Tag: Wife

  • ತವರು ಸೇರಿದ್ದ ಪತ್ನಿಯನ್ನು ಹಾಡಹಗಲೇ ಅಪಹರಿಸಿದ ಪತಿ!

    ತವರು ಸೇರಿದ್ದ ಪತ್ನಿಯನ್ನು ಹಾಡಹಗಲೇ ಅಪಹರಿಸಿದ ಪತಿ!

    – ಎಳೆದೊಯ್ಯುವ ದೃಶ್ಯ ಸಿಟಿವಿಯಲ್ಲಿ ಸೆರೆ

    ದಾವಣಗೆರೆ: ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿ ತವರು ಸೇರಿದ್ದ ಪತ್ನಿಯನ್ನು (Wife) ಪತಿಯ ಕುಟುಂಬಸ್ಥರು ಅಮಾನವೀಯವಾಗಿ ಎಳೆದೊಯ್ದ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ.

    ಕೊಪ್ಪ ಬಳಿಯ ನರಸೀಪುರದ ನಿವಾಸಿ ಕಾರ್ತಿಕ್ ಎಂಬಾತನಿಗೆ ದಿಡಗೂರಿನ ಅನುಂಧತಿ ಎಂಬಾಕೆಯನ್ನು 4 ವರ್ಷಗಳ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಇತ್ತೀಚೆಗೆ ಪತಿಯ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಆರೋಪ ಮಾಡಿ ಅನುಂಧತಿ ತವರು ಮನೆ ಸೇರಿದ್ದಳು.

    ಮಂಗಳವಾರ ಬೆಳಗ್ಗೆ ಅನುಂಧತಿಯನ್ನು ಪತಿ ಹಾಗೂ ಆತನ ಕುಟುಂಬಸ್ಥರು ಅಮಾನುಷವಾಗಿ ಎಳೆದು ಕಾರಿನಲ್ಲಿ ಅಪಹರಿಸಿದ್ದಾರೆ. ಈ ವೇಳೆ ತಡೆಯಲು ಬಂದ ಅನುಂಧತಿ ಕುಟುಂಬಸ್ಥರ ಮೇಲೆ ಪತಿ ಹಾಗೂ ಆತನ ಕುಟುಂಬಸ್ಥರು ಹಲ್ಲೆಗೂ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

    ಕಿಡ್ಯ್ನಾಪ್‍ನ ಭಯನಾಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಹೊನ್ನಾಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮ ಸಂಬಂಧಕ್ಕೆ ಅಡ್ಡಿ, ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ

    ಅಕ್ರಮ ಸಂಬಂಧಕ್ಕೆ ಅಡ್ಡಿ, ನಾದಿನಿ ಜೊತೆ ಸೇರಿ ತಮ್ಮನನ್ನೇ ಕೊಲೆಗೈದ ಅಣ್ಣ

    ಹಾಸನ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎನ್ನುವ ಕಾರಣಕ್ಕೆ ತಮ್ಮನನ್ನೇ ಆತನ ಅಣ್ಣ ಹಾಗೂ ಪತ್ನಿ (Wife) ಸೇರಿ ಕೊಲೆಗೈದ ಘಟನೆ ಹಾಸನದ (Hassan) ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಅನಂದ (36) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ದೊಡ್ಡಪ್ಪನ ಪುತ್ರ ಸೋಮಶೇಖರ ಹಾಗೂ ಆನಂದನ ಪತ್ನಿ ಕೊಲೆಗೈದ ಆರೋಪಿಗಳಾಗಿದ್ದಾರೆ. ಆರೋಪಿಗಳು ಆನಂದನನ್ನು ಕೊಲೆ ಮಾಡಿ ತಮಗೇನು ಗೊತ್ತಿಲ್ಲದಂತೆ ನಾಟವಾಡಿದ್ದರು. ಇಬ್ಬರು ಸೇರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬಿಂಬಿಸಲು ಹೊರಟಿದ್ದರು. ಆದರೆ ಗ್ರಾಮಸ್ಥರು ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ, ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

    10 ವರ್ಷಗಳ ಹಿಂದೆ ಆನಂದ ವಿವಾಹವಾಗಿದ್ದು, ಇಬ್ಬರು ಮಕ್ಕಳು ಹಾಗೂ ಪತ್ನಿ ಜೊತೆ ಮುಕುಂದೂರು ಹೊಸಳ್ಳಿ ಗ್ರಾಮದಲ್ಲಿ ವಾಸವಿದ್ದರು. ಆನಂದನ ಪಕ್ಕದ ಮನೆಯಲ್ಲಿಯೇ ಅಣ್ಣ ಸೋಮಶೇಖರ ಕುಟುಂಬ ನೆಲೆಸಿದ್ದು, ಕಳೆದ ಮೂರು ವರ್ಷಗಳ ಹಿಂದೆ ಆತನ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿ ಮರಣದ ಬಳಿಕ ಸೋಮಶೇಖರ ತಮ್ಮನ ಮನೆಗೆ ಬಂದು ತಿಂಡಿ, ಊಟ ಮಾಡುತ್ತಿದ್ದ. ಈ ವೇಳೆ ನಾದಿನಿ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಈ ವಿಷಯ ಆನಂದನಿಗೆ ತಿಳಿದು, ಆಪ್ತರ ಜೊತೆ ದುಃಖ ತೋಡಿಕೊಂಡಿದ್ದ. ವಿಷಯ ಹೊರಗೆ ಗೊತ್ತಾದರೆ ಮರ್ಯಾದೆ ಹೋಗುತ್ತದೆ ಎಂದು ಪತ್ನಿಗೆ ತಿಳುವಳಿಕೆ ಹೇಳಿ ಸಂಸಾರ ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದ್ದ. ಆದರೆ ಅಕ್ರಮ ಸಂಬಂಧಕ್ಕೆ ಆನಂದ ಅಡ್ಡಿಯಾಗುತ್ತಿದ್ದ ಆತನನ್ನು ಮುಗಿಸಲು ಸೋಮಶೇಖರ್ ಹಾಗೂ ಹಾಗೂ ಕೊಲೆಯಾದವನ ಪತ್ನಿ ಸಂಚು ಮಾಡಿದ್ದರು.

    ಕಳೆದ ವರ್ಷ ಡಿ.26 ರಂದು ಆನಂದ ಬೈಕ್‍ಗೆ ಪೆಟ್ರೋಲ್ ಹಾಕಿಸಿಕೊಂಡು ಬರುತ್ತೇನೆಂದು ಹಂಗರಹಳ್ಳಿ ಗ್ರಾಮದ ಪೆಟ್ರೋಕ್ ಬಂಕ್‍ಗೆ ಹೋಗಿದ್ದವನು ವಾಪಾಸ್ ಮನೆಗೆ ಬಂದಿರಲಿಲ್ಲ. ಆನಂದನನ್ನು ಹುಡುಕಾಡಿದ ತಾಯಿ ಹಾಗೂ ಪತ್ನಿ, ಗೊರೂರು ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು.

    ಡಿ.28 ರಂದು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಕುಂಚೆವು ಗ್ರಾಮದ ಕೆರೆಯಲ್ಲಿ ಆನಂದನ ಶವ ಪತ್ತೆಯಾಗಿತ್ತು. ಪತ್ನಿ ಅಕ್ರಮ ಸಂಬಂಧದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆನಂದನ ಸಂಬಂಧಿಕರು ಹಾಗೂ ಗ್ರಾಮಸ್ಥರು ಭಾವಿಸಿದ್ದರು. ಆದರೆ ಆನಂದ ಮೃತದೇಹ ನೋಡಿದ ನಂತರ ಸಾವಿನ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಆನಂದನ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಬಳಿಕ ಪೊಲೀಸರು (Police) ಸೋಮಶೇಖರ ಹಾಗೂ ಆನಂದನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ, ಆತನಿಗೆ ಕಂಠಪೂರ್ತಿ ಕುಡಿಸಿ, ನಾಲೆಗೆ ತಳ್ಳಿ ಮನೆಗೆ ತೆರಳಿದ್ದ ವಿಚಾರ ಬಯಲಾಗಿತ್ತು. ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

  • ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು

    ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು

    ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಪತಿ (Husband) ಮೃತಪಟ್ಟ ಸುದ್ದಿ ತಿಳಿದು ಪತ್ನಿ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ (Hosanagara) ತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್‌ನಲ್ಲಿ ನಡೆದಿದೆ.

    ಮಂಜುನಾಥ್ (25), ಅಮೃತ (21) ಮೃತ ದುರ್ದೈವಿಗಳು. ಮಂಜುನಾಥ್‌ಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಇಂದು (ಬುಧವಾರ) ಮೃತಪಟ್ಟಿದ್ದಾರೆ. ಪತಿ ಮಂಜುನಾಥ್ ಸಾವಿನಿಂದ ಮನನೊಂದ ಪತ್ನಿ ಅಮೃತ ಮನೆಗೆ ಬಂದು ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸಕಲ ಸೇನಾ ಗೌರವದೊಂದಿಗೆ ಹುಟ್ಟೂರಲ್ಲಿ ಹುತಾತ್ಮ ಯೋಧ ದಿವಿನ್‌ ಅಂತ್ಯಕ್ರಿಯೆ

    ಮಂಜುನಾಥ್ ಹಾಗೂ ಅಮೃತ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುಎಸ್‌ನಲ್ಲಿ ಕಾರು ಹರಿದು 10 ಮಂದಿ ಸಾವು – 35ಕ್ಕೂ ಹೆಚ್ಚು ಮಂದಿಗೆ ಗಾಯ

  • ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ – 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ ಪಾಪಿಗಳು

    ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ – 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ ಪಾಪಿಗಳು

    ಹಾಸನ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಲೆಗೈದ ಘಟನೆ ಅರಸೀಕೆರೆಯ (Arasikere) ಹೊರ ವಲಯದ ತಿರುಪತಿ ಕ್ರಾಸ್ ಬಳಿ ನಡೆದಿದೆ.

    ಕೊಲೆಯಾದ (Murder) ವ್ಯಕ್ತಿಯನ್ನು ಮುಜಾಮಿಲ್ ಎಂದು ಗುರುತಿಸಲಾಗಿದೆ. ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಯಾಸೀನ್ ಕೊಲೆಗೈದ ಆರೋಪಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಮುಜಾಮಿಲ್ ಅಡ್ಡಿಯಾಗಿದ್ದಕ್ಕೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

    ಕೊಲೆಯಾದ ಮುಜಾಮಿಲ್‍ನ ಪತ್ನಿ ಜೊತೆ ಯಾಸೀನ್ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತ್ನಿ ಜೊತೆ ಮುಜಾಮಿಲ್ ಜಗಳವಾಡುತ್ತಿದ್ದ. ಇದರಿಂದ ಆತನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿ ಹಾಗೂ ಯಾಸೀನ್ ಡಿ.15ರಂದು ಮದ್ಯ ಸೇವಿಸಿದ್ದ ಮುಜಾಮಿಲ್‍ನನ್ನು ನಗರದ ಹೊರ ವಲಯಕ್ಕೆ ಕರೆದೊಯ್ದು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದರು. ಬಳಿಕ ಶವವನ್ನು ಚರಂಡಿಗೆ ಹಾಕಿ ಮೂರು ದಿನಗಳ ಕಾಲ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅಲ್ಲದೇ ಹೊಗೆ ಬರದಂತೆ ಗುಜರಿ ಅಂಗಡಿಯಿಂದ ಕಬ್ಬಿಣದ ವಸ್ತುಗಳನ್ನು ತಂದು ಚರಂಡಿ ಮುಚ್ಚಿದ್ದರು.

    ಎರಡು ದಿನಗಳ ನಂತರ ಆರೋಪಿ ಮಹಿಳೆ ಹಾಗೂ ಆಕೆಯ ಪುತ್ರ ಜಾಹೀದ್ ಖಾನ್ ಪೊಲೀಸ್ ಠಾಣೆಗೆ ತೆರಳಿ ಮುಜಾಮಿಲ್ ಕಾಣೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಸುಟ್ಟ ಸ್ಥಿತಿಯಲ್ಲಿದ್ದ ಮುಜಾಮಿಲ್ ಶವವನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

    ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮಕೊಟ್ಟ ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೈದ ಪತಿ

    ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮಕೊಟ್ಟ ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೈದ ಪತಿ

    ಮುಂಬೈ: ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife) ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ (Maharashtra) ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಎಂಬ ಗ್ರಾಮದಲ್ಲಿ ನಡೆದಿದೆ.

    ಹತ್ಯೆಯಾದ ಮಹಿಳೆಯನ್ನು ಮೈನಾ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಕುಂಡ್ಲಿಕ್ ಉತ್ತಮ್ ಕಾಳೆ (32) ಎಂದು ಗುರುತಿಸಲಾಗಿದೆ. ಆರೋಪಿಯು ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ ಎಂದು ಆಕೆಗೆ ನಿಂದಿಸುತ್ತಿದ್ದ. ಈ ವಿಷಯವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಮೈನಾ ಅವರ ಸಹೋದರಿ ಆರೋಪಿಸಿದ್ದಾರೆ.

    ಗುರುವಾರ ರಾತ್ರಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ಆಕೆ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಹೋಗಿದ್ದಾಳೆ. ಜನರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ.

    ಪೊಲೀಸರು (Police) ಕೊಲೆ ಆರೋಪಿ ಕಾಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಪತ್ನಿ ಮೇಲೆ ಸಂಶಯ – ಆಡಿಯೋ ಕೇಳಿ ಮಹಿಳೆಯ ಬರ್ಬರ ಹತ್ಯೆ!

    ಪತ್ನಿ ಮೇಲೆ ಸಂಶಯ – ಆಡಿಯೋ ಕೇಳಿ ಮಹಿಳೆಯ ಬರ್ಬರ ಹತ್ಯೆ!

    ಶಿವಮೊಗ್ಗ: ಪತ್ನಿಯ (Wife) ಮೇಲಿನ ಅನುಮಾನದಿಂದ ಪತಿಯೇ (Husband) ಆಕೆಗೆ ಚಾಕು ಇರಿದು ಹತ್ಯೆಗೈದ ಘಟನೆ ಶಿವಮೊಗ್ಗ (Shivamogga) ನಗರದಲ್ಲಿ ನಡೆದಿದೆ.

    ಹತ್ಯೆಯಾದ ಮಹಿಳೆಯನ್ನು ರುಕ್ಸನಾ (38) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಯೂಸುಫ್ ಎಂದು ಗುರುತಿಸಲಾಗಿದೆ. ಆರೋಪಿ, ರುಕ್ಸನಾಳನ್ನು ಕಳೆದ 13 ವರ್ಷದ ಹಿಂದೆ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಮೇಲೆ ಸಂಶಯ ವ್ಯಕ್ತಪಡಿಸಿ ಆರೋಪಿ ಗಲಾಟೆ ಮಾಡಿದ್ದ. ಅಲ್ಲದೇ ಕಳೆದ ಮೂರು ದಿನಗಳ ಹಿಂದೆ ಸಹ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

    ಆರೋಪಿ ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ಫೋನಿನಲ್ಲಿ ಆಡೀಯೊ ರೆಕಾರ್ಡಿಂಗ್ ಇಟ್ಟು ಹೊರಗಡೆ ಹೋಗಿದ್ದ. ಮನೆಗೆ ವಾಪಸ್ ಬಂದು ನೋಡಿದಾಗ ರುಕ್ಸಾನ ಬೇರೆ ವ್ಯಕ್ತಿಯ ಜೊತೆ ಮಾತನಾಡಿದ ಆಡಿಯೋ ಆತನಿಗೆ ಸಿಕ್ಕಿತ್ತು. ಇದರಿಂದ ಕೋಪಗೊಂಡ ಯುಸೂಫ್ ಆಕೆಗೆ ಪ್ರಶ್ನೆ ಮಾಡಿದ್ದಾನೆ. ರುಕ್ಸಾನ ಕೂಡ ತನ್ನದು ತಪ್ಪಾಗಿದೆ ಎಂದು ಹೇಳಿದ್ದಳು. ಬಳಿಕ ತವರು ಮನೆಗೆ ತೆರಳಿದ್ದಳು ಎಂದು ತಿಳಿದು ಬಂದಿದೆ.

    ತವರು ಮನೆಗೆ ಹೋಗಿದ್ದ ಪತ್ನಿಯನ್ನು ಆರೋಪಿ ಇಂದು (ಭಾನುವಾರ) ಬೆಳಗ್ಗೆ ತನ್ನ ಮಗುವಿಗೆ ಆರೋಗ್ಯ ಸರಿಯಿಲ್ಲವೆಂದು ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ ಆರೋಪಿ ಆಕೆಗೆ ಮಾರಕಾಸ್ತ್ರಗಳಿಂದ ಇರಿದಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

    ಈ ಸಂಬಂಧ ಆರೋಪಿಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

  • 3ನೇ ಮದುವೆಗಾಗಿ ಪತ್ನಿಯ ಹತ್ಯೆ – ಶವ ವಿವಸ್ತ್ರಗೊಳಿಸಿ ಎಸೆದಿದ್ದ ಆರೋಪಿ ಅರೆಸ್ಟ್

    3ನೇ ಮದುವೆಗಾಗಿ ಪತ್ನಿಯ ಹತ್ಯೆ – ಶವ ವಿವಸ್ತ್ರಗೊಳಿಸಿ ಎಸೆದಿದ್ದ ಆರೋಪಿ ಅರೆಸ್ಟ್

    – ಮದುವೆ ಮನೆಯಲ್ಲೇ ಆರೋಪಿ ಲಾಕ್

    ಆನೇಕಲ್: ಪತ್ನಿಯನ್ನು (Wife) ಕೊಲೆಗೈದು ಬಿಹಾರದಲ್ಲಿ ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ವ್ಯಕ್ತಿಯನ್ನು ಮದುವೆ ಮನೆಯಲ್ಲೇ ಸರ್ಜಾಪುರ ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಬಿಹಾರ (Bihar) ಮೂಲದ ಮಹಮದ್ ನಸೀಮ್ (39) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಎರಡನೇ ಪತ್ನಿ ರುಮೇಶ್ ಖಾತುನ್‍ಳನ್ನು (22) ಕೊಲೆಗೈದು ಹಗ್ಗದಿಂದ ಕೈ ಕಾಲು ಕಟ್ಟಿ, ಚರಂಡಿಗೆ ಎಸೆದಿದ್ದ. ಬಳಿಕ ಬಿಹಾರಕ್ಕೆ ತೆರಳಿ ತಲೆಮರೆಸಿಕೊಂಡಿದ್ದ.

    ಶವ ಕೊಳೆತು ದುರ್ವಾಸನೆ ಬಂದ ಬಳಿಕ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿ ಜಾಡು ಹಿಡಿದು ಪೊಲೀಸರು ಬಿಹಾರಕ್ಕೆ ತೆರಳಿದ್ದರು. ಅಲ್ಲಿ ಆರೋಪಿ ಮೂರನೇ ಮದುವೆ ಸಂಭ್ರಮದಲ್ಲಿದ್ದ. ಅಲ್ಲಿಂದಲೇ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

    ಆರೋಪಿ ತನ್ನ ಹೆಂಡತಿಯ ಶೀಲ ಶಂಕಿಸಿ ಪದೇ ಪದೇ ಹಲ್ಲೆ ಮಾಡುತ್ತಿದ್ದ. ಕಳೆದ ತಿಂಗಳು 11ರ ರಾತ್ರಿ ಸಹ ಇದೇ ವಿಚಾರಕ್ಕೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಉಸಿರುಗಟ್ಟಿಸಿ ಪತ್ನಿಯನ್ನು ಕೊಲೆ ಮಾಡಿದ್ದ.

  • ಸಾವಿನಲ್ಲೂ ಒಂದಾದ ದಂಪತಿ – ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು

    ಸಾವಿನಲ್ಲೂ ಒಂದಾದ ದಂಪತಿ – ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು

    ದಾವಣಗೆರೆ: ಪತಿಯ (Husband) ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿಯೂ (Wife) ಸಾವನ್ನಪ್ಪಿರುವುದು ಚನ್ನಗಿರಿ (Channagiri) ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಕಸ್ತೂರಿ ರಂಗಪ್ಪ (65) ಜಯಮ್ಮ (58) ಸಾವನ್ನಪ್ಪಿದ ದಂಪತಿ. ಪಡಿತರ ಅಕ್ಕಿ ತರಲು ನ್ಯಾಯಬೆಲೆ ಅಂಗಡಿಗೆ ಕಸ್ತೂರಿ ರಂಗಪ್ಪ ಹೋಗಿದ್ದರು. ಈ ವೇಳೆ ಅವರು ಕುಸಿದು ಬಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

    ಕಸ್ತೂರಿ ರಂಗಪ್ಪ ಸಾವನ್ನಪ್ಪಿದ ವಿಚಾರವನ್ನು ಫೋನ್ ಮೂಲಕ ಪತ್ನಿ ಜಯಮ್ಮನಿಗೆ ಕುಟುಂಬಸ್ಥರು ತಿಳಿಸಿದ್ದಾರೆ. ಈ ವಿಚಾರ ಕೇಳಿದ ಕೂಡಲೇ ಅವರು ಸಹ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇಬ್ಬರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.

  • ಕೌಟುಂಬಿಕ ಕಲಹ – ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಪಾಪಿ ಪತಿ

    ಕೌಟುಂಬಿಕ ಕಲಹ – ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಪಾಪಿ ಪತಿ

    ಶಿವಮೊಗ್ಗ: ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife) ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಘಟನೆ ಶಿಕಾರಿಪುರ (Shikaripura) ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ನಡೆದಿದೆ.

    ಕೊಲೆಯಾದ ಮಹಿಳೆಯನ್ನು ಗೌರಮ್ಮ (28) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಮಹಿಳೆಯ ಪತಿ ಮನೋಜ್ ಎಂದು ಗುರುತಿಸಲಾಗಿದೆ. ಆರೋಪಿ ಶನಿವಾರ ಮಧ್ಯಾಹ್ನ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಜೊತೆ ಜಗಳವಾಡಿದ್ದ. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ಟವೆಲ್‍ನಿಂದ ಪತ್ನಿ ಗೌರಮ್ಮಳ ಕತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

    ಆರೋಪಿ ಮನೋಜ್‍ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

  • ಪತಿಯ ಮೊದಲ ಹೆಂಡತಿಯೊಂದಿಗೆ ಗಲಾಟೆ ಮಾಡಿ 50 ಬಾರಿ ಚಾಕು ಚುಚ್ಚಿದ ಮಹಿಳೆ!

    ಪತಿಯ ಮೊದಲ ಹೆಂಡತಿಯೊಂದಿಗೆ ಗಲಾಟೆ ಮಾಡಿ 50 ಬಾರಿ ಚಾಕು ಚುಚ್ಚಿದ ಮಹಿಳೆ!

    ಭೋಪಾಲ್‌: ಮಹಿಳೆಯೊಬ್ಬಳು ತನ್ನ ಪತಿಯ ಮೊದಲ ಹೆಂಡತಿಯೊಂದಿಗೆ (Wife) ಗಲಾಟೆ ಮಾಡಿ 50 ಬಾರಿ ಚಾಕು ಚುಚ್ಚಿದ ಘಟನೆ ಮಧ್ಯಪ್ರದೇಶದ (Madhya Pradesh) ರೇವಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್‌ ಆಗಿದ್ದು ಆರೋಪಿ, ಮಹಿಳೆಗೆ ಪದೇ ಪದೇ ಚಾಕು ಚುಚ್ಚುವುದನ್ನು ತೋರಿಸಿದೆ.

    ಚಾಕು ಇರಿತಕ್ಕೊಳಗಾದ ಮಹಿಳೆಯನ್ನು ಜಯಾ (26) ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಮಾನ್ಸಿ (22) ಎಂದು ಗುರುತಿಸಲಾಗಿದೆ. ಈ ಇಬ್ಬರು ಮಹಿಳೆಯರು ರಾಂಬಾಬು ವರ್ಮಾ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು.

    ಅಕ್ಟೋಬರ್ 31 ರ ದೀಪಾವಳಿಯಂದು ಇಬ್ಬರು ಮಹಿಳೆಯರ ನಡುವೆ ಗಲಾಟೆಯಾಗಿದೆ. ಈ ವೇಳೆ ಮಾನ್ಸಿ, ಜಯಾಳಿಗೆ 50ಕ್ಕೂ ಹೆಚ್ಚು ಬಾರಿ ಚಾಕು ಇರಿದಿದ್ದಾಳೆ. ಜಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

    ಜಯಾ ಅವರಿಗೆ ಅನಾರೋಗ್ಯದ ಕಾರಣದಿಂದ ರಾಂಬಾಬು ವರ್ಮಾ ಅವರು ಮಾನ್ಸಿಯನ್ನು ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.

    ಈ ಸಂಬಂಧ ಮಾನ್ಸಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.