Tag: Wife

  • ಗಂಡ-ಹೆಂಡ್ತಿ ಜಗಳದಲ್ಲಿ ಸಂಧಾನಕ್ಕೆ ಬಂದು 2 ಲಕ್ಷ ನೀಡುವಂತೆ ಪೊಲೀಸ್ರು ತಾಕೀತು; ನಿಖಿಲ್ ಆತ್ಮಹತ್ಯೆ

    ಗಂಡ-ಹೆಂಡ್ತಿ ಜಗಳದಲ್ಲಿ ಸಂಧಾನಕ್ಕೆ ಬಂದು 2 ಲಕ್ಷ ನೀಡುವಂತೆ ಪೊಲೀಸ್ರು ತಾಕೀತು; ನಿಖಿಲ್ ಆತ್ಮಹತ್ಯೆ

    ಹುಬ್ಬಳ್ಳಿ: ಗಂಡ-ಹೆಂಡತಿ ಜಗಳದ ನಡುವೆ ಪೊಲೀಸರ ಸಂಧಾನಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಕೋಟಿಲಿಂಗೇಶ್ವರ (Kotlingeshwara) ನಗರದಲ್ಲಿ ನಡೆದಿದೆ.

    ನಿಖಿಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್, ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದರು. ಆದರೆ ಗಂಡ-ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೇ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು.

    ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ಗುರುವಾರ ಕೇಶ್ವಾಪುರ ಠಾಣೆಗೆ ನಿಖಿಲ್ ಕರೆಸಿ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿಬಂದಿದೆ. ನೋಟಿಸ್ ನೀಡಿ ನಿಖಿಲ್‍ನನ್ನು ಠಾಣೆ ಕರೆಸಿ ಪೊಲೀಸರು ಮಾನಸಿಕ ಕಿರುಕುಳ ನೀಡಿದ್ದಾರೆ. ಒಂದೇ ದಿನದಲ್ಲಿ 2 ಲಕ್ಷ ರೂಪಾಯಿ ನೀಡುವಂತೆ ತಾಕೀತು ಮಾಡಿ ಪೊಲೀಸರು ನಿಖಿಲ್‍ನನ್ನು ಬಿಟ್ಟು ಕಳುಹಿಸಿದ್ದರು. ಇದನ್ನೂ ಓದಿ: ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ

    ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್ ಇಂದು ಬೆಳಗ್ಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಹೋದರ ರಘುವೀರ್‌ ಗಂಭೀರ ಆರೋಪ ಮಾಡುತ್ತಿದ್ದಾರೆ.  ನಿಖಿಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    ಲಕ್ನೋ: ತನ್ನ ಇಚ್ಛೆಗೆ ವಿರುದ್ಧವಾಗಿ ಕಣ್ಣಿನ ಹುಬ್ಬುಗಳಿಗೆ ಆಕಾರ (Eyebrows) ನೀಡಿದ್ದಕ್ಕಾಗಿ ಪತಿ ತನ್ನ ಪತ್ನಿಗೆ ತ್ರಿವಳಿ ತಲಾಖ್ (Triple Talaq) ನೀಡಿದ ಘಟನೆ ಉತ್ತರಪ್ರದೇಶದ (Uttar Pradesh) ಕಾನ್ಪುರದಲ್ಲಿ (Kanpur) ನಡೆದಿದೆ.

    ಸೌದಿ ಅರೇಬಿಯಾದಿಂದ (Saudi Arabia) ವಿಡಿಯೋ ಕಾಲ್ ಮಾಡಿ ಪತಿ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಅಕ್ಟೋಬರ್ 4 ರಂದು ಈ ಘಟನೆ ನಡೆದಿದ್ದು, ಪತ್ನಿ ಗುಲ್ಸಾಬ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಅತ್ತೆಯಂದಿರಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ನಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಮುಸ್ಲಿಂ ವಿವಾಹ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ಓರ್ವ ಸಾವು, 8 ಮಂದಿ ಗಂಭೀರ

    2022ರ ಜನವರಿಯಲ್ಲಿ ಪ್ರಯಾಗರಾಜ್‌ನ ಮೊಹಮ್ಮದ್ ಸಲೀಂ ಅವರನ್ನು ಗುಲ್ಸಾಬಾ ವಿವಾಹವಾಗಿದ್ದರು. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಸಲೀಂ, ಗುಲ್ಸಾಬಾ ಅವರೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ ಆಕೆಯ ಹುಬ್ಬುಗಳನ್ನು ಗಮನಿಸಿ ತನ್ನ ಅನುಮತಿ ಪಡೆಯದೇ ಯಾಕೆ ಹುಬ್ಬುಗಳಿಗೆ ಆಕಾರ ನೀಡಿದ್ದೀಯಾ ಎಂದು ಕೇಳಿದ್ದಾನೆ. ನಂತರ ಕೋಪಗೊಂಡ ಆತ ಪತ್ನಿಗೆ ತ್ರಿವಳಿ ತಲಾಖ್ ಅನ್ನು ನೀಡಿ, ಅವಳು ಏನು ಬೇಕಾದರೂ ಮಾಡಲು ಸ್ವತಂತ್ರಳು ಎಂದು ಹೇಳಿದ್ದಾನೆ. ಇದನ್ನೂ ಓದಿ: ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!

    ನಂತರ ಗುಲ್ಸಾಬ ಸಲೀಂ, ಆಕೆಯ ಅತ್ತೆ ಮತ್ತು ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿ ವಿರುದ್ಧ ಕ್ರೌರ್ಯ ಮತ್ತು ವರದಕ್ಷಿಣೆ ಆರೋಪ ಹೊರಿಸಲಾಗಿದೆ. ತ್ರಿವಳಿ ತಲಾಖ್ ಪದ್ಧತಿಯನ್ನು 2019ರಲ್ಲಿ ದೇಶದಲ್ಲಿ ಕಾನೂನುಬಾಹಿರ ಮತ್ತು ಅಸಂವಿಧಾನಿಕ ಎಂದು ಘೋಷಿಸಲಾಯಿತು. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಪತ್ನಿಗೆ ಡಿವೋರ್ಸ್ ಕೊಡದೇ ಹಿಂದೂ ಯುವತಿ ಜೊತೆ ಮದುವೆ- ಪ್ರೀತಿಸಿ ಕೈ ಹಿಡಿದವಳಿಗೆ ಟಾರ್ಚರ್

    ಮೊದಲ ಪತ್ನಿಗೆ ಡಿವೋರ್ಸ್ ಕೊಡದೇ ಹಿಂದೂ ಯುವತಿ ಜೊತೆ ಮದುವೆ- ಪ್ರೀತಿಸಿ ಕೈ ಹಿಡಿದವಳಿಗೆ ಟಾರ್ಚರ್

    – ಪತಿಗೆ ಶಿಕ್ಷೆಯಾಗಬೇಕೆಂದು ನೂರ್ ಜಹಾನ್ ಪಟ್ಟು

    ಕಾರವಾರ: ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಅವರು ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾಗಿದ್ರು. ಆದರೆ ಬೇರೆ ಹೆಣ್ಣಿನ ಚಟಕ್ಕೆ ಬಿದ್ದ ಗಂಡ ತನಗೆ ಮದುವೆಯೇ ಆಗಿಲ್ಲ ಎಂದು ಹೇಳಿ ಹಿಂದೂ ಯುವತಿಯನ್ನು ಪೀತಿಸಿ ಮದುವೆಯಾಗಿದ್ದು, ಇದೀಗ ಮೊದಲ ಪತ್ನಿ ತನಗಾದ ಅನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾಳೆ.

    ಕಳೆದ 7 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. 2017ರಲ್ಲಿ ದಾಂಡೇಲಿಯ (Karwar Dandeli) ವಿಜಯ ನಗರ ನಿವಾಸಿ ನೂರ್ ಜಹಾನ್ ಹಾಗೂ ಪಟೇಲ್ ನಗರದ ನಿವಾಸಿ ಖಾದರ್ ಅಲಿ ಹಸನ್ ಸಾಬ್ ಶೇಖ್ ಮದುವೆಯಾಗಿತ್ತು. 1 ವರ್ಷ ಎಲ್ಲಾ ಚೆನ್ನಾಗಿಯೇ ಇತ್ತು. 2 ನೇ ವರ್ಷಕ್ಕೆ ಗಂಡ ಸೇರಿದಂತೆ ಆತನ ಮನೆಯವರು ಕಿರುಕುಳ ನೀಡಿದ್ದಾರೆ. ಬೇರೆ ಮನೆ ಮಾಡ್ತೇನೆಂದು ಪತ್ನಿಯನ್ನ ತವರಿಗೆ ಕಳಿಸಿದ್ದ ಭೂಪ ಬೇರೆ ಯುವತಿ ಜೊತೆ ಪ್ರೀತಿ ಶುರುಮಾಡ್ಕೊಂಡಿದ್ದ. ಇದನ್ನ ತಿಳಿದ ಪತ್ನಿ ನ್ಯಾಯಕ್ಕಾಗಿ 2019ರಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಬಳಿಕ ಇಬ್ಬರನ್ನು ಕಾಂಪ್ರಮೈಸ್ ಮಾಡಿದ್ರು. ಆದರೆ ಆತ ಮಾತ್ರ ತನ್ನ ಚಾಳಿಯನ್ನ ಬಿಟ್ಟಿರಲಿಲ್ಲ. ಪತ್ನಿಯನ್ನು ತಾಯಿ ಮನೆಯಲ್ಲಿ ಬಿಟ್ಟು 2 ವರ್ಷ ವಿದೇಶಕ್ಕೆ ತೆರಳಿದ್ದ. ವಿದೇಶದಿಂದ ಬಂದ ಬಳಿಕ ಹಿಂದೂ ಯುವತಿ ಐಶ್ವರ್ಯಾಳನ್ನ ರಿಜಿಸ್ಟರ್ ಮದುವೆಯಾಗಿದ್ದ. ಮದುವೆಯಾಗಿಲ್ಲ ಎಂದು ಪ್ರತಿಜ್ಞಾ ಪತ್ರದಲ್ಲೂ ಸುಳ್ಳು ಮಾಹಿತಿ ನೀಡಿದ್ದಾನೆ. ಇದನ್ನ ತಿಳಿದ ಪತ್ನಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾಳೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ಕತ್ತು ಸೀಳಿ ಕೊಲೆಗೈದ ಪತಿ

    ನೂರ್ ಜಹಾನ್ ತವರು ಮನೆಯಲ್ಲಿದ್ದುಕೊಂಡೇ ಬೆಳಗಾವಿಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡ್ತಿದ್ದು, ಗೋವಾ ಸಂಸ್ಥೆಯಲ್ಲಿಯೂ ಕೆಲಸ ಮಾಡ್ತಿದ್ದಾಳೆ. ನೂರ್ ಜಹಾನ್‍ಳಿಗೆ ಆಗಿರುವ ಮೋಸದಲ್ಲಿ ಭಾಗಿಯಾದ ಆರೋಪಿಯ ತಾಯಿ ಮುಮ್ತಾಜ್ ಹಸನ್ ಸಾಬ್, ಹಸನ್ ಸಾಬ್ ಮೊಹ್ಮದ್, ಆರತಿ ಯಮುನಪ್ಪ ವಿರುದ್ಧ ಕಾರವಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನ ಬಂಧಿಸಿ ಬೇಲ್‍ನಲ್ಲಿ ಬಿಡುಗಡೆ ಮಾಡಿದ್ದಾರೆ. ಸದ್ಯ ನೂರ್ ಜಹಾನ್ ಸಹಾಯಕ್ಕೆ ದಾಂಡೇಲಿ ಅಂಬೇಡ್ಕರ್ ಸೈನ್ಯ ದಲಿತ ಸಂಘಟನೆ ನಿಂತಿದ್ದು, ನ್ಯಾಯ ಸಿಗದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

    ತನಗಾದ ಅನ್ಯಾಯದ ವಿರುದ್ಧ ನ್ಯಾಯ ಪಡೆಯಲು ಅಧಿಕಾರಿಗಳ ಕಚೇರಿಯನ್ನು ಅಲೆದಾಡುತ್ತಿರುವ ನೂರ್ ಜಹಾನ್, ಮುಂದಕ್ಕೆ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

    ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

    ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ.

    ಮೃತಳನ್ನ ಪದ್ಮಾಕ್ಷಿ (40) ಎಂದು ಗುರುತಿಸಲಾಗಿದೆ. ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಕುಡಿತ ಹಾಗೂ ಪದ್ಮಾಕ್ಷಿಯ ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು. ಕಳೆದ ರಾತ್ರಿ ಕಂಠ ಪೂರ್ತಿ ಕುಡಿದು ಬಂದ ಪತಿ ಚಂದ್ರ ಪತ್ನಿ ಜೊತೆ ಜಗಳವಾಡಿದ್ದಾನೆ.

    ಕುಡಿದ ಮತ್ತಿನಲ್ಲಿ ಅನೈತಿಕ ಸಂಬಂಧವನ್ನ ಶಂಕಿಸಿ ಜಗಳವಾಡಿ ಪತ್ನಿಗೆ ಹೊಡೆದು, ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊಡಲಿಯಿಂದ ಹಲ್ಲೆಗೈದ ಪತಿ ಆಕೆಯನ್ನ ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡು ಮಲಗಿದ್ದಾನೆ. ಕೊಡಲಿಯಿಂದ ಹಲ್ಲೆಗೈದ ಹಿನ್ನೆಲೆ ತೀವ್ರ ರಕ್ತಸ್ರಾವ ಹಾಗೂ ಇಡೀ ರಾತ್ರಿ ಹೊರಗೆ ಬಿದ್ದಿದ್ದ ಮಹಿಳೆ ಪದ್ಮಾಕ್ಷಿ ಅತಿಯಾದ ಶೀತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ – ದೆಹಲಿಯಲ್ಲಿ ಇಬ್ಬರು ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಹೈಕಮಾಂಡ್ ಉತ್ಸುಕ

    ಪತ್ನಿಗೆ ಹೊಡೆದು ಹೊರತಳ್ಳಿ ಮಲಗಿದ್ದ ಪತಿ ಚಂದ್ರ ಬೆಳಗ್ಗೆ ಎದ್ದು ನೋಡಿದಾಗ ಪತ್ನಿ ಸಾವನ್ನಪ್ಪಿದ್ದಳು. ಪತ್ನಿಯ ಶವದ ಮುಂದೆ ಕೂತು ಕಣ್ಣೀರಿಟ್ಟಿದ್ದಾನೆ. ಮೃತಳಿಗೆ 18 ಹಾಗೂ 15 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು, ಇವರ ಜಗಳದ ವೇಳೆ ಅವರು ಮನೆಯಲ್ಲಿ ಇರಲಿಲ್ಲ. ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಚಂದ್ರನನ್ನ ಬಂಧಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    ಬೆಂಗಳೂರು: ಹೈಪರ್ ಟೆನ್ಷನ್ ಹಾಗೂ ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರುವ ಪತ್ನಿಯು ಪತಿಗೆ ಕಿರುಕುಳ ನೀಡಿರುವ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

    ಪತ್ನಿ ಹಾಗೂ ಅತ್ತೆಯ ಕಿರುಕುಳ ಹಾಗೂ ಹಲ್ಲೆಯಿಂದ ಬೇಸತ್ತು ಕರುಣಾಕರನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ಮ್ಯಾಟ್ರಿಮೋನಿಯಲ್ಲಿ ಲೇಖನಾಶ್ರೀ ಪರಿಚಯವಾಗಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಕರುಣಾಕರಣ್ ಮದುವೆಯಾಗಿದ್ದ. ಇದೀಗ ಪತ್ನಿ ಹಾಗೂ ಆಕೆಯ ತಾಯಿ ಐದು ವರ್ಷದ ಹಿಂದಿನ ಕೆಲ ಖಾಸಗಿ ಫೋಟೋಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಕರುಣಾಕರನ್ ದೂರಿದ್ದಾರೆ.

    ಐದು ವರ್ಷದ ಫೋಟೋಗಳನ್ನ ಇಟ್ಟುಕೊಂಡು ತೊಂದರೆ ನೀಡಿದ್ದ ಹಿನ್ನೆಲೆಯಲ್ಲಿ ಕರುಣಾಕರನ್ ಚೆನ್ನೈಗೆ ತೆರಳಿದ್ದ. ಈ ವೇಳೆ ಪತ್ನಿ ಹಾಗೂ ಅತ್ತೆ ಮಿಸ್ಸಿಂಗ್ ಕಂಪ್ಲೆಂಟ್ ಕೂಡ ನೀಡಿದ್ದರು. ನಂತರ ಮನೆಗೆ ಬಂದಾಗ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಪತ್ನಿ ಹಾಗೂ ಅತ್ತೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರುಣಾಕರನ್ ದೂರಿನಲ್ಲಿ ತಿಳಿಸಿದ್ದಾರೆ.

    ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೈಟ್ ಕೊಡ್ತೀನೆಂದು ಮೋಸ ಮಾಡಿದ್ದಾರೆ ಅಂತಾ ಪತ್ನಿಗೆ ಕಿರುಕುಳ ಕೊಟ್ಟು ಕೊಲೆಗೈದ!

    ಸೈಟ್ ಕೊಡ್ತೀನೆಂದು ಮೋಸ ಮಾಡಿದ್ದಾರೆ ಅಂತಾ ಪತ್ನಿಗೆ ಕಿರುಕುಳ ಕೊಟ್ಟು ಕೊಲೆಗೈದ!

    ಬೆಂಗಳೂರು: ಪತಿಯೇ ತನ್ನ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹತ್ಯೆಗೆ ಕಾರಣ ರಿವೀಲ್ ಆಗಿದೆ.

    ಯಲಹಂಕ (Yalahanka) ಉಪನಗರ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ರೇಖಾ ಮನೆಯವರು ಸೈಟ್ ಕೊಡ್ತಿನಿ ಅಂತಾ ಮೋಸ ಮಾಡಿದ್ದಾರೆ ಎಂದು ಪತಿ ಸಂತೋಷ್ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದೆ.

    ಬುಧವಾರ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ರೇಖಾ ಪತ್ತೆಯಾಗಿದ್ದರು. ಇದೀಗ ರೇಖಾ ಪೋಷಕರು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬಿಗಿರೋ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರಿಂದ ಪತಿ ಸಂತೋಷ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!

    ಲವ್ ಮ್ಯಾರೇಜ್: ಕಳೆದ ನಾಲ್ಕು ವರ್ಷಗಳಿಂದ ರೇಖಾ ಮತ್ತು ಸಂತೋಷ್ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ದಿನಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದ ಈ ಜೊಡಿ ಎರಡೂ ಮನೆಯವರನ್ನು ಒಪ್ಪಿಸಿ ಒಂದೂವರೆ ವರ್ಷದ ಹಿಂದೆ ಮದುವೆಯಾಗಿತ್ತು. ಮೂಲತಃ ತಮಿಳುನಾಡು ಮೂಲದವರಾಗಿರುವ ಇವರು ಮದುವೆ ಆದ ನಂತರ ಬೆಂಗಳೂರಿನ ಯಲಹಂಕಗೆ ಶಿಫ್ಟ್ ಆಗಿದ್ದರು. ಈ ದಂಪತಿಗೆ 6 ತಿಂಗಳ ಹೆಣ್ಣು ಮಗು ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!

    ಪತ್ನಿ ಕೊಲೆಗೈದು ಸೀರೆಯಿಂದ ಫ್ಯಾನಿಗೆ ನೇತಾಕಿದ ಕಿರಾತಕ!

    ಬೆಂಗಳೂರು: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದರೆ ಇಲ್ಲೊಬ್ಬ ಕಿರಾತಕ ಪತಿಯು ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಕುತ್ತಿಗೆಗೆ ಸೀರೆ ಕಟ್ಟಿ ಫ್ಯಾನಿಗೆ ನೇತಾಕಿದ ಪ್ರಸಂಗವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ರೇಖಾ ಕೊಲೆಯಾದ ಮೃತ ದುರ್ದೈವಿ. ಆರೋಪಿ ಪತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈ ಘಟನೆ ಯಲಹಂಕ ಉಪನಗರ 3 ನೇ ಹಂತದಲ್ಲಿ ನಡೆದಿದೆ. ಇದನ್ನೂ ಓದಿ: ಪತ್ನಿಗೆ ಡಿವೋರ್ಸ್ ಕೊಟ್ಟ ಶಿಖರ್ ಧವನ್

    ವರದಕ್ಷಿಣೆ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂತೋಷ್ ಪತ್ನಿ ರೇಖಾಳನ್ನು ಕೊಲೆ ಮಾಡಿದ ಬಳಿಕ ಸೀರೆಯಿಂದ ಫ್ಯಾನಿಗೆ ನೇಣು ಹಾಕಿ, ಆತ್ಮಹತ್ಯೆ ಅಂತಾ ಬಿಂಬಿಸಿದ್ದ. ಸದ್ಯ ಪತಿ ಸಂತೋಷ್ ನನ್ನು ಯಲಹಂಕ ನ್ಯೂ ಟೌನ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 10 ಸಾವಿರ ಕೊಟ್ಟು ಪತಿಯನ್ನು ಮಂಗಳೂರು ಬೀಚ್ ನೋಡಲು ಲವ್ವರ್ ಜೊತೆ ಕಳುಹಿಸಿ ಕೊಲೆಗೈದ್ಳು!

    10 ಸಾವಿರ ಕೊಟ್ಟು ಪತಿಯನ್ನು ಮಂಗಳೂರು ಬೀಚ್ ನೋಡಲು ಲವ್ವರ್ ಜೊತೆ ಕಳುಹಿಸಿ ಕೊಲೆಗೈದ್ಳು!

    ಕಾರವಾರ: ಕೆಲವು ದಿನಗಳ ಹಿಂದೆ ಕುಮಟಾ ತಾಲೂಕಿನ ಗಡಿ ಭಾಗದ ದೇವಿಮನೆ ಘಟ್ಟ ಭಾಗದ ಮಾಸ್ತಿಮನೆ ದೇವಸ್ಥಾನದ ಹಿಂಭಾಗದಲ್ಲಿ ಅನಾಥ ಶವ ಪತ್ತೆಯಾಗಿತ್ತು. ಈ ಕುರಿತು ಕುಮಟಾ ಪೊಲೀಸರು (Kumta Police) ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಗದಗ ಮತ್ತು ಬಾಗಲಕೋಟೆ (Bagalkote) ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಗದಗ ಮೂಲದ ಪರಶುರಾಮ, ಬಾಗಲಕೋಟೆ ಮೂಲದ ರವಿ, ಕೊಲೆಯಾದ ವ್ಯಕ್ತಿಯ ಪತ್ನಿ ರಾಜಮಾ, ಗದಗ ಮೂಲದ ಬಸವರಾಜ್ ಬಂಧಿತರು.

    ಘಟನೆ ಏನು?, ಪ್ರಕರಣ ಬೇಧಿಸಿದ್ದು ಹೇಗೆ?: ಸೆ.30 ರಂದು ಬಾಗಲಕೋಟೆ ಮೂಲದ ಬಶೀರ್ ಸಾಬ್ ಎಂಬಾತನನ್ನು ಮಂಗಳೂರಿಗೆ ಬೀಚ್ ನೋಡುವ ಹೆಸರಿನಲ್ಲಿ ಪತ್ನಿ ರಾಜಮಾ 10 ಸಾವಿರ ಹಣ ನೀಡಿ ತಾನು ಅಕ್ರಮ ಸಂಬಂಧ ಹೊಂದಿದ್ದ ಪರಶುರಾಮನೊಂದಿಗೆ ಕಳುಹಿಸಿ ಕೊಟ್ಟಿದ್ದಾಳೆ. ಮಂಗಳೂರಿಗೆ ತೆರಳಿದ್ದ ಇವರು ಅಲ್ಲಿ ಕೊಲೆ ಮಾಡುವ ಉದ್ದೇಶದಿಂದ ಪರಶುರಾಮ ತನ್ನ ದೊಡ್ಡಮ್ಮನ ಮಗ ರವಿ, ಬಸವರಾಜ್ ಜೊತೆಯಾಗಿದ್ದಾರೆ.

    ನಂತರ ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ದೇವಿಮನೆ ಘಟ್ಟದಲ್ಲಿ ಕೊಲೆಯಾದ ಬಶೀರ್ ಸಾಬ್ ನೊಂದಿಗೆ ಇವರು ಇಳಿದು ದೇವಸ್ಥಾನದ ಹಿಂಭಾಗದಲ್ಲಿ ಮದ್ಯ ಸೇವಿಸಿದ್ದಾರೆ. ಈ ವೇಳೆ ಪರಶುರಾಮ, ಬಶೀರ್ ಸಾಬ್‍ಗೆ ಹಿಂಭಾಗದಿಂದ ಕಟ್ಟಿಗೆಯಲ್ಲಿ ಹೊಡೆದು ಸಾಯಿಸಿ ಅಲ್ಲಿಯೇ ಕಾಡಿನಲ್ಲಿ ಶವ ಹಾಕಿ ಹೋಗಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆ ಕೇಸ್ ವಾಪಸ್ ಪಡೆಯೋ ಚರ್ಚೆಯೇ ಆಗಿಲ್ಲ: ಪರಮೇಶ್ವರ್

    ಘಟನೆ ಬೆಳಕಿಗೆ ಬರುತ್ತಿದ್ದಂತೆ ಕುಮಟಾ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ಬಂಧಿಸಿದ್ದು, ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಾನೆ ಎಂಬ ಕಾರಣದಿಂದ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದಾಗಿ ಕೊಲೆಯಾದ ಬಶೀರ್ ಸಾಬ್ ಪತ್ನಿ ರಾಜಮ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿಗಳನ್ನು ನ್ಯಾಯಾಲಯದ ಸುಪರ್ದಿಗೆ ವಹಿಸಲಾಗಿದೆ.

    ಕಾರ್ಯಾಚರಣೆಯಲ್ಲಿ ಕುಮಟಾ ಪಿ.ಎಸ್.ಐ ನವೀನ್ ನಾಯ್ಕ್, ಕುಮಟಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್, ಪಿ.ಎಸ್.ಐ ಸಂಪತ್ , ಸಿಬ್ಬಂದಿ ಗಣೇಶ್ ನಾಯ್ಕ್, ಗುರು ನಾಯ್ಕ್, ಪ್ರದೀಪ್ ನಾಯ್ಕ್, ಲೋಕೇಶ್, ರಾಜು ನಾಯ್ಕ್, ನಿರಂಜನ್ ಸೇರಿದಂತೆ ಇತರರು ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಷ ಸೇವಿಸಿ ದಂಪತಿ ಆತ್ಮಹತ್ಯೆ

    ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಷ ಸೇವಿಸಿ ದಂಪತಿ ಆತ್ಮಹತ್ಯೆ

    ಲಕ್ನೋ: ಪತ್ನಿಯ (Wife) ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಪರಿಣಾಮ ವಿಷ (Poison) ಸೇವಿಸಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಉತ್ತರಪ್ರದೇಶದ (Uttar Pradesh) ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

    30 ವರ್ಷದ ಪತಿ ಮತ್ತು 27 ವರ್ಷದ ಪತ್ನಿ ಗುರುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ (Husband) ಅದೇ ದಿನ ಮೃತಪಟ್ಟರೆ, ಪತ್ನಿ ಶುಕ್ರವಾರ ಗೋರಖ್‌ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಎಫ್‌ಐಆರ್ ದಾಖಲಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಬಸ್ತಿ ಎಸ್‌ಪಿ ಗೋಪಾಲ ಕೃಷ್ಣ ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

    ಸೆಪ್ಟೆಂಬರ್ 21ರ ಮಧ್ಯರಾತ್ರಿ ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ದಂಪತಿ ಆರೋಪಿಗಳ ಹೆಸರನ್ನು ನಮೂದಿಸಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಫೋನ್‌ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ

    ಮೃತ ವ್ಯಕ್ತಿಯ ಸಹೋದರ ನೀಡಿರುವ ದೂರಿನ ಆಧಾರದ ಮೇಲೆ ಶುಕ್ರವಾರ ಇಬ್ಬರು ಆರೋಪಿಗಳ ವಿರುದ್ಧ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದರ್ಶ್ (25) ಮತ್ತು ತ್ರಿಲೋಕಿ (45) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ‘ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ: ಹೈಕೋರ್ಟ್‌ ನ್ಯಾಯಮೂರ್ತಿ

    ಶುಕ್ರವಾರ ಬೆಳಗ್ಗೆ ಮಕ್ಕಳು ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ವಿಷ ಸೇವಿಸಿ ಸಾಯುವುದಾಗಿ ಪೋಷಕರು ತಿಳಿಸಿದ್ದಾರೆ ಎಂದು ಮೃತ ದಂಪತಿಯ ಮಕ್ಕಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ದಂಪತಿಗೆ 8 ಮತ್ತು 6 ವರ್ಷದ ಇಬ್ಬರು ಗಂಡು ಮಕ್ಕಳಿದ್ದು, 1 ವರ್ಷದ ಹೆಣ್ಣು ಮಗುವಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ತಗೋ ನಿನ್ನ ಲವ್ವರ್ ತಲೆ ತಂದಿದ್ದೇನೆ- ಪತ್ನಿ ಮನೆ ಮುಂದೆ ರುಂಡ ಎಸೆದ ಪತಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆ

    ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆ

    ಚಿಕ್ಕಬಳ್ಳಾಪುರ: ಮೂರು ವರ್ಷದ ಮಗಳನ್ನು (Daughter) ಕತ್ತು ಹಿಸುಕಿ ಕೊಂದು ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ.

    ಕೌಟುಂಬಿಕ ಕಲಹದ (Family Feud) ಹಿನ್ನೆಲೆಯಲ್ಲಿ ಸುಧಾರಾಣಿ (32) ತನ್ನ ಮಗಳು ಸಾನ್ವಿಯ (3) ಕತ್ತು ಹಿಸುಕಿ ಕೊಲೆ ಮಾಡಿ ತಾನೂ ಬಾವಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸುಧಾರಾಣಿ ಹಾಗೂ ರವಿ ದಂಪತಿ ಆಗಾಗ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಗಂಡನ (Husband) ಮೇಲಿನ ಕೋಪಕ್ಕೆ ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತಗೋ ನಿನ್ನ ಲವ್ವರ್ ತಲೆ ತಂದಿದ್ದೇನೆ- ಪತ್ನಿ ಮನೆ ಮುಂದೆ ರುಂಡ ಎಸೆದ ಪತಿ!

    ಗುರುವಾರದಂದು ಮನೆಯಿಂದ ಹೋಗಿರುವ ಗಂಡ ರವಿ ಮತ್ತೆ ಮನೆಗೆ ಬಂದಿಲ್ಲ ಎಂದು ತಿಳಿದುಬಂದಿದೆ. ರವಿ ನಾಪತ್ತೆ ಹಿಂದೆ ಸಣ್ಣ ಅನುಮಾನ ಇದ್ದು, ಹೆಂಡತಿ (Wife) ಮಗಳನ್ನು ಕೊಂದು ಪರಾರಿಯಾದನಾ ಎಂಬ ಸಣ್ಣ ಅನುಮಾನವೂ ಮೂಡಿದೆ. ಈ ನಡುವೆ ವರದಕ್ಷಿಣೆ ಕಿರುಕುಳದ ಪ್ರಕರಣವೂ ರವಿ ವಿರುದ್ಧ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2 ವರ್ಷದ ಹೆಣ್ಣು ಮಗು ಅನುಮಾನಾಸ್ಪದ ಸಾವು – ತಾತನ ವಿರುದ್ಧವೇ ಕೊಲೆಯ ಶಂಕೆ