Tag: weather department

  • ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯ ಒಳಗೆ ಭಾರೀ ಮಳೆಯ ಎಚ್ಚರಿಕೆ

    ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯ ಒಳಗೆ ಭಾರೀ ಮಳೆಯ ಎಚ್ಚರಿಕೆ

    – 9 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ

    ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

    ತಮಿಳುನಾಡಿನಲ್ಲಿ ಫೆಂಗಲ್ ಚಂಡುಮಾರುತದ ಪರಿಣಾಮ ಸೋಮವಾರ ತಡರಾತ್ರಿ 1:30ವರೆಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಕಡೆ ಮಳೆಯಾಗಿತ್ತು. ಜೋರು ಮಳೆಯಾದ ಪರಿಣಾಮ ರಸ್ತೆಗಳು ಕೆರೆಯಂತಾಗಿದೆ. ಇಂದು ಸಹ ರಾಜ್ಯದ ಅನೇಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಹೆಚ್ಚಾಗಿದೆ. ಇನ್ನೂ ಮಳೆಯ ಹಿನ್ನೆಲೆ ರಾಜ್ಯದ 9 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಒಟ್ಟು 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: We Have An Agreement – ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಡಿಕೆಶಿ ಮೌನ ಮುರಿದ್ರಾ?

  • ಮುಂದಿನ 7 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

    ಮುಂದಿನ 7 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

    – ಬೆಂಗಳೂರಲ್ಲಿ 2 ದಿನ ಮೋಡ ಕವಿದ ವಾತಾವರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ 45-55 ಕಿಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಗಾಳಿ- ಮಳೆಯಾಗುವ ಸಾಧ್ಯತೆಯಿದ್ದು, ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

  • ಇಂದಿನಿಂದ ಜೂನ್ 30ರ ವರೆಗೆ ಭಾರೀ ಮಳೆ ಸಾಧ್ಯತೆ

    ಇಂದಿನಿಂದ ಜೂನ್ 30ರ ವರೆಗೆ ಭಾರೀ ಮಳೆ ಸಾಧ್ಯತೆ

    – ಬೆಂಗ್ಳೂರಲ್ಲಿ ಇಂದು ಬೆಳಗ್ಗೆ ತುಂತುರು ಮಳೆ

    ಬೆಂಗಳೂರು: ಇಂದಿನಿಂದ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರೀ ಮಳೆಯಾಗುವ (Rain) ಮುನ್ಸೂಚನೆ ಸಿಕ್ಕಿದೆ.

    ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಮುಂಗಾರು ಚುರುಕು; ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

    ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಇಂದಿನಿಂದ ಜೂನ್ 29ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸದ್ಯ ನಗರದಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ನಗರದ ಕೆಲವು ಭಾಗದಲ್ಲಿ ತುಂತುರು ಮಳೆಯಾಗಿದೆ. ಇದೇ ರೀತಿ ಮುಂದಿನ ಮೂರು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

  • ಇಂದು ಭಾರೀ ಮಳೆ ಸಾಧ್ಯತೆ- ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

    ಇಂದು ಭಾರೀ ಮಳೆ ಸಾಧ್ಯತೆ- ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

    ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ (IMD) ಕೇರಳದ (Kerala) 7 ಜಿಲ್ಲೆಗಳಿಗೆ ಇಂದು (ಶನಿವಾರ) ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು 6 ಸೆಂ.ಮೀ ಹಾಗೂ 11 ಸೆಂ.ಮೀ ನಡುವೆ ಮಳೆಯಾಗುವ (Heavy Rain) ಸಾಧ್ಯತೆಗಳಿವೆ ಎಂದು ಇಲಾಖೆ ಮನ್ಸೂಚನೆ ಕೊಟ್ಟಿದೆ.

    ರಾಜ್ಯ ಕಂದಾಯ ಸಚಿವ ಕೆ. ರಾಜನ್ ಪ್ರಕಾರ, ಮೇ 9 ರಿಂದ ಮೇ 23 ರವರೆಗೆ ಕೇರಳದಲ್ಲಿ ಮಳೆಗೆ ಸಂಬಂಧಿಸಿದಂತೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. ಇವುಗಳಲ್ಲಿ 6 ಮಂದಿ ಮುಳುಗಿ, ಇಬ್ಬರು ಕ್ವಾರಿ ದುರ್ಘಟನೆಯಲ್ಲಿ, ಇನ್ನಿಬ್ಬರು ಸಿಡಿಲು ಬಡಿದು ಹಾಗೂ ಓರ್ವ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮೃತಪಟ್ಟಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ – ಎಲ್ಲೆಲ್ಲಿ ಏನೇನು ಅವಾಂತರ?

    ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದ ಸಚಿವರು, ಜಲಮೂಲಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು. ರಜೆಯ ಹಿನ್ನೆಲೆಯಲ್ಲಿ ಹೆತ್ತವರು ತಮ್ಮ ಮಕ್ಕಳೊಂದಿಗೆ ನದಿ, ಬೀಚ್‌ ಪ್ರವೇಶಿಸುವುದನ್ನು ನಿಷೇಧಿಲಾಗಿದೆ ಎಂದರು.

    ಸ್ಥಳೀಯ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆಯು ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಯ ಎರಡು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ. ಶುಕ್ರವಾರ ಸಂಜೆ ರಾಜ್ಯಾದ್ಯಂತ 8 ಪರಿಹಾರ ಶಿಬಿರಗಳಲ್ಲಿ 223 ಮಂದಿಗೆ ವಸತಿ ಕಲ್ಪಿಸಲಾಗಿದೆ.

  • ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯ ಮನ್ಸೂಚನೆ

    ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯ ಮನ್ಸೂಚನೆ

    – ಕರ್ನಾಟಕದ 7 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

    ತಿರುವನಂತಪುರಂ/ಬೆಂಗಳೂರು: ಮುಂದಿನ 24 ಗಂಟೆ ಕೇರಳದಲ್ಲಿ (Kerala Rain) ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.

    ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದೆ.

    ಕೇರಳದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಇನ್ನು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು.

    ಪಾಲಕ್ಕಾಡ್ ಕಲ್ಲಡಿಕೋಡ್ ಎಂಬಲ್ಲಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಯಲ್ಲಿ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಕರಿಂಬಾ ಅಯ್ಯಪ್ಪನಕೋಟ ಮಂಪುರಂ ನಿವಾಸಿ ಕಣ್ಣನ್ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ಮಂಪುರಂ ಮೂಲದ ರೆಗಿ ಮತ್ತು ಅವರ ಕುಟುಂಬ ಬಾಡಿಗೆಗೆ ಈ ಮನೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳು, ಬೆಡ್‍ಗಳು ಇತ್ಯಾದಿಗಳು ಸುಟ್ಟು ಹೋಗಿವೆ. ಕೂಡಲೇ ಎಚ್ಚೆತ್ತ ಕಾರಣ ಭಾರೀ ಅವಘಡವನ್ನು ತಪ್ಪಿಸಲಾಗಿತ್ತು.

    ಅತಿ ಹೆಚ್ಚು ಮಳೆ ದಾಖಲಾಗಿರುವ ಪ್ರದೇಶ: ಕುನ್ನಮಂಗಲಂ: 197 ಮಿ.ಮೀ, ಕುಮರಕೊಂ: 158ಮಿ.ಮೀ, ತೈಕಟ್ಟುಸ್ಸೆರಿ: 156 ಮಿ.ಮೀ, ಪಲ್ಲುರುತಿ: 127ಮಿ.ಮೀ, ಚೂಂಡಿ: 108 ಮಿ.ಮೀ, ತೆನ್ನಾಲ: 107 ಮೀ.ಮೀ., ಪರವೂರು 100 ಮಿ.ಮೀ, ಕಲಮಸ್ಸೆರಿ: 82 ಮಿ.ಮೀ ಹಾಗೂ ಇರಕ್ಕೂರ್: 80 ಮಿ.ಮೀ ಮಳೆಯಾಗಿದೆ.

    ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ: ಇತ್ತ ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಜಿಲ್ಲೆಗಳಿಗೆ ಮಳೆಯಾಗುವ ಸಂಭವವಿದೆ. ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಸುಮಾರು 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

  • ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್- ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

    ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್- ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

    ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗ್ತಿದೆ. ವರುಣನ ಅಬ್ಬರಕ್ಕೆ ಕರಾವಳಿ ಮಂದಿ ಕಂಗಾಲಾಗಿದ್ದಾರೆ. ಮುಂಗಾರು ಪೂರ್ವ ಮಳೆಯೇ ಜನರ ಜೀವವನ್ನ ಹಿಂಡಿ ತಿನ್ನುತ್ತಿದೆ. ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ 7 ವರ್ಷದ ಶಾಜಿಯಾ ಗೇಟಿನ ಬಳಿ ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ (Mangaluru) ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ – 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ: ಕರಾವಳಿ ಜಿಲ್ಲೆ ಉಡುಪಿಯಲ್ಲಿ (Udupi) ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣ ಇರೋದ್ರಿಂದ ಆದ್ರ್ರತೆ ಹೆಚ್ಚಾಗುತ್ತಿದೆ. ಕುಂದಾಪುರ ಬೈಂದೂರಿನಲ್ಲಿ 37ಸೆ. ಉಷ್ಣಾಂಶ ದಾಖಲಾಗಿದೆ. ಉಷ್ಣಾಂಶದ ನೇರ ಪರಿಣಾಮ ಕಡಲಿನ ಮೇಲೆ ಬಿದ್ದಿದ್ದು, ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನ ಜಿಲ್ಲಾಡಳಿತ ನೀಡಿದೆ. ಭಾರೀ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು ಅಂತ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

  • ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಭಾರೀ ಗಾಳಿ, ಮಳೆ ಸಾಧ್ಯತೆ

    ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವು ಕಡೆ ಭಾರೀ ಗಾಳಿ, ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ದಕ್ಷಿಣ ಕ್ನನಡ, ಧಾರವಾಡ, ಗದಗ, ಬೆಳಗಾವಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಮೈಸೂರು , ಚಾಮರಾಜನಗರ, ಮುಂಡ್ಯ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ.

    40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹೀಗಾಗಿ ರಾಜ್ಯದ ಹಲವು ಕಡೆ ಮಳೆಯ ಮುನ್ನೆಚ್ಚರಿಕೆಯನ್ನು ಇಲಾಖೆ ನೀಡಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!

    ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಮಂಗಳೂರು, ಹಾಸನ, ಚಾಮರಾಜನಗರ , ಧಾರವಾಡ, ಚಿಕ್ಕಮಗಳೂರು, ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ.

  • ಬೆಂಗಳೂರಲ್ಲಿ ಮಳೆ- ಶುಕ್ರವಾರವೂ ವರುಣನ ಎಂಟ್ರಿ ಸಾಧ್ಯತೆ

    ಬೆಂಗಳೂರಲ್ಲಿ ಮಳೆ- ಶುಕ್ರವಾರವೂ ವರುಣನ ಎಂಟ್ರಿ ಸಾಧ್ಯತೆ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಕೂಡ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರವೂ ವರುಣ ಎಂಟ್ರಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್‌ ಸಿಟಿ ಜನ ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ಐಟಿ ಸೆಲ್‌ ಸಂಚಾಲಕ ಪ್ರಶಾಂತ್‌ ಮಾಕನೂರು ಅರೆಸ್ಟ್‌

    ಇಂದು ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಯಶವಂತಪುರ ಸುತ್ತಮುತ್ತ ಮಳೆಯಾಗುತ್ತಿದೆ. ದೊಡ್ಡ ಬಿದರಕಲ್ಲು 41.50 ಮಿ.ಮೀ, ನಂದಿನಿ ಲೇಔಟ್‌ 19 ಮಿ.ಮೀ, ಮರಪ್ಪನ ಪಾಳ್ಯ 18 ಮಿ.ಮೀ, ನಾಗಪುರ 17 ಮೀ.ಮೀ, ಬಗಲಗುಂಟೆ 16 ಮಿ.ಮೀ, ಕೊಟ್ಟಿಗೆಪಾಳ್ಯ 15 ಮಿ.ಮೀ, ಪೀಣ್ಯ ಇಂಡಸ್ಟ್ರಿಯಲ್‌ ಏರಿಯಾ 13.50 ಮಿ.ಮೀ, ಹಂಪಿನಗರ 11 ಮಿ.ಮೀ. ಮಾರುತಿ ಮಂದಿರ 10.50 ಮಿ.ಮೀ ಮಳೆಯಾಗಿದೆ.

     ನೆಲಮಂಗಲ ಸುತ್ತಮುತ್ತ ಕೂಡ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಅನುಭವಿಸಿದರು. ರಸ್ತೆಯಲ್ಲಿ ಒಂದು ಅಡಿ ಮಳೆಯ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲದ ಅರಿಶಿನಕುಂಟೆ, ಮಾಕಳಿ, ಮಾದನಾಯಕನಹಳ್ಳಿ ಬಳಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುತ್ತಿದೆ. ಹೀಗಾಗಿ ರೈತರ ಮೊಗದಲ್ಲಿಯೂ ಸಂತಸ ಮೂಡಿದೆ.

  • ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

    ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

    ಬೆಂಗಳೂರು: ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.

    ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

    ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  • ರಾಜ್ಯದಲ್ಲಿ ಇಂದಿನಿಂದ 5 ದಿನ ಹೀಟ್‍ವೇವ್

    ರಾಜ್ಯದಲ್ಲಿ ಇಂದಿನಿಂದ 5 ದಿನ ಹೀಟ್‍ವೇವ್

    ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

    ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange Alert) ನೀಡಿದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇaಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ.

    ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ. ಬಿಸಿಲ ಹೊಡೆತದ ಕಾರಣ ದ್ವಿಚಕ್ರ ವಾಹನ ಬಿಟ್ಟು ಬಿಎಂಟಿಸಿ, ನಮ್ಮ ಮೆಟ್ರೋ ಏರುವವರ ಸಂಖ್ಯೆ ಸಂಖ್ಯೆ ಹೆಚ್ಚಿದೆ. ಬೇಸಿಗೆ ಕಾರಣ ತರಕಾರಿ ದರವೂ ದಿನೇ ದಿನೇ ಹೆಚ್ಚುತ್ತಿದೆ. ಇದನ್ನೂ ಓದಿ: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಲು ಈ ಮುನ್ನೆಚ್ಚರಿಕೆಗಳಿರಲಿ