Tag: Wayanadu

  • ವಯನಾಡಿನಲ್ಲಿ ಭಾರೀ ಮಳೆ – ಕಾಡಿನೊಳಗೆ ಭೂಕುಸಿತದ ಆತಂಕ, 12 ಜಿಲ್ಲೆಗಳಿಗೆ ಅಲರ್ಟ್

    ವಯನಾಡಿನಲ್ಲಿ ಭಾರೀ ಮಳೆ – ಕಾಡಿನೊಳಗೆ ಭೂಕುಸಿತದ ಆತಂಕ, 12 ಜಿಲ್ಲೆಗಳಿಗೆ ಅಲರ್ಟ್

    -ವರುಣನ ಅಬ್ಬರಕ್ಕೆ ಕಳೆದ ವರ್ಷದ ದುರಂತ ನೆನಪಿಸಿದ ಅವಶೇಷಗಳು

    ತಿರುವನಂತಪುರಂ: ಕೇರಳದಲ್ಲಿ (Kerala) ಮುಂಗಾರು ಅಬ್ಬರ ಜೋರಾಗಿದ್ದು, ರಾಜ್ಯದ 12 ಜಿಲ್ಲೆಗಳಿಗೆ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ.

    ರಾಜ್ಯದ ವಯನಾಡು, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಿಗೆ ಬುಧವಾರ ಆರೆಂಜ್ ಅಲರ್ಟ್ ಹಾಗೂ ಪತ್ತನಂತಿಟ್ಟ, ಆಲೆಪ್ಪಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಚಿತ್ರದುರ್ಗ | ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ

    ಕಳೆದ ವರ್ಷ ಸುರಿದ ಭಾರೀ ಮಳೆಗೆ ವಯನಾಡು ಅಕ್ಷರಶಃ ಬೆಚ್ಚಿ ಬಿದ್ದು, ಸುಮಾರು 250ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಇದೀಗ ಮಂಗಳವಾರ ಸಂಜೆಯಿಂದ ಮತ್ತೆ ಮಳೆ ಆರ್ಭಟ ಜೋರಾಗಿದೆ. ದುರಂತದಲ್ಲಿ ಕೊಚ್ಚಿ ಹೋಗಿದ್ದ ಚೂರಲ್ಮಲ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಸದ್ಯ ಕಾಡಿನೊಳಗೆ ಭೂಕುಸಿತ ಆಗಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ.

    ಸದ್ಯ ಭಾರೀ ಮಳೆಯಿಂದಾಗಿ ಕಳೆದ ವರ್ಷದಲ್ಲಿ ಸಂಭವಿಸಿದ್ದ ದುರಂತದ ಅವಶೇಷಗಳು ತೇಲಿಕೊಂಡು ಬರುತ್ತಿವೆ. ಇನ್ನೂ ವೆಲ್ಲರಿಮಲದ ಪುನ್ನಪುಳ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

  • ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು

    ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು

    ಮೈಸೂರು: ಕೇರಳದ (Kerala) ವಯನಾಡಿನಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಕಬಿನಿ ಜಲಾಶಯಕ್ಕೆ (Kabini Dam) 22,487 ಕ್ಯುಸೆಕ್ ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

     

    ವರ್ಷಕ್ಕೆ 2 ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯವೆಂದರೆ ಅದು ಮೈಸೂರಿನ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ. ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗೆ ನೀರನ್ನು ಇದೇ ಜಲಾಶಯದಿಂದ ಪೊರೈಸಲಾಗುತ್ತದೆ.

    ಇದೀಗ ಕಬಿನಿ ಡ್ಯಾಂಗೆ 22,487 ಕ್ಯುಸೆಕ್ ನೀರು ಹರಿದು ಬರುತ್ತಿದೆ. 2,284 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಸದ್ಯ 2,280.84 ಅಡಿ ನೀರಿದೆ. ಇನ್ನೂ 19.52 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಈಗ 17.38 ಟಿಎಂಸಿ ನೀರಿದೆ. 21,000 ಕ್ಯುಸೆಕ್ ಹೊರಹರಿವಿದೆ.ಇದನ್ನೂ ಓದಿ: ಕ್ರೊಯೇಷಿಯಾಗೆ ಮೋದಿ ಭೇಟಿ – ಪ್ರಧಾನಿ ಪ್ಲೆಂಕೋವಿಕ್ ಜೊತೆ ಹಲವು ಒಪ್ಪಂದಗಳಿಗೆ ಸಹಿ

  • ಪ್ರಿಯಾಂಕಾ ಗಾಂಧಿ ಬಹುಮತದಿಂದ ಜಯಗಳಿಸುವುದು ನಿಶ್ಚಿತ: ಸಿದ್ದರಾಮಯ್ಯ

    ಪ್ರಿಯಾಂಕಾ ಗಾಂಧಿ ಬಹುಮತದಿಂದ ಜಯಗಳಿಸುವುದು ನಿಶ್ಚಿತ: ಸಿದ್ದರಾಮಯ್ಯ

    ವಯನಾಡ್: ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ (BJP) ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು. ಇದನ್ನೂ ಓದಿ: ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

    ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿದಿದ್ದಾರೆ.

     

  • ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ವಯನಾಡ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

    ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

    ಉತ್ತರ ಪ್ರದೇಶದ (UttaraPradesh) ರಾಯ್ ಬರೇಲಿ (Raebareli) ಮತ್ತು ಕೇರಳದ (Kerala) ವಯನಾಡ್‌ನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು. ಈ ಹಿನ್ನಲೆ ವಯನಾಡ್‌ನಲ್ಲಿ ಉಪ ಚುನಾವಣೆ ನಡೆಯುತ್ತಿದೆ.

    ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.

    ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿ ತನ್ನ ಮಹಿಳಾ ಮೊರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯಾ ಹರಿದಾಸ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

    ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್, ನನ್ನ ಪ್ರತಿಸ್ಪರ್ಧಿ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಕಾಂಗ್ರೆಸ್ ಪರ ಕಠಿಣ ಸವಾಲು ಎದುರಿಸಲಿದ್ದಾರೆ. ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ತೊರೆದರು. ವಯನಾಡ್ ಜನರು ಭೂಕುಸಿತದಿಂದ ತತ್ತರಿಸಿದಾಗ ಈ ಸಮಸ್ಯೆಗಳನ್ನು ಪ್ರಸ್ತಾಪಿಸಲು ಸಂಸತ್ತಿನಲ್ಲಿ ಅವರಿಗೆ ಯಾವುದೇ ಪ್ರತಿನಿಧಿ ಇರಲಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್

  • ಕೈಕುಲುಕಿ ರಾಹುಲ್ ಗಾಂಧಿಗೆ ಯುವಕ ಕಿಸ್- ವಿಡಿಯೋ

    ಕೈಕುಲುಕಿ ರಾಹುಲ್ ಗಾಂಧಿಗೆ ಯುವಕ ಕಿಸ್- ವಿಡಿಯೋ

    ತಿರುವನಂತಪುರಂ: ಸಂಸದ ರಾಹುಲ್ ಗಾಂಧಿಯವರು ಇಂದು ತಮ್ಮ ಕ್ಷೇತ್ರ ವಯನಾಡಿಗೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿ ಯುವಕನೊಬ್ಬ ಕೈಕುಲುಕಿ ಮುತ್ತು ಕೊಟ್ಟ ಪ್ರಸಂಗ ನಡೆದಿದೆ.

    ಹೌದು. ಕೇರಳದ ವಯನಾಡು ಸಂಸದರಾಗಿರುವ ರಾಹುಲ್ ಗಾಂಧಿಯವರು ಇತ್ತೀಚೆಗೆ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಲು ತೆರಳಿದ್ದಾರೆ. ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಕಿಸ್ ಮಾಡಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?
    ಪ್ರವಾಹಕ್ಕೀಡಾದ ಪ್ರದೇಶಗಳ ವೀಕ್ಷಣೆಗೆಂದು ರಾಹುಲ್ ಗಾಂಧಿಯವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದವರು ರಾಹುಲ್ ಗಾಂಧಿಯವರ ಕೈಕುಲುಕಿ ಸ್ವಾಗತ ಮಾಡುತ್ತಿದ್ದರು. ಇದೇ ವೇಳೆ ಬಂದ ಯುವಕ ಕೈ ಕುಲುಕಿ, ಕೂಡಲೇ ಕಾರೊಳಗಿದ್ದ ರಾಹುಲ್ ಅವರನ್ನು ಎಳೆದುಕೊಂಡು ಕೆನ್ನೆಗೆ ಕಿಸ್ ಮಾಡಿದ್ದಾನೆ. ಆದರೆ ಈ ವೇಳೆ ರಾಹುಲ್ ಗಾಂಧಿಯವರು ಯುವಕನನ್ನು ದೂರ ತಳ್ಳದೆ ನಕ್ಕಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಅತೀ ಹೆಚ್ಚು ಭದ್ರತೆಯನ್ನು ಹೊಂದಿರುವ ದೇಶದ ರಾಜಕಾರಣಿಗಳ ಪೈಕಿ ರಾಹುಲ್ ಗಾಂಧಿ ಕೂಡ ಒಬ್ಬರಾಗಿದ್ದಾರೆ. ರಾಹುಲ್ ಗಾಂಧಿ ಜೊತೆ ಯಾವತ್ತೂ ಎಸ್‍ಪಿಜಿ(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಕಮಾಂಡೋಗಳು ಇದ್ದೇ ಇರುತ್ತಾರೆ. ರಾಹುಲ್ ಗಾಂಧಿಯವರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವಾಗ ಹಾಗೂ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನಗಳ ಮಧ್ಯೆಯೇ ಇರುತ್ತಿದ್ದರು. ಇದರಿಂದ ಕಮಾಂಡೋಗಳಿಗೆ ರಾಹುಲ್ ಗೆ ರಕ್ಷಣೆ ಕೊಡಲು ಕಷ್ಟವಾಗುತಿತ್ತು.

    ಕಳೆದ ಫೆಬ್ರವರಿ ತಿಂಗಳಲ್ಲಿ ಗುಜರಾತಿನನ ವಲ್ಸದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯೊಬ್ಬರು ವೇದಿಕೆಯಲ್ಲೇ ರಾಹುಲ್ ಗಾಂಧಿಗೆ ಕಿಸ್ ಕೊಟ್ಟಿದ್ದರು. ಏಕಾಏಕಿ ವೇದಿಕೆ ಏರಿದ ಮಹಿಳೆ ರಾಹುಲ್ ಅವರಿಗೆ ಮುತ್ತಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

  • ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ

    ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ

    ನವದೆಹಲಿ: ಇಂದು ಲೋಕಸಮರದ ಮಹಾತೀರ್ಪಿನ ಹಿನ್ನೆಲೆ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ.

    ರಾಹುಲ್ ಗಾಂಧಿಯವರು ಅಮೆಥಿ ಹಾಗೂ ವಯನಾಡು ಎರಡು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ನಿಂತಿದ್ದ ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಆರಂಭಿಕ ಸುತ್ತುಗಳಲ್ಲಿ 5 ಸಾವಿರ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

    ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ ರಾಯ್‍ಬರೇಲಿಯಲ್ಲಿ ಕಣಕ್ಕೆ ಇಳಿದಿರುವ ಸೋನಿಯಾ ಗಾಂಧಿ ಮುನ್ನಡೆಯಲಿದ್ದಾರೆ.

  • ವಯನಾಡಿನಲ್ಲಿ ಪದ್ಮಾವತಿ ಹವಾ – ರಾಹುಲ್ ಗೆಲುವಿಗೆ ಸಾರಥಿಯಾಗಿ ನಿಂತ ರಮ್ಯಾ!

    ವಯನಾಡಿನಲ್ಲಿ ಪದ್ಮಾವತಿ ಹವಾ – ರಾಹುಲ್ ಗೆಲುವಿಗೆ ಸಾರಥಿಯಾಗಿ ನಿಂತ ರಮ್ಯಾ!

    ಬೆಂಗಳೂರು: ರಾಜ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವೂ ಪ್ರಚಾರಕ್ಕೆ ಬಾರದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು, ಸದ್ಯ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.

    ಮಂಡ್ಯದ ಮಾಜಿ ಸಂಸದೆ, ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ರಮ್ಯಾ 2018ರ ವಿಧಾನಸಭಾ ಚುನಾವಣೆಯ ವೇಳೆ ಪ್ರಚಾರಕ್ಕೆ ಬಂದಿರಲಿಲ್ಲ. ಹೀಗಾಗಿ ಈ ಬಾರಿ ಪ್ರಚಾರಕ್ಕೆ ಬರುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಚುನಾವಣೆಯ ದಿನಾಂಕ ಹತ್ತಿರ ಬಂದರೂ ರಮ್ಯಾ ಮಾತ್ರ ರಾಜ್ಯದ ಕಡೆ ತಲೆ ಹಾಕಿಲ್ಲ. ಹೀಗಾಗಿ ರಮ್ಯಾ ಈಗ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ರಮ್ಯಾ ಈಗ ಕೇರಳದಲ್ಲಿ ರಾಹುಲ್ ಪರ ಪ್ರಚಾರ ನಡೆಸುತ್ತಿದ್ದಾರೆ.

    ರಮ್ಯಾ ಈಗ ವಯನಾಡಿನಲ್ಲಿ ಸೋಷಿಯಲ್ ಮೀಡಿಯಾ ಟೀಮ್ ಜೊತೆ ಫುಲ್ ಬ್ಯುಸಿಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ವಯನಾಡಿನಿಂದ ರಾಹುಲ್ ಗಾಂಧಿ ಅವರು ಸ್ಪರ್ಧಿಸುತ್ತಿರುವ ಹಿನ್ನೆಲೆ ರಾಹುಲ್ ಗೆಲುವಿಗೆ ಸಾರಥಿಯಾಗಿ ಸದ್ಯ ರಮ್ಯಾ ಅವರು ನಿಂತಿದ್ದಾರೆ.

    ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಟೀಂ ಜೊತೆ ವಯನಾಡಿನಲ್ಲಿ ಠಿಕಾಣಿ ಹೂಡಿರುವ ರಮ್ಯಾ, ಟೀಂ ಜೊತೆ ಮೀಟಿಂಗ್ ಮೇಲೆ ಮೀಟಿಂಗ್, ಚರ್ಚೆ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಲೋಕಸಮರದ ಹಿನ್ನೆಲೆ ವಯನಾಡಿನಲ್ಲಿ ರಾಹುಲ್ ಅಲೆ ಎಬ್ಬಿಸಲು ರಮ್ಯಾ ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಾರ್ಚ್ 18 ರಂದು ಬೆಂಗಳೂರಿನ ನವ ಉದ್ಯಮಿಗಳ ಜೊತೆ ಮಾನ್ಯತಾ ಟೆಕ್ ಪಾರ್ಕಿನಲ್ಲಿ ರಾಹುಲ್ ಜೊತೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಮ್ಯಾ ಕಾಣಿಸಿಕೊಂಡಿದ್ದರು.

  • ವಯನಾಡಿನಲ್ಲಿ ಸೋಲಿಸುತ್ತೇವೆ – ಕೇರಳದಲ್ಲಿ ರಾಹುಲ್ ಸ್ಪರ್ಧೆಗೆ ಸಿಪಿಎಂ ಭಾರೀ ವಿರೋಧ

    ವಯನಾಡಿನಲ್ಲಿ ಸೋಲಿಸುತ್ತೇವೆ – ಕೇರಳದಲ್ಲಿ ರಾಹುಲ್ ಸ್ಪರ್ಧೆಗೆ ಸಿಪಿಎಂ ಭಾರೀ ವಿರೋಧ

    ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡುವಿನಿಂದ ಸ್ಪರ್ಧಿಸುತ್ತಿರುವುದಕ್ಕೆ ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಮಾಕ್ರ್ಸಿಸ್ಟ್(ಸಿಪಿಎಂ) ಬಲವಾಗಿ ವಿರೋಧಿಸಿದೆ.

    ಸಿಪಿಎಂ ನೇತೃತ್ವದ ಎಲ್‍ಡಿಎಫ್ ಈಗಾಗಲೇ ವಯನಾಡುವಿನಲ್ಲಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿಯ(ಸಿಪಿಐ) ಪಿ.ಪಿ ಸುನೀರ್‍ರನ್ನು ಲೋಕಸಮರಕ್ಕೆ ಕಣಕ್ಕಿಳಿಸಲಾಗಿದೆ. ಆದ್ರೆ ಈಗ ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಿಪಿಎಂ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಿರಿಯ ನಾಯಕ ಪ್ರಕಾಶ್ ಕಾರಟ್ ಅವರು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ರಾಹುಲ್ ಗಾಂಧಿಯನ್ನು ವಯನಾಡುವಿನಲ್ಲಿ ಸೋಲುವಂತೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರಕಾಶ್ ಕಾರಟ್ ಅವರು, ಕಾಂಗ್ರೆಸ್ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ರಾಹುಲ್ ಅವರನ್ನು ವಯನಾಡುವಿನಿಂದ ಕಣಕ್ಕಿಳಿಸಿದೆ. ಬಿಜೆಪಿಯನ್ನು ಸೋಲಿಸಲು ನಾವು ಒಂದಾದರೆ ಕೇರಳದಲ್ಲಿ ನಮ್ಮ ವಿರುದ್ಧವೇ ರಾಹುಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕೇರಳದಲ್ಲಿ ಬಿಜೆಪಿ ವಿರುದ್ಧವಾಗಿ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್‍ಡಿಎಫ್) ಕೆಲಸ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಕೇರಳದಲ್ಲಿ ಸಿಪಿಎಂ ವಿರುದ್ಧ ನಿಲ್ಲಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್ಸಿನ ಈ ನಿರ್ಧಾರವನ್ನು ನಾವು ವಿರೋಧಿಸುತ್ತೆವೆ. ಅಲ್ಲದೇ ರಾಹುಲ್‍ರನ್ನು ಈ ಚುನಾವಣೆಯಲ್ಲಿ ಸೋಲಿಸಲು ಶ್ರಮಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

    ಇದರ ಜೊತೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೂಡ ಕಾಂಗ್ರೆಸ್ ನಿರ್ಧಾರವನ್ನು ಖಂಡಿಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಿದರೆ ಅದು ಬಿಜೆಪಿ ವಿರುದ್ಧ ಆಗಲ್ಲ ಸಿಪಿಎಂ ವಿರುದ್ಧವಾಗಿದೆ. ಕೇರಳದಲ್ಲಿ ಕಾಂಗ್ರೆಸ್ಸನ್ನು ಸಿಪಿಎಂ ಮಣಿಸೋದು ಖಚಿತ ಎಂದು ಹೇಳಿದರು.

    ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ವಯನಾಡುವಿನಲ್ಲಿ ಕಾಂಗ್ರೆಸ್ಸಿನಿಂದ ಎಂ.ಐ ಶಹನಾವಸ್ ಸ್ಪರ್ಧಿಸಿ 3,77,035 ಮತಗಳನ್ನು ಪಡೆದಿದ್ದರು. ಸಿಪಿಐನ ಸತ್ಯನ್ ವೋಕೆರಿ 3,56,165 ಮತಗಳನ್ನು ಗಳಿಸಿದ್ದರು. ಹಾಗೆಯೇ ಬಿಜೆಪಿಯ ಪಿ.ಆರ್ ರಸ್‍ಮಿಲ್‍ನಾಥ್ ಸ್ಪರ್ಧಿಸಿ 80,752 ಮತಗಳನ್ನು ಪಡೆದಿದ್ದರು. 2018ರ ನವೆಂಬರ್ 21 ರಂದು ಶಹನಾವಸ್ ಚೆನ್ನೈ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.