Tag: Wife

  • ಮದ್ಯಪಾನ ಮಾಡ್ಬೇಡಿ ಎಂದಿದಕ್ಕೆ ಹೆಂಡತಿಯನ್ನೇ ಹತ್ಯೆಗೈದ ಪತಿ

    ಮದ್ಯಪಾನ ಮಾಡ್ಬೇಡಿ ಎಂದಿದಕ್ಕೆ ಹೆಂಡತಿಯನ್ನೇ ಹತ್ಯೆಗೈದ ಪತಿ

    ದಾವಣಗೆರೆ: ಮದ್ಯಪಾನ ಮಾಡಬೇಡಿ ಎಂದು ಬುದ್ದಿ ಹೇಳಿದ ಪತ್ನಿಯನ್ನು ಪತಿಯೇ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

    davangere murder

    ಶಿಲ್ಪಾ(40) ಪತಿಯಿಂದ ಕೊಲೆಯಾದ ದುರ್ದೈವಿ ಪತ್ನಿ. ಗಿರೀಶ್ ಪತ್ನಿಯನ್ನೇ ಕೊಲೆ ಮಾಡಿದ ಆರೋಪಿ ಪತಿ. ಎರಡು ವರ್ಷಗಳಿಂದ ಸೊರಟೂರು ಗ್ರಾಮದಲ್ಲಿ ಗಿರೀಶ್ ಹಾಗೂ ಶಿಲ್ಪಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ಕುಡಿದು ಬರುತ್ತಿದ್ದ ಗಿರೀಶ್‍ಗೆ ಶಿಲ್ಪಾ ಬುದ್ಧಿ ಮಾತು ಹೇಳುತ್ತಿದ್ದರು. ಆದರೆ ಒಮ್ಮೆ ಕುಡಿಯಲು ಹಣ ಕೊಡುತ್ತಿಲ್ಲ, ಬುದ್ದಿಮಾತು ಹೇಳುತ್ತೀಯಾ ಎಂದು ಗಿರೀಶ್ ಪತ್ನಿಯನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಇದನ್ನೂ ಓದಿ:ಗಣೇಶೋತ್ಸವದ ಬಗ್ಗೆ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸಿಡಿಮಿಡಿಗೊಂಡ ಕಟೀಲ್

    davangere murder

    ಇದೀಗ ಹೊನ್ನಾಳಿ ಸಿಪಿಐ ದೇವರಾಜ್ ತಂಡ ಶಿಲ್ಪಾಳ ಕೊಲೆಯಾದ 8 ಗಂಟೆಯಲ್ಲಿಯೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್

  • ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿಸಿಕೊಂಡ ಖಾಸಗಿ ಫೈನಾನ್ಸ್

    ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿಸಿಕೊಂಡ ಖಾಸಗಿ ಫೈನಾನ್ಸ್

    ಯಾದಗಿರಿ: ನಗರದಲ್ಲಿ ಬಡ್ಡಿ ವ್ಯವಹಾರ ಮೀತಿ ಮೀರಿದ್ದು, ಖಾಸಗಿ ಫೈನಾನ್ಸ್​ಗಳಿಂದ ಸಾಲಗಾರರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಖಾಸಗಿ ಫೈನಾನ್ಸ್ ವೊಂದು ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿರಿಸಿದೆ.

    yadagiri finance

    ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಶಿವಶಂಕರ್ ಫೈನಾನ್ಸ್ ನಿಂದ ಸಾಲಗಾರರ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದೆ. ಶಿವಶಂಕರ್ ಫೈನಾನ್ಸ್‌ನಲ್ಲಿ ಮಹ್ಮದ್ ಮೂರು ಲಕ್ಷ ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿ ಕಟ್ಟಿದ್ದರು. ಹೀಗಿದ್ದರೂ ಫೈನಾನ್ಸ್‌ನಿಂದ ಹೆಚ್ಚಿನ ಬಡ್ಡಿ ನೀಡಲು ಒತ್ತಾಯ ಮಾಡಿತ್ತು. ಇದಕ್ಕೆ ಮಹ್ಮದ್ ಒಪ್ಪಿರಲಿಲ್ಲ. ಇದನ್ನೂ ಓದಿ:ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಯತ್ನ- ಯುವಕನಿಂದ ರಕ್ಷಣೆ

    yadagiri finance

    ಹೀಗಾಗಿ ಆತನ ಹೆಂಡತಿ ರಿಜ್ವಾನರನ್ನು ಆಫೀಸ್​ಗೆ ಕರೆದುಕೊಂಡು ಹೋಗಿ ಒತ್ತೆಯಾಳಾಗಿಸಿಕೊಂಡ ಫೈನಾನ್ಸ್ ಮಾಲೀಕರು, ಮೂತ್ರ ವಿಸರ್ಜನೆಗೂ ಬಿಡದೇ  ಚಿತ್ರ ಹಿಂಸೆ ನೀಡಿದ್ದಾರೆ. ಫೈನಾನ್ಸ್ ನಡೆಸುವ ಶಿವಶಂಕರ್, ಚಂದ್ರಕಲಾ, ಶಿವಮ್ಮ, ಪಾರ್ವತಿ ಎಂಬವರಿಂದ ಈ ಕೃತ್ಯ ನಡೆದಿದೆ. ಇನ್ನೂ ಫೈನಾನ್ಸ್‌ನವರ ಕಿರುಕುಳವನ್ನು ರಿಜ್ವಾನ್‍ರವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದ್ದಾರೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಿರ್ದೇಶಕ ಸಂತೋಷ್ ಆನಂದ್ ರಾಮ್

  • ಫುಟ್ಬಾಲ್ ಆಟಗಾರನ ವಿಲ್ಲಾದಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣ ಕಳವು

    ಫುಟ್ಬಾಲ್ ಆಟಗಾರನ ವಿಲ್ಲಾದಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣ ಕಳವು

    ಚಿಕ್ಕಬಳ್ಳಾಪುರ: ಫುಟ್ಬಾಲ್ ಆಟಗಾರರೊಬ್ಬರು ವಾಸವಾಗಿದ್ದ ವಿಲ್ಲಾವೊಂದರಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣಗಳು ಕಳ್ಳತನವಾಗಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    bangaluru resort

    ಅಂದಹಾಗೆ ದೇವನಹಳ್ಳಿ-ನಂದಿಬೆಟ್ಟ ಮಾರ್ಗದ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್‍ನಲ್ಲಿ ಆಸ್ಟ್ರೇಲಿಯಾ ಮೂಲದ ಕ್ಲಬ್ ಫುಟ್ಬಾಲ್ ಆಟಗಾರ ವೊಹಾನ್ ಟ್ರೋಲಫಿ ವಾಸವಾಗಿದ್ದಾರೆ. ಈ ವೊಹಾನ್ ಟ್ರೊಲಫಿ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ವಿಲ್ಲಾದಲ್ಲಿ ವಾಸವಾಗಿದ್ದಾರೆ. ಆದರೆ ಈ ಫುಟ್ಬಾಲ್ ಆಟಗಾರನ ವಿಲ್ಲಾಗೆ ಕಳ್ಳರು ಪ್ರವೇಶ ಮಾಡಿ, ಪತ್ನಿಯ 22 ಲಕ್ಷ ಮೌಲ್ಯದ ವಜ್ರಾಭರಣಗಳನ್ನು ಕಳವು ಮಾಡಿದ್ದಾರೆ. ನಂತರ ವಿಲ್ಲಾಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:ಪರಪ್ಪನ ಅಗ್ರಹಾರದಲ್ಲಿ ಕೃಷ್ಣಾಷ್ಟಮಿ ಆಚರಣೆ

    bangaluru resort

    ಈ ಬಗ್ಗೆ ರೆಸಾರ್ಟ್‍ಗೆ ಭಾರೀ ಭದ್ರತೆಯಿದ್ದು, ಸುತ್ತಲೂ ಸಿಸಿಟಿವಿ ಕಣ್ಗಾವಲು ಇದೆ. ರೆಸಾರ್ಟ್‍ಗೆ ಸಂಬಂಧಿಸಿದವರು, ಕೂಲಿ ಕಾರ್ಮಿಕರು, ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಒಳಗೆ ಪ್ರವೇಶವಿಲ್ಲ. ಹೀಗಾಗಿ ಅಲ್ಲಿನವರೇ ಯಾರೋ ಕಳವು ಮಾಡಿರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

  • ಅಕ್ರಮ ಸಂಬಂಧ ಶಂಕೆ- ಪತ್ನಿಯ ಗುಪ್ತಾಂಗಕ್ಕೆ ಹೊಲಿಗೆ

    ಅಕ್ರಮ ಸಂಬಂಧ ಶಂಕೆ- ಪತ್ನಿಯ ಗುಪ್ತಾಂಗಕ್ಕೆ ಹೊಲಿಗೆ

    ಭೋಪಾಲ್: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

    55 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಕೆಯ ಗುಪ್ತಾಂಗವನ್ನು ಹೊಲಿದಿದ್ದಾನೆ. ರಾಯ್ಲ ಗ್ರಾಮದಲ್ಲಿ ಅ.24ರಂದು ಈ ಘಟನೆ ನಡೆದಿದೆ.

    ತನ್ನ ಹೆಂಡತಿ ತಮ್ಮ ಮನೆಯ ಪಕ್ಕದಲ್ಲಿದ್ದ ಇನ್ನೋರ್ವ ವ್ಯಕ್ತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬ ಬಗ್ಗೆ ಆತನಿಗೆ ಅನುಮಾನ ಉಂಟಾಗಿತ್ತು. ಇದೇ ವಿಷಯಕ್ಕೆ ಇಬ್ಬರಿಗೂ ಅನೇಕ ಬಾರಿ ಜಗಳವೂ ಆಗಿತ್ತು. ಒಂದು ದಿನ ಇದೇ ವಿಚಾರವಾಗಿ ಜಗಳವಾಡಿದ ನಂತರ ಆತ ತನ್ನ ಹೆಂಡತಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿದ್ದಾನೆ. ನೋವಿನಿಂದ ನರಳಾಡುತ್ತಿದ್ದ ಆ ಹೆಂಡತಿಯ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಗೆ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ:  ಹಾಡಹಗಲೇ ಬೆಂಗಳೂರಿನಲ್ಲಿ ಅಪ್ರಾಪ್ತೆಗೆ ಮುತ್ತಿಟ್ಟ ಯುವಕ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ. ತನ್ನ ವಿರುದ್ಧ ಕೇಸ್ ದಾಖಲಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

  • ಪತ್ನಿಯನ್ನು ಕೊಂದು ಶವವನ್ನು ಹೂತಿಟ್ಟ ಪತಿ ಅರೆಸ್ಟ್

    ಪತ್ನಿಯನ್ನು ಕೊಂದು ಶವವನ್ನು ಹೂತಿಟ್ಟ ಪತಿ ಅರೆಸ್ಟ್

    ವಿಜಯಪುರ: ಕ್ಷುಲ್ಲಕ ಕಾರಣಕ್ಕಾಗಿ ಪತಿಯೇ ಪತ್ನಿಯನ್ನು ಕೊಲೆಗೈದು ಶವವನ್ನು ತೋಟದ ಮನೆಯ ಜಮೀನಿನಲ್ಲಿ ಹೂತಿಟ್ಟ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದ ದ್ರಾಕ್ಷಾಯಣಿ ರಾಚಯ್ಯ ಬನ್ನಿಗೋಳ ಮಠ(36) ಹತ್ಯೆಯಾಗಿರುವ ಪತ್ನಿಯಾಗಿದ್ದು, ರಾಚಯ್ಯ ಬನ್ನಿಗೋಳ ಮಠ ಹತ್ಯೆಗೈದಿರುವ ಪಾಪಿ ಪತಿಯಾಗಿದ್ದಾನೆ. ಮಕ್ಕಳನ್ನು ದೂರ ಮಾಡಿದ್ದಾಳೆ ಎನ್ನುವ ಕಾರಣಕ್ಕೆ ಪತ್ನಿಯನ್ನು ರಾಚಯ್ಯ ಕೊಲೆಗೈದು ಶವವನ್ನು ಮನೆಯ ಪಕ್ಕ ಜಮೀನಿನಲ್ಲಿ ಹೂತಿಟ್ಟು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಹಾಡಹಗಲೇ ಬೆಂಗಳೂರಿನಲ್ಲಿ ಅಪ್ರಾಪ್ತೆಗೆ ಮುತ್ತಿಟ್ಟ ಯುವಕ

    ಕೊಲೆಗೈದು ಪರಾರಿಯಾಗಿದ್ದ ಪತಿ ರಾಚಯ್ಯನನ್ನು ಪೊಲೀಸರು ಸೆರೆ ಹಿಡದಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ- ಒಂದೂವರೆ ಲಕ್ಷ ಕದ್ದ ಖದೀಮರು

  • ಪತ್ನಿಯನ್ನು ಕೊಂದು ಅಪಘಾತವೆಂದು ಬಿಂಬಿಸಿದ್ದ ಪತಿಯ ಬಂಧನ

    ಪತ್ನಿಯನ್ನು ಕೊಂದು ಅಪಘಾತವೆಂದು ಬಿಂಬಿಸಿದ್ದ ಪತಿಯ ಬಂಧನ

    ಹಾಸನ: ಪತ್ನಿಯನ್ನು ಕೊಂದು ಅಪಘಾತವೆಂದು ಬಿಂಬಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

    ಮೂರು ವರ್ಷದ ಹಿಂದೆ ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ಪ್ರೀತಿಯನ್ನು ಅಕ್ಕಲವಾಡಿ ಗ್ರಾಮದ ಮಹೇಶ್ ದೇವಾಲಯವೊಂದರಲ್ಲಿ ಬಲವಂತವಾಗಿ ವಿವಾಹವಾಗಿದ್ದ ಎನ್ನಲಾಗಿದೆ. ನಂತರ ಪತ್ನಿಯೊಂದಿಗೆ ಬೆಂಗಳೂರಿಗೆ ತೆರಳಿದ್ದ ಆತ, ಕೊರೊನಾ ಹಿನ್ನೆಲೆಯಲ್ಲಿ ಅಕ್ಕಲವಾಡಿಗೆ ವಾಪಸ್ ಬಂದಿದ್ದರು. ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆದು ಮನಸ್ತಾಪ ಮೂಡಿತ್ತು. ಹಿರಿಯರೆಲ್ಲಾ ಸೇರಿ ರಾಜಿ ಪಂಚಾಯ್ತಿ ಮಾಡಿ ಹೊಂದಿಕೊಂಡು ಹೋಗುವಂತೆ ಹೇಳಿದ್ದರೂ ಸಂಸಾರ ಸರಿ ಹೋಗಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಮಂಗಳವಾರ ರಾತ್ರಿ 8.30 ರ ಸುಮಾರಿನಲ್ಲಿ ಅರಕಲಗೂಡು ತಾಲೂಕಿನ ಕಣಿವೆ ಬಸಪ್ಪ-ಹುಲಿಕಲ್ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ಪ್ರೀತಿ ಸಾವನ್ನಪ್ಪಿದ್ದಾಳೆ. ನನಗೆ ಗಾಯಗಳಾಗಿವೆ ಎಂದು ಮಹೇಶ್ ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದನು. ಅಲ್ಲದೆ ಅಂಬುಲೆನ್ಸ್ ಕರೆಸಿ ಪ್ರೀತಿ ಮೃತದೇಹ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದನು. ಆದರೆ ಪತಿ ಮಹೇಶ್ ಮೇಲೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಪತಿಯ ನೀಚ ಕೃತ್ಯ ಬಯಲಾಗಿದೆ. ಇದನ್ನೂ ಓದಿ: ಪ್ರೇಮ ವೈಫಲ್ಯ- ಪ್ರಿಯತಮೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿ

    ಪತ್ನಿ ಪ್ರೀತಿ ತಲೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟ ನಂತರ ಬೈಕಿನಲ್ಲಿ ಶವ ತಂದು ಅಪಘಾತ ಎಂದು ಬಿಂಬಿಸಲು ಹೊರಟಿದ್ದ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಇತ್ತ ಪ್ರೀತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆಯಾದ ದಿನದಿಂದಲೂ ವರದಕ್ಷಿಣೆ ತರುವಂತೆ ಮಹೇಶ್ ಹಾಗೂ ಅವರ ಪೋಷಕರು ಕಿರುಕುಳ ನೀಡುತ್ತಿದ್ದರು. ಅನೇಕ ಬಾರಿ ಆಕೆಯ ಮೇಲೆ ಹಲ್ಲೆ ಕೂಡ ಮಾಡಿದ್ದರು. ಎಷ್ಟೇ ಬುದ್ಧಿವಾದ ಹೇಳಿದರೂ ಬದಲಾಗದ ಮಹೇಶ್, ಪ್ರೀತಿಯನ್ನು ಕೊಲೆ ಮಾಡಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

  • ಸುಪಾರಿ ಕೊಟ್ಟು ಗಂಡನಿಗೆ ಗುಂಡು ಹೊಡೆಸಿದ್ದ ಪತ್ನಿ ಅರೆಸ್ಟ್!

    ಸುಪಾರಿ ಕೊಟ್ಟು ಗಂಡನಿಗೆ ಗುಂಡು ಹೊಡೆಸಿದ್ದ ಪತ್ನಿ ಅರೆಸ್ಟ್!

    ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರ ಹಾಗೂ ತನ್ನ ಸಹೋದರನ ಜೊತೆ ಸೇರಿ ಸುಪಾರಿ ಕೊಟ್ಟು ಗಂಡನಿಗೆ ಗುಂಡು ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಐನಾತಿ ಹೆಂಡತಿ, ಈಕೆಯ ಪ್ರಿಯಕರ ಹಾಗೂ ಆಕೆಯ ಸಹೋದರ ಸೇರಿ 6 ಮಂದಿಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸರು ಬಂಧಿಸಿದ್ದಾರೆ.

    ಸುಪಾರಿ ಕೊಟ್ಟ ಹೆಂಡತಿಯ ಹೆಸರು ಸುಮಿತ್ರಾ. ಗುಂಡಿನ ದಾಳಿಗೆ ಒಳಗಾದವರು ಮೂಲತಃ ಆನೆಮಡುಗು ಗ್ರಾಮದ ಗಾರೆ ಕೆಲಸಗಾರ ಗೋವಿಂದಪ್ಪ.

    CKB_ WIFE_ HUSBAND

    ಘಟನೆಯ ವಿವರ:
    ಆಗಸ್ಟ್ 18 ರಂದು ಶಿಡ್ಲಘಟ್ಟ ನಗರದ ಇದ್ಲೂಡು ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಗೋವಿಂದಪ್ಪ ಮೇಲೆ ಪಲ್ಸರ್ ಬೈಕಿನಲ್ಲಿ ಬಂದ ಅಪರಿಚಿತರು ಮಸಲ್ ಗನ್ ಬಳಸಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ರು. ಘಟನೆಯಲ್ಲಿ ಮಸಲ್ ಗನ್ ಗೆ ಸೈಕಲ್ ಬಾಲ್ಸ್ ಬಳಸಿ ಗುಂಡಿನ ದಾಳಿ ನಡೆಸಲಾಗಿದ್ದು, ಪರಿಣಾಮ ಗೋವಿಂದಪ್ಪ ಬೆನ್ನಿನ ಭಾಗ ಸೇರಿ ತಲೆಯ ಭಾಗದಲ್ಲಿ ಗಾಯಗಳಾಗಿದ್ದವು. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗೋವಿಂದಪ್ಪ ಗುಣಮುಖರಾಗಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಿರುವ ಪೊಲೀಸರಿಗೆ ಇದೆಲ್ಲಾ ಗೋವಿಂದಪ್ಪನ ಪತ್ನಿ ಸುಮಿತ್ರಾಳದ್ದೇ ಕೃತ್ಯ ಅನ್ನೋ ಸತ್ಯ ಗೊತ್ತಾಗಿದೆ. ಗೋವಿಂದಪ್ಪ ಪತ್ನಿ ಸುಮಿತ್ರ, ಮುನಿಕೃಷ್ಣ ಎಂಬವನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಗಂಡ ಗೋವಿಂದಪ್ಪ ಜಗಳ ಮಾಡಿ ಬುದ್ಧಿವಾದ ಹೇಳಿದ್ದಾರೆ.

    ಇದೇ ವಿಚಾರವಾಗಿ ಗಂಡ ಪದೇ ಪದೇ ಟಾರ್ಚರ್ ಕಿರುಕುಳ ಕೊಡ್ತಾನೆ ಅಂತ ಪತ್ನಿ ಸುಮತ್ರಾ ಪ್ರಿಯಕರ ಮುನಿಕೃಷ್ಣ ಹಾಗೂ ಸಹೋದರ ರಾಮಕೃಷ್ಣ ಜೊತೆ ಪ್ಲಾನ್ ಮಾಡಿ, ಹರೀಶ್, ಮುರುಳಿ, ಪ್ರವೀಣ್ ಎಂಬವರಿಗೆ 2 ಲಕ್ಷ ರೂಪಾಯಿ ಸುಪಾರಿ ಕೊಟ್ಟಿದ್ರು. ಹೀಗಾಗಿ ಸುಪಾರಿ ಪಡೆದವರು ಸೇರಿ ಪತ್ನಿ, ಪ್ರಿಯಕರ ಹಾಗೂ ಸಹೋದರನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

  • ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

    ಮಿಸ್ ಫೈರಿಂಗ್ – ಡಿಎಆರ್ ಪೊಲೀಸ್ ಪೇದೆ ಸಾವು

    ದಾವಣಗೆರೆ: ಬಂದೂಕು ಕ್ಲೀನ್ ಮಾಡುವಾಗ ಮಿಸ್ ಫೈರಿಂಗ್ ಆಗಿ ಪೊಲೀಸ್ ಪೇದೆಯ ಕುತ್ತಿಗೆ ಸೀಳಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಮೃತ ಡಿಎಆರ್ ಪೊಲೀಸ್ ಪೇದೆಯನ್ನು ಚೇತನ್.ಆರ್(28) ಎಂದು ಗುರುತಿಸಲಾಗಿದೆ. ಈ ಘಟನೆ ದಾವಣಗೆರೆ ಡಿಎಆರ್ ಶಸ್ತ್ರಾಸ್ತ್ರಗಾರದಲ್ಲಿ ಸೋಮವಾರ ಬೆಳಗ್ಗೆ ನಡೆದಿದ್ದು, ತಕ್ಷಣ ಖಾಸಗಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    2012 ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದ ಚೇತನ್, ಹುಣಸಘಟ್ಟೆ ಫೈರಿಂಗ್ ಸೆಂಟರ್ ನಿಂದ ಬಂದಂತಹ ಬಂದೂಕು, ರೈಫಲ್ ಗಳನ್ನು ಸೋಮವಾರ ಬೆಳಗ್ಗೆ ಕ್ಲೀನ್ ಮಾಡುತ್ತಿದ್ದರು, ಇದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಸ್ನೇಹಿತರನ್ನು ಚೇತನ್ ಮಾತನಾಡಿಸಿಕೊಂಡು ನಿಂತಿದ್ದರು. ಈ ವೇಳೆ ಬಂದೂಕು ಕ್ಲೀನ್ ಮಾಡುತ್ತಿರುವಾಗ ಮಿಸ್ ಫೈರಿಂಗ್ ಆಗಿದ್ದು, ಎದುರಿಗೆ ಇದ್ದ ಚೇತನ್ ಗಂಟಲು ಭಾಗದಿಂದ ತಲೆಗೆ ಬುಲೆಟ್ ಬಿದ್ದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವುದರೊಳಗೆ ಪ್ರಾಣಪಕ್ಷಿ ಹಾರಿ ಹೋಗಿದೆ. ಇದನ್ನೂ ಓದಿ:ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ

    ಸದ್ಯ ಮೃತ ಪೊಲೀಸ್ ಪೇದೆಯನ್ನು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು, ಚೇತನ್ ಕಳೆದ ಐದು ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಅವರಿಗೆ ಎರಡು ವರ್ಷದ ಮಗು ಇದ್ದು, ಇದೀಗ ಚೇತನ್ ಹೆಂಡತಿ ಮತ್ತೆ 9 ತಿಂಗಳ ಗರ್ಭಿಣಿಯಾಗಿದ್ದಾರೆ. ಹೆಣ್ಣು ಮಗು ಆಗಬೇಕು ಎಂದು ಪುಟ್ಟ ಮಗುವಿಗಾಗಿ ಕಾತುರದಿಂದ ಕಾಯುತ್ತಿದ್ದರು. ಆದರೆ ಇಂದು ನಡೆದ ಆ ದುರ್ಘಟನೆಯಿಂದ ಆತನ ಕನಸಿನ ಗೋಪುರವೇ ಕಳಚಿ ಬಿದ್ದಿದೆ. ಅಲ್ಲದೇ ಶಸ್ತ್ರಾಸ್ತ್ರ ಮೀಸಲು ಪಡೆಯಲ್ಲಿ ಚೇತನ್ ಎಲ್ಲಾ ಸಿಬ್ಬಂದಿಗೂ ಅಚ್ಚುಮೆಚ್ಚಾಗಿದ್ದರು. ಆಸ್ಪತ್ರೆಗೆ ಪೂರ್ವ ವಲಯ ಐಜಿಸಿ ರವಿ.ಎಸ್ ಹಾಗೂ ಎಸ್.ಪಿ. ರಿಷ್ಯಂತ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು. ಇದನ್ನೂ ಓದಿ:ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

  • ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

    ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

    ಧಾರವಾಡ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ನಗರದ ರಾಜೀವಗಾಂಧಿ ನಗರದಲ್ಲಿ ನಡೆದಿದೆ.

    ಗಣೇಶ ಬಳ್ಳಾರಿ ಪತ್ನಿ ಶಿಲ್ಪಾಳನ್ನು ಕೊಲೆ ಮಾಡಿದ್ದಾನೆ. ಪತಿ ಗಣೇಶ ಮಂಜುಳಾ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಪತಿ ಪತ್ನಿಯ ಜೊತೆ ಜಗಳ ಅತಿರೇಕಕ್ಕೆ ತಿರುಗಿ, ಪತಿ ಗಣೇಶ ಸಲಾಕೆಯಿಂದ ಪತ್ನಿಯ ತಲೆಗೆ ಹೊಡೆದಿದ್ದಾನೆ. ಶಿಲ್ಪಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಗಣೇಶ ಅಲ್ಲಿಂದ ಪರಾರಿಯಾಗಿದ್ದ.

    ಕೊಲೆ ನಡೆದ ವಿಷಯ ಯಾರಿಗೂ ಗೊತ್ತಿರಲಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಶವವನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿ ತನಿಖೆ ಕೈಗೊಂಡಿದ್ದರು. ನಂತರ ಪತಿ ಗಣೇಶನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಗಣೇಶನ ಜೊತೆಯಲ್ಲಿ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಸಹ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಕೊಲೆಗೆ ಬಳಸಿದ್ದ ಸಲಾಕೆಯನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆಸಿದ್ದು, ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತವರು ಸೇರಿದ ಪತ್ನಿ – ಮಕ್ಕಳು ಸತ್ತಂತೆ ಫೋಟೋ ಕ್ಲಿಕ್ಕಿಸಿ ಹೆಂಡ್ತಿಗೆ ಕಳಿಸಿದ!

    ತವರು ಸೇರಿದ ಪತ್ನಿ – ಮಕ್ಕಳು ಸತ್ತಂತೆ ಫೋಟೋ ಕ್ಲಿಕ್ಕಿಸಿ ಹೆಂಡ್ತಿಗೆ ಕಳಿಸಿದ!

    ಮುಂಬೈ: ಮುನಿಸಿಕೊಂಡು ತವರು ಸೇರಿದ್ದ ಪತ್ನಿಯನ್ನು ಕರೆ ತರಲು ಮಕ್ಕಳು ಸತ್ತಂತೆ ಫೋಟೋ ಕ್ಲಿಕ್ಕಿಸಿದ ಪತಿ ಜೈಲು ಸೇರಿದ್ದಾನೆ. ಈ ಘಟನೆ ಮುಂಬೈನ ಕುರಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    33 ವರ್ಷದ ಸುಚಿತ್ ಗೌಡ ಜೈಲು ಸೇರಿದ ವ್ಯಕ್ತಿ. ಎರಡು ವರ್ಷಗಳ ಹಿಂದೆ ಸುಚಿತ್ ಪತ್ನಿ ಮುನಿಸಿಕೊಂಡು ತವರು ಸೇರಿದ್ದಳು. ಪತ್ನಿಯನ್ನ ಕರೆತರಲು ಮಗನನ್ನು ಶವದಂತೆ ಮಲಗಿಸಿದ್ದಾನೆ. ಆತನ ಮೇಲೆ ಹೂವಿನ ಹಾರ ಹಾಕಿ, ಹಣೆಗೆ ದೊಡ್ಡದಾದ ತಿಲಕವಿಟ್ಟು, ಪಕ್ಕದಲ್ಲಿ ಅಗರಬತ್ತಿ ಬೆಳಗಿ ಫೋಟೋ ಕ್ಲಿಕ್ ಮಾಡಿ, ಪತ್ನಿಗೆ ಕಳುಹಿಸಿದ್ದಾನೆ. ಎಂಟು ವರ್ಷದ ಮಗ ತಂದೆ ಹೇಳಿದಂತೆಯೇ ಕೇಳಿದ್ದಾನೆ.

    ಇದೆಲ್ಲ ನೋಡಿದ 13 ವರ್ಷದ ಮಗಳು ಭಯಗೊಂಡಿದ್ದಳು. ಆಕೆಯ ಕುತ್ತಿಗೆ ಹಗ್ಗ ಬಿಗಿದು ಫ್ಯಾನ್ ಗೆ ಕಟ್ಟಿದ್ದಾನೆ. ಹಗ್ಗ ಬಿಗಿಯಾಗುತ್ತಿದ್ದಂತೆ ಭಯಗೊಂಡ ಮಗಳು ಜೋರಾಗಿ ಕಿರುಚಿದ ಕೂಡಲೇ ಸುಚಿತ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಮಗು ಧ್ವನಿ ಕೇಳಿ ಬಂದ ನೆರೆ ಮನೆಯವರು ಆಕೆಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸುಚಿತ್ ಗೌಡ ಮದ್ಯದ ನಶೆಯಲ್ಲಿ ಈ ರೀತಿ ಮಾಡಿದ್ದಾನೆ. ವಾರದ ಹಿಂದೆ ಊರಿಗೆ ಹೋಗಿದ್ದ ಸುಚಿತ್, ಜೊತೆಯಲ್ಲಿ ಮಗ ಮತ್ತು ಮಗಳನ್ನು ಮುಂಬೈಗೆ ಕರೆದುಕೊಂಡು ಬಂದಿದ್ದನು. ಆರೋಪಿ ನಶೆಯಲ್ಲಿ ಮಕ್ಕಳ ಮೇಲೆ ಹಲ್ಲೆ ಸಹ ನಡೆಸುತ್ತಿರುವ ವಿಚಾರ ನೆರೆಹೊರೆಯವರಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದರು. ಇದನ್ನೂ ಓದಿ: ಕಾಜಲ್, ಸಮಂತಾ, ವಿಜಯ್ ದೇವರಕೊಂಡ ಹಿಂದಿಕ್ಕಿದ ರಶ್ಮಿಕಾ

    ಆರೋಪಿ ವಿರುದ್ಧ ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ಹಾಗೂ ಕೊಲೆ ಯತ್ನದಡಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಯನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸದ್ಯ ಮಕ್ಕಳನ್ನು ತಾಯಿಯ ವಶಕ್ಕೆ ನೀಡಲಾಗಿದೆ. ಇದನ್ನೂ ಓದಿ: ನಾನೇನು ಕಿಂಗ್ ಮೇಕರ್ ಅಲ್ಲ, ಗೇಮ್ ಬ್ರೇಕರ್ ಅಂತೂ ಅಲ್ಲ: ಅಸಾದುದ್ದೀನ್ ಓವೈಸಿ