ಪಾಟ್ನಾ: ಚುನಾವಣಾ ತಂತ್ರಜ್ಞ, ರಾಜಕಾರಣಿ ಪ್ರಶಾಂತ್ ಕಿಶೋರ್ (Prashant Kishor) ಅವರ ಹೆಸರು ಬಿಹಾರ ಹಾಗೂ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳಲ್ಲಿ ಕಂಡು ಬಂದಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಹಾರ ಚುನಾವಣೆ (Bihar Election) ಹೊತ್ತಲ್ಲೇ ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ.
ಜನ್ ಸೂರಜ್ ಪಕ್ಷದ ಮೂಲಕ ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆ ಅಖಾಡದಲ್ಲಿ ಪ್ರಶಾಂತ್ ಕಿಶೋರ್ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ಭಾರೀ ಪ್ರಚಾರದ ಭರದಲ್ಲಿರುವ ಅವರಿಗೆ ಈ ಸುದ್ದಿ ಆಘಾತ ಮೂಡಿಸಿದೆ.ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
ಅಧಿಕೃತ ದಾಖಲೆಗಳ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಪಶ್ಚಿಮ ಬಂಗಾಳದ (West Bengal) ಮತದಾರರ ಪಟ್ಟಿಯಲ್ಲಿದೆ. 121, ಕಾಲಿಘಾಟ್ ರಸ್ತೆ ವಿಳಾಸದಲ್ಲಿ ನೋಂದಣಿಯಾಗಿದ್ದು, ಇದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಚೇರಿಯ ವಿಳಾಸವಾಗಿದೆ. ಈ ಕ್ಷೇತ್ರವು ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಯ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು.
ಮತ್ತೊಂದು ಕಡೆ ಬಿಹಾರದ (Bihar) ರೋಹ್ತಾಸ್ ಜಿಲ್ಲೆಯ ಸಸಾರಾಮ್ ಸಂಸದೀಯ ಕ್ಷೇತ್ರದ ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಕಿಶೋರ್ ಅವರ ಹೆಸರು ನೋಂದಾಯಿಸಲಾಗಿದೆ. ಅಲ್ಲಿ ಅವರ ಮತಗಟ್ಟೆ ಕೋನಾರ್‌ನ ಮಧ್ಯ ವಿದ್ಯಾಲಯದಲ್ಲಿದೆ.
ಈ ಬಗ್ಗೆ ಮಾತನಾಡಿದ ಚುನಾವಣಾ ಅಧಿಕಾರಿಯೊಬ್ಬರು, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ, ಯಾವುದೇ ವ್ಯಕ್ತಿಯನ್ನು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ನೋಂದಾಯಿಸಲು ಸಾಧ್ಯವಿಲ್ಲ. ಸೆಕ್ಷನ್ 18ರ ಅಡಿಯಲ್ಲಿ, ಒಂದೇ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಎರಡು ಬಾರಿ ನೋಂದಾಯಿಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತದಾರರು ತಮ್ಮ ಮನೆಯನ್ನು ಬದಲಾಯಿಸಿದ ನಂತರ ತಮ್ಮ ಹೆಸರುಗಳನ್ನು ವರ್ಗಾಯಿಸಲು ಫಾರ್ಮ್ 8 ಅನ್ನು ಭರ್ತಿ ಮಾಡಬೇಕಾಗುತ್ತದೆ. ಮತದಾರರ ಪಟ್ಟಿಗಳಲ್ಲಿ ನಕಲು ಮಾಡುವುದು ಸಾಮಾನ್ಯ ಸಮಸ್ಯೆ ಎಂದು ಚುನಾವಣಾ ಆಯೋಗ ಒಪ್ಪಿಕೊಂಡಿದೆ. ಇದಕ್ಕಾಗಿಯೇ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ವಿಜಯ್ TVK ಕಾರ್ಯಕ್ರಮ| #GetOutModi, #GetOutStalin ಫಲಕಕ್ಕೆ ಸಹಿ ಹಾಕದ ಪ್ರಶಾಂತ್ ಕಿಶೋರ್

















