Tag: Wild Fire

  • ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಬಳ್ಳಾರಿ: ಬಿಸಿಲಿನ ಝಳಕ್ಕೆ ಕಾದು ಕೆಂಡವಾಗಿದ್ದ ತುಂಗಭದ್ರಾ ಡ್ಯಾಂ (Tungabhadra Dam) ಬಳಿಯ ಗುಡ್ಡದಲ್ಲಿ ಬುಧವಾರ ಸಂಜೆ ಬೆಂಕಿ (Fire) ಕಾಣಿಸಿಕೊಂಡಿದೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ಇದನ್ನೂ ಓದಿ: ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿರುವ ಅರಣ್ಯಾಧಿಕಾರಿಗಳು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ ಬಿಡಿ, ಸಿಗರೇಟ್ ಕಿಡಿ ಬಿದ್ದಿರಬಹುದೆಂದು ಶಂಕಿಸಿದ್ದಾರೆ. ಇದನ್ನೂ ಓದಿ: Amur Falcon | ಸೈಬೀರಿಯಾ To ಆಫ್ರಿಕಾ 22 ಸಾವಿರ ಕಿ.ಮೀ ಪ್ರಯಾಣ – ವಿಶೇಷ ಆಹಾರಕ್ಕೆ ಭಾರತದಲ್ಲಿ ನಿಲುಗಡೆ!

  • ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ನಾಶ, ಸಂಕಷ್ಟದಲ್ಲಿ ಪ್ರಾಣಿ ಸಂಕುಲ

    ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ನಾಶ, ಸಂಕಷ್ಟದಲ್ಲಿ ಪ್ರಾಣಿ ಸಂಕುಲ

    ಚಿಕ್ಕಮಗಳೂರು: ಮುಗಿಲೆತ್ತರದ ಬೆಟ್ಟ-ಗುಡ್ಡಗಳಿಂದ ಕೂಡಿರುವ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು (Wild Fire) ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು (ನೀರನ್ನ ಹಿಡಿದಿಟ್ಟು ವರ್ಷಪೂರ್ತಿ ನೀರು ಹರಿಸುವ ಸಾಮರ್ಥ್ಯದ ಕಾಡು) ಸುಟ್ಟು ಕರಕಲಾಗಿದೆ.

    ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಕಳೆದ ವಾರವಷ್ಟೆ ಅದೇ ಚಾರ್ಮಾಡಿ ಘಾಟಿಯ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಕಳೆದ ರಾತ್ರಿ ಮತ್ತೆ ಚಾರ್ಮಾಡಿ ತಪ್ಪಲಿನ ಅರಣ್ಯಕ್ಕೆ ಬೆಂಕಿ ಬಿದ್ದು ಮತ್ತೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಹಣ| ರಾಜ್ಯದ ಹಣಕಾಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತೆ: ಎಸ್‌ಬಿಐ ಎಚ್ಚರಿಕೆ

    ರಸ್ತೆಬದಿ ಇದ್ದ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಏರಿ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್‌ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ತಡವಾಗಿ ಸ್ಥಳಕ್ಕೆ ಬಂದ ಸಿಬ್ಬಂದಿ ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿ ಇದ್ದುದ್ದರಿಂದ ಬೆಂಕಿ ನಂದಿಸಲು ಪರದಾಡಿದರು. ಇದನ್ನೂ ಓದಿ: ಟ್ರಕ್, ಕಾರು ಮುಖಾಮುಖಿ ಡಿಕ್ಕಿ – ನಾಲ್ವರು ಸಾವು, ಇಬ್ಬರು ಗಂಭೀರ

    ಚಾರ್ಮಾಡಿ ಘಾಟ್ ಮುಗಿಲೆತ್ತರದ ಬೆಟ್ಟಗುಡ್ಡಗಳಿಂದ ಕೂಡಿರುವ ಬೃಹತ್ ಕಾಡು. ಸಾವಿರಾರು ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನ. ಅಪರೂಪದ ಸಸ್ಯ ಸಂಪತ್ತಿನ ವನರಾಶಿ. ಇಲ್ಲಿನ ಎತ್ತರದ ಪ್ರದೇಶದ ಕಾಡಿಗೆ ಬೆಂಕಿ ಬಿದ್ದರೆ ಬೆಂಕಿ ನಂದಿಸುವುದು ಕಷ್ಟಸಾಧ್ಯ. ಎತ್ತರದ ಪ್ರದೇಶಕ್ಕೆ ಅಗ್ನಿಶಾಮಕದ ಗಾಡಿ, ಸಿಬ್ಬಂದಿ ಹೋಗೋದು ಕಷ್ಟ. ಅರಣ್ಯ ಅಧಿಕಾರಿಗಳು ಕೈಯಲ್ಲಿ ಸೊಪ್ಪು ಹಿಡಿದೇ ಬೆಂಕಿ ನಂದಿಸಬೇಕು. ಆದರೆ, ಎತ್ತರದ ಪ್ರದೇಶದಲ್ಲಿನ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಕೂಡ ಹೆಚ್ಚಾಗಿತ್ತು. ಹೆಚ್ಚಾಗುತ್ತಿತ್ತು. ಆದರೆ, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಹೋರಾಟದಿಂದ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?

  • ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ನಾಶ

    ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ನಾಶ

    ಚಿಕ್ಕಮಗಳೂರು: ಚಾರ್ಮಾಡಿ ಘಾಟ್ (Charmadi Ghat) ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು (Wild Fire) ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.

    ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದಿರುತಳ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಪ್ರಾಣಿ ಸಂಕುಲ ದಿಕ್ಕೆಟ್ಟು ಓಡಿದೆ.

    ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.