Tag: Weekend Curfew

  • ನೆಂಟರ ಮನೆಗೆ ಹೋಗೋಕೆ ಒಂದೇ ಆಟೋದಲ್ಲಿ ಬಂದ ಐವರು ಮಹಿಳೆಯರು – ಪೊಲೀಸರಿಂದ ಕ್ಲಾಸ್‌

    ನೆಂಟರ ಮನೆಗೆ ಹೋಗೋಕೆ ಒಂದೇ ಆಟೋದಲ್ಲಿ ಬಂದ ಐವರು ಮಹಿಳೆಯರು – ಪೊಲೀಸರಿಂದ ಕ್ಲಾಸ್‌

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕಾಗಿ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅನಗತ್ಯವಾಗಿ ಜನರು ಹೊರಗಡೆ ಓಡಾಡದಂತೆ ಟಫ್‌ ರೂಲ್ಸ್‌ ವಿಧಿಸಿ ಎಲ್ಲಾ ಕಡೆ ಪೊಲೀಸ್‌ ಕಣ್ಗಾವಲಿಸಿರಿದೆ. ಆದರೂ ಜನ ನಿಯಮ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿರುವ ಚಿತ್ರಣಗಳು ಕಂಡುಬಂದಿವೆ. ಕೆಲವೆಡೆ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಕ್ಲಾಸ್‌ ತೆಗೆದುಕೊಂಡರೆ, ಇನ್ನೂ ಕೆಲವೆಡೆ ಶಿಸ್ತು ಕ್ರಮ ಜರುಗಿಸಿದ್ದಾರೆ.

    ಕೋವಿಡ್‌ ನಿಯಮ ಉಲ್ಲಂಘನೆಗೆ ಸಾಕ್ಷಿ ಎಂಬಂತೆ ನಗರದಲ್ಲಿ ವೀಕೆಂಡ್‌ ಕರ್ಫ್ಯೂ ದಿನವಾದ ಶನಿವಾರ ಘಟನೆಯೊಂದು ನಡೆದಿದೆ. ನೆಂಟರ ಮನೆಗೆ ಹೋಗಲು ಒಂದೇ ಆಟೋದಲ್ಲಿ ಐವರು ಮಹಿಳೆಯರು ಪ್ರಯಾಣ ಬೆಳೆಸಿದ್ದರು. ವಾಹನ ತಪಾಸಣೆ ವೇಳೆ ಇದನ್ನು ಗಮನಿಸಿದ ಪೊಲೀಸರು, ಆಟೋ ಚಾಲಕನಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡರು. ಇದನ್ನೂ ಓದಿ: ಕೆಲಸಕ್ಕಿದ್ದ ಅಂಗಡಿಯಲ್ಲೇ 30 ಲಕ್ಷ ದೋಚಿದ ಖತರ್ನಾಕ್‌ – ಮಾಲೀಕನಿಗೆ ಪಂಗನಾಮ

    ಕೆಆರ್‌ ಮಾರ್ಕೆಟ್‌ನಲ್ಲಿ ಆಟೋವನ್ನು ತಡೆದ ಪೊಲೀಸರು, ವೀಕೆಂಡ್‌ ಕರ್ಫ್ಯೂ ಇದೆ ಗೊತ್ತಿಲ್ವ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಆಟೋದಲ್ಲಿದ್ದ ಮಹಿಳೆಯರು, ಇದೊಂದು ಬಾರಿ ಬಿಟ್ಟು ಬಿಡಿ ಸರ್‌, ನಾಳೆಯಿಂದ ಬರಲ್ಲ ಎಂದು ಸಬೂಬು ಹೇಳಿದ್ದಾರೆ. ಕೋವಿಡ್‌ ನಿಯಮ ಉಲ್ಲಂಘಿಸಿದ ಕಾರಣ ಪೊಲೀಸರು ಆಟೋವನ್ನು ವಶಕ್ಕೆ ಪಡೆದಿದ್ದಾರೆ. ನಂತರ ಎಲ್ಲರಿಗೂ ಕೊರೊನಾ ಪರೀಕ್ಷೆ ಮಾಡಿಸಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಏರಿಕೆ ಕಾಣುತ್ತಿವೆ. ಇದರಿಂದಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸಿದೆ. ಇದನ್ನೂ ಓದಿ: ಕಾರಿಗೆ ಕ್ಯಾಂಟರ್ ಡಿಕ್ಕಿ – ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವು

  • ಅದು ಮೇಕೆದಾಟಲ್ಲ, ಮೇಕೆ ನಾಟಕ ಪಾದಯಾತ್ರೆ: ಮುನಿರತ್ನ

    ಅದು ಮೇಕೆದಾಟಲ್ಲ, ಮೇಕೆ ನಾಟಕ ಪಾದಯಾತ್ರೆ: ಮುನಿರತ್ನ

    ಕೋಲಾರ: ಅದು ಮೇಕೆದಾಟಲ್ಲ, ಮೇಕೆ ನಾಟಕ ಪಾದಯಾತ್ರೆ ಎಂದು ನಗರದ ಉಸ್ತುವಾರಿ ಸಚಿವ ಮುನಿರತ್ನ ವ್ಯಂಗ್ಯವಾಡಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಅದೊಂದು ರಾಜಕೀಯ ಪ್ರೇರಿತ ಕಾರ್ಯಕ್ರಮ. ಕಾಂಗ್ರೆಸ್ ರಾಜ್ಯದಲ್ಲಿ 5 ವರ್ಷ ಅಧಿಕಾರದಲ್ಲಿದ್ದಾಗ ಯಾಕೆ ಅನುಷ್ಠಾನ ಮಾಡಲಿಲ್ಲ. ಈಗ ಈ ಪಾದಯಾತ್ರೆ ಒಂದು ರಾಜಕೀಯ ಪ್ರೇರಿತವಾಗಿದೆ. ಕೈ ಪಕ್ಷದವರು ಖಾಲಿಯಾಗಿದ್ದಾರೆ ಕೆಲಸ ಬೇಕಾಗಿತ್ತು ಅದಕ್ಕೆ ನಾಟಕ ಶುರು ಮಾಡಿದ್ದಾರೆ ಎಂದರು. ಇದನ್ನೂ ಓದಿ: ‘RRR’ ಸಿನಿಮಾ ಬಿಡುಗಡೆಯಾಗಬಾರದು: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಮೇಕೆದಾಟು ಇವತ್ತಿನ ಸಮಸ್ಯೆ ಅಲ್ಲ, ತುಂಬಾ ಹಳೆಯ ವಿಚಾರವಾಗಿದೆ. ಮುಂದೆ ತಮ್ಮ ಸರ್ಕಾರ ಬರಲ್ಲ ಎಂದು ಗೊತ್ತಾಗಿದೆ. ಹೀಗಾಗಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಮೇಕೆದಾಟು ಹೆಸರಲ್ಲಿ ದೊಡ್ಡ ನಾಟಕ ಮಾಡುತ್ತಿದೆ. ಇವರ ಯಾವ ಕನಸುಗಳು ಈಡೇರಲ್ಲ. ಕೊರೊನಾ ಸಂಕಷ್ಟದ ಮಧ್ಯೆ ಮೇಕೆದಾಟು ಪಾದಯಾತ್ರೆ ಬೇಕಿತ್ತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಇದೇ ವೇಳೆ ವೀಕೆಂಡ್ ಕರ್ಫ್ಯೂ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿನಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಸರ್ಕಾರದ ನಿಯಮಗಳನ್ನ ತಪ್ಪದೆ ಎಲ್ಲರೂ ಪಾಲನೆ ಮಾಡಬೇಕು. ಕೋವಿಡ್-19  2 ನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಿರುವ ಸರ್ಕಾರ 3 ನೇ ಅಲೆಯನ್ನು ಸಹ ಯಶಸ್ವಿಯಾಗಿ ಎದುರಿಸಲಿದೆ ಎಂದು ನುಡಿದರು.

  • ಇಂದು ರಾತ್ರಿ 8 ಗಂಟೆಯಿಂದ್ಲೇ ಸಿಗಲ್ಲ ಮದ್ಯ – ಎಣ್ಣೆ ಪಾರ್ಸೆಲ್‍ಗೂ ನೋ ಪರ್ಮಿಷನ್

    ಇಂದು ರಾತ್ರಿ 8 ಗಂಟೆಯಿಂದ್ಲೇ ಸಿಗಲ್ಲ ಮದ್ಯ – ಎಣ್ಣೆ ಪಾರ್ಸೆಲ್‍ಗೂ ನೋ ಪರ್ಮಿಷನ್

    ಬೆಂಗಳೂರು: ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದ್ದು, ವಿಕೇಂಡ್ ಮಸ್ತಿಗೆ ಈ ಬಾರಿ ಕರ್ಫ್ಯೂ ಅಡ್ಡಿಯಾಗುತ್ತಿದೆ.

    ಹೌದು. ಇಂದು ರಾತ್ರಿಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ. ರಾತ್ರಿ 8 ಗಂಟೆಯ ನಂತರ ಮದ್ಯ ಸಿಗಲ್ಲ. ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಪಾರ್ಸೆಲ್‍ಗೂ ಅನುಮತಿ ಇಲ್ಲ. ಕದ್ದು ಮುಚ್ಚಿ ಮಾರಾಟ ಮಾಡುವ ಬಾರ್‌ ಗಳಿಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಸಜ್ಜಾಗಿದೆ. ಕಣ್ತತಪ್ಪಿಸಿ ಮದ್ಯಮಾರಾಟ ಮಾಡಿ ಸಿಕ್ಕಿಬಿದ್ದರೆ ಬಾರ್ ಲೆಸೆನ್ಸ್ ರದ್ದು ಮಾಡಲಾಗುತ್ತದೆ.

    ಸೋಮವಾರ ಮುಂಜಾನೆವರೆಗೂ ಬಾರ್, ರೆಸ್ಟೋರೆಂಟ್, ಎಂಎಸ್ ಐಎಲ್ ಎಲ್ಲಾವೂ ಬಂದ್ ಆಗಿರುತ್ತವೆ. ಸೋಮವಾರದ ಬಳಿಕ ಬಾರ್ ಪಬ್, ರೆಸ್ಟೋರೆಂಟ್‍ಗಳಲ್ಲಿ ಸಿಟ್ಟಿಂಗ್ ಕೆಪಾಸಿಟಿ ಮೈಂಟೇನ್ ಮಾಡಬೇಕು. ಜೊತೆಗೆ ಬಾರ್, ಪಬ್ ಸಿಬ್ಬಂದಿಗೆ ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿರುತ್ತದೆ.

    ಇನ್ನು ಬಾರ್, ಪಬ್, ರೆಸ್ಟೋರೆಂಟ್‍ಗೆ ಬರುವ ಗ್ರಾಹಕರಿಗೂ ಕೋವಿಡ್ ರೂಲ್ಸ್ ಪಾಲನೆ ಮಾಡುವಂತೆ ನೋಡಿಕೊಳ್ಳಬೇಕು. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು ಕಂಡು ಬಂದ್ರೆ ಲೆಸನ್ಸ್ ರದ್ದು ಮಾಡುವ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

  • ಮದ್ಯ ಪ್ರಿಯರಿಗೆ ಸರ್ಕಾರದ ಶಾಕ್‌ – ವೀಕೆಂಡ್‌ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಬ್ರೇಕ್‌

    ಮದ್ಯ ಪ್ರಿಯರಿಗೆ ಸರ್ಕಾರದ ಶಾಕ್‌ – ವೀಕೆಂಡ್‌ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಬ್ರೇಕ್‌

    ಬೆಂಗಳೂರು: ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್‌ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ವೀಕೆಂಡ್‌ ಕರ್ಫ್ಯೂ ದಿನಗಳಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಿದೆ.

    ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ (ವಾರಾಂತ್ಯ ಕರ್ಫ್ಯೂ ಜಾರಿ ಅವಧಿ) ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ ಸ್ಪಷ್ಟನೆ

    ಸೋಮವಾರದಿಂದ ಶುಕ್ರವಾರದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಈ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಶೇ. 50 ಗ್ರಾಹಕರಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

    ಲೈಸೆನ್ಸ್‌ ಇರುವ ಮದ್ಯ ಮಾರಾಟ ಮಳಿಗೆಗಳು ಸಾಮಾಜಿಕ ಅಂತರವನ್ನು 6 ಅಡಿಗಳಿಗೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು. ಮಳಿಗೆಗಳಲ್ಲಿ ಕೆಲಸ ನಿರ್ವಹಿಸುವವರು ಗ್ಲೌಸ್‌, ಮಾಸ್ಕ್‌ ಹಾಗೂ ಅಂಗಡಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು. ಇದನ್ನೂ ಓದಿ: ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

    ಕೋವಿಡ್‌ಗೆ ಸಂಬಂಧಿಸಿದ ಯಾವುದೇ ನಿಯಮ ಉಲ್ಲಂಘನೆಯಾದಲ್ಲಿ ಅಂತಹ ಮಳಿಗೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

  • ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ ಸ್ಪಷ್ಟನೆ

    ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ ಸ್ಪಷ್ಟನೆ

    ಬೆಂಗಳೂರು: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

    ಇಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ನೈಟ್ ಕರ್ಫ್ಯೂ ಮುಂದುವರಿಯುತ್ತಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

    ವೀಕೆಂಡ್ ಲಾಕ್ ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ವೀಕೆಂಡ್‌ ಕರ್ಫ್ಯೂನಿಂದ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಕೊರೊನಾ ನೋಡಿಕೊಂಡು ಮುಂದೆ ತೀರ್ಮಾನಿಸೋಣ. ಕ್ಯಾಬಿನೆಟ್ ನಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದರು. ಇದನ್ನೂ ಓದಿ: ಕೊರೊನಾ ಜಾಗ್ರತೆ ವಹಿಸಿಕೊಂಡೇ ಮೇಕೆದಾಟು ಪಾದಯಾತ್ರೆ ಮಾಡ್ತೀವಿ: ಸಿದ್ದರಾಮಯ್ಯ

    ಎರಡು ವಾರಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಲಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೆಲ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯದ ಎಲ್ಲಾ ಕಡೆ ಸರ್ಕಾರ ನಿಯಮ ಜಾರಿ ಮಾಡಬೇಕಾದ ಅವಶ್ಯಕತೆ ಇರಲಿಲ್ಲ ಎಂದು ಆಕ್ರೋಶ ಹೊರಬಿದ್ದಿತ್ತು. ಇದನ್ನೂ ಓದಿ: ಆರೂವರೆ ವರ್ಷ ಅಧಿಕಾರದಲ್ಲಿದ್ದಾಗ ಏನೂ ಮಾಡ್ಲಿಲ್ಲ, ಈಗ ಹೋರಾಟ ಮಾಡ್ತಿದ್ದಾರೆ: ಅರಗ ಜ್ಞಾನೇಂದ್ರ

    ಇತ್ತ ಕಾಂಗ್ರೆಸ್ ನಾಯಕರು ಕೂಡ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಪಾದಯಾತ್ರೆ ಮಾಡುತ್ತೇವೆ ಎಂಬ ಉದ್ದೇಶದಿಂದಲೇ ಸರ್ಕಾರ ಹೊಸ ಕೊರೊನಾ ನಿಯಮ ಜಾರುಗೆ ತಂದಿದೆ ಎಂದು ಆರೋಪಿಸಿದ್ದರು. ಅಲ್ಲದೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಏನೇ ಆದರೂ, ಯಾರು ಬರದಿದ್ದರೂ ನಾವಿಬ್ಬರೇ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದರು.

  • ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

    ಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

    ಬೆಂಗಳೂರು: ಕೋವಿಡ್ ಹೊಸ ಮಾರ್ಗಸೂಚಿ ಬಗ್ಗೆ ಸರ್ಕಾರದಲ್ಲಿ ಗೊಂದಲ ಎದ್ದುಕಾಣುತ್ತಿದೆ. ಬಿಜೆಪಿಯ ಹಲವು ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ವ್ಯಾಪಾರಿ ವರ್ಗದವರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಕೆಂಡ್ ಕರ್ಫ್ಯೂ, 50% ರೂಲ್ಸ್ ಏಕಪಕ್ಷೀಯ ನಿರ್ಧಾರ ಎಂದು ಅಸಮಧಾನ ಕೇಳಿಬರುತ್ತಿದೆ.

    ಬೆಂಗಳೂರಿನಲ್ಲಿ ಕೇಸ್ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಆದರೆ ಜಿಲ್ಲೆಗಳಲ್ಲಿ ಕೋವಿಡ್ ಕಮ್ಮಿ ಇದೆ. ಜಿಲ್ಲೆಗಳಲ್ಲಿ ಆತಂಕ, ಭಯದ ವಾತಾವರಣ ಇಲ್ಲ. ಕೋವಿಡ್ ಕಮ್ಮಿ ಇರುವ ಕಡೆಯೂ ವೀಕೆಂಡ್ ಕರ್ಫ್ಯೂ ಬೇಕಾಗಿರಲಿಲ್ಲ. ವೀಕೆಂಡ್ ಕರ್ಫ್ಯೂನಿಂದಾಗಿ ಜನಜೀವನ, ವ್ಯಾಪಾರ ವಹಿವಾಟಿಗೆ ತೊಡಕು ಉಂಟಾಗಿದೆ. ಮೊದಲೇ ಆರ್ಥಿಕ ಸಮಸ್ಯೆ, ಇಂತಹ ಸಂದರ್ಭದಲ್ಲಿ ಬರಸಿಡಿಲಿನಂತೆ ವೀಕೆಂಡ್ ಕರ್ಫ್ಯೂ ಮಾಡಿರುವ ಬಗ್ಗೆ ಜನಸಾಮಾನ್ಯರು, ವ್ಯಾಪಾರಿ ವರ್ಗದವರಿಂದ ತಮ್ಮ, ತಮ್ಮ ಕ್ಷೇತ್ರದ ಸಚಿವರು, ಶಾಸಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಇತ್ತ ಸಚಿವ, ಶಾಸಕರಿಗೆ ಈ ಬಗ್ಗೆ ತಳಮಳ ಉಂಟಾಗಿದೆ. ಇದನ್ನೂ ಓದಿ: ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಈಶ್ವರಪ್ಪ ಅಸಮಾಧಾನ

    ಸಚಿವರು ಮತ್ತು ಶಾಸಕರು ಹೊಸ ಮಾರ್ಗಸೂಚಿಯಲ್ಲಿ ವಿನಾಯಿತಿ ಕೊಡಿ ಎಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತಿದ್ದು, ಸಚಿವರ ಜತೆ ಕ್ಯಾಬಿನೆಟ್‍ನಲ್ಲಿ ಚರ್ಚಿಸಿ ಟಫ್ ರೂಲ್ಸ್ ತರ್ತೀವಿ ಅಂದಿದ್ದ ಸಿಎಂ, ಕ್ಯಾಬಿನೆಟ್ ಸಭೆಗೂ ಮುನ್ನವೇ ಹೊಸ ಮಾರ್ಗಸೂಚಿ ಜಾರಿ ಮಾಡಿರುವುದರಿಂದ ಕೆಳ ಸಚಿವರು ಗರಂ ಆಗಿದ್ದಾರೆ. ಸಚಿವರ ಗಮನಕ್ಕೂ ತರದೇ ಹೊಸ ಮಾರ್ಗಸೂಚಿ ಜಾರಿ ಮಾಡಿರುವ ಬಗ್ಗೆ ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಹಲವು ಸಚಿವರು ಪ್ರಶ್ನೆ ಮಾಡುವ ಸಾಧ್ಯತೆ ಹೆಚ್ಚಿದೆ. ಇಂದು ನಡೆಯಲಿರುವ ಸಭೆಯಲ್ಲಿ ರೂಲ್ಸ್‌ಗಳಲ್ಲಿ ಸಚಿವರು ಕೇಳೋ ವಿನಾಯಿತಿಗೆ ಸಿಎಂ ಒಕೆ ಅಂತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೂ ಓದಿ: ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ಸಿಎಂ ಮನವಿ

    ಈ ನಡುವೆ ನಿನ್ನೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರೋದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ ರಾಜಧಾನಿಯಲ್ಲಿ ತುಂಬಾ ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿನಾ ಅಂತಾ ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

    ಆಟೋ ರಿಕ್ಷಾ ಡ್ರೈವರ್, ಕೂಲಿ ಕಾರ್ಮಿಕರು, ಟೈಲರ್, ವ್ಯಾಪಿರಿಗಳು ಅವರ ಜೀವನಕ್ಕೆ ಎಲ್ಲಿ ಹೋಗಬೇಕು. ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಮುಂದೆ, ಮುಖ್ಯಮಂತ್ರಿ ಅವರ ಮುಂದೆ ಇಡುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: ಕೋವ್ಯಾಕ್ಸಿನ್‌ ಲಸಿಕೆ ಪಡೆದ ಮಕ್ಕಳಿಗೆ ನೋವು ನಿವಾರಕ, ಪ್ಯಾರಸಿಟಮಲ್‌ ಮಾತ್ರೆ ನೀಡಲ್ಲ: ಭಾರತ್‌ ಬಯೋಟೆಕ್‌

  • ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಈಶ್ವರಪ್ಪ ಅಸಮಾಧಾನ

    ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಈಶ್ವರಪ್ಪ ಅಸಮಾಧಾನ

    ಶಿವಮೊಗ್ಗ: ಕೋವಿಡ್-19 ಹೆಚ್ಚಳ ಹಿನ್ನೆಲೆ ಸರ್ಕಾರ ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರೋದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ ರಾಜಧಾನಿಯಲ್ಲಿ ತುಂಬಾ ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿನಾ ಅಂತಾ ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

    ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಅಷ್ಟಿಲ್ಲ. ಅಷ್ಟು ಇಲ್ಲದಿರುವ ಸಂದರ್ಭದಲ್ಲಿ ನಮ್ಮ ಮೇಲೆ ಹೇರಿದರೆ ನಮ್ಮ ವ್ಯವಹಾರಕ್ಕೆ ತೊಂದರೆ ಆಗುತ್ತದೆ. ಸಾರ್ವಜನಿಕರು ಇದಕ್ಕೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿದ್ದೇವೆ. ಖಂಡಿತಾ ಮಾಸ್ಕ್ ಧರಿಸುತ್ತೇವೆ. ಸ್ಯಾನಿಟೈಸರ್ ಬಳಸುತ್ತೇವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉಳಿದವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ

    Basavaraj bommai

    ಬೆಂಗಳೂರಿನಲ್ಲಿ ಬಿಗಿ ಮಾಡಬೇಕು. ಗಡಿ ಜಿಲ್ಲೆಗಳಲ್ಲಿ ಸರ್ಕಾರ ಬಿಗಿ ಮಾಡಲೇ ಬೇಕು. ಇಂತಹ ಸಲಹೆಯನ್ನು ನಾಳೆ ಸಚಿವ ಸಂಪುಟದಲ್ಲಿ ಕೊಡುತ್ತೇನೆ. ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಎಲ್ಲಾ ಕಡೆಯಿಂದ ನನಗೆ ಅನೇಕರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಗಿ ಮಾಡಿ ನಾವು ಸಹಕಾರ ಕೊಡುತ್ತೇವೆ. ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಶಾಲೆಗಳಿಗೆ ಹೋಗುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಸಾರ್ವಜನಿಕರ ಅಭಿಪ್ರಾಯವನ್ನು ನಾನು ನಾಳೆ ಕ್ಯಾಬಿನೆಟ್ ಮುಂದೆ ಇಡುತ್ತೇನೆ ಎಂದರು.

    ಆಟೋ ರಿಕ್ಷಾ ಡ್ರೈವರ್, ಹಮಾಲರು ಅವರ ಜೀವನಕ್ಕೆ ಎಲ್ಲಿ ಹೋಗಬೇಕು. ಕೂಲಿ ಕಾರ್ಮಿಕರು, ಟೈಲರ್ ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಮುಂದೆ, ಮುಖ್ಯಮಂತ್ರಿ ಅವರ ಮುಂದೆ ಇಡುತ್ತೇನೆ ಎಂದು ನುಡಿದರು.

  • ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌  ಬಂದ್

    ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

    ನವದೆಹಲಿ: ಕೊರೊನಾ, ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ.

    ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ. ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ‍್ಯಾಂಕ್‌ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

    ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಪತ್ತೆಯಾಗಿದೆ. ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. 6,288 ಕೊರೊನಾ ಸೋಂಕಿತರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಶನ್‍ಲ್ಲಿ ಇದ್ದಾರೆ. ದೆಹಲಿಯಲ್ಲಿ ನಿನ್ನೆ ದಾಖಲೆ ಮಟ್ಟದಲ್ಲಿ ಕೊರೊನಾ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದೆ. ಇದನ್ನೂ ಓದಿ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

    ದೆಹಲಿ ಸರ್ಕಾರ ನಾಲ್ಕು ಬಣ್ಣಗಳಲ್ಲಿ ಕೊರೊನಾ ಅಪಾಯ ಗುರುತಿಸಿದೆ. ಸೋಂಕಿನ ಪ್ರಮಾಣ ಆಧರಿಸಿ ನಾಲ್ಕು ಹಂತಗಳಲ್ಲಿ ವಿಭಾಗವನ್ನು ಮಾಡಲಾಗಿದೆ. ಹಳದಿ, ಹಳದಿ ಮತ್ತು ಕಿತ್ತಳೆ ಮಿಶ್ರಣ, ಕಿತ್ತಳೆ ಮತ್ತು ರೆಡ್ ಝೋನ್ ಆಗಿ ವಿಂಗಡಿಸಲಾಗಿದೆ. ಸೋಂಕಿನ ಪ್ರಮಾಣ 0.5% ರಷ್ಟಿದ್ದರೇ ಹಳದಿ, 1-2 % ನಷ್ಟಿದ್ದರೇ ಹಳದಿ ಮತ್ತು ಕಿತ್ತಳೆ ಮಿಶ್ರಿತ ಬಣ್ಣ2-5% ವರೆಗೂ ಕಿತ್ತಳೆ, 5% ಹೆಚ್ಚಿದ್ದರೆ ರೆಡ್ ಝೋನ್ ಎಂದು ವಿಭಾಗಿಸಿದೆ. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ

    ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಟಫ್ ರೂಲ್ಸ್ ಜಾರಿಗೆ ರಾಜ್ಯ ಸರ್ಕಾರದ ಚಿಂತನೆ ಮಾಡುತ್ತಿದ್ದು, ಇಂದು ತಜ್ಞರ ಸಭೆ ಬಳಿಕ ಕಠಿಣ ನಿಯಮಗಳ ಜಾರಿಗೆ ತರಲು ಸರ್ಕಾರ ತಯಾರಿ ನೆಡೆಸಿದೆ. ದೆಹಲಿ, ಮಹಾರಾಷ್ಟ್ರ ಮಾಡೇಲ್ ಆಧರಿಸಿ ರಾಜ್ಯದಲ್ಲಿ ನಿಯಮಗಳು ಜಾರಿ ಸಾಧ್ಯತೆ ಇದೆ.

  • ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು- ಜಿಲ್ಲೆಗೆ ಕೇರಳ ಟೆನ್ಶನ್

    ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು- ಜಿಲ್ಲೆಗೆ ಕೇರಳ ಟೆನ್ಶನ್

    ಉಡುಪಿ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಇಂದು ತಜ್ಞರ ಜೊತೆಗೆ ವಿಶೇಷ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕೂರ್ಮ ರಾವ್ ರದ್ದತಿಯ ಆದೇಶ ಹೊರಡಿಸಿದ್ದಾರೆ.

    ವಾರಂತ್ಯ ಕರ್ಫ್ಯೂ ಬಗ್ಗೆ ಸರ್ಕಾರದಿಂದ ಈ ಮೊದಲೇ ನಿರ್ದೇಶನ ಬಂದಿತ್ತು. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳ ತೀರ್ಮಾನ ಕೈಗೊಳ್ಳಲು ಸೂಚಿನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಲಾಯಿತು. ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕಪ್ರ್ಯೂ ಹಿಂಪಡೆಯಲಾಗಿದೆ. ಎಲ್ಲ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತವೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆ- ರಾಜ್ಯದಲ್ಲಿಂದು 967 ಹೊಸ ಕೊರೊನಾ ಕೇಸ್, 10 ಸಾವು

    ಕೇರಳದಿಂದ ಬರುವಾಗ ಕೊರೊನಾ ನೆಗೆಟಿವ್, ಬಂದ ಮೇಲೆ ಕೊರೊನಾ ಪಾಸಿಟಿವ್ ಆಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೇರಳದಿಂದ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಕಂಡು ಬರುತ್ತಿದೆ. ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ಬರುವವರಿಗೆ ಹಾಗೂ ಹೋಗುವವರಿಗೆ ಪ್ರಯಾಣ ಮುಂದೂಡಲು ಸೂಚನೆಯನ್ನು ಡಿಸಿ ನೀಡಿದ್ದಾರೆ.

    ಕೇರಳದಿಂದ ಬರುವಾಗ ಉದ್ಯೋಗಿಗಳು, ವಿದ್ಯಾರ್ಥಿಗಳು ಕೊರೊನಾ ನೆಗೆಟಿವ್ ರಿಪೋರ್ಟ್ ಇರುತ್ತದೆ. ಕರ್ನಾಟಕಕ್ಕೆ ಬಂದ ನಂತರದ ಕೋವಿಡ್ ಖಖಿ-Pಅಖ ವರದಿ ಪಾಸಿಟಿವ್ ಬರುತ್ತಿದೆ. ಉಡುಪಿಯಲ್ಲಿ ಇಂತಹ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ಅಕ್ಟೋಬರ್ ಅಂತ್ಯದ ವರೆಗೂ ಕೇರಳ ಪ್ರಯಾಣ ನಿರ್ಬಂಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದ್ದಾರೆ.

  • ವಿಶ್ವ ವಿಖ್ಯಾತ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ

    ವಿಶ್ವ ವಿಖ್ಯಾತ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ

    ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

    ಕೊರೊನಾ ಹೆಚ್ಚಳವಾಗುವ ಸಂಭವದ ಹಿನ್ನೆಲೆಯಲ್ಲಿ ಕಳೆದ ತಿಂಗಳ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಇನ್ನೂ ಮಳೆಯಾಗಲಿದೆ, ಭೂಮಿ ನಡುಗುತ್ತೆ, ಆಪತ್ತುಗಳು ಕಳೆದಿಲ್ಲ: ಕೋಡಿಶ್ರೀ

    ಮಹಾಮಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮ ಬಹುತೇಕ ನೆಲ ಕಚ್ವಿದೆ. ಸದ್ಯ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಮತ್ತೆ ಚೇತರಿಸಿಕೊಳ್ಳವ ಸಾಧ್ಯತೆ ಇದೆ.