Tag: Wife

  • ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ!

    ನಾಪತ್ತೆಯಾಗಿ 7 ವರ್ಷಗಳ ಬಳಿಕ ಪತಿಯನ್ನು ಸೇರಿದ ಪತ್ನಿ!

    ಮಡಿಕೇರಿ: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ನಾಪತ್ತೆಯಾಗಿದ್ದ ಮಹಿಳೆ, 7 ವರ್ಷದ ಬಳಿಕ ತನ್ನ ಗಂಡನ ಸೇರಿದ ಅಪರೂಪದ ಘಟನೆಗೆ ಮಡಿಕೇರಿಯ ತನಲ್ ಸಂಸ್ಥೆ ಸಾಕ್ಷಿಯಾಗಿದೆ. ಏಳು ವರ್ಷಗಳ ಬಳಿಕ ತನ್ನ ಪತ್ನಿಯನ್ನು ಕಂಡ ಪತಿಗೆ ದುಃಖ ಉಮ್ಮಳಿಸಿ ಬಂದಿತ್ತು. ಏನೂ ಮಾತನಾಡದೆ ಪತ್ನಿಯ ತಲೆಯನ್ನು ಸವರಿ ಕಣ್ತುಂಬಿ ಬಂದ ನೀರನ್ನು ಕಣ್ಣಂಚಿನಲ್ಲೇ ತಡೆಹಿಡಿದು ಪತ್ನಿಯ ಮುದ್ದಿಸಿದ ಆ ಕ್ಷಣ ಎಂತ ಕಲ್ಲು ಹೃದಯದವನ್ನಾದರೂ ಕರಗಿಸುವಂತಿತ್ತು.

     

    ಹೌದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೊತ್ತೂರಿನ ರಾಜಪ್ಪ ಮತ್ತವರ ಪತ್ನಿ ಮುತ್ತಮ್ಮ ಏಳು ವರ್ಷದ ಬಳಿಕ ಒಂದಾಗಿದ್ದಾರೆ. ಸಂಬಂಧ ಎನ್ನೋದು ಎಷ್ಟು ಗಟ್ಟಿ ಎನ್ನೋದಕ್ಕೆ ಈ ಘಟನೆ ಸಾಕ್ಷಿ. ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಮ್ಮನನ್ನು 2014 ರಲ್ಲಿ ಬೆಂಗಳೂರಿಗೆ ಕರೆತಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ತಿಂಗಳ ಕಾಲ ಮುತ್ತಮ್ಮನಿಗೆ ಚಿಕಿತ್ಸೆ ಕೊಡಲಾಗಿತ್ತು. ಆದರೆ ಮುತ್ತಮ್ಮ ಇದ್ದಕ್ಕಿದ್ದಂತೆ ಒಂದು ದಿನ ಆಸ್ಪತ್ರೆಯಿಂದ ನಾಪತ್ತೆ ಆಗಿದ್ದರು. ಅಂದಿನಿಂದ ಪತಿ ರಾಜಪ್ಪ, ಅಳಿಯಂದಿರಾದ ದೊರೆ, ನಾಗರಾಜ್ ಸೇರಿದಂತೆ ಇಡೀ ಕುಟುಂಬ ಮುತ್ತಮ್ಮನಿಗಾಗಿ ಹುಡುಕದ ಊರಿಲ್ಲ, ಸುತ್ತದ ಜಿಲ್ಲೆಯಿಲ್ಲ. ಕೊನೆಗೆ ತನ್ನ ಪತ್ನಿ ನಾಪತ್ತೆ ಎಂದು ರಾಜಪ್ಪ ಬೆಂಗಳೂರಿನಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ನಾಲ್ಕೈದು ವರ್ಷಗಳ ಕಾಲ ನಿತ್ಯವೂ ಹುಡುಕಾಡಿದ ರಾಜಪ್ಪ ಮತ್ತು ಕುಟುಂಬದವರು ಇನ್ನು ನಮ್ಮ ಪಾಲಿಗೆ ಅವರಿಲ್ಲ ಎಂದು ಸುಮ್ಮನಾಗಿ ಬಿಟ್ಟಿದ್ದರು. ಆದರೆ 2017 ರಲ್ಲಿ ಇತ್ತ ಮಡಿಕೇರಿಯ ಹೊಟೇಲ್ ಒಂದರ ಮುಂದೆ ಕಸದ ತೊಟ್ಟಿಯ ಬಳಿ ಮುತ್ತಮ್ಮ ನಡೆಯಲಾರದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಯಿಂದ ತಪ್ಪಿಸಿಕೊಂಡ ಬಳಿಕ ಮುತ್ತಮ್ಮ ಅವರ ಎಡಗಾಲಿಗೆ ಏನೋ ಪೆಟ್ಟು ಬಿದ್ದಿತ್ತು. ಪರಿಣಾಮ ಕಾಲು ಗ್ಯಾಂಗ್ರಿನ್ ಗೆ ತಿರುಗಿ ಪಾದದ ಭಾಗ ಕೊಳೆತು ಉಳು ಬಿದ್ದಿತ್ತು. ಆ ಸ್ಥಿತಿಯನ್ನು ಕಂಡು ಅಲ್ಲಿ ಓಡಾಡುವ ಜನರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದರು. ಅಂತಹ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆಗೆ ಮುಂದಾಗಿದ್ದು ಮಡಿಕೇರಿಯ ತನಲ್ ಎಂಬ ಅನಾಥಾಶ್ರಮ. ಇದನ್ನೂ ಓದಿ: ಪೈರಸಿ ಒಂದು ವೈರಸ್, ತಡೆಯವುದು ಕಷ್ಟ: ಸುಮಲತಾ ಅಂಬರೀಶ್

    2017 ರಲ್ಲಿ ಮಹಿಳೆಯನ್ನು ರಕ್ಷಿಸಿದ ಸಂಸ್ಥೆಯು ಕೇರಳದಲ್ಲಿರುವ ಕೇಂದ್ರ ಶಾಖೆಗೆ ಕಳುಹಿಸಿ ಅಲ್ಲಿ ಕೊಳೆತಿದ್ದ ಕಾಲು ಮತ್ತು ಮಾನಸಿಕ ಚಿಕಿತ್ಸೆಯನ್ನು ಕೊಡಿಸಿದೆ. ಏಳು ತಿಂಗಳ ಕಾಲ ಚಿಕಿತ್ಸೆ ನೀಡಿದ ಬಳಿಕ ಕಾಲು ಸಂಪೂರ್ಣ ಗುಣವಾಗಿದ್ದರೆ, ಮಾನಸಿಕ ಆರೋಗ್ಯ ಕೂಡ ಶೇ 90 ರಷ್ಟು ಸರಿಹೋಗಿದೆ. ಕೇರಳದಿಂದ ಮುತ್ತಮ್ಮ ಅವರನ್ನು ವಾಪಸ್ ಕರೆತಂದ ಬಳಿಕ ಅವರ ವಿಳಾಸ ಕೇಳಿದಾಗ ಮಹಿಳೆಯದ್ದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೊತ್ತೂರಿನ ರಾಜಪ್ಪ ಎಂಬವರ ಪತ್ನಿ ಎನ್ನೋದು ಗೊತ್ತಾಗಿದೆ. ಆದರೆ ಅವರನ್ನು ಪತ್ತೆಹಚ್ಚಲು ತನಲ್ ಸಂಸ್ಥೆಯ ಕೊಡಗು ಶಾಖೆಯ ವ್ಯವಸ್ಥಾಪಕ ಮಹಮ್ಮದ್ ಸಾಕಷ್ಟು ಪ್ರಯತ್ನಿಸಿದ್ದರು. ನಂತರ ಕೊಡಗು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಅವರು ಮುತ್ತಮ್ಮ ಅವರ ವಿಳಾಸ ಹುಡುಕಿಸುವುದರಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಮೈಸೂರು ಪೊಲೀಸರಿಂದ ವಿನೂತನ ಪ್ರಯತ್ನ – ಸ್ವಯಂ ಸೇವಕರಿಗೆ ಗುರುತಿನ ಚೀಟಿ

    ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೊತ್ತೂರಿಗೆ ಹೋದ ಪೊಲೀಸರು ಕಟ್ಟಡ ಕಾರ್ಮಿಕರಾಗಿರುವ ರಾಜಪ್ಪ ಅವರನ್ನು ಭೇಟಿಯಾಗಿ ನಿಮ್ಮ ಪತ್ನಿ ಇದ್ದಾರೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಈ ಮಾತನ್ನು ಕೇಳಿದ ರಾಜಪ್ಪಗೆ ಇನ್ನಿಲ್ಲದ ಸಂತೋಷ, ದುಃಖ ಮತ್ತು ಆಶ್ಚರ್ಯ ಎಲ್ಲವೂ ಒಟ್ಟೊಟ್ಟಿಗೆ ಆಗಿದೆ. ಕೂಡಲೇ ತಮ್ಮ ಅಳಿಯ ದೊರೆ ಮತ್ತು ನಾಗರಾಜು ಅವರನ್ನು ಕರೆದುಕೊಂಡು ಭಾನುವಾರ ತಡರಾತ್ರಿ ಮಡಿಕೇರಿ ತಲುಪಿದ್ದಾರೆ. ರಾತ್ರಿ ತಡವಾಗಿದ್ದರಿಂದ ರಾಜಪ್ಪ ಮತ್ತು ಅಳಿಯಂದಿರಿಗೆ ಮುತ್ತಮ್ಮನನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿಸಿದ್ದಾರೆ. ಇದ್ದಕ್ಕಿದ್ದಂತೆ ನಾಪತ್ತೆಯಾಗಿ ತನ್ನಿಂದ ದೂರವಿದ್ದ ಹೆಂಡತಿಯನ್ನು ಏಳು ವರ್ಷಗಳ ಬಳಿಕ ಕಂಡ ಪತಿ ರಾಜಪ್ಪಗೆ ಕಣ್ಣಿನಲ್ಲಿ ನೀರು ತುಂಬಿ ಕೊರಳು ಬಿಗಿದು ಹೋಗಿತ್ತು. ತಾನೇನು ಮಾತನಾಡದೆ ಕೇವಲ ತನ್ನ ಪತಿಯ ತಲೆಯನ್ನು ಸವರಿ ಮುದ್ದು ಮಾಡಿದರು. ಈ ದೃಶ್ಯ ಎಂಥವರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದ್ದವು. ತನ್ನ ಪತಿಯನ್ನು ಕಂಡ ಮುತ್ತಮ್ಮ ಕೂಡ ಖುಷಿಯಿಂದಲೇ ತನ್ನ ಊರಿಗೆ ಹೊರಟಿದ್ದರು. ಅನಾಥಾಶ್ರಮದಲ್ಲಿದ್ದ ಇತರ ವೃದ್ಧೆಯರು, ಮಹಿಳೆಯರು ಮುತ್ತಮ್ಮಗೆ ಕೈಬಿಸಿ ಹೋಗಿ ಬಾ ಮುತ್ತಮ್ಮ ಚೆನ್ನಾಗಿರು ಎಂದು ಹಾರೈಸುತ್ತಿದ್ದ ದೃಶ್ಯವೂ ಹೃದಯಸ್ಪರ್ಶೀಯಾಗಿತ್ತು.

  • ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಂದ – ಕೊನೆಗೆ ತಾನೂ ಸತ್ತ

    ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಂದ – ಕೊನೆಗೆ ತಾನೂ ಸತ್ತ

    ವಿಜಯಪುರ: ಪತ್ನಿ ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಪತಿಯೇ ಕ್ರೂರವಾಗಿ ಹತ್ಯೆಗೈದು, ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.

    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಆರ್‍ಎಸ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಹೊರ ಭಾಗದ ಜಮೀನಲ್ಲಿರುವ ಶೆಡ್‍ಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಗೈದಿದ್ದೇನೆ. ಪತ್ನಿಯ ಹತ್ಯೆಗೈದ ಬಳಿಕ ತಾನು ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಇದನ್ನೂ ಓದಿ: ಒಬ್ಬ ಕ್ರಿಮಿನಲ್‍ನ ರಕ್ಷಿಸುತ್ತಿದ್ದೀರಾ – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

    ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಶರಣಾದ ವ್ಯಕ್ತಿ ಶಿವಪ್ಪ ಮನಗೂಳಿ (45)ಯಾಗಿದ್ದು, ಹನುಮವ್ವ (38) ಪತಿಯಿಂದ ಕೊಲೆಗೀಡಾದ ಪತ್ನಿಯಾಗಿದ್ದಾರೆ. ಇದೀಗ ಸ್ಥಳಕ್ಕೆ ನಿಡಗುಂದಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!

  • ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ಳು!

    ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ಳು!

    ಭೋಪಾಲ್: ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದೆ. ತನ್ನ ಸ್ವ-ಇಚ್ಛೆಗೆ ವಿರುದ್ಧವಾಗಿ ಬಲವಂತದಿಂದ ಸೆಕ್ಸ್ ಮಾಡುವಂತೆ ಒತ್ತಡ ಹಾಕಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತ 24 ವರ್ಷದ ಪತ್ತನ ರೊಚ್ಚಿಗೆದ್ದು 27 ವರ್ಷದ ಪತಿಯ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿ ಬಿಟ್ಟಿದ್ದಾಳೆ. ಇದನ್ನೂ ಓದಿ: 27 ದಿನದ ಶಿಶುವಿನ ತಲೆಯನ್ನು ಗೋಡೆಗೆ ಚಚ್ಚಿ ಕೊಂದ ಕ್ರೂರಿ ತಾಯಿ

    ಪತಿ ಹಾಗೂ ಪತ್ನಿ ಮಧ್ಯೆ ದೈಹಿಕ ಸಂಬಂಧದ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಿ ಪತಿ ಪ್ರತಿನಿತ್ಯ ಸೆಕ್ಸ್ ಮಾಡುವಂತೆ ಒತ್ತಡ ಹೇರುತ್ತಿದ್ದನು. ಆದರೆ ಇದು ಪತ್ನಿಗೆ ಇಷ್ಟವಿರಲಿಲ್ಲ. ಹೀಗಾಗಿ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದಾಗ ಸಿಟ್ಟಿನಿಂದ ಪತ್ನಿ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಮ್ಲೆಟ್ ಸೀದು ಹೋಗಿದೆ ಎಂದಿದ್ದಕೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ

    ಸಾಂದರ್ಭಿಕ ಚಿತ್ರ

    ಈ ಘಟನೆ ಡಿ.7ರಂದು ರಾತ್ರಿ ನಡೆದಿದ್ದು, ಕೂಡಲೇ ಆತ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ಡಿ.13ರಂದು ಸಂತ್ರಸ್ತ ಠಾಣೆಗೆ ಬಂದು ದೂರು ನೀಡಿದ್ದಾನೆ. ಈ ದಂಪತಿ 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆಯಾದ ಕೆಲ ತಿಂಗಳಿನಿಂದಲೇ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಪರಿಣಾಮ ಇಬ್ಬರೂ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಆದರೂ ಇಬ್ಬರ ನಡುವೆ ಮತ್ತೆ ಜಗಳವಾಗಿದ್ದು, ಪರಿಣಾಮ ಪತ್ನಿ ಈ ಮೂಲಕ ಪತಿಗೆ ಬುದ್ಧಿ ಕಲಿಸಿದ್ದಾಳೆ. ಇದನ್ನೂ ಓದಿ: ಮಗನನ್ನ ನೀರಿನ ಸಂಪ್‍ಗೆ ಎಸೆದು ತಂದೆ ಆತ್ಮಹತ್ಯೆ

    POLICE JEEP

    ಘಟನೆಗೆ ಸಂಬಂಧಿಸಂತೆ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 324ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಕೇರಳದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

    ಕೇರಳದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ

    ತಿರುವನಂತಪುರ: ಯುರೋಪ್‍ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಗೆ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಧೃಡಪಟ್ಟಿದೆ. ಇದು ಕೇರಳದಲ್ಲಿ ಪತ್ತೆಯಾಗಿರುವ ಮೊದಲ ಓಮಿಕ್ರಾನ್ ಪ್ರಕರಣವಾಗಿದೆ.

    ಡಿಸೆಂಬರ್ 6ರಂದು ಅಬುಧಾಬಿಯಿಂದ ಯುರೋಪ್ ಮುಖಾಂತರ ಡಿಸೆಂಬರ್ 8ರಂದು ಕೇರಳದ ಎರ್ನಾಕುಲಂಗೆ ರೋಗಿ ಬಂದಿದ್ದಾರೆ. ದುಬೈನಲ್ಲಿ ವ್ಯಕ್ತಿಗೆ ನೆಗೆಟಿವ್ ವರದಿ ಬಂದಿತ್ತು. ಆದರೆ ಡಿಸೆಂಬರ್ 8ರಂದು ಕೇರಳದಲ್ಲಿ ಸೋಂಕು ಧೃಡಪಟ್ಟಿದೆ. ಅಲ್ಲದೇ ಸೋಂಕಿತ ಸಮೀಪದಲ್ಲಿದ್ದ 149 ಪ್ರಯಾಣಿಕರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಇದನ್ನೂ ಓದಿ: ಕಳೆದ 70 ವರ್ಷದಿಂದ ಕಾಂಗ್ರೆಸ್ ಕಟ್ಟಿದ್ದನ್ನು ಬಿಜೆಪಿ 7 ವರ್ಷದಲ್ಲಿ ಮಾರುತ್ತಿದೆ: ಪ್ರಿಯಾಂಕಾ ಗಾಂಧಿ

    ರೋಗಿಯ ಪತ್ನಿ ಹಾಗೂ ತಾಯಿಗೂ ಕೊರೊನಾ ಸೋಂಕು ಧೃಡಪಟ್ಟಿದ್ದು, ಅವರನ್ನು ಕ್ವಾರಂಟೈನ್‍ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೋಂಕಿತನ ಸಂಪರ್ಕ ಹೊಂದಿದ್ದವರನ್ನು ಗುರುತಿಸಲಾಗಿದೆ. ನಾವು ಬಹಳ ಮುನ್ನೆಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದೇವೆ ಮತ್ತು ಯಾರು ಸಹ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ತಿಳಿಸಿದ್ದಾರೆ. ಇದನ್ನೂ ಓದಿ:  ಹಿರಿಯೂರಿನಲ್ಲಿ ಭೀಕರ ಸರಣಿ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

  • ಕೆಲಸ ಕಳೆದುಕೊಂಡ ಟೆಕ್ಕಿ, ಮಕ್ಕಳನ್ನು ಕೊಂದು ತಾನೂ ಪ್ರಾಣ ಬಿಟ್ಟಳು

    ಕೆಲಸ ಕಳೆದುಕೊಂಡ ಟೆಕ್ಕಿ, ಮಕ್ಕಳನ್ನು ಕೊಂದು ತಾನೂ ಪ್ರಾಣ ಬಿಟ್ಟಳು

    ಹೈದರಾಬಾದ್: ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್  ಉದ್ಯೋಗಿ ಮಹಿಳೆ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಸ್ವಾರ್ತಿ ಕುಸುಮಾ (32)ಮೃತಳಾಗಿದ್ದಾಳೆ. ಈಕೆ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದಳು. ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಕೊಂಡು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    POLICE JEEP

    ಸ್ವಾರ್ತಿ ಕುಸುಮಾ, ಪತಿ ಸಾಯಿಕುಮಾರ್ ಇಬ್ಬರೂ ಕೊರೊನಾ ಸಮಯದಲ್ಲಿ ಸಾಫ್ಟ್ ವೇರ್ ಉದ್ಯೋಗ ಕಳೆದುಕೊಂಡಿದ್ದರು. ಕೆಲಸ ಕಳೆದುಕೊಂಡ ನಂತರ ಸಾಯಿಕುಮಾರ್ ಕಾಲ್ ಸೆಂಟರ್‌ನಲ್ಲಿ ಕಡಿಮೆ ಸಂಬಳಕ್ಕೆ ಸೇರಿಕೊಂಡಿದ್ದರು. ಸ್ವಾತಿ ಅವರು ಮನೆಯಲ್ಲೇ ಇದ್ದರು. ಇದನ್ನೂ ಓದಿ: ಅಪ್ಪನಂತೆ ನಾನೂ ವಾಯುಪಡೆ ಸೇರ್ತೀನಿ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ವಿಂಗ್ ಕಮಾಂಡರ್ ಪುತ್ರಿ ಆಸೆ

    ಪತಿ ಸಾಯಿಕುಮಾರ್‌ಗೆ ಬರುತ್ತಿದ್ದ ಸಂಬಳ ಮಕ್ಕಳ ಫೀಸಿಗೂ ಸಾಕಾಗುತ್ತಿಲ್ಲವೆಂದು ಸ್ವಾತಿ ಚಿಂತಿತರಾಗಿದ್ದರು ಎನ್ನಲಾಗಿದೆ. ಸಾಯಿಕುಮಾರ್ ಕೆಲಸಕ್ಕೆ ತೆರಳಿದ್ದ ವೇಳೆ ಬೆಡ್ ರೂಮಿನಲ್ಲಿ ಆತ್ಮಹತ್ಯೆ ನೋಟ್ ಬರೆದು ಸ್ವಾತಿ 5 ವರ್ಷದ ಮಗ ಮಗು 3 ವರ್ಷದ ಮಗಳನ್ನು ಕೊಂದು ತಾವೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಭಗವದ್ಗೀತೆ ಗಿಫ್ಟ್ ಕೊಟ್ಟ ಐರಾವತ ನಟಿ

  • ಪತಿ ಮೇಲೆ ಡೌಟ್‌ ಬಂದು ಹಿಂಬಾಲಿಸಿದ ಪತ್ನಿಗೆ ಕಾದಿತ್ತು ಶಾಕ್!

    ಪತಿ ಮೇಲೆ ಡೌಟ್‌ ಬಂದು ಹಿಂಬಾಲಿಸಿದ ಪತ್ನಿಗೆ ಕಾದಿತ್ತು ಶಾಕ್!

    ಹೈದರಾಬಾದ್: ಬೇರೆ ಹೆಂಗಸಿನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತಿ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಹೈದರಾಬಾದ್‍ನ ಜಗದ್ದಿರಿಗುಟ್ಟದಲ್ಲಿ ನಡೆದಿದೆ.

    ಅನಿಲ್ ಜಗದ್ದಿರಿಗುಟ್ಟದ ನಿವಾಸಿಯಾಗಿದ್ದಾನೆ. ಈತ ರಾಮೇಶ್ವರಿಯನ್ನು ಮದುವೆಯಾಗಿದ್ದನು. ಆದರೆ ಈತನ ನಡುವಳಿಕೆಯಲ್ಲಿ ಬದಲಾವಣೆ ಕಂಡಿರುವ ಪತ್ನಿ, ಆತನನ್ನು ಹಿಂಬಾಲಿಸಿದಾಗ ಆತನ ಅನೈತಿಕ ಸಂಬಂಧದ ಕುರಿತಾಗಿ ತಿಳಿದುಬಂದಿದೆ.  ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು

    ಅನಿಲ್ ಕುಟ್ಟಬಲ್‌ಪುರ್‌ ಬ್ಯಾಂಕ್ ಕಾಲನಿಯಲ್ಲಿರುವ ಮತ್ತೊಂದು ಮಹಿಳೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಕಳೆದ ಕೆಲವು ದಿನಗಳಿಂದ ಗಂಡನ ನಡುವಳಿಕೆಯಲ್ಲಿ ಆಗುತ್ತಿರುವ ಬದಲಾವಣೆಯನ್ನು ರಾಮೇಶ್ವರಿ ಗಮನಿಸಿದ್ದಾಳೆ. ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ

    ಒಂದು ದಿನ ಪತಿಯನ್ನು ಹಿಂಬಾಲಿಸಿದ್ದಾಳೆ. ಆಗ ಅನಿಲ್ ಬೇರೆ ಯುವತಿಯ ಜೊತೆಗೆ ಇರುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಜಗಳ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!

    ಜಗಳ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!

    ರಾಮನಗರ: ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಪತಿ ಹತ್ಯೆಗೈದಿರುವ ಘಟನೆ ಅರಳಿಮರದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ರಾಮನಗರ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳಗೌರಿ ಕೊಲೆಯಾದ ಮಹಿಳೆ. ಆರೋಪಿ ಸತೀಶ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

    ಆನಮಾನಹಳ್ಳಿ ನಿವಾಸಿ ಪತಿ ಸತೀಶ್ ಜೊತೆ ಕಳೆದ ಒಂದು ವಾರದ ಹಿಂದೆ ಮಂಗಳಗೌರಿ ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದರು. ನಂತರ ಮಂಗಳಗೌರಿ ರಾಮನಗರ ಮಧುರಾ ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಮಂಗಳಗೌರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸತೀಶ್ ಚಾಕುವಿನಿಂದ ಹಲ್ಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

    A Young Couple Holding Hands In The Sunset

    ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಮಂಗಳಗೌರಿ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮಂಗಳಗೌರಿಯ ಮೃತದೇಹ ರವಾನೆ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಮದುವೆಯಾದ 6 ತಿಂಗಳಿನಲ್ಲೇ ಪತ್ನಿಯ ಕತ್ತು ಹಿಸುಕಿ ಕೊಲೆ

    ಮದುವೆಯಾದ 6 ತಿಂಗಳಿನಲ್ಲೇ ಪತ್ನಿಯ ಕತ್ತು ಹಿಸುಕಿ ಕೊಲೆ

    ಹೈದರಾಬಾದ್: ಮದುವೆಯಾದ ಆರು ತಿಂಗಳಲ್ಲೇ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್‍ನ ಮೂಸಾಪೇಟೆಯಲ್ಲಿ ನಡೆದಿದೆ.

    ಪುಣ್ಯವತಿ(20) ಮೃತಳು, ಸಂತೋಷ್ ಕೊಲೆ ಮಾಡಿದ ಪತಿಯಾಗಿದ್ದಾನೆ. ಮದುವೆಯಾಗಿ ಆರು ತಿಂಗಳಲ್ಲೇ ಕಟ್ಟಿಕೊಂಡ ಹೆಂಡತಿ ಮೇಲೆ ಅನುಮಾನಪಟ್ಟು, ಅವಳನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ

    ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯವನಾದ ಸಂತೋಷ್, ಬಾಲ್ಯದಿಂದಲೂ ಪೋಷಕರೊಂದಿಗೆ ಹೈದರಾಬಾದ್‍ನ ಮುಸಾಪೇಟೆಯಲ್ಲಿ ವಾಸವಾಗಿದ್ದನು. ವೆಲ್ಡಿಂಗ್‍ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ಮೇ ತಿಂಗಳಲ್ಲಿ ಸ್ಥಳೀಯ ನಿವಾಸಿ ಪುಣ್ಯವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ. ಇದರ ಬೆನ್ನಲ್ಲೇ ಹೆಂಡತಿ ಜೊತೆ ಬೇರೆ ಮನೆ ಮಾಡಿಕೊಂಡು ವಾಸ ಮಾಡಲು ಶುರು ಮಾಡಿದ್ದನು. ಇದನ್ನೂ ಓದಿ: ಓಮಿಕ್ರಾನ್‌ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್‌ನಲ್ಲಿ 3ಕ್ಕೇರಿದ ಸಂಖ್ಯೆ

    ಕೆಲ ತಿಂಗಳು ಕಳೆದ ಮೇಲೆ ಪುಣ್ಯವತಿ ಮೇಲೆ ಅನುಮಾನಪಡಲು ಶುರು ಮಾಡಿದ್ದ. ಕುಟುಂಬದ ಸದಸ್ಯರು ಸೇರಿದಂತೆ ಯಾರೊಂದಿಗೂ ಫೋನ್‍ನಲ್ಲಿ ಮಾತನಾಡದಂತೆ ತಿಳಿಸಿದ್ದನು. ಈ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದ ಪುಣ್ಯವತಿ ತಮ್ಮ ಚಿಕ್ಕಪ್ಪ, ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಳು. ಈ ವೇಳೆ, ಎರಡು ಕುಟುಂಬದವರು ಮಧ್ಯಪ್ರವೇಶ ಮಾಡಿ, ರಾಜಿ ಮಾಡಿಸಿ, ಸಂತೋಷ್‍ಗೆ ಬುದ್ಧಿವಾದ ಹೇಳಿದ್ದರು. ಇದಾದ ಬಳಿಕ ಕೆಲ ದಿನಗಳ ಕಾಲ ಚೆನ್ನಾಗಿದ್ದ ಆತ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದ್ದ. ಜೊತೆಗೆ ಮದ್ಯಪಾನ ಮಾಡಲು ಶುರು ಮಾಡಿ, ಪತ್ನಿ ಜೊತೆ ಜಗಳ ಮಾಡಲು ಆರಂಭಿಸಿದ್ದ.

    ಕಿರುಕುಳ ನೀಡಲು ಶುರು ಮಾಡಿರುವ ಸಂತೋಷ್ ನಿನ್ನೆ ಹೆಂಡತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ತುಂಬಾ ಸಮಯವಾದರೂ ಮನೆಯ ಬೀಗ ಹಾಕಿದ್ದ ಕಾರಣ ಸ್ಥಳೀಯರು ಎರಡು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬಂದು ನೋಡಿದಾಗ ಪುಣ್ಯವತಿ ಕೊಲೆಯಾಗಿದ್ದಳು. ಘಟನಾ ಸ್ಥಳಕ್ಕೆ ಕುಕ್ಕಟ್‍ಪಲ್ಲಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದಾನೆ.

  • ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ

    ಪತ್ನಿಯ ಶಿರಚ್ಛೇದ ಮಾಡಿ ಪೊಲೀಸ್ ಠಾಣೆಗೆ ಹೊತ್ತೊಯ್ದ

    ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ ನಂತರ ಆಕೆಯ ತಲೆಯೊಂದಿಗೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಹೈದರಾಬಾದ್‍ನ ರಾಜೇಂದ್ರನಗರದ ಎಂಎಂ ಪಹಾಡಿಯಲ್ಲಿ ನಡೆದಿದೆ.

    ಸಮ್ರೀನ್ ಮೃತದುರ್ದೈವಿಯಾಗಿದ್ದು, ಆರೋಪಿ ಪರ್ವೇಜ್ ಎಂದು ಗುರುತಿಸಲಾಗಿದೆ. ಆರೋಪಿ ಆಗಾಗಾ ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ಅಲ್ಲದೇ ದಂಪತಿ ಜಗಳದಿಂದಾಗಿ ವಿಚ್ಛೇದನವನ್ನು ಸಹ ಪಡೆದುಕೊಂಡಿದ್ದರು. ಆದರೆ ಒಂದು ವರ್ಷದ ಹಿಂದೆ ಪರ್ವೇಜ್ ತನ್ನ ಬಳಿಗೆ ಮರಳಲು ಸಮ್ರೀನ್‍ಗೆ ವಿನಂತಿಸಿದ್ದನು. ಹೀಗಾಗಿ ಮತ್ತೆ ಒಂದಾಗಿ ದಂಪತಿ ಒಟ್ಟಿಗೆ ಇದ್ದರು. ಇದನ್ನೂ ಓದಿ: ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

    ಗುರುವಾರ ಮಧ್ಯರಾತ್ರಿ ಪರ್ವೇಜ್ ಇದೇ ವಿಚಾರವಾಗಿ ಜಗಳ ತೆಗೆದು ಹರಿತವಾದ ಆಯುಧದಿಂದ ಸಮ್ರೀನ್ ಕತ್ತು ಸೀಳಿ ಹತ್ಯೆಗೈದಿದ್ದಾನೆ. ನಂತರ ಮೃತಪಟ್ಟ ಪತ್ನಿಯ ತಲೆಯೊಂದಿಗೆ ರಾಜೇಂದ್ರನಗರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ದೂರು ದಾಖಲಿಸಿಕೊಂಡಿದ್ದು, ಪ್ರಕರಣ ಕುರಿತಂತೆ ತನಿಖೆ ಕೈಗೊಂಡಿದ್ದಾರೆ.

  • ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಬ್ಲೇಡ್‌ನಿಂದ ಹಲ್ಲೆ ಮಾಡಿದ ಅಳಿಯ

    ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಬ್ಲೇಡ್‌ನಿಂದ ಹಲ್ಲೆ ಮಾಡಿದ ಅಳಿಯ

    ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ತವರು ಮನೆ ಸೇರಿರುವ ಹೆಂಡತಿಯನ್ನು ವಾಪಸ್ ಕಳುಹಿಸಲಿಲ್ಲ ಎಂಬ ಆಕ್ರೋಶದಿಂದ ಅಳಿಯನೊಬ್ಬ ಅತ್ತೆಗೆ ಬ್ಲೇಡ್ ನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ನವನಗರದ ನಿವಾಸಿ ಸೋಮವ್ವ ಮಲ್ಲಾಡ ಹಲ್ಲೆಗೀಡಾದವರು. ಪಡದಯ್ಯನ ಹಕ್ಕಲದ ರಮೇಶ ದೊಡ್ಡಮನಿ ಎಂಬ ಅಳಿಯನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.ನಾಲೈದು ವರ್ಷಗಳ ಹಿಂದೆ ಪತಿ ರಮೇಶ್ ಜೊತೆ ಜಗಳವಾಡಿ ಪತ್ನಿ ತವರು ಸೇರಿದ್ದರು. ಇದನ್ನೂ ಓದಿ: ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್

    POLICE JEEP

    ಡಿಸೆಂಬರ್ 7 ರಂದು ಪತ್ನಿ ಜೊತೆ ರಮೇಶ್ ಜಗಳ ತೆಗೆದು ಹಲ್ಲೆ ನಡೆಸಿದ್ದನು. ಈ ವೇಳೆ ಬಿಡಿಸಲು ಮುಂದಾಗಿದ್ದ ಅತ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಲೇಡ್‍ನಿಂದ ಹಲ್ಲೆ ಮಾಡಿ ಜೀವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಗೈಡ್‌ಲೈನ್ಸ್‌