Tag: Wife

  • ಲವ್ವರ್ ಮಾತು ಕೇಳಿ ಪತಿ ಮೊಬೈಲ್‍ನಿಂದ ಬೆದರಿಕೆ ಮೆಸೇಜ್ ಕಳಿಸಿ ಸಿಕ್ಕಿಬಿದ್ದ ಪತ್ನಿ!

    ಲವ್ವರ್ ಮಾತು ಕೇಳಿ ಪತಿ ಮೊಬೈಲ್‍ನಿಂದ ಬೆದರಿಕೆ ಮೆಸೇಜ್ ಕಳಿಸಿ ಸಿಕ್ಕಿಬಿದ್ದ ಪತ್ನಿ!

    ಆನೇಕಲ್: ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳವು ಬೆದರಿಕೆ ಮೆಸೇಜ್ (Message) ಕಳುಹಿಸುವಷ್ಟರ ಮಟ್ಟಕ್ಕೆ ಬೆಳೆದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ (Anekal) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಪ್ರಕರಣದ ಹಿನ್ನೆಲೆ: ಆನೇಕಲ್‍ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ (Uttara Karnataka) ಮೂಲದ ಕಿರಣ್ ಮತ್ತು ವಿದ್ಯಾರಾಣಿ ದಂಪತಿ ವಾಸವಿದ್ದರು. ಈ ನಡುವೆ ವಿದ್ಯಾರಾಣಿಗೆ ಸೋಷಿಯಲ್ ಮೀಡಿಯಾ ಅಪ್ ಮೂಲಕ ರಾಮ್‍ಪ್ರಸಾದ್ ಅನ್ನೋ ವ್ಯಕ್ತಿಯ ಪರಿಚಯವಾಗುತ್ತೆ. ಅಂತೆಯೇ ರಾಮ್‍ಪ್ರಸಾದ್ ಜೊತೆ ವಿದ್ಯಾರಾಣಿ ನಿರಂತರ ಚ್ಯಾಟಿಂಗ್ ಮಾಡುತ್ತಿದ್ದಳು.

    ಈ ವಿಚಾರ ಪತಿ ಕಿರಣ್‍ಗೆ ಗೊತ್ತಾಗಿ ಮೊಬೈಲ್ ಹೊಡೆದು ಹಾಕಿದ್ದ. ಇದನ್ನು ಬೇರೆ ನಂಬರ್ ಮೂಲಕ ರಾಮ್‍ಪ್ರಸಾದ್‍ಗೆ ವಿದ್ಯಾರಾಣಿ ತಿಳಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಪ್ರಿಯಕರ ರಾಮ್ ಪ್ರಸಾದ್, ವಿದ್ಯಾರಾಣಿ ಗಂಡನಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿದ್ದ. ಅಂತೆಯೇ ನಾನು ಕಳುಹಿಸುವ ಮೆಸೇಜ್‍ನ ಗಂಡನ ನಂಬರ್‍ನಿಂದ ಫಾರ್ವರ್ಡ್ ಮಾಡು ಅಂತ ಸೂಚನೆ ಕೊಟ್ಟಿದ್ದನು.  ಇದನ್ನೂ ಓದಿ: ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

    ಡಿಸೆಂಬರ್ 5ರಂದು ಆರ್‍ಡಿಎಕ್ಸ್ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕುವ ಮೆಸೇಜ್ ಅನ್ನು ಕಿರಣ್ ನಂಬರ್‍ನಿಂದ ತನಿಖಾ ಸಂಸ್ಥೆಗಳಿಗೆ ರವಾನಿಸುವಂತೆ ಹೇಳುತ್ತಾನೆ. ಪ್ರಿಯಕರನ ಮಾತನ್ನು ನಂಬಿದ ವಿದ್ಯಾರಾಣಿ ಖುದ್ದು ಪೊಲೀಸ್ ಮತ್ತು ಕೇಂದ್ರ ತನಿಖಾ ಸಂಸ್ಥೆಗೆ ಕಳುಹಿಸಿದ್ದಳು. ಬಳಿಕ ಗಂಡನ ಮೊಬೈಲ್‍ನಿಂದ ಮೆಸೇಜ್ ಡಿಲೀಟ್ ಮಾಡಿದ್ದಳು.

    ಇತ್ತ ಮೆಸೇಜ್ ಬಂದಿದ್ದ ನಂಬರ್ ನ ಮೂಲ ಹುಡುಕಿ ಹೊರಟಿದ್ದ ತನಿಖಾ ಸಂಸ್ಥೆಗಳು, ಮನೆಗೆ ಬಂದು ಇಬ್ಬರನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಆನೇಕಲ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

  • ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್

    ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್

    ನವದೆಹಲಿ: ಆಕಾಶದಲ್ಲಿ ಹಾರಾಡುತ್ತಿದ್ದ ವಿಮಾನದಲ್ಲೇ (Flight) ಗಂಡ (Husband) ಹೆಂಡತಿ (Wife) ಗಲಾಟೆ ಆರಂಭಿಸಿ ಬೇರೆ ಪ್ರಯಾಣಿಕರಿಗೆ ತೊಂದರೆ ಕೊಟ್ಟ ಪರಿಣಾಮ ಸ್ವಿಟ್ಜರ್ಲೆಂಡ್‍ನ ಮ್ಯೂನಿಚ್‍ಯಿಂದ ಬ್ಯಾಂಕಾಕ್‍ಗೆ (Bangkok) ತೆರಳುತ್ತಿದ್ದ ವಿಮಾನವನ್ನು ದೆಹಲಿಯಲ್ಲಿ (Delhi) ಇಳಿಸಿದ ಘಟನೆ ನಡೆದಿದೆ.

    ಪತಿ-ಪತ್ನಿಯ ನಡುವಿನ ಜಗಳಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ವಿಮಾನದ ಸಿಬ್ಬಂದಿ ಆರಂಭದಲ್ಲಿ ಪಾಕಿಸ್ತಾನದಲ್ಲಿ ಇಳಿಯಲು ವಿನಂತಿಸಿದ್ದಾರೆ. ಪಾಕ್‍ನಲ್ಲಿ ವಿಮಾನ ಇಳಿಸಲು ಅನುಮತಿ ಸಿಗದ ಕಾರಣ ವಿಮಾನವನ್ನು ದೆಹಲಿಯಲ್ಲಿ ಇಳಿಸಲಾಯಿತು ಎಂದು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಕರಾವಳಿ ತೀರದಲ್ಲಿ ಅಮೆರಿಕ ಸೇನಾ ವಿಮಾನ ಪತನ – 8 ಸಿಬ್ಬಂದಿ ದುರ್ಮರಣ

    ಗಲಾಟೆಯ ನಂತರ ಮಹಿಳೆ ತನ್ನ ಗಂಡನಿಂದ ತನಗೆ ಬೆದರಿಕೆ ಇದೆ ಎಂದು ಪೈಲಟ್ ಬಳಿ ಹೇಳಿಕೊಂಡಿದ್ದು, ಸಹಾಯಕ್ಕಾಗಿ ಕೇಳಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಗಲಾಟೆ ಮಾಡಿದ ಇಬ್ಬರನ್ನು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಅಕ್ಟೋಬರ್‍ನಲ್ಲಿ ಪ್ರಯಾಣಿಕನೊಬ್ಬ ದೆಹಲಿಗೆ ಹೋಗುವ ಈಜಿಪ್ಟ್ ಏರ್ ವಿಮಾನದಲ್ಲಿ ಕೆಲವು ಸೀಟುಗಳನ್ನು ಹಾನಿಗೊಳಿಸಿದ್ದ. ಅಲ್ಲದೇ ಸಹ ಪ್ರಯಾಣಿಕರೊಂದಿಗೆ ಜಗಳವಾಡಿದ್ದ. ಬಳಿಕ ಆತನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇದನ್ನೂ ಓದಿ: 25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌

  • ವ್ಯಕ್ತಿಯ ಬರ್ಬರ ಹತ್ಯೆ – 2ನೇ ಹೆಂಡತಿಯ ಅಕ್ರಮ ಸಂಬಂಧವೇ ಕಾರಣ ಎಂದ ಮೊದಲ ಪತ್ನಿ

    ವ್ಯಕ್ತಿಯ ಬರ್ಬರ ಹತ್ಯೆ – 2ನೇ ಹೆಂಡತಿಯ ಅಕ್ರಮ ಸಂಬಂಧವೇ ಕಾರಣ ಎಂದ ಮೊದಲ ಪತ್ನಿ

    ಕೋಲಾರ: ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಮುಳಬಾಗಿಲಿನ (Mulabagilu ) ಮಿಣಜೇನಹಳ್ಳಿಯಲ್ಲಿ ನಡೆದಿದೆ.

    ಗ್ರಾಮದ ಮಂಜುನಾಥ್ (48) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಎರಡನೇ ಪತ್ನಿಯ (Wife) ಅಕ್ರಮ ಸಂಬಂಧಕ್ಕೆ ಆತ ಬಲಿಯಾಗಿದ್ದಾನೆ ಎಂದು ಮೊದಲ ಪತ್ನಿ ಆರೋಪಿಸಿದ್ದು, ಅದೇ ಕಾರಣಕ್ಕೆ ಮಂಜುನಾಥ್ ಹತ್ಯೆಯಾದರೂ ಎರಡನೇ ಪತ್ನಿ ಸ್ಥಳಕ್ಕೆ ಬಂದಿಲ್ಲ ಎಂದು ಆಕೆ ಆರೋಪಿಸಿದ್ದಾಳೆ. ಹತ್ಯೆಯಾದ ಮಂಜುನಾಥ್ ಮೊದಲ ಪತ್ನಿಯನ್ನು ತೊರೆದು ಎರಡನೇ ಪತ್ನಿಯೊಂದಿಗೆ ವಾಸವಾಗಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    ಕೊಲೆಯಾದ ಮಂಜುನಾಥ್, ಬಂಗಾರಪೇಟೆಯ ಮಾದಮುತ್ತನಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬಾತನೊಂದಿಗೆ ಹಣದ ವಿಚಾರವಾಗಿ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಹತ್ಯೆಯಾಗಿರುವ ಸಾಧ್ಯತೆ ಕೂಡ ಇದೆ. ಈ ಬಗ್ಗೆ ಎರಡು ಮೂರು ಬಾರಿ ನ್ಯಾಯ ಪಂಚಾಯಿತಿ ಕೂಡ ಮಾಡಲಾಗಿತ್ತು. ಆದರೂ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ.

    ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕಿತ ಕೊಲೆ ಆರೋಪಿ ಶ್ರೀನಿವಾಸ್‍ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

  • ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

    ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

    ಆನೇಕಲ್: ಅಕ್ರಮ ಸಂಬಂಧ (Illicit Relationship) ಶಂಕೆಯ ಮೇಲೆ ಪತಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.

    ಲಕ್ಷ್ಮಮ್ಮ (40) ಪತಿಯಿಂದ ಕೊಲೆಯಾದ ಮಹಿಳೆ. ಮಹದೇವಯ್ಯ (45) ಪತ್ನಿಯನ್ನು ಹತ್ಯೆಗೈದ ಪತಿ. ಇವರಿಬ್ಬರಿಗೆ ಆರು ಜನ ಮಕ್ಕಳಿದ್ದರು. ಮಹದೇವಯ್ಯ ಆನೇಕಲ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಲಕ್ಷ್ಮಮ್ಮ ಗಾರೆ ಕೆಲಸ ಮಾಡಿಕೊಂಡಿದ್ದರು. ಗಾರೆ ಕೆಲಸ ಮಾಡುವ ವ್ಯಕ್ತಿಯ ಜೊತೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪತಿ ಶಂಕಿಸಿದ್ದು, ಈ ಬಗ್ಗೆ ಹಲವು ಬಾರಿ ಲಕ್ಷ್ಮಮ್ಮಹಾಗೂ ಮಹದೇವಯ್ಯ ನಡುವೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಕುಡಿದ ನಶೆಯಲ್ಲಿ ಟ್ರಕ್‌ನ ರೈಲ್ವೆ ಹಳಿಯಲ್ಲಿ ಬಿಟ್ಟ ಚಾಲಕ – ತಪ್ಪಿದ ಭಾರೀ ದುರಂತ

    ಈ ವಿಚಾರ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನಕ್ಕೆ ತಿಳಿದಿತ್ತು. ಜನರು ಅಕ್ರಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ಮನನೊಂದ ಮಹದೇವಯ್ಯ ಪತ್ನಿ ಲಕ್ಷ್ಮಮ್ಮತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ

  • ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಭುವನೇಶ್ವರ್: ವಿಷಪೂರಿತ ಹಾವನ್ನು (Snake) ಹೆಂಡತಿ (Wife) ಮತ್ತು ಮಗಳು ಮಲಗಿದ್ದ ಕೋಣೆಗೆ ಬಿಟ್ಟು ಅವರನ್ನು ಕೊಲೆಗೈದಿದ್ದ ಆರೋಪಿಯನ್ನು ಒಡಿಶಾ (Odisha) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕೆ.ಗಣೇಶ್ (25) ಎಂದು ಗುರುತಿಸಲಾಗಿದೆ. ಆರೋಪಿ ಅಧೇಗಾಂವ್ ಗ್ರಾಮದ ತನ್ನ ಮನೆಯಲ್ಲಿ ಹೆಂಡತಿ ಬಸಂತಿ ಪತ್ರಾ (23) ಹಾಗೂ ತನ್ನ 2 ವರ್ಷದ ಮಗಳು ದೇಬಾಸ್ಮಿತಾ ಮಲಗಿದ್ದ ವೇಳೆ ಅವರನ್ನು ಕೊಲ್ಲುವ ಉದ್ದೇಶದಿಂದ ರೂಂ ಒಳಗೆ ಹಾವನ್ನು ಬಿಟ್ಟಿದ್ದ. ಬಳಿಕ ಆಕಸ್ಮಿಕವಾಗಿ ಹಾವು ಕಚ್ಚಿದೆ ಎಂಬಂತೆ ಬಿಂಬಿಸಿದ್ದ. ಇದನ್ನೂ ಓದಿ: ಡ್ರಗ್ಸ್‌ ಖರೀದಿಸಲು 74,000 ರೂ.ಗೆ ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಪೋಷಕರು – ಅಪ್ಪ-ಅಮ್ಮ ಅರೆಸ್ಟ್‌

    ಈ ಸಂಬಂಧ ಮೃತ ಮಹಿಳೆಯ ಮಾವ ಅನುಮಾನ ವ್ಯಕ್ತಪಡಿಸಿ, ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಇದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪೊಲೀಸರು ಭಾವಿಸಿದ್ದರು. ಬಳಿಕ ತನಿಖೆ ನಡೆಸಿ ಸಾಕ್ಷ್ಯ ಕಲೆಹಾಕಿ ಘಟನೆ ನಡೆದ ಒಂದು ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಅಕ್ಟೋಬರ್ 6 ರಂದು ಹಾವಾಡಿಗನಿಂದ, ಧಾರ್ಮಿಕ ಕಾರ್ಯಕ್ರಮಕ್ಕೆ ಎಂದು ಹಾವು ತಂದಿದ್ದ ಎಂದು ತಿಳಿದು ಬಂದಿದೆ. ಮೊದಲು ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದ. ಬಳಿಕ ತೀವ್ರ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ 2020ರಲ್ಲಿ ಕೇರಳದ ಕೊಲ್ಲಂನಲ್ಲಿ ಆಸ್ತಿಗಾಗಿ ವ್ಯಕ್ತಿಯೊಬ್ಬ ಪತ್ನಿಯನ್ನು ಇದೇ ಮಾದರಿಯಲ್ಲಿ ಕೊಲೆಗೈದು ಹಾವಿನ ದ್ವೇಷದ ಕಥೆ ಕಟ್ಟಿದ್ದ. ಬಳಿಕ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಅಂಚಲ್ ನಿವಾಸಿ ಸೂರಜ್ (27) ಕೊಲೆಗೈದ ಪತಿ ಹಾಗೂ ಸುರೇಶ್ ಕೊಲೆಗೆ ಸಹಕರಿಸಿದ ಹಾವಾಡಿಗನಾಗಿದ್ದ. ಎಸ್.ಉತ್ತರ (25) ಕೊಲೆಯಾದ ಮಹಿಳೆ ಆಗಿದ್ದಳು. ಇದನ್ನೂ ಓದಿ: ಮಥುರಾದ ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ- ಮೃತರ ಸಂಖ್ಯೆ 12ಕ್ಕೆ ಏರಿಕೆ

  • ವಿಚ್ಛೇದನ ತೀರ್ಪಿನ ದಿನವೇ ಪತ್ನಿಗೆ ಮಚ್ಚೇಟು – ಆರೋಪಿ ಅರೆಸ್ಟ್

    ವಿಚ್ಛೇದನ ತೀರ್ಪಿನ ದಿನವೇ ಪತ್ನಿಗೆ ಮಚ್ಚೇಟು – ಆರೋಪಿ ಅರೆಸ್ಟ್

    ಚಿತ್ರದುರ್ಗ: ವಿಚ್ಛೇದನದ (Divorce) ತೀರ್ಪಿನ ದಿನವೇ ವ್ಯಕ್ತಿಯೊಬ್ಬ ಪತ್ನಿಯ (Wife) ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಮಹಿಳೆಯನ್ನು ಆಶಾ (26) ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಕುಮಾರಸ್ವಾಮಿ ಅಲಿಯಾಸ್ ಶಿವಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮೂರು ವರ್ಷಗಳ ಹಿಂದೆ ಆಶಾಳನ್ನು ಮದುವೆಯಾಗಿದ್ದ. ಬಳಿಕ ಒಂದು ವರ್ಷದ ಹಿಂದೆ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ, ಕುಡಿದು ಕಿರುಕುಳ ನೀಡುತ್ತಿದ್ದ. ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆ ವಿಚ್ಛೇದನ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಳು. ಇದನ್ನೂ ಓದಿ: ಗ್ಯಾಸ್ ಗೀಸರ್ ಲೀಕ್‍ನಿಂದ ಪತ್ನಿ ಸಾವು ಎಂದ ಪತಿ- ಕೊಲೆ ಆರೋಪ

    ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಮಹಿಳೆ ನೆಮ್ಮದಿಗಾಗಿ ಬೆಂಗಳೂರಿನ ಸಂಬಂಧಿಗಳ ಮನೆಯಲ್ಲಿ ವಾಸವಾಗಿದ್ದಳು. ಇಂದು ಕೋರ್ಟ್‍ನ ಅಂತಿಮ ತೀರ್ಪು ಇದ್ದಿದ್ದರಿಂದ ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದಳು. ಈ ವೇಳೆ ಬಸ್ ನಿಲ್ದಾಣದ ಬಳಿ ಕಾದು ಕುಳಿತು ಆರೋಪಿ ಹಲ್ಲೆ ನಡೆಸಿದ್ದಾನೆ.

    ಹಲ್ಲೆಯಿಂದ ತಲೆ ಹಾಗೂ ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಕೈ ಹಾಗೂ ಕಾಲಿನ ಬೆರಳುಗಳು ತುಂಡಾಗಿವೆ. ತೀವ್ರ ರಕ್ತಸ್ರಾವದಿಂದ ಮಹಿಳೆ ಅಸ್ವಸ್ಥಳಾಗಿದ್ದು, ಆಕೆಯನ್ನು ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ (Chitradurga) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳೀಯರು ಮಹಿಳೆಯನ್ನು ರಕ್ಷಿಸಲು ಕುಮಾರಸ್ವಾಮಿಗೆ ಗೂಸಾ ಕೊಟ್ಟಿದ್ದಾರೆ. ಬಳಿಕ ಚಳ್ಳಕೆರೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೈಕಿಗೆ ಅಡ್ಡ ಬಂದು ಸವಾರ ದುರ್ಮರಣ- 3 ದಿನದ ಬಳಿಕ ಕುಟುಂಬಕ್ಕೆ ಶ್ವಾನ ಸಾಂತ್ವನ

  • ದೂರು ಕೊಟ್ಟ ಪತ್ನಿಗೆ ಠಾಣೆಯಲ್ಲೇ ಇರಿದ ಪಾಪಿ ಪತಿ!

    ದೂರು ಕೊಟ್ಟ ಪತ್ನಿಗೆ ಠಾಣೆಯಲ್ಲೇ ಇರಿದ ಪಾಪಿ ಪತಿ!

    ಹಾಸನ: ದೂರು ಕೊಟ್ಟ ಪತ್ನಿಗೆ ಪತಿ ಠಾಣೆಯಲ್ಲೇ ಇರಿದ ಘಟನೆಯೊಂದು ಹಾಸನದಲ್ಲಿ (Hassan) ನಡೆದಿದೆ.

    ಗಾಯಾಳು ಪತ್ನಿಯನ್ನು ಶಿಲ್ಪ ಎಂದು ಗುರುತಿಸಲಾಗಿದ್ದು, ಈಕೆಯ ಕೊಲೆಗೆ ಪತಿ ಹರೀಶ್ ಯತ್ನಿಸಿದ್ದಾನೆ. ಈ ಘಟನೆ ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಆರು ವರ್ಷದ ಹಿಂದೆ ಮದುವೆಯಾಗಿದ್ದ ಶಿಲ್ಪಾ- ಹರೀಶ್, ಪರಸ್ಪರ ಅನುಮಾನದಿಂದ ಜಗಳ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತೆಯೇ ಗಂಡನಿಂದ ಕಿರುಕುಳ ಎಂದು ಶಿಲ್ಪಾ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪತಿ ಹರೀಶ್ ನನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾಗಲೇ ಹತ್ಯೆಗೆ ಯತ್ನ ನಡೆದಿದೆ. ಆದರೆ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದತ ತಪ್ಪಿದೆ. ಚಾಕು ಕಿತ್ತುಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದ ಸಾವು

  • ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

    ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

    ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು (Wife) ಪತಿ (Husband) ನೇಣುಬಿಗಿದು ಕೊಲೆ (Murder) ಮಾಡಿರುವ ಘಟನೆ ರಾಯಚೂರಿನ (Raichur) ಸಿಂಧನೂರು (Sindhanur) ನಗರದ ಪಟೇಲವಾಡಿಯಲ್ಲಿ ನಡೆದಿದೆ.

    ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ ಇತ್ತೀಚೆಗೆ ಆರೋಪಿ ಪತಿ ನಾಗರಾಜ್ ಪ್ರತಿನಿತ್ಯ ಮದ್ಯಸೇವಿಸಿ ಬಂದು ಜಗಳ ಮಾಡುತ್ತಿದ್ದ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

    ಅದೇ ರೀತಿ ಗಲಾಟೆ ವೇಳೆ ಪತ್ನಿ ಮೇಲೆ ನಾಗರಾಜ್ ಕೈ ಮಾಡಿದ್ದಾನೆ. ಈ ವೇಳೆ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೊರಳಿಗೆ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ದಾರುಣ ಸಾವು

  • ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್‌ನಲ್ಲಿ ಥಳಿಸಿದ ಪತಿ!

    ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್‌ನಲ್ಲಿ ಥಳಿಸಿದ ಪತಿ!

    ಥಾಣೆ: ಪತ್ನಿಗೆ ಥಳಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಇಬ್ಬರು ಸಂಬಂಧಿಕರ ಮೇಲೆ ಪೊಲೀಸರು ಎಫ್‍ಐಆರ್ (FIR) ದಾಖಲಿಸಿದ ಘಟನೆ ನವಿಮುಂಬೈನಲ್ಲಿ (Navi Mumbai) ನಡೆದಿದೆ. 23 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದೂರಿನ ಪ್ರಕಾರ, ಫ್ಯಾಶನ್ ಬಳೆಯನ್ನು ತೊಟ್ಟಿದ್ದಕ್ಕೆ ಪತಿ 30 ವರ್ಷದ ಪ್ರದೀಪ್ ಅರ್ಕಾಡೆಯು ಪತ್ನಿಗೆ ಬೆಲ್ಟ್ ನಲ್ಲಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾನೆ. ನವೆಂಬರ್ 13 ರಂದು 50 ವರ್ಷದ ಅತ್ತೆ ಮಹಿಳೆಯ ಕೂದಲನ್ನು ಎಳೆದು ಹಲವಾರು ಬಾರಿ ಕಪಾಳಮೋಕ್ಷ ಮಾಡಿದ್ದಾಳೆ. ಪತಿ ಕೂಡ ಬೆಲ್ಟ್ ನಿಂದ ಥಳಿಸಿದ್ದಾನೆ. ಅಲ್ಲದೆ ಥಳಿಸುವ ಮುನ್ನ ಅತ್ತೆ ನೆಲಕ್ಕೆ ತಳ್ಳಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆಯ ನಂತರ ಸಂತ್ರಸ್ತೆ ಪುಣೆಯಲ್ಲಿರುವ ತನ್ನ ಪೋಷಕರ ಮನೆಗೆ ಹೋಗಿ ಅಲ್ಲಿ ದೂರು ದಾಖಲಿಸಿದರು. ನಂತರ ಪ್ರಕರಣವನ್ನು ನವಿ ಮುಂಬೈಗೆ ತನಿಖೆಗಾಗಿ ವರ್ಗಾಯಿಸಲಾಯಿತು ಎಂದು ಪೊಲೀಸರು ಹೇಳಿದರು. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಉದ್ಘಾಟಿಸಿದ ಆದಿತ್ಯ ಠಾಕ್ರೆ ವಿರುದ್ಧ ದೂರು

    ಘಟನೆ ಸಂಬಂಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 34 (ಸಾಮಾನ್ಯ ಉದ್ದೇಶ), 504 (ಉದ್ದೇಶವನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • 10 ಕೋಟಿ ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿ ಸಿಕ್ಕಿಬಿದ್ದ ಪತಿ

    10 ಕೋಟಿ ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿ ಸಿಕ್ಕಿಬಿದ್ದ ಪತಿ

    ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು (Wife) ಕೊಲೆಗೈದ ಘಟನೆ ಇಲ್ಲಿನ (Mandya) ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ (Police) ಅತಿಥಿಯಾಗಿದ್ದಾನೆ.

    ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ಕಾವೇರಿ ತವರು ಕೊಡಗಿನಲ್ಲೇ ಕುಸಿಯುತ್ತಿದೆ‌ ಅಂತರ್ಜಲ ಮಟ್ಟ

    ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್‍ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಹಲವು ಬಾರಿ ಜಗಳ ಕೂಡ ಆಗಿತ್ತು. ಇದೇ ಕಾರಣಕ್ಕೆ ಕಳೆದ ಶನಿವಾರ ಆಕೆ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

    ಕೊಲೆಯಾದ ಬಳಿಕ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ. ಸೋಮಶೇಖರ್ ಭಾವ ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ತಿಳಿಸಿದ್ದ. ಅನುಮಾನಗೊಂಡ ಶೃತಿಯ ಚಿಕ್ಕಪ್ಪ ಕುಮಾರಸ್ವಾಮಿ ಎಂಬವರು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಕೊಲೆಗೈದಿದ್ದು ಬೆಳಕಿಗೆ ಬಂದಿತ್ತು.

    ವಿಚಾರಣೆ ವೇಳೆ ಆರೋಪಿ ತಾನೇ ಕೊಲೆ ಮಾಡಿರುವುದಾಗಿ  ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: Gangs Of Godavari: ಶೂಟಿಂಗ್ ವೇಳೆ ವಿಶ್ವಕ್ ಸೇನ್‌ಗೆ ಗಾಯ