Tag: Wife

  • Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

    ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ (Illicit Relationship) ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದಾವಣಗೆರೆ| ಜಾತ್ರೆಗೆ ಒಂದು ದಿನ ಇರುವಾಗಲೇ ದೇವಾಲಯದ ಹುಂಡಿ ಕಳವು!

    ಶೃತಿ, ಈ ಹಿಂದೆ ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್‌ ಲಾಡ್‌

    ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 17ರ ಬಾಲಕಿ ಮೇಲೆ ಅತ್ಯಾಚಾರ – ಮೃತ ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸ್‌

  • ವ್ಯಕ್ತಿಗಾಗಿ ನಡು ರಸ್ತೆಯಲ್ಲೇ ಪತ್ನಿ, ಲವ್ವರ್‌ ಹೊಡೆದಾಟ!

    ವ್ಯಕ್ತಿಗಾಗಿ ನಡು ರಸ್ತೆಯಲ್ಲೇ ಪತ್ನಿ, ಲವ್ವರ್‌ ಹೊಡೆದಾಟ!

    ಬೆಳಗಾವಿ: ನಡು ರಸ್ತೆಯಲ್ಲಿಯೇ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ಘಟನೆ ‌ಬೆಳಗಾವಿ (Belagavi) ನಗರದ ಕೊಲ್ಹಾಪುರ ಸರ್ಕಲ್‌ನಲ್ಲಿ ನಡೆದಿದೆ.

    ಮಾರಿಹಾಳ‌ ಗ್ರಾಂಪಂ ಸದಸ್ಯೆಯ ಪತಿ ಬಸವರಾಜ್ ಸೀತಿಮನಿ  ಅದೇ ಗ್ರಾಮದ ಮಾಸಾಬಿ ಸೈಯ್ಯದ್ ಜೊತೆ ಓಡಿಹೋಗಿದ್ದ. ಪತಿ ಓಡಿ ಹೋದ ಬಳಿಕ ಪತ್ನಿ ವಾಣಿಶ್ರೀ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ನ್ಯಾಯ ನೀಡುವಂತೆ ಮನವಿ ಮಾಡಿದ್ದಳು. ಇದನ್ನೂ ಓದಿ: ಮೈಸೂರಿನ ಉದಯಗಿರಿ ಗಲಾಟೆ – ಕಲ್ಲು ತೂರಿದ 1,000 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್‌ಐಆರ್‌

     

    ಎರಡು ತಿಂಗಳ‌ ನಂತರ ಬೆಳಗಾವಿಗೆ ಬಂದು ಮಾಸಾಬಿ ಜೊತೆಗೆ ಬಸವರಾಜ್ ವಾಸ ಮಾಡತೊಡಗಿದ್ದ. ಬುಧವಾರ ರಾತ್ರಿ ವಾಣಿಶ್ರೀ ಕೈಯಲ್ಲಿ ಜೋಡಿಗಳು ಸಿಕ್ಕಿಬಿದ್ದಿದ್ದಾರೆ.

    ಮಾಸಾಬಿಯನ್ನು ಪ್ರಶ್ನೆ ಮಾಡಿದ್ದಕ್ಕೆ ವಾಣಿಶ್ರೀ ಮೇಲೆ ‌ಹಲ್ಲೆ‌ಯಾಗಿದೆ. ಹಲ್ಲೆಯಾಗುತ್ತಿದ್ದಂತೆ ಪರಸ್ಪರ ಜುಟ್ಟು ಹಿಡಿದುಕೊಂಡು ವಾಣಿಶ್ರೀ ಮತ್ತು‌ ಮಾಸಾಬಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ.‌

    ಪತಿ ಬಸವರಾಜ್ ನಿಂದಲೂ ವಾಣಿಶ್ರೀಯ ಮೇಲೆ ಹಲ್ಲೆ ನಡೆದಿದೆ. ನಡು ರಸ್ತೆಯಲ್ಲಿ ಹೊಡೆದಾಡಿಕೊಳ್ಳುತ್ತಿರುವುದನ್ನು ನೋಡಿ ಸ್ಥಳೀಯರು ಮೂವರ ಜಗಳವನ್ನು ಬಿಡಿಸಿ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಹೊಡೆದಾಡುವ ವಿಡಿಯೋ ಈಗ ಹರಿದಾಡುತ್ತಿದೆ.

     

  • ಹಣ-ಆಸ್ತಿ ಹಾಳು ಮಾಡಬೇಡವೆಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ

    ಹಣ-ಆಸ್ತಿ ಹಾಳು ಮಾಡಬೇಡವೆಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ

    ಚಿತ್ರದುರ್ಗ: ಹಣ-ಆಸ್ತಿ ಕಳೆಯಬೇಡ, ದುಂದುವೆಚ್ಚ ಮಾಡಬೇಡ ಎಂದು ಬುದ್ಧಿ ಹೇಳಿದ ಪತ್ನಿಯನ್ನೇ ಪಾಪಿ ಪತಿ ಉಸಿರುಗಟ್ಟಿಸಿ ಕೊಂದಿರುವ ಪ್ರಕರಣ ಚಿತ್ರದುರ್ಗ (Chitradurga) ತಾಲ್ಲೂಕಿನ ಮೆದೇಹಳ್ಳಿ (Medehalli) ಗ್ರಾಮದಲ್ಲಿ ನಡೆದಿದೆ.

    ಈ ಗ್ರಾಮದ ಉಮಾಪತಿ ಎಂಬ ಆಸಾಮಿ ಶ್ರೀದೇವಿ (48) ಜೊತೆ ವಿವಾಹವಾಗಿ, ಅನ್ಯೋನ್ಯವಾಗಿದ್ದರು. ಆದರೆ ಉಮಾಪತಿ ತನ್ನ ಜಮೀನು ಮಾರಾಟದಿಂದಾಗಿ ಬಂದ ಹಣವನ್ನೆಲ್ಲಾ ಮನಬಂದಂತೆ ಖರ್ಚು ಮಾಡುತ್ತಾನೆಂಬ ಹಿನ್ನೆಲೆ ಪತ್ನಿ ಶ್ರೀದೇವಿ ಆಗಾಗ್ಗೆ ಎಚ್ಚರಿಸುತಿದ್ದಳು. ಈ ವಿಚಾರಕ್ಕೆ ಇಬ್ಬರ ಮಧ್ಯೆ ಕಲಹ ನಿರಂತರವಾಗಿತ್ತು. ಇದನ್ನೂ ಓದಿ: ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ಇನ್ನು ಉಳಿದ ಜಮೀನನ್ನು ತನ್ನ ಹೆಸರಿಗೆ ಹಾಗೂ ಮಗಳ ಹೆಸರಿಗೆ ಮಾಡಿಸಿಕೊಡಿ ಎಂದು ಒತ್ತಾಯ ಸಹ ಮಾಡುತ್ತಿದ್ದರು. ಇದರಿಂದಾಗಿ ಆಕ್ರೋಶಗೊಂಡ ಉಮಾಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ಕೆಚ್ ಹಾಕಿ, ಫೆಬ್ರವರಿ 7 ರಂದು ಬೆಳಗ್ಗೆ ಶ್ರೀದೇವಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ, ಆಕೆಯ ಸೀರೆಯಿಂದ ಕೊರಳಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: KSRTC, ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

    ಹೀಗಾಗಿ ಬಾಯಲ್ಲಿ ರಕ್ತ ಬಂದಿದೆ. ಆದರೆ ಈ ಪ್ರಕರಣದಿಂದ ಜಾರಿಕೊಳ್ಳುವ ನಿಟ್ಟಿನಲ್ಲಿ ಉಮಾಪತಿ ಅಕ್ಕಪಕ್ಕದ ಮನೆಯವರನ್ನೆಲ್ಲಾ ಮನೆಗೆ ಕರೆದು, ನನ್ನ ಪತ್ನಿ ಪೂಜೆ ಮಾಡುವಾಗ ನೆಲಕ್ಕೆ ಬಿದ್ದಿದ್ದಾಳೆಂದು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಅಷ್ಟರಲ್ಲಿ ಶ್ರೀದೇವಿ ಮೃತಪಟ್ಟಿದ್ದಾರೆಂದು ಧೃಡವಾಗಿತ್ತೆಂದು ಮೃತ ಶ್ರೀದೇವಿಯ ಸಹೋದರ ರಂಗಸ್ವಾಮಿ ಆರೋಪಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ – ಪೋಸ್ಟರ್ ಹಾಕಿ, ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ!

    ಈ ಸಂಬಂಧ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಉಮಾಪತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ

  • Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ

    Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ

    – ಅನಾರೋಗ್ಯದಿಂದ ಅಸ್ವಸ್ಥ ಎಂದು ಹೈಡ್ರಾಮ

    ಬೆಂಗಳೂರು: ಹಣಕಾಸಿನ ವಿಚಾರದಲ್ಲಿ ಗಲಾಟೆ ನಡೆದು ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವೈಯಾಲಿಕಾವಲ್‌ನಲ್ಲಿ (Vyalikaval) ನಡೆದಿದೆ.

    ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಶರತ್ ಮತ್ತು ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿ ಆಗಿರುವ ಚೇತನಾ ಕಳೆದ ಮೂರು ವರ್ಷಗಳಿಂದ ಇಲ್ಲಿ ವಾಸವಾಗಿದ್ದರು. ಆಗಾಗ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಂಗಳವಾರ ರಾತ್ರಿ ಕೂಡ ಇಬ್ಬರ ನಡುವೆ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಪತ್ನಿ ಚೇತನಾಳನ್ನು ಪತಿ ಶರತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.‌ ಇದನ್ನೂ ಓದಿ: ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌

    ನಂತರ ತಡರಾತ್ರಿ ಮೂರು ಗಂಟೆ ಹೊತ್ತಿಗೆ ಅನಾರೋಗ್ಯದಿಂದ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಸ್ಪತ್ರೆಗೆ ಸೇರಿದ್ದಾನೆ. ಆ ವೇಳೆಗಾಗಲೇ ಪತ್ನಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಪತಿ ಶರತ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

  • ಪತ್ನಿಯ ಖಾಸಗಿ ಫೋಟೋ, ವಿಡಿಯೋ ವೈರಲ್‌ – ಪತಿ ವಿರುದ್ಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತ್ನಿ

    ಪತ್ನಿಯ ಖಾಸಗಿ ಫೋಟೋ, ವಿಡಿಯೋ ವೈರಲ್‌ – ಪತಿ ವಿರುದ್ಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತ್ನಿ

    ಗಾಂಧಿನಗರ: ಗುಜರಾತ್‌ನ (Gujarat) ಅಹಮದಾಬಾದ್‌ನ ಮಹಿಳೆಯೊಬ್ಬಳು ತನ್ನ ಪತಿ (Husband) ಖಾಸಗಿ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

    ಮೇಮ್ನಗರದ 21 ವರ್ಷದ ಮಹಿಳೆ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು. ಬಳಿಕ ವಡೋದರಾದ ಹಳ್ಳಿಯಲ್ಲಿ ತಮ್ಮ ಪತಿಯ ಅವಿಭಕ್ತ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿ ಮಹಿಳೆ ಅಹಮದಾಬಾದ್‌ನಲ್ಲಿರುವ ತಮ್ಮ ಪೋಷಕರ ಮನೆಗೆ ಹಿಂತಿರುಗಿದ್ದಳು.

    ಮಹಿಳೆ ಪತಿಯ ಮನೆ ತೊರೆಯುವ ಸಮಯದಲ್ಲಿ ಅಲರ್ಜಿಯಾಗಿದ್ದು, ಮೈಮೇಲೆ ಗುಳ್ಳೆಗಳಾಗಿದ್ದವು. ಬಳಿಕ ಗುಣವಾಗಿತ್ತು. ಅದನ್ನು ಪತಿಗೆ ತೋರಿಸಲು ಇನ್‌ಸ್ಟಾಗ್ರಾಮ್ ವೀಡಿಯೊ ಕರೆ ಮಾಡಿದ್ದಾಗ ಆತ ಒಪ್ಪಿಗೆಯಿಲ್ಲದೆ ವಿಡಿಯೋ ಕರೆಯನ್ನು ರೆಕಾರ್ಡ್ ಮಾಡಿಕೊಂಡು ಈಗ ಬೆದರಿಸುತ್ತಿದ್ದಾನೆ ಎಂದು ಆರೋಪಿಸಿದ್ದಾಳೆ.

    ಪತಿಯ ಮನೆಗೆ ಮರಳಲು ನಿರಾಕರಿಸಿ ವಿಚ್ಛೇದನಕ್ಕೆ ಒತ್ತಾಯಿಸಿದಾಗ, ಅವನು ಅವಳನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಜನವರಿ ಮೊದಲ ವಾರದಲ್ಲಿ, ಅವನು ಅವಳ ಖಾಸಗಿ ಚಿತ್ರಗಳು ಮತ್ತು ವೀಡಿಯೊಗಳನ್ನು ವಾಟ್ಸಾಪ್ ಸ್ಟೇಟಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಇದರಿಂದ ನೊಂದ ಮಹಿಳೆ ಘಟ್ಲೋಡಿಯಾ ಪೊಲೀಸ್‌ ಠಾಣೆಯಲ್ಲಿ ಮಾನನಷ್ಟ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.

  • Pinky Killing Me – ಹೆಂಡತಿ ಟಾರ್ಚರ್‌ಗೆ ಪತಿ ಸೂಸೈಡ್!

    Pinky Killing Me – ಹೆಂಡತಿ ಟಾರ್ಚರ್‌ಗೆ ಪತಿ ಸೂಸೈಡ್!

    ಹುಬ್ಬಳ್ಳಿ: ಹೆಂಡತಿ (Wife) ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ (Husband) ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ (Hubballi) ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಪೀಟರ್, `ಡ್ಯಾಡಿ ಆಯಮ್ ಸಾರಿ, ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈ ಡೆತ್ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

    ಶವ ಪೆಟ್ಟಿಗೆ ಮೇಲೆ `ಹೆಂಡತಿ ಟಾರ್ಚರ್‍ನಿಂದ ಸಾವು’ ಎಂದು ಬರೆಸುವಂತೆ ಡೆತ್ ನೋಟ್ ಉಲ್ಲೇಖಿಸಲಾಗಿದೆ. ಪೀಟರ್ ಆಸೆಯಂತೆ ಶವ ಪೆಟ್ಟಿಗೆ ಮೇಲೆ `ಮೈ ಡೆತ್ ಬಿಕಾಸ್ ಆಫ್ ಮೈ ವೈಫ್ ಟಾರ್ಚರ್’ ಎಂದು ಕುಟುಂಬಸ್ಥರು ಬರೆಸಿಕೊಂಡಿದ್ದಾರೆ.

    ಪೀಟರ್ ಪತ್ನಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದರು. ಇತ್ತೀಚಿಗೆ ಬೇರೆ ವ್ಯಕ್ತಿ ಜೊತೆಗೆ ಸುತ್ತಾಟ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ, ನನ್ನ ಜೀವನ ನನ್ನಿಷ್ಟ ಎಂದು ಉತ್ತರ ನೀಡಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

    ಹಲವಾರು ತಿಂಗಳು ಪತಿಯಿಂದ ದೂರವಿದ್ದ ಮಹಿಳೆ, ವಿಚ್ಚೇದನಕ್ಕೆ (Divorce) ಅರ್ಜಿ ಹಾಕಿದ್ದಳು. ಇಂದು (ಸೋಮವಾರ) ಈ ಬಗ್ಗೆ ಕೋರ್ಟ್‍ನಲ್ಲಿ ವಿಚಾರಣೆ ಇತ್ತು. ಆಕೆ ವಕೀಲರ ಮೂಲಕ 20 ಲಕ್ಷ ರೂ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

  • Hyderabad | ಪತ್ನಿಯ ಹತ್ಯೆಗೈದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ

    Hyderabad | ಪತ್ನಿಯ ಹತ್ಯೆಗೈದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ

    – ಹತ್ಯೆ ಬಳಿಕ ನಾಪತ್ತೆ ಅಂತ ದೂರು

    ಹೈದರಾಬಾದ್: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಮಾಜಿ ಸೈನಿಕ (Ex Serviceman) ತನ್ನ ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ನಂತರ ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಘಟನೆ ಹೈದರಾಬಾದ್‌ನ (Hyderabad) ಮೀರಪೇಟೆಯಲ್ಲಿ (Meerpet) ನಡೆದಿದೆ.

    ಪ್ರಕರಣ ಸಂಬಂಧ ಮಾಜಿ ಸೈನಿಕ ಗುರುಮೂರ್ತಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೂಲದ ಗುರುಮೂರ್ತಿ (45) ಸ್ವಲ್ಪ ಕಾಲ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಕಾಂಚನ್‌ಬಾಗ್‌ನಲ್ಲಿ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 18ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: IND vs ENG 1st T20I: 20 ಬಾಲ್‌ಗೆ 50 ರನ್‌ ಚಚ್ಚಿದ ಅಭಿಷೇಕ್‌- ಆಂಗ್ಲರ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಮೀರಪೇಟೆಯ ನ್ಯೂ ವೆಂಕಟೇಶ್ವರ ನಗರ ಕಾಲೋನಿಯಲ್ಲಿ ಗುರುಮೂರ್ತಿ ಪತ್ನಿ ವೆಂಕಟ ಮಾಧವಿ (35) ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಹಲವು ದಿನಗಳಿಂದ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆ ಗುರುಮೂರ್ತಿ ಪತ್ನಿಯನ್ನು ಹತ್ಯೆಗೈದು ಬಳಿಕ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದಿದ್ದಾನೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ

    ಹತ್ಯೆಯ ಬಳಿಕ ಗುರುಮೂರ್ತಿ ತನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಎಂದು ಸಂಬಂಧಿಕರಿಗೆ ತಿಳಿಸಿದ್ದ. ಅಲ್ಲದೇ ಮೀರಪೇಟೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾನೆ. ದೂರು ದಾಖಲಿಸುವ ಸಲುವಾಗಿ ತನ್ನ ಅತ್ತೆ ಮಾವನೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಗುರುಮೂರ್ತಿ, ತನ್ನ ಹೆಂಡತಿ ಎಲ್ಲಿದ್ದಾಳೆಂದು ತಿಳಿದಿಲ್ಲ ಎಂಬಂತೆ ನಟಿಸಿದ್ದ. ಇಷ್ಟುಮಾತ್ರವಲ್ಲದೇ ಆಕೆಯನ್ನು ಹುಡುಕುವಲ್ಲಿ ಪೊಲೀಸರಿಗೆ ಬೆಂಬಲ ಕೂಡ ನೀಡಿದ್ದ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ಯಾರೂ ತಪ್ಪಿಸಲು ಆಗಲ್ಲ: ಹೆಚ್.ವಿಶ್ವನಾಥ್

    ಆದರೆ ಪೊಲೀಸರು ಅನುಮಾನದ ಮೇಲೆ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾನೆ. ಮೀರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವು – ಅವಘಡ ಹೇಗಾಯ್ತು?

  • ಶೀಲ ಶಂಕಿಸಿ ಪತ್ನಿ, ಅತ್ತೆಯ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌ ಮಾಡಿದ ದುಷ್ಕರ್ಮಿ

    ಶೀಲ ಶಂಕಿಸಿ ಪತ್ನಿ, ಅತ್ತೆಯ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌ ಮಾಡಿದ ದುಷ್ಕರ್ಮಿ

    ಬೆಂಗಳೂರು: ಶೀಲ ಶಂಕಿಸಿ ವ್ಯಕ್ತಿಯೊಬ್ಬ ಪತ್ನಿ (Wife) ಹಾಗೂ ಅತ್ತೆಯ ಮೇಲೆ ತಲ್ವಾರ್‌ನಿಂದ ಹಲ್ಲೆ ನಡೆಸಿದ ಘಟನೆ ಬನಶಂಕರಿಯಲ್ಲಿ ನಡೆದಿದೆ.

    ತಲ್ವಾರ್‌ನಿಂದ ದಾಳಿ ನಡೆಸಿದ ಆರೋಪಿ ಆಸೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ತನ್ನ ಪತ್ನಿ ಹೀನಾ ಕೌಸರ್ (25) ಅತ್ತೆ ಫರ್ವಿನ್ ತಾಜ್ ಮೇಲೆ ದಾಳಿ ನಡೆಸಿದ್ದಾನೆ. ಜ.14ರಂದು ಬನಶಂಕರಿ ದೇಗುಲದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    10 ವರ್ಷಗಳ ಹಿಂದೆ ತಾಯಿಯ ಅಣ್ಣನ ಮಗ ಆಸೀಫ್‌ನ ಜೊತೆ ಹೀನಾ ಕೌಸರ್ ಮದುವೆ ಮಾಡಲಾಗಿತ್ತು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಆದರೆ ಕಳೆದ ವರ್ಷ ಪರ ಸ್ತ್ರೀ ಸಹವಾಸ ಮಾಡಿದ ಪತಿ, ಪತ್ನಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

    ಕಾಲೇಜು ಸ್ನೇಹಿತರಿಗೆ ಪತ್ನಿ ಮಾಡಿದ್ದ ಮೆಸೇಜ್ ನೋಡಿ ಅಕ್ರಮ ಸಂಬಂಧ ಇದೆ ಎಂದು ನಿತ್ಯ ಕಿರುಕುಳ ನೀಡುತ್ತಿದ್ದ. ಕಾಟ ತಾಳದೆ 8 ತಿಂಗಳ ಹಿಂದೆ ಮಗಳ ಜೊತೆ ತವರು ಮನೆಗೆ ಬಂದಿದ್ದ ಪತ್ನಿ, ಜೀವನಕ್ಕಾಗಿ ಕೆಲಸಕ್ಕೆ ಸೇರಿದ್ದಳು. ಆದರೂ ಪತ್ನಿಯ ಶೀಲ ಶಂಕಿಸಿ ಅತ್ತೆ ಮನೆಗೆ ಬಂದು ಮೂರು ಬಾರಿ ಹಲ್ಲೆ ಯತ್ನ ನಡೆಸಿದ್ದ.

    ಜ.14 ರಂದು ಅತ್ತೆ ಇಲ್ಲದಿದ್ದಾಗ ಏಕಾಏಕಿ ಮನೆಗೆ ನುಗ್ಗಿ ತಲ್ವಾರ್ ಮೂಲಕ ಪತ್ನಿ ಮೇಲೆ ದಾಳಿ ನಡೆಸಿದ್ದಾನೆ. ಬಳಿಕ ಮನೆಗೆ ಬಂದ ಅತ್ತೆಯ ಮೇಲೂ ಸಹ ಆರೋಪಿ ದಾಳಿ ನಡೆಸಿದ್ದಾನೆ. ಕಿರುಚಾಟ ಕೇಳಿ ಅಕ್ಕಪಕ್ಕದವರು ಬರುತ್ತಿದ್ದಂತೆ ತಲ್ವಾರ್ ಬಿಟ್ಟು ಆರೋಪಿ ಪರಾರಿಯಾಗಿದ್ದ. ಗಾಯಗೊಂಡಿದ್ದ ಮಗಳು ಹಾಗೂ ತಾಯಿಯನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

  • ಪ್ರಿಯಕರನ ಜೊತೆ ಸೇರಿ ಸುಪಾರಿ ಕೊಟ್ಟು ಗಂಡನ ಮರ್ಡರ್ ಮಾಡಿಸಿದ ಖತರ್ನಾಕ್ ಲೇಡಿ!

    ಪ್ರಿಯಕರನ ಜೊತೆ ಸೇರಿ ಸುಪಾರಿ ಕೊಟ್ಟು ಗಂಡನ ಮರ್ಡರ್ ಮಾಡಿಸಿದ ಖತರ್ನಾಕ್ ಲೇಡಿ!

    – ಹತ್ಯೆ ವಿಚಾರ ಕೇಳಿ ಮೂರ್ಛೆ ಹೋದಂತೆ ನಟಿಸಿದ್ದ ಪತ್ನಿ

    ಹಾಸನ: ಚನ್ನರಾಯಪಟ್ಟಣದ (Channarayapatna) ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯೇ (Wife) ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಹತ್ಯೆ ನಡೆಸಿರುವುದು ತನಿಖೆ ವೇಳೆ ಬಹಿರಂಗವಾಗಿದೆ.

    ಶುಕ್ರವಾರ ಮುಂಜಾನೆ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದಾಗ, ಗ್ರಾಮಸ್ಥರು ನಂಜುಂಡೇಗೌಡರ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಕಾರಣ ಬಯಲಾಗಿದೆ.

    14 ವರ್ಷಗಳ ಹಿಂದೆ ನಂಜುಂಡೇಗೌಡರ ಮದುವೆಯಾಗಿತ್ತು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಜೊತೆ ಕುಂಬಾರಹಳ್ಳಿಯಲ್ಲಿ ಅವರು ವಾಸವಿದ್ದರು. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಮಹಿಳೆ, ನಂತರ ಎದುರು ಮನೆಯ ಅರುಣ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.

    ಅರುಣ್‌ಗೆ ಇಬ್ಬರು ಮಕ್ಕಳಿದ್ದು, ಪತ್ನಿಯಿಂದ ದೂರವಿದ್ದ. ಈ ಹಿಂದೆ ಮಹಿಳೆ ಹಾಗೂ ಅರುಣ್ ಅಕ್ರಮ ಸಂಬಧದ ವಿಚಾರವಾಗಿ ನಂಜುಂಡೇಗೌಡ ಪೊಲೀಸ್ ಠಾಣೆಗೆ ದೂರು ನಿಡಿದ್ದರು. ಬಳಿಕ ರಾಜಿ – ಪಂಚಾಯ್ತಿ ನಡೆಸಿ ಹೊಂದಿಕೊಂಡು ಹೋಗುವಂತೆ ಕುಟುಂಬಸ್ಥರು ತಿಳುವಳಿಕೆ ಹೇಳಿದ್ದರು. ಅಲ್ಲದೇ ಅಕ್ರಮ ಸಂಬಂಧಕ್ಕೆ ಯಾರೂ ಅಡ್ಡಿ ಬರಬಾರದೆಂದು ಪತಿಯನ್ನು ಅವರ ಸಂಬಂಧಿಕರಿಂದ ಮಹಿಳೆ ದೂರ ಮಾಡಿದ್ದಳು. ಆದರೆ ಎರಡು ಹೆಣ್ಣುಮಕ್ಕಳಿಗಾಗಿ ನಂಜುಂಡೇಗೌಡ ಎಲ್ಲವನ್ನು ಸಹಿಸಿಕೊಂಡಿದ್ದರು.

    ಕೆಲ ದಿನಗಳ ಹಿಂದೆ ಎರಡು ಬಾರಿ ನಂಜುಂಡೇಗೌಡರ ಮೇಲೆ ಅರುಣ್ ಮತ್ತು ಆತನ ಗ್ಯಾಂಗ್ ದಾಳಿ ಮಾಡಿತ್ತು. ಈ ವೇಳೆ ಅದೃಷ್ಟವಶಾತ್ ಬಚಾವಾಗಿದ್ದರು. ಮೂರನೇ ಬಾರಿ ಮಿಸ್ ಆಗಬಾರದು ಎಂದು ಮೂರು ಕಡೆ ಕೊಲೆ ಮಾಡಲು ಹಂತಕರು ಸ್ಕೆಚ್ ಹಾಕಿದ್ದರು. ಅದರಂತೆ ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬಾರೆಯ ಬಳಿ ಮರದಪಟ್ಟಿಗೆ ಉದ್ದವಾದ 50ಕ್ಕೂ ಹೆಚ್ಚು ಮೊಳೆ ಹೊಡೆದು, ಹುಲ್ಲಿನಿಂದ ಮುಚ್ಚಿ ವಾಹನ ಪಂಚರ್ ಮಾಡಿದ್ದರು. ಪಂಚರ್ ಆದ ವಾಹನದಿಂದ ಇಳಿಯುತ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಲಾಂಗ್‌ನಿಂದ ದಾಳಿ ನಡೆಸಿ ಹತ್ಯೆಗೈದಿದ್ದರು. ಹತ್ಯೆಯ ವಿಚಾರ ಮಹಿಳೆಗೆ ತಿಳಿಯುತ್ತಿದ್ದಂತೆ ಅರ್ಧ ಗಂಟೆ ಮೂರ್ಛೆ ಹೋದಂತೆ ನಟಿಸಿದ್ದಳು.

    ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

  • 2ನೇ ಹೆಂಡ್ತಿ ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯ – ಮೊದಲ ಹೆಂಡ್ತಿಯನ್ನೇ ಹತ್ಯೆಗೈದ ಗಂಡ

    2ನೇ ಹೆಂಡ್ತಿ ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯ – ಮೊದಲ ಹೆಂಡ್ತಿಯನ್ನೇ ಹತ್ಯೆಗೈದ ಗಂಡ

    ಬೆಳಗಾವಿ: 2ನೇ ಹೆಂಡತಿಯನ್ನು ಬಿಟ್ಟು ತನ್ನ ಬಳಿಯೇ ಇರುವಂತೆ ಪೀಡಿಸುತ್ತಿದ್ದ ಮೊದಲ ಹೆಂಡ್ತಿಯನ್ನ ಪತಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ.

    ಶಮಾ ರಿಯಾಜ್ ಪಠಾಣ್(25) ಕೊಲೆಯಾದ ಮೊದಲ ಹೆಂಡತಿ, ರಿಯಾಜ್ ಪಠಾಣ್(30) ಕೊಲೆ ಮಾಡಿದ ಪಾಪಿ ಗಂಡ. ಎರಡನೇ ಹೆಂಡತಿ ಫರ್ಜಾನಾ ಪಠಾಣ್ ಮಾತು ಕೇಳಿ, ಶಮಾ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

    10 ವರ್ಷಗಳ ಹಿಂದೆ ಶಮಾಳೊಂದಿಗೆ ರಿಯಾಜ್‌ ಮದುವೆಯಾಗಿದ್ದ (Marriage). ಒಂದೂವರೆ ವರ್ಷದ ಹಿಂದೆ ಫರ್ಜಾನಾ ಜೊತೆಗೆ 2ನೇ ಮದುವೆಯಾಗಿದ್ದ. ಮೂರು ದಿನ ಮೊದಲ ಹೆಂಡತಿ, 4 ದಿನ 2ನೇ ಹೆಂಡತಿ ಮನೆಯಲ್ಲಿರುತ್ತಿದ್ದ. ಆದ್ರೆ ಶಮಾ 2ನೇ ಹೆಂಡತಿಯನ್ನು (Wife) ಬಿಟ್ಟು ತನ್ನ ಬಳಿಯೇ ಇರುವಂತೆ ಪದೇ ಪದೇ ಪೀಡಿಸುತ್ತಿದ್ದಳು. ಇದಕ್ಕೆ ಗಂಡ ಒಪ್ಪದೇ ಇದ್ದಿದ್ದಕ್ಕೆ ಶಮಾ ಮೇಂಟೆನೆನ್ಸ್‌ ಕೇಸ್‌ ಹಾಕುವುದಕ್ಕೆ ಪ್ಲ್ಯಾನ್‌ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ತಿರುಪತಿ ಕಾಲ್ತುಳಿತ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ – ಮಹಡಿಯಿಂದ ಬಿದ್ದು ಬಾಲಕ ಸಾವು

    ಶಮಾ ತನ್ನ ವಿರುದ್ಧ ಕೇಸ್‌ ಹಾಕೋದಕ್ಕೆ ಪ್ಲ್ಯಾನ್‌ ಮಾಡಿದ್ದ ವಿಚಾರ ತಿಳಿದ ರಿಯಾಜ್‌ 2ನೇ ಹೆಂಡತಿಗೂ ಹೇಳಿದ್ದಾನೆ. ಬಳಿಕ ಫರ್ಜಾನಾ ಮಾತು ಕೇಳಿ ಶಮಾಳನ್ನ ಕೊಂದೇಬಿಟ್ಟಿದ್ದಾನೆ. ಕೊಲೆ ಮಾಡಿದ ಬಳಿಕ ಮೊದಲ ಹೆಂಡತಿ ಮಗ ಹಾಗೂ 2ನೇ ಹೆಂಡತಿಯನ್ನ ಕರೆದುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Saif Ali Khan Stabbed| ಮನೆಯ ಕೆಲಸದಾಕೆಯ ಜೊತೆ ದಾಳಿಕೋರನಿಗೆ ಇತ್ತಾ ಸಂಬಂಧ?