Tag: WBSSC

  • ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

    ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

    ಕೋಲ್ಕತ್ತಾ: ಶಿಕ್ಷಕರಿಂದ (Teachers) ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಾಗ್ದಾಳಿ ನಡೆಸಿದ್ದಾರೆ.

    ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ (West Bengal) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು.

    ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, 26,000 ಶಿಕ್ಷಕರನ್ನ ವಜಾಗೊಳಿಸಿದ್ದು, ಚುನಾವಣಾ ತಂತ್ರಗಾರಿಕೆಯ ಭಾಗ. ಪಶ್ಮಿಮ ಬಂಗಾಳದಲ್ಲಿ ಈ ಬಾರಿ ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದಲೂ ಬಿಜೆಪಿ, ಕಾಂಗ್ರೆಸ್‌, ಸಿಪಿಎಂ ಪಕ್ಷಗಳಿಗೆ ಒಂದೇ ಒಂದು ವೋಟು ಬೀಳಲ್ಲ. ಬಿಜೆಪಿ ನ್ಯಾಯಾಲಯವನ್ನು ಖರೀದಿಸಿದೆ. ಆದ್ರೆ ನನಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋರ್ಟ್‌, ಸಿಬಿಐ, ಎನ್‌ಐಎ, ಬಿಎಸ್‌ಎಫ್‌ ಸೇರಿದಂತೆ ಮೊದಲಾದ ತನಿಖಾ ಸಂಸ್ಥೆಗಳನ್ನು ತನ್ನ ಅಧೀನದಲ್ಲಿಟುಕೊಂಡಿದೆ. ಇದು ಬಹಳ ದಿನ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.

    ಏನಿದು ಕೇಸ್‌?
    ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಇತ್ತೀಚೆಗಷ್ಟೇ ಆದೇಶಿಸಿತ್ತು. ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದ ಕೋರ್ಟ್‌ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್‌ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿತ್ತು.

    ಶಿಕ್ಷಕರ ನೇಮಕಾತಿ ನಡೆದಿದ್ದು ಹೇಗೆ?
    ಈ ಹಿಂದೆ 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿತ್ತು ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್‌ ವಿಚಾರಣೆ ನಡೆಸಿ, ನೇಮಕಾತಿಯನ್ನು ರದ್ದುಪಡಿಸಿತು.

    ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಸದ್ಯ ಕೋಲ್ಕತ್ತಾ ಕೋರ್ಟ್‌ ಆದೇಶ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    2019ರ ಚುನಾವಣೆಯಲ್ಲಿ 42 ಸ್ಥಾನಗಳ ಬಲಾ-ಬಲಾಯಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.

  • West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

    West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

    – 25,000 ಶಿಕ್ಷಕರ ಕೆಲಸಕ್ಕೆ ಕುತ್ತು – ವೇತನ ಹಿಂದಿರುಗಿಸಲು 4 ವಾರಗಳ ಗಡುವು

    ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.

    ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿರುವ ಕೋರ್ಟ್‌ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್‌ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ

    ನ್ಯಾಯಮೂರ್ತಿಗಳಾದ ದೇಬಂಗ್ಲು ಬಸಾಕ್ ಮತ್ತು ಮೊಹಮ್ಮದ್ ಶಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲು ಮತ್ತು 3 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಜೊತೆಗೆ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ (WBSSC) ಹೊಸದಾಗಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕೇಳಿದೆ. ಕೋಲ್ಕತ್ತಾ ಹೈಕೋರ್ಟ್‌ನ ಈ ಆದೇಶವನ್ನು ಸದ್ಯದಲ್ಲೇ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

    ಏನಿದು ಪ್ರಕರಣ?:
    ಈ ಹಿಂದೆ 24.640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್‌ ಸೋಮವಾರ ವಿಚಾರಣೆ ನಡೆಸಿತು. ಕೋರ್ಟ್‌ ಆದೇಶದ ಬಳಿಕ ಈ ದಿನಕ್ಕಾಗಿ ನಾವು ಕಾಯುತ್ತಿದ್ದೆವು. ಹಲವು ವರ್ಷಗಳ ಹೋರಾಟದ ಬಳಿಕ ಕೊನೆಗೂ ನ್ಯಾಯ ಸಿಕ್ಕಿದೆ ಉದ್ಯೋಗ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಇದನ್ನೂ ಓದಿ: ಮನೆಯಿಂದ ಕಳುಹಿಸಿದ 48 ಊಟಗಳಲ್ಲಿ ಕೇವಲ ಮೂರು ಬಾರಿ ಮಾತ್ರ ಮಾವಿನ ಹಣ್ಣಿತ್ತು – ಇಡಿ ಆರೋಪಕ್ಕೆ ಕೇಜ್ರಿವಾಲ್‌ ತಿರುಗೇಟು

  • ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್

    ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

    ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಬಂಧನಕ್ಕೊಳಪಡಿಸಿದೆ. ಇದನ್ನೂ ಓದಿ: ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್

    ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (WBSSC) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.

    ನಿನ್ನೆಯಷ್ಟೇ ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆ ಮೇಲೆ ದಾಳಿ ನಡೆಸಿ, 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು. ಇದನ್ನೂ ಓದಿ: ಬಹುಮಾನದ ಮೊತ್ತ 85 ಸಾವಿರಕ್ಕೆ ಏರಿಸಿದ ಕೆಲವೇ ಹೊತ್ತಲ್ಲಿ ಸಿಕ್ತು ಕಳೆದು ಹೋಗಿದ್ದ ಗಿಳಿ!

    ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿತ್ತು. ED ರೇಡ್ ವೇಳೆ ಅರ್ಪಿತಾ ಮನೆ ಆವರಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಂಡು, ಮೊಬೈಲ್ ಫೋನ್‌ಗಳನ್ನು ಹೊಂದಿರುವ ಬಗೆಗಿನ ಉದ್ದೇಶವನ್ನೂ ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]