ತೆಲುಗಿನ ಸ್ಟಾರ್ ನಟ ಪ್ರಭಾಸ್ (Prabhas) ಸದ್ಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಇದರ ಮಧ್ಯೆ ಮತ್ತೆ ಪ್ರಭಾಸ್ ಮದುವೆ ಮ್ಯಾಟರ್ ಚರ್ಚೆಗೆ ಗ್ರಾಸವಾಗಿದೆ. ಈಗ ಸಂದರ್ಶನವೊಂದರಲ್ಲಿ ದೊಡ್ಡಮ್ಮ ಶ್ಯಾಮಲಾ ದೇವಿ ಪ್ರಭಾಸ್ ಮದುವೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ:‘ಫೈರ್ ಫ್ಲೈ’ ತಂಡದಿಂದ ಹೊಸ ಸುದ್ದಿ- ಶಿವಣ್ಣನ ಪುತ್ರಿ ಜೊತೆ ಕೈಜೋಡಿಸಿದ ಅಚ್ಯುತ್ ಕುಮಾರ್

ಕಲ್ಕಿ ಯಶಸ್ಸಿನ ಕುರಿತು ಮಾತನಾಡಿರುವ ಅವರು, ಒಳ್ಳೆಯತನ ಮನುಷ್ಯನನ್ನು ಎಲ್ಲಿಯವರೆಗೆ ಕರೆದುಕೊಂಡು ಹೋಗಲಿದೆ ಎಂಬುದು ಸಾಬೀತಾಗಿದೆ. ಬಾಹುಬಲಿ ಬಳಿಕ ಪ್ರಭಾಸ್ ದೊಡ್ಡ ಯಶಸ್ಸು ಕಾಣುವುದಿಲ್ಲ ಎಂದು ಅನೇಕರು ಹೇಳಿದ್ದರು. ಆದರೆ ಈಗ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಪ್ರಭಾಸ್ ಮದುವೆ ವಿಚಾರದಲ್ಲೂ ಹೀಗೆಯೇ ಆಗುತ್ತದೆ ಎಂದಿದ್ದಾರೆ ಶ್ಯಾಮಲಾ ದೇವಿ. ಈ ಮೂಲಕ ಪ್ರಭಾಸ್ ಮದುವೆ ಆಗಲ್ಲ ಎನ್ನುವವರ ಬಾಯಿ ಮುಚ್ಚಿಸಿದ್ದಾರೆ. ಈಗ ಪ್ರಭಾಸ್ ಮದುವೆ ಕುರಿತು ದೊಡ್ಡಮ್ಮ ಸೂಚನೆ ಕೊಟ್ಟಿದ್ದಾರೆ.
ಅಂದಹಾಗೆ, ಚಿತ್ರರಂಗದಲ್ಲಿ ಗಾಸಿಪ್ ಕಾಮನ್. ಅನುಷ್ಕಾ ಶೆಟ್ಟಿ, ಕೃತಿ ಸನೋನ್ ಇನ್ನೂ ಅನೇಕರ ಜೊತೆ ಪ್ರಭಾಸ್ ಹೆಸರು ಸದ್ದು ಮಾಡಿತ್ತು. ಈ ನಟಿಯರಲ್ಲಿ ಯಾರನ್ನಾದರೂ ಪ್ರಭಾಸ್ ಮದುವೆ ಆಗುತ್ತಾರೆ ಎಂದೇ ಭಾವಿಸಿದ್ದರು. ಆದರೆ ಆಗಿದ್ದೇ ಬೇರೆ. ಸಿಂಗಲ್ ಆಗಿರುವ 44 ವರ್ಷದ ಪ್ರಭಾಸ್ ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ.




ಅಂದಹಾಗೆ, ತರುಣ್ ಸುಧೀರ್ ಶೀಘ್ರದಲ್ಲೇ ಮದುವೆಯಾಗುತ್ತಿದ್ದಾರೆ. ನಟಿ ಸೋನಾಲ್ ಜೊತೆ ತರುಣ್ ಕಲ್ಯಾಣ ನಡೆಯುತ್ತಿದೆ. ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ ಎಂದು ಮಾಲತಿ ಸುಧೀರ್ ‘ಪಬ್ಲಿಕ್ ಟಿವಿ’ ಜೊತೆ ಹಂಚಿಕೊಂಡಿದ್ದಾರೆ. ಮಗನ ಮದುವೆ ದಿನಾಂಕ ಫಿಕ್ಸ್ ಆಗಿಲ್ಲ. ಆಷಾಢ ಮಾಸ ಅಲ್ವಾ? ಕನ್ಫರ್ಮ್ ಆದ್ಮೇಲೆ ಹೇಳ್ತೀವಿ ಎಂದಿದ್ದಾರೆ. ಮದುವೆ ಛತ್ರಗಳು ಅಷ್ಟು ಬೇಗ ಸಿಕ್ತಿಲ್ಲ. ಮಗನ ಕೈಲಿ ಸದ್ಯ ಜಾಸ್ತಿ ಪ್ರಾಜೆಕ್ಟ್ ಇದೆ. ಅದೆಲ್ಲಾ ನೋಡ್ಕೊಂಡು ಮದುವೆ ಮಾಡಿಕೊಳ್ತಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:





ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ದಂಪತಿ ಪುತ್ರಿ ವರಲಕ್ಷ್ಮಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯುತ್ತಿದೆ. ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಉದ್ಯಮಿ ನಿಕೋಲಾಯ್ (Nicholai Sachdev) ಜೊತೆ ವರಲಕ್ಷ್ಮಿ ಮದುವೆಗೆ (Wedding) ಭರ್ಜರಿ ತಯಾರಿ ನಡೆಯುತ್ತಿದೆ.












