Tag: Waziristan

  • ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನದ 7 ಸೈನಿಕರ ಸಾವು – ಆಫ್ಘನ್ ಗಡಿಯ ಉತ್ತರ ವಜೀರಿಸ್ತಾನದಲ್ಲಿ ದಾಳಿ

    ಆತ್ಮಾಹುತಿ ದಾಳಿಯಲ್ಲಿ ಪಾಕಿಸ್ತಾನದ 7 ಸೈನಿಕರ ಸಾವು – ಆಫ್ಘನ್ ಗಡಿಯ ಉತ್ತರ ವಜೀರಿಸ್ತಾನದಲ್ಲಿ ದಾಳಿ

    ಇಸ್ಲಾಮಾಬಾದ್: ಅಫ್ಘಾನ್‌ ಗಡಿ ಬಳಿಯ ಉತ್ತರ ವಜೀರಿಸ್ತಾನದ ಮಿರ್‌ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 7 ಮಂದಿ ಪಾಕಿಸ್ತಾನಿ ಸೈನಿಕರು (Pakistani Soldiers) ಸಾವನ್ನಪ್ಪಿದ್ದಾರೆ.

    ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಗೆ ಸಂಬಂಧಿಸಿದ ಆತ್ಮಹತ್ಯಾ ಕಾರ್ ಬಾಂಬರ್, ಮಿರ್ ಅಲಿಯಲ್ಲಿರುವ ಭದ್ರತಾ ಪಡೆಗಳ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೃಹತ್ ಸ್ಫೋಟವು ಹತ್ತಿರದ ಮನೆಗಳಿಗೆ ಹಾನಿಯನ್ನುಂಟು ಮಾಡಿದೆ. ಇದನ್ನೂ ಓದಿ: ಕೆನಡಾದಲ್ಲಿ ನಟ ಕಪಿಲ್ ಶರ್ಮಾ ಕೆಫೆ ಮೇಲೆ 3ನೇ ಬಾರಿ ಗುಂಡಿನ ದಾಳಿ

    ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ದೋಹಾದಲ್ಲಿ ಶಾಂತಿ ಮಾತುಕತೆ ನಡೆಸಲು ಕೆಲವೇ ಗಂಟೆಗಳ ಮೊದಲು ಈ ದಾಳಿ ನಡೆದಿದೆ. ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಹೊತ್ತುಕೊಂಡಿದೆ. ಅದರ ಖಾಲಿದ್ ಬಿನ್ ವಲೀದ್ ಆತ್ಮಹತ್ಯಾ ಘಟಕ ಮತ್ತು ತೆಹ್ರೀಕ್ ತಾಲಿಬಾನ್ ಗುಲ್ಬಹಾದಾರ್ ಈ ದಾಳಿಗಳನ್ನು ನಡೆಸಿವೆ ಎಂದು ಹೇಳಿದೆ.

    ಒಂದು ವಾರದ ತೀವ್ರ ಗಡಿ ಹೋರಾಟದ ನಂತರ ಡುರಾಂಡ್ ರೇಖೆಯಲ್ಲಿ ನಡೆದ ಕದನ ವಿರಾಮದ ಸಮಯದಲ್ಲಿ ಈ ದಾಳಿ ನಡೆದಿದೆ. ಇದರಲ್ಲಿ ಎರಡೂ ಕಡೆಗಳಲ್ಲಿ ಹತ್ತಾರು ಜನರು ಸಾವನ್ನಪ್ಪಿದರು. ಅಫ್ಘಾನ್ ತಾಲಿಬಾನ್ ಕೋರಿಕೆಯ ಮೇರೆಗೆ ಕದನ ವಿರಾಮವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷ – 2 ಗಂಟೆಗೂ ಅಧಿಕ ಕಾಲ ಪುಟಿನ್ ಜೊತೆ ಟ್ರಂಪ್ ಮಾತು

    ಮಿರ್ ಅಲಿಯಲ್ಲಿ ಭದ್ರತಾ ಪಡೆಗಳ ಮೇಲೆ ಖವಾರಿಜ್ ಒಬ್ಬ ಆತ್ಮಹತ್ಯಾ ದಾಳಿ ನಡೆಸಲು ಪ್ರಯತ್ನಿಸಿದ. ಒಬ್ಬ ಖರ್ಜಿ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಭದ್ರತಾ ಶಿಬಿರದ ಗೋಡೆಗೆ ಡಿಕ್ಕಿ ಹೊಡೆದ. ನಂತರ ಇನ್ನೂ ಮೂವರು ಖವಾರಿಜ್‌ಗಳು ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದರು. ಉತ್ತರ ವಜೀರಿಸ್ತಾನದಲ್ಲಿ ಇತ್ತೀಚಿಗೆ ನಡೆದ ಅತ್ಯಂತ ಗಂಭೀರವಾದ ಉಗ್ರಗಾಮಿ ದಾಳಿಗಳಲ್ಲಿ ಇದು ಕೂಡ ಒಂದು ಎನ್ನಲಾಗಿದೆ.

  • ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ನವದೆಹಲಿ: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ (Waziristan) ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ (Suicide Bomber Attack) ಭಾರತವೇ ಹೊಣೆ ಎಂದು ಆರೋಪಿಸಿದ್ದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.

    ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದು, ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ. ಉಸುದ್-ಅಲ್-ಹರ್ಬ್ ಸಂಘಟನೆ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ. ಆದರೆ ದಾಳಿಯ ಹಿಂದೆ ಭಾರತದ ಪಾತ್ರವಿದೆ ಎಂದು ಪಾಕ್ ಆರೋಪಿಸಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂ ಭರ್ತಿ – ನಾಳೆ ಕಾವೇರಿ ಬಾಗಿನ ಅರ್ಪಿಸಿ ಸಿಎಂ ಹೊಸ ದಾಖಲೆ

    ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ವಿದೇಶಾಂಗ ಸಚಿವಾಲಯ ( Ministry of External Affairs), ವಜೀರಿಸ್ತಾನ್‌ನಲ್ಲಿ ಜೂನ್ 28ರಂದು ನಡೆದಿರುವ ದಾಳಿಗೆ ಸಂಬಂಧಿಸಿದಂತೆ ಭಾರತವನ್ನು ದೂಷಿಸಲು ಯತ್ನಿಸಿದ ಪಾಕಿಸ್ತಾನದ ಹೇಳಿಕೆಯನ್ನು ಗಮನಿಸಿದ್ದೇವೆ. ಪಾಕ್ ಆರೋಪವು ತಿರಸ್ಕಾರಕ್ಕೆ ಅರ್ಹವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಿ- ರನ್ಯಾ ರಾವ್‌ಗೆ ಮಹಿಳಾ ಕೈದಿಗಳಿಂದಲೇ ಕಿರುಕುಳ!

    ಘಟನೆ ಏನು?
    ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಂಬ್ ಸ್ಫೋಟಗೊಂಡಿದೆ. ಇದರಿಂದ 13 ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ಸ್ಯಾನಿಟರಿ ಪ್ಯಾಡ್ ಸುಟ್ಟ ಕೇಸ್ – ಫರಹತಾಬಾದ್ ಪಿಹೆಚ್‌ಸಿ ವೈದ್ಯಾಧಿಕಾರಿಗೆ ನೋಟಿಸ್

  • ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ – ನಾಲ್ವರಿಗೆ ಗಾಯ

    ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ – ನಾಲ್ವರಿಗೆ ಗಾಯ

    ಇಸ್ಲಾಮಾಬಾದ್: ಬಲೂಚಿಸ್ತಾನದಲ್ಲಿ ರೈಲು ಹೈಜಾಕ್ ಪ್ರಕರಣದ ಬೆನ್ನಲ್ಲೇ ಪಾಕಿಸ್ತಾನ (Pakistan) ವಜರಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಜಮಿಯತ್ ಉಲೇಮಾ-ಎ-ಇಸ್ಲಾಂ(ಜೆಯುಐ) ಜಿಲ್ಲಾ ಮುಖ್ಯಸ್ಥ ಅಬ್ದುಲ್ಲಾ ನದೀಮ್ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

    ಅಜಮ್ ವಾರ್ಸಾಕ್ ಬೈಪಾಸ್ ರಸ್ತೆಯಲ್ಲಿರುವ ಮೌಲಾನಾ ಅಬ್ದುಲ್ ಅಜೀಜ್ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಮಾ. 14ರ ಶುಕ್ರವಾರದಂದು ಪ್ರಾರ್ಥನೆಯ ಸಮಯದಲ್ಲಿ ಮಸೀದಿಯ ಪ್ರವಚನ ಪೀಠದಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

    ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಗಾಯಾಳುಗಳನ್ನು ವಾನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತನಿಖೆಯ ಅಂಗವಾಗಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಸಿವೆ. ಇದನ್ನೂ ಓದಿ: 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರಕ್ಕೆ ಗ್ರೀನ್‌ ಸಿಗ್ನಲ್‌ – ಹೊಸೂರು ಬಳಿ 2 ಸ್ಥಳ ಫೈನಲ್‌

    ಕಳೆದ ಒಂದು ತಿಂಗಳ ಹಿಂದೆ ಪಾಕಿಸ್ತಾನದ ನೌಶೇರಾ ಜಿಲ್ಲೆಯ ದಾರುಲ್ ಉಲೂಮ್ ಹಕ್ಕಾನಿಯಾ ಸೆಮಿನರಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು. ದಾಳಿಯಲ್ಲಿ ಜೆಯುಐ-ಎಸ್ ನಾಯಕ ಮೌಲಾನಾ ಹಮೀದುಲ್ ಹಕ್ ಹಕ್ಕಾನಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

    ಕೆಲ ದಿನಗಳ ಹಿಂದೆ ಬಲೂಚಿಸ್ತಾನದಲ್ಲಿ ಬಲೂಚ್ ಪ್ರತ್ಯೇಕತಾ ವಾದಿ ಉಗ್ರರ ಗುಂಪು ರೈಲನ್ನು ಹೈಜಾಕ್ ಮಾಡಿತ್ತು. ಈ ಎಲ್ಲಾ ದಾಳಿಗಳ ಹಿಂದೆ ಕಾಬೂಲ್‌ನ ಕೈವಾಡವಿದೆ ಎಂದು ಪಾಕಿಸ್ತಾನ ಸರ್ಕಾರ ಆರೋಪಿಸಿದೆ.