Tag: wedding

  • ಇರಾನ್ ನಾಯಕನ ಪುತ್ರಿಯ ವಿವಾಹದಲ್ಲಿಲ್ಲ ಹಿಜಾಬ್ – ವೀಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ

    ಇರಾನ್ ನಾಯಕನ ಪುತ್ರಿಯ ವಿವಾಹದಲ್ಲಿಲ್ಲ ಹಿಜಾಬ್ – ವೀಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ

    ಟೆಹ್ರಾನ್: ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ನೇತೃತ್ವದ ಕಟ್ಟಾ ಇಸ್ಲಾಮಿಕ್ ಆಡಳಿತವು ಇದೀಗ ಹೊಸ ವಿವಾದಕ್ಕೆ ಸಿಲುಕಿಕೊಂಡಿದೆ. ಖಮೇನಿಯ ಆಪ್ತ ಸಹಾಯಕ ಶಮ್ಖಾನಿ (Ali Shamkhani) ಪುತ್ರಿಯ ವಿವಾಹದಲ್ಲಿ (Wedding) ವಧು ಹಾಗೂ ಆಕೆಯ ತಾಯಿ ಹಿಜಾಬ್ (Hijab) ಧರಿಸದೇ ಕಾಣಿಸಿಕೊಂಡಿದ್ದು ವಿವಾದಕ್ಕೀಡಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    2024ರಲ್ಲಿ ಟೆಹ್ರಾನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಈ ಮದುವೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸದ್ದು ಮಾಡುತ್ತಿದೆ. ಹಿಜಾಬ್ ಧರಿಸುವುದು ಮಹಿಳೆಯ ಕರ್ತವ್ಯ ಎಂದು ಪ್ರತಿಪಾದಿಸುವ ಖಮೇನಿ ಆಪ್ತನ ಮಗಳ ಮದುವೆಯಲ್ಲೇ ನಿಯಮ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮೂಲಕ ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಹೋರಾಟವನ್ನು ಬಲವಂತವಾಗಿ ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಮ್ಖಾನಿ ಮುಖವಾಡ ಕಳಚಿ ಬಿದ್ದಿದೆ. ಇದನ್ನೂ ಓದಿ: ಚಿತ್ರದುರ್ಗ| ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

    ಹಿಜಾಬ್ ಕಡ್ಡಾಯಗೊಳಿಸುವ ಕಾನೂನು ತೆರವುಗೊಳಿಸುವಂತೆ ಇರಾನ್‌ನಾದ್ಯಂತ ಮಹಿಳೆಯರು 2022ರಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಲೆ ಶಮ್ಖಾನಿ ರಾಷ್ಟ್ರೀಯ ಭದ್ರತಾ ಮಂಡಳಿಯ ನಾಯಕತ್ವ ವಹಿಸಿದ್ದರು. ಅಲ್ಲದೇ ಪ್ರತಿಭಟನೆಯಲ್ಲಿ ತೊಡಗಿದ್ದ ಮಹಿಳೆಯರನ್ನು ಹಿಂಸಿಸಲಾಗಿತ್ತು. ಆದರೆ ಶಮ್ಖಾನಿ ಪುತ್ರಿಯ ವಿವಾಹದಲ್ಲಿ ವಧು ಹಾಗೂ ಆಕೆಯ ತಾಯಿ ಹಿಜಾಬ್ ಧರಿಸದೇ ಇರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇದನ್ನೂ ಓದಿ: ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ವೀಡಿಯೋದಲ್ಲಿ ಶಮ್ಖಾನಿ ಪುತ್ರಿ ಬಿಳಿಬಣ್ಣದ ಸ್ಟಾçಪ್‌ಲೆಸ್ ಉಡುಗೆಯನ್ನು ಧರಿಸಿದ್ದು, ಪತ್ನಿ ನೀಲಿ ಬಣ್ಣದ ವೆಸ್ಟರ್ನ್ ಶೈಲಿಯ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಹಿಜಾಬ್ ಕಡ್ಡಾಯ ನಿಯಮವನ್ನು ದಶಕಗಳಿಂದ ಒತ್ತಾಯವಾಗಿ ಹೇರಲಾಗುತ್ತಿರುವ ಇರಾನ್‌ನಲ್ಲಿ ಈ ವೀಡಿಯೋ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: H-1ಬಿ ವೀಸಾ ಶುಲ್ಕ ಹೆಚ್ಚಳ – ವಾಸ್ತವ್ಯ ಅವಧಿ ವಿಸ್ತರಣೆ ಕೋರಿದ ಅರ್ಜಿಗಳಿಗೆ ಅನ್ವಯಿಸಲ್ಲ

    ಇನ್ನು ಈ ಕುರಿತು ಇರಾನ್‌ನಿಂದ ಗಡಿಪಾರಾದ ಮಹಿಳಾ ಪರ ಹೋರಾಟಗಾರ್ತಿ ಮಸಿಹ್ ಅಲಿನೆಜಾದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಇರಾನ್‌ನ ಉನ್ನತ ನಾಯಕರಲ್ಲಿ ಒಬ್ಬರಾದ ಶಮ್ಖಾನಿ ಅವರ ಮಗಳು ಸ್ಟಾçಪ್‌ಲೆಸ್ ಉಡುಗೆಯಲ್ಲಿ ಅದ್ಧೂರಿ ವಿವಾಹ ಮಾಡಿಕೊಂಡಿದ್ದಾರೆ. ಕೂದಲು ತೋರಿಸಿದ್ದಕ್ಕಾಗಿ ಅದೇ ಇರಾನ್‌ನಲ್ಲಿ ಸಾಮಾನ್ಯ ಮಹಿಳೆಯರನ್ನು ಹೊಡೆದು ಕೊಲ್ಲಲಾಯಿತು. ಇದನ್ನೇ ಬೂಟಾಟಿಕೆ ಎನ್ನುವುದು. ಇತರ ಹೆಣ್ಣುಮಕ್ಕಳಿಗೆ ಹೇಗಿರಬೇಕೆಂದು ಬೋಧಿಸುತ್ತಾರೆ. ಇವರ ಹೆಣ್ಣುಮಕ್ಕಳು ಡಿಸೈನರ್ ಉಡುಗೆ ಧರಿಸಿ ಓಡಾಡುತ್ತಾರೆ. ಗುಂಡು, ಲಾಠಿ ಪ್ರಹಾರ, ಜೈಲುಶಿಕ್ಷೆಯ ಮೂಲಕ ಇಸ್ಲಾಮಿಕ್ ಮೌಲ್ಯಗಳನ್ನು ಹೇರುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

  • ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಅಪ್ರಾಪ್ತೆಯರ ಕಿಡ್ನ್ಯಾಪ್‌ – ನಾಲ್ವರಿಂದ ಗ್ಯಾಂಗ್‌ರೇಪ್‌

    ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಅಪ್ರಾಪ್ತೆಯರ ಕಿಡ್ನ್ಯಾಪ್‌ – ನಾಲ್ವರಿಂದ ಗ್ಯಾಂಗ್‌ರೇಪ್‌

    ಭುವನೇಶ್ವರ (ಗಂಜಾಂ): ಮದುವೆ ಸಮಾರಂಭದಲ್ಲಿ (Wedding) ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ (Odisha) ಗಂಜಾಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಎಲ್ಲಾ ಆರೋಪಿಗಳೂ ವಿಶಾಖಪಟ್ಟಣಂಗೆ (Visakhapatnam) ಎಸ್ಕೇಪ್‌ ಆಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್‌ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್‌

    ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರವಣ್ ವಿವೇಕ್ ಅವರು ಹೇಳುವಂತೆ, ಘಟನೆ ಜೂನ್‌ 3ರಂದು ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿರ್ಜನ ಪ್ರದೇಶಕ್ಕೆ ಇಬ್ಬರನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜೊತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಜ್ಜು – ಜೂ.10ರಂದು ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಶುರು

    ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ. ಅವರೊಂದಿಗೆ ಇನ್ನಿಬ್ಬರು ಸೇರಿಕೊಂಡು ಅಪಹರಿಸಿದ ಬಳಿಕ ಕೃತ್ಯ ಎಸಗಿದ್ದಾರೆ ಅನ್ನೋದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 70 ವರ್ಷ ಲಿವ್ ಇನ್ ರಿಲೇಶನ್ – 95ನೇ ವಯಸ್ಸಿನಲ್ಲಿ ಹಸೆಮಣೆ ಏರಿದ ರಾಜಸ್ಥಾನ ಜೋಡಿ

    ಬಳಿಕ ವಿಷಯ ತಿಳಿದ ಪೋಷಕರು ಜೂನ್ 4 ರಂದು ದೂರು ದಾಖಲಿಸಿದ್ರು, ಅದರನ್ವಯ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಲಾಯಿತು. ಜೂನ್ 6 ರಂದು ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಬಾಲಕಿಯನ್ನು ಕೌನ್ಸೆಲಿಂಗ್‌ಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.

  • ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?

    ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?

    ನಾಗಾರ್ಜುನ ಅಕ್ಕಿನೇನಿ ಪುತ್ರ ಅಖಿಲ್ ಅಕ್ಕಿನೇನಿ (Akhil Akkineni) ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಜೂನ್‌ನಲ್ಲಿ ಗೆಳತಿ ಝೈನಾಬ್ ಜೊತೆ ಅಖಿಲ್ ಮದುವೆ ಫಿಕ್ಸ್ ಆಗಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ಬಹುಕಾಲದ ಗೆಳತಿ ಝೈನಾಬ್ (Jainab (Ravdjee) ಜೊತೆ ಅಖಿಲ್ ಜೂನ್ 6ರಂದು ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಮದುವೆ ನಡೆಯಲಿದೆ ಎಂದು ವರದಿ ಆಗಿದೆ. ಬಳಿಕ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆ ಆರತಕ್ಷತೆ ಕಾಯಕ್ರಮ ಜರುಗಲಿದೆ ಎನ್ನಲಾಗಿದೆ. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಅಧಿಕೃತ ಮಾಹಿತಿ ಘೋಷಿಸಬೇಕಿದೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

    ಝೈನಾಬ್ ರಾವಡ್ಜಿ ಅವರನ್ನು ಅಖಿಲ್ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡರು. ಈ ಬಗ್ಗೆ ಸ್ವತಃ ನಾಗಾರ್ಜುನ ರಿವೀಲ್ ಮಾಡಿದ್ದರು.

  • ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ಕಾಲಿವುಡ್ ನಟ ವಿಶಾಲ್ (Vishal) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಯೋಗಿದ’ ಚಿತ್ರದ ನಟಿ ಸಾಯಿ ಧನ್ಶಿಕಾ (Sai Dhanshika) ಜೊತೆ ಹಸೆಮಣೆ (Wedding) ಏರಲು ಸಜ್ಜಾಗಿದ್ದಾರೆ. ಈ ಮದುವೆ ಬಗ್ಗೆ ಅಧಿಕೃತವಾಗಿ ಧನ್ಶಿಕಾ, ವಿಶಾಲ್ ಇಬ್ಬರೂ ಅನೌನ್ಸ್ ಮಾಡಿದ್ದಾರೆ. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ. ಇದನ್ನೂ ಓದಿ:War 2 Teaser: ಹೃತಿಕ್ ರೋಷನ್ ಮುಂದೆ ವಿಲನ್ ಆಗಿ ಅಬ್ಬರಿಸಿ ಬೊಬ್ಬಿರಿದ ಜ್ಯೂ.ಎನ್‌ಟಿಆರ್

    ಕಳೆದ 15 ವರ್ಷಗಳಿಂದ ಪರಿಚಿತರಾಗಿರುವ ಧನ್ಶಿಕಾ ಜೊತೆ ವಿಶಾಲ್ ಮದುವೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ‘ಯೋಗಿದ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶಾಲ್, ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಅವರ ಆಶೀರ್ವಾದೊಂದಿಗೆ ನಾನು ಅವಳನ್ನು ಪರಿಚಯಿಸುತ್ತಿದ್ದೇನೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ:ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ

    ಬಳಿಕ ಸಾಯಿ ಧನ್ಶಿಕಾ ಮಾತನಾಡಿ, ನಮ್ಮ ಮದುವೆ ವಿಷಯ ಈಗಲೇ ತಿಳಿಸಬಾರದು ಅಂದುಕೊಂಡಿದ್ದೇವು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಬೆಳಗ್ಗೆಯಿಂದ ನ್ಯೂಸ್ ವೈರಲ್ ಆಗುತ್ತಿದೆ. ಹೀಗಾಗಿ ಈಗಲೇ ಮದುವೆ ದಿನಾಂಕ ಕೂಡ ಘೋಷಣೆ ಮಾಡುತ್ತೇವೆ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಬಳಿಕ ಆಗಸ್ಟ್ 29ರಂದು ಇಬ್ಬರು ಹೊಸ ಜೀವನಕ್ಕೆ ಕಾಲಿಡಲಿದ್ದೇವೆ ಎಂದು ಹೇಳಿದ್ದಾರೆ.

    ಆಗಸ್ಟ್‌ 29ರಂದು ವಿಶಾಲ್ ಅವರ ಹುಟ್ಟುಹಬ್ಬ. ಅದೇ ದಿನ ವಿವಾಹ ನಿಶ್ಚಯ ಮಾಡಲಾಗಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ

    ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ

    ‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಬ್ರೋ ಗೌಡ (Shamanth Bro Gowda) ಅವರು ಇಂದು (ಮೇ 18) ಹಸೆಮಣೆ ಏರಿದ್ದಾರೆ. ಬಹುಕಾಲದ ಗೆಳತಿ ಮೇಘನಾ (Meghana) ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

    ಪ್ರೀತಿಸಿದ ಹುಡುಗಿ ಮೇಘನಾಗೆ ಖುಷಿ ಖುಷಿಯಾಗಿ ಶಮಂತ್ ತಾಳಿ ಕಟ್ಟುತ್ತಿರುವ ಫೋಟೋ ಸದ್ದು ಮಾಡುತ್ತಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಫ್ಯಾನ್ಸ್ ಶುಭಕೋರಿದ್ದಾರೆ. ಇದನ್ನೂ ಓದಿ:‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ

    ನಿನ್ನೆ ರಾತ್ರಿ ನಡೆದ ಆರತಕ್ಷತೆಗೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್, ಬಿಗ್ ಬಾಸ್ ನವಾಜ್, ರ‍್ಯಾಪರ್ ಆಲ್ ಓಕೆ, ನಟಿ ಮೌನ ಗುಡ್ಡೆಮನೆ, ‘ಭಾಗ್ಯಲಕ್ಷ್ಮಿ’ ಸೀರಿಯಲ್ ಬಾಲನಟ ಗುಂಡಣ್ಣ ಅಲಿಯಾಸ್ ನಿಹಾರ್, ತನ್ವಿ ಅಲಿಯಾಸ್ ಅಮೃತಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ನಿಮ್ಮದು ಕೋಳಿ ಕಾಲುಗಳು- ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ ಅನನ್ಯಾ ಪಾಂಡೆ

    ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

    ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು. ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.

    ‘ಬಿಗ್ ಬಾಸ್ ಕನ್ನಡ 8’ರಲ್ಲಿ ಶಮಂತ್ ಸ್ಪರ್ಧಿಯಾಗಿದ್ದರು. ಈ ಶೋನಲ್ಲಿ ಮಂಜು ಪಾವಗಡ ಗೆದ್ದಿದ್ದರು. ಈ ಕಾರ್ಯಕ್ರಮ ಬಳಿಕ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಶಮಂತ್ ಲೀಡ್ ಹೀರೋ ಆಗಿ ನಟಿಸಿದ್ದರು.

  • ‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ

    ‘ಲಕ್ಷ್ಮಿ ಬಾರಮ್ಮ’ ನಟನ ಅದ್ಧೂರಿ ಆರತಕ್ಷತೆ- ಸಿನಿ ತಾರೆಯರು ಭಾಗಿ

    ‘ಲಕ್ಷ್ಮಿ ಬಾರಮ್ಮ’ (Lakshmi Baramma) ನಟ ಶಮಂತ್ ಗೌಡ (Shamanth Bro Gowda) ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸದ್ಯ ಬೆಂಗಳೂರಿನಲ್ಲಿ ನಟನ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ಸಂಭ್ರಮದಲ್ಲಿ ಕಿರುತೆರೆ ನಟ-ನಟಿಯರು ಭಾಗಿಯಾಗಿದ್ದಾರೆ.

    ಭಾವಿ ಪತ್ನಿ ಮೇಘನಾ (Meghana) ಜೊತೆ ಶಮಂತ್ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಡ್ಯಾನ್ಸ್ ಮಾಡುತ್ತಲೇ ವೇದಿಕೆ ಏರಿದ್ದಾರೆ. ವಧು ಮೇಘನಾ ಗಿಳಿ ಹಸಿರು ಡ್ರೆಸ್‌ನಲ್ಲಿ ಮಿಂಚಿದ್ರೆ, ವರ ಶಮಂತ್ ಕಪ್ಪು ಬಣ್ಣದ ಸೂಟ್ ಧರಿಸಿದ್ದಾರೆ. ಇಬ್ಬರೂ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿನಿಮಾ ಗೆದ್ದ ಬೆನ್ನಲ್ಲೇ ದೇವಿ ಮೊರೆ ಹೋದ ಶ್ರೀನಿಧಿ ಶೆಟ್ಟಿ

    ಈ ಮದುವೆ ಆರತಕ್ಷತೆಗೆ ರ‍್ಯಾಪರ್ ಆಲ್ ಓಕೆ, ನಟಿ ಮೌನ ಗುಡ್ಡೆಮನೆ, ‘ಭಾಗ್ಯಲಕ್ಷ್ಮಿ’ ಸೀರಿಯಲ್ ಬಾಲನಟ ಗುಂಡಣ್ಣ ಅಲಿಯಾಸ್ ನಿಹಾರ್, ತನ್ವಿ ಅಲಿಯಾಸ್ ಅಮೃತಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?

    ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

    ಶಮಂತ್ ಮೂಲತಃ ಉತ್ತರ ಕರ್ನಾಟಕದವರು. ಶಮಂತ್ ಹಿರೇಮಠ ಅವರ ಪೂರ್ಣ ಹೆಸರು. ಇನ್ನೂ ಮೇಘನಾ ಮರಾಠಿಗರು. ಹೀಗಾಗಿ ಎರಡು ರೀತಿಯ ಪದ್ಧತಿಯಂತೆ ಮದುವೆ ಶಾಸ್ತ್ರಗಳು ನಡೆಯಲಿದೆ.

    ‘ಬಿಗ್ ಬಾಸ್ ಕನ್ನಡ 8’ರಲ್ಲಿ ಶಮಂತ್ ಸ್ಪರ್ಧಿಯಾಗಿದ್ದರು. ಈ ಶೋನಲ್ಲಿ ಮಂಜು ಪಾವಗಡ ಗೆದ್ದಿದ್ದರು. ಈ ಕಾರ್ಯಕ್ರಮ ಬಳಿಕ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಶಮಂತ್ ಲೀಡ್ ಹೀರೋ ಆಗಿ ನಟಿಸಿದ್ದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ

    ನಪ್ರಿಯ ‘ಯಜಮಾನ’ ಸೀರಿಯಲ್ (Yajamana Serial) ನಟ ಗಜೇಂದ್ರ ಮರಸಣಿಗೆ (Gajendra Marasanige) ಅವರು ವೈವಾಹಿಕ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಶ್ವೇತಾ ಜೊತೆ ನಟ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ಗಿಂತ ತೆಲುಗಿನಲ್ಲೇ ಹೆಚ್ಚಾಯ್ತು ಜಾನ್ವಿ ಕಪೂರ್‌ಗೆ ಡಿಮ್ಯಾಂಡ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ಶೃಂಗೇರಿಯ ಮುಂಡಗಾರು ಎಂಬ ಊರಿನಲ್ಲಿ ಸರಳವಾಗಿ ಶ್ವೇತಾ ಜೊತೆ ನಟ ಗಜೇಂದ್ರ ಅವರ ಮದುವೆ ನಡೆದಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಸಮಾರಂಭ ಮತ್ತು ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಈ ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ಬ್ರೇಕಪ್ ಬಳಿಕ ಮಹತ್ವದ ನಿರ್ಧಾರ ಕೈಗೊಂಡ ತಮನ್ನಾ ಭಾಟಿಯಾ

    ಕಾಮಿಡಿ ಕಿಲಾಡಿಗಳು ಶೋ, ಪುಟ್ಟಕ್ಕನ ಮಕ್ಕಳು ಸೀರಿಯಲ್‌ನಲ್ಲಿ ಕಂಠಿ ಸ್ನೇಹಿತನ ಪಾತ್ರದಲ್ಲಿ ನಟಿಸಿದ್ದರು. ಅಣ್ಣ ತಂಗಿ, ಪಾರ್ವತಿ ಪರಮೇಶ್ವರ, ಪರಿಣಿತ, ಅನುಬಂಧ ಸೀರಿಯಲ್‌ಗಳಲ್ಲಿ ಗಜೇಂದ್ರ ನಟಿಸಿದ್ದಾರೆ. ರವಿಚಂದ್ರನ್ ನಟನೆಯ ಕ್ರೇಜಿಲೋಕ ಚಿತ್ರದಲ್ಲಿ ಪುಟ್ಟ ಪಾತ್ರವೊಂದರಲ್ಲಿ ನಟಿಸಿದ್ದರು.

  • ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡ್ತಾಳೆ?- ತಂದೆ ಬಾಲಕೃಷ್ಣ ನಾಯ್ಕ್

    ನ್ನನ್ನು ಮನೆಯ ಜಗಲಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಬಿಗ್ ಬಾಸ್‌ಗೆ (Bigg Boss Kannada 11) ಹೋಗಿದ್ದಳು ಎಂದು ಚೈತ್ರಾ (Chaithra Kundapura) ಮತ್ತು ಪತ್ನಿಯ ವಿರುದ್ಧ ಬಾಲಕೃಷ್ಣ ನಾಯ್ಕ್ ಕಿಡಿಕಾರಿದ್ದಾರೆ. ತಂದೆಗೆ ಅನ್ನ ಹಾಕದವಳು ದೇಶ ಸೇವೆ ಏನು ಮಾಡುತ್ತಾಳೆ ಎಂದು ಚೈತ್ರಾ ತಂದೆ ತಿರುಗಿಬಿದ್ದಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

    ಮಗಳು ಚೈತ್ರಾ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದರು. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ

    ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದು ಪತ್ನಿ ವಿರುದ್ಧವು ಮಾತನಾಡಿದ್ದಾರೆ.

  • ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ‘ಸೀತಾ ವಲ್ಲಭ’ ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಇಂದು (ಮೇ 9) ಬಹುಕಾಲದ ಗೆಳೆಯ ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು

    ಇಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಚಂದನ್ ಶೆಟ್ಟಿ ಜೊತೆ ಸುಪ್ರೀತಾ ಮದುವೆಯಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಚಂದನ್ ಅವರನ್ನು ನಟಿ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆ ಪಡೆದು ಚಂದನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ ಸುಪ್ರೀತಾ. ಇವರ ಮದುವೆಗೆ ನೇಹಾ ಗೌಡ, ರಶ್ಮಿಕಾ ಪ್ರಭಾಕರ್, ಸುಜಾತಾ ಅಕ್ಷಯ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    ಇತ್ತೀಚೆಗಷ್ಟೇ ಚಂದನ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಶುಭ ಸುದ್ದಿ ನೀಡಿದ್ದರು. ಮಾರ್ಚ್ 12ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ಡಿಜಿಟಲ್ ಕ್ರಿಯೇಟರ್, ಸಾಫ್ಟ್‌ವೇರ್ ಉದ್ಯೋಗಿ ಚಂದನ್ ಶೆಟ್ಟಿ ಅವರನ್ನು ನಟಿ ಮದುವೆಯಾಗಿದ್ದಾರೆ. ಕೊಡಗು ಮೂಲದ ಚಂದನ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ (Chaithra Kundapura) ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ (Srikanth Kashyap) ಜೊತೆ ಹಸೆಮಣೆ ಏರಿದ್ದಾರೆ.ಇದನ್ನೂ ಓದಿ:Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ (Rajath), ಗೋಲ್ಡ್ ಸುರೇಶ್ (Gold Suresh) ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ

    ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

    ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.