Tag: Wayanad

  • ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ

    ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ

    ತಿರುವನಂತಪುರಂ: ಲೋಕಸಭೆಯಿಂದ ರಾಹುಲ್ ಗಾಂಧಿ (Rahul Gandhi) ಅವರನ್ನು ಅನರ್ಹಗೊಳಿಸಿದ ವಿರುದ್ಧದ ಪ್ರತಿಭಟನೆಯ ಭಾಗವಾಗಿ ವಯನಾಡಿನಲ್ಲಿ ಶನಿವಾರ ಪಕ್ಷವು ಬ್ಲ್ಯಾಕ್ ಡೇ ಆಚರಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಎನ್.ಡಿ ಅಪ್ಪಚ್ಚನ್  ಹೇಳಿದರು.

    ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು. ಈ ಬಗ್ಗೆ ಕೇರಳದ (Kerala) ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಮಾತನಾಡಿ, ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಮವನ್ನು ರಾಜಕೀಯ ಪ್ರೇರಿತ ತರಾತುರಿಯಾಗಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಕ್ರಮವನ್ನು ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಎದುರಿಸಲಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್

    ಸೂರತ್ ನ್ಯಾಯಾಲಯದ ತೀರ್ಪು ಅಂತಿಮವಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದೆ. ದೇಶದಲ್ಲಿ ಸುಪ್ರೀಂ ಕೋರ್ಟ್‍ನವರೆಗೆ ವಿಸ್ತರಿಸುವ ಕಾನೂನು ವ್ಯವಸ್ಥೆ ಇದೆ. ರಾಹುಲ್ ಗಾಂಧಿ ಕಾನೂನು ಮಾರ್ಗದಲ್ಲಿ ಸಂಸದ ಸ್ಥಾನಕ್ಕೆ ಹಿಂತಿರುಗುತ್ತಾರೆ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ನಾವು ಧ್ವನಿ ಎತ್ತುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

  • ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಚಾಮರಾಜನಗರ: ಭರಚುಕ್ಕಿ ಜಲಪಾತದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ ಜೋರಾಗಿದ್ದು, ಸಾವಿನ ದವಡೆಯಲ್ಲಿ ಮೋಜು-ಮಸ್ತಿ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರ ಗ್ರಾಮದ ವೆಸ್ಲಿ ಸೇತುವೆ ಕೆಳಗೆ ಹರಿಯುವ ಕಾವೇರಿ ನದಿಗೆ ಇಳಿದು ಪ್ರವಾಸಿಗರು ಜಲಕ್ರೀಡೆ ಆಡುತ್ತಿದ್ದಾರೆ. ಅಪಾಯದ ಮಟ್ಟದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೈಮರೆತ್ತಿದ್ದಾರೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ 

    ವೈನಾಡು ಮತ್ತು ಮಲೆನಾಡಿನ ಪ್ರದೇಶದಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆ ಕಾವೇರಿ ನದಿಗೆ ಕಳೆದ ಆರು ದಿನಗಳಿಂದಲೂ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಯ ಬೀಡುತ್ತಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.

    ನದಿಯಲ್ಲಿ ನೀರು ಹೆಚ್ಚಾಗಿರುವುದನ್ನು ತಿಳಿದ ಪ್ರವಾಸಿಗರು ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ವೀಕ್ಷಣೆ ಮಾಡಲೂ ಒಂದು ವಾರದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಈ ಬೆಳವಣಿಗೆಯಿಂದ ಎಚ್ಚೆತ್ತ ಜಿಲ್ಲಾಡಳಿತ ಜು.12 ರಂದು ಭರಚುಕ್ಕಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ನದಿಯ ಬಳಿ ತೆರಳದಂತೆ ಮೇಲಿಂದ ಮೇಲೆ ಆದೇಶದ ಸುತ್ತೊಲೆ ಹೊರಡಿಸುತ್ತಿದೆ.

    ವಿಪರ್ಯಾಸವೆಂದರೆ ಪ್ರವಾಸಿಗರು ಕಾವೇರಿ ನದಿಯಲ್ಲಿ ಇಳಿದು ಮನಬಂದಂತೆ ಆಟವಾಡುವುದು ಮತ್ತು ಈಜುವ ಹುಚ್ಚಾಟವನ್ನು ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಬಂದು ನದಿಗಿಳಿಯುತ್ತಿದ್ದಾರೆ. ಭರಚುಕ್ಕಿ ಪ್ರವೇಶಕ್ಕೆ ನಿರ್ಬಂಧವಿರುವುದ್ದರಿಂದ ವೆಸ್ಲಿ ಸೇತುವೆಯಿಂದ ಬಲಗಡೆಗೆ ತೆರಳುವ ಬೂದಗಟ್ಟದೊಡ್ಡಿ ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿ ಭರಚುಕ್ಕಿ ಜಲಪಾತ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ.

    ಎಚ್ಚರ ತಪ್ಪಿದ್ರೆ ಶಿವನ ಪಾದ
    ಭರಚುಕ್ಕಿ ವೀಕ್ಷಣೆಗೆ ಜಲಪಾತದ ತುದಿಗೆ ತೆರಳುತ್ತಿರುವ ಯುವಕ, ಯುವತಿಯರ ಗುಂಪು ತುತ್ತತುದಿಯಲ್ಲಿ ನಿಂತು ಫೋಟೋ, ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸ ಪ್ರಯತ್ನದಲ್ಲಿ ಮುಳುಗಿದ್ದಾರೆ. ಯುವಕ, ಯುವತಿಯರು, ವಯೋವೃದ್ಧರು, ಮಹಿಳೆಯರು, ಸಣ್ಣ-ಸಣ್ಣ ಮಕ್ಕಳು ಸೇರಿ ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ:  ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ಇವೆಲ್ಲವನ್ನು ನೋಡಿದ ಪ್ರಜ್ಞಾವಂತರು ಎಲ್ಲಿಂದಲು ಇಲ್ಲಿನ ನದಿ, ಜಲಪಾತ ವೀಕ್ಷಣೆಗೆ ಬಂದು ಸಾವು-ನೋವುಗಳು ಸಂಭವಿಸಲು ಕಾರಣವಾಗುತ್ತಿರುವ ಪ್ರವಾಸಿಗರಿಗೆ ಕಡಿವಾಣ ಹಾಕಬೇಕು. ಅಕ್ರಮವಾಗಿ ತೆರಳಿ ಜಲಪಾತ ವೀಕ್ಷಣೆ ಮಾಡುವ ದಾರಿಯನ್ನು ಬಂದ್ ಮಾಡಿ ಪೊಲೀಸರ ನಿಯೋಜನೆ ಮಾಡಬೇಕು. ನದಿಯ ಬಳಿ ಯಾರು ಸುಳಿಯದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ 3 ದಿನ ರಾಹುಲ್ ಗಾಂಧಿ ಕೇರಳ ಪ್ರವಾಸ

    ಇಂದಿನಿಂದ 3 ದಿನ ರಾಹುಲ್ ಗಾಂಧಿ ಕೇರಳ ಪ್ರವಾಸ

    ತಿರುವನಂತಪುರಂ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇಂದು ತಮ್ಮ ಕ್ಷೇತ್ರ ವಯನಾಡ್‍ಗೆ ಭೇಟಿ ನೀಡಲಿದ್ದಾರೆ.

    ಮೂರು ದಿನಗಳ ಕಾಲ ವಯನಾಡ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು, ತಮ್ಮ ಕ್ಷೇತ್ರದಲ್ಲಿ ಮನಂತವಾಡಿಯಲ್ಲಿ ರೈತರ ಬ್ಯಾಂಕ್ ಕಟ್ಟಡ ಉದ್ಘಾಟನೆ ಮತ್ತು ಸುಲ್ತಾನ್ ಬತ್ತೇರಿಯಲ್ಲಿ ಯುಡಿಎಫ್ ಬಹುಜನ ಸಂಗಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

     

    ಶುಕ್ರವಾರ ಬೆಳಗ್ಗೆ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬರಮಾಡಿಕೊಳ್ಳಲಿದ್ದಾರೆ. ನಂತರ ಭಾನುವಾರ ಕೋಝಿಕ್ಕೋಡ್‍ನಿಂದ ದೆಹಲಿಗೆ ವಾಪಸಾಗಲಿದ್ದಾರೆ.

    ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‍ಎಫ್‍ಐ) ಕಾರ್ಯಕರ್ತರು ಕೇರಳದ ವಯನಾಡಿನ ಕಲ್ಪೆಟ್ಟಾದಲ್ಲಿರುವ ರಾಹುಲ್ ಗಾಂಧಿ ಅವರ ಸಂಸದರ ಕಚೇರಿ ಕಡೆಗೆ ಶುಕ್ರವಾರ ಮಧ್ಯಾಹ್ನ ನಡೆಸಿದ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಕಚೇರಿಗೆ ನುಗ್ಗಿ ಕಟ್ಟಡದ ಬಾಗಿಲು, ಕಿಟಕಿಗಳನ್ನು ಧ್ವಂಸಗೊಳಿಸಿದ್ದರು. ಇದನ್ನೂ ಓದಿ: ಬಿಜೆಪಿ `ಮಹಾ’ ಮಾಸ್ಟರ್ ಪ್ಲಾನ್ – ಅಂದು ಅಟೋ ಡ್ರೈವರ್‌ ಇಂದು ಚೀಫ್‌ ಮಿನಿಸ್ಟರ್‌

    ಗುಡ್ಡಗಾಡು ಪ್ರದೇಶವಾದ ವಯನಾಡಿನಲ್ಲಿ ಈಗ ತೀವ್ರವಾಗಿ ಕಾಡುತ್ತಿರುವ ಪರಿಸರ ಸೂಕ್ಷ್ಮ ವಲಯ(ಇಎಸ್‍ಝಡ್) ವಿಚಾರದಲ್ಲಿ ಸಂಸದರು ಮಧ್ಯಪ್ರವೇಶಿಸದಿರುವುದರ ವಿರುದ್ಧ ಎಸ್‍ಎಫ್‍ಐ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಈ ವೇಳೆ ಎಸ್‍ಎಫ್‍ಐ ವಿದ್ಯಾರ್ಥಿಗಳು ಪೊಲೀಸರನ್ನು ಧಿಕ್ಕರಿಸಿ ಸಂಸದ ಕಚೇರಿಗೆ ನುಗ್ಗಿ ಕಿಟಕಿ ಗಾಜುಗಳನ್ನು ಒಡೆದು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು. ಈ ಗಲಾಟೆಯಲ್ಲಿ ಸಂಸದರ ಕಚೇರಿ ಸಿಬ್ಬಂದಿ ಆಗಸ್ಟಿನ್ ಸಹ ಗಾಯಗೊಂಡಿದ್ದರು.

    Live Tv

  • ತಾಯಿ ಮೇಲೆ ಹಲ್ಲೆ ಮಾಡಿದವನ ಹತ್ಯೆಗೈದ ಅಪ್ರಾಪ್ತ ಬಾಲಕಿಯರು

    ತಾಯಿ ಮೇಲೆ ಹಲ್ಲೆ ಮಾಡಿದವನ ಹತ್ಯೆಗೈದ ಅಪ್ರಾಪ್ತ ಬಾಲಕಿಯರು

    ತಿರುವನಂತಪುರಂ: ತಾಯಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ 79 ವರ್ಷದ ವ್ಯಕ್ತಿಯನ್ನು ಅಪ್ರಾಪ್ತ ಬಾಲಕಿಯರು ಕೊಂದಿರುವ ಘಟನೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದಿದೆ.

    ಅಂಬಳವಯಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಮ್ಮದ್ ಕೋಯಾ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕಿಯರ ತಂದೆಯ ಚಿಕ್ಕಮ್ಮನ ಪತಿ ಮಹಮ್ಮದ್ ಕೋಯಾ ತಾಯಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿಯರು ಹಲ್ಲೆ ನಡೆಸುತ್ತಿರುವುದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ತಡೆಯಲಾಗದೇ ಕೊನೆಗೆ ಕೊಡಲಿ ಹಿಡಿದು ಮಹಮ್ಮದ್ ಕೋಯಾ ಹತ್ಯೆಗೈದಿದ್ದಾರೆ. ಇದನ್ನೂ ಓದಿ: ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

    ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾವಿಯಲ್ಲಿದ್ದ ಶವವನ್ನು ಹೊರತೆಗೆದಿದ್ದು, ಬಾಲಕಿಯರು ತಮ್ಮ ತಪ್ಪನ್ನು ಒಪ್ಪಿಕೊಂಡು ಶರಣಾಗಿದ್ದಾರೆ. ವಿಚಾರಣೆ ವೇಳೆ ಎರಡು ಕುಟುಂಬದವರು ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮೊಹಮ್ಮದ್ ಬಾಲಕಿಯರನ್ನು ಹಿಂಸಿಸುತ್ತಿದ್ದ. ಇಷ್ಟು ದಿನ ಕಿರುಕುಳ ಸಹಿಸಿಕೊಂಡಿದ್ದ ಬಾಲಕಿಯರು ಇದೀಗ ಕೊಲೆ ಮಾಡಿರಬಹುದು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿಗಾಗಿ ಜಡೆ ಜಗಳ – ಯುವತಿಯನ್ನ ಕಚ್ಚಿದ ಮಹಿಳೆ!

  • ವಯನಾಡಿನ ಗಿರಿಜನ ಹಾಡಿಯಲ್ಲಿ ನಕ್ಸಲರು ಪ್ರತ್ಯಕ್ಷ- ಕೊಡಗಿನ ಗಡಿಯಲ್ಲಿ ಕಟ್ಟೆಚ್ಚರ

    ವಯನಾಡಿನ ಗಿರಿಜನ ಹಾಡಿಯಲ್ಲಿ ನಕ್ಸಲರು ಪ್ರತ್ಯಕ್ಷ- ಕೊಡಗಿನ ಗಡಿಯಲ್ಲಿ ಕಟ್ಟೆಚ್ಚರ

    ಮಡಿಕೇರಿ: ಕೇರಳದ ವಯನಾಡಿನ ಗಿರಿಜನ ಹಾಡಿಯಲ್ಲಿ ಮಾವೋವಾದಿ ನಕ್ಸಲರು ಪ್ರತ್ಯಕ್ಷರಾಗಿ ನಕ್ಸಲ್ ಪರ ಘೋಷಣೆ ಮತ್ತು ಕೇರಳ ಸರ್ಕಾರಕ್ಕೆ ಕರ ಪತ್ರದ ಮೂಲಕ ಕಠಿಣ ಸಂದೇಶ ರವಾನಿಸಿ, ಕಾಡಿನಲ್ಲಿ ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

    ಮಳೆಯ ನಡುವೆಯೇ ನಕ್ಸಲ್ ನಿಗ್ರಹ ದಳ ಗಡಿ ಭಾಗಗಳಲ್ಲಿ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಕುಟ್ಟ ಮತ್ತು ವಿರಾಜಪೇಟೆ ಆರ್ಜಿಯಲ್ಲಿರುವ ಎಎನ್‍ಎಫ್ ಕ್ಯಾಂಪ್‍ಗಳ ಕಮಾಂಡೋಗಳು ಕುಟ್ಟ, ತೋಲ್ಪಟ್ಟಿ ಮತ್ತು ಕೇರಳದೊಂದಿಗೆ ಅರಣ್ಯ ಗಡಿ ಹಂಚಿಕೊಂಡಿರುವ ಪ್ರದೇಶಗಳಲ್ಲಿ ನಿರಂತರ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದಾರೆ.

    ಮಾವೋವಾದಿ ನಕ್ಸಲರು, ಅರಣ್ಯದ ಮೂಲಕ ಕೊಡಗು ಜಿಲ್ಲೆಗೆ ಕಾಲಿಡದಂತೆ ಎಎನ್‍ಎಫ್ ಯೋಧರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿಂದೆ ಕಾಲೂರು, ಸಂಪಾಜೆ, ಕರಿಕೆ, ಕಕ್ಕಬ್ಬೆ ಗ್ರಾಮಗಳಲ್ಲೂ ಶಂಕಿತ ನಕ್ಸಲರ ಹೆಜ್ಜೆ ಗುರುತುಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ನಕ್ಸಲ್ ನಿಗ್ರಹ ದಳದ ತಂಡಗಳನ್ನು ಶಾಶ್ವತವಾಗಿ ನಿಯೋಜನೆ ಮಾಡಲಾಗಿದೆ.

  • ವೈನಾಡಿನಲ್ಲಿ ಭಾರೀ ಮಳೆ- 40 ಸಾವಿರ ಕ್ಯೂಸೆಕ್ ಗಡಿ ದಾಟಿದ ಕಬಿನಿ ಒಳಹರಿವು

    ವೈನಾಡಿನಲ್ಲಿ ಭಾರೀ ಮಳೆ- 40 ಸಾವಿರ ಕ್ಯೂಸೆಕ್ ಗಡಿ ದಾಟಿದ ಕಬಿನಿ ಒಳಹರಿವು

    ಬೆಂಗಳೂರು: ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು 40 ಸಾವಿರ ಕ್ಯೂಸೆಕ್ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ಹೊರಹರಿವು ಉಂಟಾಗಿರುವುದರಿಂದ ನದಿ ಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.

    ನಂಜನಗೂಡಿನ ಬಳಿ ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಬಳಿ ನಿಂತ ವ್ಯಕ್ತಿ ಮೇಲೆಯೇ ಮರ ಉರುಳಿ ಬಿದ್ದು, ವ್ಯಕ್ತಿ ಮೃತಪಟ್ಟಿದ್ದಾನೆ.

    ಅಲ್ಲದೆ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಬಿಸಿಲೆಘಾಟ್‍ನಲ್ಲಿ ಭಾರೀ ಗಾತ್ರದ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಹೀಗಾಗಿ ಬಿಸಿಲೆ ಘಾಟ್‍ನಲ್ಲಿ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯ ಆಡಳಿತ ಮರಗಳನ್ನು ತೆರವು ಮಾಡುವ ಕಾರ್ಯಾಚರಣೆಗೆ ಮುಂದಾಗಿದೆ. ಸಕಲೇಶಪುರ ತಾಲೂಕಿನ ಹೆತ್ತೂರು, ಯಸಳೂರು, ಐಗೂರು, ಬನ್ನೂರು ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

    ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಕೆಆರ್‍ಎಸ್ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 29,855 ಕ್ಯೂಸೆಕ್ ನೀರು ಒಳ ಹರಿವು ಇದ್ದು, ಹೊರ ಹರಿವು 4,715 ಕ್ಯೂಸೆಕ್ ಇದೆ. ಕೆಆರ್‍ಎಸ್ ಡ್ಯಾಮ್‍ನ ಇಂದಿನ ನೀರಿನಮಟ್ಟ 108.40 ಅಡಿ ಇದೆ.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಹಾಗೂ ಜಲಾಶಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಧ್ಯದಲ್ಲೇ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

  • ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ತಿರುವನಂತಪರುಂ: ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎನ್ನಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಕೇರಳದ ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ತನ್ನ ನೆಲದ ಹೆಣ್ಣುಮಕ್ಕಳು ನೋಡಿಕೊಳ್ಳಲು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ. ಉತ್ತರ ಪ್ರದೇಶ ಬಿಜೆಪಿಯ ಶಾಸಕರೊಬ್ಬರು ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ ಎಂದು ಗುಡುಗಿದ್ದಾರೆ.

    ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂಸಾಚಾರ, ದ್ವೇಷ ಹರಡುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಅವರನ್ನು ಥಳಿಸುವುದು, ಧ್ವನಿಯನ್ನು ಹತ್ತಿಕ್ಕುವ ಬೆಳವಣಿಗೆ ದೇಶದಲ್ಲಿ ಉಂಟಾಗಿದೆ. ಬುಡಕಟ್ಟು ಜನಾಂಗದವರ ಮೇಲೆ ದೌರ್ಜನ್ಯ ಎಸಗಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗುತ್ತದೆ. ಹಿಂಸಾಚಾರದಲ್ಲಿ ಈ ನಾಟಕೀಯ ಪ್ರವೃತ್ತಿ ಹೆಚ್ಚುವುದಕ್ಕೆ ಒಂದು ಬಲವಾದ ಕಾರಣವಿದೆ ಎಂದು ರಾಹುಲ್ ಗಾಂಧಿ, ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಸಾಮಾನ್ಯ ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆ ಮತ್ತು ವಿವೇಚನೆಯಿಲ್ಲದ ಶಕ್ತಿಯನ್ನು ನಂಬುತ್ತಿರುವುದೇ ಇದಕ್ಕೆ ಕಾರಣ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದರು.

    ಉನ್ನಾವೋ ರೇಪ್ ಪ್ರಕರಣ:
    ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕನಾಗಿದ್ದ ಕುಲದೀಪ್ ಸಿಂಗ್ ಸೆಂಗರ್ 2017ರಲ್ಲಿ 17 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ದೂರು ನೀಡಲು ತೆರಳಿದ್ದ ಸಂತ್ರಸ್ತ ಬಾಲಕಿಯ ತಂದೆಯನ್ನು ಪೊಲೀಸರು ಬೇರೊಂದು ಪ್ರಕರಣದಲ್ಲಿ ಬಂಧಿಸಿದ್ದರು. ಅವರು ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಕುಲದೀಪ್ ಸಿಂಗ್ ಸೆಂಗರ್ ಬೆಂಬಲಿಗರು, ಸಂಬಂಧಿಕರು ಸಂತ್ರಸ್ತೆಯ ಚಿಕ್ಕಪ್ಪನನ್ನು ಕೊಲೆ ಮಾಡಿದ್ದರು. ಈ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್‍ನ ಮೇಲ್ವಿಚಾರಣೆಯಲ್ಲಿ ದೆಹಲಿಯ ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದೆ.

  • ವಂಚನೆ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿ ದುಬೈನಲ್ಲಿ ಅರೆಸ್ಟ್

    ವಂಚನೆ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ಅಭ್ಯರ್ಥಿ ದುಬೈನಲ್ಲಿ ಅರೆಸ್ಟ್

    ತಿರುವನಂತಪುರಂ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ದುಬೈ ಪೊಲೀಸರು ಬಂಧಿಸಿದ್ದಾರೆ.

    ವಂಚನೆ ಪ್ರಕರಣದ ಸಂಬಂಧ ತುಷಾರ್ ವೆಲ್ಲಪಲ್ಲಿ ಅವರನ್ನು ದುಬೈ ಬಳಿಯ ಅಜ್ಮಾನ್‍ನಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ತುಷಾರ್ ವೆಲ್ಲಪಲ್ಲಿ ಅವರು ಭಾರತೀಯ ಧರ್ಮಸೇನಾ (ಬಿಡಿಜೆಎಸ್) ಪಕ್ಷದ ಮುಖ್ಯಸ್ಥರಾಗಿದ್ದಾರೆ. ತುಷಾರ್ ಅವರ ಬಂಧನದ ಸಂಬಂಧ ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಅವರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪತ್ರ ಬರೆದಿದ್ದಾರೆ.

    ಬಿಡಿಜೆಎಸ್ ಪಕ್ಷದ ಉಪಾಧ್ಯಕ್ಷ ತುಷಾರ್ ವೆಲ್ಲಪಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಂಧನದಲ್ಲಿರುವ ಅವರ ಯೋಗಕ್ಷೇಮ ಮತ್ತು ಆರೋಗ್ಯದ ಬಗ್ಗೆ ನಾನು ಕಳವಲಳಿ ವ್ಯಕ್ತಪಡಿಸುತ್ತೇನೆ. ಈ ವಿಷಯದಲ್ಲಿ ವಿದೇಶಾಂಗ ಸಚಿವರು ವೈಯಕ್ತಿಕ ಗಮನ ಹರಿಸಬೇಕು. ಕಾನೂನಿನ ಮಿತಿಯಲ್ಲಿ ಎಲ್ಲ ರೀತಿಯ ಸಹಾಯಗಳನ್ನು ತುಷಾರ್ ಅವರಿಗೆ ಲಭ್ಯವಾಗುವಂತೆ ಸಹಕರಿಸಿ ಎಂದು ಸಿಎಂ ಪಿಣರಾಯಿ ವಿಜಯನ್ ಅವರು, ಪತ್ರದ ಮೂಲಕ ಜೈಶಂಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ತುಷಾರ್ ವೆಲ್ಲಪಲ್ಲಿ ಅವರು ದುಬೈನಲ್ಲಿ ಕಳೆದ 10 ವರ್ಷಗಳಿಂದ ಕಂಪೆನಿ ನಡೆಸುತ್ತಿದ್ದಾರೆ. ಆದರೆ ಈಗ ಆ ಕಂಪನಿ ನಷ್ಟವನ್ನು ಎದುರಿಸುತ್ತಿದೆ. ಹೀಗಾಗಿ ಉಪ ಗುತ್ತಿಗೆದಾರರು ನಷ್ಟಕ್ಕೆ ಪರಿಹಾರ ನೀಡುವಂತೆ ಕೇಳಿದ್ದಾರೆ. ಹೀಗಾಗಿ ತುಷಾರ್ ಅವರು ದುಬೈನಲ್ಲಿದ್ದಾಗ ಇತ್ತೀಚೆಗೆ ಪರಿಹಾರವಾಗಿ ನೀಡಿದ್ದ ಸುಮಾರು 15.66 ಕೋಟಿ ರೂ. (8 ಮಿಲಿಯನ್ ದಿರ್ಹಾಮ್ಸ್) ಚೆಕ್ ಬೌನ್ಸ್ ಆಗಿದೆ. ಇದರಿಂದಾಗಿ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು 7,06,367 (ಶೇ.64.67) ಮತ ಗಳಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ತುಷಾರ್ ವೆಲ್ಲಪಲ್ಲಿ ಅವರು 78,816 ಮತ ಪಡೆದಿದ್ದರು.

  • ವಯನಾಡಿನಿಂದ ಮೂರು ಟ್ರಕ್‍ಗಳಲ್ಲಿ ಸಾಗಿಸುತ್ತಿದ್ದ ಗೋವುಗಳು ಪೊಲೀಸರ ವಶಕ್ಕೆ

    ವಯನಾಡಿನಿಂದ ಮೂರು ಟ್ರಕ್‍ಗಳಲ್ಲಿ ಸಾಗಿಸುತ್ತಿದ್ದ ಗೋವುಗಳು ಪೊಲೀಸರ ವಶಕ್ಕೆ

    ಉಡುಪಿ: ಮೂರು ಟ್ರಕ್‍ಗಳಲ್ಲಿ ಕೇರಳದ ವಯನಾಡಿನಿಂದ ಗೋಶಾಲೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಉಡುಪಿ ಜಿಲ್ಲೆ ಕಾಪುವಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ದಾಖಲೆ ಯಾವುದೂ ಇಲ್ಲದೆ ಅಕ್ರಮ ಗೋವು ಸಾಗಾಟದ ಶಂಕೆಯಲ್ಲಿ ಬೆನ್ನು ಹತ್ತಿದ್ದ ಮಂಗಳೂರು ಪೊಲೀಸರು ಕಾಪು ಠಾಣಾ ವ್ಯಾಪ್ತಿಯಲ್ಲಿ 3 ಟ್ರಕ್‍ನಲ್ಲಿದ್ದ ಜಾನುವಾರುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಶಿರ್ವದಲ್ಲಿ ಹೊಸದಾಗಿ ಆರಂಭಿಸಿದ ಗೋ ಶಾಲೆಗೆ ಗೋವುಗಳನ್ನು ತರಲಾಗಿದೆ ಎಂದು ಗೋಶಾಲೆ ಮ್ಯಾನೇಜರ್ ಗಿರೀಶ ಅವರು ತಿಳಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಅಕ್ರಮ ಸಾಗಾಟದ ರೀತಿ ಕಂಡು ಬಂದಿದ್ದು ಆರ್‍.ಟಿ.ಓ ನಿಯಮ ಉಲ್ಲಂಘನೆ, ಅಕ್ರಮ ಸಾಗಾಟ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಕೇರಳದಿಂದ ತಂದ ಜಾನುವಾರುಗಳನ್ನು ಗೋವು ಶಾಲೆಗೆ ರವಾನಿಸಲಾಗಿದೆ. ಸಾಗಾಟದ ಸಂದರ್ಭದಲ್ಲಿ ಒಂದು ಗೋವು ಸಾವನಪ್ಪಿರುವುದು ಕೂಡಾ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

  • ಪ್ರಮಾಣ ವಚನ ಸ್ವೀಕಾರ ಬಳಿಕ ಸಹಿ ಮಾಡೋದನ್ನ ಮರೆತ ರಾಹುಲ್

    ಪ್ರಮಾಣ ವಚನ ಸ್ವೀಕಾರ ಬಳಿಕ ಸಹಿ ಮಾಡೋದನ್ನ ಮರೆತ ರಾಹುಲ್

    ನವದೆಹಲಿ: 4ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಸದನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಈ ವೇಳೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಹಿ ಮಾಡದೆ ಮುಂದೆ ಸಾಗಿದ ಘಟನೆ ನಡೆಯಿತು.

    17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ ಇಂದು ಆರಂಭವಾಯಿತು. ಸಂಸತ್‍ಗೆ ರಾಹುಲ್ ತಡವಾಗಿ ಆಗಮಿಸಿದ್ದರು. ಇದಕ್ಕೂ ಮುನ್ನ ಹಲವು ನಾಯಕರು ರಾಹುಲ್ ಸಂಸತ್‍ಗೆ ಆಗಮಿಸದೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದರು.

    ಸಂಸತ್ ಆಗಮಿಸಿದ ರಾಹುಲ್ ಪ್ರಮಾಣ ವಚನ ಸ್ವೀಕರಿಸಿ ಮುಂದೇ ಸಾಗಿದರು. ಈ ಹಂತದಲ್ಲಿ ರಾಜ್‍ನಾಥ್ ಸಿಂಗ್ ಅವರು ರಾಹುಲ್‍ಗೆ ಸಹಿ ಮಾಡುವಂತೆ ತಿಳಿಸಿದರು. ಪುನಃ ಮರಳಿದ ರಾಹುಲ್ ಸಹಿ ಮಾಡಿ ಸ್ಪೀಕರ್ ಬಳಿ ತೆರಳಿ ಶುಭ ಕೋರಿದರು. ಬಳಿಕ ಪಕ್ಷದ ಮುಖಂಡ ಬಳಿ ತೆರಳಿ ಶುಭ ಕೋರಿದರು. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ಕೂಡ ಸಂಸತ್ ನಲ್ಲಿ ಹಾಜರಿದ್ದರು.

    ಪ್ರಮಾಣ ವಚನ ಸ್ವೀಕರಿಸುವ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, 4ನೇ ಬಾರಿಗೆ ಲೋಕಸಭಾ ಸಂಸತ್ ಸದಸ್ಯರಾಗಿ ಇಂದಿನಿಂದ ಕಾರ್ಯಾರಂಭ ಮಾಡುತ್ತಿದ್ದು, ಕೇರಳ ವಯಾನಾಡು ಜನತೆಗೆ ಧನ್ಯವಾದ. ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇನ್ನಿಂಗ್ಸ್ ಶುರು ಮಾಡುತ್ತಿದ್ದೇನೆ. ಭಾರತದ ಸಂವಿಧಾನದಲ್ಲಿ ನಿಷ್ಠೆ ಮತ್ತು ನಂಬಿಕೆಯನ್ನು ಹೊಂದಿರುತ್ತೇನೆ ಎಂದು ತಿಳಿಸಿದ್ದರು.

    ರಾಹುಲ್ ಗಾಂಧಿ ಅವರು ಈ ಬಾರಿ 2 ಕ್ಷೇತ್ರಗಳಿಂದ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲುಂಡು, ಕೇರಳ ವಯನಾಡಿಯಲ್ಲಿ ಗೆಲುವು ಪಡೆದಿದ್ದರು.