ಹೈದರಾಬಾದ್: ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ ಹಿನ್ನೆಲೆಯಲ್ಲಿ ಮುಸ್ಲಿಮರು ತರಾತುರಿಯಾಗಿ ಹೆಣ್ಣು ಮಕ್ಕಳ ಲಗ್ನವನ್ನು ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರ ಮಹಿಳೆಯರ ವಿವಾಹದ ಕಾನೂನುಬದ್ಧ ವಯೋಮಿತಿ 18 ರಿಂದ 21 ವರ್ಷಕ್ಕೆ ಏರಿಕೆ ಮಾಡಲು ಪ್ರಸ್ತಾಪ ಮಾಡಿದೆ . ಈ ಬೆನ್ನಲ್ಲೆ ತೆಲಂಗಾಣದಾದ್ಯಂತ ಮುಸ್ಲಿಂ ಸಮುದಾಯ ತಮ್ಮ ಹೆಣ್ಣು ಮಕ್ಕಳ ವಿವಾಹಕ್ಕಾಗಿ ಮುಗಿಬಿದ್ದಿವೆ. ಇದನ್ನೂ ಓದಿ:ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ
ಕಳೆದ ತಿಂಗಳು ಸಂಸತ್ತಿನಲ್ಲಿ ಬಾಲ್ಯ ವಿವಾಹ ತಿದ್ದುಪಡಿ ಕಾಯ್ದೆ 2021ನ್ನು ಮಂಡಿಸಲಾಗಿತ್ತು. ವಿರೋಧ ಪಕ್ಷಗಳು ಆಕ್ಷೇಪಿಸಿದ ಕಾರಣ ಈ ಮಸೂದೆಯನ್ನು ಆಯ್ಕೆ ಸಮಿತಿಗೆ ರವಾನಿಸಲಾದರೂ ಮುಂಬರುವ ಅಧಿವೇಶನದಲ್ಲಿ, ಇದಕ್ಕೆ ಒಪ್ಪಿಗೆ ಸಿಗಲಿದೆ ಎನ್ನುವ ಭೀತಿಯಿಂದ ಮುಂದಿನ ವರ್ಷ ನಿಗದಿಯಾದ ವಿವಾಹವನ್ನು ಕೂಡಲೇ ಮಾಡಲು ಪಾಲಕರು ಮುಂದಾಗುತ್ತಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ
ದಿನಕ್ಕೆ 3 ರಿಂದ 4 ವಿವಾಹಗಳು ಜರುಗುತ್ತಿದ್ದವು. ಆದರೆ ಹಲವರು ಖಾಜಿಗಳು ದಿನಕ್ಕೆ 10 ರಿಂದ 20 ವಿವಾಹಗಳನ್ನು ಮಾಡಿಸುತ್ತಿದ್ದಾರೆ. ವಧುವಿನ ಪಾಲಕರು ವರನ ಮನೆಯವರೊಂದಿಗೆ ಸೇರಿ ಕೇವಲ ಕಾನೂನಾತ್ಮಕವಾಗಿ ವಿವಾಹದ ಪ್ರಕ್ರಿಯೆಯನ್ನು ಮುಗಿಸಿಕೊಳ್ಳುತ್ತಿದ್ದಾರೆ. ಆದರೆ ಸಾಂಪ್ರದಾಯಿಕ ಆಚರಣೆಗಳನ್ನು ಪೂರ್ವ ನಿಗದಿ ಸಮಯದಲ್ಲೇ ಮಾಡಿಕೊಳ್ಳಿದ್ದಾರೆ. ಇದನ್ನೂ ಓದಿ: ಹೂಸಿನ ದುರ್ವಾಸನೆಯನ್ನು ಸುವಾಸನೆಯಾಗಿ ಮಾಡೋ ಮಾತ್ರೆ ಮಾರುಕಟ್ಟೆಗೆ ಎಂಟ್ರಿ
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ಬಿಗ್‍ಬಾಸ್ ಖ್ಯಾತಿಯ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ. ಆಪ್ತರು, ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬಿಗ್‌ಬಾಸ್ ವಿನ್ನರ್ ಮಂಜು ಪಾವಗಡ, ಮಜಾಭಾರತ ಖ್ಯಾತಿಯ ರಾಘು ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಶುಭಾ ಅವರ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಹಲವು ವರ್ಷಗಳಿಂದ ಸಮಾಜ ಸೇವಕ ಸುಮಂತ್ ಅವರನ್ನು ಪ್ರೀತಿಸುತ್ತಿದ್ದ ಶುಭಾ, 2021 ಡಿಸೆಂಬರ್ ಅಥವಾ 2022ರ ಜನವರಿ ಮೊದಲ ವಾರದಲ್ಲಿ ಮದುವೆ ಆಗುವುದಾಗಿ ಹೇಳಿಕೊಂಡಿದ್ದರು. ಸುಮಂತ್ ಅವರು ಉಡುಪಿಯಲ್ಲಿರುವುದು ಹಾಗೂ ನನ್ನ ಕುಟುಂಬಸ್ಥರು ಮಂಗಳೂರಿನಲ್ಲಿರುವ ಕಾರಣ ನಾವು ಅಲ್ಲಿಯೇ ಮದುವೆ ಆಗುತ್ತೇವೆ ಈ ಹಿಂದೆ ಶುಭಾ ಹೇಳಿದ್ದರು. ಅದರಂತೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಶುಭಾ, ಸುಮಂತ್ ದೀರ್ಘಕಾಲದ ಸ್ನೇಹಿತರು. ಶುಭಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಗೆಳೆಯನ ಜೊತೆಯಿರುವ ಚಿತ್ರಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಬಿಗ್‌ಬಾಸ್ ಮನೆಯಲ್ಲಿಯೂ ಕೂಡಾ ತಮ್ಮ ಭಾವಿ ಪತಿಯ ಕುರಿತಾಗಿ ಹೇಳಿಕೊಂಡಿದ್ದರು. ಧರ್ಮಸ್ಥಳ, ಶಿರಸಿ ಸೇರಿಂದತೆ ವಿವಿಧ ಕಡೆ ಪ್ರವಾಸವನ್ನು ಮಾಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ತಮ್ಮ ಮದುವೆ ವಿಚಾರವಾಗಿ ಹಂಚಿಕೊಂಡಿದ್ದಾರೆ.
2004ರಲ್ಲಿ ತಮಿಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶುಭಾ, ‘ಜಾಕ್ಪಾಟ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ‘ಚಂಡ’, ‘ಮೊಗ್ಗಿನ ಮನಸು’ ಖ್ಯಾತಿ ತಂದುಕೊಟ್ಟವು. ಮೊಗ್ಗಿನ ಮನಸು ಚಿತ್ರದ ಪಾತ್ರಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ನಟಿ ಪಡೆದಿದ್ದಾರೆ. ಇತ್ತೀಚೆಗೆ ‘ನರಗುಂದ ಬಂಡಾಯ’ ಚಿತ್ರದಲ್ಲಿ ಶುಭಾ ಬಣ್ಣಹಚ್ಚಿದ್ದರು.
ತಿರುವನಂತಪುರಂ: ವ್ಯಕ್ತಿಯೊಬ್ಬರು ತಮ್ಮ ಮಗಳ ಮದುವೆ ಜೊತೆ 5 ಬಡ ಹೆಣ್ಣುಮಕ್ಕಳಿಗೆ ಮದುವೆಯನ್ನು ಮಾಡಿದ್ದಾರೆ. ಈ ಒಳ್ಳೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕೇರಳದ ಕಣ್ಣೂರು ಮೂಲದ ಮುಸ್ಲಿಂ ಸಲೀಂ ತನ್ನ ಮಗಳು ರಮೀಸಾ ಮದುವೆ ಜೊತೆಗೆ ವಯನಾಡು, ಎಡಚೆರಿ, ಗುಡಲೂರ್, ಮಲಪ್ಪುರಂ ಮತ್ತು ಮೆಪ್ಪಯ್ಯುರ್ ಮೂಲದ ಬಡ ಕುಟುಂಬದ ಯುವತಿಯರಿಗೆ ಅವರವರ ಧರ್ಮಕ್ಕೆ ಅನುಗುಣವಾಗಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿದ್ದಾರೆ. ಈ ಮೂಲಕ ಧರ್ಮಕ್ಕಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಸಾರಿದ್ದಾರೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಮುಸ್ಲಿಂ ಸಲೀಂ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಲೀಂ ತನ್ನ ಮಗಳನ್ನು ವರದಕ್ಷಿಣೆ ಕೇಳದ ವ್ಯಕ್ತಿಯೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರಂತೆ. ಅದರಂತೆ ವರದಕ್ಷಿಣೆ ಪಡೆಯದ ವರನು ಕೂಡ ತನ್ನ ಮಗಳಿಗೆ ಹುಡುಕಿ ಮದುವೆ ಮಾಡಿದ್ದಾರೆ. ಅಲ್ಲದೇ ತಮ್ಮ ಮಗಳ ಮದುವೆ ಜೊತೆ ಬಡ ಹೆಣ್ಣಮಕ್ಕಳಿಗೂ ಮದುವೆ ಮಾಡಬೆಕೇಂದು ಸಲೀಂ ಮೊದಲೇ ನಿರ್ಧಾರ ಮಾಡಿದ್ದರು. ಅವರ ಆಸೆ ಅಂತೆ ತಮ್ಮ ಮಗಳ ಮದುವೆ ದಿನವೇ ಬಡ ಹೇಣ್ಣು ಮಕ್ಕಳಿಗೂ ಉಚಿತವಾಗಿ ಮದುವೆ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ನವದೆಹಲಿ: ಕೊರೊನಾ, ಓಮಿಕ್ರಾನ್ ಸೋಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಟೈಮ್‍ನಲ್ಲಿ ಮದುವೆ ಕ್ಯಾನ್ಸಲ್ ಮಾಡಿಕೊಂಡರೇ 10 ಲಕ್ಷ ರೂಪಾಯಿ ಸಿಗಲಿದೆ.
ರಾಜಧಾನಿ ದೆಹಲಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇದರ ಅಡಿಯಲ್ಲಿ ದೆಹಲಿಯಲ್ಲಿ ಮದುವೆ ಅಥವಾ ಯಾವುದೇ ರೀತಿಯ ಕಾರ್ಯಕ್ರಮಕ್ಕಾಗಿ 20 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆರ್ಥಿಕ ನಷ್ಟದ ನಡುವೆಯೂ ಅನೇಕ ಜನರು ಮದುವೆಯನ್ನು ರದ್ದುಗೊಳಿಸಲು ಪ್ರಾರಂಭಿಸಿದ್ದಾರೆ. ಕೊರೊನಾ ಸಮಯದಲ್ಲಿ ಮದುವೆಯನ್ನು ರದ್ದುಗೊಳಿಸಿದರೆ ಈಗ ನೀವು 10 ಲಕ್ಷಗಳ ಲಾಭವನ್ನು ಪಡೆಯಬಹುದು. ಇದಕ್ಕಾಗಿ ನೀವು ಹೆಚ್ಚು ಖರ್ಚು ಮಾಡಬೇಕಾಗಿಲ್ಲ.
ಸಿಗಲಿದೆ ಮದುವೆಯ ವಿಮೆ : ಹೆಚ್ಚುತ್ತಿರುವ ಕೊರೊನಾ ಪ್ರಕರಣದ ದೃಷ್ಟಿಯಿಂದ, ಹೊಸ ಮಾರ್ಗಸೂಚಿಗಳಿಂದಾಗಿ, ಈ ವರ್ಷವೂ ಅನೇಕ ಮದುವೆಗಳನ್ನು ರದ್ದುಗೊಳಿಸಬಹುದು. ಅದೇ ಸಮಯದಲ್ಲಿ, ಬ್ಯಾಂಕ್ವೆಟ್ ಹಾಲ್, ಮದುವೆ ಹಾಲ್, ಫಾರ್ಮ್ ಹೌಸ್ ಇತ್ಯಾದಿಗಳ ಬುಕಿಂಗ್ ಲಕ್ಷಗಳಲ್ಲಿ ನಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಜನರು ಬುಕಿಂಗ್ ಅನ್ನು ರದ್ದುಗೊಳಿಸಿದ ನಂತರ ಹಣವನ್ನು ಹಿಂತಿರುಗಿಸಲು ನಿರಾಕರಿಸುತ್ತಾರೆ. ಇಂತಹ ಸಂದರ್ಭಗಳನ್ನು ಎದುರಿಸಲು ದೇಶದ ಹಲವು ಕಂಪನಿಗಳು ವಿವಾಹ ವಿಮೆಯನ್ನು ನೀಡುತ್ತವೆ.
ಮೊತ್ತವನ್ನು ಹೇಗೆ ನಿರ್ಧರಿಸಲಾಗುತ್ತದೆ?: ನೀವು ಎಷ್ಟು ವಿಮೆ ಮಾಡಿದ್ದೀರಿ ಎಂಬುದರ ಆಧಾರದ ಮೇಲೆ ಮದುವೆಯ ವಿಮಾ ಮೊತ್ತವನ್ನು ನಿರ್ಧರಿಸಲಾಗುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಪ್ರಮುಖ ವಿಷಯವೆಂದರೆ ನೀವು ಮದುವೆಯ ದಿನಾಂಕವನ್ನು ಬದಲಾಯಿಸಿದ್ದರೂ ಸಹ, ನೀವು ಕ್ಲೈಮ್ ಅನ್ನು ಕ್ಲೈಮ್ ಮಾಡಬಹುದು. ಇದರಲ್ಲಿ, ನಿಮ್ಮ ವಿಮಾ ಮೊತ್ತದ 0.7 ಪ್ರತಿಶತದಿಂದ 2 ಪ್ರತಿಶತದವರೆಗೆ ಪ್ರೀಮಿಯಂ ಅನ್ನು ವಿಧಿಸಲಾಗುತ್ತದೆ. ಅಂದರೆ, ನೀವು 10 ಲಕ್ಷ ರೂಪಾಯಿಗಳ ವಿವಾಹ ವಿಮೆಯನ್ನು ಪಡೆದಿದ್ದರೆ, ನೀವು 7,500 ರಿಂದ 15,000 ರೂಪಾಯಿಗಳ ಪ್ರೀಮಿಯಂ ಪಾವತಿಸಬೇಕಾಗುತ್ತದೆ.
ಅದರ ಪ್ರಕ್ರಿಯೆ ಏನು?: ವಿಮೆಯನ್ನು ತೆಗೆದುಕೊಳ್ಳುವ ಮೊದಲು, ನೀವು ಮದುವೆಯ ವೆಚ್ಚದ ಬಗ್ಗೆ ಎಲ್ಲಾ ಮಾಹಿತಿಯನ್ನು ವಿಮಾ ಏಜೆನ್ಸಿಗೆ ನೀಡಬೇಕು.
– ನಿಮಗೆ ನಷ್ಟವಾದ ತಕ್ಷಣ, ತಕ್ಷಣವೇ ನಿಮ್ಮ ವಿಮಾ ಕಂಪನಿಗೆ ತಿಳಿಸಿ.
– ನಿಮ್ಮ ಯಾವುದೇ ವಸ್ತುಗಳು ಕಳ್ಳತನವಾಗಿದ್ದರೆ, ಅದರ ಬಗ್ಗೆ ಪೊಲೀಸರಿಗೆ ತಿಳಿಸಿ ಮತ್ತು ಎಫ್‍ಐಆರ್ ಪ್ರತಿಯನ್ನು ವಿಮಾ ಕಂಪನಿಗೆ ಹಸ್ತಾಂತರಿಸಿ.
– ಕ್ಲೈಮ್ ಮಾಡಲು ಫಾರ್ಮ್ ಅನ್ನು ಭರ್ತಿ ಮಾಡಿ, ಕಂಪನಿಯೊಂದಿಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿ.
– ನಿಮ್ಮ ವಿಮಾ ಕಂಪನಿಯು ತನ್ನ ತನಿಖೆಗಾಗಿ ಪ್ರತಿನಿಧಿಯನ್ನು ಕಳುಹಿಸುವ ಮೂಲಕ ಎಲ್ಲಾ ಮಾಹಿತಿಯನ್ನು ತೆಗೆದುಕೊಳ್ಳುತ್ತದೆ, ನಂತರ ಹಕ್ಕು ಪಡೆದ ಹಣವನ್ನು ಮಾತ್ರ ಹಿಂತಿರುಗಿಸಲಾಗುತ್ತದೆ.
– ನೀವು ಮಾಡಿದ ಕ್ಲೈಮ್ ನಿಜವೆಂದು ಸಾಬೀತಾದರೆ, ವಿಮಾ ಕಂಪನಿಯು ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸುತ್ತದೆ.
– ತಪ್ಪಾಗಿದ್ದರೆ, ಕ್ಲೈಮ್ ಅನ್ನು ತಿರಸ್ಕರಿಸಲಾಗುತ್ತದೆ.
– ವಿಮಾ ಕಂಪನಿಯು ನೇರವಾಗಿ ಮದುವೆಯ ಸ್ಥಳ ಅಥವಾ ಮಾರಾಟಗಾರರಿಗೆ ಮೊತ್ತವನ್ನು ನೀಡಬಹುದು.
– ಯಾವುದೇ ರೀತಿಯಲ್ಲಿ ಪಾಲಿಸಿದಾರನು ಕ್ಲೈಮ್ ಮಾಡಿದ ಮೊತ್ತದಿಂದ ಸಂತೋಷವಾಗಿರದಿದ್ದರೆ, ಅವನು ನೇರವಾಗಿ ನ್ಯಾಯಾಲಯಕ್ಕೆ ಹೋಗಿ ತನ್ನ ಪ್ರಕರಣವನ್ನು ಇಟ್ಟುಕೊಳ್ಳಬಹುದು.
– ಅಪಘಾತದ 30 ದಿನಗಳಲ್ಲಿ ಮದುವೆಯ ವಿಮೆ ಕ್ಲೈಮ್ ಅನ್ನು ಇತ್ಯರ್ಥಗೊಳಿಸಲಾಗುತ್ತದೆ.
ಇವುಗಳಿಗೆ ವಿಮೆ ಸಿಗಲಿದೆ: ಮುಂಗಡವಾಗಿ ಬುಕ್ ಮಾಡಿದ ಯಾವುದೇ ಹಾಲ್ ಅಥವಾ ರೆಸಾರ್ಟ್‍ಗೆ ಮುಂಗಡ ಹಣ, ಟ್ರಾವೆಲ್ ಏಜೆನ್ಸಿಗಳಿಗೆ ಮುಂಗಡ ಹಣವನ್ನು ನೀಡಲಾಗಿದೆ. ಮದುವೆಯ ಕಾರ್ಡ್‍ಗಳ ಮುದ್ರಣದಲ್ಲಿ ಪಾವತಿಸಿದ ಹಣ. ಅಲಂಕಾರ ಮತ್ತು ಸಂಗೀತಕ್ಕಾಗಿ ಪಾವತಿಸಿದ ಹಣ. ಮದುವೆಯ ಸ್ಥಳದ ಸೆಟ್‍ಗಳಲ್ಲಿ ಇತರ ಅಲಂಕಾರಗಳಿಗೆ ಪಾವತಿಸಿದ ಹಣಕ್ಕೆ ವಿಮೆ ಸಿಗಲಿದೆ.
ನವದೆಹಲಿ: ಮನೆಯವರು ಪ್ರೀತಿಗೆ ಒಪ್ಪದ ಕಾರಣ ಜೋಡಿಯೊಂದು ಗುಟ್ಟಾಗಿ ಮದುವೆಯಾಗಿತ್ತು. ಇದರಿಂದ ಕೋಪಗೊಂಡು ಯುವತಿಯ ಮನೆಯವರು ವರನ ಗುಪ್ತಾಂಗವನ್ನು ಕಟ್ ಮಾಡಿ ವಿಕೃತಿ ಮರೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ 22 ವರ್ಷದ ಯುವಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರೀತಿಸಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ವರನ ಮೇಲೆ ಯುವತಿ ಮನೆಯವರು ಹಲ್ಲೆ ಮಾಡಿದ್ದಾರೆ. ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣ ಆರೋಪದಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ
ಇಬ್ಬರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು. ಮನೆಯವರು ಇವರ ಪ್ರೀತಿಗೆ ಒಪ್ಪಿಗೆ ಕೊಟ್ಟಿಲ್ಲ. ಹೀಗಾಗಿ ಇಬ್ಬರು ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು. ಕುಟುಂಬದವರಿಂದ ಅಪಾಯವಿದೆ ಎಂದು ಇಬ್ಬರೂ, ಪೊಲೀಸರ ರಕ್ಷಣೆ ಕೋರಿದ್ದರು. ಇದನ್ನೂ ಓದಿ: ಕ್ರಿಸ್‌ಮಸ್ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್ ಕಲಾಕೃತಿ
ದಂಪತಿಯ ರಕ್ಷಣೆ ಕೋರಿ ರಾಜೌರಿ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಯುವತಿಯ ಕುಟುಂಬದ ಸದಸ್ಯರಿಗೆ ಗೊತ್ತಾಯಿತು. ಹೀಗಾಗಿ ಅವರಿಬ್ಬರೂ ಪೊಲೀಸ್ ಠಾಣೆಯಿಂದ ಹೊರಬಂದ ತಕ್ಷಣ ಹುಡುಗಿಯ ಕುಟುಂಬ ಸದಸ್ಯರು ಅವರನ್ನು ಅಪಹರಿಸಿ, ಅಮಾನುಷವಾಗಿ ಥಳಿಸಿ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಯುವಕ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್
ಹೈದರಬಾದ್: ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹಿರಿಯ ಅಧ್ಯಾಪಕರಾದ ಕೋಲ್ಕತ್ತಾ ಮೂಲದ ಸುಪ್ರಿಯೊ ಚಕ್ರವರ್ತಿ(31) ಮತ್ತು ಎಂಎನ್‍ಸಿ ಉದ್ಯೋಗಿಯಾಗಿರುವ ದೆಹಲಿ ಮೂಲಕ ಅಭಯ್ ಡ್ಯಾಂಗ್ (34) ಬಿಳಿ ಸೂಟಿನಲ್ಲಿ ಉಂಗುರ ವಿನಿಮಯ ಮಾಡಿಕೊಳ್ಳುವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಂತರ ಬೆಂಗಾಲಿ ಮತ್ತು ಪಂಜಾಬಿ ಸಂಪ್ರದಾಯದಂತೆ ವಿವಾಹ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್
8 ವರ್ಷಗಳಿಂದ ರಿಲೇಶನ್ ಶಿಪ್‍ನಲ್ಲಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಪತಿ ಮತ್ತು ಪತಿ ಆಗಿದ್ದು, ಈ ವಿಶೇಷ ಮದುವೆಗೆ ಅವರು ಪ್ರಾಮಿಸಿಂಗ್ ಸೆರ್ಮನಿ ಎಂಬ ಹೆಸರನ್ನು ಕೊಟ್ಟಿದ್ದಾರೆ. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ನಡೆದ ಈ ವಿವಾಹ ಮಹೋತ್ಸವದಲ್ಲಿ ದಂಪತಿಗಳ ಅನೇಕ ಸ್ನೇಹಿತರು ಮತ್ತು ಆಪ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಟಾಲಿವುಡ್ ನಟಿ – ಕಾಜಲ್ ಫೋಟೋ ಹೇಳ್ತೀರೋದೇನು?
ಒಟ್ಟಾರೆ ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ ಇಲ್ಲದಿದ್ದರೂ, ಈ ಜೋಡಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೊದಲ ಭಾರತದ ಸಲಿಂಗಕಾಮಿ ಜೋಡಿಯಾಗಿದೆ.
ಮುಂಬೈ: ಬೆಳಗ್ಗಿನವರೆಗೂ ಮದುವೆ ಸಂಪ್ರದಾಯ ನಡೆದಿರುವ ಹಿನ್ನೆಲೆಯಲ್ಲಿ ಮಂಟಪದಲ್ಲೇ ವಧು ನಿದ್ದೆಗೆ ಜಾರಿದ ವೀಡಿಯೋವೊಂದು ವೈರಲ್ ಆಗಿದೆ.
Battered Suitcase ಹೆಸರಿನ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ವಧು ನಿದ್ರಿಸುತ್ತಿರುವ ವೀಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಇಲ್ಲಿ ನೋಡಿ ವಧು ನಿದ್ರಿಸುತ್ತಿದ್ದಾಳೆ. ಈಗಾಗಲೇ ಸಮಯ ಬೆಳಗ್ಗೆ 6.30 ಆಗಿದೆ ಆದರೂ ಮದುವೆಯ ಸಂಪ್ರದಾಯ ಇನ್ನು ಮುಗಿದಿಲ್ಲ ಎಂದು ಬರೆದು ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ತನ್ನ ಮದುವೆಯ ಮಂಟಪದಲ್ಲೇ ವಧು ನಿದ್ದೆಯಿಂದ ತೂಕಾಡಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೀಕ್ಷಕರು ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಗೋ ಹತ್ಯೆ ನಿಷೇಧ ಕಾಯ್ದೆ ನಂತ್ರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ: ಪ್ರಭು ಚೌವ್ಹಾಣ್
ಈ ವಿಡಿಯೋದಲ್ಲಿ ವಧು ಸುಂದರವಾದ ಕೆಂಪು ಹಾಗೂ ಕೇಸರಿ ಮಿಶ್ರಿತ ಬಣ್ಣದ ಲೆಹೆಂಗಾ ಧರಿಸಿ ಸೋಫಾದಲ್ಲಿ ಕುಳಿತಿದ್ದಾರೆ. ಇವರ ಪಕ್ಕದಲ್ಲೇ ವರನ್ನು ಇದ್ದಾನೆ. ಈ ವೇಳೆ ವಧು ಕುಳಿತಲ್ಲಿಂದಲೇ ಬರುವ ನಿದ್ದೆಯನ್ನು ತಡೆದುಕೊಳ್ಳಲಾಗದೇ ತೂಕಾಡಿಸುತ್ತಿದ್ದಾಳೆ. ನಿದ್ದೆಗೆ ಜಾರಿದ ಈ ವೇಳೆ ಆಕೆಯ ಸ್ನೇಹಿತರು ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗಿದೆ. ಇದನ್ನೂ ಓದಿ:ಒಳಚರಂಡಿಯಲ್ಲಿ ಅನಿಲ ಸ್ಫೋಟ 14 ಮಂದಿ ಸಾವು
ಮುಂಬೈ: ಒಂಟಿಯಾಗಿದ್ದ ಅಮ್ಮನಿಗೆ ಮಗಳು ಮರು ಮದುವೆ ಮಾಡಿಸುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾಳೆ.
@alphaw1fe ಹೆಸರಿನ ಟ್ವಿಟ್ಟರ್ ಖಾತೆ ಹೊಂದಿರುವ ಹುಡುಗಿಯೊಬ್ಬಳು ತನ್ನ ತಾಯಿಗೆ ಮದುವೆ ಮಾಡಿಸಿದ್ದಾಗಿ, ನಿಶ್ಚಿತಾರ್ಥದ ಫೋಟೋಗಳು ಹಾಗೂ ತಾಯಿ ಮದುವೆಗೆ ಸಿದ್ಧಗೊಳ್ಳುತ್ತಿರುವ ಫೋಟೋಗಳನ್ನು ಶೇರ್ ಮಾಡಿದ್ದು, ಇದಕ್ಕೆ ನೆಟ್ಟಿಗರು ಮಗಳು ತಾಯಿಯ ಕುರಿತಾಗಿ ಮಾಡಿದ ಯೋಚನೆಗೆ ಭೇಷ್ ಎಂದಿದ್ದಾರೆ. ಇದನ್ನೂ ಓದಿ: ಅರೆ ನಗ್ನ ಫೋಟೋ ಶೇರ್ ಮಾಡಿದ ನಟಿ ಇಲಿಯಾನಾ
Much power to u & your mom ❤ gud luck to her for a new beginning! ???? https://t.co/bkmnWeX5u2
ನೀನು ತುಂಬಾ ಒಳ್ಳೆಯ ಕೆಲಸ ಮಾಡಿದ್ದಿ, ಸಮಾಜ ಮತ್ತು ಸಂಸ್ಕೃತಿಗಾಗಿ ನಿಮ್ಮ ಸಂತೋಷವನ್ನು ತ್ಯಾಗ ಮಾಡಬೇಕಿಲ್ಲ. ಮಗಳು ಒಂಟಿಯಾಗಿ ಜೀವನ ನಡೆಸುತ್ತಿದ್ದ ಅಮ್ಮನ ಮದುವೆ ಮಾಡಿದ್ದಕ್ಕೆ ನೆಟ್ಟಿಗರು ಮೆಚ್ಚಿ ಕಾಮೆಂಟ್ ಮಾಡುತ್ತಿದ್ದಾರೆ.
ನವದೆಹಲಿ: ಹೇರ್ ಡೈ ಮಾಡದೇ ವಧು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ.
ಹಿಂದಿ ಧಾರಾವಾಹಿ ತಾರಕ್ ಮೆಹ್ತಾ ನಟ ದಿಲೀಪ್ ಜೋಶಿಯವರ ಮಗಳು ನಿಯತಿ, ಮದುವೆ ಮಂಟಪದಲ್ಲಿ ಸಹಜವಾಗಿ ತಲೆಯಲ್ಲಿರುವ ಬಿಳಿ ಕೂದಲಿನೊಂದಿಗೇ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಿಂದಿ ಕಿರುತೆರೆ ನಟ ದಿಲೀಪ್ ಜೋಶಿಯವರು ಸುಂದರವಾಗಿ ರೆಡಿಯಾದ ತಮ್ಮ ಮಗಳು ನಿಯತಿ ಜೊತೆ ಮದುವೆ ಮನೆಯಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಧುವಿನ ಈ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಪತ್ನಿ ಜೊತೆಗೆ ರೋಮ್ಯಾಂಟಿಕ್ ಆಗಿ ಸ್ಟೆಪ್ಸ್ ಹಾಕಿದ ನಿಖಿಲ್
ನಿಯತಿ, ಯಶೋವರ್ಧನ್ ಮಿಶ್ರಾ ಅವರನ್ನು ವಿವಾಹವಾಗಿದ್ದಾರೆ. ನಾಸಿಕ್‍ನಲ್ಲಿ ಗುಜರಾತಿ ಸಂಪ್ರದಾಯದಂತೆ ಮದುವೆ ನಡೆಯಿತು. ಈ ಮದುವೆಯಲ್ಲಿ ಅದ್ಧೂರಿ ಮದುವೆ ಮಂಟಪ, ಆಸನದ ವ್ಯವಸ್ಥೆ, ಊಟೋಪಚಾರಕ್ಕಿಂತ ಮದುವೆಗೆ ಬಂದ ಜನರ ಗಮನ ಸೆಳೆದಿದ್ದು, ಮದುಮಗಳು ರೆಡಿಯಾದ ರೀತಿ. ಮದುವೆಗಾಗಿ ಹೇರ್ ಕಲರಿಂಗ್ ಮಾಡಿ ಸಿದ್ಧಗೊಂಡರೆ, ಮದುಮಗಳು ಬಿಳಿ ಕೂದಲಿನಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಎಲ್ಲರ ಗಮನ ಸೆಳೆದಿದ್ದಾರೆ. ನಿಮ್ಮ ಸೌಂದರ್ಯದ ಬಗ್ಗೆ ನಿಮಗಿರುವ ಆತ್ಮವಿಶ್ವಾಸ. ಬಿಳಿ ಕೂದಲಿನಲ್ಲೇ ನೀವು ಮದುಮಗಳಾಗಿ ಸಿದ್ಧಗೊಂಡಿರುವ ರೀತಿ ಮೆಚ್ಚುವಂತದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗೆ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಪದಗಳನ್ನು ಕಲಿಯುತ್ತಿರುವ ರಾಯನ್ – ಫುಲ್ ಖುಷ್ ಆದ ಮೇಘನಾ
ಮದುವೆ ಕುರಿತಾಗಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕನಸು ಇರುತ್ತದೆ. ಸೀರೆ ಡಿಸೈನ್‍ಗೆ ಪ್ರತ್ಯೇಕ ಬೊಟಿಕ್, ಮೇಕಪ್‍ಗೆ ಹೆಸರಾಂತ ಬ್ಯೂಟಿಷಿಯನ್, ಮೇಕಪ್ ಆರ್ಟಿಸ್ಟ್‌ಗಳನ್ನು ಮೊದಲೇ ಬುಕ್ ಮಾಡಿಕೊಳ್ಳುತ್ತಾರೆ. ಇವತ್ತಿನ ದಿನಗಳ ಮದುವೆಗಳನ್ನು ನೋಡಿದರೆ ಅದ್ಧೂರಿ ಮಂಟಪ, ಮದುಮಗಳ ಝಗಮಗಿಸುವ ಲೆಹಂಗಾ, ಸೀರೆ, ಹೆವಿ ಮೇಕಪ್, ಆಭರಣ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ನಿಯತಿ ಎಲ್ಲರೂ ಹುಬ್ಬೇರುವಂತೆ ಹಸೆಮಣೆಯೇರಿದ್ದಾಳೆ.
ನವದೆಹಲಿ: ಬಾಲಿವುಡ್‌ನಲ್ಲಿ ಸೆಲೆಬ್ರಿಟಿಗಳ ಸಾಲುಸಾಲು ಮದುವೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ಮದುವೆ ವಿಚಾರವೂ ಕುತೂಹಲ ಮೂಡಿಸಿದೆ.
ಬ್ರಹ್ಮಾಸ್ತ್ರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭವನ್ನು ಬುಧವಾರ ಆಯೋಜಿಸಲಾಗಿತ್ತು. ಈ ವೇಳೆ ಕುತೂಹಲಕಾರಿ ಘಟನೆಯೊಂದು ನಡೆಯಿತು. ʼನಮ್ಮಿಬ್ಬರ ಮದುವೆ ಯಾವಾಗʼ ಎಂದು ಆಲಿಯಾ ಭಟ್ ಬಳಿ ರಣಬೀರ್ ಕಪೂರ್ ಕೇಳಿದ್ದಾರೆ. ʻನನ್ನನ್ನು ಯಾಕೆ ಹೀಗೆ ಕೇಳುತ್ತಿದ್ದೀರಾʼ ಎಂದು ಆಲಿಯಾ ಪ್ರತಿಯಾಗಿ ಕೇಳಿದ ಸುದ್ದಿ ಈಗ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ನಿರ್ಮಿಸಿದ ಹೊಸೂರು ಗ್ರಾಮಸ್ಥರು
ಬ್ರಹ್ಮಾಸ್ತ್ರ ಸಿನಿಮಾದಲ್ಲಿ ರಣಬೀರ್ ಹಾಗೂ ಆಲಿಯಾ ಒಟ್ಟಿಗೆ ನಟಿಸಿದ್ದಾರೆ. ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಆಲಿಯಾ, ರಣಬೀರ್ ಮದುವೆ ವಿಚಾರ ಹೀಗೆ ಪ್ರಸ್ತಾಪವಾಯಿತು. ಬಹಳಷ್ಟು ಸೆಲೆಬ್ರಿಟಿಗಳು ಮದುವೆಯಾಗುತ್ತಿದ್ದಾರೆ. ಹೀಗಾಗಿ ನೀವೂ ಬೇಗನೆ ಮದುವೆಯಾಗಿ ಎಂಬ ಮಾತುಗಳು ಈ ವೇಳೆ ಕೇಳಿ ಬಂದವು.