Tag: weight-loss

  • ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್

    ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್

    ಖ್ಯಾತ ರ‍್ಯಾಪರ್, ಗಾಯಕ ಹನಿ ಸಿಂಗ್ (Honey Singh) ಕೇವಲ ಒಂದೇ ತಿಂಗಳಲ್ಲಿ 18 ಕೆ.ಜಿ ತೂಕ ಇಳಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಮೂಲಕ 95 ಕೆ.ಜಿಯಿಂದ 77 ಕೆ.ಜಿಗೆ ಇಳಿದಿದ್ದು ಹೇಗೆ ಎನ್ನೋದು ಕುತೂಹಲ ಮೂಡಿಸಿದೆ.

    ಇತ್ತೀಚಿಗೆ ಹನಿ ಸಿಂಗ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಆಗ ಅಭಿಮಾನಿಗಳು ಆರೋಗ್ಯ ಸರಿಯಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಅವರು ತೂಕ ಇಳಿಸಿಕೊಂಡಿದ್ದಾರೆ ಎಂದಿದ್ದರು. ಸದ್ಯ ಈ ಕುರಿತು ಮಾಹಿತಿಯೊಂದು ಬಹಿರಂಗಗೊಂಡಿದೆ. ಅವರು ಆರೋಗ್ಯವಾಗಿದ್ದು, ವ್ಯಾಯಾಮದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ

    ಇನ್ನೂ ಈ ಕುರಿತು ಹನಿ ಸಿಂಗ್ ಅಭಿಮಾನಿಯೊಬ್ಬರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕಳವಳ ವ್ಯಕ್ತಪಡಿಸಿದ್ದು, ಯಾಕೆ ಅಂತ ಗೊತ್ತಿಲ್ಲ, ಹನಿ ಸಿಂಗ್ ಅವರಿಗೆ ಏನೋ ಆಗಿದೆ. ಕಳೆದ ಎರಡು ವರ್ಷಗಳಿಂದ ಅವರು ತುಂಬಾ ಗ್ಲಾಮರಸ್ ಆಗಿ ಕಾಣುತ್ತಿದ್ದರು, ಆದರೆ ಇತ್ತೀಚಿಗೆ ಅವರು ಹಂಚಿಕೊಂಡಿದ್ದ ಕೆಲವು ಪೋಸ್ಟ್ ಹಾಗೂ ಸ್ಟೋರಿಗಳಲ್ಲಿ ಅವರ ಮೂಗಿಗೆ ಏನೋ ಆಗಿದೆ ಎಂದು ಕಾಣುತ್ತದೆ. ಹನಿ ಸಿಂಗ್ ಪ್ರತಿದಿನ ಜಿಮ್‌ಗೆ ಹೋಗುತ್ತಾರೆ. ಆದರೆ ಅವರು ಮೊದಲಿನಂತಿಲ್ಲ. ಯಾರ ಮುಂದೆಯೂ ಹಂಚಿಕೊಳ್ಳಲು ಸಾಧ್ಯವಾಗದಂತಹದ್ದು ಏನೋ ಅವರ ಜೀವನದಲ್ಲಿ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದಕ್ಕೆ ಹನಿ ಸಿಂಗ್ ಅವರು ಹಾಸ್ಯ ಮಾಡುವಂತೆ ಕುಚ್ ನಹಿ ಹುವಾ (ಏನೂ ಆಗಿಲ್ಲ) ಎಂದು ನಗುವ ಎಮೋಜಿಯೊಂದಿಗೆ ಉತ್ತರಿಸಿದ್ದಾರೆ. ತಮ್ಮ ಫಿಟ್ನೆಸ್ ಅಪ್ಡೇಟ್ ಅನ್ನು ಹಂಚಿಕೊಳ್ಳುತ್ತಾ, ಅವರು ನಾನು ಭವಿಷ್ಯದ ದೃಷ್ಟಿಯಿಂದ ವ್ಯಾಯಾಮ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಹನಿ ಸಿಂಗ್ ತೂಕ ಇಳಿಸಿಕೊಂಡಿದ್ದು ಹೇಗೆ?
    ಇತ್ತೀಚಿಗೆ ಒಂದು ಸಂದರ್ಶನದಲ್ಲಿ ಈ ಕುರಿತು ಹನಿ ಸಿಂಗ್ ಮಾತನಾಡಿದ್ದಾರೆ. ನನ್ನ ಚಯಾಪಚಯ ಕ್ರಿಯೆ ಹೆಚ್ಚಿಸಲು ಹಾಗೂ ತೂಕ ಇಳಿಸಿಕೊಳ್ಳಲು ಹಸಿರು ದ್ರವವೊಂದನ್ನು ಸೇವಿಸುವುದಾಗಿ ತಿಳಿಸಿದ್ದಾರೆ. ಚಯಾಪಚಯ ಕ್ರಿಯೆಯು ಆಹಾರದಿಂದ ಕಾರ್ಬೋಹೈಡ್ರೇಟ್, ಪ್ರೋಟೀನ್ ಮತ್ತು ಕೊಬ್ಬನ್ನು ನಿಮ್ಮ ದೇಹಕ್ಕೆ ಶಕ್ತಿಯನ್ನಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಹೀಗಾಗಿ ಇದು ನಿಮ್ಮ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದಿದ್ದಾರೆ.ಇದನ್ನೂ ಓದಿ: ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ

  • ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?

    ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?

    ಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ತಮಿಳು (Tamil Cinema) ನಟಿ ರಿತಿಕಾ ಸಿಂಗ್ (Actress Rithika Singh) ಮೂರು ತಿಂಗಳ ಸತತ ಪರಿಶ್ರಮದಿಂದ ಬೊಜ್ಜನ್ನು ಕರಗಿಸಿಕೊಂಡು ಬಳುಕೋ ಬಳ್ಳಿಯಂತಹ ಸೊಂಟವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

    ಇನ್ಸ್ಟಾಗ್ರಾಮ್‌ನಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿರುವ ಅವರು, ಬೊಜ್ಜು ಮತ್ತು ತೂಕ ಹೆಚ್ಚಳದಿಂದ ಅನುಭವಿಸಿದ ಸಂಕಟವನ್ನು ಹೊರಹಾಕಿದ್ದಾರೆ. ಪೋಸ್ಟ್‌ನಲ್ಲಿ, ನನಗೆ ತೂಕ ಹೆಚ್ಚಳದಿಂದ ಮೊಣಕಾಲು ತುಂಬಾ ನೋವಿತ್ತು. ನಟನೆ ವೇಳೆ, ಡ್ಯಾನ್ಸ್‌ ಮಾಡುವ ವೇಳೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೆ. ಸಲೀಸಾಗಿ ನಡೆಯಲೂ ಆಗುತ್ತಿರಲಿಲ್ಲ. ಇಷ್ಟೆಲ್ಲ ಆದ ಮೇಲೆ ಕನ್ನಡಿಯ ಮುಂದೆ ನನ್ನನ್ನು ನಾನೇ ನೋಡಿಕೊಂಡು ತೂಕ ಇಳಿಸುವ ನಿರ್ಧಾರಕ್ಕೆ ಬಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

     

    View this post on Instagram

     

    A post shared by Ritika Singh (@ritika_offl)

    ನನ್ನ ಜೀವನಶೈಲಿಯಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಿಕೊಂಡೆ. ಆದರೆ ನನಗೆ ಅಂತಿಮ ಬದಲಾವಣೆ ತಂದುಕೊಟ್ಟಿದ್ದು ಸಣ್ಣ ಸಣ್ಣ ವಿಷಯಗಳು, ಅವು ಅತಿ ದೊಡ್ಡ ಪರಿಣಾಮ ತಂದುಕೊಟ್ಟಿವೆ. ಈ ವಿಚಾರದ ಬಗ್ಗೆ ನಾನು ಹಂಚಿಕೊಳ್ಳಲು ಬಯಸುತ್ತೇನೆ. ಯಾಕೆಂದರೆ ನನ್ನಂತೆ ಸಮಸ್ಯೆ ಅನುಭವಿಸುವವರಿಗೆ ಇದು ಅನುಕೂಲವಾಗಲಿದೆ ಎಂದು ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

    ಬೊಜ್ಜನ್ನು ಕರಗಿಸಲು ವ್ಯಾಯಾಮ ಮಾಡುವ ವೀಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ತೂಕ ಇಳಿದು ಸಪೂರವಾದ ಸೊಂಟವನ್ನು ಅವರು ತೋರಿಸಿ, ಅಭಿಮಾನಿಗಳಿಗೆ, ಬೊಜ್ಜಿನ ಸಮಸ್ಯೆಯಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸ್ಫೂರ್ತಿಯಾಗಿದ್ದಾರೆ.

    ರಿತಿಕಾ ಸಿಂಗ್ ಸುಧಾ ಕೊಂಗರ ನಿರ್ದೇಶನದ ಆದಿಚುಟ್ಟು ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಈ ಚಿತ್ರದ ನಂತರ, ಆಂಡವನ್ ಕತ್ತಲೈ, ಶಿವಲಿಂಗ, ಓ ಮೈ ಕಡವುಲೆ, ಕೊಲೈ, ಕಿಂಗ್ ಆಫ್ ಗೋಟಾ, ಮತ್ತು ಮಾಶಿ ಪಿಡೆಕ್ಕ ಮಾನಿತನ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ರಜನಿಕಾಂತ್ ಅವರ ವೆಟ್ಟೈಯಾನ್‌ನಲ್ಲಿ ಸಹ ಅವರು ಪಾತ್ರ ಗಿಟ್ಟಿಸಿಕೊಂಡಿದ್ದರು. ಇದನ್ನೂ ಓದಿ: ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ?- ಪ್ರಕಾಶ್ ರಾಜ್ ಕೆಂಡ

  • ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಕಾರಿ ಈ ವೆಜಿಟೇಬಲ್ ಸಲಾಡ್..

    ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಹಕಾರಿ ಈ ವೆಜಿಟೇಬಲ್ ಸಲಾಡ್..

    ತೂಕ ಕಳೆದುಕೊಂಡು ಸುಂದರವಾಗಿ ಕಾಣಬೇಕು ಎನ್ನುವುದು ಬಹುತೇಕರ ಕನಸಾಗಿರುತ್ತದೆ. ಆದರೆ ಕೆಲಸದ ಒತ್ತಡದಿಂದ ತೂಕ ಇಳಿಸಿಕೊಳ್ಳುವ ಸಲುವಾಗಿ ವ್ಯಾಯಾಮ ಮಾಡಲು ಅನೇಕರಿಗೆ ಸಮಯ ದೊರೆಯುವುದಿಲ್ಲ. ಕೆಲವರು ಡಯೆಟ್ ಎಂದು ಊಟ-ತಿಂಡಿ ಬಿಡುತ್ತಾರೆ. ಇದರಿಂದ ದೇಹದಲ್ಲಿ ಪೌಷ್ಠಿಕಾಂಶ ಕಡಿಮೆಯಾಗಿ ಅನಾರೋಗ್ಯ ಉಂಟಾಗಬಹುದು. ಇದಕ್ಕೆ ಪರಿಹಾರವಾಗಿ ನಮ್ಮ ಊಟದಲ್ಲಿ ವೆಜಿಟೇಬಲ್ ಸಲಾಡ್‌ನಂತಹ ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ. ಹಾಗಿದ್ದರೆ ಅತ್ಯಂತ ಕಡಿಮೆ ಸಮಯದಲ್ಲಿ ಇದನ್ನು ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ. ಇದನ್ನೂ ಓದಿ: ಡೈರಿ ಫ್ರೀ – ಮೂರೇ ಪದಾರ್ಥ ಬಳಸಿ ಮಾಡಿ ಸಖತ್ ಟೇಸ್ಟಿ ಐಸ್‌ಕ್ರೀಮ್ ವೆಜಿಟೇಬಲ್‌ 

    ಬೇಕಾಗುವ ಸಾಮಾಗ್ರಿಗಳು:
    ಹೆಚ್ಚಿದ ಈರುಳ್ಳಿ- ಅರ್ಧ
    ಹೆಚ್ಚಿದ ಕ್ಯಾರೆಟ್- 1
    ಹೆಚ್ಚಿದ ದೊಣ್ಣೆ ಮೆಣಸು- ಅರ್ಧ ಕಪ್
    ಬೀಜ ತೆಗೆದು ಹೆಚ್ಚಿದ ಟೊಮೆಟೊ- 1
    ಹೆಚ್ಚಿದ ಸೌತೆಕಾಯಿ- ಒಂದು ಕಪ್
    ಹೆಚ್ಚಿದ ಕೋಸುಗೆಡ್ಡೆ- ಅರ್ಧ ಕಪ್
    ಉಪ್ಪು- ರುಚಿಗೆ ತಕ್ಕಷ್ಟು
    ನಿಂಬೆಹಣ್ಣಿನ ರಸ- ಒಂದು ಚಮಚ
    ಆಲಿವ್ ಆಯಿಲ್- ಅಗತ್ಯಕ್ಕೆ ತಕ್ಕಷ್ಟು
    ಹೆಚ್ಚಿದ ಕೊತ್ತಂಬರಿ ಸೊಪ್ಪು- ಸ್ವಲ್ಪ
    ಕರಿಮೆಣಸಿನ ಪುಡಿ- ಸ್ವಲ್ಪ

    ಮಾಡುವ ವಿಧಾನ:

    • ಮೊದಲಿಗೆ ಒಂದು ಬೌಲಿಗೆ ಎಲ್ಲಾ ತರಕಾರಿಗಳನ್ನು ಸಣ್ಣದಾಗಿ ಹೆಚ್ಚಿಕೊಂಡು ಹಾಕಿಕೊಳ್ಳಬೇಕು.
    • ಬಳಿಕ ಅದಕ್ಕೆ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಹಾಕಿ ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
    • ನಂತರ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಮತ್ತು ಸ್ವಲ್ಪ ಕರಿಮೆಣಸಿನ ಪುಡಿಯನ್ನು ಹಾಕಿಕೊಳ್ಳಬೇಕು.
    • ಈಗ ಇದಕ್ಕೆ ಒಂದು ಚಮಚ ನಿಂಬೆ ಹಣ್ಣಿನ ರಸವನ್ನು ಸೇರಿಸಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
    • ನಂತರ ಇದಕ್ಕೆ ಸ್ವಲ್ಪ ಆಲಿವ್ ಆಯಿಲ್ ಸೇರಿಸಿಕೊಂಡು ಮತ್ತೊಮ್ಮೆ ಚನ್ನಾಗಿ ತಿರುವಿಕೊಳ್ಳಿ. ಈಗ ವೆಜಿಟೇಬಲ್ ಸಲಾಡ್ ಸವಿಯಲು ಸಿದ್ಧ.

    ಈ ರೀತಿಯಾದ ಸಲಾಡ್‌ಗಳನ್ನು ಸೇವಿಸುವುದರಿಂದ ತೂಕವನ್ನು ಇಳಿಸಿಕೊಳ್ಳುವುದು ಮಾತ್ರವಲ್ಲದೇ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದನ್ನೂ ಓದಿ: ರೋಜ್ ಟೀ ಮಾಡಿ ಸವಿದು, ರಿಫ್ರೆಶ್ ಆಗಿ

  • ಆಯುರ್ವೇದ ಪಥ್ಯ; 22 ಕೆಜಿ ತೂಕ ಕಡಿಮೆ ಮಾಡಿಕೊಂಡ ಕೇಂದ್ರ ಸಚಿವ

    ಆಯುರ್ವೇದ ಪಥ್ಯ; 22 ಕೆಜಿ ತೂಕ ಕಡಿಮೆ ಮಾಡಿಕೊಂಡ ಕೇಂದ್ರ ಸಚಿವ

    ನವದೆಹಲಿ: ಆಯುರ್ವೇದ ಆಹಾರ ಪಥ್ಯದಿಂದಾಗಿ (Ayurvedic diet) ಕೇಂದ್ರ ಸಚಿವ (Union Minister) ಕೌಶಲ್ ಕಿಶೋರ್ (Kaushal Kishore) ಅವರು 22 ಕೆ.ಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ.

    ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ತೂಕ ಕಡಿಮೆ (Weight Loss) ಮಾಡಿಕೊಂಡಿರುವ ವಿಷಯವನ್ನು ಖುದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಸಚಿವರು ತಮ್ಮ ಮೊದಲ ಹಾಗೂ ನಂತರದ ಫೋಟೋಗಳನ್ನು ಟ್ವೀಟ್ ಮಾಡಿದ್ದು, ತೂಕ ಇಳಿಸಲು 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ಅಖಿಲ ಭಾರತ ಆಯುರ್ವೇದ ಸಂಸ್ಥೆಗೆ ಪ್ರವೇಶ ಪಡೆದೆ. ಅದಾದ ಬಳಿಕ ಸಂಸ್ಥೆಯ ಸೂಚಿಸಿದ ಆಹಾರ ಕ್ರಮವನ್ನು ಅನುಸರಿಸಲು ಪ್ರಾರಂಭಿಸಿದೆ. ಇದರಿಂದಾಗಿ 2021ರ ಮೊದಲು 96 ಕೆಜಿ ಇದ್ದ ನಾನು, ಈಗ 22 ಕೆಜಿ ಕಳೆದುಕೊಂಡು 74 ತೂಕ ಹೊಂದಿದ್ದೇನೆ. ನಾನು ಮೊದಲಿಗಿಂತ ಫಿಟ್ ಆಗಿದ್ದೇನೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಬುರುಡೆ, ಬೊಗಳೆ ಬಿಟ್ಕೊಂಡು ಓಡಾಡಿದವರಿಗೆ ಚಾಮುಂಡೇಶ್ವರಿ ಜನ ಪಾಠ ಕಲಿಸಿದ್ದಾರೆ: ಸಿದ್ದುಗೆ ಸಿಂಹ ತಿರುಗೇಟು

    ಆಯುರ್ವೇದದಿಂದ ತೂಕ ಇಳಿಕೆ: ಪ್ರಾಚೀನ ಭಾರತೀಯ ವಿಜ್ಞಾನದ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು, ಅಧಿಕ ಕಫ ದೋಷದ ಕಾರಣದಿಂದ ಉಂಟಾಗುತ್ತದೆ. ಆದ್ದರಿಂದ ಕೆಲವು ಪಥ್ಯಗಳನ್ನು ಅನುಸರಿಸುವ ದೇಹದ ಬೊಜ್ಜನ್ನು ಕರಗಿಸಬಹುದು. ಆಯುರ್ವೇದ ತಜ್ಞರ ಪ್ರಕಾರ, ಕಫ ದೋಷವಿರುವ ಜನರು ಹಸಿವಿನಿಂದ ಬಳಲಬಾರದು ಬದಲಿಗೆ ಅವರ ದೇಹ ಪ್ರಕಾರ ಮತ್ತು ಅಗತ್ಯಗಳಿಗೆ ಅನುಗುಣವಾಗಿ ತಿನ್ನಬೇಕು. ಇದನ್ನೂ ಓದಿ: ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

  • ಚಾಲೆಂಜ್ ಸೋತ ಗಡ್ಕರಿ – ಎಂಪಿಗೆ ಕೊಡಬೇಕು 32 ಸಾವಿರ ಕೋಟಿ

    ಚಾಲೆಂಜ್ ಸೋತ ಗಡ್ಕರಿ – ಎಂಪಿಗೆ ಕೊಡಬೇಕು 32 ಸಾವಿರ ಕೋಟಿ

    ಭೋಪಾಲ್: ಸವಾಲು ಸೋತ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಮಧ್ಯಪ್ರದೇಶದ ಸಂಸದರಿಗೆ 32 ಸಾವಿರ ಕೋಟಿ ರೂ. ನೀಡಬೇಕಿದೆ.

    ಹೌದು, ನಿತಿನ್ ಗಡ್ಕರಿ ಅವರ ಸವಾಲನ್ನು ಸ್ವೀಕರಿಸಿದ ಸಂದರೊಬ್ಬರು ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವೇ ತಿಂಗಳುಗಳಲ್ಲಿ 32 ಕೆಜಿ ತೂಕವನ್ನು ಇಳಿಸಿಕೊಂಡಿದ್ದಾರೆ.

    ಉಜ್ಜಯಿನಿಯ (Ujjain) ಸಂಸದ ಅನಿಲ್ ಫಿರೋಜಿಯಾ (Anil Firojiya) ಅವರು ಈ ವರ್ಷ ಫೆಬ್ರವರಿ ತಿಂಗಳಿನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಗಡ್ಕರಿಯವರನ್ನು ಭೇಟಿಯಾಗಿದ್ದರು. ಈ ವೇಳೆ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸದರು ಗಡ್ಕರಿ ಅವರಲ್ಲಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಆಗ ಗಡ್ಕರಿಯವರು ನೀವು ನಿಮ್ಮ ತೂಕವನ್ನು ಇಳಿಸಿಕೊಳ್ಳಿ, ನೀವು ಇಳಿಸಿಕೊಳ್ಳುವ ಪ್ರತಿ ಕೆಜಿಗೆ 1,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

    ಗಡ್ಕರಿ ಅವರು ಚಾಲೆಂಜ್ ನೀಡಿದ ಸಮಯ 135 ಕೆಜಿ ಇದ್ದ ಸಂಸದರು, ತಮ್ಮ ಕ್ಷೇತ್ರಕ್ಕಾಗಿ ವರ್ಕೌಟ್, ಡಯಟ್ ಮಾಡಿ ಇದೀಗ 32 ಕೆಜಿ ತೂಕವನ್ನು ಇಳಿಸಿಕೊಂಡಿದ್ದಾರೆ. ಈಗ ಸಂಸದರು 93 ಕೆಜಿ ತೂಗುತ್ತಿದ್ದು ಗಡ್ಕರಿಯವರ ಚಾಲೆಂಜ್ ಗೆದ್ದಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ

    ಫಿರೋಜಿಯಾ ಅವರು ಜೂನ್‌ನಲ್ಲಿಯೇ 15 ಕೆಜಿ ತೂಕವನ್ನು ಇಳಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ ಇಂಡಿಯಾ ಆಂದೋಲನದ ವೇಳೆ ಮಾತನಾಡಿ, ಗಡ್ಕರಿ ನೀಡಿದ ಚಾಲೆಂಜ್ ಬಗ್ಗೆ ತಿಳಿಸಿದ್ದರು. ನಾನು ಕಳೆದುಕೊಳ್ಳುವ ಪ್ರತಿ ಕೆಜಿಗೆ ಗಡ್ಕರಿಯವರು 1,000 ಕೋಟಿ ರೂ. ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ನಾನು ಈಗಾಗಲೇ 15 ಕೆಜಿ ಕಳೆದುಕೊಂಡಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಇನ್ನಷ್ಟು ತೂಕವನ್ನು ಕಳೆದುಕೊಳ್ಳುತ್ತೇನೆ. ನಾನು ತೂಕ ಇಳಿಸಿಕೊಳ್ಳುವುದರಿಂದ ಉಜ್ಜಯಿನಿಗೆ ಹೆಚ್ಚಿನ ಅನುದಾನ ಸಿಗುತ್ತದೆಯಾದರೆ ನಾನು ಫಿಟ್‌ನೆಸ್ ಆಡಳಿತ ಮುಂದುವರೆಸಲು ಸಿದ್ಧ ಎಂದಿದ್ದರು.

    ಫಿರೋಜಿಯಾ ಅವರು ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿ, ತಾವು 32 ಕೆಜಿ ಕಳೆದುಕೊಂಡಿರುವುದರ ಬಗ್ಗೆ ತಿಳಿಸಿದ್ದರು. ಗಡ್ಕರಿ ನೀಡಿರುವ ಭರವಸೆಯಂತೆ ಅವರು 2,300 ಕೋಟಿ ರೂ. ವೆಚ್ಚದ ಪ್ರದೇಶ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಅಪ್ಪನಾಣೆ ಇನ್ನೂ ಐದು ವರ್ಷ ನಾನೇ MLA ಆಗಿರ್ತೀನಿ: ಶ್ರೀನಿವಾಸ್

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಚಿತ್ರಕ್ಕಾಗಿ 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಯಶ್

    ಮುಂದಿನ ಚಿತ್ರಕ್ಕಾಗಿ 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಯಶ್

    ಕೆಜಿಎಫ್ 2 ಸೂಪರ್ ಹಿಟ್ ನಂತರ ಯಶ್ ಕುರಿತು ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಸುದ್ದಿಗಳು ಎಷ್ಟೇ ದೊಡ್ಡದಾಗಿ ಸದ್ದು ಮಾಡಿದರೂ, ಯಶ್ ಆಗಲಿ ಅಥವಾ ಅವರ ಟೀಮ್ ಆಗಲಿ ಯಾವುದನ್ನೂ ಖಚಿತಪಡಿಸುವುದಿಲ್ಲ. ಹಾಗಾಗಿ ಮತ್ತೆ ಮತ್ತೆ ಹೊಸ ಹೊಸ ಸುದ್ದಿಗಳು ಹುಟ್ಟುತ್ತಲೇ ಇವೆ. ಮೊನ್ನೆಯಷ್ಟೇ ಯಶ್ ಬಳಿ ಐದು ಸಿನಿಮಾಗಳಿಗೆ ಎಂದು ಸುದ್ದಿ ಆಗಿತ್ತು. ಶಂಕರ್ ಸೇರಿದಂತೆ ಹಲವು ನಿರ್ದೇಶಕರು ಯಶ್ ಕಾಲ್ ಶೀಟ್ ಗಾಗಿ ಕಾಯುತ್ತಿದ್ದಾರೆ ಎಂದೂ ಹೇಳಲಾಗಿದೆ.

    ಈ ನಡುವೆ ತಮ್ಮ ಪಾಡಿಗೆ ತಾವು ದೇಹವನ್ನು ಉರಿಗೊಳಿಸಿಕೊಳ್ಳುವಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಮುಂದಿನ ಸಿನಿಮಾವನ್ನು ಕನ್ನಡದಲ್ಲೇ ಮಾಡುವುದು ಪಕ್ಕಾ ಆಗಿರುವುದರಿಂದ ಮತ್ತು ಆ ಸಿನಿಮಾವನ್ನು ನರ್ತನ್ ನಿರ್ದೇಶನ ಮಾಡುತ್ತಿರುವುದರಿಂದ ಆ ಚಿತ್ರಕ್ಕಾಗಿ ಯಶ್ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಜಿಮ್ ತರಬೇತುದಾರ ಪಾನಿಪುರಿ ಕಿಟ್ಟ ಅವರ ಗರಡಿಯಲ್ಲಿ ಯಶ್ ದೇಹ ಹುರಿಗೊಳಿಸಿಕೊಳ್ಳುತ್ತಿದ್ದು 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಬಹಿರಂಗವಾಗಿ ಕ್ಷಮೆ ಕೇಳಿದ ಮಲಯಾಳಂ ಖ್ಯಾತ ನಟ ಪೃಥ್ವಿ ಸುಕುಮಾರನ್

    ನರ್ತನ್ ನಿರ್ದೇಶನದ ಸಿನಿಮಾದಲ್ಲಿ ಯಶ್ ಮತ್ತೊಂದು ಬಗೆಯ ಪಾತ್ರವನ್ನು ಮಾಡಬೇಕಾಗಿರುವುದರಿಂದ ಕೆಜಿಎಫ್ ರಾಕಿಭಾಯ್ ತರಹವೇ ಈ ಪಾತ್ರವು ಕಾಣಬಾರದು ಎನ್ನುವ ಉದ್ದೇಶದಿಂದ ತೂಕವನ್ನು ಇಳಿಸಿಕೊಳ್ಳುವ ಕಸರತ್ತಿಗೆ ಕೈ ಹಾಕಿದ್ದಾರಂತೆ ಯಶ್. ಈಗಾಗಲೇ ಹಲವು ದಿನಗಳಿಂದ ಇದೇ ಕೆಲಸದಲ್ಲಿ ಯಶ್ ನಿರತರಾಗಿದ್ದಾರೆ ಎಂದು ಹೇಳುತ್ತಾರೆ ಅವರು ಆಪ್ತರು.

    Live Tv
    [brid partner=56869869 player=32851 video=960834 autoplay=true]

  • ತೂಕ ಇಳಿಸಿಕೊಂಡ `ದಬಾಂಗ್’ ನಟಿ ಸೋನಾಕ್ಷಿ ಸಿನ್ಹಾ

    ತೂಕ ಇಳಿಸಿಕೊಂಡ `ದಬಾಂಗ್’ ನಟಿ ಸೋನಾಕ್ಷಿ ಸಿನ್ಹಾ

    ಬಾಲಿವುಡ್‌ಗೆ ಸಲ್ಮಾನ್ ಖಾನ್ ನಟನೆಯ `ದಬಾಂಗ್’ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಾಕ್ಷಿ ಸಿನ್ಹಾ ಈಗ ತಮ್ಮ ತೂಕದ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ದಬಾಂಗ್ ನಟಿ ಸೋನಾಕ್ಷಿ ತೂಕ ಇಳಿಸಿಕೊಂಡು ಸಖತ್ ಸ್ಲೀಮ್ ಆಗಿ ಕಾಣಿಸಿಕೊಂಡಿದ್ದಾರೆ.

    ಬಿಟೌನ್ ಸ್ಟಾರ್ ಶತ್ರುಘ್ನ ಸಿನ್ಹಾ ಅವರ ಮಗಳು ಸೋನಾಕ್ಷಿ ಈಗಾಗಲೇ ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿದ್ದಾರೆ. ಕೈತುಂಬಾ ಸಿನಿಮಾಗಳು ಸೋನಾಕ್ಷಿ ಕೈಯಲ್ಲಿರಬೇಕಾದರೆ, ಸಿನಿಮಾ ವಿಚಾರ ಬಿಟ್ಟು ಈಗ ತಮ್ಮ ತೂಕದ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ:ಸೌತ್ ಸಿನಿಮಾ ರಂಗಕ್ಕೆ ಅಣ್ಣಾವ್ರ ಮೊಮ್ಮಗಳ ಎಂಟ್ರಿ

    ಚಿತ್ರರಂಗಕ್ಕೆ ಎಂಟ್ರಿ ಕೊಡುವ ವೇಳೆ ನಟಿ ಸೋನಾಕ್ಷಿ 50 ಕೆ.ಜಿ ಇದ್ದರು. ಕೆಲ ಸಮಯದ ಬಳಿಕ 95 ಕೆಜಿ ಆಗಿಬಿಟ್ಟರು. ಇದೀಗ ಸತತ ವರ್ಕೌಟ್ ನಂತರ 65 ಕೆಜಿಗೆ ಇಳಿದಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ಕಾಣಿಸಿಕೊಳ್ಳಲು ದಬಾಂಗ್ ಬ್ಯೂಟಿ ಕಸರತ್ತು ನಡೆಸುತ್ತಿದ್ದಾರೆ. ಸದ್ಯ ಸೋನಾಕ್ಷಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

  • ನೀವು ಚಹಾ ಪ್ರೇಮಿಗಳೇ? ನಿತ್ಯ ಟೀ ಕುಡಿಯೋದ್ರಿಂದ ಏನು ಪ್ರಯೋಜನ ನೋಡಿ!

    ನೀವು ಚಹಾ ಪ್ರೇಮಿಗಳೇ? ನಿತ್ಯ ಟೀ ಕುಡಿಯೋದ್ರಿಂದ ಏನು ಪ್ರಯೋಜನ ನೋಡಿ!

    ಕೆಲವರಿಗೆ ಟೀ ಎಷ್ಟು ರೂಢಿ ಆಗಿರುತ್ತೆ ಎಂದರೆ ಪ್ರತಿನಿತ್ಯ ಒಂದು ಕಪ್ ಟೀ ಕುಡಿದಿಲ್ಲ ಎಂದರೆ ಮೂಡ್‌ ಸರಿಯಿಲ್ಲದ ಅನುಭವ ಆಗುತ್ತದೆ, ಮತ್ತೇ ಕೆಲವರಿಗೆ ತಲೆ ನೋವಿನಂತಹ ಸಮಸ್ಯೆ ಎದುರಾಗುತ್ತದೆ. ಆದರೆ ಪ್ರತಿನಿತ್ಯ ಟೀ ಕುಡಿಯುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಇದರಿಂದಾಗಿ ಚೀನಾ, ಜಪಾನ್‍ನಂತಹ ದೇಶಗಳಲ್ಲಿ ಗ್ರೀನ್ ಟೀ ಹಾಗೂ ಬ್ಲ್ಯಾಕ್ ಟೀಗಳನ್ನು ಜನರು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುತ್ತಾರೆ. ಹೀಗಾಗಿ ಇಲ್ಲಿ ಪ್ರತಿನಿತ್ಯ ಚಹಾವನ್ನು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯೋಣ.

    ತೂಕ ಇಳಿಕೆ: ಟೀಯನ್ನು ಪ್ರತಿನಿತ್ಯ ಕುಡಿಯುವುದರಿಂದ ತೂಕವನ್ನು ಇಳಿಸಲು ಸಹಾಯ ಮಾಡುತ್ತದೆ. ಚಹಾದಲ್ಲಿರುವ ಫ್ಲೇವನಾಯ್ಡ್‌ಗಳು ಚಯಾಪಚಯವನ್ನು ಹೆಚ್ಚಿಸುವುದಿಲ್ಲ. ಜೊತೆಗೆ ಕೊಬ್ಬನ್ನು ಇಳಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಬೇಕೆಂದು ಯೋಚಿಸುವವರಿಗೆ ತಜ್ಞರು ಪ್ರತಿನಿತ್ಯ ಟೀ ಕುಡಿಯಲು ಸಲಹೆ ನೀಡುತ್ತಾರೆ.

    ಕ್ಯಾನ್ಸರ್ ವಿರುದ್ಧ ಹೋರಾಟ: ಬ್ಲ್ಯಾಕ್ ಮತ್ತು ಗ್ರೀನ್ ಟೀಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿನಿತ್ಯ ಟೀ ಸೇವಿಸುವುದರಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳ ಅಪಾಯವನ್ನು ತಡೆಗಟ್ಟುತ್ತದೆ.

    ಮಾನಸಿಕ ಆರೋಗ್ಯ ಸುಧಾರಣೆ: ಆಧುನಿಕ ಜೀವನ ಶೈಲಿಯಿಂದಾಗಿ ಇಂದು ಪ್ರತಿಯೊಬ್ಬರು ಒಂದೆಲ್ಲ ಒಂದು ಒತ್ತಡವನ್ನು ಹೊಂದಿರುತ್ತಾರೆ. ಇಂತಹ ಸಂದರ್ಭದಲ್ಲಿ ಟೀ ಕುಡಿಯುವುದರಿಂದ ಮಾನಸಿಕವಾಗಿ ಸಂತೋಷವಾಗಿರಲು ಸಹಾಯ ಮಾಡುತ್ತದೆ. ಜೊತೆಗೆ ಮಾನಸಿಕ ಒತ್ತಡ, ಆತಂಕ ಮತ್ತು ತಲೆನೋವನ್ನು ನಿವಾರಿಸುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ

    ಜೀರ್ಣಕ್ರಿಯೆಯಲ್ಲಿ ಸುಧಾರಣೆ: ಅತಿಸಾರ, ಮಲಬದ್ಧತೆ, ಹುಣ್ಣು ಮತ್ತು ಹೊಟ್ಟೆಯ ತೊಂದರೆಯಿಂದ ಬಳಲುತ್ತಿರುವವರು ಹೆಚ್ಚಾಗಿ ಗಿಡಮೂಲಿಕೆ ಚಹಾಗಳನ್ನು ಸೇವಿಸಬೇಕು. ಏಕೆಂದರೆ ಚಹಾದಲ್ಲಿರುವ ಔಷಧಿ ಗುಣಗಳು ಕರುಳಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಲವರು ಜೀರ್ಣಕ್ರಿಯೆಗಾಗಿ ಶುಂಠಿ ಮತ್ತು ಪುದೀನಾ ಚಹಾವನ್ನು ಸಹ ಸೇವಿಸುತ್ತಾರೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!

    ಹೃದಯದ ಆರೋಗ್ಯ: ಚಹಾವನ್ನು ಸೇವಿಸುವುದರಿಂದ ಹೃದಯಾಘಾತ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪಾರ್ಶ್ವ ವಾಯು ಸೇರಿದಂತೆ ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.  ಇದನ್ನೂ ಓದಿ: ಮಾವಿನ ಹಣ್ಣು ಎಂದರೆ ಇ‌ಷ್ಟಾನಾ- ಅದರ ಪ್ರಯೋಜನಗಳ ಬಗ್ಗೆ ತಿಳಿದಿದ್ಯಾ?

  • ತಮ್ಮ ವೇಯ್ಟ್‌ ಲಾಸ್ ಜರ್ನಿ ಬಗ್ಗೆ ಹೇಳಿದ ಕಾಶ್ಮೀರಿ ಪಂಡಿತ

    ತಮ್ಮ ವೇಯ್ಟ್‌ ಲಾಸ್ ಜರ್ನಿ ಬಗ್ಗೆ ಹೇಳಿದ ಕಾಶ್ಮೀರಿ ಪಂಡಿತ

    ಬಾಲಿವುಡ್ ನಟ ಅನುಪಮ್ ಖೇರ್ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ತಮ್ಮ ಅದ್ಭುತ ನಟನೆ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದರು. ನಟನೆಗೆ ಸಂಬಂಧಿಸಿದಂತೆ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಸುದ್ದಿಯಾಗಿದ್ದರು. ಆದರೆ ಈಗ ಮತ್ತೆ ಈ ನಟ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ಸಿನಿಮಾ ವಿಚಾರಕ್ಕೆ ಅನುಪಮ್ ಸುದ್ದಿಯಾಗಿಲ್ಲ, ಬದಲಿಗೆ ತಮ್ಮ ವೆಯ್ಟ್ ಲಾಸ್ ಜರ್ನಿ ಬಗ್ಗೆ ಅಭಿಮಾನಿಗಳೊಂದಿಗೆ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

    ಅನುಪಮ್ ಖೇರ್ ಅವರು ತೂಕ ಇಳಿಸಿಕೊಂಡಿದ್ದ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಫ್ಯಾನ್ಸ್‌ಗಳೊಂದಿಗೆ ವೆಯ್ಟ್ ಲಾಸ್ ಜರ್ನಿ ಬಗ್ಗೆ ಬರೆದುಕೊಂಡಿದ್ದಾರೆ. ಖೇರ್ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಎರಡು ಫೋಟೋ ಹಂಚಿಕೊಂಡಿದ್ದಾರೆ. ಈ ಪೊಸ್ಟ್‌ನಲ್ಲಿ, ನಿಮ್ಮ ಆಸೆಗಳು ಗಟ್ಟಿಯಾಗಿರಬೇಕು. ಫಿಟ್ ಆಗಿರುವುದು ಜಿಮ್‍ನಲ್ಲಿ ಡಂಬ್, ಬೆಲ್‍ನೊಂದಿಗೆ ಪ್ರಾರಂಭವಾಗುವುದಿಲ್ಲ. ಇದು ನೀವು ನಿಮ್ಮ ತಲೆಯಲ್ಲಿ ನಿರ್ಧಾರ ಮಾಡುವುದರಿಂದ ಪ್ರಾರಂಭವಾಗುತ್ತದೆ. ಆ ನಿರ್ಧಾರವನ್ನು ತೆಗೆದುಕೊಳ್ಳಲು ಇಂದು ಒಳ್ಳೆಯ ದಿನ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ದಲಿತರ ಓಲೈಕೆಗಾಗಿ SC, ST ಸಮಾವೇಶ ಮಾಡಿದ ರೇಣುಕಾಚಾರ್ಯ – ಮಹಿಳೆಯರೊಂದಿಗೆ ಸಖತ್ ಸ್ಟೆಪ್

     

    View this post on Instagram

     

    A post shared by Anupam Kher (@anupampkher)

    ಈ ಫೋಟೋ ನೋಡಿದ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕಾಮೆಂಟ್ ವಿಭಾಗದಲ್ಲಿ, ನಮಗೂ ಸಲಹೆ ಕೊಡಿ ಎಂದು ಹೇಳಿದ್ದಾರೆ. ಈ ವಯಸ್ಸಿನಲ್ಲಿ, ಇದು ನಿಜಕ್ಕೂ ಸಾಧನೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ನಟನೆಯಲ್ಲಿ ಖೇರ್ ಅವರನ್ನು ಪ್ರಶಂಸಿಸಲಾಗಿತ್ತು. ಭಯೋತ್ಪಾದಕರ ಬೆದರಿಕೆಯಿಂದಾಗಿ ಕಾಶ್ಮೀರದಿಂದ ಪಲಾಯನ ಮಾಡಲು ಬಲವಂತವಾಗಿ ಕಾಶ್ಮೀರಿ ಪಂಡಿತರ ಪಾತ್ರವನ್ನು ಖೇರ್ ಮಾಡಿದ್ದರು. ಇದನ್ನೂ ಓದಿ: ಮೈತುಂಬಾ ಟ್ಯಾಟೂ ಹಾಕಿಸಿಕೊಂಡು, ಅಭಿಮಾನಿಗಳಿಗೆ ಮಾತ್ರ ಟ್ಯಾಟೂ ಹಾಕಿಸಿಕೊಳ್ಳಬೇಡಿ ಎಂದ ಸಮಂತಾ

  • ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    ಡೀ ದಿನ ಕುಳಿತೇ ಕೆಲಸ ಮಾಡುವುದರಿಂದ ಬೊಜ್ಜು ಬಂದು, ತೂಕದಲ್ಲಿ ಹೆಚ್ಚಾಗಿ ಆರೋಗ್ಯದಲ್ಲೂ ಅನೇಕ ವ್ಯತ್ಯಾಸ ಕಾಣುತ್ತೇವೆ. ಕೆಲವೊಬ್ಬರಿಗೆ ಈ ದೇಹ ತೂಕ ಮುಜುಗರ ಉಂಟು ಮಾಡುತ್ತವೆ. ಇದರಿಂದಾಗಿ ಇದನ್ನು ಕಡಿಮೆ ಮಾಡಿಕೊಳ್ಳಲು ನಾನಾ ರೀತಿಯ ಪ್ರಯತ್ನವನ್ನು ಮಾಡುತ್ತಾರೆ. ಆದರೆ ತೂಕ ಇಳಿಸಲು ಹೋಗಿ ಪೋಷಕಾಂಶ ಕೊರತೆಯಿಂದ ಅನೇಕ ರೋಗಗಳಿಗೆ ನಾಂದಿಯಾಗುತ್ತದೆ. ಆದರೆ ಮನೆಯಲ್ಲೇ ಸುಲಭವಾಗಿ ಕೆಲವು ಆರೋಗ್ಯಪೂರ್ಣವಾದ ಆಹಾರವನ್ನು ಸೇವಿಸುವ ಮೂಲಕ ನಿಮ್ಮ ತೂಕದಲ್ಲಿ ಗಣನೀಯ ಇಳಿಕೆಯನ್ನು ಕಾಣಬಹುದು.

    ಸೋಂಪು: ಸೋಂಪು ಚಯಾಪಚಯಗಳು ಹೆಚ್ಚಿಸುವುದರ ಜೊತೆಗೆ ಜೀರ್ಣಕ್ರಿಯೆಗೂ ಸಹಾಯ ಮಾಡುತ್ತದೆ. ಜೊತೆಗೆ ಹೊಟ್ಟೆ ಉಬ್ಬುವಿಕೆ ಸಮಸ್ಯೆ ಇದ್ದವರಿಗೆ ಇದು ರಾಮಬಾಣವಾಗಿದೆ. ಇಷ್ಟೇ ಅಲ್ಲದೇ ತೂವನ್ನು ಅತೀ ವೇಗವಾಗಿ ಕಡಿಮೆಗೊಳಿಸಲು ಇದು ಸಹಾಯ ಮಾಡುತ್ತದೆ. ಪ್ರತಿನಿತ್ಯ ಒಂದು ಚಮಚ ಸೋಂಪನ್ನು ನೀರಿನಲ್ಲಿ ರಾತ್ರಿ ನೆನೆಸಬೇಕು. ಬೆಳಗ್ಗೆ ಆ ಮಿಶ್ರಣವನ್ನು ಕುದಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.

    ಗ್ರೀನ್ ಟೀ: ನೀವು ಸಾಮಾನ್ಯವಾಗಿ ಕುಡಿಯುವ ಚಹಾ ಬದಲಿಗೆ ಗ್ರೀನ್ ಟೀಯನ್ನು ಕುಡಿಯುವುದನ್ನು ರೂಢಿಸಿಕೊಳ್ಳಿ. ಪ್ರತಿನಿತ್ಯ ಗ್ರೀನ್ ಟೀ ಕುಡಿಯುವುದರಿಂದ ಗಣನೀಯವಾಗಿ ತೂಕವನ್ನು ಇಳಿಸಬಹುದು. ಕೊಬ್ಬನಾಂಶವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು

    ಲೆಮನ್ ವಾಟರ್: ತೂಕ ಇಳಿಕೆಗೆ ನಿಂಬೆ ಹಣ್ಣು ಸಹಾಯಕವಾಗಿದ್ದು, ನಿಂಬೆ ಹಣ್ಣಿನಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗುಣವು ದೇಹದಲ್ಲಿರುವ ವಿಷವನ್ನು ತೆಗೆದುಹಾಕಲು ಸಹಾಯಕವಾಗಿದೆ. ಜೊತೆಗೆ ಇದು ದೇಹಕ್ಕೆ ಆಕಾರವನ್ನು ತರುತ್ತದೆ. ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಉಗುರು ಬೆಚ್ಚನೆ ನೀರಿಗೆ ನಿಂಬೆ ರಸ ಹಾಕುವ ಮೂಲಕ ಕುಡಿಯಿರಿ. ಆಗ ನಿಮ್ಮ ತೂಕದಲ್ಲಿ ವ್ಯತ್ಯಾಸ ಕಾಣಬಹುದು. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

    ತರಕಾರಿ ಜ್ಯೂಸ್: ಡಯಟ್ ಮಾಡುವವರಿಗೆ ತರಕಾರಿ ಜ್ಯೂಸ್‍ಗಳನ್ನು ಹೆಚ್ಚು ಕುಡಿಯಲು ಜಿಮ್ ಟ್ರೇನರ್‍ಗಳು ಸಲಹೆ ನೀಡುತ್ತಾರೆ. ಇದರಲ್ಲಿ ಪೋಷಕಾಂಶಗಳು ಹೇರಳವಾಗಿರುತ್ತದೆ. ಕ್ಯಾರೆಟ್, ಬೀಟ್ರೂಟ್, ಹಾಗಲಕಾಯಿಯಂತಹ ತರಕಾರಿ ರಸವು ಪೌಷ್ಟಿಕಾಂಶವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

    ಬ್ಲ್ಯಾಕ್ ಕಾಫಿ: ಬ್ಲ್ಯಾಕ್ ಕಾಫಿಯನ್ನು ಸೇವಿಸುವುದದರಿಂದ ಎನರ್ಜಿಯನ್ನು ಹೆಚ್ಚಿಸುತ್ತದೆ. ನೀವು ವರ್ಕೌಟ್‍ಗಳನ್ನು ಮುಗಿಸಿದ ನಂತರ ಬ್ಲ್ಯಾಕ್ ಕಾಫಿಯನ್ನು ಕುಡಿದರೆ ಒಳ್ಳೆಯದು. ಇದರಿಂದ ಗಣನೀಯವಾಗಿ ತೂಕ ಇಳಿಕೆಯಾಗುತ್ತದೆ.