Tag: wind

  • ರಾಜ್ಯದ ನಗರಗಳ ಹವಾಮಾನ ವರದಿ: 4-06-2020

    ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 28-21
    ಮೈಸೂರು: 29-21
    ಮಂಗಳೂರು: 29-25
    ಶಿವಮೊಗ್ಗ: 29-22
    ಬೆಳಗಾವಿ: 26-22

    ಮಂಡ್ಯ: 30-22
    ರಾಮನಗರ: 30-22
    ಮಡಿಕೇರಿ: 23-17
    ಹಾಸನ: 27-20
    ಚಾಮರಾಜನಗರ: 30-21

    ಚಿಕ್ಕಬಳ್ಳಾಪುರ: 29-20
    ಕೋಲಾರ: 31-22
    ತುಮಕೂರು: 29-21
    ಉಡುಪಿ: 29-25
    ಕಾರವಾರ: 29-26

    ಚಿಕ್ಕಮಗಳೂರು: 26-19
    ದಾವಣಗೆರೆ: 31-23
    ಚಿತ್ರದುರ್ಗ: 31-22
    ಹಾವೇರಿ: 30-23
    ಬಳ್ಳಾರಿ: 34-24

    ಧಾರವಾಡ: 27-22
    ಗದಗ: 30-23
    ಕೊಪ್ಪಳ: 31-23
    ರಾಯಚೂರು: 35-24
    ಯಾದಗಿರಿ: 34-24

    ವಿಜಯಪುರ: 29-21
    ಬೀದರ್: 22-23
    ಕಲಬುರಗಿ: 33-24
    ಬಾಗಲಕೋಟೆ: 31-23

  • ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ

    ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ

    -ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಮುಂದುವರಿಕೆ

    ಬೆಂಗಳೂರು: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ಆಗಮಿಸಿದೆ.

    ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿಗೂ ತಟ್ಟಿದೆ. ಸಮುದ್ರದಲ್ಲಿ ಗಂಟೆಗೆ 70ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿದೆ. ಮಂಗಳೂರಿನ ಸೋಮೇಶ್ವರ ಉಚ್ಚಿಲ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿದೆ.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ರು. ಜಿಲ್ಲಾಧಿಕಾರಿ, ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕುಂಬುದರ ಬಗ್ಗೆ ಗಮನ ಹರಿಸುತ್ತೇವೆ ಎಂದರು.

    ಎನ್‍ಡಿಆರ್‍ಎಫ್ ತಂಡ: ಮುಂದಿನ 24 ಗಂಟೆ ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಗಾಲದಲ್ಲಿ ಸಂಭವಿಸಬಹುದಾದ ದುರಂತಗಳನ್ನು ನಿರ್ವಹಿಸಲು ಎನ್.ಡಿ.ಆರ್.ಎಫ್ ತಂಡ ಮಂಗಳೂರಿಗೆ ಆಗಮಿಸಿದೆ. ಸುಮಾರು 25 ಸದಸ್ಯರ ಎನ್.ಡಿ.ಆರ್.ಎಫ್ ತಂಡವು ಪಿಲಿಕುಳ ಸ್ಕೌಟ್ಸ್ ಭವನದಲ್ಲಿ ವಾಸ್ತವ್ಯ ಹೂಡಿದೆ. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಸನ್ನಿವೇಶ ಎದುರಿಸಲು ಜಿಲ್ಲಾಡಳಿತಕ್ಕೆ ಎನ್.ಡಿ.ಆರ್.ಎಫ್ ಆಗಮನ ನೆರವಾಗಲಿದೆ.

    ಉಡುಪಿಯಲ್ಲೂ ನಿಸರ್ಗ ಚಂಡಮಾರುತ ಅಬ್ಬರ ಜೋರಾಗಿದೆ. ಗಂಟೆಗೆ 50-60 ಕಿಲೋ ಮೀಟರ್ ವೇಗದ ವಿಪರೀತ ಗಾಳಿ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಅಬ್ಬರ ಹೆಚ್ಚಾಗಿದ್ದು, ಕಾರವಾರದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಕಾರವಾರ ಸೇರಿದಂತೆ ಹಲವು ಭಾಗಗಳಲ್ಲಿ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಐದು ದಿನಗಳ ಕಾಲ ಮೀನುಗಾರಿಕೆಯನ್ನು ಬಂದ್ ಮಾಡು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

    ಕಳೆದ ಬಾರಿಯ ಮಳೆಗಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಭಾಗದಲ್ಲಿ ಸಾಕಷ್ಟು ಪ್ರಾಕೃತಿಕ ಹಾನಿ ಸಂಭವಿಸಿತ್ತು. ಇದೀಗ ಸೈಕ್ಲೋನ್ ಮಳೆಗೆ ತಾಲೂಕಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜನ ಆತಂಕಗೊಂಡಿದ್ದಾರೆ.

  • ರಾಜ್ಯದ ನಗರಗಳ ಹವಾಮಾನ ವರದಿ: 3-06-2020

    ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಮೀನುಗಾರರು ಸಮುದ್ರಕ್ಕೆ ಇಳಿಯದಿರಲು ಸೂಚಿಸಲಾಗಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 28-21
    ಮೈಸೂರು: 29-21
    ಮಂಗಳೂರು: 29-26
    ಶಿವಮೊಗ್ಗ: 27-22
    ಬೆಳಗಾವಿ: 24-22

    ಮಂಡ್ಯ: 29-22
    ರಾಮನಗರ: 29-22
    ಮಡಿಕೇರಿ: 22-17
    ಹಾಸನ: 25-20
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 28-20
    ಕೋಲಾರ: 30-25
    ತುಮಕೂರು: 29-21
    ಉಡುಪಿ: 29-26
    ಕಾರವಾರ: 29-27

    ಚಿಕ್ಕಮಗಳೂರು: 23-19
    ದಾವಣಗೆರೆ: 28-23
    ಚಿತ್ರದುರ್ಗ: 29-22
    ಹಾವೇರಿ: 27-23
    ಬಳ್ಳಾರಿ: 32-24

    ಧಾರವಾಡ: 25-22
    ಗದಗ: 28-23
    ಕೊಪ್ಪಳ: 30-23
    ರಾಯಚೂರು: 32-24
    ಯಾದಗಿರಿ: 32-24

    ವಿಜಯಪುರ: 28-21
    ಬೀದರ್: 29-23
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ನಗರಗಳ ಹವಾಮಾನ ವರದಿ: 2-06-2020

    ರಾಜ್ಯದ ನಗರಗಳ ಹವಾಮಾನ ವರದಿ: 2-06-2020

    ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಮೀನುಗಾರರು ಸಮುದ್ರಕ್ಕೆ ಇಳಿಯದಿರಲು ಸೂಚಿಸಲಾಗಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 28-22
    ಮೈಸೂರು: 29-23
    ಮಂಗಳೂರು: 29-27
    ಶಿವಮೊಗ್ಗ: 28-23
    ಬೆಳಗಾವಿ: 27-23

    ಮಂಡ್ಯ: 30-23
    ರಾಮನಗರ: 29-23
    ಮಡಿಕೇರಿ: 22-19
    ಹಾಸನ: 27-22
    ಚಾಮರಾಜನಗರ: 29-23

    ಚಿಕ್ಕಬಳ್ಳಾಪುರ: 28-21
    ಕೋಲಾರ: 30-23
    ತುಮಕೂರು: 29-22
    ಉಡುಪಿ: 29-27
    ಕಾರವಾರ: 29-28

    ಚಿಕ್ಕಮಗಳೂರು: 25-21
    ದಾವಣಗೆರೆ: 30-24
    ಚಿತ್ರದುರ್ಗ: 31-23
    ಹಾವೇರಿ: 28-24
    ಬಳ್ಳಾರಿ: 33-26

    ಧಾರವಾಡ: 27-23
    ಗದಗ: 29-24
    ಕೊಪ್ಪಳ: 32-26
    ರಾಯಚೂರು: 33-26
    ಯಾದಗಿರಿ: 32-25

    ವಿಜಯಪುರ: 28-22
    ಬೀದರ್: 30-25
    ಕಲಬುರಗಿ: 32-26
    ಬಾಗಲಕೋಟೆ: 31-26

  • ಕೊಡಗಿನಲ್ಲಿ ಭಾರೀ ಮಳೆ- ಹಳದಿ ಅಲರ್ಟ್‌ ಘೋಷಣೆ

    ಕೊಡಗಿನಲ್ಲಿ ಭಾರೀ ಮಳೆ- ಹಳದಿ ಅಲರ್ಟ್‌ ಘೋಷಣೆ

    ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ  ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮೇ 18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

    ಮೇ 18 ರಿಂದ 19ರ ಬೆಳಗ್ಗೆ ವರೆಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 64 ಮಿ.ಮೀ.ನಿಂದ 115 ಮಿ.ಮೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.

    ಜಿಲ್ಲೆಯಾದ್ಯಂತ ರಾತ್ರಿಯಿಡಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಬೆಳಗ್ಗೆಯೂ ಮಳೆ ವೇಗ ಪಡೆದಿದೆ. ಮಧ್ಯರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಭ್ರಹ್ಮಗಿರಿ, ತಲಕಾವೇರಿ, ಭಾಗಮಂಡಲ ಸೇರಿದಂತೆ ವಿರಾಜಪೇಟೆ ವ್ಯಾಪ್ತಿಯಲ್ಲಿ ಜೋರು ಮಳೆ ಆಗುತ್ತಿದೆ. ಜಿಟಿ, ಜಿಟಿ ಸುರಿಯುತ್ತಿರುವ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಣ್ಣ ಪುಲಿಕೋಟು ಗ್ರಾಮದಲ್ಲಿ ಬೃಹದಾಕಾರದ ಮರ ಬಿದ್ದ ಪರಿಣಾಮ ಪಾರ್ವತಿಯವರ ಸ್ನಾನ ಗೃಹ ಮತ್ತು ದನದ ಕೊಟ್ಟಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಭಾಂಗಮಂಡಲ ಪಿಡಿಒ, ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದ ಜೋತೆಗೆ ಚಳಿಯ ವಾತಾವರಣ ಹೆಚ್ಚಾಗಿದೆ.

  • ಮುಟ್ಲುಪಾಡಿಯಲ್ಲಿ ರಣ ಭೀಕರ ಬಿರುಗಾಳಿ- 100 ಮನೆಗಳಿಗೆ ಹಾನಿ

    ಮುಟ್ಲುಪಾಡಿಯಲ್ಲಿ ರಣ ಭೀಕರ ಬಿರುಗಾಳಿ- 100 ಮನೆಗಳಿಗೆ ಹಾನಿ

    ಉಡುಪಿ: ಜಿಲ್ಲೆಯಲ್ಲಿ ಮಳೆ ನೆರೆ ಸೃಷ್ಟಿಸಿದ್ದರೆ, ಬಿರುಗಾಳಿ ಅಟ್ಟಹಾಸ ಮೆರೆದಿದೆ. ಹೆಬ್ರಿ ತಾಲೂಕಿನ ಮುಟ್ಲುಪಾಡಿಯಲ್ಲಿ ಬೀಸಿದ ಬಿರುಗಾಳಿಗೆ 15 ಮನೆಗಳ ಚಾವಣಿ ಹಾರಿದೆ. 100 ಮನೆಗಳಿಗೆ, ತೋಟಕ್ಕೆ ಹಾನಿ ಉಂಟು ಮಾಡಿದೆ.

    ಮುನಿಯಾಲು ಗ್ರಾಮದಲ್ಲಿ ಎದ್ದ ಬಿರುಗಾಳಿ ಮುಟ್ಲುಪಾಡಿ ಗ್ರಾಮದತ್ತ ಬೀಸಿದೆ. ಸುತ್ತಲಿನ ಅಡಿಕೆ, ತೆಂಗಿನ ತೋಟಗಳಿಗೆ ಹಾನಿಯಾಗಿದೆ. 100ಕ್ಕೂ ಹೆಚ್ಚು ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ. ಭತ್ತದ ಗದ್ದೆಗೂ ಬಿರುಗಾಳಿ ಹಾನಿಯುಂಟು ಮಾಡಿದೆ. ಮುಟ್ಲುಪಾಡಿಯ ಘಟನೆಯಲ್ಲೇ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

    ಸ್ಥಳೀಯ ಶಾಸಕ ಸುನೀಲ್ ಕುಮಾರ್ ಬಿರುಗಾಳಿಗೆ ತುತ್ತಾದ ಮನೆಗಳು, ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮನೆ ರಿಪೇರಿಗೆ ಶೀಘ್ರ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸುವುದಾಗಿ ಹೇಳಿದರು.

    ಅಲ್ಲದೆ ಜಿಲ್ಲೆಯ ಚೇರ್ಕಾಡಿ ಗ್ರಾಮದ ಬೆನಗಲ್‍ನಲ್ಲಿ ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮ 52 ವರ್ಷದ ಗಂಗಾ ಮರಕಾಲ ಎಂಬವರು ಮೃತಪಟ್ಟಿದ್ದಾರೆ.

  • ಪಲಿಮಾರು ಶ್ರೀಗಳಿಂದ ಗಂಗಾರತಿ ಆಗುತ್ತಿದ್ದಂತೆ ಧೋ ಎಂದು ಸುರಿದ ಮಳೆ

    ಪಲಿಮಾರು ಶ್ರೀಗಳಿಂದ ಗಂಗಾರತಿ ಆಗುತ್ತಿದ್ದಂತೆ ಧೋ ಎಂದು ಸುರಿದ ಮಳೆ

    ಉಡುಪಿ: ಇವತ್ತು ದೇಶಾದ್ಯಂತ ಭಾಗೀರಥಿ ಜಯಂತಿಯನ್ನು ಆಚರಿಸಲಾಗುತ್ತದೆ. ಉಡುಪಿ ಮಠದಲ್ಲಿ ಗಂಗಾರತಿ ಆಗುತ್ತಿದ್ದಂತೆ ಪವಾಡ ಎಂಬಂತೆ ಧೋ ಎಂದು ಮಳೆ ಸುರಿದಿದ್ದು ಎಲ್ಲರು ಅಚ್ಚರಿಗೊಂಡಿದ್ದಾರೆ.

    ಗಂಗೆ ಶಿವನ ತಲೆಯಿಂದ ಇಳಿದು ಬಂದ ದಿನವನ್ನು ಭಾಗೀರಥಿ ಜಯಂತಿ ಎಂದು ಕರೆಯಲಾಗುತ್ತದೆ. ಉಡುಪಿ ಕೃಷ್ಣಮಠದ ಮಧ್ವ ಸರೋವರದ ತಟದಲ್ಲಿ ಭಾಗೀರಥಿ(ಗಂಗಾದೇವಿ)ಗುಡಿಯಿದೆ. ಪ್ರತಿ ವರ್ಷ ಭಾಗೀರಥಿ ಜನ್ಮದಿನ ಸಂದರ್ಭದಲ್ಲಿ ಮಧ್ವ ಸರೋವರ ತುಂಬಿಕೊಂಡಿರುತ್ತದೆ. ಆದರೆ ಈ ವರ್ಷ ಮುಂಗಾರು ವಿಳಂಬವಾಗಿರುವುದರಿಂದ ಸರೋವರದೊಳಗಿರುವ ಬಾವಿಯಲ್ಲಿ ಮಾತ್ರ ನೀರು ಉಳಿದಿದೆ.

    ಈ ಬಾರಿಯೂ ಭಾಗೀರಥಿ ಜಯಂತಿ ಹಿನ್ನೆಲೆಯಲ್ಲಿ ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಗಂಗೆಗೆ ಆರತಿಯೆತ್ತಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬರ ನೀಗಿ- ವರ್ಷಧಾರೆಯಾಗಿ ರೈತರರು ಬೆಳೆದ ಬೆಳೆಗಳು ಸಮೃದ್ಧವಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅಷ್ಟಾಗುತ್ತಲೇ ಉಡುಪಿಯಲ್ಲಿ ಧೋ ಅಂತ ಮಳೆ ಸುರಿದಿದೆ.

    ಪಲಿಮಾರು ಕಿರಿಯ ಶ್ರೀ, ಅದಮಾರು ಕಿರಿಯ ಸ್ವಾಮೀಜಿ ಸರೋವರದಲ್ಲಿರುವಾಗಲೇ ಮಳೆ ಸುರಿದಿದ್ದು ವಿಶೇಷವಾಗಿತ್ತು. ಭಾಗೀರಥಿ ಪೂಜೆ ಬಳಿಕ ಉಡುಪಿಯಲ್ಲಿ ಭಾರೀ ಗಾಳಿ ಮಳೆಯಾಗಿ ಎಲ್ಲರಲ್ಲಿ ಆಶ್ಚರ್ಯ ಮೂಡಿಸಿದೆ. ಭಾಗೀರಥಿ ಜಯಂತಿಯಂದೇ ಮುಂಗಾರು ಆರಂಭವಾಗಿದ್ದು, ನೀರಿನ ಬರ ನೀಗಲಿ, ಮುಂಗಾರು ರಾಜ್ಯದೆಲ್ಲೆಡೆ ಸುರಿಯಲಿ ಅನ್ನೋದು ಜನರ ಆಶಯವಾಗಿದೆ.

    ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪಲಿಮಾರು ಸ್ವಾಮೀಜಿ, ಪ್ರತಿನಿತ್ಯ ಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಮಳೆಗಾಗಿ ಪ್ರಾರ್ಥಿಸುತ್ತಿದ್ದೇನೆ. ಭಾಗೀರಥಿ ಜನ್ಮದಿನದ ಆಚರಣೆ ಸಂದರ್ಭದಲ್ಲೇ ಮಳೆಯಾಗಿದೆ. ಇದು ಶುಭ ಸೂಚನೆ, ದೇಶ, ರಾಜ್ಯದಲ್ಲಿ ಗಂಗೆ ಅವತರಿಸಿ ಉತ್ತಮ ಮಳೆಯಾಗಲಿ. ರೈತರ ಹೊಲಗಳಲ್ಲಿ ಸಮೃದ್ಧ ಬೆಳೆಯಾಗಿ ಅವರ ಮುಖಗಳಲ್ಲಿ ಸಂತಸದ ಕಳೆ ಮೂಡಲಿ ಎಂದು ಹೇಳಿದರು.

  • ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

    ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

    – ಧರೆಗುರುಳಿತು 160 ವರ್ಷದ ಹಳೆಯ ಬೃಹತ್ ಆಲದ ಮರ

    ಬೆಂಗಳೂರು/ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

    ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

    ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

    ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

  • ವರುಣನ ಆರ್ಭಟಕ್ಕೆ ಹಾರಿದ ಶೀಟ್‍ಗಳು, ನೆಲಕ್ಕೆ ಉರುಳಿದ ಮರಗಳು

    ವರುಣನ ಆರ್ಭಟಕ್ಕೆ ಹಾರಿದ ಶೀಟ್‍ಗಳು, ನೆಲಕ್ಕೆ ಉರುಳಿದ ಮರಗಳು

    ಬೆಂಗಳೂರು: ಚಾಮರಾಜನಗರ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆರಾಯ ಅಬ್ಬರಿಸಿದ್ದು, ಮರಗಳು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಕೆಲವು ಕಡೆಗಳಲ್ಲಿ ಮಳೆ ಸಹಿತ ಬಿರುಗಾಳಿಯಿಂದಾಗಿ ಮನೆ ಹಾಗೂ ಅಂಗಡಿಯ ಶೀಟ್‍ಗಳು ಹಾರಿ ಹೋಗಿವೆ.

    ಬೆಂಗಳೂರಿನ ಮೆಜೆಸ್ಟಿಕ್, ಯಶವಂತಪುರ, ಕೊಡಗೇನಹಳ್ಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಆರ್ ಎಂವಿ 2ನೇ ಹಂತದ 7ನೇ ಅಡ್ಡರಸ್ತೆಯಲ್ಲಿ ಮರವೊಂದು ಬುಡಸಮೇತ ಧರೆಗೆ ಉರುಳಿದೆ. ರಾಜ್ಯದಾದ್ಯಂತ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ ಸಂಭವವಿದೆ. ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

    ನೆಲಮಂಗಲ ಪಟ್ಟಣದ ಬಸವಣ್ಣ ದೇವರ ಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಬಿರುಗಾಳಿ ಸಹಿತ ಮಳೆಯಿಂದಾಗಿ ಪೆಂಡಾಲ್ ನೆಲಸಮವಾಗಿದೆ. ಇತ್ತ ಕೆಲವು ಅಂಗಡಿಗಳ ಶೀಟ್‍ಗಳು ಗಾಳಿಗೆ ಹಾರಿಹೋಗಿವೆ. ನೆಲಮಂಗಲ ತರಕಾರಿ ಮಾರುಕಟ್ಟೆಗೆ ನೀರು ನುಗ್ಗಿದ್ದು, ವ್ಯಾಪಾರಸ್ಥರು ಮತ್ತು ಗ್ರಾಹಕರು ಪರದಾಡುವಂತಾಗಿದೆ. ಅಷ್ಟೇ ಅಲ್ಲದೆ ಎಂ.ಜಿ.ರಸ್ತೆ ಬದಿಯ ರಾಜಕಾಲುವೆ ತುಂಬಿಹರಿಯುತ್ತಿದ್ದು, ರಸ್ತೆ ಜಲಾವೃತವಾಗಿದ್ದು, ಮನೆ, ಅಂಗಡಿಗಳಿಗೆ ಕೊಳಚೆ ನೀರು ನುಗ್ಗುತ್ತಿದೆ.

    ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದ ಶಿವಣ್ಣ ಎಂಬವರ ಮನೆಯ ಶೀಟುಗಳು ಹಾರಿ ಅನಾಹುತ ಉಂಟಾಗಿದೆ. ತಕ್ಷಣವೇ ಸ್ಥಳೀಯರು ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದ್ದು, ಮನೆಯಲ್ಲಿ ನೀರು ತುಂಬಿ ವಸ್ತುಗಳು ಹಾಳಾಗಿವೆ. ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನ ಇಂಡ್ಲಬೆಲೆ ಗ್ರಾಮದಲ್ಲಿ ಆಲಿಕಲ್ಲು ಮಳೆಯಾಗಿದೆ. ಆನೇಕಲ್ ಪಟ್ಟಣ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.

    ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಿದೆ. ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಉರಿದಿದೆ. ಮಳೆ ಬರುತ್ತಿದ್ದರಿಂದ ಬೆಂಕಿ ನಂದಿ, ಭಾರೀ ಅನಾಹುತ ತಪ್ಪಿದೆ.

    ಕೋಲಾರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದ್ದು, ಮಳೆಗೆ ಕೆಲವೆಡೆ ವಿದ್ಯುತ್ ಕಂಬಗಳು ಹಾಗೂ ತೆಂಗಿನ ಮರಗಳು ನೆಲಕ್ಕುರುಳಿವೆ. ಜಿಲ್ಲೆಯ ಕೋಲಾರ, ಮಾಲೂರು, ಬಂಗಾರಪೇಟೆ, ಮುಳಬಾಗಲು ಹಾಗೂ ಕೆಜಿಎಫ್ ತಾಲೂಕಿನ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಮಾಲೂರು ತಾಲೂಕಿನ ದೊಡ್ಡ ಕಡತೂರು ಗ್ರಾಮದ ಸಪ್ತಗಿರಿ ಎಂಬವರ ಪಾಲಿ ಹೌಸ್ ಗಾಳಿ, ಮಳೆಗೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿಯ ವಿವಿಧ ಬೆಳೆಗಳು ಹಾಳಾಗಿವೆ.

    ಉತ್ತಮ ಭರಣಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ರೈತರು ಉಳುಮೆ ಮಾಡಲು ಅನುಕೂಲವಾದ ಮಳೆಯಾಗಿದೆ. ಸುಮಾರು ಒಂದುವರೆ ಗಂಟೆಯಿಂದ ಬಿಡದೆ ಸುರಿದ ಮಳೆಗೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರಿಳಿವೆ. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರ ಪರದಾಡುತ್ತಿದ್ದು, ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಮನೆ ಮೇಲೆ ತೆಂಗನ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದೆ. ಸರಿಯಾದ ಸಮಯಕ್ಕೆ ವಿದ್ಯುತ್ ಕಡಿತವಾಗಿದ್ದು ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವೆಡೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ರಸ್ತೆಗಳೆಲ್ಲಾ ಹೊಂಡಗಳಾಗಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ವಿವಿಧಡೆ ಮಳೆರಾಯ ತಂಪೆರೆದಿದ್ದಾನೆ. ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ಮೈಸೂರು ನಗರ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ವಾಹನ ಸವಾರರ ಪರದಾಟ, ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

  • ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

    ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

    – 15 ಜಿಲ್ಲೆಗಳ 12 ಲಕ್ಷ ಮಂದಿ ಸ್ಥಳಾಂತರ
    – 10 ಸಾವಿರ ಗ್ರಾಮದ ಮೇಲೆ ಪರಿಣಾಮ

    ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180 ಕಿಲೋ ಮೀಟರ್, ಗರಿಷ್ಠ 200 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಣೆಯಾಗಿದ್ದು, 5 ಮಂದಿ ಮೊದಲ ದಿನವೇ ಬಲಿಯಾಗಿದ್ದಾರೆ.

    ಪ್ರಚಂಡ ಬಿರುಗಾಳಿಗೆ ತರಗೆಲೆಯಂತಾದ ಮರಗಳು, ಕರೆಂಟ್ ಕಂಬಗಳು ಪುರಿ ರಸ್ತೆಗೆ ಉರುಳಿ ಬಿದ್ದಿವೆ. ಇನ್ನೂ ಸಣ್ಣ ಪುಟ್ಟ ವಸ್ತುಗಳೆಲ್ಲಾ ಆಗಸದಲ್ಲಿ ಹಾರುತ್ತಿವೆ. ಸುಮಾರು 10 ಸಾವಿರ ಗ್ರಾಮಗಳಲ್ಲಿ ಫೋನಿ ಎಫೆಕ್ಟ್ ಆಗುತ್ತಿದೆ. ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಏಳುತ್ತಿದೆ.

    ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರ ತೀರದಲ್ಲಿರುವ 15 ಜಿಲ್ಲೆಗಳ ಸುಮಾರು 12 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ಜನರು ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದೇ ಒಬ್ಬೊಬ್ಬರ ಕೈಯನ್ನು ಹಿಡಿದುಕೊಂಡು ತಮ್ಮ ಮನೆಗೆ ಸೇರಿಕೊಳ್ಳುತ್ತಿದ್ದಾರೆ.

    ರಣಭೀಕರ ಬಿರುಗಾಳಿಗೆ ಧಾರಾಕಾರ ಮಳೆಯಾಗುತ್ತಿದ್ದು, ಕಬ್ಬಿಣದ ವಸ್ತುಗಳು, ಮರಗಳು ಸುಲಭವಾಗಿ ತೇಲಿಕೊಂಡು ಹೋಗುತ್ತಿದೆ. 1999ರ ನಂತರ ಒಡಿಶಾದಲ್ಲಿ ಇಷ್ಟೊಂದು ಪ್ರಮಾಣದ ಗಾಳಿಯೊಂದಿಗೆ ಮಳೆಯಾಗುತ್ತಿದೆ ಎಂದು ಅಲ್ಲಿನ ಜನತೆ ಪ್ರತಿಕ್ರಿಯೆ ನೀಡಿದ್ದಾರೆ.

    ಒಡಿಶಾ-ಆಂಧ್ರ ಕರಾವಳಿ ತೀರದಲ್ಲಿ ಸಂಚರಿಸುವ 103 ರೈಲು ಸೇವೆಯನ್ನು ರದ್ದು ಮಾಡಲಾಗಿದೆ. ಜೊತೆಗೆ ವಿಮಾನ ಹಾರಾಟವನ್ನು ಬಂದ್ ಮಾಡಲಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳ ಕಾಲ ಎಲ್ಲ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ. ನೌಕಾದಳ, ವಾಯುಸೇನೆ, ಕರಾವಳಿ ಭದ್ರತಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳಿಂದ ಜನರ ರಕ್ಷಣಾ ಕಾರ್ಯ ನಡೆಸುತ್ತಿದೆ.