Tag: Wife

  • ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

    – ಪತ್ನಿಯ ಮೇಲೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ

    ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಪಾಪಿ ತಂದೆ ಇಬ್ಬರು ಪುಟ್ಟ ಮಕ್ಕಳ ಕುತ್ತಿಗೆ ಸೀಳಿ ಕೊಲೆ (Murder) ಮಾಡಿದ್ದು, ತನ್ನ ಮಡದಿಗೂ (Wife) ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಜರುಗಿದೆ.

    ಆದರ್ಶ (4) ಹಾಗೂ ಅಮೂಲ್ಯ (2) ತಂದೆಯಿಂದ ಕೊಲೆಯಾದ ದುರ್ದೈವಿ ಮಕ್ಕಳು. ಶ್ರೀಕಾಂತ್ ತನ್ನ ಇಬ್ಬರು ಮಕ್ಕಳನ್ನು ಕೊಂದು ತನ್ನ ಪತ್ನಿ ಲಕ್ಷ್ಮಿಗೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀಕಾಂತ್ ಗುಲ್ಬರ್ಗ (Gulbarga) ಜಿಲ್ಲೆಯ ಗಾಣಗಪುರ ಗ್ರಾಮದವನಾಗಿದ್ದು, ಲಕ್ಷ್ಮಿಯನ್ನು ವರಿಸಿ 6 ವರ್ಷಗಳಾಗಿತ್ತು. ಮದುವೆಯಾದಾಗಿನಿಂದ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆಯಾಗುತ್ತಿತ್ತು. ಬುಧವಾರ ಶ್ರೀಕಾಂತ್ ತನ್ನ ತಂದೆ, ತಾಯಿ ಜೊತೆ ಗಲಾಟೆ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರುಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅತ್ತೆ-ಮಾವನ ಮನೆಗೆ ಬಂದಿದ್ದಾರೆ. ಬಳಿಕ ಇಲ್ಲೇ ಒಂದು ಕೆಲಸ ಕೊಡಿಸಿ ನಾವು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದಾನೆ. ಇದನ್ನೂ ಓದಿ: ಬಾಡಿಗೆದಾರರ ಕಿರುಕುಳ – ಮನೆ ಒಡತಿ ಆತ್ಮಹತ್ಯೆ, ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು

    ಇದಕ್ಕೆ ಅತ್ತೆ-ಮಾವ ಸರಿ ಎಂದು ಹೇಳಿ ಎಲ್ಲರೂ ಊಟ ಮಾಡಿ ಪ್ರತ್ಯೇಕ ಮನೆಯಲ್ಲಿ ಮಲಗಿದ್ದಾರೆ. ಬೆಳಗಿನ ಜಾವ ಇದ್ದಕ್ಕಿದ್ದ ಹಾಗೆ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ (Hammer) ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಲಕ್ಷ್ಮಿ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾಳೆ. ಬಳಿಕ ಪಕ್ಕದಲ್ಲೇ ಇದ್ದ ಮಕ್ಕಳ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆಂಡತಿ ಹೆದರಿಸಲು ಬೆಂಕಿ ಹಚ್ಚಿಕೊಂಡ ಭೂಪ

    ಲಕ್ಷ್ಮಿ ತಾಯಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಲಕ್ಷ್ಮಿಯನ್ನು ಮೈಸೂರಿನ (Mysuru) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಏನು ತಪ್ಪು ಮಾಡದ ಎರಡು ಮುದ್ದಾದ ಜೀವಗಳು ತಂದೆಯ ಕ್ರೌರ್ಯಕ್ಕೆ ಬಲಿಯಾಗಿವೆ. ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀಕಾಂತ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

  • ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

    ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

    ವಿಜಯಪುರ: ಆತ್ಮೀಯ ಗೆಳೆಯ ಮತ್ತು ತನ್ನ ಪತ್ನಿಯ ರಾಸಲೀಲೆಗೆ ಪತಿ ಬಲಿಯಾದ ಘಟನೆ ನಡೆದಿದೆ.

    ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮೀಯ ಗೆಳಯ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾಳ ರಾಸಲೀಲೆಯನ್ನ ಕಣ್ಣಾರೆ ಕಂಡ ಪತಿ ಸೈಫನ್ ಹತ್ಯೆಗೀಡಾಗಿದ್ದಾನೆ. ಇದನ್ನೂ ಓದಿ: ಕಾಣೆಯಾದ ಕವಿತಾ ಶವವಾಗಿ ಪತ್ತೆ- ಗೆಳೆಯ ಸಲೀಂನಿಂದಲೇ ಹತ್ಯೆ

    ಕಳೆದ ತಿಂಗಳ ವಿಧಾನಸಭೆ ಮತದಾನದ ದಿನ ಮೇ 10 ರಂದು ಸೈಫನ್ ಮನೆಯಲ್ಲಿ ಫ್ಯಾನ್ ನ ಕರೆಂಟ್ ಶಾಕ್ ನಿಂದ ಸಾವಿಗೀಡಾದ ಬಗ್ಗೆ ತಿಳಿದು ಕುಟುಂಬಸ್ಥರು ಸಹಜ ಸಾವು ಎಂದು ಸೈಫನ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಸೈಫನ್ ಸಾವಿನ ಬಗ್ಗೆ ಅನುಮಾನ ಮೂಡಿ ಸೈಫನ್ ಸಾವು ಸಹಜ ಸಾವಲ್ಲ. ಇದು ಒಂದು ಹತ್ಯೆ. ಇದಕ್ಕೆ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾನೇ ಕಾರಣ ಅಂತಾ ಆರೋಪಿಸಿ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಕಾರಣ ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಸೈಫನ್ ದೇಹ ಮರು ಪರೀಕ್ಷೆಗೆ ಮಣ್ಣಿನಡಿಯಿಂದ ಸೈಫನ್ ದೇಹವನ್ನ ಹೊರತಗೆಯಲಾಗಿದೆ. ಸೈಫನ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಪಾರದರ್ಶಕ ತನಿಖೆ ನಡೆಸಿದ್ದಲ್ಲಿ ಸತ್ಯ ಹೊರಬೀಳುತ್ತಾ ಅಂತಾ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಕಾದು ಕುಳಿತಿದ್ದಾರೆ.

  • 15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

    15 ದಿನಗಳ ಹಿಂದಷ್ಟೇ ಡಿವೋರ್ಸ್- ಪತ್ನಿಯನ್ನು ಕೊಲ್ಲಲು ಪಿಸ್ತೂಲ್ ಖರೀದಿಸಿ ಅರೆಸ್ಟ್ ಆದ!

    ಚಿಕ್ಕೋಡಿ: ಹೆಂಡತಿಯನ್ನು (Wife) ಕೊಲ್ಲಲು ಕಂಟ್ರಿ ಪಿಸ್ತೂಲ್ ಖರೀದಿಸಿದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ (Maharashtra) ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಚಿಕ್ಕೋಡಿಯ ಸಚಿನ್ ಬಾಬಾಸಾಹೇಬ್ ರಾಯಮಾನೆ ಎಂದು ಗುರುತಿಸಲಾಗಿದೆ. 15 ದಿನಗಳ ಹಿಂದಷ್ಟೆ ಡಿವೋರ್ಸ್ ನೀಡಿ, ಈಗ ಪತ್ನಿಯನ್ನು ಕೊಲ್ಲಲು ಸ್ಕೆಚ್ ಹಾಕಿದ್ದ. ಮೀರಜ್ (Miraj) ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಒಡಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉಗಾಂಡದಲ್ಲಿ ಉಗ್ರರ ದಾಳಿ 37 ವಿದ್ಯಾರ್ಥಿಗಳ ಸಜೀವ ದಹನ

    ಮೀರಜ್‍ನ ಕುಪವಾಡ ಗ್ರಾಮದಲ್ಲಿ ಪಿಸ್ತೂಲ್ ಖರೀದಿಸಿದ್ದಾನೆ. ವಿಚಾರಣೆ ವೇಳೆ ಹೆಂಡತಿಯನ್ನು ಕೊಲ್ಲಲು ರಿವಾಲ್ವಾರ್ ಖರೀದಿಸಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಿಸಿ ಕೊಲೆಗೆ ಸ್ಕೆಚ್ ಹಾಕಿದ್ದಾಗಿ ಆರೋಪಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಚಿನ್ ಪತ್ನಿ ಹರ್ಷಿತಾ ತನ್ನ ಪ್ರಾಣಕ್ಕೇನಾದರೂ ಅಪಾಯ ಆದರೆ ಅದಕ್ಕೆ ಪತಿ (Husband) ಸಚಿನ್ ಕಾರಣ ಎಂದು ದೂರು ನೀಡಿದ್ದಾಳೆ. ಅಲ್ಲದೇ ತನಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾಳೆ. ಮೀರಜ್‍ನ ಗಾಂಧೀ ಚೌಕ್ ಹಾಗೂ ಚಿಕ್ಕೋಡಿ (Chikkodi) ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಕ್ಕಿ ಮಾರಾಟಕ್ಕೆ ಕೇಂದ್ರ ನಿರ್ಬಂಧ ಹೇರಿರುವ ಬಗ್ಗೆ ತೇಜಸ್ವಿ ಸೂರ್ಯ ಸ್ಪಷ್ಟೀಕರಣ

  • ಮಲಗಿದ್ದ ಪತಿಯ ಗುಪ್ತಾಂಗಕ್ಕೆ ಮಧ್ಯರಾತ್ರಿ ಕಾದ ಎಣ್ಣೆ ಎರಚಿ ಪತ್ನಿ ಎಸ್ಕೇಪ್!

    ಮಲಗಿದ್ದ ಪತಿಯ ಗುಪ್ತಾಂಗಕ್ಕೆ ಮಧ್ಯರಾತ್ರಿ ಕಾದ ಎಣ್ಣೆ ಎರಚಿ ಪತ್ನಿ ಎಸ್ಕೇಪ್!

    ಭೋಪಾಲ್: ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗುತ್ತಿದೆ. ಅಂತೆಯೇ ಇಲ್ಲೊಬ್ಬಳು ಪತ್ನಿ ತನ್ನ ಪತಿಯ ಗುಪ್ತಾಂಗಕ್ಕೆ ಬಿಸಿ ಬಿಸಿ ಎಣ್ಣೆ ಎರಚಿ ಗಾಯಗೊಳಿಸಿದ ಘಟನೆ ಮಧ್ಯಪ್ರದೇಶ (Madhyapradesh) ದ ಗ್ವಾಲಿಯರ್ ನಲ್ಲಿ ನಡೆದಿದೆ.

    ಘಟನೆ ಸಂಬಂಧ ಪತ್ನಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇತ್ತ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ನಡೆದಿದ್ದೇನು?: ಪತ್ನಿ ಯುವಕನೊಬ್ಬನ ಜೊತೆ ಅಕ್ರಮ ಸಂಬಂಧ (Illicit Relationship)  ಇಟ್ಟುಕೊಂಡಿದ್ದಳು. ಆಗಾಗ ಪ್ರಿಯತಮನಿಗೆ ಕಾಲ್, ಮೆಸೇಜ್ ಮಾಡಿಕೊಂಡು ಇದ್ದಳು. ಹೀಗೆ ಒಂದು ದಿನ ಆಕೆ ಫೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ತನ್ನ ಪತಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ.

    ಈ ಸಂಬಂಧ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದೆ. ಅಲ್ಲದೆ ಪತಿಯು ತನ್ನ ಪತ್ನಿ ಅಕ್ರಮ ಸಂಬಂಧವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪತ್ನಿ, ಪತಿ ನಿದ್ದೆಗೆ ಜಾರಿದ ಬಳಿಕ ಮಧ್ಯರಾತ್ರಿ ಎಣ್ಣೆಯನ್ನು ಬಿಸಿ (Boiled Oil) ಮಾಡಿ ಪತಿಯ ಗುಪ್ತಾಂಗಕ್ಕೆ ಎರಚಿದ್ದಾಳೆ. ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾಳೆ.

    ಇತ್ತ ಗಾಯಗೊಂಡ ಸುನಿಲ್ ದಾಕಡ್ (32) ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಬೃಹತ್‌ ಗಾತ್ರದ ಕಡಿದ ಮರ ತಬ್ಬಿಕೊಂಡು ಸೆಕ್ಸ್‌ – ವಿಕೃತಕಾಮಿ ಅರೆಸ್ಟ್‌

     

  • ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು

    ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು

    ಲಕ್ನೋ: ಪತ್ನಿಯ (Wife) ಮೇಲೆ ಹಾರಿಸಿದ ಗುಂಡು ತನಗೂ ತಗುಲಿ ದಂಪತಿ (Couple) ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ (Moradabad) ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ್ದ. ಅದೇ ಗುಂಡು ತನಗೂ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

    ಅನೇಕ್ ಪಾಲ್ (40) ಹಾಗೂ ಆತನ ಪತ್ನಿ ಸುಮನ್ ಪಾಲ್ (38) ಇಬ್ಬರೂ ಮೊಬೈಲ್ ಫೋನ್ ಕಳೆದು ಹೋಗಿದ್ದಕ್ಕಾಗಿ ಮಂಗಳವಾರ ಜಗಳವಾಡಿದ್ದರು. ಗಲಾಟೆ ತಿಳಿಯಾದ ಬಳಿಕ ಅನೇಕ್ ಪಾಲ್ ರಾತ್ರಿ ಪ್ರಾರ್ಥನೆ ಮುಗಿಸಿ ತನ್ನ ಪತ್ನಿಯ ಬಳಿಗೆ ಹೋಗಿದ್ದಾನೆ. ಏಕಾಏಕಿ ಪತ್ನಿಯನ್ನು ಅಪ್ಪಿಕೊಂಡು ಆಕೆಯ ಬೆನ್ನಿಗೆ ಗುಂಡು ಹಾರಿಸಿದ್ದಾನೆ. ಆದರೆ ಆತ ಪತ್ನಿಯನ್ನು ಅಪ್ಪಿಕೊಂಡಿದ್ದ ಕಾರಣ ಅದೇ ಗುಂಡು ಅನೇಕ್ ಪಾಲ್‌ನ ಎದೆಗೂ ತಗುಲಿದೆ. ಇದನ್ನೂ ಓದಿ: Biparjoy Cyclone ಅಬ್ಬರ ನಡುವೆ ಹೆಣ್ಣುಮಗುವಿಗೆ ‘ಬಿಪರ್‌ಜಾಯ್‌’ ಅಂತ ಹೆಸರಿಟ್ಟ ದಂಪತಿ

    ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾರೂ ಇಬ್ಬರೂ ಸಾವನ್ನಪ್ಪಿದ್ದಾರೆ. ಅನೇಕ್ ಪಾಲ್ ದೇಶೀಯ ನಿರ್ಮಿತ ಬಂದೂಕು ಬಳಸಿದ್ದು, ಅದನ್ನು ಆತ ಹೇಗೆ ಸಂಗ್ರಹಿಸಿದ್ದ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಂಪತಿಗೆ ಒಂದು ಹೆಣ್ಣು ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಇದೀಗ ಹೆಚ್ಚಿನ ತನಿಖೆಗೆ ದಂಪತಿಯ ಕುಂಟುಂಬದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!

  • ಪತ್ನಿಯನ್ನು ಕರೆತರಲು ಹೋಗಿ ಅತ್ತೆಗೆ ಚಾಕು ಇರಿದು ಪರಾರಿಯಾದ!

    ಪತ್ನಿಯನ್ನು ಕರೆತರಲು ಹೋಗಿ ಅತ್ತೆಗೆ ಚಾಕು ಇರಿದು ಪರಾರಿಯಾದ!

    ಬೆಂಗಳೂರು: ವ್ಯಕ್ತಿಯೊಬ್ಬ ತವರು ಮನೆಗೆ ತೆರಳಿದ್ದ ತನ್ನ ಪತ್ನಿಯನ್ನು ಕರೆದುಕೊಂಡು ಬರಲೆಂದು ಹೋಗಿ ಅತ್ತೆಗೆ ಚಾಕು ಇರಿದ (Mother-in-Law was Stabbed By Son In Law) ಪರಾರಿಯಾಗುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಗೀತಾ ಅಳಿಯ ಮನೋಜ್ ನಿಂದ ಚಾಕು ಇರಿತಕ್ಕೊಳಾಗದ ಅತ್ತೆ. ಈ ಘಟನೆ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಮನೋಜ್ ಬೌನ್ಸರ್ (Bouncer) ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ್ಯ ಮೂಲದ ವರ್ಷಿತಾ ಪರಿಚಯವಾಗಿ ಮನೆಯವರ ವಿರೋಧದ ನಡುವೆ ಪ್ರೀತಿಸಿ (Love Marriage) ಮದುವೆಯಾಗಿದ್ದರು. ಮದುವೆಯ ನಂತರ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ ಪತ್ನಿ ಗಂಡನ ಮನೆ ಬಿಟ್ಟು ತವರು ಮನೆಗೆ ಬಂದಿದ್ದ.

    ಹೆಂಡತಿಯನ್ನು ಜೊತೆಗೆ ಕಳುಹಿಸಿ ಕೊಡುವಂತೆ ಅತ್ತೆಯ ಜೊತೆಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅಳಿಯ ಅತ್ತೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.

    ಸದ್ಯ ಆರೋಪಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗೋಸ್ಕರ ಪತಿಯನ್ನೇ ಮುಗಿಸಿದ ಖತರ್ನಾಕ್ ಲೇಡಿ – ಕೊನೆಗೇನಾಯ್ತು ನೋಡಿ..

  • ಗಂಡ ಬೇರೆ ಮನೆಮಾಡದ್ದಕ್ಕೆ ತವರಿಗೆ ಕರೆಸಿ ಅತ್ತೆಯನ್ನೇ ಕೊಂದ ಸೊಸೆ!

    ಗಂಡ ಬೇರೆ ಮನೆಮಾಡದ್ದಕ್ಕೆ ತವರಿಗೆ ಕರೆಸಿ ಅತ್ತೆಯನ್ನೇ ಕೊಂದ ಸೊಸೆ!

    – ಪತಿ ಕುಟುಂಬಸ್ಥರಿಂದ ಗಂಭೀರ ಆರೋಪ

    ಬೆಳಗಾವಿ: ಪತಿ (Husband) ಹಾಗೂ ಅತ್ತೆಯ ಮೇಲೆ ಸೊಸೆಯೊಬ್ಬಳು ಹಲ್ಲೆ ಮಾಡಿಸಿ ಅತ್ತೆಯನ್ನು ಕೊಲ್ಲಿಸಿದ ಪ್ರಕರಣ ಬೈಲಹೊಂಗಲದಲ್ಲಿ (Bailhongal) ನಡೆದಿದೆ.

    ಮೃತಳನ್ನು ಮಹಾಬೂಬಿ ಯಾಕೂಶಿ (53) ಎಂದು ಗುರುತಿಸಲಾಗಿದೆ. ಮೇಹರೂಣಿ ಯಾಕೂಶಿ ಹಲ್ಲೆ ಮಾಡಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಗಂಡ ಸುಬಾನ್ ಬೇರೆ ಮನೆ ಮಾಡಲಿಲ್ಲ ಎಂದು ಪತ್ನಿ (Wife) ಈ ಕೃತ್ಯ ಎಸಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: Bomb Threatː ಬೆಂಗಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ..!

    ಮೇಹರೂಣಿ ಯಾಕೂಶಿ, ಪತಿ ಬೇರೆ ಮನೆ ಮಾಡಲಿಲ್ಲ ಎಂದು ಮನೆ ತೊರೆದು ತವರು ಮನೆಗೆ ತೆರಳಿದ್ದಾಳೆ. ಸ್ವಲ್ಪ ದಿನಗಳ ಬಳಿಕ ಅತ್ತೆ ಹಾಗೂ ಪತಿಯನ್ನು ತನ್ನ ತವರು ಮನೆಗೆ ಕರೆಸಿದ್ದಾಳೆ. ಈ ವೇಳೆ ತನ್ನ ಇಬ್ಬರೂ ಸಹೋದರರೊಂದಿಗೆ ಸೇರಿ ಅತ್ತೆ ಹಾಗೂ ಪತಿಯ ಮೇಲೆ ರಾಡ್‍ನಿಂದ ದಾಳಿ ನಡೆಸಿದ್ದಾರೆ ಎಂಬ ಆರೋಪ ಬಂದಿದೆ.

    ಮೇ 22ರಂದು ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಮೂರು ವರ್ಷದ ಹಿಂದೆ ಮೇಹರೂಣಿ ಮತ್ತು ಸುಬಾನ್ ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಬಳಿಕ ಬೇರೆ ಮನೆ ಮಾಡುವಂತೆ ಗಂಡನೊಂದಿಗೆ ಜಗಳ ಆಡುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರನ್ನು ಬಂಧಿಸುವಂತೆ ಪತಿ ಮತ್ತು ಕುಟುಂಬಸ್ಥರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

  • ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

    ಲಕ್ನೋ: ಪತ್ನಿಯೊಂದಿಗೆ (Wife) ಜಗಳವಾಡಿ ಕೋಪಗೊಂಡಿದ್ದ ವ್ಯಕ್ತಿ (Man) ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಅಶ್ಲೀಲ ಫೋಟೋದೊಂದಿಗೆ (Obscene Phot0) ಆಕೆಯ ನಂಬರ್ ಅನ್ನು ಬರೆದು ಬೀದಿಗಳಲ್ಲಿ ಪೋಸ್ಟರ್ (Poster) ಹಚ್ಚಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಆಗ್ರಾದ (Agra) ವ್ಯಕ್ತಿ ತನ್ನದೇ ಪತ್ನಿಯ ಅಶ್ಲೀಲ ಫೋಟೋ ಇರುವ ಪೋಸ್ಟರ್‌ಗಳನ್ನು ಬೀದಿಗಳಲ್ಲಿ ಹಚ್ಚಿರುವ ವೀಡಿಯೋ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಕಳೆದ 6 ವರ್ಷಗಳಿಂದ ಪತಿ ಹಾಗೂ ಪತ್ನಿ ಜಗಳವಾಡುತ್ತಿದ್ದು, ವ್ಯಕ್ತಿ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಇಂತಹ ಕೃತ್ಯ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರೂಮಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಪರಾರಿ!

    ಘಟನೆ ಬಗ್ಗೆ ಮಹಿಳೆ ತನ್ನ ಪತಿಯ ವಿರುದ್ಧ ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಾತ್ರವಲ್ಲದೇ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯನ್ನು ಹಾಕಿದ್ದಾಳೆ. ಇದನ್ನೂ ಓದಿ: ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

  • ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

    ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

    ಹಾವೇರಿ: ಹೆಂಡತಿಯನ್ನು (Wife) ಬರ್ಬರವಾಗಿ ಕೊಲೆ (Murder) ಮಾಡಿದ ಪತಿ (Husband) ತಾನೂ ನೇಣಿಗೆ ಶರಣಾಗಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಹಾವೇರಿ ತಾಲೂಕಿನ ಸಂಗೂರು (Sangur) ಗ್ರಾಮದಲ್ಲಿ ಘಟನೆ ನಡೆದಿದ್ದು, ದ್ರಾಕ್ಷಾಣೆವ್ವ (45) ಎಂಬಾಕೆಯನ್ನು ಆಕೆಯ ಪತಿ ಪ್ರಭು ವಾರತಿ (52) ಎಂಬಾತ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ್ದ ಕಾರಣ ಪ್ರತಿದಿನ ಮನೆಯಲ್ಲಿ ಜಗಳ (Fight) ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯ, ಹೊಟ್ಟೆಯಲ್ಲೇ ಮಗು ಸಾವು – ಗ್ರಾಮಸ್ಥರಿಂದ ವೈದ್ಯರ ತರಾಟೆ

    ಮಂಗಳವಾರ ಇದೇ ರೀತಿ ಜಗಳ ಆಡುತ್ತಿದ್ದ ಸಂದರ್ಭ ಇವರ ಜಗಳ ಅತಿರೇಕಕ್ಕೆ ಹೋಗಿ ಇಬ್ಬರ ನಡುವೆ ಹೊಡೆದಾಟ ಪ್ರಾರಂಭವಾಗಿದೆ. ಈ ವೇಳೆ ಗಂಡ ಮಚ್ಚಿನಿಂದ ಹೆಂಡತಿಯನ್ನು ಹತ್ಯೆ ಮಾಡಿದ್ದು, ಬಳಿಕ ತಾನೂ ಮನೆಯ ಮುಂದೆ ನೇಣಿಗೆ ಶರಣಾಗಿದ್ದಾನೆ. ಸತಿ-ಪತಿಯ ಸಾವಿನಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು- ಯುವತಿ ಸಾವು

  • ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ಬೆಂಗಳೂರು: ಗಂಡನೇ ಹೆಂಡ್ತಿ (Wife Murdered By Husband) ಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

    ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

    ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ, ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಟ್ಟಿದ್ದ ಅಯ್ಯಪ್ಪ, ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು

    ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಸವೇಶ್ವರ ನಗರ ಪೊಲೀಸರಿಂದ ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆ (Basaveshwar nagar Police Station) ಯಲ್ಲಿ ಪ್ರಕರಣ ದಾಖಲಾಗಿದೆ.