Tag: White Topping

  • ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

    – 1,700 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಯೋಜನೆ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು (Brand Bengaluru) ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

    ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್‌ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್‌ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

    ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದರು. ಇದನ್ನೂ ಓದಿ: IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

    ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ: ಕೊತ್ತೂರು ಮಂಜುನಾಥ್

    ಇದರ ಜೊತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    ಈ ಯೋಜನೆಗೆ ಮೀಸಲಿಟ್ಟಿರುವ 1,700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂಎಸ್‌ಎಸ್‌ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

    ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ

    ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

  • ವೈಟ್ ಟಾಪಿಂಗ್ ಕಾಮಗಾರಿ- ಜೆಸಿ ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತ

    ವೈಟ್ ಟಾಪಿಂಗ್ ಕಾಮಗಾರಿ- ಜೆಸಿ ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತ

    ಬೆಂಗಳೂರು: ವೈಟ್ ಟಾಪಿಂಗ್ (White Topping) ಕಾಮಗಾರಿ ಹಿನ್ನೆಲೆ ಜೆ.ಸಿ. ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

    ನ.7 ರಿಂದ ಡಿ.8 ವರೆಗೆ ಒಂದು ತಿಂಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇಂದಿನಿಂದ ಬಿಬಿಎಂಪಿ (BBMP) ವತಿಯಿಂದ ಜೆ.ಸಿ. ರಸ್ತೆಯ ನಾಲಾ ಜಂಕ್ಷನ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ ಕಾಮಗಾರಿ ನಡೆಯಲಿದೆ. ಈ ಕಾರಣ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಆಗಿದೆ. ಪರ್ಯಾಯ ರಸ್ತೆಗಳನ್ನ ಬಳಸುವಂತೆ ಸಂಚಾರ ಪೊಲೀಸರ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಲೋಕಾಯುಕ್ತ ಬಳಿಕ ಇ.ಡಿ ವಿಚಾರಣೆ ಭೀತಿ ಶುರು

    ಹೊಸೂರು ರಸ್ತೆಯಿಂದ ಜೆಸಿ ರಸ್ತೆ ಮುಖಾಂತರ ಮೆಜೆಸ್ಟಿಕ್‌ಗೆ (Mejestic) ಹೋಗಬಹುದು. ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು ಲಾಲ್‌ಬಾಗ್ ಮುಖ್ಯದ್ವಾರದ ಬಳಿ ಬಲ ತಿರುವು ಪಡೆದು, ಕೆ.ಹೆಚ್ ರಸ್ತೆ, ಶಾಂತಿನಗರ, ರಿಚ್ಚಂಡ್, ಆರ್‌ಆರ್‌ಎಂಆರ್ ರಸ್ತೆ, ಜಂಕ್ಷನ್ ತಲುಪಬಹುದು. ಸೌತ್ ಎಂಡ್ ಸರ್ಕಲ್‌ನಿಂದ ಜೆಸಿ ರಸ್ತೆ ಮುಖಾಂತರ ಮೆಜೆಸ್ಟಿಕ್, ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು ಮಿನರ್ವ ಸರ್ಕಲ್ ಬಳಿ ಎಡ ತಿರುವು ಪಡೆದು, ಲಾಲ್‌ಬಾಗ್ ಪೋರ್ಟ್ ರಸ್ತೆ, ಕೆ.ಆರ್ ರಸ್ತೆ ಮುಖಾಂತರ ಸಂಪರ್ಕ ಪಡೆಯಬಹುದು. ಇದನ್ನೂ ಓದಿ: Hubballi| ಜನವಸತಿ ಪ್ರದೇಶದಲ್ಲಿ ಬಾರ್ ಆರಂಭ- ಸ್ಥಳೀಯರಿಂದ ತೀವ್ರ ಪ್ರತಿಭಟನೆ

  • ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.

    ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ

    ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.

    ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.

    ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024

  • ಸಿಲಿಕಾನ್ ಸಿಟಿಯಲ್ಲಿ ಡೆಡ್‌ಲೈನ್ ಅಂತ್ಯ ಕಂಡರೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ

    ಸಿಲಿಕಾನ್ ಸಿಟಿಯಲ್ಲಿ ಡೆಡ್‌ಲೈನ್ ಅಂತ್ಯ ಕಂಡರೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ

    ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಳಕ್ಕೆ ಡೆಡ್‌ಲೈನ್ ಮುಗಿದಿದ್ದರೂ ವೈಟ್ ಟಾಪಿಂಗ್ (White Topping) ಕಾಮಗಾರಿ ಮುಕ್ತಾಯ ಆಗುತ್ತಿಲ್ಲ ಎಂದು ಸೌರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವೈಟ್ ಟಾಪಿಂಗ್ ಕಾಮಗಾರಿ ತಡ ಆಗುವುದಕ್ಕೆ ಪೊಲೀಸ್ ಇಲಾಖೆ, ಬೆಸ್ಕಾಂ (BESCOM), ಜಲಮಂಡಳಿ (BWSSB) ಮೇಲೆ ಬಿಬಿಎಂಪಿಯವರು (BBMP) ಗೂಬೆ ಕೂರಿಸುತ್ತಿದ್ದಾರೆ. ಈ ಕಾಮಗಾರಿ ತಡ ಆಗುವುದಕ್ಕೆ ಸಾರ್ವಜನಿಕರ ಸಮಸ್ಯೆ ಆಗುತ್ತಿದೆ. ಈ ಹಿನ್ನೆಲೆ ಇಲಾಖೆಗಳ ಜೊತೆ ಸಮನ್ವಯ ಸಾಧಿಸಲು ಮನೀಷ್ ಮೌದ್ಗಿಲ್ (Manish Mudgal) ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ಮುಂದಿನ ವಾರದಲ್ಲಿ ಮತ್ತೆ ಏಳು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಲಿದೆ.ಇದನ್ನೂ ಓದಿ: ಪ್ರಪಂಚದಾದ್ಯಂತ ಈ ವರ್ಷ ಡೆಂಗ್ಯೂ ಪ್ರಕರಣ ಹೆಚ್ಚಳ – ಕಾರಣವೇನು? 

    ಒಟ್ಟು 90ಕ್ಕೂ ಹೆಚ್ಚು ರಸ್ತೆಗಳಲ್ಲಿ ಬಿಬಿಎಂಪಿ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಮುಂದಾಗಿದೆ. ಈಗಾಗಲೇ ಚಿಕ್ಕಪೇಟೆ, ರಾಜ್‌ಕುಮಾರ್ ರಸ್ತೆ ಸೇರಿದಂತೆ ಹಲವು ಕಡೆ ವೈಟ್ ಟಾಪಿಂಗ್ ಆರಂಭ ಮಾಡಿ 100 ದಿನ ಕಳೆದರೂ ಕಾಮಗಾರಿ ಮುಕ್ತಾಯ ಆಗಿಲ್ಲ. ನೀಡಿದ್ದ ಕಾಲಾವಕಾಶ ಮುಗಿದರೂ ಇನ್ನು ಕಾಮಗಾರಿ ಕೆಲಸ ಮುಗಿದಿಲ್ಲ. ಇದರಿಂದಾಗಿ ಚಿಕ್ಕಪೇಟೆಯಲ್ಲಿ ಟ್ರಾಫಿಕ್ ಸಮಸ್ಯೆ, ವ್ಯಾಪಾರಕ್ಕೆ ಸಮಸ್ಯೆ, ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ.

    ಬಿಬಿಎಂಪಿ ಮುಖ್ಯ ಮಾತನಾಡಿ, ಆಯುಕ್ತರು ವೈಟ್ ಟಾಪಿಂಗ್ ಕಾಮಗಾರಿ ತಡ ಆಗುವುದಕ್ಕೆ ಪೊಲೀಸ್ ಇಲಾಖೆ, ಜಲಮಂಡಳಿ ಹಾಗೂ ಬೆಸ್ಕಾಂ ಕಾರಣ ಎಂದು ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಬದಲಿ ಮಾರ್ಗ ನೀಡಲ್ಲ, ಜಲಮಂಡಳಿ ಪೈಪ್ ಮಾಹಿತಿ ನೀಡಲ್ಲ ಈ ಕಾರಣದಿಂದಾಗಿ ತಡ ಆಗುತ್ತಿದೆ. ಇಲಾಖೆಗಳ ಜೊತೆ ಸಮನ್ವಯ ಸಾದಿಸಲು ಬಿಬಿಎಂಪಿ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ.

    ಹೆಣ್ಣೂರು ಜಂಕ್ಷನ್, ತುಮಕೂರು ರಸ್ತೆಯ (Tumkuru Road) ಎಂಇಎ ಮುಖ್ಯ ರಸ್ತೆ, ರಾಜ್‌ಕುಮಾರ್ ರಸ್ತೆಯ (Rajkumar Road) ಒಳಭಾಗದ ರಸ್ತೆಗಳು, ಮಹಾದೇವಪುರ, ಪಶ್ಚಿಮ ವಲಯದ ಹಲವು ಪ್ರದೇಶದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭ ಆಗಲಿದ್ದು, ಟ್ರಾಫಿಕ್ ಸಮಸ್ಯೆ ಆಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಒಟ್ಟಾರೆ ವೈಟ್ ಟಾಪಿಂಗ್ ರಸ್ತೆ ಮಾಡುವುದು ಒಳ್ಳೆಯದೇ ಆದರೆ ಕೊಟ್ಟಿರುವ ಸಮಯದ ಒಳಗಡೆ ಮುಗಿಸಬೇಕು. ಇಲ್ಲದೇ ಇದ್ದರೆ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಈಗಾಗಿ ಡೆಡ್‌ಲೈನ್ (DeadLine) ಒಳಗಡೆ ವೈಟ್ ಟಾಪಿಂಗ್ ಕಾಮಗಾರಿ ಮುಗಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿ ಮಾಡಿಕೊಡುತ್ತಾರಾ ಎನ್ನುವುದು ಕಾದು ನೋಡಬೇಕಿದೆ.ಇದನ್ನೂ ಓದಿ: ಇರಾನ್‌ನಿಂದ ಕ್ಷಿಪಣಿ ದಾಳಿ – ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು, ಟರ್ಕಿಯಲ್ಲಿ ಲ್ಯಾಂಡಿಂಗ್‌

  • ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿ (BBMP) ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ ಮಾಡಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಈಗಾಗಲೇ ಎಂಜಿನಿಯರ್‌ಗಳ ಜೊತೆ ಸಭೆ ಮಾಡಿದ್ದು, ಭೂಮಿ ಪೂಜೆ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

    ನಗರದಲ್ಲಿ ವೈಟ್ ಟಾಪಿಂಗ್ (White Topping) ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಜಲಮಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್‌ಗಳ ಬದಲಾವಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: PublicTV Explainer: ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಜರ್ ಡೆಂಗ್ಯೂ’

    ಬೆಂಗಳೂರು ಪಶ್ಚಿಮ ವಲಯ, ಪೂರ್ವ ವಲಯ, ದಕ್ಷಿಣ ವಲಯ, ರಾಜರಾಜೇಶ್ವರಿ ನಗರ ವಲಯ ಸೇರಿದಂತೆ ಇನ್ನೂ ಕೆಲವು ವಲಯದ 43 ರಸ್ತೆಗಳನ್ನು ಗುರುತು ಮಾಡಿದ್ದು, ವೈಟ್ ಟಾಪಿಂಗ್ ಮಾಡಲು ತಯಾರಿ ನಡೆದಿದೆ. ಈ ವರ್ಷ ಅಥವಾ ಮುಂದಿನ ವರ್ಷದ ಒಳಗೆ ಕಾಮಗಾರಿ ಮುಕ್ತಾಯ ಆಗಲಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ವೈಟ್ ಟಾಪಿಂಗ್ ಕಾಮಗಾರಿ ನಡೆಯೋ ರಸ್ತೆಗಳು:
    ನಾಗಾವರ ಮೈನ್ ರೋಡ್ ಟು ಶಾಂಪುರ್ ರೋಡ್ ಜಂಕ್ಷನ್
    ವೆಸ್ಟಾಫ್ ಕಾರ್ಡ್ ಜಂಕ್ಷನ್ ಟು ವಿಜಯನಗರ ಟಿಟಿಎಂಸಿ
    ಮಲ್ಲೇಶ್ವರಂ 18 ಮುಖ್ಯ ರಸ್ತೆ ಟು ಚಿತ್ತಾಪುರ ಮಠ ಸರ್ಕಲ್
    ಜಕ್ಕೂರು ರೋಡ್
    100 ಫಿಟ್ ರಿಂಗ್ ರೋಡ್ ಜಾಲಹಳ್ಳಿ ಕ್ರಾಸ್ ಟು – ಟಿವಿಎಸ್ ಕ್ರಾಸ್
    ಸಿಬಿಐ ರೋಡ್ ಫ್ರಮ್ ಬಳ್ಳಾರಿ ಟು ಆರ್‌ಟಿ ನಗರ ಮೈನ್ ರೋಡ್
    ರೇಸ್ ಕೋರ್ಸ್ ರೋಡ್ ಜಂಕ್ಷನ್ ಟು ಮೌರ್ಯ ಸರ್ಕಲ್ ರೋಡ್
    ಓಲ್ಡ್ ಪೋಸ್ಟ್ ಆಫೀಸ್ ರೋಡ್ ಟು ಸಿಟಿ ಸಿವಿಲ್ ಕೋರ್ಟ್ ಟು ಮೈಸೂರು ಬ್ಯಾಂಕ್ ಸರ್ಕಲ್
    ಮಹಾತ್ಮ ಗಾಂಧಿ ರೋಡ್ ಟು ಮಹಾತ್ಮ ಗಾಂಧಿ ಸರ್ಕಲ್ ಟ್ರಿನಿಟಿ ರೋಡ್
    ರೆಸಿಡೆನ್ಸಿ ರೋಡ್ ಟು ರಿಚ್ಮಂಡ್ ಎಂಜಿ ರೋಡ್

    ವೈಟ್ ಟಾಪಿಂಗ್ ಮಾಡುತ್ತೇವೆ ಎಂದು ಬಿಬಿಎಂಪಿ ಸಿದ್ಧತೆ ಮಾಡಿಕೊಂಡರೆ ಇನ್ನೊಂದೆಡೆ ಟ್ರಾಫಿಕ್ ಸಮಸ್ಯೆ ಕೂಡ ಆಗಲಿದೆ. ಜೊತೆಗೆ ಕಾಮಗಾರಿ ಆರಂಭ ಮಾಡಿದರೆ ಟ್ರಾಫಿಕ್ ಡೈವರ್ಶನ್ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

  • ಮೆಜೆಸ್ಟಿಕ್‌ ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್‌

    ಮೆಜೆಸ್ಟಿಕ್‌ ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್‌

    ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಶಾಂತಲಾ ಸರ್ಕಲ್(Shantala Circle) ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ (Sangolli Rayanna)  ರಸ್ತೆ ಒಂದು ತಿಂಗಳು ಬಂದ್ ಆಗಲಿದೆ.

    ವೈಟ್ ಟ್ಯಾಪಿಂಗ್(White Topping) ಕಾಮಗಾರಿ ಶನಿವಾರದಿಂದ ಆರಂಭವಾಗಲಿರುವ ಹಿನ್ನೆಲೆ ಒಂದು ತಿಂಗಳು ಸಂಚಾರ ಬಂದ್ ಆಗಲಿದೆ.  ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ – ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ


    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ((BBMP) ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ನಗರದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.

    ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.

    Live Tv
    [brid partner=56869869 player=32851 video=960834 autoplay=true]