Tag: wedding

  • ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ

    ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪೂಜಾ ಗಾಂಧಿ ದಂಪತಿ

    ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ (Pooja Gandhi) ದಂಪತಿ ಉಡುಪಿಗೆ ಆಗಮಿಸಿದ್ದಾರೆ. ಪತಿ ವಿಜಯ್ ಘೋರ್ಪಡೆ (Vijay Ghorpade) ಜೊತೆ ನಟಿ ಪೂಜಾ ಗಾಂಧಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಮದುವೆ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದೆ. ಇದನ್ನೂ ಓದಿ:ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಟಿ ಸಾಯಿಪಲ್ಲವಿ

    ನವೆಂಬರ್ 29ರಂದು ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂತ್ರ- ಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ಪೂಜಾ ಮದುವೆಯಾಗಿದ್ದಾರೆ.

    ‘ಮುಂಗಾರು ಮಳೆ’ (Mungarumale) ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗಿ ಪೂಜಾ ಗಾಂಧಿ ನಟಿಸಿದ್ದರು. ಬಳಿಕ ಮಿಲನ, ದಂಡು ಪಾಳ್ಯ, ಅಭಿನೇತ್ರಿ, ಬುದ್ಧಿವಂತ, ಕೃಷ್ಣ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ರಾಜಕೀಯ ರಂಗ- ಸಿನಿಮಾ ಕ್ಷೇತ್ರ ಎರಡರಲ್ಲೂ ನಟಿ ಗುರುತಿಸಿಕೊಂಡಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಾರ್ಕ್ ಆ್ಯಂಟನಿ’ ಚಿತ್ರ ನಿರ್ದೇಶಕ ಅಧಿಕ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಾರ್ಕ್ ಆ್ಯಂಟನಿ’ ಚಿತ್ರ ನಿರ್ದೇಶಕ ಅಧಿಕ್

    ಕಾಲಿವುಡ್ ಯುವ ನಿರ್ದೇಶಕ ಅಧಿಕ್ ರವಿಚಂದ್ರನ್ (Adhik Ravichandran) ಅವರು ಐಶ್ವರ್ಯ ಪ್ರಭು (Aishwarya Prabhu) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿರಿಯ ನಟ ಪ್ರಭು ಅವರ ಪುತ್ರಿ ಐಶ್ವರ್ಯ ಜೊತೆ ನಿರ್ದೇಶಕ ಅಧಿಕ್ ಅದ್ದೂರಿಯಾಗಿ ಮದುವೆಯಾಗಿದ್ದಾರೆ.

    ತ್ರಿಶಾ ಇಲ್ಲ ನಯನತಾರಾ, ದಬಂಗ್ 3, ಮಾರ್ಕ್ ಆ್ಯಂಟನಿ ಸಿನಿಮಾಗಳ ನಿರ್ದೇಶಕ ಅಧಿಕ್ ರವಿಚಂದ್ರನ್ ಅವರು ಐಶ್ವರ್ಯ ಪ್ರಭು ಜೊತೆ ಇಂದು (ಡಿ.15) ಚೆನ್ನೈನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಇದನ್ನೂ ಓದಿ:ನಟ ಶ್ರೀಮುರಳಿ ಹುಟ್ಟು ಹಬ್ಬಕ್ಕೆ ಹೊಂಬಾಳೆಯಿಂದ ‘ಬಘೀರ’ ಗಿಫ್ಟ್

    ಕನ್ನಡದ ದೃಶ್ಯ, ಪವರ್ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಪ್ರಭು ಅವರ ಪುತ್ರಿ ಐಶ್ವರ್ಯಗೆ ಇದು ಎರಡನೇ ಮದುವೆಯಾಗಿದ್ದು, ಮೊದಲ ಮದುವೆ ತಂದೆ ಪ್ರಭು ಅವರ ತಂಗಿ ಮಗನ ಜೊತೆ ನೆರವೇರಿತ್ತು. ವೈಯಕ್ತಿಕ ಮನಸ್ತಾಪಗಳಿಂದ ಹೆಚ್ಚು ದಿನ ಆ ದಾಂಪತ್ಯ ಉಳಿಯಲಿಲ್ಲ. ಡಿವೋರ್ಸ್‌ನಲ್ಲಿ ಐಶ್ವರ್ಯ ಮೊದಲ ಮದುವೆ ಅಂತ್ಯವಾಗಿತ್ತು.

    ಡಿವೋರ್ಸ್ ನಂತರ ಅಧಿಕ್ ರವಿಚಂದ್ರನ್ ಜೊತೆ ಮತ್ತೆ ಪ್ರೇಮಾಂಕುರವಾಗಿ, ಗುರು ಹಿರಿಯರ ಸಮ್ಮತಿಯ ಮೇರೆಗೆ ಐಶ್ವರ್ಯ ಪ್ರಭು ಇದೀಗ ಚೆನ್ನೈನಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ.

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅಖಿಲಾ ಪ್ರಕಾಶ್

    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅಖಿಲಾ ಪ್ರಕಾಶ್

    ‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್ (Akhila Prakash) ಅವರು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಭರತ್ ಕಾಂತ್ ಎಂಬುವವರ ಜೊತೆ ಅಖಿಲಾ ಹೊಸ ಬಾಳಿಗೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

    ಕೊಡಗಿನ ಕುವರಿ ಅಖಿಲಾ ಪ್ರಕಾಶ್ ಮತ್ತು ಭರತ್ ಕಾಂತ್ (Bharath Kanth) ಹಲವು ವರ್ಷಗಳು ಪ್ರೀತಿಸಿ, ಗುರುಹಿರಿಯರ ಸಮ್ಮತಿ ಪಡೆದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಇಬ್ಬರೂ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಮದುವೆಯಾಗಿದ್ದಾರೆ. ಇದನ್ನೂ ಓದಿ:ರಜನಿ 170ನೇ ಸಿನಿಮಾಗೆ ಟೈಟಲ್ ಫಿಕ್ಸ್: ಟೈಟಲ್ ಟೀಸರ್ ಔಟ್

    ಅಖಿಲಾ ಪ್ರಕಾಶ್ ಮದುವೆಗೆ ‘ಅಣ್ಣ ತಂಗಿ’ (Anna Thangi Serial) ಸೀರಿಯಲ್ ತಂಡ ಮತ್ತು ಹಲವು ಕಿರುತೆರೆ ಕಲಾವಿದರು ಆಗಮಿಸಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:ತೆಲುಗಿನ ಬಿಗ್ ಬಾಸ್ ಮನೆಯಿಂದ ಕನ್ನಡತಿ ಔಟ್

    ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು 3’ ಮೂಲಕ ಸ್ಪರ್ಧಿಯಾಗಿ ಕಾಲಿಟ್ಟರು. ಇದೀಗ ‘ಅಣ್ಣ ತಂಗಿ’ ಸೀರಿಯಲ್‌ನಲ್ಲಿ ತಂಗಿಯ ಪಾತ್ರದಲ್ಲಿ ಅಖಿಲಾ ನಟಿಸುತ್ತಿದ್ದಾರೆ. ತುಳಸಿ ಎಂಬ ಮುಗ್ಧ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • ಶೂಟಿಂಗ್‌ಗೆ ಚಕ್ಕರ್‌, ಶ್ರೀಲಂಕಾಗೆ ಹಾರಿದ ಶ್ರೀಲೀಲಾ

    ಶೂಟಿಂಗ್‌ಗೆ ಚಕ್ಕರ್‌, ಶ್ರೀಲಂಕಾಗೆ ಹಾರಿದ ಶ್ರೀಲೀಲಾ

    ನ್ನಡದ ಬ್ಯೂಟಿ ಶ್ರೀಲೀಲಾ (Sreeleela) ಏಕಾಏಕಿ ಶ್ರೀಲಂಕಾಕ್ಕೆ ಹೋಗಿದ್ದಾರೆ. ಭರ್ತಿ ಎರಡು ದಿನ ಅಲ್ಲಿ ಕಳೆಯಲಿದ್ದಾರೆ. ಅದರಲ್ಲೇನು ವಿಶೇಷ ಎನ್ನಬೇಡಿ. ಒಂದೊಂದು ಗಂಟೆ ಟೈಮ್‌ಗೂ ಒದ್ದಾಡುತ್ತಿದ್ದಾರೆ ಶ್ರೀಲೀಲಾ. ಶೂಟಿಂಗ್, ಮೆಡಿಕಲ್ ಪರೀಕ್ಷೆ, ಪ್ರಚಾರಕ್ಕೆಲ್ಲಾ ಸಮಯ ಕೊಡಲಾರದ ಹುಡುಗಿ ಶ್ರೀಲಂಕಾಕ್ಕೆ ಹೋಗಿದ್ಯಾಕೆ? ಇಲ್ಲಿದೆ ಮಾಹಿತಿ.

    ‘ಗುಂಟೂರು ಖಾರಂ’ ಶೂಟಿಂಗ್ ನಡೆಯುತ್ತಿದೆ. ಪ್ರಿನ್ಸ್ ಮಹೇಶ್‌ ಬಾಬು ಜೊತೆ ನಟಿ ಬ್ಯುಸಿ. ಇದರ ನಡುವೆ ನಿತಿನ್ ಜೊತೆಗಿನ ‘ಎಕ್ಸಾರ್ಡನರಿ ಮ್ಯಾನ್’ ಬಿಡುಗಡೆ ಪ್ರಚಾರಕ್ಕೆ ಹೋಗಬೇಕು. ಇದು ಸಾಲದು ಎಂಬಂತೆ ಜನವರಿಗೆ ಮೆಡಿಕಲ್ ಪರೀಕ್ಷೆ ಕೂಡ ಇದೆ. ಒಂದೇ ಒಂದು ಗಂಟೆಗಾಗಿ ನಿರ್ಮಾಪಕರು ಕಾಯುತ್ತಿದ್ದಾರೆ. ಶ್ರೀಲೀಲಾ ಸಮಯ ಹೊಂದಿಸಲು ಒದ್ದಾಡುತ್ತಿದ್ದಾರೆ. ಹೀಗಿರುವಾಗ ಪುರುಸೊತ್ತು ಇಲ್ಲದ ಸಮಯದಲ್ಲಿ ಶ್ರೀಲೀಲಾ ಶ್ರೀಲಂಕಾಕ್ಕೆ ಹಾರಿದ್ದಾರೆ. ಇದನ್ನೂ ಓದಿ:ರಸ್ತೆಯಲ್ಲಿ ಕುಡಿದು ತೂರಾಡಿದ್ದ ಫೋಟೋಗೆ ಸ್ಪಷ್ಟನೆ ನೀಡಿದ ಸನ್ನಿ

    ‘ಬಾಹುಬಲಿ’ (Bahubali) ನಟ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ಮದುವೆ ಇಂದು (ಡಿ.6) ನಡೆಯುತ್ತಿದೆ. ಹುಡುಗಿ ಪ್ರತ್ಯೂಶಾ. ಈಕೆಗಾಗಿ ಶ್ರೀಲೀಲಾ ಶ್ರೀಲಂಕಾಕ್ಕೆ ಹೋಗಿದ್ದಾರೆ. ಬಾಲ್ಯದ ಗೆಳತಿ ಪ್ರತ್ಯೂಶಾ- ಶ್ರೀಲೀಲಾ ಅಮೆರಿಕಾದಲ್ಲಿ ಇಬ್ಬರೂ ಒಂದೇ ಕಾಲೇಜಿನ ಗೆಳತಿಯರು. ಹೀಗಾಗಿ ಇದ್ದ ಬದ್ದ ಕೆಲಸವೆಲ್ಲಾ ಪಕ್ಕಕ್ಕಿಟ್ಟು ಶ್ರೀಲೀಲಾ ಮದುವೆಗೆ ಹಾಜರಾಗಿದ್ದಾರೆ.

    ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಶೂಟಿಂಗ್ ಮತ್ತು ಸಿನಿಮಾ ರಿಲೀಸ್‌ನಲ್ಲಿ ಬ್ಯುಸಿಯಿದ್ದ ‘ಕಿಸ್’ ನಟಿ. ಕೊಂಚ ತೆಗೆದುಕೊಂಡು ಶ್ರೀಲಂಕಾಗೆ ಹಾರಿದ್ದಾರೆ. ಅಂದಹಾಗೆ, ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸುವ ಬಗ್ಗೆ ಶ್ರೀಲೀಲಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯದಲ್ಲೇ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

  • ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

    ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

    ಳೆ ಹುಡುಗಿ ಪೂಜಾ ಗಾಂಧಿ (Pooja Gandhi) ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ಹೊಸ ಬಾಳಿಗೆ ಇಂದು (ನ.29) ಕಾಲಿಟ್ಟಿದ್ದಾರೆ. ಪೂಜಾ-ವಿಜಯ್ ಮದುವೆಗೆ ಸಂಜನಾ ಗಲ್ರಾನಿ ಆಗಮಿಸಿ ಶುಭಕೋರಿದ್ದಾರೆ. ಇದನ್ನೂ ಓದಿ:ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಪೂಜಾ ಅವರನ್ನ ನೋಡಿದ್ರೆ ಹೆಮ್ಮೆ ಆಗುತ್ತದೆ. ಬೇರೇ ರಾಜ್ಯದಿಂದ ಬಂದು ಕನ್ನಡ ಕಲಿತಿದ್ದಾರೆ. ಈಗ ಕರ್ನಾಟಕದ ಸೊಸೆ ಆಗಿದ್ದಾರೆ. ವಿಜಯ್ ತುಂಬಾ ಒಳ್ಳೆಯ ಹುಡುಗ. ನಾನು ಹುಡುಗನ ಕಡೆಯಿಂದ ಮದುವೆಗೆ ಬಂದಿದ್ದೀನಿ ಎಂದು ಸಂಜನಾ ಮಾತನಾಡಿದ್ದಾರೆ. ಬಳಿಕ ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು ಎಂದು ಹಳೆಯ ದಿನಗಳನ್ನ ನಟಿ ಸಂಜನಾ ಗಲ್ರಾನಿ (Sanjana Galrani) ಸ್ಮರಿಸಿದ್ದರು. ಬಳಿಕ ನವಜೋಡಿಗೆ ಶುಭ ಹಾರೈಸಿದ್ದರು.

    ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಮದುವೆಯಾಗಿದ್ದಾರೆ.

    ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.

    ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಅವರು ಶುಭಕೋರಿದ್ದಾರೆ.

  • ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

    ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ (Pooja Gandhi) ಹಸೆಮಣೆ ಏರಲು ಇದೀಗ ಕೌಂಟ್‌ಡೌನ್ ಶುರುವಾಗಿದೆ. ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಮುನ್ನುಡಿ ಬರೆಯಲು ನಟಿ ಸಜ್ಜಾಗಿದ್ದಾರೆ. ಮಂತ್ರ ಮಾಂಗಲ್ಯ ಪದ್ಧತಿಯಂತೆ ನಟಿ ಮದುವೆಯಾಗುತ್ತಿದ್ದಾರೆ.

    ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ (Wedding) ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

    ಪೂಜಾ- ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್ವುಡ್‌ನ ಆತ್ಮೀಯ ಸ್ನೇಹಿತರು ಅಷ್ಟೇ ಭಾಗಿದ್ದಾರೆ. ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    ತಮ್ಮ ಮದುವೆ ಯಾವುದೇ ಆಡಂಬರವಿಲ್ಲದೇ ಸರಳವಾಗಿ ಮದುವೆ ನಡೆಯುತ್ತಿದ್ದು, ಇಬ್ಬರು ಬಿಳಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮಳೆ ಹುಡುಗಿಯ ಮದುವೆ ಗುಡ್ ನ್ಯೂಸ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಪೂಜಾ ಗಾಂಧಿ ಕೈ ಹಿಡಿಯಲಿರೋ ಹುಡುಗ ವಿಜಯ್

    ಪೂಜಾ ಗಾಂಧಿ ಕೈ ಹಿಡಿಯಲಿರೋ ಹುಡುಗ ವಿಜಯ್

    ಹಿಂದೆ ನಿಶ್ಚಾತಾರ್ಥ ಮುರಿದು ಬಿದ್ದ ಕಾರಣದಿಂದಾಗಿ ಮದುವೆಯನ್ನೇ (Wedding) ಮರೆತಿದ್ದ ಪೂಜಾ ಗಾಂಧಿ (Pooja Gandhi), ಇದೀಗ ಎಲ್ಲ ಕಹಿ ಘಟನೆಗಳನ್ನು ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ.

    ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ ನಾಳೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ (Mantra Mangalya)ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಅದೀಗ ಎಲ್ಲವೂ ನಿಜವಾಗಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದಿದ್ದಾರೆ.

    ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

     

    ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.

  • ವಿದೇಶಗಳಲ್ಲಿ ಮದುವೆ ಆಗಬೇಡಿ: ಭಾರತೀಯರಿಗೆ ಪ್ರಧಾನಿ ಮೋದಿ ಸಲಹೆ

    ವಿದೇಶಗಳಲ್ಲಿ ಮದುವೆ ಆಗಬೇಡಿ: ಭಾರತೀಯರಿಗೆ ಪ್ರಧಾನಿ ಮೋದಿ ಸಲಹೆ

    ನವದೆಹಲಿ: ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ ಎಂದು ಭಾರತೀಯ ಜೋಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಲಹೆ ನೀಡಿದ್ದಾರೆ.

    ಮನ್‌ ಕಿ ಬಾತ್‌ (Mann Ki Baat) ಕಾರ್ಯಕ್ರಮದಲ್ಲಿ ಇಂದು (ಭಾನುವಾರ) ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಮದುವೆಗಳಿಗೆ ಶಾಪಿಂಗ್ ಮಾಡುವಾಗ, ಜನರು ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿಯ ಮಾಜಿ ಸ್ನೇಹಿತ ಎಂದಿರೋ ರಾಹುಲ್‍ಗೆ ಓವೈಸಿ ತಿರುಗೇಟು

    ಶ್ರೀಮಂತ ಕುಟುಂಬಗಳು ವಿದೇಶದಲ್ಲಿ ಮದುವೆಗಳನ್ನು ನಡೆಸುವ ಪ್ರವೃತ್ತಿಯಿಂದ ದೇಶಕ್ಕೆ ತುಂಬಾ ಸಮಸ್ಯೆಯಾಗುತ್ತಿದೆ. ದೇಶದ ಹಣ ಹೊರಗಡೆ ಹೋಗದಂತೆ ಭಾರತದ ನೆಲದಲ್ಲಿ ಇಂತಹ ಸಮಾರಂಭಗಳನ್ನು ನಡೆಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

    ಈಗ ಮದುವೆ ಸೀಸನ್ ಕೂಡ ಶುರುವಾಗಿದೆ. ಈ ಮದುವೆ ಸೀಸನ್‌ನಲ್ಲಿ ಸುಮಾರು 5 ಲಕ್ಷ ಕೋಟಿ ರೂ. ವ್ಯಾಪಾರ ಆಗಬಹುದು ಎಂದು ಕೆಲವು ವ್ಯಾಪಾರ ಸಂಸ್ಥೆಗಳು ಅಂದಾಜಿಸುತ್ತವೆ. ಮದುವೆಗೆ ಶಾಪಿಂಗ್ ಮಾಡುವಾಗ ನೀವೆಲ್ಲರೂ ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಪ್ರತಿಭಟನಾಕಾರರ ದಿಗ್ಬಂಧನ- ಅಧಿಕಾರಿಯ ಅಮಾನತು

    ಹೌದು, ಮದುವೆಯ ವಿಷಯ ಬಂದಾಗಿನಿಂದ ಒಂದು ವಿಷಯವು ನನ್ನನ್ನು ಬಹಳ ಸಮಯದಿಂದ ಕಾಡುತ್ತಿದೆ. ಮನಸ್ಸಿನ ನೋವನ್ನು ನನ್ನ ಕುಟುಂಬದವರನ್ನು ಬಿಟ್ಟು ಬೇರೆ ಯಾರ ಹತ್ತಿರ ಹೇಳಿಕೊಳ್ಳಲಿ? ಸುಮ್ಮನೆ ಯೋಚಿಸಿ.. ಇತ್ತೀಚಿನ ದಿನಗಳಲ್ಲಿ ಕೆಲವು ಕುಟುಂಬಗಳು ವಿದೇಶಕ್ಕೆ ಹೋಗಿ ಮದುವೆಗಳನ್ನು ನಡೆಸುವ ಹೊಸ ಪರಿಪಾಠ ಶುರುಮಾಡಿಕೊಂಡಿವೆ. ಇದು ಅಗತ್ಯವೇ ಎಂದು ಪ್ರಶ್ನಿಸಿದ್ದಾರೆ.

    ಭಾರತದ ನೆಲದಲ್ಲಿ ಜನರು ಮದುವೆ ಸಮಾರಂಭ ಆಯೋಜಿಸಿದರೆ, ದೇಶದ ಹಣವು ದೇಶದಲ್ಲೇ ಉಳಿಯುತ್ತದೆ. ಇಂತಹ ಮದುವೆಗಳಲ್ಲಿ ದೇಶದ ಜನರಿಗೆ ಒಂದಿಷ್ಟು ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

    ಬಡವರು ಕೂಡ ತಮ್ಮ ಮಕ್ಕಳಿಗೆ ಅವರ ಮದುವೆಯ ಬಗ್ಗೆ ಹೇಳುತ್ತಾರೆ. ‘ವೋಕಲ್ ಫಾರ್ ಲೋಕಲ್’ನ ಈ ಮಿಷನ್ ಅನ್ನು ನೀವು ವಿಸ್ತರಿಸಬಹುದೇ? ನಮ್ಮ ದೇಶದಲ್ಲಿಯೇ ಇಂತಹ ಮದುವೆ ಸಮಾರಂಭಗಳನ್ನು ಏಕೆ ನಡೆಸಬಾರದು? ನೀವು ಬಯಸಿದಂತಹ ವ್ಯವಸ್ಥೆ ಎಲ್ಲಾ ಕಡೆ ಇಲ್ಲದಿರಬಹುದು. ಆದರೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ವ್ಯವಸ್ಥೆಗಳೂ ಅಭಿವೃದ್ಧಿ ಹೊಂದುತ್ತವೆ. ಇದು ಬಹಳ ದೊಡ್ಡ ಕುಟುಂಬಗಳಿಗೆ ಸಂಬಂಧಿಸಿದ ವಿಷಯವಾಗಿದೆ. ನನ್ನ ಈ ನೋವು ಖಂಡಿತವಾಗಿಯೂ ಆ ದೊಡ್ಡ ಕುಟುಂಬಗಳನ್ನು ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ ಪ್ರಧಾನಿ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರೇರಣಾ ಕಂಬಂ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರೇರಣಾ ಕಂಬಂ

    ನಪ್ರಿಯ ಸೀರಿಯಲ್ ‘ರಂಗನಾಯಕಿ’ ಮೂಲಕ ಪರಿಚಿತರಾದ ನಟಿ ಪ್ರೇರಣಾ ಕಂಬಂ (Prerana Kambam) ಅವರು ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀಪಾದ್ ದೇಶಪಾಂಡೆ ಜೊತೆ ನಟಿ ಹಸೆಮಣೆ ಏರಿದ್ದಾರೆ.

    ಇತ್ತೀಚೆಗೆ ಪ್ರೇರಣಾ ಅವರು ಶ್ರೀಪಾದ್ ಜೊತೆ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಖಾಸಗಿ ರೆಸಾರ್ಟ್‌ವೊಂದರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ನಟಿ ಮದುವೆಯಾಗಿದ್ದಾರೆ. ಈ ಮದುವೆಗೆ ನಮ್ಮನೆ ಯುವರಾಣಿ ಸೀರಿಯಲ್‌ ನಟಿ ಅಂಕಿತಾ ಅಮರ್‌ ಆಗಮಿಸಿದ್ದರು.

    ಸ್ಪೆಷಲ್ ಫೋಟೋಶೂಟ್ ಮೂಲಕ ನಟಿ ಕೆಲ ದಿನಗಳ ಹಿಂದೆ ಭಾವಿ ಪತಿಯನ್ನ ಸೋಷಿಯಲ್ ಮೀಡಿಯಾದಲ್ಲಿ ಪರಿಚಯಿಸಿದ್ದರು. ಅಷಕ್ಕೂ ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇದನ್ನೂ ಓದಿ:ಸಂಗೀತಾ ಜೊತೆ ನಮ್ರತಾ ಫ್ರೆಂಡ್‌ಶಿಪ್-‌ ಸ್ನೇಹಿತ್‌ ಕಿಡಿ

    ‘ರಂಗನಾಯಕಿ’ (Ranganayaki) ಸೀರಿಯಲ್‌ನಲ್ಲಿ ಹೀರೋಯಿನ್ ಆಗಿ ನಟನಾ ಕ್ಷೇತ್ರಕ್ಕೆ ಪರಿಚಿತರಾದ ಪ್ರೇರಣಾ ಬಳಿಕ ಕನ್ನಡದ ಮಿನಿ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದರು. ‘ಫಿಸಿಕ್ಸ್ ಟೀಚರ್’ ಎಂಬ ಚಿತ್ರದಲ್ಲಿ ನಟಿಸಿದ್ದರು. ತೆಲುಗಿನಲ್ಲಿ ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್‌ನಲ್ಲಿ ಪ್ರೇರಣಾ ಲೀಡ್ ರೋಲ್‌ನಲ್ಲಿ ನಟಿಸಿದ್ದರು.

  • Bigg Boss: ಮುಂದಿನ ವಾರ ಒಳ್ಳೆ ಹುಡುಗ ಪ್ರಥಮ್ ಮದುವೆ

    Bigg Boss: ಮುಂದಿನ ವಾರ ಒಳ್ಳೆ ಹುಡುಗ ಪ್ರಥಮ್ ಮದುವೆ

    ಬಿಗ್ ಬಾಸ್ ಕನ್ನಡ ಸೀಸನ್ 4ರ (Bigg Boss Kannada 4) ವಿನ್ನರ್ ಪ್ರಥಮ್ (Pratham) ಅವರು ತಮ್ಮ ಮದುವೆಯ ಬಗ್ಗೆ ಅಪ್‌ಡೇಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮದುವೆ (Wedding) ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 70 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೇಸೆಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಕುಟುಂಬದವರು ಇಷ್ಟಪಟ್ಟ ಹುಡುಗಿ ಮಂಡ್ಯದ ಭಾನುಶ್ರೀ ಜೊತೆ ಪ್ರಥಮ್ ಇತ್ತೀಚೆಗೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈಗ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ.

    ಇನ್ನೂ ಕಳೆದ ವರ್ಷ ‘ನಟ ಭಯಂಕರ’, ‘ಎಂಎಲ್‌ಎ’, ‘ದೇವರಂಥ ಮನುಷ್ಯ’ ಎಂಬ ಸಿನಿಮಾಗಳಲ್ಲಿ ಪ್ರಥಮ್ ನಟಿಸಿದ್ದರು.