Tag: wild animals

  • ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಈಶ್ವರ ಖಂಡ್ರೆ

    ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಈಶ್ವರ ಖಂಡ್ರೆ

    ಬೆಂಗಳೂರು: ರಾಜ್ಯದ ಕೆಲವು ಅರಣ್ಯದೊಳಗೆ ಹಾಡಿಗಳಿದ್ದು, ಇಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳು ಸಾಕಿರುವ ಜಾನುವಾರುಗಳು (Livestock) ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ ಖಂಡ್ರೆ (Eshwar Khandre) ತಿಳಿಸಿದ್ದಾರೆ.

    ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳೆದ ಜೂನ್‌ನಲ್ಲಿ ಪ್ರತಿಕಾರಕ್ಕಾಗಿ ದನಕ್ಕೆ ಹಾಕಿದ್ದ ವಿಷದಿಂದ 5 ಹುಲಿಗಳು ಮೃತಪಟ್ಟಿದ್ದವು. ಈ ತಿಂಗಳ ಆದಿಯಲ್ಲೇ ಮತ್ತೊಂದು ಹುಲಿ ವಿಷಪ್ರಾಶನದಿಂದ ಮೃತಪಟ್ಟಿದೆ. ಹಾಡಿಯ ಜನರು ಹತಾಶರಾಗಿ, ಪ್ರತಿಕಾರಕ್ಕಾಗಿ ವಿಷ ಹಾಕುವುದನ್ನು ತಡೆಯಲು ಈ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ – ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

    ಮುಖ್ಯಮಂತ್ರಿಗಳಿಗೆ ಹುಲಿ ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಅರಣ್ಯದೊಳಗಿನ ಹಾಡಿಯಲ್ಲಿರುವ ಜಾನುವಾರುಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪ್ರವಾಹದಲ್ಲಿ ಸಾವಿಗೀಡಾಗುವ ಜಾನುವಾರುಗಳಿಗೆ ನೀಡುವ ಪರಿಹಾರದ ಮೊತ್ತವನ್ನೇ ಈ ಜಾನುವಾರುಗಳಿಗೂ ನೀಡಲು ನಿರ್ಧರಿಸಲಾಗಿದ್ದು, ವನ್ಯಜೀವಿ ಸಪ್ತಾಹದ ಸಮಾರೋಪದಲ್ಲಿ ಮುಖ್ಯಮಂತ್ರಿಗಳೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ತಾವು ಸಾಕಿದ ಜಾನುವಾರುಗಳು ಮೃತಪಟ್ಟಾಗ ಸಹಜವಾಗಿಯೇ ಆಕ್ರೋಶಕ್ಕೆ ಒಳಗಾಗುತ್ತಾರೆ. ಆದರೆ ವನ್ಯಜೀವಿ ಹತ್ಯೆ ಅಪರಾಧವಾಗಿದ್ದು, ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕಾಗುತ್ತದೆ. ಕಳೆದ 1ರಂದು ನಡೆದ ಹುಲಿ ಹತ್ಯೆಯ 4 ಶಂಕಿತರನ್ನು 48 ಗಂಟೆಯೊಳಗೆ ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಈ ಕುಕೃತ್ಯದಲ್ಲಿ ಯಾರೇ ಎಸಗಿದ್ದರೂ ಅವರಿಗೆ ಕಾನೂನು ರೀತಿಯ ತಕ್ಕ ಶಿಕ್ಷೆ ಆಗುತ್ತದೆ. ತ್ವರಿತವಾಗಿ ಶಿಕ್ಷೆ ಆದರೆ ಅದು ಸ್ಪಷ್ಟ ಸಂದೇಶ ರವಾನಿಸುತ್ತದೆ. ಹೀಗಾಗಿ ತ್ವರಿತವಾಗಿ ಚಾರ್ಜ್ ಶೀಟ್ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಯಾದಗಿರಿ | ಸೆಕ್ಸ್‌ಗೆ ಒಪ್ಪದಿದ್ದಕ್ಕೆ ಪತ್ನಿಯ ಭೀಕರ ಕೊಲೆ – ಕೊಡಲಿಯೊಂದಿಗೆ ಪೊಲೀಸರಿಗೆ ಶರಣಾದ ಹಂತಕ

    ಒಂದೊಮ್ಮೆ ಹುಲಿ ಹತ್ಯೆ ತಡೆಯುವಲ್ಲಿ ಅರಣ್ಯ ಇಲಾಖೆಯ ಯಾವುದೇ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರೆ, ಕರ್ತವ್ಯ ಲೋಪ ಆಗಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದು. ಈಗಾಗಲೇ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಲಾಗಿದ್ದು, ವರದಿ ಬಂದ ಬಳಿಕ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

  • ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಹರಾರೆ: ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ (Zimbabwe Government) ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ.

    ಹೌದು. ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಪರಿಣಮಿಸಿದೆ. ಆದ್ದರಿಂದ ಆನೆಗಳನ್ನು (Elephants) ಕೊಲ್ಲಲು ಅಲ್ಲಿನ ಅಧಿಕಾರಿಗಳೇ ನಿರ್ಧರಿಸಿದ್ದಾರೆ. 1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದಾರೆ ಎಂದೂ ಸಹ ವರದಿಯಾಗಿತ್ತು. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್‌ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

    ಅತಿಹೆಚ್ಚು ಆನೆಗಳನ್ನು ಹೊಂದಿರುವ ಟಾಪ್‌-5 ದೇಶಗಳು:
    ಪ್ರತಿ 5 ವರ್ಷಗಳಿಗೊಮ್ಮೆ ಆನೆ ಗಣತಿಯನ್ನು ನಡೆಸಲಾಗುತ್ತದೆ. 2021ರ ಆನೆ ಗಣತಿ ವರದಿ ಪ್ರಕಾರ ಜಿಂಬಾಬ್ವೆ 1 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವಕ್ಕೆ 2ನೇ ಸ್ಥಾನದಲ್ಲಿತ್ತು. ಆದರೀಗ 84 ಸಾವಿರ ಆನೆಗಳನ್ನಷ್ಟೇ ಹೊಂದಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: 83 ಆನೆ, 30 ಹಿಪ್ಪೋ ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಂದು ಮಾಂಸವನ್ನು ಜನರಿಗೆ ವಿತರಿಸಲು ಮುಂದಾದ ನಮೀಬಿಯಾ

    2021ರ ಆನೆ ಗಣತಿ ವರದಿ ಅನ್ವಯ ಬೋಟ್ಸ್ವಾನ 1.30 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ದೇಶವಾಗಿದೆ. ಇನ್ನೂ ಜಿಂಬಾಬ್ವೆ 1 ಲಕ್ಷ, ತಾಂಜಾನಿಯಾ 60 ಸಾವಿರ ಆನೆಗಳನ್ನು ಹೊಂದಿದೆ. 2022ರ ಗಣತಿ ಪ್ರಕಾರ 35 ಸಾವಿರ ಆನೆಗಳನ್ನು ಹೊಂದಿರುವ ಕೀನ್ಯಾ 4ನೇ ಸ್ಥಾನದಲ್ಲಿದ್ದು, 24 ಸಾವಿರ ಆನೆಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದೆ.

    ನಮೀಬಿಯಾದಲ್ಲೂ ಬರ:
    ಕೆಲ ದಿನಗಳ ಹಿಂದೆಯಷ್ಟೇ ನಮೀಬಿಯಾ ಸರ್ಕಾರವೂ ಪ್ರಾಣಿಗಳನ್ನು ಕೊಲ್ಲುವ ನಿರ್ಧಾರ ತೆಗೆದುಕೊಂಡಿದೆ. ಬರದಿಂದ (Drought) ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಇತ್ತೀಚೆಗೆ ಹೇಳಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

    ಪ್ರಾಣಿಗಳ ಸಂಖ್ಯೆಯು ಲಭ್ಯವಿರುವ ಹುಲ್ಲುಗಾವಲು ಭೂಮಿ ಮತ್ತು ನೀರಿನ ಸಂಪನ್ಮೂಲಗಳನ್ನು ಮೀರಿದೆ. ಇದರಿಂದಾಗಿ ಜನವಸತಿ ಇರುವ ಸ್ಥಳಗಳಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವರ ಸಂಘರ್ಷ ಹೆಚ್ಚಾಗಿದೆ. ಈ ಸಂಘರ್ಷವನ್ನು ನಿಯಂತ್ರಿಸಲು ಗುರುತಿಸಲಾದ ಪ್ರದೇಶಗಳಿಂದ 83 ಆನೆಗಳನ್ನು ಕೊಲ್ಲಲಾಗುತ್ತದೆ ಮತ್ತು ಮಾಂಸವನ್ನು ಬರ ಪರಿಹಾರ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ. ಆನೆಗಳ ಜೊತೆಗೆ, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾಗಳು, 100 ನೀಲಿ ಕಾಡುಕೋಣಗಳು, 300 ಜೀಬ್ರಾಗಳು ಮತ್ತು 100 ಎಲ್ಯಾಂಡ್‌ಗಳನ್ನು ಕೊಲ್ಲಲು ಯೋಜಿಸಿದೆ. ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ ಮಾಂಸವನ್ನು ಜನರಿಗೆ ನೀಡಲಾಗಿದೆ ಎಂದು ನಮೀಬಿಯಾ ಪರಿಸರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

  • ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ: ಅರಣ್ಯ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

    ಮಾನವ-ವನ್ಯಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮ ಅನುಸರಿಸಿ: ಅರಣ್ಯ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ (Human-Wildlife Conflict) ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ಅವರು ಮಂಗಳವಾರ ಮಾನವ-ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡೆದೇವನಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೃಷ್ಣ ನಾಯಕ್ ಎಂಬ 10 ವರ್ಷದ ಬಾಲಕನನ್ನು ಹುಲಿ ಎತ್ತೊಯ್ದಿರುವ ಕುರಿತು ಆತಂಕ ವ್ಯಕ್ತಪಡಿಸಿದರು.

    ಅರಣ್ಯ ಇಲಾಖೆಯ ಅಧಿಕಾರಿಗಳು ಇಂತಹ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು. ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ ತೆರವುಗೊಳಿಸಲು ಸೂಚಿಸಿದರು. ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್ ಅವರು ಆನೆ ತುಳಿತಕ್ಕೆ ಬಲಿ ಆಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಹಾಸನ ಡಿಎಫ್‌ಒಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ನಿರ್ದೇಶನ ನೀಡಿದರು.

    ಆನೆಗಳು ಜನವಸತಿಗಳತ್ತ ಬರುವುದನ್ನು ತಡೆಯಲು ರೈಲ್ವೆ ಹಳಿಯ ತಡೆಗೋಡೆ ನಿರ್ಮಿಸಲು ಈ ವರ್ಷ 100 ಕೋಟಿ ರೂ. ಒದಗಿಸಲಾಗಿದೆ. ಇದರಲ್ಲಿ ಹಳೆ ಬಾಕಿ 54 ಕೋಟಿ ರೂ. ಪಾವತಿಸಬೇಕಾಗಿದೆ. ಉಳಿದ ಮೊತ್ತದಲ್ಲಿ ಕೇವಲ 50 ಕಿ.ಮೀ. ತಡೆಗೋಡೆ ನಿರ್ಮಿಸಲು ಸಾಧ್ಯವೆಂದ ಸಚಿವ ಈಶ್ವರ ಖಂಡ್ರೆ, ಹೆಚ್ಚುವರಿ ಅನುದಾನ ಒದಗಿಸಲು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಳೆ ಬಾಕಿ 54 ಕೋಟಿ ರೂ. ಜೊತೆಗೆ 100 ಕೋಟಿ ರೂ.ಗಳನ್ನು ಈ ವರ್ಷ ವೆಚ್ಚ ಮಾಡುವಂತೆ ತಿಳಿಸಿದರು. ಇದನ್ನೂ ಓದಿ: ‘INDIA’ ಬಗ್ಗೆ ಭಯ ಬಂದು ಹೆಸರು ಬದಲಾವಣೆ: ಡಿಕೆಶಿ ಲೇವಡಿ

    ಸಭೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎನ್ ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಭಾರತ್‌ ಹೆಸರು ಅವಶ್ಯಕತೆ ಇಲ್ಲ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವನ್ಯಜೀವಿಗಳ ಅಂಗಾಂಗಳ ಅಕ್ರಮ ಸಾಗಾಟ ಆರೋಪಿಗಳ ಬಂಧನ

    ವನ್ಯಜೀವಿಗಳ ಅಂಗಾಂಗಳ ಅಕ್ರಮ ಸಾಗಾಟ ಆರೋಪಿಗಳ ಬಂಧನ

    ವಿಜಯಪುರ: ಅಕ್ರಮವಾಗಿ ವನ್ಯಜೀವಿಗಳ (Wild Animals) ಅಂಗಾಂಗಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಂದಗಿ (Sindagi) ತಾಲ್ಲೂಕಿನ ಬಾಗಲೂರ (Bagalur) ಬಳಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಮಹಾರಾಷ್ಟ್ರದ (Maharashtra) ಅಸವಲದಾರಾ ಗ್ರಾಮದ ಪವನ್ ಹಾಗೂ ಭೋಸಲೆ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಕೃಷ್ಣಮೃಗದ ಕೊಂಬು, ತಲೆಬುರುಡೆ, ಚರ್ಮಗಳು ಹಾಗೂ ವಿವಿಧ ಜಾತಿಯ ವನ್ಯ ಪ್ರಾಣಿಗಳ ಅಂಗಾಂಗಗಳನ್ನು ವಶ ಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ಔಷಧಗಳ ಹಾವಳಿ- 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

    ಆರೋಪಿಗಳ ಬಳಿ ಏನೆಲ್ಲ ಇತ್ತು?
    807 ಉಡದ ಶಿಶ್ನಗಳು, 116 ಇಂದ್ರಜಾಲಗಳು, 2 ಕಾಡು ಬೆಕ್ಕಿನ ಪಾದಗಳು, 2 ಕಾಡು ಬೆಕ್ಕು ಉಗುರುಗಳು, 3 ಕರಡಿಯ ಉಗುರುಗಳು, 28 ನೀರು ಪಕ್ಷಿಗಳ ಕಾಲುಗಳು, 2 ಉಡದ ಕಾಲುಗಳು, 73 ಗೂಬೆಯ ಪುಕ್ಕಗಳು, 4 ಕರಡಿಯ ಹಲ್ಲುಗಳು, 32 ಮುಂಗಸಿಯ ಕಾಲುಗಳು, 7 ಮುಂಗುಸಿಯ ದವಡೆಗಳು, 16 ಮುಂಗುಸಿಯ ಚರ್ಮದಿಂದ ಮಾಡಿದ ಉಂಡೆಗಳು, 26 ಕಾಡು ಹಂದಿಯ ಹಲ್ಲುಗಳು, 3 ಅಪರಿಚಿತ ಕಾಡು ಪ್ರಾಣಿಯ ಉಗುರುಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಸಿಂದಗಿ ಸಿಐಡಿ ಅರಣ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್‌ – ಗ್ಯಾಂಗ್‌ ಸ್ಟಾರ್‌ ಅತಿಕ್‌ ಪುತ್ರ ಎನ್‌ಕೌಂಟರ್‌ಗೆ ಬಲಿ

  • ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ

    ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ

    ಬೆಂಗಳೂರು: ಆನೆ, ಕಾಡು ಪ್ರಾಣಿಗಳಿಂದ ಮೃತರಾದವರಿಗೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು. ಹಾಸನದಲ್ಲಿ (Hassan) ಆನೆ ಕಾರಿಡಾರ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಹಾಸನ ಜೆಡಿಎಸ್ ಶಾಸಕರು (JDS) ಇಂದು ಪ್ರತಿಭಟನೆ ನಡೆಸಿದರು.

    ವಿಧಾನಸೌಧದ (Vidhan Soudha) ಗಾಂಧಿ ಪ್ರತಿಮೆ ಮುಂದೆ ಶಾಸಕರಾದ ಎ.ಟಿ. ರಾಮಸ್ವಾಮಿ (A.T.Ramaswamy), ಹೆಚ್.ಕೆ. ಕುಮಾರಸ್ವಾಮಿ (H.K.Kumaraswamy), ಲಿಂಗೇಶ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಟಿ ರಾಮಸ್ವಾಮಿ, ಆನೆ, ಕಾಡು ಪ್ರಾಣಿ ಹಾವಳಿಯಿಂದ ಬೆಳೆ ಹಾನಿಯಾಗಿದೆ. ಆನೆ ದಾಳಿಯಿಂದ ಜನರು ಸತ್ತಿದ್ದಾರೆ. ಸದನದಲ್ಲಿ ಸಿಎಂ ಅವರು ಕಾಡು ಪ್ರಾಣಿ ದಾಳಿಯಿಂದ ಬೆಳೆ ಹಾನಿಗೆ ಪರಿಹಾರ ಡಬಲ್ ಮಾಡೋದಾಗಿ ಹೇಳಿದ್ರು. ಆದರೆ ಪರಿಹಾರ ಡಬಲ್ ಮಾಡಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಆನೆಗಳ ಹಾವಳಿ ತಡಗೆ ಕಾರಿಡಾರ್ ನಿರ್ಮಾಣ ಮಾಡಬೇಕು. ಆನೆಗಳ ಸಂಖ್ಯೆ ಕಡಿಮೆ ಮಾಡಲು ಕ್ರಮ ಆಗಬೇಕು. ಚಿರತೆಗಳು, ಕೋತಿಗಳು, ಕಾಡು ಹಂದಿಗಳಿಂದ ಬೆಳೆ ನಾಶ ಆಗ್ತಿದೆ. ಇದಕ್ಕೆ ‌ಪರಿಹಾರ ಕೊಡಬೇಕು. ಸರ್ಕಾರ ಕೊಟ್ಟ ಮಾತಿನಂತೆ ಪರಿಹಾರ ನೀಡಬೇಕು. ಸಿಎಂ ಕೂಡಲೇ ಕೊಟ್ಟ ಮಾತು ಈಡೇರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶಾಸಕ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ- ಹಣ ಕೇಳಿದ ಕಿಡಿಗೇಡಿಗಳು

    ಶಾಸಕ ಹೆಚ್.ಕೆ. ಕುಮಾರಸ್ವಾಮಿ ಮಾತನಾಡಿ, ಕಾಡು ಪ್ರಾಣಿಗಳಿಂದ ದೊಡ್ಡ ಸಮಸ್ಯೆ ಆಗ್ತಿದೆ. ಕೂಡಲೇ ವೈಜ್ಞಾನಿಕವಾಗಿ ಕಾಡು ಪ್ರಾಣಿ ಕಡಿಮೆ ಮಾಡುವ ಕೆಲಸ ಮಾಡಬೇಕು. ಜನರು ನಮ್ಮ ಮೇಲೆ ಕೋಪ ಮಾಡಿಕೊಳ್ತಿದ್ದಾರೆ. ಸಿಎಂ ಪರಿಹಾರ ಹೆಚ್ಚಳ ಮಾಡೋದಾಗಿ ಹೇಳಿದ್ದಾರೆ. ಇನ್ನು ಆದೇಶ ಆಗಬೇಕು. ಕೂಡಲೇ ಆದೇಶ ಆಗಬೇಕು. ಕೂಡಲೇ ಆನೆ ಕಾರಿಡಾರ್ ನಿರ್ಮಾಣ ಮಾಡಬೇಕು. ಕಾಡು ಪ್ರಾಣಿ ದಾಳಿಯಿಂದ ಮೃತರಾದವರಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಆಗ್ರಹಿಸಿದರು.

    ಶಾಸಕ ಲಿಂಗೇಶ್ ಮಾತನಾಡಿ, ಕಾಡು ಪ್ರಾಣಿಗಳಿಂದ ಮಕ್ಕಳನ್ನ ಕಳೆದುಕೊಂಡವರಿಗೆ ನೋವು ಗೊತ್ತಿರುತ್ತೆ. ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲವಾ ಅಂತ ಪ್ರಶ್ನೆ ಮಾಡಿದರು. ಕೋಮು ದಾಳಿಯಿಂದ ಸತ್ತವರಿಗೆ 25 ಲಕ್ಷ ರೂ. ಕೊಡ್ತೀರಾ. ಹಾಗೆಯೇ ಆನೆ ದಾಳಿಯಿಂದ ಮೃತರಾದರಿಗೆ 25 ಲಕ್ಷ ಕೊಡಬೇಕು. ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

  • ‘ಭಕ್ತರೇ ಪ್ರಾಣಿಗಳನ್ನ ರಕ್ಷಿಸಿ’- ವನ್ಯಜೀವಿಗಳ ದೇಹ ಸೇರುತ್ತಿದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ತ್ಯಾಜ್ಯ

    ‘ಭಕ್ತರೇ ಪ್ರಾಣಿಗಳನ್ನ ರಕ್ಷಿಸಿ’- ವನ್ಯಜೀವಿಗಳ ದೇಹ ಸೇರುತ್ತಿದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ತ್ಯಾಜ್ಯ

    ಮಂಗಳೂರು: ಪಾಪವನ್ನು ಕಳೆದು ವರವನ್ನು ಕರುಣಿಸಲು ನಾಗನ ರೂಪದಲ್ಲಿ ನಿಂತ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಷಷ್ಠಿ, ಚಂಪಾಷಷ್ಠಿಯಂತಹ ವಿಶೇಷ ದಿನ, ರಜಾ ದಿನಗಳಲ್ಲಿ ಲಕ್ಷಾಂತರ ಭಕ್ತರು, ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತರು ತಾವು ತಂದ ಕಸವನ್ನು ಇಲ್ಲಿ ಎಸೆದು ಹೋಗುತ್ತಾರೆ. ಈ ಕಸ ನೇರವಾಗಿ ಸೇರುವುದು ಇಲ್ಲಿಂದ ಸ್ವಲ್ಪ ದೂರ ಇರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ. ಹೌದು ಇಲ್ಲೊಂದು ತ್ಯಾಜ್ಯ ವಿಲೇವಾಗಿ ಘಟಕವಿದೆ. ಈ ಘಟಕದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡಿ ಮರು ಬಳಕೆಯನ್ನು ಮಾಡಲಾಗುತ್ತೆ. ಆದರೆ ಈ ತ್ಯಾಜ್ಯ ವಿಲೇವಾರಿ ಘಟಕ ಇರೋದು ಅರಣ್ಯದ ಪಕ್ಕದಲ್ಲಿ. ಅರಣ್ಯದ ಸ್ವಲ್ಪ ದೂರದಲ್ಲಿ ಬಿಸಿಲೆ ರಕ್ಷಿತಾರಣ್ಯವಿರೋದ್ರಿಂದ ವನ್ಯಜೀವಿಗಳು ಇಲ್ಲಿಗೆ ನಿತ್ಯ ಆಗಮಿಸುತ್ತವೆ. ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಇಡಲ್ಪಟ್ಟಿರುವ ಕಸವನ್ನು ತಿನ್ನುತ್ತವೆ. ಕಡವೆಗಳು, ಜಿಂಕೆಗಳು, ಮಂಗಗಳು ಹೀಗೆ ವಿವಿಧ ವನ್ಯಜೀವಿಗಳು ಇಲ್ಲಿ ಕಸವನ್ನು ತಿನ್ನವ ಪರಿಸ್ಥಿತಿ ಬಂದಿದೆ.

    ಸುಬ್ರಹ್ಮಣ್ಯ ಪಂಚಾಯತ್‍ನಿಂದ ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಿಸಲ್ಪಡುತ್ತದೆ. ಪಂಚಾಯತ್‍ನವರು ಕೂಡ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ. ಈ ವಿಚಾರ ಗೊತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲದೆ ಅರಣ್ಯಕ್ಕೆ ಫೆನ್ಸಿಂಗ್ ಹಾಕಿದರೆ ವನ್ಯ ಪ್ರಾಣಿಗಳು ಇತ್ತ ಬರಲಾಗದೇ ಕಸವನ್ನು ತಿನ್ನುವುದು ತಪ್ಪಿದಂತಾಗುತ್ತದೆ. ತ್ಯಾಜ್ಯ ಘಟಕಕ್ಕೆ ಒಂದು ಫೆನ್ಸಿಂಗ್ ಹಾಕಿದ್ದರೂ ಸಮಸ್ಯೆ ಬಗೆ ಹರಿಯುತ್ತದೆ ಆ ಕೆಲಸವನ್ನು ಕೂಡ ಪಂಚಾಯತ್ ಅಧಿಕಾರಿಗಳು ಮಾಡಿಲ್ಲ.

    ಈ ಕುರಿತು ಅರಣ್ಯಾಧಿಕಾರಿಗಳನ್ನು ಕೇಳಿದರೆ, ಈ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಅಲ್ಲಿನ ಸ್ಥಳೀಯ ಸಂಸ್ಥೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲದೇ ಆ ಜಾಗ ವೈಲ್ಡ್ ಲೈಫ್ ಫಾರೆಸ್ಟ್ ನ ಬದಿಯಲ್ಲಿದ್ದು, ಅದು ಅರಣ್ಯ ಜಾಗ ಹೌದಾ ಅಲ್ಲವಾ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದೆ. ಮೊದಲಿಗೆ ಅಲ್ಲಿಗೆ ಭೇಟಿ ನೀಡಲು ವಲಯ ಅರಣ್ಯಾಧಿಕಾರಿಯವರಿಗೆ ಸೂಚಿಸುತ್ತೇನೆ ಎನ್ನುತ್ತಾರೆ.

    ಎಲ್ಲಾ ವಿಚಾರಗಳು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳ ಗಮನದಲ್ಲಿ ಇದ್ದರೇ ಕೂಡ ಉತ್ತಮ. ಯಾಕಂದ್ರೆ ಅವರು ತರುವ ಪ್ಲಾಸ್ಟಿಕ್ ಮತ್ತಿತರ ಕಸವನ್ನು ಎಲ್ಲಂದರಲ್ಲಿ ಎಸೆದರೂ ಅದು ವನ್ಯಜೀವಿಗಳ ಹೊಟ್ಟೆ ಸೇರಲಿದೆ. ಆದ್ದರಿಂದ ಆದಷ್ಟು ಕಸವನ್ನು ಹೊರ ಹಾಕದಂತೆ ಎಚ್ಚರ ವಹಿಸಿದರೆ ಒಳ್ಳೆಯದು ಎಂದು ಪರಿಸರ ಪ್ರೇಮಿಗಳ ಮನವಿ ಮಾಡಿಕೊಂಡಿದ್ದಾರೆ.

  • ಬೆಂಗ್ಳೂರಿನ ಮೇಲ್ಸೇತುವೆ ಕೆಳಗೆ ಪ್ರತ್ಯಕ್ಷವಾದ ಕಾಡಾನೆ, ಹುಲಿರಾಯ

    ಬೆಂಗ್ಳೂರಿನ ಮೇಲ್ಸೇತುವೆ ಕೆಳಗೆ ಪ್ರತ್ಯಕ್ಷವಾದ ಕಾಡಾನೆ, ಹುಲಿರಾಯ

    ಬೆಂಗಳೂರು: ಹುಲಿರಾಯನ ಗಂಭೀರ ನೋಟ, ಮರಿ ಆನೆಯೊಂದಿಗೆ ದೃಢವಾಗಿ ನಿಂತಿರುವ ಬೃಹತ್ ತಾಯಿ ಆನೆ, ಪೊದೆಯಿಂದ ಹೊರಬರುತ್ತಿರುವ ಹುಲಿ ಇದೆಲ್ಲಾ ಬೆಂಗಳೂರಲ್ಲೇ ನೀವು ಕಾಣಬಹುದು.

    ಹೌದು. ಸಿಲಿಕಾನ್ ಸಿಟಿಯಲ್ಲಿ ರಾಜ್ಯ ವನ್ಯ ಸಂಪತ್ತಿನ ಅನಾವರಣವಾಗಿದೆ. ರಾಜ್ಯದ ಹೆಮ್ಮೆಯ ವನ್ಯಜೀವಿಗಳಾದ ಹುಲಿ, ಆನೆಯ ಬೃಹತ್ ಪ್ರತಿಕೃತಿಗಳನ್ನು ತಯಾರಿಸಿ, ನಗರದ ಮೇಲ್ಸೇತುವೆಯ ಅಡಿಭಾಗವನ್ನು ಸುಂದರವಾದ ವನ್ಯಜೀವಿ ತಾಣವಾಗಿ ಬದಲಾಯಿಸಲಾಗಿದೆ. ಹೆಬ್ಬಾಳ ರಿಂಗ್ ರಸ್ತೆಯಲ್ಲಿ ಬರುವ ವೀರನಪಾಳ್ಯ ಸರ್ಕಲ್‍ನಲ್ಲಿ ಸುಮಾರು ಐದು ಸಾವಿರ ಕೆ.ಜಿ ಕಬ್ಬಿಣ ಬಳಸಿ ಈ ಪ್ರಾಣಿ ಪ್ರತಿಕೃತಿಗಳನ್ನು ಮಾಡಲಾಗಿದೆ.

    ವಾಹನ ಸವಾರರಿಗೆ ಚಲಿಸುವ ರೀತಿಯಲ್ಲಿ ಕಾಣುವಂತೆ, ಬಳಿಕ ಮಾಯವಾಗುವಂತೆ ಭಾಸವಾಗುವ ರೀತಿಯ ವಿಶಿಷ್ಟ ವಿನ್ಯಾಸದಲ್ಲಿ ಪ್ರತಿಕೃತಿಗಳನ್ನು ನಿರ್ಮಾಣ ಮಾಡಲಾಗಿದೆ. ಫ್ಲೈಓವರ್ ಮೇಲ್ಭಾಗವನ್ನು ಸಹ ಕಂದು ಬಿಳಿ ಬಣ್ಣದ ಡಿಸೈನ್ ಮಾಡಲಾಗಿದೆ. ವೈಲ್ಡ್ ಕರ್ನಾಟಕ ಸಿನಿಮಾದಿಂದ ಪ್ರೇರೇಪಿತರಾಗಿ, ಎಲ್ ಆಂಡ್ ಟಿ ಟೆಕ್ನಾಲಜಿ ಸಂಸ್ಥೆ, ಇಂಡಿಯಾ ರೈಸಿಂಗ್ ಟ್ರಸ್ಟ್, ಅಗ್ಲಿ ಇಂಡಿಯನ್ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ಈ ವೃತ್ತವನ್ನು ಅಭಿವೃದ್ಧಿ ಮಾಡಲಾಗಿದೆ.

    ಎಲ್ಲಾ ಮೇಲ್ಸೇತುವೆಯಂತೆ ಧೂಳು, ಕಸದ ರಾಶಿಯಿಂದ ತುಂಬಿ ಹೋಗಿದ್ದ ಈ ರಸ್ತೆಯನ್ನು ಸ್ವಚ್ಛ ಮಾಡಿ, ಬಣ್ಣ ಮಾಡಲಾಗಿದೆ. ಪ್ಲಾಸ್ಟಿಕ್ ಮರುಬಳಕೆಯಿಂದ ಮಾಡಿದ ಕುರ್ಚಿಗಳು, ಕಾರ್ಬನ್ ಸ್ಟೋನ್‍ಗಳನ್ನು ಬಳಸಿ ಪ್ರಯಾಣಿಕರು, ಪಾದಾಚಾರಿಗಳು ಕುಳಿತು ಮಾತನಾಡಲು, ವಿಶ್ರಾಂತಿ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ರಾಜ್ಯದ ವನ್ಯ ಸಂಪತ್ತಿನ ವಿವರಣೆಯನ್ನೂ ಅಲ್ಲಲ್ಲಿ ಬರೆಯಲಾಗಿದೆ. ಒಟ್ಟು 17 ತಿಂಗಳಲ್ಲಿ ಈ ಪ್ರಾಜೆಕ್ಟ್ ತಯಾರಿಸಲಾಗಿದ್ದು, ಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು.

    ಇದೊಂದೆ ಅಲ್ಲ ನಗರದ 36 ಮೇಲ್ಸೆತುವೆಗಳ ಅಡಿಭಾಗವನ್ನು ಈ ರೀತಿಯಲ್ಲಿ ಅಭಿವೃದ್ಧಿ ಮಾಡಲು ಪಾಲಿಕೆ ಹಾಗೂ ಕಾರ್ಪೋರೇಟ್ ಸಂಸ್ಥೆಗಳು ಚಿಂತನೆ ನಡೆಸಿವೆ. ಸದ್ಯ ಅದ್ಧೂರಿಯಾಗಿ ಕಂಗೊಳಿಸ್ತಿರೋ ವೀರನಪಾಳ್ಯ ವೃತ್ತ ಪ್ರಯಾಣಿಕರನ್ನು ತಿರುಗಿ ನೋಡುವಂತೆ ಕಣ್ಮನ ಸೆಳೆಯುತ್ತಿದೆ.

  • ಒಂದು ಜಿಲ್ಲೆ ಹಲವು ಜಗತ್ತಿಗೆ ಸಾಕ್ಷಿಯಾದ ಕಾಫಿನಾಡು

    ಒಂದು ಜಿಲ್ಲೆ ಹಲವು ಜಗತ್ತಿಗೆ ಸಾಕ್ಷಿಯಾದ ಕಾಫಿನಾಡು

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಡಂಚಿನ ಗ್ರಾಮ ಬಿದಿರುತಳದಲ್ಲಿ ಕಣ್ಣು ಹಾಯಿಸದಲೆಲ್ಲಾ ಕಾಡು ಪ್ರಾಣಿಗಳ ಹಿಂಡು ಗೋಚರವಾಗುತ್ತಿದೆ.

    ಗ್ರಾಮದ ಸತೀಶ್ ಎಂಬವರು ತಮ್ಮ ತೋಟಕ್ಕೆ ಹೋಗುವಾಗ ದಾರಿಯುದ್ದಕ್ಕೂ ಪ್ರಾಣಿಗಳು ಕಾಣಿಸಿಕೊಂಡಿದೆ. ಈ ಪ್ರಾಣಿಗಳನ್ನು ನೋಡಿದ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಈ ಅಪರೂಪದ ದೃಶ್ಯಕ್ಕೆ ಸಾಕ್ಷಿಯಾದ ಕಾಫಿನಾಡು ಒಂದು ಜಿಲ್ಲೆ ಹಲವು ಜಗತ್ತು ಎನ್ನುವ ಮಾತಿಗೆ ಪೂರಕವಾಗಿದೆ.

    ಒಂದೆಡೆ ನರಿ, ಮತ್ತೊಂದೆಡೆ ಆನೆ, ಮಗದೊಂದು ಕಡೆ ಜಿಂಕೆ, ಇನ್ನೊಂದೆಡೆ ಕಡವೆಗಳ ಗುಂಪು ಕಾಣಿಸಿಕೊಂಡಿದೆ. ಕಾಡು ಪ್ರಾಣಿಗಳನ್ನು ನೋಡಿ ಸ್ಥಳೀಯರಿಗೆ ಒಂದೆಡೆ ಖುಷಿ ಆದರೆ ಹಾಗೂ ಮತ್ತೊಂದೆಡೆ ಆತಂಕ ಶುರುವಾಗಿದೆ. ಗ್ರಾಮದಂಚಿನಲ್ಲಿ ಹೀಗೆ ಪ್ರಾಣಿಗಳ ಗುಂಪನ್ನು ಕಂಡ ಸ್ಥಳೀಯರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

    ಸದ್ಯ ಸ್ಥಳೀಯರು ಸ್ಥಳಾಂತರ ಮಾಡಿ ಎಂದು ಹೇಳುತ್ತಿದ್ದಾರೆ. ಈಗಾಗಲೇ ಬಿದಿರುತಳ ಗ್ರಾಮದ ಸ್ಥಳಾಂತರದ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿ ಇದೆ. ಸ್ಥಳೀಯರು ಕೂಡಲೇ ನಮ್ಮನ್ನು ಸ್ಥಳಾಂತರ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

  • ಕೆಲವೇ ದಿನಗಳಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಸಂಚಾರ ಸ್ಥಗಿತ!

    ಕೆಲವೇ ದಿನಗಳಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಸಂಚಾರ ಸ್ಥಗಿತ!

    ಚಾಮರಾಜನಗರ: ರಾಜ್ಯದಲ್ಲಿನ ಅತಿ ಹೆಚ್ಚು ಆದಾಯ ತಂದು ಕೊಡುವ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಸಂಚಾರವನ್ನು ಕೆಲವೇ ದಿನಗಳಲ್ಲಿ ಸ್ಥಗಿತಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.

    ಹುಲಿ ಸಂರಕ್ಷಿತ ಪ್ರದೇಶ, ಕಾವೇರಿ ವನ್ಯಜೀವಿಧಾಮದ ವ್ಯಾಪ್ತಿಗೆ ಮಲೆಮಹದೇಶ್ವರ ಬೆಟ್ಟದ ರಸ್ತೆ ಬರುತ್ತದೆ. ಈ ಭಾಗದಲ್ಲಿ ಅನೇಕ ಪ್ರಾಣಿ ಸಂಕುಲಗಳು ಇವೆ. ರಾತ್ರಿ ವಾಹನಗಳ ರಸ್ತೆಯಲ್ಲಿ ಸಂಚರಿಸುವ ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವ ಪ್ರಕರಣಗಳು ಹೆಚ್ಚು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರ ಮಾದರಿಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಸಂಚಾರ ಬಂದ್ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

    ಈ ವಿಚಾರದ ಬಗ್ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾತ್ರಿ ಸಂಚಾರ ಬಂದ್ ಕುರಿತು ಆದೇಶ ಪ್ರತಿ ಹೊರಡಿಸಿದ್ದಾರೆ. ಈ ಪ್ರತಿ ಇದೀಗ ಚಾಮರಾಜನಗರ ಜಿಲ್ಲಾಧಿಕಾರಿಗೆ ತಲುಪಿದ್ದು, ಕೆಲವೇ ದಿನಗಳಲ್ಲಿ ಆದೇಶ ಜಾರಿಯಾಗುವ ಸಾಧ್ಯತೆಯಿದೆ. ಬೆಟ್ಟದಲ್ಲಿ ಜಾತ್ರೆ ಕಾರ್ಯಕ್ರಮಗಳು ರಾತ್ರಿ ವೇಳೆ ಇದ್ದರೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ.

  • ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

    ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

    ಕೋಲಾರ: ಅದು ಬರಕ್ಕೆ ತವರು ಜಿಲ್ಲೆ, ಬೇಸಿಗೆ ಬಂದ್ರೆ ಸಾಕು ಬಿಸಿ ತಾಳಲಾರದೆ ಕಾಡಿನಿಂದ ವನ್ಯ ಜೀವಿಗಳು ಅನ್ನ ನೀರಿಗಾಗಿ ನಾಡಿಗೆ ಬಂದು ಅಪಘಾತವಾಗಿ, ನಾಯಿಗಳ ದಾಳಿಗೆ ತುತ್ತಾಗುವುದು, ಇಲ್ಲ ಕಾಡಿನಲ್ಲೇ ಪ್ರಾಣ ಬಿಡುತ್ತಿವೆ. ಇಂತಹ ಸನ್ನಿವೇಶದಲ್ಲಿ ವನ್ಯಜೀವಿಗಳಿಗೆ ನೀರು ಆಹಾರದ ವ್ಯವಸ್ಥೆ ಮಾಡಿ ಮಾನವೀಯತೆ ತೋರಿಸಬೇಕಿದೆ.

    ಕಾಡಿನಲ್ಲಿ ಸ್ವಚ್ಚಂದವಾಗಿ ಕುಣಿಯುತ್ತಿರುವ ಕಾಡು ಪ್ರಾಣಿಗಳು ಈಗ ಆಹಾರ ಬಯಸಿ ನಾಡಿಗೆ ಬಂದು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿವೆ. ಮಳೆ ಅಭಾವದಿಂದ ಬರಗಾಲಕ್ಕೆ ತುತ್ತಾಗಿರುವ ಕೋಲಾರ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಶುರವಾಗಿದೆ. ಅದು ಕೇವಲ ಜನ-ಜಾನುವಾರುಗಳಿಗೆ ಮಾತ್ರವಲ್ಲದೇ ಕಾಡಿನಲ್ಲಿರುವ ಕಾಡು ಪ್ರಾಣಿಗಳು ಕೂಡ ನೀರಿಲ್ಲದೆ ಸಾಯುವ ಪರಿಸ್ಥಿತಿ ಬಂದಿದೆ.

    ಕಾಡಿನಲ್ಲಿರುವ ಕೆರೆ ಕುಂಟೆಗಳು ಬತ್ತಿ ಹೋಗಿದ್ದು, ಪ್ರಾಣಿಗಳು ನೀರಿಗಾಗಿ ಊರುಗಳತ್ತ ಬರುತ್ತಿದ್ದು, ಇದರಿಂದ ಅನೇಕ ಜಿಂಕೆ, ನವಿಲು, ಹಾವು ಮುಂತಾದ ಕಾಡು ಪ್ರಾಣಿಗಳು ನಾಯಿಗಳಿಗೆ, ವಾಹನಗಳಿಗೆ ಸಿಕ್ಕಿ ಪ್ರಾಣವನ್ನ ಕಳೆದುಕೊಳ್ಳುತ್ತಿವೆ. ಕೋಲಾರ ಜಿಲ್ಲೆಯಲ್ಲಿ ಸುಮಾರು 3 ರಿಂದ 4 ಸಾವಿರ ಕೃಷ್ಣಮೃಗಗಳಿದ್ದು, ನೀರಿಗಾಗಿ ನಾಡಿನತ್ತ ಬಂದು ಪ್ರಾಣ ಕಳೆದುಕೊಳ್ಳುತ್ತಿವೆ.

    ಕಾಡು ಪ್ರಾಣಿಗಳಿಗೆ ಬೇಕಿದೆ ನೀರು: ಬರದಿಂದ ಪರಿತಪ್ಪಿಸುತ್ತಿರುವ ಕಾಡಿನ ಪ್ರಾಣಿಗಳಿಗೆ ಬೇಸಿಗೆ ಮುಗಿಯವವರೆಗೂ ನೀರು ಒದಗಿಸುವ ಕೆಲಸ ಆಗಬೇಕಾಗಿದೆ. ಇದರಿಂದ ಕಾಡಿನ ಪ್ರಾಣಿ ಪಕ್ಷಿಗಳು, ನಾಡಿನತ್ತ ಮುಖ ಮಾಡುವುದು ಕಡಿಮೆಯಾಗುತ್ತದೆ. ಇಲ್ಲದಿದ್ದರೆ ನೀರನ್ನ ಹುಡುಕಿಕೊಂಡು ಬಂದು ನಾಯಿ ಅಥವಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವುದು ನಿಶ್ಚಿತ. ಅರಣ್ಯ ಸಂಪತ್ತನ್ನ ನಾಶ ಮಾಡಿ ಮಳೆಯಿಲ್ಲದೆ ಬರಗಾಲ ಅವರಿಸಿರುವ ಕೋಲಾರ ಜಿಲ್ಲೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಸಂಘ ಸಂಸ್ಥೆಗಳು ಮಾತ್ರವಲ್ಲ, ಪ್ರತಿಯೊಬ್ಬರು ತಮ್ಮ ಮನೆ ಹಾಗು ಛಾವಣಿ ಮೇಲೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ.

    ಒಟ್ನಲ್ಲಿ ಕೋಲಾರ ಜಿಲ್ಲೆಯಲ್ಲಿ ಜನ ಜಾನುವಾರುಗಳು ಮಾತ್ರವಲ್ಲದೆ ಕಾಡು ಪ್ರಾಣಿಗಳು ನೀರಿಗಾಗಿ ಪರಿತಪಿಸುತ್ತಿದ್ದು, ಇನ್ನಾದ್ರು ವನ್ಯ ಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ, ದಾನಿಗಳು ನೀರನ್ನ ಒದಗಿಸುವ ಜೊತೆಗೆ ಮೂಕ ಪ್ರಾಣಿಗಳ ಜೀವ ಉಳಿಸುವ ಕೆಲಸ ಮಾಡಿ ಮಾನವೀಯತೆ ಮರೆಯಬೇಕಿದೆ.

    https://www.youtube.com/watch?v=L63TZVBnyxA