Tag: weather

  • ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

    ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

    – ಎಡೆಬಿಡದ ಮಳೆಗೆ ಆರ್‌ಸಿಬಿ, ಕೆಕೆಆರ್ ಪಂದ್ಯ ರದ್ದು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru) ವರುಣ ಅಬ್ಬರಿಸಿದ್ದಾನೆ. ಬೆಳಗ್ಗೆಯಿಂದ ಮೋಡಕವಿದ ವಾತಾವರಣ ವಿದ್ದು, ಸಂಜೆಯಾಗ್ತಿದ್ದಂತೆ ಮಳೆಯ ಆಗಮನವಾಗಿದೆ. ದಿಢೀರ್ ಸುರಿದ ಮಳೆಗೆ ಜನರು ಹೈರಾಣರಾಗಿದ್ದಾರೆ. ನಾಗವಾರದಲ್ಲಿ ಮನೆಗೆ ನೀರು ನುಗ್ಗಿ ಜನರು ಪರದಾಡಿದರು. ಇನ್ನೂ ಎರಡು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ವಿಧಾನಸೌಧ, ಎಂಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ಕಾರ್ಪೊರೇಷನ್ ಸರ್ಕಲ್, ಹಲಸೂರು, ರೇಸ್ ಕೋರ್ಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಮಲ್ಲೇಶ್ವರಂ ಸುತ್ತಮುತ್ತ ಮಳೆಯಾಗಿದೆ. ಆರ್‌ಸಿಬಿ ಹಾಗೂ ಕೆಕೆಆರ್ ಐಪಿಎಲ್ ಪಂದ್ಯಕ್ಕೂ ಮಳೆ ಅಡ್ಡಿಯಾಗಿದೆ. ಇದನ್ನೂ ಓದಿ: ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

    ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ(Chinnaswamy Stadium) ಸುತ್ತಮುತ್ತಲು ಎಡೆಬಿಡದೇ ಸುರಿದ ಮಳೆಯಿಂದ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗೆ ಜನ ತುಂಬಿ ತುಳುಕಿದ ಕಾರಣ ಮೆಟ್ರೋ ರೈಲುಗಳು ನಿಲ್ಲಿಸದೇ ತೆರಳಿವೆ. ಕಬ್ಬನ್ ಪಾರ್ಕ್‌ನಲ್ಲಿ ಮೆಟ್ರೋ ನಿಲ್ಲಿಸದ ಕಾರಣ ಪ್ರಯಾಣಿಕರು ವಿಧಾನಸೌಧ ಇಲ್ಲವಾದಲ್ಲಿ ಎಂಜಿ ರೋಡ್‌ನಲ್ಲಿ ಇಳಿಯಬೇಕಾದ ಪರಿಸ್ಥಿತಿ ಎದುರಾಯಿತು. ಇದನ್ನೂ ಓದಿ: ಬಿಳಿ ಪಾರಿವಾಳಗಳಿಂದಲೂ ಕೊಹ್ಲಿಗೆ ಗೌರವ – ಇದು ವೈಟ್‌ ಆರ್ಮಿ ಎಂದ ಕೊಹ್ಲಿ ಫ್ಯಾನ್ಸ್‌

    ಇನ್ನು ಭಾರತಿ ನಗರದಲ್ಲಿ ಕೆಲ ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ರಸ್ತೆಗಳು ಸಂಪೂರ್ಣ ಜಲಾವೃತವಾಗಿ ಜನಸಾಮಾನ್ಯರು ತೊಂದರೆ ಅನುಭವಿಸಿದರು. ಮಳೆಯ ಅವಾಂತರಕ್ಕೆ ಜಯನಗರ ಬಳಿಯ ಈಸ್ಟ್ ಎಂಡ್ ಸರ್ಕಲ್‌ನಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಈ ಮರವು ಆಟೋ ಮೇಲೆ ಬಿದ್ದು, ಆಟೋ ಜಖಂಗೊಂಡಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!

    ಈ ಮಳೆಗೂ ಸಾಯಿ ಲೇಔಟ್ ಸಂಪೂರ್ಣ ಜಲಾವೃತವಾಗಿದೆ. ಇಂದು ಸುರಿದ ಮಳೆಯಿಂದ ಸಾಯಿ ಲೇಔಟ್ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಜನರು ಗೋಳಾಡಿದರು.

  • ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ – RCB ಪಂದ್ಯಕ್ಕೂ ಅಡ್ಡಿ ಸಾಧ್ಯತೆ

    ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ – RCB ಪಂದ್ಯಕ್ಕೂ ಅಡ್ಡಿ ಸಾಧ್ಯತೆ

    – ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪುನರಾರಂಭದ ಮೊದಲ ಪಂದ್ಯ ಆರ್‌ಸಿಬಿ ವರ್ಸಸ್ ಕೆಕೆಆರ್ ತಂಡದ ನಡುವೆ ನಡೆಯಲಿದೆ. ಮಳೆ ಅಲರ್ಟ್ (Rain Alert) ಹಿನ್ನೆಲೆ ಐಪಿಎಲ್‌ಗೂ (IPL 2025) ಅಡ್ಡಿಪಡಿಸುವ ಸಾಧ್ಯತೆ ಇದೆ. ಭಾನುವಾರ ಹಾಗೂ ಸೋಮವಾರ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ | ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವು

    ಮೇ 17 ಹಾಗೂ ಮೇ 18ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

  • ರಾಜ್ಯದ ಹವಾಮಾನ ವರದಿ 17-05-2025

    ರಾಜ್ಯದ ಹವಾಮಾನ ವರದಿ 17-05-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಶನಿವಾರವೂ (ಇಂದು) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-22
    ಮಂಗಳೂರು: 29-24
    ಶಿವಮೊಗ್ಗ: 28-23
    ಬೆಳಗಾವಿ: 29-22
    ಮೈಸೂರು: 30-22

    ಮಂಡ್ಯ: 29-22
    ಮಡಿಕೇರಿ: 27-20
    ರಾಮನಗರ: 28-22
    ಹಾಸನ: 28-21
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 29-22
    ತುಮಕೂರು: 28-22
    ಉಡುಪಿ: 31-25
    ಕಾರವಾರ: 33-28
    ಚಿಕ್ಕಮಗಳೂರು: 25-19
    ದಾವಣಗೆರೆ: 30-23

    ಹುಬ್ಬಳ್ಳಿ: 33-23
    ಚಿತ್ರದುರ್ಗ: 29-23
    ಹಾವೇರಿ: 32-24
    ಬಳ್ಳಾರಿ: 33-24
    ಗದಗ: 31-23
    ಕೊಪ್ಪಳ: 32-24

    ರಾಯಚೂರು: 36-25
    ಯಾದಗಿರಿ: 36-25
    ವಿಜಯಪುರ: 32-24
    ಬೀದರ್: 34-24
    ಕಲಬುರಗಿ: 35-25
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ 16-05-2025

    ರಾಜ್ಯದ ಹವಾಮಾನ ವರದಿ 16-05-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕೊಪ್ಪಳ, ಹುಬ್ಬಳ್ಳಿಯಲ್ಲಿ ಬಿಸಿಲಿನ ವಾತಾವರಣ ಇರಲಿದೆ.

    ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-22
    ಮಂಗಳೂರು: 30-24
    ಶಿವಮೊಗ್ಗ: 29-23
    ಬೆಳಗಾವಿ: 29-22
    ಮೈಸೂರು: 32-22

    ಮಂಡ್ಯ: 32-23
    ಮಡಿಕೇರಿ: 28-20
    ರಾಮನಗರ: 31-23
    ಹಾಸನ: 28-20
    ಚಾಮರಾಜನಗರ: 32-22
    ಚಿಕ್ಕಬಳ್ಳಾಪುರ: 30-22

    ಕೋಲಾರ: 31-22
    ತುಮಕೂರು: 31-22
    ಉಡುಪಿ: 30-25
    ಕಾರವಾರ: 32-28
    ಚಿಕ್ಕಮಗಳೂರು: 26-19
    ದಾವಣಗೆರೆ: 31-23

    weather

    ಹುಬ್ಬಳ್ಳಿ: 31-24
    ಚಿತ್ರದುರ್ಗ: 31-23
    ಹಾವೇರಿ: 31-24
    ಬಳ್ಳಾರಿ: 34-24
    ಗದಗ: 31-23
    ಕೊಪ್ಪಳ: 33-24

    ರಾಯಚೂರು: 36-25
    ಯಾದಗಿರಿ: 35-24
    ವಿಜಯಪುರ: 34-24
    ಬೀದರ್: 36-25
    ಕಲಬುರಗಿ: 36-26
    ಬಾಗಲಕೋಟೆ: 32-24

  • ರಾಜ್ಯದ ಹವಾಮಾನ ವರದಿ 15-05-2025

    ರಾಜ್ಯದ ಹವಾಮಾನ ವರದಿ 15-05-2025

    ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಂಗಳೂರು, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್‌, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ ಮಳೆಯಾಗಲಿದ್ದು, ಮಧ್ಯಾಹ್ನ ಬಿಸಿಲು ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-23
    ಮಂಗಳೂರು: 31-24
    ಶಿವಮೊಗ್ಗ: 31-22
    ಬೆಳಗಾವಿ: 30-23
    ಮೈಸೂರು: 33-23

    ಮಂಡ್ಯ: 33-23
    ಮಡಿಕೇರಿ: 28-20
    ರಾಮನಗರ: 32-23
    ಹಾಸನ: 28-21
    ಚಾಮರಾಜನಗರ: 33-22
    ಚಿಕ್ಕಬಳ್ಳಾಪುರ: 31-22

    ಕೋಲಾರ: 32-22
    ತುಮಕೂರು: 31-22
    ಉಡುಪಿ: 31-26
    ಕಾರವಾರ: 34-28
    ಚಿಕ್ಕಮಗಳೂರು: 27-19
    ದಾವಣಗೆರೆ: 32-24

    ಹುಬ್ಬಳ್ಳಿ: 33-24
    ಚಿತ್ರದುರ್ಗ: 30-23
    ಹಾವೇರಿ: 34-24
    ಬಳ್ಳಾರಿ: 36-24
    ಗದಗ: 31-24
    ಕೊಪ್ಪಳ: 34-24

    ರಾಯಚೂರು: 37-25
    ಯಾದಗಿರಿ: 36-26
    ವಿಜಯಪುರ: 34-25
    ಬೀದರ್: 34-26
    ಕಲಬುರಗಿ: 37-27
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ 14-05-2025

    ರಾಜ್ಯದ ಹವಾಮಾನ ವರದಿ 14-05-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಮೇ 16ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲು ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-22
    ಮಂಗಳೂರು: 31-24
    ಶಿವಮೊಗ್ಗ: 31-22
    ಬೆಳಗಾವಿ: 32-22
    ಮೈಸೂರು: 34-22

    ಮಂಡ್ಯ: 33-22
    ಮಡಿಕೇರಿ: 29-19
    ರಾಮನಗರ: 32-22
    ಹಾಸನ: 29-19
    ಚಾಮರಾಜನಗರ: 33-22
    ಚಿಕ್ಕಬಳ್ಳಾಪುರ: 31-22

    ಕೋಲಾರ: 31-23
    ತುಮಕೂರು: 31-22
    ಉಡುಪಿ: 31-25
    ಕಾರವಾರ: 33-28
    ಚಿಕ್ಕಮಗಳೂರು: 27-18
    ದಾವಣಗೆರೆ: 32-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 31-22
    ಹಾವೇರಿ: 33-23
    ಬಳ್ಳಾರಿ: 36-25
    ಗದಗ: 33-23
    ಕೊಪ್ಪಳ: 34-24

    ರಾಯಚೂರು: 38-28
    ಯಾದಗಿರಿ: 37-28
    ವಿಜಯಪುರ: 37-24
    ಬೀದರ್: 36-27
    ಕಲಬುರಗಿ: 38-28
    ಬಾಗಲಕೋಟೆ: 36-24

  • ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮುಂಗಾರು ಆಗಮನ: ಹವಾಮಾನ ಇಲಾಖೆ

    ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮುಂಗಾರು ಆಗಮನ: ಹವಾಮಾನ ಇಲಾಖೆ

    ನವದೆಹಲಿ: ನೈಋತ್ಯ ಮಾನ್ಸೂನ್(Southwest Monsoon) ಮಂಗಳವಾರ ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪ ಮತ್ತು ಉತ್ತರ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಕಳೆದ ಎರಡು ದಿನಗಳಲ್ಲಿ ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರದ ಮೇಲೆ ಪಶ್ಚಿಮ ದಿಕ್ಕಿನ ಗಾಳಿಯ ಬಲವು ಹೆಚ್ಚಾಗಿದೆ. ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಗಾಳಿಯ ವೇಗ 20 ನಾಟಿಕಲ್ ಮೈಲ್ ಮೀರಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಧಾರಾಕಾರ ಮಳೆ – ಅಂಚೆ ಕಚೇರಿ, ಅಂಡರ್ ಪಾಸ್‌ಗಳಲ್ಲಿ ನೀರು, ವಾಹನ ಸವಾರರ ಪರದಾಟ

    ಈ ಪ್ರದೇಶದಲ್ಲಿ ದೀರ್ಘ ತರಂಗ ವಿಕಿರಣ(OLR) ಸಹ ಕಡಿಮೆಯಾಗಿದೆ. ಇದು ಮಾನ್ಸೂನ್ ಆಗಮನದ ಮುನ್ಸೂಚನೆಯನ್ನು ನೀಡುತ್ತದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

    ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶಗಳು, ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕೆಲವು ಭಾಗಗಳಿಗೆ ಮಾನ್ಸೂನ್ ಆಗಮಿಸಿದೆ. ಇನ್ನುಳಿದ ಅಂಡಮಾನ್ ಸಮುದ್ರದ ಭಾಗಗಳಿಗೆ ಹಾಗೂ ಬಂಗಾಳ ಕೊಲ್ಲಿಯ(Bay of Bengal) ಮಧ್ಯ ಭಾಗಗಳಿಗೆ ಮುಂದಿನ ಮರ‍್ನಾಲ್ಕು ದಿನಗಳಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಮೇ 27ರಂದು ಕೇರಳವನ್ನು(Kerala) ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

  • ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

    ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

    – ಧರೆಗುರುಳಿದ ಬೃಹತ್ ಮರಗಳು
    – ಒಂದೇ ಮಳೆಗೆ ಕೆರೆಯಂತಾದ ಸಿಲಿಕಾನ್ ಸಿಟಿ

    ಬೆಂಗಳೂರು: ಮಂಗಳವಾರ ಸಂಜೆ ಬೆಂಗಳೂರಲ್ಲಿ(Bengaluru) ವರುಣರಾಯ ಆರ್ಭಟಿಸಿದ್ದು, ನಗರದ ಬಾಣಸವಾಡಿ, ಕಲ್ಯಾಣನಗರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರುಗಾಳಿ ಮಳೆಗೆ ಟೆರೆಸ್ ಮೇಲಿನ ಗಾರ್ಡನ್ ಚೆಲ್ಲಾಪಿಲ್ಲಿಯಾಗಿವೆ.

    ವರುಣನ ಅಬ್ಬರಕ್ಕೆ ಯಲಚೇನಹಳ್ಳಿ ಬಳಿ ಮೂರು ಮರಗಳು ಧರಾಶಾಹಿಯಾಗಿದ್ದು, ಮರ ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ. ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯ ಮಾಡಿದರು. ಮಲ್ಲೇಶ್ವರಂನ(Malleshwaram) ಪಿಯುಸಿ ಬೋರ್ಡ್ ಬಳಿ ಮರವೊಂದು ರಸ್ತೆಗುರುಳಿದ್ದು, ಸದ್ಯ ಯಾವುದೇ ಹಾನಿ ಸಂಭವಿಸಿಲ್ಲ. ಅಲ್ಲದೇ ಕಾವೇರಿ ಜಂಕ್ಷನ್(Cauvery Junction) ಬಳಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ವಿಂಡ್ಸನ್ ಮ್ಯಾನರ್ ಅಂಡರ್ ಪಾಸ್‌ನಿಂದ ಅರಮನೆ ಮೈದಾನ ಕಡೆ ಹೋಗುವ ಮಾರ್ಗದಲ್ಲಿ ಮುರಿದು ಬಿದ್ದಿದೆ. ಮರದ ಕೊಂಬೆ ಮುರಿದು ಬೀಳುವಾಗ ಯಾವುದೇ ವಾಹನ ಸಂಚಾರವಿರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇದನ್ನೂ ಓದಿ: ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ

    ಇನ್ನು ಒಂದೇ ಮಳೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣಯು(Majestic Busstand) ಕೆರೆಯಂತಾಗಿದೆ. ಮಳೆ ನೀರು ಬಸ್ ನಿಲ್ದಾಣದ ಒಳಗೆ ನುಗ್ಗಿ, ಪ್ರಯಾಣಿಕರು ಪರದಾಡುವಂತಾಯಿತು. ಮಳೆಯ ಅವಾಂತರಕ್ಕೆ ನಾಗವಾರ ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ಬಸ್ಸೊಂದು ಜಲಾವೃತವಾಗಿದೆ. ಜಲಾವೃತವಾಗಿದ್ದ ರಸ್ತೆಯಿಂದ ಬಸ್‌ನ ಒಳಗೆ ನೀರು ನುಗ್ಗಿದ್ದು, ಪ್ರಯಾಣಿಕರು ಮಳೆ ನೀರಿನಲ್ಲೇ ಕುಳಿತಿರುವಂತ ಪರಿಸ್ಥಿತಿ ಎದುರಾಗಿತ್ತು. ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ

    ಭಾರೀ ಮಳೆಗೆ ಕೆ ಆರ್ ಮಾರ್ಕೆಟ್(K R Market) ರಸ್ತೆ ಕೆರೆಯಂತಾಗಿದ್ದು, ಕಿಲೋಮೀಟರ್‌ಗಟ್ಟಲೇ ನಿಂತಿರೋ ನೀರಿನಲ್ಲಿ ವಾಹನ ಸವಾರರ ಪರದಾಡಿದರು. ಒಂದು ತಾಸಿನ ಮಳೆಗೆ ಬ್ರ‍್ಯಾಂಡ್ ಬೆಂಗಳೂರು ಅಸಲಿಯತ್ತು ಅನಾವರಣಗೊಂಡಿದೆ. ಕುಮಾರಸ್ವಾಮಿ ಲೇಔಟ್ ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಆಟೋದ ಮುಂದಿನ ಚಕ್ರ ಗುಂಡಿಗೆ ಬಿದ್ದು ಆಟೋ ಚಾಲಕ ಒದ್ದಾಡಿದ್ದಾರೆ. ಇದನ್ನೂ ಓದಿ: ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್

    ಇನ್ನು ಸಾಯಿ ಲೇಔಟ್‌ನ ಜನರಿಗೆ ಮತ್ತೆ ಜಲಸಂಕಷ್ಟ ಎದುರಾಗಿದೆ. ಸಣ್ಣ ಮಳೆಗೂ ಈ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು, ಜನ ಹೈರಣಾಗಿದ್ದಾರೆ.

  • ರಾಜ್ಯದ ಹವಾಮಾನ ವರದಿ 13-05-2025

    ರಾಜ್ಯದ ಹವಾಮಾನ ವರದಿ 13-05-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮೇ 16ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲು ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-22
    ಮಂಗಳೂರು: 31-24
    ಶಿವಮೊಗ್ಗ: 31-22
    ಬೆಳಗಾವಿ: 32-22
    ಮೈಸೂರು: 34-22

    ಮಂಡ್ಯ: 33-22
    ಮಡಿಕೇರಿ: 29-19
    ರಾಮನಗರ: 32-22
    ಹಾಸನ: 29-19
    ಚಾಮರಾಜನಗರ: 33-22
    ಚಿಕ್ಕಬಳ್ಳಾಪುರ: 31-22

    ಕೋಲಾರ: 31-23
    ತುಮಕೂರು: 31-22
    ಉಡುಪಿ: 31-25
    ಕಾರವಾರ: 33-28
    ಚಿಕ್ಕಮಗಳೂರು: 27-18
    ದಾವಣಗೆರೆ: 32-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 31-22
    ಹಾವೇರಿ: 33-23
    ಬಳ್ಳಾರಿ: 36-25
    ಗದಗ: 33-23
    ಕೊಪ್ಪಳ: 34-24

    ರಾಯಚೂರು: 38-28
    ಯಾದಗಿರಿ: 37-28
    ವಿಜಯಪುರ: 37-24
    ಬೀದರ್: 36-27
    ಕಲಬುರಗಿ: 38-28
    ಬಾಗಲಕೋಟೆ: 36-24

  • ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

    ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ

    ಹಾವೇರಿ: ಸಿಡಿಲು ಬಡಿದು(Lightning strikes) ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ(Haveri) ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಹಾನಗಲ್(Hanagal) ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್(60) ಮೃತರು. ಮೂಲತಃ ಗದಗ(Gadag) ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ ಕೆಲವು ತಿಂಗಳಿನಿಂದ ಮಾವಿನ ತೋಟದಲ್ಲಿ ಕೆಲಸ ಮಾಡಿಕೊಂಡಿಕೊಂಡಿದ್ದರು. ಇಂದು ಸಂಜೆ ಸಿಡಿಲು ಬಡಿದು ಮರಿಯವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪಾಕ್‌ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್‌ ಮಾತು

    ಜಿಲ್ಲೆಯ ಹಿರೇಕೆರೂರು(Hirekeruru) ತಾಲೂಕಿನ ಡಮ್ಮಳ್ಳಿ(Dammalli) ಗ್ರಾಮದ ನಾಗಪ್ಪ ಕನಸೋಗಿ(62) ಮೃತ ದುರ್ದೈವಿ. ಗ್ರಾಮದ ದೊಡ್ಡ ಕೆರೆಬಳಿ ದನಕಾಯಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇನ್ನು ಪಾಕ್ ಕೆಮ್ಮಿದ್ರೂ ಭಾರತೀಯ ಸೇನೆ ಬಾರ್ಡರ್‌ಗೆ ನುಗ್ಗುತ್ತೆ: ಪ್ರಹ್ಲಾದ್ ಜೋಶಿ

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಹಲವೆಡೆ ಬಿರುಗಾಳಿ ಸಮೇತ ಮಳೆಯಾಗಿದ್ದು, ಜಿಲ್ಲೆಯಲ್ಲಿ ಮಳೆರಾಯ ತಂಪೆರೆದಿದ್ದಾನೆ.