Tag: Western Ghats

  • ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

    ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

    ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ (Western Ghats) ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

    ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟ ತಾಳಿಕೊಳ್ಳುವ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

    ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ 60%ರಷ್ಟು ಅರಣ್ಯ ಪ್ರದೇಶ ಇದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿರುವ ಈಶ್ವರ ಖಂಡ್ರೆ ಪಶ್ಚಿಮ ಘಟ್ಟದ ಪ್ರಾಮುಖ್ಯತೆ, ಸಂರಕ್ಷಣೆಯ ಮನವರಿಕೆ ಮಾಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

  • ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ (Chandra Drona) ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದ್ದು, ಡ್ರೋನ್‌ಗಳ ಮೊರೆ ಹೋಗಿದ್ದಾರೆ.

    ಮುಳ್ಳಯ್ಯನಗಿರಿ, ದತ್ತಪೀಠದ ಗುಡ್ಡಗಳಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾಡನ್ನ ರಕ್ಷಿಸಲು ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಖರ್ಜೂರದೊಳಗೆ ಇಟ್ಟು ಸಾಗಿಸುತ್ತಿದ್ದ 172 ಗ್ರಾಂ ಚಿನ್ನ ಏರ್‌ಪೋರ್ಟ್‌ನಲ್ಲಿ ವಶಕ್ಕೆ

    ನಿತ್ಯ ಸಾವಿರಾರು ಜನ ಪ್ರವಾಸಿಗರು ಬಂದು ಹೋಗುವ ಪಶ್ಚಿಮ ಘಟ್ಟಗಳ ತಪ್ಪಲುಗಳಲ್ಲಿ ಡ್ರೋನ್ ಕಣ್ಗಾವಲಿನಿಂದ ಬೆಂಕಿ ಹಾಕುವವರು ಸ್ಥಳಿಯರೋ, ಪ್ರವಾಸಿಗರೋ ಅಥವಾ ನಿಜಕ್ಕೂ ಕಾಡ್ಗಿಚ್ಚೋ ಎಂಬುದನ್ನು ಗುರುತಿಸಲು ಸಹಕಾರಿಯಾಗುತ್ತದೆ. ಇದರಿಂದ ನಿತ್ಯ ಸುಟ್ಟು ಕರಕಲಾಗ್ತಿರೋ ಕಾಡಿನ ರಕ್ಷಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗದ ಕಡೆ ಅಧಿಕಾರಿಗಳೇ ಸೊಪ್ಪಿನಿಂದ ಕಾಡನ್ನ ರಕ್ಷಿಸಬೇಕು. ಇದೀಗ ಸ್ಥಳಿಯರು ಹಾಗೂ ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಡಲು ಅರಣ್ಯಾಧಿಕಾರಿಗಳು ಡ್ರೋನ್ ಮೊರೆ ಹೋಗಿದ್ದಾರೆ.

    ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು. ಇದನ್ನೂ ಓದಿ: ಆಹಾರ ಪ್ರಿಯರಿಗೆ ಶಾಕ್‌ – ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

  • ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ

    ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ

    ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ (Karnataka Govt) ಮತ್ತೊಂದು ಸೆಸ್ ಶಾಕ್ ಕೊಟ್ಟಿದೆ. ಪಶ್ಚಿಮ ಘಟ್ಟದ ನದಿ ನೀರು ಪೂರೈಕೆಯಾಗೋ ನಗರಗಳ ಜನರಿಗೆ ಸೆಸ್ ಶಾಕ್ ಕೊಡಲು ಸರ್ಕಾರ ಮುಂದಾಗಿದೆ.

    ಪಶ್ಚಿಮಘಟ್ಟ (Western ghats) ಸಂರಕ್ಷಣೆಗೆ ʻಕಾಪುನಿಧಿʼ ಸಂಗ್ರಹ ಗುರಿ ಹೊಂದಿದ್ದು, ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ (Green Cess) ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು

    ಪ್ರಕಟಣೆಯಲ್ಲಿ ಏನಿದೆ?
    ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ.

    ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪನೆ ಸರ್ಕಾರ ಚಿಂತನೆ ನಡೆಸಿದೆ. ಇದನ್ನೂ ಓದಿ: ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್‌ ಶಾ

    ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು. ಜೊತೆಗೆ ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ನೀರಿನ ಬಿಲ್ ಜೊತೆಯಲ್ಲಿ ಬಳಕೆದಾರರು 2 ಅಥವಾ 3 ರೂ. ಪಾವತಿಸಬೇಕು. ಈ ಹೆಚ್ಚುವರಿ ಹಣವನ್ನು ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟದ ಮಹತ್ವದ ಅರಿವು ಮೂಡಿಸಲು ಬಳಕೆ ಮಾಡಲಾಗುತ್ತದೆ. ಹೀಗೆ ಸಂಗ್ರಹವಾಗುವ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗುವುದಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

  • ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು

    ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು

    – (ಚಿತ್ರ ಕೃಪೆ: ಗೋಪಿಜೋಲಿ)

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಾಗದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ನ.1 ರ ವರೆಗೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಬೀಳುವ ಸೂಚನೆ ನೀಡಿದ್ದು, ಮಂಜು ಮುಸುಕಿದ ವಾತಾವರಣ ಹಾಗೂ ಚಳಿ ಬೀಳುವ ಸೂಚನೆ ನೀಡಿದೆ.

    ಹೌದು, ಕಳೆದ ಮೂರ್ನಾಲ್ಕು ದಿನದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಗಾಗ ಮಳೆ ಸುರಿದರೆ ಮುಂಜಾನೆ ಮತ್ತು ಸಂಜೆ ವೇಳೆ ದಟ್ಟ ಮಂಜು ಆವರಿಸುವ ಮೂಲಕ ಕರಾವಳಿಯನ್ನು ಕಾಶ್ಮೀರದ ಸೊಬಗಿಗೆ ವಾತಾವರಣ ಬದಲಿಸಿದೆ.

    ಕರಾವಳಿಯ ಕಾಶ್ಮೀರ ಎಂದು ಉತ್ತರ ಕನ್ನಡ ಜಿಲ್ಲೆಗೆ ಪರ್ಯಾಯ ಹೆಸರುಂಟು. ಈ ಹೆಸರಿಗೆ ತಕ್ಕಂತೆ ಇದೀಗ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಸೇರಿದಂತೆ ಕರಾವಳಿ ಭಾಗದಲ್ಲಿ ಮಂಜಿನ ವಾತಾವರಣ ಸೃಷ್ಟಿಯಾಗಿದ್ದು, ಕುಮಟಾದ ಗೋಪಿ ಅವರ ಕ್ಯಾಮೆರಾ ಕಣ್ಣಲ್ಲಿ ಸುಂದರ ದೃಶ್ಯಗಳು ಸೆರೆಯಾಗಿವೆ.

  • ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ (Western Ghats) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ (Kasturi Rangan Report) ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು ಕೊಡಗಿನ ಭೂಕುಸಿತ (Kodagu LandSlide) ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?

    ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದ್ದು, ಕೂಡಲೇ ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

    ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ: ವಚನಾನಂದ ಸ್ವಾಮೀಜಿ

    ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.

     

  • ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

    ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

    ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದಾಗ ನಾನು “ಪಶ್ಚಿಮ ಘಟ್ಟದಲ್ಲಿ (Western Ghats) ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ’’ ಎಂದು ಹೇಳಿದ್ದೆನೇಯೇ ಹೊರತು “ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ” ಎಂದು ಹೇಳಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಆ ಕಾರ್ಯಕ್ರಮದಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ (Kasturirangan  Report) ಕುರಿತಂತೆ ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು, ಈ ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ಆ ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ (Stake holders) ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.

    ಕಸ್ತೂರಿ ರಂಗನ್ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಇಂದಿಗೆ ಅದು ಪ್ರಸ್ತುತವೇ ಎಂಬ ವಾದವೂ ಇದೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿದರೆ ಜೀವನ, ಜೀವನೋಪಾಯಕ್ಕೆ ತೊಂದರೆ ಆಗುತ್ತದೆ ಎಂಬ ಭೀತಿಯೂ ಆ ಭಾಗದ ಜನರಲ್ಲಿದೆ. ಹೀಗಾಗಿ ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸರ್ಕಾರ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿ – ಉಡುಪಿಯ ಪಾದಬೆಟ್ಟುವಿನಲ್ಲಿ ವಿಶೇಷ ಹೋಮ

    ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ (Red category) ಕೈಗಾರಿಕೆಗಳು ನಡೆಯಬಾರದು, ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕದಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು ಎಂದು ತಿಳಿಸಿದ್ದಾರೆ.

    ಕಸ್ತೂರಿ ರಂಗನ್ ವರದಿಯಲ್ಲಿ ಹಲವು ಸಡಿಲಿಕೆಗೂ ಸಂಜಯ್ ಕುಮಾರ್ ಸಮಿತಿ ಸಮ್ಮತಿಸುತ್ತಿದೆ. ವಿಶ್ವದ ಜೀವವೈವಿಧ್ಯತೆಯ 8 ಅದ್ಭುತ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟ ಉಳಿಸುವ ಜವಬ್ದಾರಿಯೂ ನಮ್ಮ ಮೇಲಿದೆ. ಆದರೆ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿರುವ ರೀತಿ ತಾವು ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ಮಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

    ಪಶ್ಚಿಮಘಟ್ಟ ಮತ್ತು ಅಲ್ಲಿನ ಸಸ್ಯ ಸಂಕುಲ ಮತ್ತು ಪ್ರಾಣಿ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದ, ತಮ್ಮ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ಕೆಲವು ಮಾಧ್ಯಮಗಳಲ್ಲಿ ಮಾತ್ರ ಈ ರೀತಿ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಬೀದರ್ ನಲ್ಲಿ ನಿನ್ನೆ ನಡೆದ ಪತ್ರಿಕಾ ದಿನಾಚರಣೆಯಲ್ಲೂ ತಾವು ಸ್ಪಷ್ಟೀಕರಣ ನೀಡಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂಬರುವ ದಿನಗಳಲ್ಲಿ ಮಾನವ ರಹಿತ ರೈಲು ಗೇಟುಗಳ ನಿರ್ಮಾಣ: ಕಟೀಲ್

    ಮುಂಬರುವ ದಿನಗಳಲ್ಲಿ ಮಾನವ ರಹಿತ ರೈಲು ಗೇಟುಗಳ ನಿರ್ಮಾಣ: ಕಟೀಲ್

    ಮಂಗಳೂರು: ಮುಂಬರುವ ದಿನಗಳಲ್ಲಿ ಮಾನವ ರಹಿತ ರೈಲು ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.

    ಮಂಗಳೂರು ರೈಲು ನಿಲ್ದಾಣದ ಜಂಕ್ಷನ್ ನಲ್ಲಿ ಯಶವಂತಪುರ- ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್ ಅವರು, ರೈಲ್ವೆ ಕ್ರಾಸ್ ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರ್ಕಾರವು ಯೋಚಿಸಿ, ಈಗಾಗಲೇ ಯೋಜನೆಯನ್ನು ರೂಪಿಸಿದೆ, ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ. ರೈಲ್ವೆ ಇಲಾಖೆಯು, ದಕ್ಷಿಣ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ, 2014ರಿಂದ ಕೆಲವು ಯೋಜನೆಗಳು ಹೆಚ್ಚು ವೇಗ ಪಡೆದಿವೆ, ಮುಖ್ಯವಾಗಿ ರೈಲಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ, ಅದರಂತೆಯೇ ಹೆಚ್ಚಿನ ಅನುದಾನವನ್ನು ಸಹ ನೀಡಲಾಗುತ್ತದೆ, ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 13.5 ಕೋಟಿ ಹಾಗೂ ಮಂಗಳೂರು ಜಂಕ್ಷನ್ ಗೆ 1.2 ಕೋಟಿ ರೂ.ಗಳು ಸೇರಿದಂತೆ ಒಟ್ಟು 15 ಕೋಟಿ ರೂ.ಗಳಲ್ಲಿ ಕೈಗೊಳ್ಳಲಾದ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ, ಅದರೊಂದಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲೂ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಅದಕ್ಕೆ ಒತ್ತಾಸೆಯಾಗಿದ್ದಾರೆ ಎಂದು ಹೇಳಿದರು.

    ಮಂಗಳೂರು – ವಿಜಯಪುರ ರೈಲು ಸಮಯದಲ್ಲಿ ಬದಲಾವಣೆ ಆಗಬೇಕು, ಅದು ಮಂಗಳೂರು ಸೆಂಟ್ರಲ್ ನಿಂದ ಸಂಚರಿಸಬೇಕು, ಹಗಲಿನಲ್ಲಿ ಸಂಚರಿಸುವ ಗೊಮ್ಮಟೇಶ್ವರ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ 8.15ರ ಬದಲಾಗಿ 9.30ಕ್ಕೆ ಹೊರಡಬೇಕು, ವಾರದ 7 ದಿನ ಸಂಚರಿಸಬೇಕು ಎನ್ನುವ ಬೇಡಿಕೆ ಪ್ರಯಾಣಿಕರದ್ದಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ

    ಪ್ರವಾಸೋದ್ಯಮಕ್ಕೆ ಮತ್ತಷ್ಟು ಪುಷ್ಠಿ ನೀಡಲು ಪ್ರಯಾಣಿಕರಿಗೆ ಪಶ್ಚಿಮಘಟ್ಟದ ಬೆಟ್ಟಗುಡ್ಡಗಳು, ಝರಿ, ತೊರೆಗಳು ಸೇರಿದಂತೆ ಪ್ರಕೃತಿಯ ರಮಣೀಯ ಸೊಬಗನ್ನು ವೀಕ್ಷಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆಯಿಂದ ವಿಸ್ಟಾಡೋಮ್ ಬೋಗಿಗಳ ರೈಲು ಪ್ರಯಾಣಕ್ಕೆ ಇಂದು ಚಾಲನೆ ನೀಡಲಾಗಿದೆ, ಪ್ರತಿ ಬೋಗಿಯಲ್ಲಿ ಒಟ್ಟು 44 ಆಸನಗಳಿವೆ, ಈ ಬೋಗಿಯಲ್ಲಿ ಫೋಟೋಗ್ರಫಿಗೆ ಪ್ರತ್ಯೇಕ, ವಿಕಲಚೇತನರ ಅನುಕೂಲಕ್ಕೆ ಪ್ರತ್ಯೇಕ ಸ್ಥಳಾವಕಾಶ ಸೇರಿದಂತೆ ಮೆಟ್ರೋ ರೈಲಿನಲ್ಲಿ ಸಂಚರಿಸಿದ ಅನುಭವವಾಗಲಿದೆ. ಅತಿ ದೊಡ್ಡ ಗಾಜಿನ ಕಿಟಕಿಗಳಿಂದಾಗಿ ರೈಲು ಪ್ರಯಾಣಿಕರು ಪ್ರಾಕೃತಿಕ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ರೈಲ್ವೆ ಇಲಾಖೆಯ ಡಿಆರ್ ಎಂ ತ್ರಿಲೋಕ್ ಕೊಠಾರಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ

    ವಿಸ್ಟಾಡೋಮ್ ಬೋಗಿಗಳ ರೈಲಿಗೆ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ

    – ರೈಲಿನ ವಿಶೇಷತೆ ಏನು..?

    ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್‍ರವರು ರೈಲಿಗೆ ಹಸಿರು ನಿಶಾನೆ ತೋರಿದರು.

    ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ಈ ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯಾಗಿದೆ. ಹಗಲಿನಲ್ಲಿ ಸಂಚರಿಸುತ್ತಾ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಈ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಿದ್ಧವಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ರೈಲು ಸಂಚರಿಸಲಿದ್ದು, ಪ್ರಯಾಣದ ಸಂದರ್ಭದ ರಮಣೀಯ ಪ್ರಾಕೃತಿಕ ಸೊಬಗನ್ನು ಸವಿಯಲು ರಚಿಸಲಾಗಿರುವ ವಿಸ್ಟಾಡೋಮ್ ವಿಂಡೋಸ್ ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ರಾಜಕೀಯ ಕ್ಷೇತ್ರದಲ್ಲಿರುವ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ: ಕಟೀಲ್

    ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಜೊತೆಗೆ ಕೋಚ್‍ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇದೆ. ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯ ಸವಿಯಲು ಈ ರೈಲು ಪ್ರಯಾಣಿಕರನ್ನು ಕೈಬೀಸಿ ಕರೆಯುತ್ತಿದೆ.

    ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿ.ಆರ್ ಎಂ ಕೊಠಾರಿ, ಕಾರ್ಪೋರೇಟರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಪಶ್ಚಿಮಘಟ್ಟಗಳು ಉಗ್ರರ ತಾಣವಾಗುತ್ತಿವೆ- ಶಾಸಕ ಬೋಪಯ್ಯ ಆತಂಕ

    ಪಶ್ಚಿಮಘಟ್ಟಗಳು ಉಗ್ರರ ತಾಣವಾಗುತ್ತಿವೆ- ಶಾಸಕ ಬೋಪಯ್ಯ ಆತಂಕ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉಗ್ರ ಚಟುವಟಿಕೆಗಳು ಸಕ್ರಿಯವಾಗಿದ್ದು, ದಕ್ಷಿಣ ಭಾರತವನ್ನು ಕೇಂದ್ರೀಕರಿಸಿ ಉಗ್ರರು ಪಶ್ಚಿಮಘಟ್ಟಗಳಲ್ಲಿ ತಂಗುತ್ತಿದ್ದಾರೆ ಎಂದು ಶಾಸಕ ಕೆ.ಜಿ.ಬೋಪಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಹಿಂದೆಯೇ ಉಗ್ರರ ಚಟುವಟಿಕೆ ಕುರಿತು ಸುಳಿವಿತ್ತು. ದಕ್ಷಿಣ ಭಾರತದ ಹಲವೆಡೆ ದಾಳಿ ನಡೆಸುವ ಸಂಚು ರೂಪಿಸಿದ್ದರು. ಆದರೆ ಈಗ ಎನ್‍ಐಎ ಅದನ್ನು ಸ್ಪಷ್ಟಪಡಿಸಿದೆ. ಹಿಂದೆಯೂ ಅಬ್ದುಲ್ ಮದನಿ ಎಂಬ ಉಗ್ರ ಕೊಡಗಿನ ಹೊಸ ತೋಟದಲ್ಲಿ ನೆಲೆಸಿದ್ದ. ಇದೆಲ್ಲವೂ ಪಶ್ಚಿಮಘಟ್ಟ ಉಗ್ರರ ತಾಣವಾಗುತ್ತಿದೆ ಎಂಬುದು ಸ್ಪಷ್ಟ. ಎನ್‍ಐಎ ಕೂಡಲೆ ಕಾರ್ಯಪ್ರವೃತ್ತರಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಕೊಡಗಿನ ಕಾಫಿ ಬೆಳೆಗಾರರು ಅಸ್ಸಾಂ ಕಾರ್ಮಿಕರನ್ನು ಕರೆತರುತಿದ್ದಾರೆ. ಅಸ್ಸಾಂ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾ ದೇಶಿಗರು ಕೊಡಗಿನಲ್ಲಿ ನೆಲೆಸುತಿದ್ದಾರೆ. ಅಸ್ಸಾಂ ಕಾರ್ಮಿಕರನ್ನು ವಿಳಾಸ ಸಹಿತ ದಾಖಲಿಸಿಕೊಳ್ಳಬೇಕು. ಆದರೆ ಪೊಲೀಸ್ ಠಾಣೆಗಳಲ್ಲಿ ಆ ಕೆಲಸ ಆಗುತ್ತಿಲ್ಲ. ಪ್ರವಾಸಿಗರ ರೂಪದಲ್ಲಿ ಜಿಲ್ಲೆಗೆ ಯಾರೆಲ್ಲಾ ಬರುತ್ತಿದ್ದಾರೆ ಎಂಬುದನ್ನು ಅರಿಯಲು ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಅಗತ್ಯವಿದೆ ಎಂದು ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

  • ಉತ್ತರ ಕನ್ನಡದಲ್ಲಿ ಅಪರೂಪದ ಕಳಿಂಗ ಕಪ್ಪೆ ಪತ್ತೆ

    ಉತ್ತರ ಕನ್ನಡದಲ್ಲಿ ಅಪರೂಪದ ಕಳಿಂಗ ಕಪ್ಪೆ ಪತ್ತೆ

    ಕಾರವಾರ: ಭಾರತದ ಪೂರ್ವ ಘಟ್ಟದಲ್ಲಿ ಮಾತ್ರ ಕಾಣಸಿಗುತ್ತದೆಂದು ನಂಬಲಾಗಿದ್ದ ಕಳಿಂಗ ಕಪ್ಪೆ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಪತ್ತೆಯಾಗಿದೆ. ಸಾರ್ವಜನಿಕರು ಆಶ್ಚರ್ಯಗೊಂಡಿದ್ದಾರೆ.

    ಜೀವ ವೈವಿಧ್ಯ ಸಂಶೋಧಕ ಶಿರಸಿ ತಾಲೂಕಿನ ವರ್ಗಾಸರದ ಅಮಿತ ಹೆಗಡೆ ಹಾಗೂ ತಂಡ ಈ ಪತ್ತೆ ಕಾರ್ಯ ನಡೆಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ‘ಸಂತಾನೋತ್ಪತ್ತಿ ನಡವಳಿಕೆ ಮತ್ತು ಜೀವ ಸಂವಹನ ಪ್ರಯೋಗಾಲಯದ ಪ್ರಾಣಿಶಾಸ್ತ್ರ ವಿಭಾಗ’ದಲ್ಲಿ ಪಿ.ಎಚ್‍ಡಿ ಅಧ್ಯಯನ ನಡೆಸುತ್ತಿರುವ ಇವರು, ಪ್ರೊ.ಗಿರೀಶ ಕಾಡದೇವರು ಅವರ ಮಾರ್ಗದರ್ಶನದಲ್ಲಿ ಹಾಗೂ ಪುಣೆಯ ಝೂವಾಲಾಜಿಕಲ್ ಸರ್ವೆ ಆಫ್ ಇಂಡಿಯಾದ (ZSI) ವಿಜ್ಞಾನಿ ಕೆ.ಪಿ.ದಿನೇಶ್ ಅವರ ಸಹಯೋಗದಲ್ಲಿ ಈ ಕಪ್ಪೆ ಪತ್ತೆ ಹಚ್ಚಿದ್ದಾರೆ.

    ಶಿರಸಿಯ ಭಾಗದಲ್ಲಿ ಈ ವಿಶಿಷ್ಟ ತಳಿಯ ಕಪ್ಪೆ ಪತ್ತೆಯಾಗಿದ್ದು, ‘ಜೀವವೈವಿಧ್ಯ-ಸಮೃದ್ಧ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತದೆ, ಈ ಸಂಶೋಧನೆಯು ಕೇವಲ ಒಂದು ಶ್ರೇಣಿಯ ವಿಸ್ತರಣೆಯಲ್ಲ. ರೂಪವಿಜ್ಞಾನದಲ್ಲಿ ಸಂಪೂರ್ಣವಾಗಿ ಭಿನ್ನವಾಗಿ ಕಾಣುವಂತಹ ಶೋಧ ಕಾರ್ಯವಾಗಿದೆ. ಈ ಕಪ್ಪೆಯನ್ನು ಪೃಥ್ವಿ ನೇತೃತ್ವದ ಸಂಶೋಧಕರ ತಂಡದಿಂದ 2018ರಲ್ಲಿ ಪೂರ್ವ ಘಟ್ಟದ ಉತ್ತರ ಭಾಗವಾದ ಓರಿಸ್ಸಾ ಹಾಗೂ ಆಂಧ್ರ ಪ್ರದೇಶದಲ್ಲಿ ಪತ್ತೆ ಮಾಡಲಾಗಿತ್ತು. ಇದು ಪೂರ್ವ ಘಟ್ಟದಲ್ಲಿ ಮಾತ್ರ ಕಂಡುಬರವ ಪ್ರಭೇದ ಎಂಬ ನಂಬಿಕೆ ಈ ವರೆಗೆ ಇತ್ತು. ಅಚ್ಚರಿ ಎಂಬಂತೆ ಈ ಕಳಿಂಗ ಜಾತಿಯ ಕಪ್ಪೆ ಇದೇ ಮೊದಲ ಬಾರಿಗೆ ಪಶ್ಚಿಮ ಘಟ್ಟದಲ್ಲಿ ಕಂಡುಬಂದಿರುವುದು ವಿಸ್ಮಯ ಮೂಡಿಸಿದೆ ಎಂದು ಸಂಶೋಧನೆ ನಡೆಸಿದ ಅಮಿತ ಹೆಗಡೆ ತಿಳಿಸಿದ್ದಾರೆ.

    ಪಶ್ಚಿಮ ಘಟ್ಟದಲ್ಲಿ ಕಂಡುಬಂದ ಕಳಿಂಗ ಕಪ್ಪೆ ಕೇವಲ ಶ್ರೇಣಿ ವಿಸ್ತರಣೆಯ ಸಂಶೋಧನೆಯಲ್ಲ, ಬದಲಾಗಿ ತನ್ನ ದೇಹ ವಿನ್ಯಾಸದಲ್ಲಿ ಸಂಪೂರ್ಣ ಭಿನ್ನವಾಗಿ ಕಂಡುಬರುವ ವ್ಯವಂಶಿಕವಾಗಿ ಪೂರ್ವ ಘಟ್ಟದ ಕಳಿಂಗ ಜಾತಿಯ ಕಪ್ಪೆಯಾಗಿದೆ. ಈ ದೊಡ್ಡ ಗಾತ್ರದ ಕ್ರಿಕೆಟ್ ಕಪ್ಪೆ ಹೆಚ್ಚಿನ ಫಿನೋಟೈಪಿಕ್ ಪ್ಲಾಸ್ಟಿಟಿಯನ್ನು (Morphological Phenotypic Plasticity) ತೋರಿಸುತ್ತದೆ. ಅಂದರೆ ವ್ಯವಂಶಿಕವಾಗಿ ಒಂದೇ ಜಾತಿಯ ಕಪ್ಪೆಗಳು ನೋಡಲು ಬೇರೆ ಪ್ರಕಾರವಾಗಿ ಕಂಡುಬರುತ್ತವೆ.

    ಈ ಸಂಶೋಧನೆಯಲ್ಲಿ ಪೂರ್ವ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಕಂಡು ಬರುವ ಕಳಿಂಗ ಕಪ್ಪೆಗಳು ಅನುವಂಶಿಕವಾಗಿ ಒಂದೇ ಆಗಿದ್ದು, ನೋಡಲು ರೂಪ ವಿಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳ್ಳನ್ನು ತೋರಿಸುತ್ತಿವೆ. Morphological Phenotypic Plasticity (MPP) ಎಂದರೆ ನೈಸರ್ಗಿಕ ಪರಿಸರದ ವ್ಯತ್ಯಾಸಗಳು ಅಥವಾ ಪ್ರಚೋದಕಗಳಿಗೆ ಪ್ರತಿಕ್ರಿಯೆಯಾಗಿ ತೀವ್ರವಾದ ರೂಪವಿಜ್ಞಾನದ ದೇಹ ವ್ಯತ್ಯಾಸಗಳನ್ನು ತೋರಿಸುವ ಜೀವಿ ಸಾಮರ್ಥ್ಯವಾಗಿದೆ.

    ಪಶ್ಚಿಮ ಘಟ್ಟದಲ್ಲಿ ನಾನು ಹಲವು ಬಾರಿ ಈ ಕಪ್ಪೆಯನ್ನು ಕಂಡಿದ್ದೇನೆ. ಇದು ಪಶ್ಚಿಮ ಘಟ್ಟದಿಂದ ತಿಳಿದಿರುವ ಫೆಜೆವರಾಯ, ಮಿನರ್ವರಿಯಾ ಪ್ರಭೇದಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. 21 ನೇ ಶತಮಾನದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯದಲ್ಲಿ ಅನೇಕ ಜೀವವೈವಿಧ್ಯಗಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಆದಾಗ್ಯೂ ಪ್ರಸ್ತುತ ನಮ್ಮ ದೇಶದಲ್ಲಿ ಹೊಸ ಪ್ರಭೇದಗಳು ಇತ್ತೀಚೆಗಷ್ಟೇ ಬೆಳಕಿಗೆ ಬರುತ್ತಿವೆ. ಈ ಹೊಸ ಅನ್ವೇಷಣೆ ಸಕಾರಾತ್ಮಕವಾಗಿದೆ. ಆದರೆ ಹೊಸ ಜಾತಿಗಳು, ಪ್ರಭೇದಗಳು ಹೇಗೆ ವರ್ತಿಸುತ್ತವೆ, ಅವುಗಳ ಸ್ವಭಾವಗಳೇನು ಅಥವಾ ವಿಭಿನ್ನ ಜೈವಿಕ ಭೌಗೋಳಿಕ ಶ್ರೇಣಿಗಳಿಗೆ ಹೇಗೆ ಹೊಂದಿಕೊಳ್ಳುತ್ತವೆ ಎಂಬುದರ ಬಗ್ಗೆ ಇನ್ನೂ ಹೆಚ್ಚು ತಿಳಿದಿಲ್ಲ. ಇವುಗಳ ಬಗ್ಗೆ ಕಡಿಮೆ ತಿಳಿದಷ್ಟೂ ಅವುಗಳನ್ನು ಸಂರಕ್ಷಿಸುವುದು ಕಷ್ಟ ಎಂದು ಅಮಿತ್ ತಿಳಿಸಿದ್ದಾರೆ.

    ಕ್ರಿಕೆಟ್ ಕಪ್ಪೆ ಕುಲದೊಳಗಿನ ಜೀವಿವರ್ಗೀಕರಣದ ಅಸ್ಪಷ್ಟತೆಯ ಬಗ್ಗೆ ಹಾಗೂ ಸಂಕೀರ್ಣತೆಯ ಬಗ್ಗೆ ನಾವು ಪ್ರಕಟಿಸಿದ ಸಂಶೋಧನಾ ಪ್ರಬಂಧ ಹೆಚ್ಚಿನ ಸಂಖ್ಯೆಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಲ್ಲಿಯವರೆಗೆ ಹೆಚ್ಚಿನ ಪ್ರಭೇದಗಳು ಅವುಗಳನ್ನು ಪತ್ತೆ ಮಾಡಿದ ಪ್ರದೇಶದಿಂದ ಮಾತ್ರ ತಿಳಿದು ಬಂದಿದೆ ಮತ್ತು ಹಳೆಯ ಪ್ರಕಾರದ ಹೆಚ್ಚಿನ ಮಾದರಿಗಳು ಕಳೆದುಹೋಗಿವೆ. ಈ ಸಮಸ್ಯೆಯನ್ನು ಅಥವಾ ಅನಿಶ್ಚಿತತೆಯನ್ನು ಪರಿಹರಿಸಲು ಇವುಗಳ ಬಗ್ಗೆ ಹೆಚ್ಚು ಗಮನಹರಿಸುವ ತುರ್ತು ಅವಶ್ಯಕತೆಯಿದೆ. ಈಶಾನ್ಯ ಭಾರತ ಮತ್ತು ಪಶ್ಚಿಮ ಘಟ್ಟಗಳು ಜೀವವೈವಿಧ್ಯತೆಯಿಂದ ಸಮೃದ್ಧವಾಗಿವೆ. ಈ ಪ್ರದೇಶಗಳನ್ನು ಜೀವವೈವಿಧ್ಯತೆಯ ತಾಣಗಳೆಂದು ಪರಿಗಣಿಸಲಾಗುತ್ತದೆ. ಈ ಸಂಶೋಧನೆಯು ಅಂತರರಾಷ್ಟ್ರೀಯ ಖ್ಯಾತಿಯ ಪ್ರತಿಷ್ಠಿತ ‘ಝೂಟ್ಯಾಕ್ಸಾ` ಎಂಬ ಜರ್ನಲ್‍ನಲ್ಲಿ ಪುರಾವೆಯೊಂದಿಗೆ ಪ್ರಕಟಗೊಂಡಿದೆ ಎಂದು ಸಂಶೋಧಕ ಅಮಿತ ಹೆಗಡೆ ವಿವರಿಸಿದ್ದಾರೆ.