Tag: Wife

  • ಪತ್ನಿಗೆ ಇಷ್ಟವೆಂದು ಕತ್ತೆಯನ್ನೇ ಗಿಫ್ಟ್ ಮಾಡಿದ ಪತಿ

    ಪತ್ನಿಗೆ ಇಷ್ಟವೆಂದು ಕತ್ತೆಯನ್ನೇ ಗಿಫ್ಟ್ ಮಾಡಿದ ಪತಿ

    ಇಸ್ಲಾಮಾಬಾದ್: ಪಾಕಿಸ್ತಾನದ ಯೂಟ್ಯೂಬರ್ (Pakistani Youtuber) ಒಬ್ಬರು ತಮ್ಮ ಮದುವೆಯ ದಿನದಂದು ತನ್ನ ಪತ್ನಿಗೆ (Wife) ಕತ್ತೆಯನ್ನು (Donkey) ಉಡುಗೊರೆಯಾಗಿ (Gift) ನೀಡಿದ್ದಾರೆ.

    ಕರಾಚಿಯ ಯೂಟ್ಯೂಬರ್ ಅಜ್ಲಾನ್ ಶಾ ಅವರು ಆರತಕ್ಷತೆಯಲ್ಲಿ ಕತ್ತೆ ಮರಿಯೊಂದನ್ನು ತಂದು, ತನ್ನ ಪತ್ನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನು ನೋಡಿದ ಪತ್ನಿ ವಾರಿಷಾ ಮೊದಲು ಆಶ್ಚರ್ಯ ಹಾಗೂ ಸಂತೋಷಗೊಂಡಿದ್ದಾರೆ.

     

    View this post on Instagram

     

    A post shared by Azlan Shah (@azlanshahofficial)

    ವಾರಿಷಾ ಕತ್ತೆ ಮರಿಗಳನ್ನು ಪ್ರೀತಿಸುತ್ತಾಳೆ ಎಂದು ನನಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿ ಆಕೆಗೆ ಮದುವೆಯ ಉಡುಗೊರೆಯಾಗಿ ಕತ್ತೆ ಮರಿಯನ್ನು ತಂದಿದ್ದೇನೆ. ಜೊತೆಗೆ ಕತ್ತೆಯೂ ವಿಶ್ವದ ಅತ್ಯಂತ ಶ್ರಮಶೀಲ ಹಾಗೂ ಪ್ರೀತಿಯ ಪ್ರಾಣಿಯಾಗಿದೆ ಎಂದು ಅಜ್ಲಾನ್ ಶಾ ತಿಳಿಸಿದರು. ವಾರಿಷಾಗೆ ಕತ್ತೆ ಮರಿಯನ್ನು ಉಡುಗೊರೆಯಾಗಿ ನೀಡಿದ್ದ ವಿಡಿಯೋವನ್ನು ಶಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌

    ಈ ವೀಡಿಯೋದಲ್ಲಿ ಕತ್ತೆಯನ್ನು ಅಜ್ಲಾನ್ ಶಾ ವರಿಷಾಗೆ ನೀಡುತ್ತಿದ್ದಾರೆ. ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿರುವ ಫೋಟೋಕ್ಕೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಒಬ್ಬಾತ ಒಂದು ಕತ್ತೆಯ ಜೊತೆ ಇನ್ನೊಂದು ಕತ್ತೆ ಫ್ರೀ ಎಂದು ತಿಳಿಸಿದ್ದಾರೆ. ಕತ್ತೆ ಮುಗ್ಧ ಪ್ರಾಣಿ ಎಂದು ಇನ್ನೊಬ್ಬಾತ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಅಪಮಾನ – ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ ಮುಖಕ್ಕೆ ಮಸಿ ಬಳಿದು ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಣ- ಬೆಂಗ್ಳೂರಲ್ಲೊಬ್ಬ ಸೈಕೋಪಾತ್ ಪತಿ!

    ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಣ- ಬೆಂಗ್ಳೂರಲ್ಲೊಬ್ಬ ಸೈಕೋಪಾತ್ ಪತಿ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ (Video) ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಸಂಗವೊಂದು ಬೆಳಕಿಗೆ ಬಂದಿದೆ.

    ಸೈಕೋವನ್ನು ಸಂಪಿಗೆಹಳ್ಳಿ (Sampigehalli) ನಿವಾಸಿ ಜಾನ್ ಪಾಲ್ ಎಂದು ಗುರುತಿಸಲಾಗಿದೆ. ಈತನನ್ನು ಮಹಿಳಾ ಟೆಕ್ಕಿ (Woman Techie) ಯೊಬ್ಬರು 2011ರ ಏಪ್ರಿಲ್‍ನಲ್ಲಿ ವಿವಾಹವಾಗಿದ್ದಾರೆ.

    2015 ರಿಂದ ತನ್ನ ವಿಕೃತಿ ಶುರು ಮಾಡಿದ್ದ ಆರೋಪಿ ಪತಿ ಜಾನ್‍ಪಾಲ್, ಮನೆಗೆ ತನ್ನ ಗೆಳೆಯರನ್ನ ಕರೆದು ಪಾರ್ಟಿ ಮಾಡಿ ನಂತರ ಗೆಳೆಯರೊಂದಿಗೆ ಬೆಡ್ ಶೇರ್ ಮಾಡು ಎಂದು ಒತ್ತಾಯಿಸುತ್ತಿದ್ದ. ಪತಿಯ ಹಲ್ಲೆಯಿಂದ ತಾಳಲಾರದೇ ಆತನ ಗೆಳೆಯರೊಂದಿಗೆ ಮಹಿಳಾ ಟೆಕ್ಕಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ಸೂಚಿಸುತ್ತಿದ್ದರು. ಇದನ್ನೂ ಓದಿ: ಹಾದಿ ಬೀದಿಯಲ್ಲಿ ಹುಡುಗಿಯರನ್ನ ರೇಗಿಸಿದ್ರೆ 2 ವರ್ಷ ಜೈಲು..!

    ತನ್ನ ಸ್ನೇಹಿತರಾದ ಸಜೀಶ್ ಹಾಗೂ ನಾಜಿ ಎಂಬವರ ಜೊತೆ ತನ್ನ ಪತ್ನಿಯನ್ನ ಮಲಗಿಸುತ್ತಿದ್ದನು. ಅಲ್ಲದೆ ಮಲಗಿದ ಫೋಟೋ ಹಾಗೂ ವೀಡಿಯೋಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುವ ಮೂಲಕ ವಿಕೃತಿ ಮೆರೆಯುತ್ತಿದ್ದನು. ಪತ್ನಿಯ ಮೇಲೆ ವಿಕೃತಿ ಮೆರೆದಿದ್ದಲ್ಲದೇ ಪತ್ನಿಯ ತಂಗಿಯನ್ನು ತನ್ನೊಡನೆ ಮಲಗುವಂತೆ ಕಿರುಕುಳ ನೀಡಿದ್ದಾನೆ.

    ಗಂಡನ ಕಿರುಕುಳಕ್ಕೆ ಬೇಸತ್ತು ಇದೀಗ ಮಹಿಳಾ ಟೆಕ್ಕಿ ವಿಚ್ಛೇದನ ನೀಡಲು ಮುಂದಗಿದ್ದಾರೆ. ಈ ವೇಳೆ ಪತ್ನಿ ತನ್ನ ಗೆಳೆಯರೊಂದಿಗಿನ ಅಶ್ಲೀಲ ಫೋಟೋ ವೀಡಿಯೋ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ. ನೊಂದ ಪತ್ನಿ ಸಂಪಿಗೆಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಸೈಕೋಪಾತ್ ಜಾನ್ ಪಾಲ್ ಗಾಂಜಾ ವ್ಯಸನಿಯಾಗಿದ್ದು, ಮನೆಯಲ್ಲಿಯೇ ಗಾಂಜಾ ಸಸಿಗಳನ್ನ ಫಾಟ್ ಗಳಲ್ಲಿ ಬೆಳೆದಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

    ದೂರಿನನ್ವಯ ಲೈಂಗಿಕ ಕಿರುಕುಳ, ಎನ್.ಡಿ.ಪಿ.ಎಸ್ ಹಾಗೂ ಐಟಿ ಆಕ್ಟ್ ಅಡಿ ಕೇಸ್ ದಾಖಲು ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭೀಕರ ಅಪಘಾತ-  ಸಿಪಿಐ, ಪತ್ನಿ ಸಾವು

    ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ.

    ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಸಿಬ್ಬಂದಿ ಉದ್ಧಟತನ – ಗಾಯಾಳುವನ್ನು ಅಪಘಾತದ ಸ್ಥಳದಲ್ಲೇ ಬಿಟ್ಟು ವಾಪಸ್

    ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನ ಪತ್ನಿ, ಮಗುವಿಗೆ ಆ್ಯಸಿಡ್ ಎರೆಚಿದ ಮಹಿಳೆ

    ಪ್ರಿಯಕರನ ಪತ್ನಿ, ಮಗುವಿಗೆ ಆ್ಯಸಿಡ್ ಎರೆಚಿದ ಮಹಿಳೆ

    ಮುಂಬೈ: ಮಹಿಳೆಯೊಬ್ಬಳು (Woman) ತನ್ನ ಪ್ರಿಯಕರನ ಪತ್ನಿ (Wife) ಹಾಗೂ ಎರಡೂವರೆ ವರ್ಷದ ಮಗುವಿನ ಮೇಲೆ ಆ್ಯಸಿಡ್ (Acid) ಸುರಿದ ಘಟನೆ ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿ ನಡೆದಿದೆ.

    25 ವರ್ಷದ ಮಹಿಳೆಯು ಸಂತ್ರಸ್ತೆಯ ಪತಿಯ ಜೊತೆಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಆಗಾಗ ಈ ಬಗ್ಗೆ ಮಹಿಳೆ ಹಾಗೂ ಸಂತ್ರಸ್ತೆಯ ಮಧ್ಯೆ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತ್ರಸ್ತೆಗೆ ಆ್ಯಸಿಡ್ ಹಾಕಲು ಪ್ಲ್ಯಾನ್ ಮಾಡಿದ್ದಾಳೆ.

    crime

    ಆ ಪ್ರಕಾರವಾಗಿಯೇ ತನ್ನ ಸ್ನೇಹಿತರನ್ನು ಸಂತ್ರಸ್ತೆಯ ಮನೆಗೆ ಕರೆದೊಯ್ದು ಆಕೆಯ ಮೇಲೆ ಹಾಗೂ ಸಂತ್ರೆಸ್ತೆಯ ಮಗನ (Son) ಮೇಲೆ ಆ್ಯಸಿಡ್ ಎರಚಿದಳು. ಅದಾದ ಬಳಿಕ ಮಹಿಳೆ ಅಲ್ಲಿಂದ ಪರಾರಿಯಾದಳು. ಇದನ್ನೂ ಓದಿ: ಮುಲ್ಲಾಗಳಿಗೆ ಬಿಜೆಪಿಯಿಂದ ಅವಮಾನ- ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ

    ಇನ್ನೂ ಘಟನೆಗೆ ಸಂಬಂಧಿಸಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಇಬ್ಬರು ಮುಖದ ಮೇಲೆ ಆದ ಸುಟ್ಟಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಯಶೋಧರ ನಗರ ಪೊಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಲಾರಿ ಕೆಳಗೆ ಪತ್ನಿಯನ್ನು ತಳ್ಳಿ ಸಾಯಿಸಿದ ಪತಿ

    ಲಾರಿ ಕೆಳಗೆ ಪತ್ನಿಯನ್ನು ತಳ್ಳಿ ಸಾಯಿಸಿದ ಪತಿ

    ಚಿಕ್ಕಬಳ್ಳಾಪುರ: ಗಂಡ, ಹೆಂಡತಿಯ ಜಗಳ ಉಂಡು ಮಲಗುವ ತನಕ ಅಂತಾರೆ. ಆದರೆ ಇಲ್ಲೊಂದು ದಂಪತಿಯ ಜಗಳ ವಿಕೃತ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಚಿಂತಾಮಣಿ ನಗರದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮೂಲದ ಸುಮೈರಾ ಸುಲ್ತಾನ್ (40) ಹಾಗೂ ಶಿಡ್ಲಘಟ್ಟ ಮೂಲದ ಮುನಿಕೃಷ್ಣ ಇಬ್ಬರು ಕಳೆದ ಕೆಲವು ವರ್ಷಗಳಿಂದ ಲೀವ್‌ ಇನ್‌ ರಿಲೇಶನ್‌ ಶಿಪ್‌ನಲ್ಲಿದ್ದರು. ಆದರೆ ಇಬ್ಬರೂ ಸ್ಥಳೀಯರ ಬಳಿ ತಾವು ಪತಿ, ಪತ್ನಿಯರೆಂದೇ ಹೇಳಿಕೊಂಡು ಓಡಾಡುತ್ತಿದ್ದರು. ಆದರೆ  ಇಂದು ನಗರದ ಗ್ರಂಥಾಲಯ ಮುಂದೆ ನಡು ರಸ್ತೆಯಲ್ಲಿ ಜಗಳ ಮಾಡಿಕೊಂಡು ನೂಕಾಟ ತಳ್ಳಾಟ ಮಾಡುತ್ತಿದ್ದರು. ಆಗ ರಸ್ತೆಯಲ್ಲಿ ಲಾರಿಯೊಂದು ಬಂದಿದೆ. ಲಾರಿಯನ್ನು ನೋಡಿದ ಆಕೆಯ ಗಂಡ ಮುನಿಕೃಷ್ಣ, ಉದ್ದೇಶ ಪೂರ್ವಕವಾಗಿಯೇ ಸುಮೈರಾ ಸುಲ್ತಾನ್‌ಳನ್ನು ಲಾರಿ ಕೆಳಗೆ ತಳ್ಳಿದ್ದಾನೆ. ಇದರಿಂದ ಸುಮೈರಾ ಸುಲ್ತಾನ್‌ ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾಳೆ.

    ಅಲ್ಲೇ ಪಕ್ಕದಲ್ಲಿದ್ದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಆರೋಪಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ.  ಒಟ್ಟಿಗೆ ಇರುವ ಮೊದಲೇ ಇಬ್ಬರಿಗೂ ಬೇರೆ ಬೇರೆ ವಿವಾಹವಾಗಿತ್ತು. ಆದರೆ 8 ವರ್ಷಗಳ ಹಿಂದೆ ತಮ್ಮ ತಮ್ಮ ಸಂಸಾರ ಬಿಟ್ಟು ಚಿಂತಾಮಣಿ ನಗರದದಲ್ಲಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ದಂಪತಿಗೆ ಬಾಬಾಜಾನ್ ಎನ್ನುವ 4 ವರ್ಷದ ಮಗುವಿದೆ. ಇದನ್ನೂ ಓದಿ: ಮೈಸೂರು ರಿಂಗ್ ರಸ್ತೆ – ಬೀದಿ ದೀಪಗಳ MCBಯನ್ನೇ ಕದ್ದ ಕಳ್ಳರು

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷರಾದ ರಂಗಸ್ವಾಮಯ್ಯ ಮತ್ತು ಸಿಬ್ಬಂದಿ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಲಾರಿಯನ್ನು ವಶಕ್ಕೆ ಪಡೆದು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಲೇಡಿ PSI ಕಿರುಕುಳ ಆರೋಪ- ಡೆತ್‌ನೋಟ್ ಬರೆದಿಟ್ಟು ಯುವಕ ನಾಪತ್ತೆ

    Live Tv
    [brid partner=56869869 player=32851 video=960834 autoplay=true]

  • ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?

    ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?

    ನವದೆಹಲಿ: ಶ್ರದ್ಧಾ ವಾಕರ್ ಕ್ರೂರ ಹತ್ಯೆಯ ಕಾವು ಆರುವ ಮುನ್ನವೇ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ ಬೆಳಕಿಗೆ ಬಂದಿದ್ದು, ಸ್ವತಃ ಪತ್ನಿಯೇ ಮಗನೊಂದಿಗೆ ಸೇರಿ ಗಂಡನನ್ನ ಕೊಂದು, ಫ್ರಿಡ್ಜ್ನಲ್ಲಿ ಸಂಗ್ರಹಿಸಿಟ್ಟಿದ್ದಲ್ಲದೇ ದೆಹಲಿ ನೆರೆಹೊರೆಯ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ ಘಟನೆ ನಡೆದಿದೆ. ಯಾವ ಸೀನಿಮಾಗೂ ಕಡಿಮೆಯಿಲ್ಲದಂತೆ ಪಕ್ಕಾ ಪ್ಲ್ಯಾನ್‌ ಮಾಡಿ ಕೊಲೆ ಮಾಡಲಾಗಿದೆ.

    ಹತ್ಯೆ ಮಾಡಿದ್ದು ಹೇಗೆ?
    ಪೂನಂ ಮತ್ತು ಆಕೆಯ ಮಗ ದೀಪಕ್ ಅಕ್ರಮ ಸಂಬಂಧ ಹೊಂದ್ದರಿಂದಾಗಿ ಅಂಜನ್ ದಾಸ್ ಅವರನ್ನ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    2016ರಲ್ಲಿ ಪೂನಂ ಮಾಜಿ ಪತಿ ಕಲ್ಲು ನಿಧನರಾದ ನಂತರ 2017ರಲ್ಲಿ ಅಂಜನ್ ದಾಸ್ ಅವರನ್ನ ಮದುವೆಯಾದ್ರು. ಮೃತ ಅಂಜನ್ ಬಿಹಾರದಲ್ಲಿ ಮದುವೆಯಾಗಿ 8 ಮಕ್ಕಳನ್ನು ಹೊಂದಿದ್ದರು. ಆದರೆ ಸಂಪಾದನೆ ಮಾಡುತ್ತಿರಲಿಲ್ಲ. ಇದರಿಂದ ತಾಯಿ ಮಗ ಬೇಸತ್ತಿದ್ದರು. ಮೊದಲು ಅಂಜನ್ ದಾಸ್‌ಗೆ ಮದ್ಯದಲ್ಲಿ ನಿದ್ರೆ ಮಾತ್ರೆ ಬೆರಸಿ ಕೊಟ್ಟಿದ್ದಾರೆ. ನಿದ್ರೆಗೆ ಜಾರಿದ ನಂತರ ಕತ್ತು ಕೊಯ್ದು ರಕ್ತವನ್ನು ಸಂಪೂರ್ಣವಾಗಿ ಹೊರಹೋಗಲು ಶವವನ್ನು ಮನೆಯಲ್ಲೇ ಬಿಟ್ಟಿದ್ದಾರೆ.

    ದೇಹದಿಂದ ರಕ್ತ ಸಂಪೂರ್ಣವಾಗಿ ಹರಿದುಹೋದ ನಂತರ 10 ತುಂಡುಗಳಾಗಿ ಕತ್ತರಿಸಿ, ಪ್ರಿಡ್ಜ್‌ನಲ್ಲಿ ಶೇಖರಿಸಿಟ್ಟು ಪಾಂಡವ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ. ಇದನ್ನೂ ಓದಿ: ಕುಂಬಳಕಾಯಿ ಕೇಳುವ ಧೈರ್ಯ ಬೆಳೆಸಿಕೊಳ್ಳಿ: ಸತೀಶ್ ಜಾರಕಿಹೊಳಿ

    ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ತಾಯಿ ಮಗ ಇಬ್ಬರನ್ನು ಬಂಧಿಸಲಾಗಿದೆ. ಈಗಾಗಲೇ ಹೂತಿಟ್ಟಿದ್ದ 6 ತುಂಡುಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ದೇಹದ ಮುಂಡ ಸಿಕ್ಕಿಲ್ಲ. ಅಲ್ಲದೇ ಕೊಲೆಗೆ ಬಳಸಿದ ಆಯುಧಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ನವದೆಹಲಿ: ಇಡೀ ದೇಶವನ್ನೇ ನಡುಗಿಸಿದ ದೆಹಲಿಯ (Delhi) ಶ್ರದ್ಧಾ ವಾಕರ್ (Shraddha Walkar) ಕ್ರೂರ ಹತ್ಯೆಯ ಬೆನ್ನಲ್ಲೇ ಇನ್ನೊಂದು ಅಂತಹುದೇ ಭೀಕರ ಹತ್ಯೆ (Murder) ನಡೆದಿದೆ. ಪತಿಯನ್ನು (Husband) ಕೊಂದು, ಆತನ ದೇಹವನ್ನು ಕತ್ತರಿಸಿ, ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದು ಮಾತ್ರವಲ್ಲದೇ ದೆಹಲಿ ನೆರೆಹೊರೆಯ ಪ್ರದೇಶಗಳಲ್ಲಿ ಹೂತು ಹಾಕಿದ ಆರೋಪದ ಮೇಲೆ ಮಹಿಳೆ (Wife) ಹಾಗೂ ಆಕೆಯ ಮಗನನ್ನು (Son) ಪೊಲೀಸರು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ, ಜೂನ್‌ನಲ್ಲಿ ಪಾಂಡವ ನಗರದಲ್ಲಿ ಪೊಲೀಸರಿಗೆ ಮೊದಲ ಬಾರಿಗೆ ಮನುಷ್ಯನ ಕೆಲ ದೇಹದ ಭಾಗಗಳು ಸಿಕ್ಕಿದ್ದವು. ಅವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಭೀಕರ ವಿವರಗಳು ಬೆಳಕಿಗೆ ಬರುತ್ತಲೇ ಈ ಅಪರಿಚಿತ ದೇಹದ ಭಾಗಗಳು ಆಕೆಯದೇ ಎಂಬ ಬಗ್ಗೆ ತನಿಖೆ ನಡೆಸಲಾಗಿದೆ. ಆದರೆ ಆ ದೇಹದ ಭಾಗಗಳು ಶ್ರದ್ಧಾ ವಾಕರ್‌ಗೆ ಸೇರಿದ್ದಲ್ಲ, ಬದಲಿಗೆ ಅವು ಪಾಂಡವ ನಗರ ನಿವಾಸಿ ಅಂಜನ್ ದಾಸ್ ಎಂಬವರದ್ದು ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

    ಆರೋಪಿಗಳಾದ ಪೂನಂ ಮತ್ತು ಆಕೆಯ ಮಗ ದೀಪಕ್ ಜೂನ್‌ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ದಾಸ್ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಸ್‌ಗೆ ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ ನಂತರ ಕೊಲೆ ಮಾಡಲಾಗಿದೆ. ಬಳಿಕ ಅವರ ದೇಹವನ್ನು ಕತ್ತರಿಸಿ, ತುಂಡುಗಳನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿಟ್ಟಿದ್ದು, ಪಾಂಡವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೂತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ಭೀಕರ ಹತ್ಯೆ ಪ್ರಕರಣ – ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟ ಕಿರಾತಕ

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನೂ ಹುಡುಕಿದ್ದಾರೆ. ವೀಡಿಯೋದಲ್ಲಿ ದೀಪಕ್ ತಡರಾತ್ರಿ ಕೈಯಲ್ಲಿ ಚೀಲವೊಂದನ್ನು ಹಿಡಿದುಕೊಂಡು ಹೋಗಿದ್ದು, ಆತನ ತಾಯಿ ಪೂನಂ ದೀಪಕ್‌ನನ್ನು ಹಿಂಬಾಲಿಸುವುದು ಕಂಡುಬಂದಿದೆ. ಆರೋಪಿಗಳು ದಾಸ್ ಅವರ ತುಂಡರಿಸಿದ ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಚೀಲದಲ್ಲಿ ಕೊಂಡೊಯ್ದಿದ್ದಾರೆ ಎಂದು ಶಂಕಿಸಲಾಗಿದೆ.

    6 ತಿಂಗಳ ಹಿಂದೆ ದೆಹಲಿಯಲ್ಲಿ ಅಫ್ತಾಬ್ ಪೂನಾವಾಲಾ ತನ್ನ ಲಿವ್‌ಇನ್ ಪಾರ್ಟ್‌ನರ್ ಶ್ರದ್ಧಾ ವಾಕರ್ ಕತ್ತು ಹಿಸುಕಿ ಹತ್ಯೆ ನಡೆಸಿದ್ದು, ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ, ದಕ್ಷಿಣ ಮೆಹ್ರೌಲಿ ಅರಣ್ಯದಲ್ಲಿ ಹೂತಿದ್ದ. ಈ ಭೀಕರ ಹತ್ಯೆ ಕೆಲ ದಿನಗಳ ಹಿಂದೆಯಷ್ಟೇ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನೊಂದಿಗೆ ಸರಸವಾಡಲು ಪತಿಯನ್ನೇ ಕೊಂದ್ಲು – 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಹೂತಿಟ್ಳು

    ಪ್ರಿಯಕರನೊಂದಿಗೆ ಸರಸವಾಡಲು ಪತಿಯನ್ನೇ ಕೊಂದ್ಲು – 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಹೂತಿಟ್ಳು

    ಚಂಡೀಗಢ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಪತಿಯ ಕತ್ತು ಹಿಸುಕಿ ಕೊಂದು 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಶವವನ್ನು ಹೂತು ಹಾಕಿರುವ ಘಟನೆ ಪಂಜಾಬ್‍ನ (Punjab) ಸಂಗ್ರೂರ್ (Sangrur) ಜಿಲ್ಲೆಯಲ್ಲಿ ನಡೆದಿದೆ.

    ಬಕ್ಷೀವಾಲಾ ನಿವಾಸಿ ಅಮ್ರಿಕ್ ಸಿಂಗ್ ಮೃತ ದುರ್ದೈವಿಯಾಗಿದ್ದು, ಸುಮಾರು ಒಂದು ತಿಂಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ಶನಿವಾರ ಮೃತದೇಹವನ್ನು ಶೌಚಾಲಯದ ಗುಂಡಿಯಿಂದ ಹೊರ ತೆಗೆಯಲಾಗಿದೆ. ಇದನ್ನೂ ಓದಿ: ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ನಡೀತಾ ಟ್ರಯಲ್ ಬ್ಲಾಸ್ಟ್?

    ಆರೋಪಿಯನ್ನು 35 ವರ್ಷದ ರಜ್ಜಿ ಕೌರ್ ಅಲಿಯಾಸ್ ಜಸ್ವಿರ್ ಕೌರ್ ಎಂದು ಗುರುತಿಸಲಾಗಿದ್ದು, ತನ್ನ 13 ಮತ್ತು 11 ವರ್ಷದ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ನವೆಂಬರ್ 20 ರಂದು ತನ್ನ ಪತಿ ನಾಪತ್ತೆಯಾಗಿರುವುದಾಗಿ ಪತಿಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ತನಿಖೆ ವೇಳೆ ಕೌರ್ ಅದೇ ಪ್ರದೇಶದ ನಿವಾಸಿ ಸುರ್ಜಿತ್ ಸಿಂಗ್ ಬಗ್ಗಾ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ಬಯಲಾಗಿದೆ. ಪ್ರಿಯಕರ ಸುರ್ಜಿತ್ ಜೊತೆ ಸೇರಿ ತನ್ನ ಪತಿಯನ್ನು ಅಕ್ಟೋಬರ್ 27ರಂದು ಕೊಂದಿರುವುದಾಗಿ ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಸುರೇಂದ್ರ ಲಂಬಾ ತಿಳಿಸಿದ್ದಾರೆ.

    ಅಕ್ಟೋಬರ್ 27ರ ಸಂಜೆ ತನ್ನ ಪತಿ ಅಮ್ರಿಕ್‍ಗೆ ಕೋಳಿ ಸಾಂಬಾರ್‍ನಲ್ಲಿ ನಿದ್ದೆ ಮಾತ್ರೆಗಳನ್ನು ಬೆರೆಸಿ ಊಟ ಮಾಡಿಸಿದ್ದಾಳೆ. ನಂತರ ಅಮ್ರಿಕ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಬಳಿಕ ಪ್ರಿಯಕರನನ್ನು ಮನೆಗೆ ಕರೆಸಿ ಇಬ್ಬರು ಸೇರಿ ಆತನ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಶವವನ್ನು ಹೂತು ಹಾಕಿದ್ದಾರೆ. ಕೊನೆಗೆ ಯಾವುದೇ ಅನುಮಾನ ಬರದಂತೆ 20 ದಿನಗಳ ನಂತರ ನಾಪತ್ತೆ ದೂರು ನೀಡಿದ್ದಾಳೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಶನಿವಾರ ಶವವನ್ನು ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಬುಲೆಟ್ ಸವಾರಿ – ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ಊಟದಲ್ಲಿ ಇರುವೆ ಇದೆ ಎಂದು ರೇಗಿದ್ದಕ್ಕೆ ಪತಿ ಕತ್ತು ಹಿಸುಕಿ ಕೊಂದ ಪತ್ನಿ

    ಊಟದಲ್ಲಿ ಇರುವೆ ಇದೆ ಎಂದು ರೇಗಿದ್ದಕ್ಕೆ ಪತಿ ಕತ್ತು ಹಿಸುಕಿ ಕೊಂದ ಪತ್ನಿ

    ಭುವನೇಶ್ವರ್: ಊಟದಲ್ಲಿ ಇರುವೆ ಇದೆ ಎಂದು ರೇಗಿದ್ದಕ್ಕೆ ಪತಿಯನ್ನು ಕತ್ತು ಹಿಸುಕಿ ಪತ್ನಿ ಕೊಂದಿರುವ ಘಟನೆ ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ನಡೆದಿದೆ.

    ಹೇಮಂತ ಬಾಗ್ (35) ಪತ್ನಿಯಿಂದ ಹತ್ಯೆಯಾದ ವ್ಯಕ್ತಿ. ಕೊಲೆ ಮಾಡಿದ ಆತನ ಪತ್ನಿ ಸರಿತಾಳನ್ನು ಪೊಲೀಸರು ಬಂಧಿಸಿದ್ದಾರೆ. ಈಕೆಯ ಮಾವ ಶಶಿ ಭೂಷಣ್‌ ಬಾಗ್‌ ನೀಡಿದ ದೂರಿನ ಮೇರೆಗೆ ಪೊಲೀಸರು ಸರಿತಾಳನ್ನು ಅರೆಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಸಂಬಳ ಕೇಳಿದ ದಲಿತ ವ್ಯಕ್ತಿಯನ್ನು ಥಳಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸಿ ವಿಕೃತಿ

    ಹೇಮಂತ ಊಟ ಮಾಡುವಾಗ ಅನ್ನದಲ್ಲಿ ಇರುವೆ ಸಿಕ್ಕಿದೆ. ಊಟದಲ್ಲಿ ಇರುವೆ ಇದೆ ಎಂದು ಆತ ಪತ್ನಿ ಮೇಲೆ ರೇಗಾಡಿದ್ದಾನೆ. ಪತಿ, ಪತ್ನಿ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸರಿತಾ ಕತ್ತು ಹಿಸುಕಿ ಕೊಂದಿದ್ದಾಳೆ.

    ಹೇಮಂತ ಬಾಗ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪತ್ನಿ ಸರಿತಾ, ಪುತ್ರಿ ಹೇಮಲತಾ, ಪುತ್ರ ಸೌಮ್ಯ ಜೊತೆ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಬಕಾರಿ ಹಗರಣ – ಸಿಬಿಐ ಸಲ್ಲಿಸಿದ ಚಾರ್ಜ್‍ಶೀಟ್‍ನಲ್ಲಿ ಮನೀಶ್ ಸಿಸೋಡಿಯಾ ಹೆಸರಿಲ್ಲ

    Live Tv
    [brid partner=56869869 player=32851 video=960834 autoplay=true]

  • ಪತ್ನಿಗೆ ಡೆಡ್ಲಿ ಡ್ರಗ್ಸ್ ನೀಡಿ ಕೊಂದ ಪತಿ – ಸೂಸೈಡ್ ಅಂತ ಬಿಂಬಿಸಲು ಹೋಗಿ ಸಿಕ್ಕಿಬಿದ್ದ

    ಪತ್ನಿಗೆ ಡೆಡ್ಲಿ ಡ್ರಗ್ಸ್ ನೀಡಿ ಕೊಂದ ಪತಿ – ಸೂಸೈಡ್ ಅಂತ ಬಿಂಬಿಸಲು ಹೋಗಿ ಸಿಕ್ಕಿಬಿದ್ದ

    ಮುಂಬೈ: ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವ, ತನ್ನ ಪತ್ನಿಗೆ ಚುಚ್ಚುಮದ್ದಿನ ಮೂಲಕ ಡೆಡ್ಲಿ ಡ್ರಗ್ಸ್ ನೀಡಿ ಕೊದು ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆ (Pune) ಜಿಲ್ಲೆಯಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ನವೆಂಬರ್ 14 ರಂದು ಈ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    ಆರೋಪಿ ಸ್ವಪ್ನಿಲ್ ಸಾವಂತ್ ಐದು ತಿಂಗಳ ಹಿಂದೆಯಷ್ಟೇ ಪ್ರಿಯಾಂಕಾ ಅವರನ್ನು ಮದುವೆಯಾಗಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಪ್ನಿಲ್ ಸಾವಂತ್ ತನ್ನ ಸಹೋದ್ಯೋಗಿ ನರ್ಸ್ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಯನ್ನು ಮದುವೆಯಾಗಲು ಪ್ಲ್ಯಾನ್ ಮಾಡಿಕೊಂಡಿದ್ದ ಹೀಗಾಗಿ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೌಡ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಾಯಿ

    ಘಟನೆ ನಂತರ ಪ್ರಿಯಾಂಕಾ ಸಹಿ ಹಾಕಿರುವ ಸೂಸೈಡ್ ನೋಟ್ ಪತ್ತೆಯಾಗಿತ್ತು. ಆದರೆ ತನಿಖೆಯ ವೇಳೆ ಸಾವಂತ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಿಂದ ವೆಕುರೋನಿಯಂ ಬ್ರೋಮೈಡ್, ನೈಟ್ರೊಗ್ಲಿಸರಿನ್ ಮತ್ತು ಲಾಕ್ಸ್ 2% ಸೇರಿದಂತೆ ಕೆಲವು ಡ್ರಗ್ಸ್‌ಗಳಿರುವ ಚುಚ್ಚುಮದ್ದುಗಳನ್ನು ಕದ್ದು ಪತ್ನಿಯನ್ನು ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಸಾವಂತ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ವಿವಿಧ ಸೆಕ್ಷನ್‍ಗಳ ಅಡಿಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಮನೋಜ್ ಯಾದವ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]