Tag: wedding

  • ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ‘ಬಿಗ್ ಬಾಸ್ ಕನ್ನಡ ಒಟಿಟಿ 1’ರ (Bigg Boss Kannada OTT 1) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆಯಾಗುತ್ತಿರುವ ಹುಡುಗನ ಕುರಿತು ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಸೋನು ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಮದುವೆಯಾಗುತ್ತಿರುವ ವಿಚಾರ ನಿಜ, ಮುಂದಿನ ವರ್ಷ ಮದುವೆ (Wedding) ಪ್ಲ್ಯಾನ್‌ ಮಾಡಿದ್ದೇವೆ ಎಂದು ಸೋನು ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ನಲ್ಲಿ ಸೊಂಟ ಬಳುಕಿಸಿದ ಡ್ಯಾನ್ಸಿಂಗ್ ಕ್ವೀನ್ ಶ್ರೀಲೀಲಾ

    ಇತ್ತೀಚೆಗೆ ಸೋನು ಅವರ ಯೂಟ್ಯೂಬ್‌ನಲ್ಲಿ ಮದುವೆ ಬಗ್ಗೆ ಮಾತನಾಡಿದರು. ಸದ್ಯದಲ್ಲೇ ನನ್ನ ಮದುವೆ ಬಗ್ಗೆ ಅನೌನ್ಸ್ ಮಾಡುತ್ತೀನಿ. ಎಲ್ಲರ ಮದುವೆ ನೋಡಿ ನೋಡಿ ನನಗೂ ಮದುವೆ ಆಗಬೇಕು ಅಂತ ಅನಿಸುತ್ತಿದೆ ಎಂದಿದ್ದರು. ಆದರೆ ಹುಡುಗ ಯಾರು ಅಂತ ಅವರು ರಿವೀಲ್ ಮಾಡಿರಲಿಲ್ಲ. ಇದೀಗ ಖುದ್ದು ಅವರೇ ತಿಳಿಸಿದ್ದಾರೆ.

    ಕುಟುಂಬಸ್ಥರು ನಿಶ್ಚಿಯಿಸಿದ ಅರೇಂಜ್ ಮ್ಯಾರೇಜ್ ಇದಾಗಿದೆ. ಹುಡುಗನ ಕಡೆಯವರು ನಮ್ಮ ಕುಟುಂಬಸ್ಥರನ್ನು ಅಪ್ರೋಚ್ ಮಾಡಿದರು. ಒಳ್ಳೆಯ ಹುಡುಗ, ಒಳ್ಳೆಯ ಸಂಬಂಧ ಇದಾಗಿದ್ದು, ನನ್ನ ತಾಯಿ ಸಮ್ಮತಿ ಸೂಚಿಸಿದರು. ಹಾಗಾಗಿ ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ. ಒಳ್ಳೆಯ ಸಂಬಂಧ ಅಂದರೆ ನಾನ್ಯಾಕೆ ಒಪ್ಪಿಕೊಳ್ಳಬಾರದು ಎನಿಸಿತು. ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದರೆ ಅದು ಸರಿಯಾದ ನಿರ್ಣಯ ಆಗಿರುತ್ತದೆ ಎಂಬ ನಂಬಿಕೆಯಿದೆ ಎಂದು ಸೋನು ಮದುವೆ ಕುರಿತು ಮಾತನಾಡಿದ್ದಾರೆ.

    ಇನ್ನೂ ಸೋನು ಮದುವೆಯಾಗುತ್ತಿರುವ ವರ ಮೂಲತಃ ಬೆಂಗಳೂರಿನವರು. ಇದೀಗ ಅವರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ನಮ್ಮೀಬ್ಬರ ಎಂಗೇಜ್‌ಮೆಂಟ್ ನಡೆಯಲಿದೆ. ಮುಂದಿನ ವರ್ಷ ನಮ್ಮ ಮದುವೆ ಎಂದು ಹೇಳಿದ್ದಾರೆ. ಆದರೆ ವರನ ಹೆಸರನ್ನು ಅವರು ರಿವೀಲ್ ಮಾಡಿಲ್ಲ. ಸದ್ಯದಲ್ಲೇ ಅಧಿಕೃತವಾಗಿ ತಿಳಿಸೋದಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ-‘ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

    ಇನ್ನೂ ಮದುವೆಯ ಬಗ್ಗೆ ಗುಡ್ ನ್ಯೂಸ್ ಕೊಟ್ಟಿರೋದರ ನಡುವೆ ಮನೆಯ ಗೃಹಪ್ರವೇಶದ ತಯಾರಿಯ ಬ್ಯುಸಿಯಲ್ಲಿದ್ದಾರೆ. ಇದೇ ನವೆಂಬರ್ 13ರಂದು ಮಂಡ್ಯದಲ್ಲಿ ಸೋನು ಅವರ ಹೊಸ ಮನೆಯ ಗೃಹಪ್ರವೇಶದ ಕಾರ್ಯಕ್ರಮ ಜರುಗಲಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

  • ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ

    ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ

    ಜೊತೆ ಜೊತೆಯಲಿ, ಲಕ್ಷ್ಮಿ ನಿವಾಸ ಖ್ಯಾತಿಯ ಮಾನಸ ಮನೋಹರ್ (Mansa Manohar) ಅವರು ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಗ್ರ್ಯಾಂಡ್ ವೆಡ್ಡಿಂಗ್‌ನ ‌(Wedding) ಸುಂದರ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪ್ರೀತಂ ಚಂದ್ರ ಜೊತೆ ಮಾನಸ ಮದುವೆ ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದಿದೆ. ಇದೀಗ ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by The Candid Theory (@thecandidtheory)

    ಅಂದಹಾಗೆ, ಇತ್ತೀಚೆಗೆ ನಟಿ ನಿಶ್ಚಿತಾರ್ಥದ ಸಂಭ್ರಮದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಆಗ 2ನೇ ಮದುವೆನಾ? ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಅದಕ್ಕೆ ನಟಿ ಖಡಕ್ ಆಗಿ ಉತ್ತರ ನೀಡಿದರು.

     

    View this post on Instagram

     

    A post shared by The Candid Theory (@thecandidtheory)

    ಎಲ್ಲರ ಸಂದೇಹಗಳಿಗೆ ಉತ್ತರ ಇದೆ. ಇದು ನನ್ನ ಎರಡನೇ ಮದುವೆ. ಕೆಲವು ಬಾರಿ ದೈಹಿಕವಾಗಿ ಮದುವೆಯಾಗುತ್ತೇವೆ ಆದರೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿರುವುದಿಲ್ಲ. ನಾವು ಎಲ್ಲರ ಒಳಿತಿಗಾಗಿ ಮುಂದುವರಿಯಬೇಕು. ನಾವು ಮದುವೆಯಾಗುತ್ತಿದ್ದೇವೆ. ನನಗೆ ಯಾವುದೇ ಅಪರಾಧ ಎನಿಸುತ್ತಿಲ್ಲ. ಆದರೆ ಕೃತಜ್ಞತೆ ಮಾತ್ರ ಇದೆ. ಆದ್ದರಿಂದ ಅದನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ನೆಟ್ಟಿಗರೊಬ್ಬರ ಕಾಮೆಂಟ್‌ಗೆ ನಟಿ ಸ್ಪಷ್ಟನೆ ಕೊಟ್ಟಿದ್ದರು.

     

    View this post on Instagram

     

    A post shared by Mansa manohar (@itsme_mansamanohar)

    ಇನ್ನೂ ಮಾನಸ ಭಾವಿ ಪತಿ ಪ್ರೀತಮ್ ಚಂದ್ರ ಅವರು ಫುಟ್ ಬಾಲ್ ಪ್ಲೇಯರ್ ಆಗಿದ್ದಾರೆ. ಅವರು ಫುಟ್ ಬಾಲ್ ಅಕಾಡೆಮಿ ಕೂಡ ನಡೆಸುತ್ತಿದ್ದಾರೆ.

  • ಉದ್ಯಮಿ ಪ್ರತ್ಯಕ್ಷ್ ಜೊತೆ ಚಂದನಾ ಅನಂತಕೃಷ್ಣ ಮದುವೆ ಡೇಟ್ ಫಿಕ್ಸ್

    ಉದ್ಯಮಿ ಪ್ರತ್ಯಕ್ಷ್ ಜೊತೆ ಚಂದನಾ ಅನಂತಕೃಷ್ಣ ಮದುವೆ ಡೇಟ್ ಫಿಕ್ಸ್

    ‘ಬಿಗ್ ಬಾಸ್ ಕನ್ನಡ ಸೀಸನ್ 7′, ‘ಲಕ್ಷ್ಮಿ ನಿವಾಸ’ ಖ್ಯಾತಿಯ ಚಂದನಾ ಅನಂತಕೃಷ್ಣ (Chandana Ananthakrishna) ಅವರು ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಉದ್ಯಮಿ ಪ್ರತ್ಯಕ್ಷ್ (Prathyaksh) ಎಂಬುವವರ ಜೊತೆ ಹಸೆಮಣೆ (Wedding) ಏರಲು ನಟಿ ಸಜ್ಜಾಗಿದ್ದಾರೆ. ಇದನ್ನೂ ಓದಿ:ಯಶ್ ಬೇಗ ಸಿನಿಮಾ ಮಾಡಿ: ‘ಟಾಕ್ಸಿಕ್’ ನೋಡುವ ನಿರೀಕ್ಷೆ ವ್ಯಕ್ತಪಡಿಸಿದ ಶಾರುಖ್ ಖಾನ್

    ಕಿರುತೆರೆಯಲ್ಲಿ ಚಿನ್ನುಮರಿ ಅಲಿಯಾಸ್ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕುರಿತು ನಟಿ ಚಂದನಾ ‘ಪಬ್ಲಿಕ್‌ ಟಿವಿ’ ಡಿಜಿಟಲ್‌ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

    ಇನ್ನೂ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ‘ದೇವತಾ ಮನುಷ್ಯ’ ಚಿತ್ರದಲ್ಲಿ ನಟಿಸಿದ್ದರು. ‘ಆರಂಭ’, ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.

    ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.

  • ಮರು ಮದುವೆಯಾದ ಬಾಲಿವುಡ್ ನಟಿ ಸನ್ನಿ ಲಿಯೋನ್

    ಮರು ಮದುವೆಯಾದ ಬಾಲಿವುಡ್ ನಟಿ ಸನ್ನಿ ಲಿಯೋನ್

    ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ಅವರು ಮರು ಮದುವೆಯಾಗಿದ್ದಾರೆ. ಪತಿ ಡೇನಿಯಲ್ ಜೊತೆಗೆ ಸನ್ನಿ ಮತ್ತೊಮ್ಮೆ ಮದುವೆಯಾಗಿದ್ದಾರೆ. ಮಾಲ್ಡೀವ್ಸ್ ಕಡಲ ತೀರದಲ್ಲಿ ತೆಗೆದ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ಗುರುಪ್ರಸಾದ್ ಗಡ್ಡ ಶೇವ್ ಮಾಡದೇ ಇರಲು ಕಾರಣವೇನು ಗೊತ್ತಾ?

    ಮಾಲ್ಡೀವ್ಸ್‌ ಕಡಲ ತೀರದಲ್ಲಿ ಮೂವರು ಮಕ್ಕಳ ಮುಂದೆ ಪತಿ ಡೇನಿಯಲ್ (Daniel Weber) ಜೊತೆ ಮರು ಮದುವೆಯಾಗಿರುವ (Wedding) ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ. ಪತಿಯೊಂದಿಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Sunny Leone (@sunnyleone)

    ಅಂದಹಾಗೆ, 2011ರಲ್ಲಿ ಡೇನಿಯಲ್ ಜೊತೆ ಸನ್ನಿ ಲಿಯೋನ್ ಮದುವೆಯಾಗಿದ್ದರು. ಈ ಜೋಡಿ ಮದುವೆಯಾಗಿ 13 ವರ್ಷಗಳು ಕಳೆದಿವೆ. 2017ರಲ್ಲಿ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದರು. ಆ ನಂತರ ಬಾಡಿಗೆ ತಾಯ್ತನದ ಮೂಲಕ ಅವಳಿ ಜವಳಿ ಗಂಡು ಮಕ್ಕಳಿಗೆ ಸನ್ನಿ ದಂಪತಿ ಪೋಷಕರಾದರು.

    ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾದಲ್ಲಿ ಸನ್ನಿ ಲಿಯೋನ್ ಕೂಡ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್‌ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

  • ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

    ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

    ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ಇಂದು (ಅ.27) ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಪತ್ನಿ ಜೊತೆ ಹಾಸನಾಂಬೆ ದೇವಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ತರುಣ್, ಆದಷ್ಟು ಬೇಗ ದರ್ಶನ್ (Darshan) ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಮಾತನಾಡಿದರು. ಇದನ್ನೂ ಓದಿ:ಶ್ರೀಲೀಲಾ ನಟಿಸಬೇಕಿದ್ದ ಪಾತ್ರಕ್ಕೆ ಪೂಜಾ ಹೆಗ್ಡೆ ಎಂಟ್ರಿ?

    ಮದುವೆ ಬಳಿಕ ಮೊದಲ ಬಾರಿಗೆ ಪತ್ನಿ ಸೋನಾಲ್ (Sonal) ಜೊತೆ ತರುಣ್ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಸಂತಸಪಟ್ಟಿದ್ದಾರೆ. ಆ ನಂತರ ಮಾಧ್ಯಮಕ್ಕೆ ಮಾತನಾಡಿದ ತರುಣ್ ಸುಧೀರ್, ಆದಷ್ಟು ಬೇಗ ದರ್ಶನ್ ಅವರು ಬಿಡುಗಡೆ ಆಗಲಿ ಎಂದು ಹಾಸನಾಂಬೆ ದೇವಿ ಬಳಿ ಕೇಳಿಕೊಂಡಿದ್ದೇನೆ. ಅವರು ಇದ್ದಿದ್ದರೆ ಈ ಬಾರಿ ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇನೆ.

    ನಾವು ಮದುವೆಯಾದ ನಂತರ ದೇವಿ ದರ್ಶನಕ್ಕೆ ಬಂದಿದ್ದೇವೆ ಅದು ನನಗೆ ವಿಶೇಷ. ಈ ತಾಯಿ ಹತ್ತಿರ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದೆನ್ನೆಲ್ಲಾ ಒಮ್ಮೆಲೆ ಹೇಳಿಕೊಳ್ಳಬೇಕು ಅನ್ನಿಸುತ್ತದೆ. ಇಲ್ಲಿ ಒಂದು ವೈಬ್ರೇಷನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ. ಕಳೆದ ವರ್ಷ ಶೂಟಿಂಗ್ ಇದ್ದಿದ್ದರಿಂದ ಬರಲು ಆಗಿರಲಿಲ್ಲ ಎಂದು ತರುಣ್ ಹೇಳಿದರು.

    ಅಂದಹಾಗೆ, ಆಗಸ್ಟ್ 11ರಂದು ಸೋನಾಲ್ ಜೊತೆ ತರುಣ್ ಸುಧೀರ್ ಬೆಂಗಳೂರಿನಲ್ಲಿ ಮದುವೆಯಾದರು. ಆ ನಂತರ ಮಂಗಳೂರಿನಲ್ಲಿ ಕ್ರೈಸ್ತ ಧರ್ಮದ ಪದ್ಧತಿಯಂತೆ ಸೋನಾಲ್‌ ಜೊತೆ ಮದುವೆ ನಡೆಯಿತು.

  • ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್

    ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್

    ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ 25ರ ಸುಂದರಿಯೊಬ್ಬರು ಮದುವೆ ಪ್ರಪೋಸಲ್ ಇಟ್ಟಿದ್ದಾರೆ. ನಿಮಗೆ ಯಾವ ರೀತಿ ಹುಡುಗ ಬೇಕು ಎಂದು ಸಲ್ಮಾನ್ ಕೇಳಿದ್ರೆ, ನೀವೇ ನನ್ನ ಮದುವೆ (Wedding) ಮಾಡಿಕೊಳ್ಳಿ ಎಂದು ಸ್ಪರ್ಧಿ ಚಾಹತ್ ಪಾಂಡೆ (Chahat Pandey) ಮನವಿ ಮಾಡಿದ್ದಾರೆ. ಇದನ್ನೂ ಓದಿ:ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

    ಹಿಂದಿ ಕಿರುತೆರೆಯ ಜನಪ್ರಿಯ ನಟಿ ಚಾಹತ್ ಪಾಂಡೆ ಅವರು ಬಿಗ್ ಬಾಸ್ ಹಿಂದಿ 18ರಲ್ಲಿ (Bigg Boss Hinid 18) ಸ್ಪರ್ಧಿಯಾಗಿ ಕಾಣಿಸಿಕೊಳ್ತಿದ್ದಾರೆ. ಇತ್ತೀಚಿನ ವೀಕೆಂಡ್ ಸಂಚಿಕೆಯಲ್ಲಿ ಸಲ್ಮಾನ್ ಖಾನ್ ಅವರು ನಿಮಗೆ ಯಾವ ರೀತಿಯ ಹುಡುಗ ಬೇಕು ಎಂದು ಚಾಹತ್‌ರನ್ನು ಪ್ರಶ್ನಿಸಿದರು. ಅದಕ್ಕೆ, ಸ್ಪರ್ಧಿ ಕರಣ್ ವೀರ್ ಮೆಹ್ತಾ ರೀತಿ ಜಿಮ್‌ಗೆ ಹೋಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವವರು, ಅವಿನಾಶ್ ಹಾಗೆ ಡ್ಯಾನ್ಸ್ ಮಾಡುವವರು, ವಿವಿನ್ ತರ ಹೇರ್ ಸ್ಟೈಲ್ ಇರುವವರು ಬೇಕು ಎಂದಿದ್ದಾರೆ.

    ಆ ನಂತರ ಸರ್ ನೀವೇ ನನ್ನಾ ಮದುವೆ ಮಾಡಿಕೊಳ್ಳಿ ಎಂದು ಸಲ್ಮಾನ್‌ಗೆ ಚಾಹತ್ ಹೇಳಿದ್ದಾರೆ. ಅದಕ್ಕೆ ನೀವು ಹೇಳಿದ ಯಾವುದೇ ಗುಣಗಳು ನನ್ನಲ್ಲಿ ಇಲ್ಲ ಎಂದು ನಟ ಪ್ರತಿಯುತ್ತರ ನೀಡಿದ್ದಾರೆ. ಈ ಮೂಲಕ ಚಾಹತ್ ಮದುವೆ ಪ್ರಪೋಸಲ್‌ಗೆ ನಟ ಬ್ರೇಕ್ ಹಾಕಿದ್ದಾರೆ. ಸದ್ಯ ಈ ಸಂಚಿಕೆಯ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಇನ್ನೂ ಸಲ್ಮಾನ್‌ಗೆ ಇರುವ ಜೀವ ಬೆದರಿಕೆಯ ನಡುವೆಯೂ ರಶ್ಮಿಕಾ ಮಂದಣ್ಣ (Rashmika Mandanna) ಜೊತೆಗಿನ ‘ಸಿಖಂದರ್’ (Sikandar) ಸಿನಿಮಾ ಮತ್ತು ಬಿಗ್ ಬಾಸ್ ಹಿಂದಿ 18ರ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಸಲ್ಮಾನ್‌ಗೆ ಬಿಗಿ ಭದ್ರತೆ ನೀಡಲಾಗಿದೆ.

  • ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

    ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

    ಮಂತಾ (Samantha) ಮಾಜಿ ಪತಿ ನಾಗಚೈತನ್ಯ (Nagachaitanya) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಹೆಣ್ಣಿನ ಮನೆಯಲ್ಲಿ ಮದುವೆ (Wedding) ಶಾಸ್ತ್ರ ಶುರು ಆಗಿದೆ. ಸಂಭ್ರಮದ ಸುಂದರ ಫೋಟೋಗಳನ್ನು ನಾಗಚೈತನ್ಯ ಭಾವಿ ಪತ್ನಿ ಶೋಭಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ನಾಗಚೈತನ್ಯ ಅವರ 2ನೇ ಮದುವೆ ಯಾವಾಗ ಎಂದು ಗುಟ್ಟು ಬಿಟ್ಟು ಕೊಡದೆ ಸೈಲೆಂಟ್ ಮದುವೆ ಶಾಸ್ತ್ರಗಳನ್ನು ಶುರು ಮಾಡಿದ್ದಾರೆ. ಸದ್ದಿಲ್ಲದೆ ಹೆಣ್ಣಿನ ಮನೆಯಲ್ಲಿ ಮದುವೆ ಶಾಸ್ತ್ರ ಜರುಗಿದೆ. ಕೆಂಪು ಬಣ್ಣದ ಸೀರೆಯುಟ್ಟು ನಗುತ್ತಾ ಅರಿಶಿಣವನ್ನು ಕಟ್ಟುವ ಶಾಸ್ತ್ರದಲ್ಲಿ ಶೋಭಿತಾ (Sobhita Dhuliapala) ಕಾಣಿಸಿಕೊಂಡಿದ್ದಾರೆ.

    ಆದರೆ ಮದುವೆ ಯಾವಾಗ? ಎಲ್ಲಿ ಎಂಬುದನ್ನು ಎಲ್ಲೂ ರಿವೀಲ್ ಮಾಡಿಲ್ಲ. ಆದರೆ ರಾಜಸ್ಥಾನದಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆಯಲಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದು ನಿಜನಾ? ಎಂಬುದು ಖಾತ್ರಿಯಾಗಿಲ್ಲ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹಿರಿಯ ನಟಿ ಶ್ರುತಿ ಕುಟುಂಬದ ಮನೆ ಮಗಳು

    ಅಂದಹಾಗೆ, ಆಗಸ್ಟ್ 8ರಂದು ನಾಗಚೈತನ್ಯ ಅವರು ಶೋಭಿತಾ ಜೊತೆ ತಮ್ಮ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಆದರು. ಈ ಸಂಭ್ರಮದ ವಿಚಾರವನ್ನು ನಾಗರ್ಜುನ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದರು.

    ಇನ್ನೂ 2017ರಲ್ಲಿ ಸ್ಟಾರ್ ನಟಿ ಸಮಂತಾ ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಆದರೆ 2021ರಲ್ಲಿ ಕೆಲ ಮನಸ್ತಾಪಗಳಿಂದ ಇಬ್ಬರೂ ಬೇರೆಯಾದರು. 4 ವರ್ಷಗಳ ದಾಂಪತ್ಯಕ್ಕೆ ಇಬ್ಬರೂ ಅಂತ್ಯ ಹಾಡಿದರು.

  • ಮ್ಯಾರೇಜ್‌ ಪ್ಲ್ಯಾನಿಂಗ್‌ ಬಗ್ಗೆ ಬಾಯ್ಬಿಟ್ಟ ಶ್ರದ್ಧಾ ಕಪೂರ್

    ಮ್ಯಾರೇಜ್‌ ಪ್ಲ್ಯಾನಿಂಗ್‌ ಬಗ್ಗೆ ಬಾಯ್ಬಿಟ್ಟ ಶ್ರದ್ಧಾ ಕಪೂರ್

    ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ನಟನೆಯ ‘ಸ್ತ್ರೀ 2’ (Stree 2) ಸಿನಿಮಾ ಸಕ್ಸಸ್ ಬಳಿಕ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್ ಮಾತ್ರವಲ್ಲ ಪರಭಾಷೆಗಳಿಂದಲೂ ಅವರಿಗೆ ಬುಲಾವ್ ಬರುತ್ತಿದೆ. ಇದೀಗ ಸಂದರ್ಶನವೊಂದರಲ್ಲಿ ಲವ್ ಲೈಫ್ ಬಗ್ಗೆ ಬಾಯ್ಬಿಟ್ಟಿದ್ದಾರೆ. ಸಂಗಾತಿ ಕುರಿತು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ನಾರಾ ರೋಹಿತ್ ಜೊತೆ ಸಿರೀಶ ಲೆಲ್ಲಾ ನಿಶ್ಚಿತಾರ್ಥ

    ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾದ ಶ್ರದ್ಧಾ, ರಿಲೇಷನ್‌ಶಿಪ್ ಬಗ್ಗೆ ಕೇಳಿದಾಗ ಯಾವುದೇ ಸಂಕೋಚವಿಲ್ಲದೆ ಮುಕ್ತವಾಗಿ ಉತ್ತರಿಸಿದ್ದಾರೆ. ನಟಿ ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಆದರೆ ನನ್ನ ಸಂಗಾತಿಯೊಂದಿಗೆ ಸಮಯ ಕಳೆಯುವುದು, ಸಿನಿಮಾ ನೋಡುವುದು, ಡಿನ್ನರ್ ಹೋಗುವುದು ಅಥವಾ ಟ್ರಾವೆಲ್ ಮಾಡುವುದು ನನಗೆ ತುಂಬಾ ಇಷ್ಟ ಎಂದು ಶ್ರದ್ಧಾ ಹೇಳಿದ್ದಾರೆ. ಅವಶ್ಯವಾಗಿ ನನಗೆ ಮದುವೆ ಮೇಲೆ ತುಂಬಾ ನಂಬಿಕೆ ಇದೆ. ಆದರೆ ಸರಿಯಾದ ವ್ಯಕ್ತಿ ಸಿಗುವುದು ಮುಖ್ಯ ಎಂದಿದ್ದಾರೆ.

    ಇನ್ನು ಕಳೆದ ವರ್ಷ ಶ್ರದ್ಧಾ ಕಪೂರ್ ಅವರ ಹೆಸರು ಬರಹಗಾರ ರಾಹುಲ್ ಮೋದಿ ಅವರೊಂದಿಗೆ ಸದ್ದು ಮಾಡಿತ್ತು. ಅದರಂತೆ ಇಬ್ಬರೂ ಕೂಡ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ಇದರ ನಂತರ, ಶ್ರದ್ಧಾ ಕಪೂರ್ ತನ್ನ ಇನ್ಸ್ಟಾಗ್ರಾಂ ಖಾತೆಯಿಂದ ರಾಹುಲ್ ಅವರನ್ನು ಅನ್ ಫಾಲೋ ಮಾಡಿದಾಗ ಅವರ ಬ್ರೇಕಪ್ ಸುದ್ದಿ ಬೆಳಕಿಗೆ ಬಂದಿತ್ತು. ಆದರೆ ಇದರ ಬಗ್ಗೆಯೂ ಈ ಜೋಡಿ ಕ್ಲ್ಯಾರಿಟಿ ನೀಡಿರಲಿಲ್ಲ.

  • ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ- ಮದುವೆ ಡೇಟ್‌ ಫಿಕ್ಸ್

    ನಿಶ್ಚಿತಾರ್ಥ ಮಾಡಿಕೊಂಡ ‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡ- ಮದುವೆ ಡೇಟ್‌ ಫಿಕ್ಸ್

    ‘ಬಿಗ್ ಬಾಸ್ ಕನ್ನಡ 8’ರ ವಿನ್ನರ್ (Bigg Boss Kannada 8) ಮಂಜು ಪಾವಗಡ (Manju Pavagada) ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ (Nandini) ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಇದನ್ನೂ ಓದಿ:ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಬೆನ್ನು ನೋವು

    ನಟ ಮಂಜು ಪಾವಗಡ ಅವರು ಹಸೆಮಣೆ (Wedding) ಏರೋಕೆ ರೆಡಿಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ನಂದಿನಿ ಜೊತೆ ಸದ್ದಿಲ್ಲದೇ ನಟ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ನವೆಂಬರ್ 13 ಮತ್ತು 14ರಂದು ಪಾವಗಡದಲ್ಲಿ ಮದುವೆ ನಡೆಯಲಿದೆ.

    ಇನ್ನೂ ಮಂಜು ಪಾವಗಡ ಅವರು ಬಿಗ್ ಬಾಸ್ ಕನ್ನಡ 8ರ ವಿನ್ನರ್ ಆಗಿದ್ದರು. ಬಳಿಕ ‘ಅಂತರಪಟ’ ಎಂಬ ಸೀರಿಯಲ್‌ನಲ್ಲಿ ವಿಲನ್ ಆಗಿ ನಟಿಸಿದ್ದರು. ರುದ್ರಾಕ್ಷಿಪುರ, ಚಂದನ್ ಶೆಟ್ಟಿ ಜೊತೆ ಎಲ್ರ ಕಾಲೆಳಿಯುತ್ತೆ ಕಾಲ, 45, ಕೋಮಲ್ ಜೊತೆ ಎಲಾ ಕುನ್ನಿ ಸೇರಿದಂತೆ ಹಲವು ಚಿತ್ರಗಳಲ್ಲಿ ಮಂಜು ನಟಿಸಿದ್ದಾರೆ.

  • ನಿಧಿ ಅಗರ್ವಾಲ್ ಜೊತೆ ಸಿಂಬು ಮದುವೆ?- ಕೊನೆಗೂ ಹೊರಬಿತ್ತು ವಿಷ್ಯ

    ನಿಧಿ ಅಗರ್ವಾಲ್ ಜೊತೆ ಸಿಂಬು ಮದುವೆ?- ಕೊನೆಗೂ ಹೊರಬಿತ್ತು ವಿಷ್ಯ

    ಕಾಲಿವುಡ್ ನಟ ಸಿಂಬು (Actor Simbu) ಅವರ ಮದುವೆ ಬಗ್ಗೆ ಹಲವು ವಿಚಾರಗಳು ಕೆಲ ತಿಂಗಳುಗಳಿಂದ ಸದ್ದು ಮಾಡುತ್ತಿವೆ. ಬೆಂಗಳೂರಿನ ಬೆಡಗಿ ನಿಧಿ ಅಗರ್ವಾಲ್ ಜೊತೆ ಸಿಂಬು ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾದ ಸುದ್ದಿ ಹರಿದಾಡುತ್ತಿದೆ. ಇದೀಗ ಮದುವೆ ಸುದ್ದಿ ಕುರಿತು ನಟ ಸಿಂಬು ಟೀಮ್ ಸ್ಪಷ್ಟನೆ ಕೊಟ್ಟಿದೆ.

    ತೆಲುಗು ನಟಿ ನಿಧಿ ಅಗರ್ವಾಲ್ (Nidhhi Agerwal) ಜೊತೆ ಸಿಂಬು ಮದುವೆ ಆಗಲಿದ್ದಾರೆ. ಸದ್ಯದಲ್ಲೇ ನಿಶ್ಚಿತಾರ್ಥ ನಡೆಯಲಿದೆ ಎಂಬ ಸುದ್ದಿ ಇದೀಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಎಂಬುದಕ್ಕೆ ಸಿಂಬು ಟೀಮ್ ಸ್ಪಷ್ಟನೆ ನೀಡಿದೆ. ಇದೊಂದು ಬೇಸ್ ಲೆಸ್ ಸುದ್ದಿ. ಈ ವಿಚಾರ ವದಂತಿಯಷ್ಟೇ, ಸತ್ಯವಲ್ಲ ಎಂದು ಸಿಂಬು ತಂಡ ಕ್ಲ್ಯಾರಿಟಿ ಕೊಟ್ಟಿದೆ.

    ಅಂದಹಾಗೆ, 2021ರಲ್ಲಿ ‘ಈಶ್ವರನ್’ ಎಂಬ ಸಿನಿಮಾದಲ್ಲಿ ಸಿಂಬುಗೆ ನಾಯಕಿಯಾಗಿ ನಿಧಿ ನಟಿಸಿದ್ದರು. ಈ ಸಿನಿಮಾ ನಂತರ ಇಬ್ಬರ ಡೇಟಿಂಗ್ ಬಗ್ಗೆ ವದಂತಿ ಹಬ್ಬಿತ್ತು. ಇದನ್ನೂ ಓದಿ:‘ಪ್ರಾಪ್ತಿ’ ಸಿನಿಮಾ: ವರ್ತಮಾನಕ್ಕೆ ಹಿಡಿದ ಕನ್ನಡಿ

    ಇನ್ನೂ ಈ ಹಿಂದೆ ತ್ರಿಷಾ, ಹನ್ಸಿಕಾ ಮೋಟ್ವಾನಿ, ನಯನತಾರಾ ಜೊತೆ ಸಿಂಬು ಡೇಟಿಂಗ್ ಮಾಡಿದ್ದರು ಎನ್ನಲಾದ ಸುದ್ದಿಗಳು ಹರಿದಾಡಿತ್ತು. ಯಾವುದು ಮದುವೆಯವರೆಗೂ ಬರಲಿಲ್ಲ.