Tag: White Mountain

  • ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ

    ಆಹಾರ ಅರಸಿ ನಾಡಿಗೆ ಬಂದ ಆನೆ ವಿದ್ಯುತ್ ಶಾಕಿಗೆ ಬಲಿ

    ಚಾಮರಾಜನಗರ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಶಾಕಿಗೆ ಬಲಿಯಾಗಿರುವ ಘಟನೆ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗೌಡಹಳ್ಳಿ ಗ್ರಾಮದ ಮಹಾದೇವಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಆನೆ ಮೃತಪಟ್ಟಿದೆ. ಮಹಾದೇವಪ್ಪ 3 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಸೋಲಾರ್ ಬೇಲಿ ಅಳವಡಿಸಿದ್ದಾರೆ. ಪಕ್ಕದಲ್ಲೇ ಹಾದು ಹೋಗಿದ್ದ ವೈರ್ ತುಂಡಾಗಿ ಸೋಲಾರ್ ತಂತಿ ಮೇಲೆ ಬಿದ್ದಿದ್ದು, ಆಹಾರ ಅರಸಿ ಬಂದಿದ್ದ ಕಾಡಾನೆ ಸೋಲಾರ್ ಬೇಲಿ ಮುಟ್ಟಿದ್ದೇ ತಡ ವಿದ್ಯುತ್ ಶಾಕಿಗೆ ಪ್ರಾಣಬಿಟ್ಟಿದೆ.

    ಆನೆ ಸಾವಿಗೆ ಕೆಇಬಿ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ರೈತರು ಆರೋಪಿಸಿದ್ದು, ರೈತ ಮಹಾದೇವಪ್ಪ ವಿರುದ್ಧ ಎಫ್‍ಐಆರ್ ಏನಾದರೂ ದಾಖಲಿಸಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ಇದನ್ನೂ ಓದಿ:  ದುಡಿದ ಹಣವನ್ನ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಮುಡಿಪಾಗಿಟ್ಟ ಆಟೋ ಚಾಲಕ

    ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೆಸ್ಕ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನ ಆಗ್ರಹಿಸಿದ್ದಾರೆ.