‘ಪ್ರೇಮಂ’ (Premam) ಚಿತ್ರದ ಮೂಲಕ ಗಮನ ಸೆಳೆದ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಈಗ ಮತ್ತೊಮ್ಮೆ ಮದುವೆ ವಿಚಾರವಾಗಿ ಸುದ್ದಿಯಾಗಿದ್ದಾರೆ. ತೆಲುಗಿನ ನಟ ರಾಮ್ ಪೋತಿನೇನಿ (Ram Pothineni) ಜೊತೆ ಅನುಪಮಾ ಮದುವೆ (Wedding) ಆಗಲಿದ್ದಾರೆ ಎಂದು ಟಾಲಿವುಡ್ ಅಂಗಳದಲ್ಲಿ ಗುಸು ಗುಸು ಶುರುವಾಗಿದೆ.

ಕಳೆದ ಬಾರಿ ಕ್ರಿಕೆಟರ್ ಜಸ್ಟ್ರಿತ್ ಬುಮ್ರಾ ಜೊತೆ ಅನುಪಮಾ ಮದುವೆ ಎಂದು ಸುದ್ದಿಯಾಗಿತ್ತು. ಬಳಿಕ ಈ ಸುದ್ದಿ ಸುಳ್ಳು ಎಂದು ನಟಿ ಸ್ಪಷ್ಟನೆ ನೀಡಿದ್ದರು. ಈಗ ತೆಲುಗು ಹೀರೋ ರಾಮ್ ಪೋತಿನೇನಿ ಜೊತೆ ನಟಿ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಕುತೂಹಲ ಮೂಡಿಸುವ ‘ವೇಷ’ ಸಿನಿಮಾದ ಟ್ರೈಲರ್ ರಿಲೀಸ್

2018ರಲ್ಲಿ ‘ಹಲೋ ಗುರು ಪ್ರೇಮ ಕೋಸಮೆ’ ಎಂಬ ಸಿನಿಮಾದಲ್ಲಿ ಇಬ್ಬರು ಜೊತೆಯಾಗಿ ನಟಿಸಿದ್ದರು. ಶೂಟಿಂಗ್ ಸಂದರ್ಭದಲ್ಲಿ ಅನುಪಮಾ- ರಾಮ್‌ಗೆ ಪ್ರೇಮಾಂಕುರವಾಗಿದ್ದು, ಸಾಕಷ್ಟು ವರ್ಷಗಳಿಂದ ಡೇಟಿಂಗ್ (Dating) ಮಾಡ್ತಿದ್ದಾರೆ ಎನ್ನಲಾಗುತ್ತಿದೆ.
ಎರಡು ಕುಟುಂಬದ ಗುರುಹಿರಿಯರು ಕೂಡ ಮದುವೆಗೆ ಸಮ್ಮತಿ ಸೂಚಿಸಿದ್ದು, ಮದುವೆಗೆ (Wedding) ಸಕಲ ತಯಾರಿ ನಡೆಯುತ್ತಿದೆ ಎಂಬುದು ಲೇಟೆಸ್ಟ್ ನ್ಯೂಸ್. ಒಂದು ಈ ಸುದ್ದಿ ನಿಜವೇ ಆಗಿದ್ದಲ್ಲಿ, ರಾಮ್- ಅನುಪಮಾ ಫ್ಯಾನ್ಸ್‌ಗೆ ಖುಷಿ ಪಡುವ ಸುದ್ದಿಯಾಗಲಿದೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]















ಖ್ಯಾತ ಕ್ರಿಕೆಟಿಗನ (Cricketer) ಜೊತೆ ಪೂಜಾ ಹೊಸ ಬಾಳಿಗೆ (Wedding) ಕಾಲಿಡಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜಾನಾ? ಈ ಬಗ್ಗೆ ನಟಿ ಕೂಡ ಯಾವುದೇ ಸ್ಪಷ್ಟನೆ ನೀಡಿಲ್ಲ.


ಮದುವೆ (Wedding) ಕುರಿತು ಟ್ವೀಟ್ಟರ್‌ನಲ್ಲಿ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿರುವ ನಟಿ, ಸಾಮಾನ್ಯವಾಗಿ, ನಾನು ವದಂತಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ನನಗೆ ಭಯವೂ ಇಲ್ಲ. ಆದರೆ ಆ ಸುದ್ದಿಗಳು ನನ್ನ ಕುಟುಂಬವೇ ಆಗಿರುವ ಸ್ನೇಹಿತರನ್ನು ಒಳಗೊಂಡು ಅವರ ಮೇಲೆ ಪರಿಣಾಮ ಬೀರುತ್ತಿದೆ ಎಂದಾಗ ನಾನು ಮಾತನಾಡಲೇ ಬೇಕಾಗಿದೆ.






40 ವರ್ಷ ಪೂರೈಸಿರೋ ನಟಿ ಬಗ್ಗೆ ಮದುವೆ ಮ್ಯಾಟರ್ ಮತ್ತೆ ಮುನ್ನೆಲೆಗೆ ಬರುತ್ತಿದೆ. ಮಲಯಾಳಂನ ಖ್ಯಾತ ನಿರ್ಮಾಪಕನ ಜೊತೆ ತ್ರಿಷಾ ಎಂಗೇಜ್ ಆಗಿದ್ದು, ಸದ್ಯದಲ್ಲೇ ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಡಲಿದ್ದಾರೆ ಎನ್ನಲಾಗ್ತಿದೆ. ಮದುವೆಯಾಗುವ ವರನ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ.