Tag: wedding

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‌ ಬಾಸ್‌ ಬೆಡಗಿ ಅಕ್ಷತಾ ಕುಕಿ

    ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‌ ಬಾಸ್‌ ಬೆಡಗಿ ಅಕ್ಷತಾ ಕುಕಿ

    ನ್ನಡದ ಬಿಗ್ ಬಾಸ್ (Bigg Boss Kannada) ಮೂಲಕ ಮೋಡಿ ಮಾಡಿದ್ದ ಚೆಲುವೆ ಅಕ್ಷತಾ ಕುಕಿ (Akshatha Kukki) ಅವರು ಸೋಮವಾರ (ಮಾ.27)ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವಿನಾಶ್ (Avinash) ಎಂಬುವವರ ಜೊತೆ ಅರೆಂಜ್ ಮ್ಯಾರೇಜ್ (Wedding) ಆಗಿದ್ದಾರೆ.

    ಬಿಗ್ ಬಾಸ್ ಒಟಿಟಿಗೆ ಕಾಲಿಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಸ್ಪರ್ಧಿ ಅಕ್ಷತಾ ಕುಕಿ ಅವರು ಸೀರಿಯಲ್ ಮತ್ತು ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. `ಮಾರ್ಟಿನ್’ (Martin) ಚಿತ್ರದಲ್ಲಿ ಧ್ರುವ ಸರ್ಜಾ (Dhruva Sarja)  ಜೊತೆ ಅಕ್ಷತಾ ಕುಕಿ ನಟಿಸಿದ್ದಾರೆ. ಇದನ್ನೂ ಓದಿ:`ಘೋಸ್ಟ್’ ಚಿತ್ರತಂಡ ಸೇರಿದ ಬಾಲಿವುಡ್ ನಟ ಅನುಪಮ್ ಖೇರ್

    ಅಕ್ಷತಾ ಕುಕಿ ಅವರು ಹಸೆಮಣೆ ಏರಿದ್ದಾರೆ. ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಎರಡು ತಿಂಗಳ ಹಿಂದೆ ಎಂಗೇಜ್‌ಮೆಂಟ್ ಆಗಿತ್ತು. ಅವಿನಾಶ್ ಜೊತೆ ಮಾರ್ಚ್ 27ರಂದು ಅಕ್ಷತಾ ಸಪ್ತಪದಿ ತುಳಿದಿದ್ದಾರೆ. ಬೆಳಗಾವಿಯಲ್ಲಿ ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆ ನಡೆದಿದೆ.

    ಅಕ್ಷತಾ ಮದುವೆಯಾಗಿರುವ ವರ ಅವಿನಾಶ್, ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಕಿರುತೆರೆ ಕಲಾವಿದರು, ಸ್ನೇಹಿತರು, ಫ್ಯಾನ್ಸ್ ಶುಭಕೋರುತ್ತಿದ್ದಾರೆ.

  • ಧನುಷ್‌ ಜೊತೆಗಿನ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಬಹುಭಾಷಾ ನಟಿ ಮೀನಾ

    ಧನುಷ್‌ ಜೊತೆಗಿನ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಬಹುಭಾಷಾ ನಟಿ ಮೀನಾ

    ಕಾಲಿವುಡ್ (Kollywood) ಅಂಗಳದಲ್ಲಿ ಸದ್ಯ ಸುದ್ದಿಯಾಗಿರುವ ವಿಚಾರ ಅಂದರೆ ನಟಿ ಮೀನಾ- ಧನುಷ್ (Dhanush) ಮದುವೆ ಮ್ಯಾಟರ್. ಈ ಗಾಸಿಪ್ ದೊಡ್ಡ ಮಟ್ಟದಲ್ಲಿ ವೈರಲ್ ಆಗಿರೋ ಬೆನ್ನಲ್ಲೇ ಬಹುಭಾಷಾ ನಟಿ ಮೀನಾ (Meena) ಪ್ರತಿಕ್ರಿಯೆ ನೀಡಿದ್ದಾರೆ. ಧನುಷ್ ಜೊತೆಗಿನ ಮದುವೆ ವಿಚಾರಕ್ಕೆ ನಟಿ ಮೌನ ಮುರಿದಿದ್ದಾರೆ.

    ಪುಟ್ನಂಜ, ಚೆಲುವ, ಗ್ರಾಮದೇವತೆ, ಸಿಂಹಾದ್ರಿಯ ಸಿಂಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಮೀನಾ ಬಗ್ಗೆ ಮದುವೆ ಸುದ್ದಿಯೊಂದು ಹರಿದಾಡುತ್ತಿದೆ. ಪತಿಯ ಸಾವಿನ ನೋವಿನಿಂದ ಚೇತರಿಸಿಕೊಂಡಿರುವ ನಟಿ ಮೀನಾ ಅವರು 2ನೇ ಮದುವೆಯಾಗುತ್ತಿದ್ದಾರೆ. ಕಾಲಿವುಡ್ ನಟ ಧನುಷ್ ಜೊತೆ ಮೀನಾ ಮದುವೆ ಎಂದು ಇತ್ತೀಚಿಗೆ ಸಂದರ್ಶನವೊಂದರಲ್ಲಿ ಬೈಲ್ವಾನ್ ರಂಗನಾಥನ್ ಬಾಂಬ್ ಸಿಡಿಸಿದ್ದರು. ಇದನ್ನೂ ಓದಿ: ಮಾಜಿ ಪತ್ನಿ, ಸಹೋದರನ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ನವಾಜುದ್ದೀನ್ ಸಿದ್ದಿಕಿ

    ಬೈಲ್ವಾನ್ ರಂಗನಾಥನ್ ಆಡಿರುವ ಮಾತುಗಳು ಇದೀಗ ನಟಿ ಮೀನಾ ಅವರ ಕಿವಿಗೂ ಬಿದ್ದಿದೆ. ಪರಿಣಾಮ, ಎರಡನೇ ಮದುವೆ ಗಾಸಿಪ್ ಬಗ್ಗೆ ನಟಿ ಮೀನಾ ಮೌನ ಮುರಿದಿದ್ದಾರೆ. ಹಬ್ಬಿರುವ ಗಾಸಿಪ್ ಶುದ್ಧ ಸುಳ್ಳು ಎಂದು ಮೀನಾ ಮಾತನಾಡಿದ್ದಾರೆ.

    ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಮೀನಾ, ನಾನಿನ್ನೂ ಪತಿಯನ್ನ ಕಳೆದುಕೊಂಡ ನೋವಿನಲ್ಲಿದ್ದೇನೆ. ಇಂತಹ ಸಮಯದಲ್ಲಿ ಎರಡನೇ ಮದುವೆಯ ಗಾಸಿಪ್ ಹಬ್ಬಿರುವುದು ತೀರಾ ಬೇಸರ ತರಿಸಿದೆ. ವಿದ್ಯಾಸಾಗರ್ ನಿಧನದ ನೋವನ್ನ ಅರಗಿಸಿಕೊಳ್ಳುವುದೇ ಕಷ್ಟವಾಗುತ್ತಿದೆ. ಅಂಥದ್ರಲ್ಲಿ ಈ ತರಹದ ಗಾಸಿಪ್ ಹಬ್ಬಿದರೆ ತೀವ್ರ ನೋವುಂಟಾಗುತ್ತದೆ. ನನ್ನ ಗಮನ ಈಗ ಏನಿದ್ದರೂ ಮಗಳ ಭವಿಷ್ಯದ ಮೇಲೆ ಮಾತ್ರ. ಸಿನಿಮಾ ಹಾಗೂ ಪಾತ್ರಗಳ ಆಯ್ಕೆ ವಿಚಾರದಲ್ಲೂ ನಾನು ಚ್ಯೂಸಿ ಆಗಿದ್ದೇನೆ ಎಂದು ಮೀನಾ ಮಾತನಾಡಿದ್ದಾರೆ.

  • ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ದಲ್ಜೀತ್ ಕೌರ್

    ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ದಲ್ಜೀತ್ ಕೌರ್

    ಬಿಗ್ ಬಾಸ್ ಸ್ಪರ್ಧಿ ದಲ್ಜೀತ್ ಕೌರ್ ಇತ್ತೀಚಿಗೆ ಉದ್ಯಮಿ ನಿಖಿಲ್ ಪಟೇಲ್ ಅವರನ್ನ ಮದುವೆಯಾದರು. ಹನಿಮೂನ್‌ಗಾಗಿ ಸಿಂಗಾಪುರದಲ್ಲಿ ಬೀಡು ಬಿಟ್ಟಿರುವ ಈ ಜೋಡಿ ಇದೀಗ ಬೆಡ್‌ರೂಮ್ ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ `ಪಯಣ’ ಖ್ಯಾತಿಯ ನಿರ್ದೇಶಕ ಕಿರಣ್ ಗೋವಿ ನಿಧನ

    ನವಜೋಡಿ ದಲ್ಜೀತ್ ಕೌರ್-ನಿಖಿಲ್ ಪಟೇಲ್ ಇದೀಗ ಹನಿಮೂನ್ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಬೆಡ್‌ರೂಮ್ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಮೂಲಕ ಸುದ್ದಿಯಲ್ಲಿದ್ದಾರೆ. ರೊಮ್ಯಾಂಟಿಕ್ ಕ್ಷಣಗಳ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

    ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ಸೀಸನ್ 13ರಲ್ಲಿ ನಟಿ ದಲ್ಜೀತ್ ಕೌರ್ ಗಮನ ಸೆಳೆದಿದ್ದರು. ಹಿಂದಿ ನಟ ಶಾಲಿನ್ ಭಾನೋಟ್ ಜೊತೆ 2009ರಲ್ಲಿ ಹಸೆಮಣೆ ಏರಿದ್ದರು. ಬಳಿಕ 2015ರಲ್ಲಿ ಈ ಜೋಡಿ ಡಿವೋರ್ಸ್ ಪಡೆದು ದೂರಾವಾದರು. ನಿಖಿಲ್- ದಲ್ಜೀತ್ ಇಬ್ಬರಿಗೂ ಇದು 2ನೇ ಮದುವೆಯಾಗಿದೆ.

    ನಿಖಿಲ್‌ಗೆ ಕೂಡ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದಲ್ಜೀತ್ ಕೌರ್‌ಗೆ ಈಗಾಗಲೇ ಒಬ್ಬ ಮಗನಿದ್ದು, ಪೋಷಕರ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

  • ಮದುವೆ ಬಗ್ಗೆ ಸಿಹಿಸುದ್ದಿ ಹಂಚಿಕೊಂಡ ನಟಿ ಉರ್ಫಿ ಜಾವೇದ್

    ಮದುವೆ ಬಗ್ಗೆ ಸಿಹಿಸುದ್ದಿ ಹಂಚಿಕೊಂಡ ನಟಿ ಉರ್ಫಿ ಜಾವೇದ್

    ಬಿಗ್ ಬಾಸ್ (Bigg Boss) ಖ್ಯಾತಿಯ ಉರ್ಫಿ ಜಾವೇದ್ (Urfi Javed) ಸದಾ ಸುದ್ದಿ ಸುದ್ದಿಯಲ್ಲಿರುತ್ತಾರೆ. ದಿನಕ್ಕೊಂದು ರೀತಿಯ ಬಟ್ಟೆ ಧರಿಸಿ ಕ್ಯಾಮೆರಾ ಮುಂದೆ ಬರುವ ಉರ್ಫಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ. ವಿಚಿತ್ರ ಉಡುಗೆಗಳ ಮೂಲಕವೇ ಉರ್ಫಿ ಸಿಕ್ಕಾಪಟ್ಟೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಉರ್ಫಿ ಪ್ರೀತಿ-ಪ್ರೇಮದ ವಿಚಾರವಾಗಿ ಸುದ್ದಿಯಾಗಿದ್ದಾರೆ.

    ಸದಾ ಹಾಟ್ ಲುಕ್ ಮೂಲಕ ಇಂಟರ್‌ನೆಟ್ ಬೆಂಕಿ ಹಚ್ತಿದ್ದ ನಟಿ ಈಗ ಉರ್ಫಿ ಜಾವೇದ್ ಪ್ರೀತಿಯಲ್ಲಿದ್ದಾರೆ (Love) ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಇದಕ್ಕೆ ಕಾರಣವಾಗಿದ್ದು ಉರ್ಫಿ ಹಂಚಿಕೊಂಡಿರುವ ಫೋಟೋ. ಉರ್ಫಿ ಪೋಸ್ಟ್ ನೆಟ್ಟಿಗರ ಕುತೂಹಲಕ್ಕೆ ಕಾರಣವಾಗಿದೆ. ಅಂದಹಾಗೆ ಉರ್ಫಿ ಶೇರ್ ಮಾಡಿರುವ ಪೋಸ್ಟ್‌ನಲ್ಲಿ ಏನಿದೆ ಅಂತಿರಾ, ಅವನು ಯೆಸ್ ಎಂದ… ಎಂದು ಈ ಕುರಿತ ಫೋಟೋವನ್ನ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಮದುವೆ ಬಗ್ಗೆ ಸುಳಿವು ನೀಡಿದ್ದಾರೆ.

    ಉರ್ಫಿ ಈ ಹಿಂದೆ ಮಾಡೆಲ್ ಪರಾಸ್ ಕಲ್ನಾವತ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದರು. ಇಬ್ಬರ ಸಂಬಂಧ ಮುರಿದು ಬಿದ್ದಿತ್ತು. ಇದೀಗ ಉರ್ಫಿ ಮತ್ತೊಬ್ಬರ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಯಾರು ಎಂದು ರಿವೀಲ್ ಮಾಡಿಲ್ಲ. ಈ ಪೋಸ್ಟ್ ಶೇರ್ ಮಾಡ್ತಿದ್ದಂತೆ ಬಗೆ ಬಗೆಯ ಕಾಮೆಂಟ್ ಬಂದಿದೆ. ಇದನ್ನೂ ಓದಿ: ಬಾಲಿವುಡ್‌ಗೆ ಅಮೀರ್‌ ಪುತ್ರ ಜುನೈದ್‌ ಖಾನ್‌ ಎಂಟ್ರಿ

    ಉರ್ಫಿ ನಿಜಕ್ಕೂ ಮದುವೆ (Wedding) ಆಗುತ್ತಿದ್ದಾರಾ? ಅಥವಾ ಬೇರೆ ಯಾವುದಕ್ಕೋ ಪೋಸ್ಟ್ ಹಾಕಿದ್ದಾರಾ ಎನ್ನುವುದು ಕುತೂಹಲ ಮೂಡಿಸಿದೆ. ಈ ಬಗ್ಗೆ ಉರ್ಫಿನೇ ಸದ್ಯದಲ್ಲೇ ರಿವೀಲ್ ಮಾಡುವ ಸಾಧ್ಯತೆ ಇದೆ. ನಟಿ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.

  • `ಸಿಂಹಾದ್ರಿಯ ಸಿಂಹ’ ನಟಿ ಮೀನಾ ಜೊತೆ ಧನುಷ್ ಮದುವೆ

    `ಸಿಂಹಾದ್ರಿಯ ಸಿಂಹ’ ನಟಿ ಮೀನಾ ಜೊತೆ ಧನುಷ್ ಮದುವೆ

    ಪುಟ್ನಂಜ, ಚೆಲುವ, ಗ್ರಾಮದೇವತೆ, ಸಿಂಹಾದ್ರಿಯ ಸಿಂಹ (Simhadriya Simha) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಮೀನಾ (Meena) ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಪತಿಯ ಸಾವಿನ ನೋವಿನಿಂದ ಚೇತರಿಸಿಕೊಂಡಿರುವ ನಟಿ ಮೀನಾ ಅವರ 2ನೇ ಮದುವೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕಾಲಿವುಡ್ ನಟ ಧನುಷ್ (Actor Dhanush) ಜೊತೆ ಮೀನಾ ಮದುವೆ ಎಂದು ಸುದ್ದಿಯಾಗಿದೆ. ಇದನ್ನೂ ಓದಿ: ಕರದಂಟು ಉದ್ಯಮಿ ಬೆನ್ನಿಗೆ ನಿಂತ ಅಶ್ವಿನಿ ಪುನೀತ್ ರಾಜ್ ಕುಮಾರ್

    ರಜನಿಕಾಂತ್ (Rajanikanth) ಪುತ್ರಿ ಐಶ್ವರ್ಯಾಗೆ ಧನುಷ್ ಡಿವೋರ್ಸ್ ನೀಡಿರೋದು ಎಲ್ಲರಿಗೂ ಗೊತ್ತೆ ಇದೆ. ಇಬ್ಬರೂ ಇದೀಗ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ ಧನುಷ್ ಮತ್ತು ಮೀನಾ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ಮದುವೆ ಬಗ್ಗೆ ಸಂದರ್ಶನವೊಂದರಲ್ಲಿ ನಟ ಬೈಲಾನ್ ರಂಗನಾಥನ್ ಮಾಹಿತಿ ಹಂಚಿಕೊಂಡಿದ್ದಾರೆ.

    ಧನುಷ್- ಮೀನಾ ಇಬ್ಬರು ಒಂಟಿ ಜೀವನ ನಡೆಸುತ್ತಿದ್ದಾರೆ. ಮುಂಬರುವ ಜುಲೈನಲ್ಲಿ ಇಬ್ಬರೂ ಮದುವೆಯಾಗುತ್ತಾರೆ ಎಂದು ಬೈಲಾನ್ ರಂಗನಾಥನ್ ಹೇಳಿದ್ದಾರೆ. ಈ ಸುದ್ದಿ ಕೇಳ್ತಿದ್ದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಅಷ್ಷಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

  • ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ಣ್ಣದ ಲೋಕದಲ್ಲಿ ನಟ-ನಟಿಯರಿಗೆ ಮದುವೆ ಆಮೇಲೆ ಡಿವೋರ್ಸ್ ಎಲ್ಲವೂ ಕಾಮನ್ ಆಗಿಬಿಟ್ಟಿದೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಕೇಳಿ ಬರುತ್ತಿದೆ. ಚಿರಂಜೀವಿ ಸಹೋದರ ನಟ ನಾಗಬಾಬು (Actor Nagababu) ಅವರ ಪುತ್ರಿ ನಿಹಾರಿಕಾ ಬದುಕಿನಲ್ಲಿ ಬಿರುಕಾಗಿದೆ ಎಂಬ ಸುದ್ದಿ ಟಾಲಿವುಡ್ (Tollywood) ಗಲ್ಲಿಯಲ್ಲಿ ಸೌಂಡ್ ಮಾಡುತ್ತಿದೆ. ಇದನ್ನೂ ಓದಿ: 65 ಲಕ್ಷ ರೂಪಾಯಿಗೆ ವ್ಯಾನಿಟಿ ವ್ಯಾನ್ ಖರೀದಿಸಿದ ಕಂಗನಾ ರಣಾವತ್

    ಮೆಗಾಸ್ಟಾರ್ ಫ್ಯಾಮಿಲಿಯಲ್ಲಿ (Megastar Family) ಮತ್ತೊಂದು ಡಿವೋರ್ಸ್ (Divorce) ಸಮಾಚಾರ ಕೇಳಿ ಬರುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ (Sreeja) ಎರಡನೇ ಮದುವೆಯಲ್ಲಿ ಬಿರುಕು ಉಂಟಾಗಿ ತವರಿಗೆ ಬಂದಿದ್ದಾರೆ. ಈ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

    2020ರಲ್ಲಿ ನಾಗಬಾಬು ಪುತ್ರಿ ನಿಹಾರಿಕಾ (Niharika Konidela) ಮತ್ತು ಚೈತನ್ಯ (Chaitanya) ಗುರುಹಿರಿಯರ ಸಮ್ಮುಖದಲ್ಲಿ ಪ್ರೇಮ ವಿವಾಹವಾಗಿದ್ದರು. ಮೆಗಾಸ್ಟಾರ್ ಫ್ಯಾಮಿಲಿ, ಅದ್ದೂರಿಯಾಗಿ ಮಗಳ ಮದುವೆಯನ್ನ ರಾಜಸ್ಥಾನದಲ್ಲಿ ಮಾಡಿದ್ದರು. ಎರಡು ವರ್ಷಗಳಿಂದ ಖುಷಿಯಿಂದ ಜೀವನ ಸಾಗಿಸುತ್ತಿದ್ದ ಜೋಡಿಯ ನಡುವೆ ಬಿರುಕಾಗಿದೆ ಎನ್ನಲಾಗುತ್ತಿದೆ.

    ಡಿವೋರ್ಸ್ ಸುದ್ದಿಗೆ ಪೂರಕವೆಂಬಂತೆ, ಇಬ್ಬರು ಇನ್ಸ್ಟಾಗ್ರಾಂ ಖಾತೆಯಲ್ಲಿ ಒಬ್ಬರನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವರ್ಷದಿಂದ ಆಕ್ಟೀವ್ ಇಲ್ಲದೇ ಇರೋದು ಅನುಮಾನ ಮೂಡಿಸಿದೆ. ಕಳೆದ 3-4 ತಿಂಗಳಿಂದ ಇಬ್ಬರು ಒಟ್ಟಿಗೆ ಇಲ್ಲ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಮೆಗಾಸ್ಟಾರ್‌ ಕುಟುಂಬ ಪ್ರತಿಕ್ರಿಯೆ ನೀಡುವವರೆಗೂ ಕಾದುನೋಡಬೇಕಿದೆ.

  • Bachelorette ಪಾರ್ಟಿಯಲ್ಲಿ ಮಿಂಚಿದ ʻಬಿಗ್ ಬಾಸ್ʼ ಅಕ್ಷತಾ ಕುಕಿ

    Bachelorette ಪಾರ್ಟಿಯಲ್ಲಿ ಮಿಂಚಿದ ʻಬಿಗ್ ಬಾಸ್ʼ ಅಕ್ಷತಾ ಕುಕಿ

    ಬಿಗ್ ಬಾಸ್ (Bigg Boss Kannada) ಮೂಲಕ ಮೋಡಿ ಮಾಡಿದ್ದ ಅಕ್ಷತಾ ಕುಕಿ (Akshtha Kukki) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆಗೂ ಮಸ್ತ್ ಆಗಿ Bachelorette ಪಾರ್ಟಿಯಲ್ಲಿ ನಟಿ ಮಿಂಚಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ನಟಿ ಹಂಚಿಕೊಂಡಿದ್ದಾರೆ.

    ಒಟಿಟಿ ಬಿಗ್ ಬಾಸ್ ಮೂಲಕ ಮನಗೆದ್ದ ಸ್ಪರ್ಧಿ ಅಕ್ಷತಾ ಅವರು `ಮಾರ್ಟಿನ್’ (Martin) ಸಿನಿಮಾ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿದ್ದಾರೆ. ಈಗ ಸಿನಿಮಾ ವಿಚಾರ ಬಿಟ್ಟು ತಮ್ಮ ಖಾಸಗಿ ಜೀವನದ ವಿಷ್ಯವಾಗಿ ನಟಿ ಸುದ್ದಿಯಾಗುತ್ತಿದ್ದಾರೆ.

    ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಮಾರ್ಚ್ 27ರಂದು ಅಕ್ಷತಾ ಮದುವೆಯಾಗುತ್ತಿದ್ದಾರೆ. ಅವಿನಾಶ್ (Avinash) ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ನಟಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಬೆಳಿಗಾವಿಯಲ್ಲಿ ಮದುವೆ ನಡೆಯಲಿದೆ. ಮದುವೆಗೂ ಮುನ್ನ Bachelorette Party ಮಾಡಿರುವ ಫೋಟೋಗಳು ಇದೀಗ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

    ಪಿಂಕ್ ಬಣ್ಣದ ಮಾಡ್ರನ್ ಧರಿಸಿ ಮುದ್ದಾಗಿ ಅಕ್ಷತಾ ಕಾಣಿಸಿಕೊಂಡಿದ್ದಾರೆ.  ನಟಿ ಅಕ್ಷತಾಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ಅಮ್ಮನ ಮನೆಗೆ ವಿದಾಯ ಹೇಳುವಾಗ ಕಣ್ಣೀರಿಟ್ಟ ನಟಿ ಸ್ವರಾ ಭಾಸ್ಕರ್

    ಅಮ್ಮನ ಮನೆಗೆ ವಿದಾಯ ಹೇಳುವಾಗ ಕಣ್ಣೀರಿಟ್ಟ ನಟಿ ಸ್ವರಾ ಭಾಸ್ಕರ್

    ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್‌ (Swara Bhaskar) ಅವರು ಫಹಾದ್ ಅಹ್ಮದ್ (Fahad ahamad) ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇತ್ತೀಚಿಗಷ್ಟೇ ತೆಲುಗು ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ವಿಶೇಷ ಕಾಯ್ದೆಯಡಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಈಗ ಗುರುಹಿರಿಯರ ಇಷ್ಟದಂತೆ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ. ಅಮ್ಮನ ಮನೆಗೆ ವಿದಾಯ ಹೇಳುವ ಸಮಯದಲ್ಲಿ ನಟಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಆಸ್ಕರ್ ಇವೆಂಟ್‌ನಲ್ಲಿ ಭಾಗಿಯಾಗಲು ಭಾರಿ ಮೊತ್ತ ಖರ್ಚು ಮಾಡಿದ ರಾಜಮೌಳಿ ಆ್ಯಂಡ್ ಟೀಂ

    ನಟಿ ಸ್ವರಾ ಭಾಸ್ಕರ್ ಅವರು ಮದುವೆ ಸಂದರ್ಭದಲ್ಲಿ ಕೆಂಪು ಬಣ್ಣದ ಲೆಹಂಗಾದಲ್ಲಿ ಕಂಗೊಳಿಸುತ್ತಿದ್ದರು. ಮದುವೆ ಬಳಿಕ ಗಂಡನ ಮನೆಗೆ ಹೊರಡುವಾಗ ಸ್ವರಾ ಭಾಸ್ಕರ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಸ್ವರಾ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಂಬಾ ಕಷ್ಟದ ಕ್ಷಣವಾಗಿತ್ತು ಎಂದು ಸ್ವರಾ ತಂದೆ ಕೂಡ ಭಾವುಕರಾಗಿದ್ದಾರೆ. ಸ್ವರಾ ಪಕ್ಕದಲ್ಲಿ ತಾಯಿ ಇರಾ ಭಾಸ್ಕರ್ ಹಾಗೂ ಪತಿ ಫಹಾನ್ ನಿಂತಿದ್ದರು. ಒಬ್ಬರು ಕವನವನ್ನು ಓದಿ ಹೇಳುತ್ತಿದ್ದರು. ಆಗ ಸ್ವರಾ ಕಣ್ಣೀರಿಟ್ಟಿದ್ದಾರೆ. ತನ್ನ ತಾಯಿ ಮನೆಗೆ ವಿದಾಯ ಹೇಳಿ ಗಂಡನ ಮನೆಗೆ ಹೋಗುವ ಕ್ಷಣ ಅದು. ಸ್ವರಾ ಭಾಸ್ಕರ್ ಭಾವುಕರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ತೆಲುಗು ಶೈಲಿಯಲ್ಲಿ (Telagu Culture Wedding) ಸ್ವರಾ ಮದುವೆಯಾಗಿದ್ದಾರೆ. ತೆಲುಗು ಸಂಸ್ಕೃತಿಯನ್ನು ಸಂಕೇತಿಸುವ ವಿಶೇಷ ಮಂಗಲಸೂತ್ರವನ್ನು ಧರಿಸಿದ್ದಾರೆ. ಸ್ವರಾ ತಾಯಿ ಇರಾ ಭಾಸ್ಕರ್ ಬಿಹಾರದವರು ಆದರೆ ಅವರ ತಂದೆ ಉದಯ್ ಭಾಸ್ಕರ್ ತೆಲುಗು ಮೂಲದವರು. ಹಾಗಾಗಿ ಸ್ವರಾ ತೆಲುಗು ಶೈಲಿಯ ಸಮಾರಂಭದಲ್ಲಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮಂಗಳಸೂತ್ರ ಧರಿಸಿರುವ ಸ್ವರಾ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವರಾ ಜೋಡಿಗೆ ಫ್ಯಾನ್ಸ್ ಅಭಿನಂದನೆ ಸಲ್ಲಿಸುತ್ತಿದ್ದಾರೆ.

    ಮದುವೆ ಮತ್ತು ಆರತಕ್ಷತೆ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತ್ತು. ಸ್ವರಾ ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅರವಿಂದ್‌ ಕೇಜ್ರಿವಾಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಹೊಸ ಜೋಡಿಗೆ ಶುಭಹಾರೈಸಿದ್ದರು.

  • 40ನೇ ವಯಸ್ಸಿಗೆ 2ನೇ ಮದುವೆಯಾದ ನಟಿ ದಲ್ಜೀತ್‌ ಕೌರ್

    40ನೇ ವಯಸ್ಸಿಗೆ 2ನೇ ಮದುವೆಯಾದ ನಟಿ ದಲ್ಜೀತ್‌ ಕೌರ್

    ಕಿರುತೆರೆಯ ಬಿಗ್ ಬಾಸ್ ಸೀಸನ್ 13ರ ಸ್ಪರ್ಧಿಯಾಗಿದ್ದ ದಲ್ಜೀತ್ ಕೌರ್ ಇದೀಗ ಎರಡನೇ ಮದುವೆಯಾಗಿದ್ದಾರೆ. ಉದ್ಯಮಿ ನಿಖಿಲ್ ಪಟೇಲ್ ಜೊತೆ ಮಾರ್ಚ್ 18ರಂದು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ.

    ಸಲ್ಮಾನ್ ಖಾನ್ (Salman Khan) ನಿರೂಪಣೆಯ ಬಿಗ್ ಬಾಸ್ ಸೀಸನ್ 13ರಲ್ಲಿ ನಟಿ ದಲ್ಜೀತ್ ಕೌರ್ (Dalljiet Kaur) ಗಮನ ಸೆಳೆದಿದ್ದರು. ಹಿಂದಿ ನಟ ಶಾಲಿನ್ ಭಾನೋಟ್ ಜೊತೆ 2009ರಲ್ಲಿ ಹಸೆಮಣೆ ಏರಿದ್ದರು. ಬಳಿಕ  2015ರಲ್ಲಿ ಈ ಜೋಡಿ ಡಿವೋರ್ಸ್ ಪಡೆದು ದೂರಾವಾದರು.‌ ಇದನ್ನೂ ಓದಿ: ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ `ಗಾಳಿಪಟ’ ನಟಿ

    ಇದೀಗ ಉದ್ಯಮಿ ನಿಖಿಲ್ ಪಟೇಲ್ (Nikhil Patel) ಜೊತೆ ನಟಿ ದಲ್ಜೀತ್ ಕೌರ್ ವೈವಾಹಿಕ (Wedding) ಬದುಕಿಗೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು 2ನೇ ಮದುವೆಯಾಗಿದ್ದು, ಗುರುಹಿರಿಯರ ಸಮ್ಮುಖದಲ್ಲಿ ಮಾರ್ಚ್ 18ರಂದು ಈ ಜೋಡಿ ಮದುವೆಯಾಗಿದ್ದಾರೆ. ಸದ್ಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ನಿಖಿಲ್‌ಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದಲ್ಜೀತ್ ಕೌರ್‌ಗೆ ಈಗಾಗಲೇ ಒಬ್ಬ ಮಗನಿದ್ದು, ಪೋಷಕರ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

  • ಸಿಂಹಪ್ರಿಯ ಬದುಕಿಗೆ ಹೊಸ ಅತಿಥಿಯ ಆಗಮನ? ಗುಡ್‌ ನ್ಯೂಸ್‌ ಬಗ್ಗೆ ಸುಳಿವು ನೀಡಿದ ಹರಿಪ್ರಿಯಾ

    ಸಿಂಹಪ್ರಿಯ ಬದುಕಿಗೆ ಹೊಸ ಅತಿಥಿಯ ಆಗಮನ? ಗುಡ್‌ ನ್ಯೂಸ್‌ ಬಗ್ಗೆ ಸುಳಿವು ನೀಡಿದ ಹರಿಪ್ರಿಯಾ

    ಸ್ಯಾಂಡಲ್‌ವುಡ್‌ನ (Sandalwood) ಸಿಂಹಪ್ರಿಯ (Simhapriya) ಜೋಡಿ ಈ ವರ್ಷ ಜನವರಿ 26ಕ್ಕೆ ಹಸೆಮಣೆ ಏರಿದ್ದರು. ಇಷ್ಟು ದಿನ ಮದುವೆ, ಹನಿಮೂನ್ ಎಂದು ಬ್ಯುಸಿಯಾಗಿದ್ದ ವಸಿಷ್ಠ ಸಿಂಹ- ಹರಿಪ್ರಿಯಾ (Haripriya) ಜೋಡಿ ಮತ್ತೆ ಸಿನಿಮಾ ಕೆಲಸದತ್ತ ಮುಖ ಮಾಡಿದ್ದಾರೆ. ಈ ಬೆನ್ನಲ್ಲೇ ಹರಿಪ್ರಿಯಾ ಅವರು ಗುಡ್ ನ್ಯೂಸ್ ಹೇಳುವುದಾಗಿ ಬಿಗ್ ಅಪ್‌ಡೇಟ್ ನೀಡಿದ್ದಾರೆ.

    ಎರಡೂವರೆ ವರ್ಷಗಳು ಪ್ರೀತಿಸಿದ್ದ ಸಿಂಹಪ್ರಿಯಾ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಬಳಿಕ ಮೈಸೂರಿನಲ್ಲಿ ವಸಿಷ್ಠ ಸಿಂಹ (Vasista Simha) ಮತ್ತು ಹರಿಪ್ರಿಯಾ ಗುರುಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಎರಡು ತಿಂಗಳು ಕಳೆದಿದೆ. ಈಗ ಗುಡ್ ನ್ಯೂಸ್ ಬಗ್ಗೆ ನಟಿ ಮಾತನಾಡಿದ್ದಾರೆ.

    ಹೆಸರೇನು ಮೇಡಮ್, ಯಾವಾಗ ಅನೌನ್ಸ್ ಮಾಡ್ತೀರಾ, ಕೇಳಿದ್ದು ನಿಜಾನಾ, ಗುಡ್ ನ್ಯೂಸ್ ಎಂಬ ಮೆಸೇಜ್ ಇರುವ ಸ್ಕ್ರಿನ್ ಶಾಟ್‌ನ ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನಗೆ ಗೊತ್ತು ನೀವೆಲ್ಲರೂ ಬಹುಶಃ ಏನೆಂದು ತಿಳಿಯುವ ಕುತೂಹಲ ಹೊಂದಿರುತ್ತೀರಿ. ಅನೌನ್ಸ್ ಮಾಡುವ ಮೊದಲು ಒಂದು ಊಹೆ ಮಾಡಿ ಎಂದು ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Hariprriya (@iamhariprriya)

    ಹರಿಪ್ರಿಯಾ ಈ ಪೋಸ್ಟ್ ಅಪ್‌ಡೇಟ್ ಮಾಡ್ತಿದ್ದಂತೆ ಅಭಿಮಾನಿಗಳು ಸಖತ್ ಆಗಿಯೇ ಕಾಮೆಂಟ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಮರಿ ಸಿಂಹ ಅಥವಾ ಸಿಂಹಿಣಿ ಬರುತ್ತಿದ್ದಾರಾ? ಸಿನಿಮಾ ಅಪ್‌ಡೇಟ್ ಬಗ್ಗೆ ಗುಡ್ ನ್ಯೂಸ್ ಹೇಳ್ತೀದ್ದೀರಾ ಎಂದು ಬಗೆ ಬಗೆಯ ಕಾಮೆಂಟ್ ಮಾಡಿದ್ದಾರೆ. ಪ್ರೆಗ್ನೆನ್ಸಿ ವಿಚಾರಯನ್ನೇ ಇರಬೇಕು ಎಂದು ಅನೇಕರು ಕುತೂಹಲ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಗುಡ್ ನ್ಯೂಸ್ ಎನು ಎಂಬುದನ್ನ ನಟಿ ಹೇಳುವವರೆಗೂ ಕಾದುನೋಡಬೇಕಿದೆ.