Tag: weather department

  • ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

    ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

    ಉಡುಪಿ: ಯೆಮೆನ್ ದೇಶದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಮೆಕ್ನು ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿಗೂ ಹಬ್ಬಿದ್ದು, ಕಡಲತಡಿಯ ನಿವಾಸಿಗಳು ಆತಂಕ ಎದುರಿಸುವಂತಾಗಿದೆ.

    ಶುಕ್ರವಾರ ಸಂಜೆಯಿಂದಲೇ ಅಬ್ಬರಿಸಲು ಆರಂಭಿಸಿದ ಕಡಲಿನ ಅಲೆಗಳ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಇನ್ನೊಂದೆಡೆ ರಾಜ್ಯದ ಕರಾವಳಿಗೂ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರಿಕೆಗೆ ತೆರಳಿದ್ದ ಬೋಟ್ ಗಳು ದಡ ಸೇರುವಂತಾಗಿದೆ.

    ಉಡುಪಿಯ ಕಾಪು, ಮಲ್ಪೆ ಬೀಚ್ ಗಳಲ್ಲಿ ಶುಕ್ರವಾರ ಸಂಜೆಯಿಂದಲೇ ಕಂಡುಬಂದ ಕಡಲ ಅಲೆಗಳ ಅಬ್ಬರದಿಂದಾಗಿ ಪ್ರವಾಸಿಗರು ಕಡಿಮೆ ಸಂಖ್ಯೆಗಳಲ್ಲಿ ಕಂಡುಬಂದರು. ಕಳೆದ ತಡರಾತ್ರಿ ಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಇಂದು ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆಯೂ ಆಗಿದೆ.

    ಸದ್ಯ ಕಡಲು ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಕರಾವಳಿಯ ಮಂದಿ ಆತಂಕಿತರಾಗಿದ್ದಾರೆ. ಸಂಜೆಯಿಂದಲೇ ಸುಮಾರು 500 ಮೀಟರ್ ದೂರದಿಂದಲೇ ಅಬ್ಬರಿಸಿಕೊಂಡು ದಡಕ್ಕೆ ಅಪ್ಪಳಿಸುತ್ತಿರುವ ಅಲೆಗಳು ಇನ್ನೂ ಇಳಿಕೆ ಕಾಣದಿರುವುದು ಅಪಾಯದ ಮುನ್ಸೂಚನೆಯನ್ನು ನೀಡುವಂತಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಓಖಿ ಚಂಡಮಾರುತ ಕರಾವಳಿಗೆ ಅಪ್ಪಳಿಸಿದ್ದ ಪರಿಣಾಮ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿಗಳು ನಷ್ಟವಾಗಿತ್ತು.

  • ಗಮನಿಸಿ..ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ!

    ಗಮನಿಸಿ..ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ!

    ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಶುರುವಾಗಿದ್ದು, ಭಾನುವಾರ ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ.

    ಬೆಂಗಳೂರು ಹೊರವಲಯ ಆನೇಕಲ್, ಚಂದಾಪುರ, ಅತ್ತಿಬೆಲೆ, ವಿಜಯನಗರ ಸೇರಿದಂತೆ ಹಲವೆಡೆ ವರುಣನ ಅರ್ಭಟವಾಗಿದೆ. ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಸತತ 1 ಗಂಟೆಯಿಂದ ಸುರಿದ ಮಳೆಗೆ ಜನ ಜೀವನ ಅಸ್ಥವ್ಯಸ್ತವಾಗಿತ್ತು.

    ರಾಜ್ಯದ ಹಲವೆಡೆ ನಾಳೆಯಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ. ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗಲಿದೆ.

    ಕರ್ನಾಟಕದ ಕರವಾಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಭಾರೀ ಗಾಳಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಇನ್ನೂ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಕೂಡ ಮಳೆಯಾಗಲಿದ್ದು, ಮಂಡ್ಯ- ಮೈಸೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ಗಾಳಿಮಳೆಗೆ ಬೆಂಗ್ಳೂರು ತತ್ತರ – ಹುಬ್ಬಳ್ಳಿಯಲ್ಲಿ ಸಿಡಿಲಿಗೆ ಓರ್ವ ಬಲಿ

    ಗಾಳಿಮಳೆಗೆ ಬೆಂಗ್ಳೂರು ತತ್ತರ – ಹುಬ್ಬಳ್ಳಿಯಲ್ಲಿ ಸಿಡಿಲಿಗೆ ಓರ್ವ ಬಲಿ

    ಬೆಂಗಳೂರು: ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ವರಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ.

    ಉತ್ತರ ಭಾರತದಲ್ಲಿ ಅಪ್ಪಳಿಸಿರುವ ಧೂಳಿನ ಬಿರುಗಾಳಿ ಮಳೆ ಚಂಡಮಾರುತ ಕರ್ನಾಟಕಕ್ಕೂ ತಟ್ಟಿದೆ. ಗುರುವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನವನ್ನೇ ಅಸ್ಥವ್ಯಸ್ತಗೊಳಿಸಿದೆ.

    ಸಿಲಿಕಾಮನ್ ಸಿಟಿ ಬೆಂಗಳೂರಿನಲ್ಲಿ ವರುಣನ ದರ್ಶನವಾಗಿದ್ದು. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಗೋರಗುಂಟೆಪಾಳ್ಯ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸೇರಿದಂತೆ ನಗರದ ಸುತ್ತಮುತ್ತ ಮಳೆಯಾಗಿದೆ. ಗಾಳಿ ಸಹಿತ ಮಳೆಗೆ ಬೃಹತ್ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಜನ ಕತ್ತಲಲ್ಲಿ ಕಳೆಯುವಂತಾಗಿತ್ತು. ಇನ್ನು ಹುಬ್ಬಳ್ಳಿಯ ಕುಂದಗೋಳದಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಬಂದಿದ್ದವರಲ್ಲಿ ಓರ್ವ ಸಿಡಿಲಿಗೆ ಬಲಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಧಾರವಾಡದಲ್ಲೂ ಸಿಡಿಲು ಬಡಿದು 4 ಕುರಿ ಸಾವನ್ನಪ್ಪಿವೆ. ಬೆಳಗಾವಿಯ ಅಥಣಿಯಲ್ಲಿ ಚುನಾವಣಾ ಚೆಕ್ ಪೋಸ್ಟ್ ಮೇಲ್ಛಾವಣಿ ಹಾರಿ ಹೋಗಿ ಸಿಬ್ಬಂದಿ ಪರದಾಡಿದ್ದಾರೆ. ತುಮಕೂರು, ಮೈಸೂರು, ಹಾಸನ, ನೆಲಮಂಗಲ, ಮಡಿಕೇರಿ, ಗದಗದಲ್ಲೂ ಭಾರೀ ಮಳೆಯಾಗಿದೆ.

    ಇನ್ನು ಮೂರು ದಿನಗಳ ಕಾಲ ಮಳೆಯಾಗುವುದಾಗಿ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆದ್ದರಿಂದ ಮತದಾನಕ್ಕೂ ವರುಣ ಅಡ್ಡಿಪಡಿಸುವ ಸಾಧ್ಯತೆ ಇದೆ.

  • ಗುಡುಗು, ಬಿರುಗಾಳಿ ಸಹಿತ ಇನ್ನೆರಡು ದಿನ ಮಳೆ!

    ಗುಡುಗು, ಬಿರುಗಾಳಿ ಸಹಿತ ಇನ್ನೆರಡು ದಿನ ಮಳೆ!

    ಬೆಂಗಳೂರು: ಇನ್ನೆರಡು ದಿನಗಳ ಕಾಲ ಆಫೀಸ್ ಅಥವಾ ಹೊರಗಡೆ ಹೋಗುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇನ್ನರೆಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಈಗಾಗಲೇ ಕೇಂದ್ರ ಗೃಹ ಇಲಾಖೆ ಇಂದಿನಿಂದ 13 ರಾಜ್ಯಗಳು ಸೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೂಡ ನೀಡಿದೆ.

    ದೆಹಲಿ ಸೇರಿದಂತೆ ಉತ್ತರಪ್ರದೇಶದ ಪಶ್ಚಿಮ ಭಾಗಗಳಲ್ಲಿ ಎರಡು ಗಂಟೆಗಳ ಕಾಲ ಸಿಡಿಲು ಸಹಿತ ಮಳೆಯಾಗಲಿದ್ದು, ಹರಿಯಾಣದಲ್ಲಿ ಮಂಗಳವಾರದವರೆಗೆ ಶಾಲೆ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈಗಾಗಲೇ 5 ರಾಜ್ಯಗಳಲ್ಲಿ ಸುರಿದ ಮಳೆ, ಗಾಳಿಗೆ 124 ಮಂದಿ ಸಾವನ್ನಪ್ಪಿದ್ದು, 300 ಮಂದಿ ಗಾಯಗೊಂಡಿದ್ದಾರೆ.

  • ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ

    ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ

    ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ಮಳೆ ಆಗುತ್ತಿದೆ. ಬಿಸಿಲಿನಿಂದ ಬೆಂದ ಜನರಿಗೆ ಪೂರ್ವ ತಂಪೆರೆದಿದ್ದು, ಸೋಮವಾರ ನಗರದ ಹಲವೆಡೆ ಸಂಜೆಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿತ್ತು.

    ಬಿಇಎಲ್ ಸರ್ಕಲ್, ಗಂಗಮ್ಮನಗುಡಿ, ಎಂಎಸ್ ಪಾಳ್ಯ ಮತ್ತಿಕೆರೆ ಯಶವಂತಪುರ ಸೇರಿ ಹಲವಡೆ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಈಗ ಭಾರೀ ಮಳೆ ಆಗಿದೆ. ಸಿಲಿಕಾನ್ ಸಿಟಿಯ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ವಿಜಯನಗರ, ಮಾಗಡಿರೋಡ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ ಸೇರಿದಂತೆ ಮಳೆಯ ಸಿಂಚನ ಆರಂಭಗೊಂಡಿದೆ.

    ಮಳೆ ಕುರಿತು ಮಾಹಿತಿ ನೀಡಿದ ಹವಾಮಾನ ತಜ್ಞ ಗವಾಸ್ಕರ್, ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ದಕ್ಷಿಣ ಭಾರತದ ಕರ್ನಾಟಕದಲ್ಲಿ ಟ್ರಫ್ (ಮೋಡಗಳ ಸಾಲು) ಪ್ರಭಾವದಿಂದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

  • ಮುಂಗಾರು ಚುರುಕಾಯ್ತು! – ದಕ್ಷಿಣ ಕೇರಳದಲ್ಲಿ ಎಡೆ ಬಿಡದೆ ಸುರಿಯುತ್ತಿದೆ ಮಳೆ

    ಮುಂಗಾರು ಚುರುಕಾಯ್ತು! – ದಕ್ಷಿಣ ಕೇರಳದಲ್ಲಿ ಎಡೆ ಬಿಡದೆ ಸುರಿಯುತ್ತಿದೆ ಮಳೆ

    ತಿರುವನಂತಪುರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆಯೇ ನೈಋತ್ಯ ಮಾರುತವು ಕೇರಳ ಹಾಗೂ ಈಶಾನ್ಯ ರಾಜ್ಯಗಳನ್ನು ಪ್ರವೇಶಿಸಿದ್ದು ಈ ಬಾರಿಯ ಮುಂಗಾರು ಮಳೆ ಅಧಿಕೃತವಾಗಿ ಶುರುವಾಗಿದೆ.

    ಬಿರು ಬಿಸಿಲಿನಿಂದ ತತ್ತರಿಸುತ್ತಿದ್ದ ಕೇರಳದ ಜನತೆಗೆ ಮಂಗಳವಾರ ಮುಂಜಾನೆಯಿಂದ ಆರಂಭವಾದ ಮಳೆ ರಿಲೀಫ್ ನೀಡಿದೆ. ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಿದೆ ಎಂದು ಕೇರಳ ಹವಾಮಾನ ಇಲಾಖೆ ಹೇಳಿದೆ.

    ಮುಂಗಾರು ಮಾರುತ ಪ್ರವೇಶ ಮಾಡಿದ್ದರಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಕಣ್ಣೂರು, ಮಲಪ್ಪುರಂ, ಕೋಯಿಕ್ಕೋಡ್‍ನಲ್ಲಿ ಮುಂಜಾನೆ ಬಿರುಸಿನ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದ ವೈಕಂ ಹಾಗೂ ಮಾವೇಲಿಕ್ಕರ ಎಂಬಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 4 ದಿನಗಳ ಕಾಲ ಕೇರಳದಾದ್ಯಂತ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಹಾಗೂ ಲಕ್ಷದ್ವೀಪದಲ್ಲಿ ಜೋರಾಗಿ ಸುರಿಯುತ್ತಿದೆ. ಕರ್ನಾಟಕಕ್ಕೆ ಜೂನ್ ಮೊದಲ ವಾರ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

  • ರೈತಾಪಿ ವರ್ಗಕ್ಕೆ ಸಂತಸ ವಾರ್ತೆ: ಅವಧಿಗೂ ಮುನ್ನ ಮುಂಗಾರು ಎಂಟ್ರಿ

    ರೈತಾಪಿ ವರ್ಗಕ್ಕೆ ಸಂತಸ ವಾರ್ತೆ: ಅವಧಿಗೂ ಮುನ್ನ ಮುಂಗಾರು ಎಂಟ್ರಿ

    ಬೆಂಗಳೂರು: ರಣಭೀಕರ ಬರದಿಂದ ತತ್ತರಿಸಿ ಹೋಗಿರುವ ರೈತ ಸಮುದಾಯಕ್ಕೆ ಸಂತಸದ ಸುದ್ದಿ. ಈ ಬಾರಿಯ ಮುಂಗಾರು ನಿಗದಿತ ಅವಧಿಗೂ ಮುನ್ನವೇ ರಾಜ್ಯ ಪ್ರವೇಶಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮುಂಗಾರು ಮಾರುತಗಳು ಸೋಮವಾರದಂದು ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪ ಪ್ರವೇಶಿಸಲಿದೆ. ಸಾಮಾನ್ಯವಾಗಿ ನೈಋತ್ಯ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸಬೇಕು. ಆದ್ರೆ ಈ ಬಾರಿ ಮೇ 25ಕ್ಕೇ ಮೊದಲ ಮುಂಗಾರಿನ ಸಿಂಚನವಾಗಲಿದೆ.

    ಇದೇ ತಿಂಗಳು ಮೇ 29ರಂದು ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.

     

  • ಕರ್ನಾಟಕದ ಈ ಭಾಗದಲ್ಲಿ ಇಂದು ಸಂಜೆ ಗುಡುಗು ಮಿಂಚು ಸಹಿತ ಭಾರೀ ಮಳೆ ಬೀಳುತ್ತೆ

    ಕರ್ನಾಟಕದ ಈ ಭಾಗದಲ್ಲಿ ಇಂದು ಸಂಜೆ ಗುಡುಗು ಮಿಂಚು ಸಹಿತ ಭಾರೀ ಮಳೆ ಬೀಳುತ್ತೆ

    ಬೆಂಗಳೂರು: ಇಂದು ರಾಜ್ಯದ ಹಲವಡೆ ಮಳೆಯಾಗಲಿದೆ ಜನತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿ, ಗುಡುಗು ಮಿಂಚಿನ ತೀವ್ರತೆ ಹೆಚ್ಚಾಗಿರುವ ಸಾಧ್ಯತೆಗಳಿವೆ. ಬೆಂಗಳೂರು, ಕೋಲಾರ, ರಾಮನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇನ್ನೂ ಮಂಂಡ್ಯ ಮೈಸೂರು, ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ಚದುರಿದ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ರಾಮನಗರ ಭಾಗದ ಜನ್ರಿಗೆ ಕೊಂಚ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.