Tag: weather

  • ರಾಜ್ಯದಲ್ಲಿ ಮುಂದುವರಿದ ಮಳೆ – ಎಲ್ಲೆಲ್ಲಿ ಏನೇನು ಅವಾಂತರ?

    ರಾಜ್ಯದಲ್ಲಿ ಮುಂದುವರಿದ ಮಳೆ – ಎಲ್ಲೆಲ್ಲಿ ಏನೇನು ಅವಾಂತರ?

    ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ (Rain) ಮತ್ತೆ ಆರಂಭಗೊಂಡಿದೆ. ಕೆಲವೆಡೆ ಮಳೆಯಿಂದ ಅವಾಂತರಗಳಾಗಿದ್ದು ವರದಿಯಾಗಿದೆ. ಯಾದಗಿರಿಯಲ್ಲಿ (Yadgir) ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಹಲವು ಮರಗಳು ಧರೆಗುರುಳಿವೆ. ಸತತ ಒಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬೀಸುತ್ತಿರುವ ಗಾಳಿಗೆ ಕೆಲವು ಮನೆಗಳ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿವೆ.

    ಮಾತಾಮಣಿಕೇಶ್ವರಿ ನಗರದಲ್ಲಿ 6 ಜನ ವಾಸವಿದ್ದ ಟಿನ್ ಶೆಡ್ ಒಂದು ಗಾಳಿಗೆ ಕುಸಿದು ಬಿದ್ದಿದೆ. ಗಾಳಿ ಮಳೆಗೆ ಜೋರಾದ ಪರಿಣಾಮ ಶೆಡ್ ಅಲ್ಲಾಡುತ್ತಿದ್ದಂತೆ ಜನ ಶೆಡ್‍ನಿಂದ ಹೊರಗೆ ಬಂದಿದ್ದಾರೆ. ಇದರಿಂದ 6 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ದಿನಸಿ ಸಾಮಾನುಗಳು ಹಾಗೂ ಇತರೆ ವಸ್ತುಗಳು ಶೆಡ್ ಕುಸಿತದಿಂದ ಹಾನಿಗೊಳಗಾಗಿವೆ. ಇದನ್ನೂ ಓದಿ: 16ನೇ ವಯಸ್ಸಿಗೆ ವಿಶ್ವದ ಎತ್ತರದ ಮೌಂಟ್‌ ಎವರೆಸ್ಟ್‌ ಶಿಖರ ಏರಿ ಭಾರತದ ಬಾಲಕಿ ಸಾಧನೆ

    ಬೆಳಗಾವಿ (Belagavi) ಜಿಲ್ಲೆಯ ಕಾಗವಾಡದ ಜುಗುಳ ಗ್ರಾಮದ ಅತ್ತರ ಗಲ್ಲಿಯಲ್ಲಿ ಭಾರಿ ಬಿರುಗಾಳಿ ಮಳೆಗೆ ಸರ್ಕಾರಿ ಉರ್ದು ಶಾಲೆಯ ಮೇಲ್ಛಾವಣಿ ಹಾರಿ ಹೋಗಿದೆ. ಬಿರುಗಾಳಿಯ ತೀವ್ರತೆಗೆ ಮೇಲ್ಛಾವಣಿ 200 ಅಡಿ ದೂರ ಹಾರಿ ಹೋಗಿ ಜನವಸತಿ ಪ್ರದೇಶದಲ್ಲಿ ಬಿದ್ದಿದೆ. ಸಮೀಪದಲ್ಲಿ ಜನರು ಯಾರು ಇರದ ಕಾರಣ ಅದೃಷ್ಟಾವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

    ಚಿಕ್ಕಮಗಳೂರಿನ (Chikkamagaluru) ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆ ಹಾಗೂ ಎನ್.ಆರ್.ಪುರ, ಬಾಳೆಹೊನ್ನೂರು ಭಾಗಗಳಲ್ಲಿ ಭಾರೀ ಗಾಳಿ ಮಳೆಯಾಗಿದೆ. ತರೀಕೆರೆ ಪಟ್ಟಣದಲ್ಲಿ ಮಳೆಯಿಂದ ರಸ್ತೆಯಲ್ಲಿ ನೀರು ಹರಿದಿದ್ದು ವಾಹನ ಸವಾರರು ಪರದಾಡಿದ್ದಾರೆ.

    ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯ ಪರಿಣಾಮ ಮರವೇಮನೆ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಕಟ್ಟಡದ ಪಕ್ಕದಲ್ಲಿ ಕಟ್ಟಿದ್ದ ನಾರಾಯಣಪ್ಪ ಎಂಬುವರಿಗೆ ಸೇರಿದ 80 ಸಾವಿರ ರೂ. ಮೌಲ್ಯದ ಸೀಮೆ ಹಸು ಸಾವಿಗೀಡಾಗಿದೆ. ರಾತ್ರಿ ವೇಳೆ ಕಟ್ಟಡ ಕುಸಿದು ಬಿದ್ದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಈಶ್ವರ್ ಖಂಡ್ರೆ

  • ರಾಜ್ಯದ ಹವಾಮಾನ ವರದಿ: 22-05-2024

    ರಾಜ್ಯದ ಹವಾಮಾನ ವರದಿ: 22-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ 6 ದಿನಗಳ ಕಾಲ ಮಳೆಯಾಗಲಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತವರಣ ಇರಲಿದ್ದು, ಇಂದಿನಿಂದ ಎರಡು ದಿನಗಳ ಕಾಲ ಗಾಳಿ, ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-22
    ಮಂಗಳೂರು: 31-26
    ಶಿವಮೊಗ್ಗ: 33-23
    ಬೆಳಗಾವಿ: 34-23
    ಮೈಸೂರು: 30-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 29-22
    ಹಾಸನ: 27-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 28-22
    ತುಮಕೂರು: 29-22
    ಉಡುಪಿ: 30-25
    ಕಾರವಾರ: 32-27
    ಚಿಕ್ಕಮಗಳೂರು: 25-19
    ದಾವಣಗೆರೆ: 31-24

    ಹುಬ್ಬಳ್ಳಿ: 33-24
    ಚಿತ್ರದುರ್ಗ: 30-22
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 34-24
    ಕೊಪ್ಪಳ: 33-25

    ರಾಯಚೂರು: 34-26
    ಯಾದಗಿರಿ: 36-27
    ವಿಜಯಪುರ: 37-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 37-26

  • ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ – 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ – 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    -ರಾಜ್ಯದ ಹಲವೆಡೆ 7 ದಿನಗಳ ಮಳೆ ಮುನ್ಸೂಚನೆ 

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ 7 ದಿನಗಳ ಕಾಲ (Rain Alert) ಮಳೆಯಾಗಲಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ 5 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ (ಮೆ 21, 22) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತವರಣವಿದ್ದು, ಇಂದಿನಿಂದ ಎರಡು ದಿನಗಳ ಕಾಲ ಗಾಳಿ, ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

    ಮೇ 20ರಂದು ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿತ್ತು?
    ಹೆಚ್.ಗೊಲ್ಲಹಳ್ಳಿ- 2 ಸೆಂ.ಮೀ
    ರಾಜರಾಜೇಶ್ವರಿನಗರ- 2 ಸೆಂ.ಮೀ
    ಹಮ್ಮಿಗೆಪುರ- 2 ಸೆಂ.ಮೀ
    ಗೊಟ್ಟಿಗೆರೆ- 1.2 ಸೆಂ.ಮೀ

  • ರಾಜ್ಯದ ಹವಾಮಾನ ವರದಿ: 21-05-2024

    ರಾಜ್ಯದ ಹವಾಮಾನ ವರದಿ: 21-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವೆಡೆ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-22
    ಮಂಗಳೂರು: 30-26
    ಶಿವಮೊಗ್ಗ: 22-23
    ಬೆಳಗಾವಿ: 34-23
    ಮೈಸೂರು: 30-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 29-22
    ಹಾಸನ: 27-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 28-22
    ತುಮಕೂರು: 29-22
    ಉಡುಪಿ: 30-25
    ಕಾರವಾರ: 32-27
    ಚಿಕ್ಕಮಗಳೂರು: 25-19
    ದಾವಣಗೆರೆ: 31-24

    ಹುಬ್ಬಳ್ಳಿ: 33-24
    ಚಿತ್ರದುರ್ಗ: 30-22
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 34-24
    ಕೊಪ್ಪಳ: 33-25

    ರಾಯಚೂರು: 34-26
    ಯಾದಗಿರಿ: 36-27
    ವಿಜಯಪುರ: 37-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 37-26

  • ರಾಜ್ಯದ ಹವಾಮಾನ ವರದಿ: 20-05-2024

    ರಾಜ್ಯದ ಹವಾಮಾನ ವರದಿ: 20-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ತುಮಕೂರು ಚಿಕ್ಕಮಗಳೂರು ಮತ್ತು ಕೊಡಗಿನ ಕೆಲವೆಡೆ ಭಾರೀ ಗಾಳಿಯೊಂದಿಗೆ (40-50 ಕಿಮೀ ವೇಗದಲ್ಲಿ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 29-25
    ಶಿವಮೊಗ್ಗ: 29-23
    ಬೆಳಗಾವಿ: 34-23
    ಮೈಸೂರು: 29-22

    ಮಂಡ್ಯ: 29-22
    ಮಡಿಕೇರಿ: 23-18
    ರಾಮನಗರ: 29-22
    ಹಾಸನ: 27-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 28-22
    ತುಮಕೂರು: 29-22
    ಉಡುಪಿ: 30-25
    ಕಾರವಾರ: 32-27
    ಚಿಕ್ಕಮಗಳೂರು: 25-19
    ದಾವಣಗೆರೆ: 31-24

    ಹುಬ್ಬಳ್ಳಿ: 33-24
    ಚಿತ್ರದುರ್ಗ: 30-22
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 34-24
    ಕೊಪ್ಪಳ: 33-25

    ರಾಯಚೂರು: 34-26
    ಯಾದಗಿರಿ: 36-27
    ವಿಜಯಪುರ: 37-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 37-26

  • ರಾಜ್ಯದ ಹವಾಮಾನ ವರದಿ: 19-05-2024

    ರಾಜ್ಯದ ಹವಾಮಾನ ವರದಿ: 19-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಇಂದು ಹಾಗೂ ನಾಳೆ (ಮೇ 20) ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್ ಜಾರಿ ಮಾಡಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ಇದರೊಂದಿಗೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಲಾಗಿದೆ.

    ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿ.ಮೀ ವೇಗ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ (40-50 ಕಿ.ಮೀ ವೇಗ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 30-25
    ಶಿವಮೊಗ್ಗ: 29-23
    ಬೆಳಗಾವಿ: 34-23
    ಮೈಸೂರು: 29-22

    ಮಂಡ್ಯ: 29-22
    ಮಡಿಕೇರಿ: 23-18
    ರಾಮನಗರ: 29-22
    ಹಾಸನ: 27-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 28-22
    ತುಮಕೂರು: 29-22
    ಉಡುಪಿ: 30-25
    ಕಾರವಾರ: 32-27
    ಚಿಕ್ಕಮಗಳೂರು: 25-19
    ದಾವಣಗೆರೆ: 31-24

    ಹುಬ್ಬಳ್ಳಿ: 33-24
    ಚಿತ್ರದುರ್ಗ: 30-22
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 34-24
    ಕೊಪ್ಪಳ: 33-25

    ರಾಯಚೂರು: 34-26
    ಯಾದಗಿರಿ: 36-27
    ವಿಜಯಪುರ: 37-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 37-26

  • ರಾಜ್ಯದ ಹವಾಮಾನ ವರದಿ: 18-05-2024

    ರಾಜ್ಯದ ಹವಾಮಾನ ವರದಿ: 18-05-2024

    ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ 115 ಮಿ.ಮೀನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಮೇ 18 ರಿಂದ 20ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಂಗಳೂರಿಗೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲೂ ಭಾರೀ ಮಳೆ ಎಚ್ಚರಿಕೆಯನ್ನು ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-22
    ಮಂಗಳೂರು: 31-26
    ಶಿವಮೊಗ್ಗ: 32-23
    ಬೆಳಗಾವಿ: 33-23
    ಮೈಸೂರು: 30-22

    ಮಂಡ್ಯ: 31-23
    ಮಡಿಕೇರಿ: 24-19
    ರಾಮನಗರ: 31-23
    ಹಾಸನ: 28-21
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 29-22
    ತುಮಕೂರು: 30-22
    ಉಡುಪಿ: 32-26
    ಕಾರವಾರ: 32-27
    ಚಿಕ್ಕಮಗಳೂರು: 27-20
    ದಾವಣಗೆರೆ: 32-24

    ಹುಬ್ಬಳ್ಳಿ: 32-24
    ಚಿತ್ರದುರ್ಗ: 31-23
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 32-24
    ಕೊಪ್ಪಳ: 33-25

    ರಾಯಚೂರು: 34-26
    ಯಾದಗಿರಿ: 36-27
    ವಿಜಯಪುರ: 37-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 37-26

  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮೇ 20ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

    ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮೇ 20ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ

    ಬೆಂಗಳೂರು: ನಾಳೆಯಿಂದ ಮೇ 20ರ ವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು (Heavy Rain) ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್‌ (Orange Alert) ಜಾರಿ ಮಾಡಿದೆ.

    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಲಾಪುರ, ತುಮಕೂರು, ಚಿತ್ರದುರ್ಗದಲ್ಲಿ 115 ಮಿ.ಮೀನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ

     

    ಮೇ 18 ರಿಂದ 20ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಂಗಳೂರಿಗೆ ಆರೆಂಜ್ ಅಲರ್ಟ್‌ ಜಾರಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ

    ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲೂ ಭಾರೀ ಮಳೆ ಎಚ್ಚರಿಕೆಯನ್ನು ನೀಡಿದೆ.

     

  • ರಾಜ್ಯದ ಹವಾಮಾನ ವರದಿ: 17-05-2024

    ರಾಜ್ಯದ ಹವಾಮಾನ ವರದಿ: 17-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 31-26
    ಶಿವಮೊಗ್ಗ: 31-23
    ಬೆಳಗಾವಿ: 32-23
    ಮೈಸೂರು: 30-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 30-23
    ಹಾಸನ: 28-21
    ಚಾಮರಾಜನಗರ: 21-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 29-22
    ತುಮಕೂರು: 30-22
    ಉಡುಪಿ: 32-26
    ಕಾರವಾರ: 32-27
    ಚಿಕ್ಕಮಗಳೂರು: 27-20
    ದಾವಣಗೆರೆ: 32-24

    ಹುಬ್ಬಳ್ಳಿ: 32-24
    ಚಿತ್ರದುರ್ಗ: 31-23
    ಹಾವೇರಿ: 32-24
    ಬಳ್ಳಾರಿ: 33-26
    ಗದಗ: 32-24
    ಕೊಪ್ಪಳ: 33-25

    ರಾಯಚೂರು: 36-26
    ಯಾದಗಿರಿ: 34-27
    ವಿಜಯಪುರ: 34-26
    ಬೀದರ್: 33-25
    ಕಲಬುರಗಿ: 35-26
    ಬಾಗಲಕೋಟೆ: 35-26

  • ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗಾಳಿ ಮಳೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗಾಳಿ ಮಳೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ (Rain) ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಳೆ ಹೆಚ್ಚಾಗಲಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಿಚಾರಣೆಗೆ ಪ್ರಜ್ವಲ್‌ ಗೈರು – ಭಾರತಕ್ಕೆ ಕರೆ ತರೋದು ಹೇಗೆ? ಎಸ್‌ಐಟಿ ಮುಂದಿರುವ ಆಯ್ಕೆ ಏನು?

    ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದಿದ್ದು ವಾತಾವರಣ (Weather) ತಂಪಾಗಿದೆ. ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ಭವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡಿ – ಎಸ್‍ಐಟಿಗೆ ಸರ್ಕಾರ ಸೂಚನೆ