. ಇದನ್ನೂ ಓದಿ: ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ

    4 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು:
    ಇದೇ ಸಮಯಕ್ಕೆ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ (ಶೇಕಡವಾರು ಮತ 39.5%) ಗೆಲುವು ಸಾಧಿಸಿದ್ದರು. ಕೇರಳದ ಜನತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal), ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇದನ್ನೂ ಓದಿ: ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ, ಷರತ್ತುಗಳಿಲ್ಲದೇ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ

    ಕೆ. ಸುರೇಂದ್ರನ್‌ ಯಾರು?
    ಬಿಜೆಪಿಯ ನಿಷ್ಠಾವಂತ ಕಾರ್ಯರ್ತರಾಗಿದ್ದ ಕೆ. ಸುರೇಂದ್ರನ್‌ 2020ರಲ್ಲಿ ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾದರು. 2019 ರಲ್ಲಿ, ಸುರೇಂದ್ರನ್ ಪತ್ತನಂತಿಟ್ಟದಿಂದ ಚುನಾವಣೆಗೆ ಸ್ಪರ್ಧಿಸಿದ್ದರು, ಆದರೆ ಯಶಸ್ವಿಯಾಗಲಿಲ್ಲ. 2018ರಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುರೇಂದ್ರನ್ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಬಾರಿ ಕೇರಳದಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಅವರನ್ನು ರಾಹುಲ್‌ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಲೋಕಸಭಾ ಚುನಾವಣೆ ಹಿನ್ನೆಲೆ 17 ರಾಜ್ಯಗಳ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ನಾಯಕರು, ಕೋರ್ಟ್‌ ಮಾಜಿ ನ್ಯಾಯಾಧೀಶರು, ಸಿನಿಮಾ ರಂಗದ ತಾರೆಯರು ಹಾಗೂ ವಾಣಿಜ್ಯ ಉದ್ಯಮಿಗಳಿಗೂ ಪಕ್ಷ ಟಿಕೆಟ್‌ ನೀಡಿದೆ. ಇದನ್ನೂ ಓದಿ: ಹೋಳಿ ಹಬ್ಬದಂದು ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಾರೀ ಅಗ್ನಿ ದುರಂತ – 14 ಅರ್ಚಕರಿಗೆ ಗಾಯ

  • Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

    Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

    – ಕೇರಳದಲ್ಲೇ ಘಟಾನುಘಟಿಗಳ ಸ್ಪರ್ಧೆ

    ನವದೆಹಲಿ: 2024ರ ಲೋಕಸಮರಕ್ಕೆ ಕಾಂಗ್ರೆಸ್‌ ಮೊದಲ ಅಭ್ಯರ್ಥಿಗಳ ಪಟ್ಟಿ (Congress 1st Lok Sabha List) ಬಿಡುಗಡೆ ಆಗಿದ್ದು, ಈ ಬಾರಿಯೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

    ಇತ್ತೀಚೆಗಷ್ಟೇ ಉತ್ತರ ಪ್ರದೇಶದ (Uttar Pradesh) ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ಹಾಗೂ ಅಮೇಥಿ ಕ್ಷೇತ್ರದಿಂದ ಮತ್ತೆ ರಾಹುಲ್‌ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ರಾಹುಲ್‌ ಗಾಂಧಿ ಬಿಗ್‌ ಫೈಟ್‌ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ಟ್‌ ಟ್ವಿಸ್ಟ್‌ ಕೊಟ್ಟಿದ್ದು, ರಾಹುಲ್‌ ಗಾಂಧಿ ಅವರಿಗೆ ಕೇರಳದ ವಯನಾಡಿನಿಂದಲೇ ಟಿಕೆಟ್‌ ಘೋಷಣೆ ಮಾಡಲಾಗಿದೆ. 2ನೇ ಪಟ್ಟಿಯಲ್ಲಿ ಪ್ರಿಯಾಂಕ ಗಾಂಧಿ ಅವರಿಗೆ ಕ್ಷೇತ್ರ ನಿಗದಿಪಡಿಸುವ ವಿಶ್ವಾಸವನ್ನು ಕಾಂಗ್ರೆಸ್‌ ನಾಯಕರು ವ್ಯಕ್ತಪಡಿಸಿದ್ದಾರೆ.

    4 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದುಬೀಗಿದ್ದ ರಾಗಾ:
    2019ರ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ (ಶೇಕಡವಾರು ಮತ 39.5%) ಗೆಲುವು ಸಾಧಿಸಿದ್ದರು. ಕೇರಳದ ಜತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal), ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರನ್ನು ರಾಜನಾನಂದಗಾಂವ್‌ನಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.

    ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್‌?
    ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್‌ ಮಾಡಿದೆ. ಇದನ್ನೂ ಓದಿ: Loksabha Elections 2024- ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

    ಉಳಿದಂತೆ ಛತ್ತೀಸಗಢ 6, ಕೇರಳ- 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

    ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಶಿವಮೊಗ್ಗದಿಂದ ದೊಡ್ಮನೆ ಸೊಸೆ ಕಣಕ್ಕೆ!

  • ಕರ್ನಾಟಕ ಸೇರಿ 6 ರಾಜ್ಯಗಳ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್‌ – ಈ ಬಾರಿಯೂ ವಯನಾಡಿನಿಂದ ರಾಹುಲ್‌ ಸ್ಪರ್ಧೆ?

    ಕರ್ನಾಟಕ ಸೇರಿ 6 ರಾಜ್ಯಗಳ ಕೈ ಅಭ್ಯರ್ಥಿಗಳ ಪಟ್ಟಿ ಫೈನಲ್‌ – ಈ ಬಾರಿಯೂ ವಯನಾಡಿನಿಂದ ರಾಹುಲ್‌ ಸ್ಪರ್ಧೆ?

    ನವದೆಹಲಿ: ಈ ಬಾರಿಯೂ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ (Wayanad Lok Sabha Constituency)  ರಾಹುಲ್‌ ಗಾಂಧಿ (Rahul Gandhi) ಸ್ಪರ್ಧಿಸುವುದು ಬಹುತೇಕ ಅಂತಿಮವಾಗಿದೆ.

    ಕಾಂಗ್ರೆಸ್ (Congress) ಚುನಾವಣಾ ಸಮಿತಿಯು ಗುರುವಾರ ರಾತ್ರಿ ಮೊದಲ ಸಭೆ ನಡೆಸಿ 10 ರ ಪೈಕಿ 6 ರಾಜ್ಯಗಳ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.

    ನಾವು ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಮತ್ತು ಲಕ್ಷದ್ವೀಪಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದೇವೆ. ಸೀಟು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ 5,000 ರೂ. ದಂಡ

    ರಾಹುಲ್ ಗಾಂಧಿ ಅವರು ಕೇರಳದ ವಯನಾಡ್‌ನಿಂದ, ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಛತ್ತೀಸ್‌ಗಢದ ರಾಜನಂದಗಾಂವ್‌ನಿಂದ ಮತ್ತು ಜ್ಯೋತ್ಸ್ನಾ ಮಹಂತ್ ಕೊರ್ಬಾದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕೇರಳದ 20 ಕ್ಷೇತ್ರಗಳ ಪೈಕಿ 16ರಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

    ಕರ್ನಾಟಕದ (Karnataka) ಬಹುತೇಕ ಸಚಿವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮಂತ್ರಿಗಳನ್ನು ಕಣಕ್ಕಿಳಿಸುವುದು ಅನುಮಾನ ಎನ್ನಲಾಗುತ್ತಿದೆ. ಇಬ್ಬರು ಸಚಿವರು ಮೀಸಲು ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಪೈಕಿ ಒಬ್ಬರು ಹಿಂದಕ್ಕೆ ಸರಿದರೆ ಒಬ್ಬರು ಮಾತ್ರ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಕಲಬುರಗಿ (Kalaburagi) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದನ್ನೂ ಓದಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ – ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್‌

    ಮಹಾರಾಷ್ಟ್ರ ಮತ್ತು ಬಂಗಾಳದಲ್ಲಿ ಒಟ್ಟು 90 ಕ್ಷೇತ್ರಗಳು ಇರುವ ಕಾರಣ ಇನ್ನೂ ಈ ರಾಜ್ಯದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟು 48 ಕ್ಷೇತ್ರಗಳಿದ್ದು ಮಹಾ ವಿಕಾಸ್‌ ಅಘಾಡಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌, ಶರದ್‌ ಪವಾರ್‌ ಅವರ ಎನ್‌ಸಿಪಿ, ಉದ್ಧವ್‌ ಠಾಕ್ರೆ ಅವರ ಶಿವಸೇನೆಯ ಜೊತೆ ಮಾತುಕತೆ ನಡೆಯುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದ್ದು ಇನ್ನೂ ಅಂತಿಮಗೊಂಡಿಲ್ಲ.

  • ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ನವದೆಹಲಿ: ಸಂಸದ ರಾಹುಲ್‌ ಗಾಂಧಿಗೆ (Rahul Gandhi) ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಶಾಕ್‌ ನೀಡಿದ್ದು ವಯನಾಡಿನಲ್ಲಿ (Wayanad) ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ.

    ಕೇರಳದಲ್ಲಿ (Kerala) ಲೋಕಸಭೆ ಚುನಾವಣೆಗೆ (Lok Sabha Election) ನಾಲ್ಕು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿಪಿಐ ಸೋಮವಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ INDIA ಮೈತ್ರಿಕೂಟದ ಭಾಗವಾಗಿರುವ ಸಿಪಿಐ ತಿರುವನಂತಪುರಂನಿಂದ ಪನ್ನಿಯನ್ ರವೀಂದ್ರನ್ ಮತ್ತು ವಯನಾಡಿನಿಂದ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ. ವಿಎಸ್ ಸುನೀಲ್ ಕುಮಾರ್ ತ್ರಿಶೂರ್ ಮತ್ತು ಅರುಣ್ ಕುಮಾರ್ ಮಾವೇಲಿಕರದಿಂದ ಸ್ಪರ್ಧಿಸಲಿದ್ದಾರೆ.

    ಕಾಂಗ್ರೆಸ್‌ನ (Congress) ಶಶಿ ತರೂರ್ ಅವರು ತಿರುವನಂತಪುರಂನ ಹಾಲಿ ಸಂಸದರಾಗಿದ್ದು, ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.  ರಾಹುಲ್‌ ಗಾಂಧಿ ಮತ್ತೆ ವಯನಾಡಿನಿಂದ ಸ್ಪರ್ಧಿಸಿದರೆ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ (Annie Raja)ಅವರ ಪತ್ನಿ ಅನ್ನಿ ರಾಜಾ ಅವರನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ:ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

    2019 ರ ಚುನಾವಣೆಯಲ್ಲಿ ಸಿಪಿಐ 4 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಯಾವುದೇ ಕ್ಷೇತ್ರವನ್ನು ಗೆದ್ದಿರಲಿಲ್ಲ. ಕೇರಳದಲ್ಲಿ ಒಟ್ಟು 20 ಲೋಕಸಭಾ ಸ್ಥಾನಗಳಿವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ಗೆ 2, ಸಿಪಿಐ (ಎಂ), ಕೆಸಿ (ಎಂ), ಮತ್ತು ಆರ್‌ಎಸ್‌ಪಿ ತಲಾ 1 ಸ್ಥಾನಗಳನ್ನು ಗೆದ್ದಿದ್ದವು. ಇದನ್ನೂ ಓದಿ: ಭಾರತಕ್ಕೆ ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್

    ರಾಜ್ಯಸಭಾ ಸಂಸದ ಮತ್ತು ಸಿಪಿಐ (ಎಂ) ಕಾರ್ಯದರ್ಶಿ ಬಿನೋಯ್ ವಿಶ್ವಂ ಅವರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇರಳದಿಂದ ಸ್ಪರ್ಧಿಸುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಉತ್ತರ ಭಾರತವನ್ನು ಭಾರತದ ಕೇಂದ್ರವೆಂದು ಪರಿಗಣಿಸಲಾಗಿದೆ. ಆ ಭಾಗದಿಂದ ಗರಿಷ್ಠ ಸಂಖ್ಯೆಯ ಸಂಸದರು ಸಂಸತ್ತಿಗೆ ಬರುತ್ತಾರೆ. ಆ ಭಾಗದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್‌ ಪ್ರಬಲ ಶಕ್ತಿಯಾಗಿದೆ ಎಂದು ಅವರು ಹೇಳಿದರು.

    ಕೇವಲ 20 ಸ್ಥಾನಗಳಿರುವ ಕಾಂಗ್ರೆಸ್ ದಕ್ಷಿಣ ಭಾರತ ಅದರಲ್ಲೂ ಕೇರಳಕ್ಕೆ ಬರುವ ರಾಜಕೀಯ ತರ್ಕ ಏನು? ಕೇರಳದಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. 2019ರಲ್ಲಿ ಅಮೇಠಿಯಿಂದ ವಯನಾಡಿಗೆ ರಾಹುಲ್‌ ಗಾಂಧಿ ಬಂದರು. ರಾಹುಲ್‌ ಗಾಂಧಿಗೆ ಬಿಜೆಪಿ ಭಯವಿದೆ ಎಂದು ಕಮಲ ನಾಯಕರು ಪ್ರಚಾರ ಆರಂಭಿಸಿದರು. ಇದರ ಪರಿಣಾಮ ಇಡೀ ಉತ್ತರ ಭಾರತದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಯಿತು ಎಂದರು.

     

  • ರಾಹುಲ್‌ ಆದೇಶದ ಮೇರೆಗೆ  ವಯನಾಡು ವ್ಯಕ್ತಿಗೆ  15 ಲಕ್ಷ ಪರಿಹಾರ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ರಾಹುಲ್‌ ಆದೇಶದ ಮೇರೆಗೆ ವಯನಾಡು ವ್ಯಕ್ತಿಗೆ 15 ಲಕ್ಷ ಪರಿಹಾರ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಬೆಂಗಳೂರು: ಕರ್ನಾಟಕದ (Karnataka) ಆನೆಯ ದಾಳಿಯಿಂದ ಕೇರಳದಲ್ಲಿ (Kerala) ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌  ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡು ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಸೀಟುಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

     

    ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನವನ್ನೂ ಗೆಲ್ಲಲ್ಲ: ಖರ್ಗೆ ಭವಿಷ್ಯ

     

    ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ರಾಹುಲ್  ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಜೊತೆಗೆ ಈ ಬಗ್ಗೆ ಬೀದರ್‌ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೋ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದೆ ಎಂದಿದ್ದಾರೆ.

  • ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

    ಮಡಿಕೇರಿ: ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಮುಂದಿನ ವಾರ KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

    ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡು ಬಂದರೆ ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಎಸ್‍ಪಿ ರಾಮರಾಜನ್ ಆದೇಶ ನೀಡಿದ್ದಾರೆ. ಅಲ್ಲದೇ ಗಡಿ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೂ ಕಣ್ಣಿರಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ತೆರಾಲು ಸೇರಿದಂತೆ ಕೆಲವೆಡೆ ನಾಕಾಬಂದಿ ಹಾಕಲಾಗಿದೆ. ಈಗಾಗಲೇ ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕೆಲಸ ನಿರ್ವಹಿಸುತ್ತಿದೆ. ಇದರೊಂದಿಗೆ ಪೊಲೀಸರು ಈಗ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಗಡಿಭಾಗಕ್ಕೆ ಎಸ್ಪಿ ರಾಮರಾಜನ್, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು

  • ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

    ಹೈದರಾಬಾದ್: ಈ ಬಾರಿ ವಯನಾಡ್ (Wayanad) ಅಲ್ಲ, ಈ ಬಾರಿ ಹೈದರಾಬಾದ್‌ನಿಂದ (Hyderabad) ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸವಾಲೆಸೆದಿದ್ದಾರೆ.

    ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಅಬ್‌ಕಿ ಬಾರ್ ವಯನಾಡ್ ನಹಿ, ಅಬ್‌ಕಿ ಬಾದ್ ಹೈದರಾಬಾದ್ (ಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್). ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತಲೇ ಇರುತ್ತೀರಿ. ಕಾಂಗ್ರೆಸ್‌ನವರು ಸಾಕಷ್ಟು ವಿಷಯಗಳನ್ನು ಹೇಳುತ್ತಾರೆ. ಈಗ ಮೈದಾನಕ್ಕೆ ಬಂದು ನನ್ನ ವಿರುದ್ಧ ಹೋರಾಡಿ. ನಾನು ಇದಕ್ಕೆ ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿಗೆ ಚಾಲೆಂಜ್ ನೀಡಿದ್ದಾರೆ.

    4 ಬಾರಿ ಹೈದರಾಬಾದ್‌ನ ಸಂಸದರಾಗಿರುವ ಅಸಾದುದ್ದೀನ್ ಓವೈಸಿ ವಿರುದ್ಧ ರಾಹುಲ್ ಗಾಂಧಿ ಕೆಲ ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದರು. ಕೇಂದ್ರ ತನಿಖಾ ಸಂಸ್ಥೆಗಳು ತನ್ನನ್ನು ತನಿಖೆ ಮಾಡುತ್ತಿಲ್ಲ ಎಂಬ ಅಂಶವನ್ನು ಎತ್ತಿ ತೋರಿಸುವ ಮೂಲಕ ಅವರು ಬಿಜೆಪಿಯ ಜೇಬಿನಲ್ಲಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

    ಎಐಎಂಐಎಂ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಪ್ರತಿಪಕ್ಷಗಳ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ಮೋದಿಯವರು ಎಂದಿಗೂ ತಮ್ಮ ಜನರ ಮೇಲೆ ದಾಳಿ ಮಾಡುವುದಿಲ್ಲ. ಅವರು ನಿಮ್ಮ ಸಿಎಂ ಮತ್ತು ಎಐಎಂಐಎಂ ನಾಯಕರನ್ನು ತಮ್ಮವರು ಎಂದು ಪರಿಗಣಿಸುತ್ತಾರೆ. ಆದ್ದರಿಂದ ಅವರ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂದು ತೆಲಂಗಾಣದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

    ತೆಲಂಗಾಣದಲ್ಲಿ ಕಾಂಗ್ರೆಸ್ ಕೇವಲ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿರುದ್ಧ ಹೋರಾಡುತ್ತಿಲ್ಲ. ಬಿಜೆಪಿ ಮತ್ತು ಎಐಎಂಐಎಂ ವಿರುದ್ಧವೂ ಹೋರಾಡುತ್ತಿದೆ. ಅವರೆಲ್ಲರೂ ಪರಸ್ಪರ ಪ್ರತ್ಯೇಕ ಪಕ್ಷಗಳು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ರಹಸ್ಯವಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

    ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

    ತಿರುವನಂತಪುರಂ: ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂತಹ ಸಂಘರ್ಷದ ಅನುಭವವನ್ನು ನಾನು ಎಂದಿಗೂ ಅನುಭವಿಸಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅಭಿಪ್ರಾಯಪಟ್ಟಿದ್ದಾರೆ.

    ತಮ್ಮ ತವರು ಕ್ಷೇತ್ರವಾದ ವಯನಾಡಿಗೆ (Wayanad) ಶನಿವಾರ ರಾಹುಲ್‌ ಗಾಂಧಿ ಭೇಟಿ ನೀಡಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಣಿಪುರ ಹಿಂಸಾಚಾರ ಕುರಿತು ಮಾತನಾಡಿ, ನಾನು ಸ್ವಲ್ಪ ದಿನಗಳ ಹಿಂದೆ ಮಣಿಪುರಕ್ಕೆ (Manipur Violence) ಹೋಗಿದ್ದೆ. ನಾನು 19 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮಣಿಪುರದಲ್ಲಿ ನಾನು ಅನುಭವಿಸಿದ ಅನುಭವವನ್ನು ರಾಜಕೀಯ ಜೀವನದಲ್ಲಿ ಎಂದಿಗೂ ಅನುಭವಿಸಿಲ್ಲ. ಬಿಜೆಪಿ ಕುಟುಂಬಗಳನ್ನು ನಾಶ ಮಾಡುವ ಗುರಿ ಹೊಂದಿದೆ. ಭಾರತವನ್ನು ವಿಭಜಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    ನೀವು ಸಾವಿರಾರು ಕುಟುಂಬಗಳನ್ನು ನಾಶಪಡಿಸಿದ್ದೀರಿ. ನೀವು ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅವಕಾಶ ನೀಡಿದ್ದೀರಿ. ನೀವು ಜನರ ಹತ್ಯೆಗೆ ಅವಕಾಶ ಮಾಡಿಕೊಟ್ಟಿದ್ದೀರಿ. ದೇಶದ ಪ್ರಧಾನಿಯಾಗಿ ನೀವು ನಗುತ್ತಿದ್ದೀರಾ ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ವೈಖರಿ ವಿರುದ್ಧ ಮತ್ತೆ ರಾಹುಲ್‌ ಗಾಂಧಿ ಗುಡುಗಿದ್ದಾರೆ.

    ಪ್ರಧಾನಿಯವರ ಎರಡು ಗಂಟೆ 13 ನಿಮಿಷಗಳ ಭಾಷಣದಲ್ಲಿ ಮಣಿಪುರದ ಸಮಸ್ಯೆಗೆ ಸಿಕ್ಕ ಸಮಯ ಕೇವಲ 2 ನಿಮಿಷ. ನೀವು ಭಾರತ್ ಮಾತೆಯ ಹತ್ಯೆಯ ಬಗ್ಗೆ ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದ್ದೀರಿ. ಹೀಗೆ ಮಾಡಲು ನಿಮಗೆ ಎಷ್ಟು ಧೈರ್ಯ? ನೀವು ಭಾರತದ ಕಲ್ಪನೆಯನ್ನು ಹೇಗೆ ತಳ್ಳಿಹಾಕುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಪ್ರಧಾನಿ ನಗುತ್ತ ಜೋಕ್ ಮಾಡಿಕೊಂಡಿದ್ದಾರೆ – ರಾಹುಲ್ ಕಿಡಿ

    ಕಲ್ಪೆಟ್ಟಾದಲ್ಲಿ ವಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ರಾಹುಲ್‌ ಗಾಂಧಿ ಇಂದು ಮಾತನಾಡಿದರು. ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ವಯನಾಡಿಗೆ ರಾಹುಲ್‌ ಗಾಂಧಿ ಮೊದಲ ಭೇಟಿ ನೀಡಿದ್ದರು. ಅವರನ್ನು ಸ್ವಾಗತಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನರ್ಹತೆ ಆದೇಶ ವಾಪಸ್ ಬಳಿಕ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಲಿರುವ ರಾಗಾ

    ಅನರ್ಹತೆ ಆದೇಶ ವಾಪಸ್ ಬಳಿಕ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಲಿರುವ ರಾಗಾ

    ನವದೆಹಲಿ: ಅನರ್ಹತೆ ಆದೇಶ ವಾಪಸ್ ಪಡೆದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ (Rahul Gandhi) ವಯನಾಡ್ ಕ್ಷೇತ್ರಕ್ಕೆ (Wayanad Constituecy) ಭೇಟಿ ನೀಡಲಿದ್ದಾರೆ. ಆಗಸ್ಟ್ 12 ಮತ್ತು 13 ರಂದು ರಾಹುಲ್ ಗಾಂಧಿ ತಮ್ಮ ಸಂಸತ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

    ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಹಿಂಪಡೆಯಲಾದ ಬಳಿಕ ಮೊದಲ ಬಾರಿಗೆ ಅವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ಆಗಸ್ಟ್ 12-13 ರಂದು ರಾಹುಲ್ ಗಾಂಧಿ ವಯನಾಡಿನಲ್ಲಿ ಇರಲಿದ್ದಾರೆ. ಪ್ರಜಾಪ್ರಭುತ್ವ ಗೆದ್ದಿರುವುದಕ್ಕೆ ವಯನಾಡಿನ ಜನರು ಹರ್ಷಿಸಿದ್ದಾರೆ. ತಮ್ಮ ಧ್ವನಿ ಸಂಸತ್ತಿಗೆ ಮರಳಿದೆ ಎಂದು ಖುಷಿಪಟ್ಟಿದ್ದಾರೆ ಎಂದು ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೌನ ವೃತದಲ್ಲಿರುವ ಮೋದಿ ಮಾತನಾಡಿಸಲು ಅವಿಶ್ವಾಸ ನಿರ್ಣಯ – ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಟೀಕೆ

    ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಸೋಮವಾರ ಅವರು ಸಂಸತ್ ಭವನಕ್ಕೆ ತೆರಳಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದರು. ಅವರಿಗೆ ಇಂಡಿಯಾ ಒಕ್ಕೂಟದ ಸಂಸದರು ಭವ್ಯ ಸ್ವಾಗತ ಕೋರಿದರು. ಇದನ್ನೂ ಓದಿ: ರಾಹುಲ್ ಮದ್ವೆಯಾಗ್ತೀನಿ – ಒಂದು ಷರತ್ತು ಪಾಲಿಸಬೇಕು ಎಂದ ಶೆರ್ಲಿನ್ ಚೋಪ್ರಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]