Tag: winter session

  • ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರ ಸಾವು – ದಿನೇಶ್ ಗುಂಡೂರಾವ್ ಉತ್ತರ

    ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರ ಸಾವು – ದಿನೇಶ್ ಗುಂಡೂರಾವ್ ಉತ್ತರ

    – ಬ್ಲಾಕ್‌ಲಿಸ್ಟ್ ಕಂಪನಿಯಿಂದ ಔಷಧಿ ಸರಬರಾಜು – ಮೆಡಿಕಲ್ ಮಾಫಿಯಾ ಎಂದ ಅಶೋಕ್

    ಬೆಳಗಾವಿ: ಬಹು ಅಂಗಾಂಗ, ಕಿಡ್ನಿ ವೈಫಲ್ಯದಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ ಎಂದು ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರತಿಕ್ರಿಯಿಸಿದ್ದಾರೆ.

    ಪರಿಷತ್‌ನಲ್ಲಿ ಮಾತನಾಡಿದ ಅವರು, ನ.11ರಂದು ಬಳ್ಳಾರಿ (Ballary) ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. 34 ಸಿಸೇರಿಯನ್ ಆಪರೇಷನ್‌ನಲ್ಲಿ 7 ಪ್ರಕರಣಗಳಲ್ಲಿ ತೊಂದರೆ ಆಗಿದೆ. ಮೂತ್ರಪಿಂಡ ತೊಂದರೆ, ಬಹು ಅಂಗಾಂಗ ವೈಫಲ್ಯತೆದಿಂದ 7 ಪ್ರಕರಣಗಳಲ್ಲಿ 5 ಬಾಣಂತಿಯರು ಸಾವಿಗೀಡಾಗಿದ್ದಾರೆ. 2 ಬಾಣಂತಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಿಂಗರ್ ಲ್ಯಾಕ್ವೆಟ್ ದ್ರಾವಣ ಮಾದರಿ ಪರೀಕ್ಷೆಯಲ್ಲಿ ನಿರ್ಲಕ್ಷ್ಯತೆ ತೋರಿರುವ ಔಷಧಿ ನಿಯಂತ್ರಕರಾದ ಡಾ.ಉಮೇಶ್‌ರನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಸ್ಪೇಸ್‌ನಲ್ಲೇ ಕ್ರಿಸ್ಮಸ್ ಸಂಭ್ರಮ – ಸಾಂತಾಕ್ಲಾಸ್ ಆದ ಸುನಿತಾ ವಿಲಿಯಮ್ಸ್!

    ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಡ್ರಗ್ ಕಂಪನಿ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಡ್ರಗ್ ಕಂಟ್ರೋಲರ್ ಜನರ್ ಅಫ್ ಇಂಡಿಯಾಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

    ಇದೇ ವೇಳೆ ಸಚಿವರು ಉತ್ತರ ನೀಡುತ್ತಿದ್ದಂತೆ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಮಾತನಾಡಿ, ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಿದ ಕಂಪನಿಯಿಂದ ಹೇಗೆ ಸಪ್ಲೈ ಮಾಡಿಕೊಂಡಿದ್ದೀರಿ ಎಂದು ಪ್ರಶ್ನಿಸಿದರು. ಜೊತೆಗೆ ವಿಧಾನಸಭೆಯಲ್ಲಿ ಆರ್.ಅಶೋಕ್ ಮಾತನಾಡಿ, ಇದು ಮೆಡಿಕಲ್ ಮಾಫಿಯಾ, ಬಾಣಂತಿಯರ ಸಾವಿಗೆ ಸರ್ಕಾರ ಕಾರಣ ಎಂದು ಕಿಡಿಕಾರಿದರು.ಇದನ್ನೂ ಓದಿ: NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್‌

  • ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

    ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

    -ಠೇವಣಿದಾರರ ಹಣ ಹಿಂಪಡೆಯಲು ಕಾನೂನಿನಲ್ಲಿ ಸರಳೀಕರಣ

    ಬೆಳಗಾವಿ: ಬಡವರ ಹಣ ವಂಚಿಸುವ ಮೋಸದ ಕಂಪನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.

    ಸೋಮವಾರ ವಿಧಾನಸಭೆಯಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024 ಮಂಡಿಸಿ ಮಾತನಾಡಿದ ಅವರು, 2003-04ರಲ್ಲಿ ವಿನಿವಿಂಕ್ ಶಾಸ್ತ್ರಿ ಚಿಟ್‌ಫಂಡ್ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು ಎಂದರು.

    ಚೈನ್‌ಲಿಂಕ್, ಚಿಟ್‌ಫಂಡ್, ಪಿರಮಿಡ್ ಮಾದರಿ ಹಾಗೂ ಹಣ ಡಬ್ಲಿಂಗ್ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳಿಸುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: UI: ಮಣಿರತ್ನಂರನ್ನು ಉಪೇಂದ್ರ ಮೀರಿಸುತ್ತಾರೆ: ಶಿವಣ್ಣ

    ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ ಎಂದು ತಿಳಿಸಿದರು.

    ಕೆಲವರು ಕಂಪನಿ ತೆರೆದು ಹಗರಣ ಮಾಡಿ, ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು. ಅಂತಹ ಕಂಪನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

    ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧವೂ ಕ್ರಮದ ಭರವಸೆ:
    ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ಶಾಸಕರಾದ ಸುನೀಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್, ಹೌಸಿಂಗ್ ಸ್ಕೀಂ ಹಾಗೂ ಗೋಲ್ಡ್ ಲೋನ್ ಕಂಪನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

    ವಿಪಕ್ಷ ನಾಯಕರ ಸಲಹೆ ಸೂಚನೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಹೌಸಿಂಗ್ ಸ್ಕೀಂ, ಮೈಕ್ರೋ ಲೆಂಡಿಂಗ್, ಗೋಲ್ಡ್‌ ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್ ಹೆಸರಿನ ಕಂಪನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ?- ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ

  • ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಬೆಳಗಾವಿ‌‌: ಕೇರಳ (Kerala) ಮಾದರಿಯಲ್ಲಿ ಗ್ರಾಮ ಪಂಚಾಯತಿ (Gram Panchayat) ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಗೌರವ ಧನ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿಕ ಚರ್ಚೆ ಮಾಡೋದಾಗಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿಯವರು, ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಸಿಬ್ಬಂದಿ, ವಾಟರ್ ಮನ್ ಗಳ ಗೌರವ ಧನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯತಿ ನೌಕರರ ಸಂಘದ ಬೇಡಿಕೆ ಈಡೇರಿಕೆ ಮಾಡಬೇಕು ಅಂತ ಒತ್ತಾಯಿಸಿದರು.

    ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಅನೇಕ ಬೇಡಿಕೆಗಳಿಗಾಗಿ ಗ್ರಾಮ ಪಂಚಾಯತಿ ನೌಕರರ ಸಂಘದವರು ಪ್ರತಿಭಟನೆ ಮಾಡಿದ್ದರು. ಎಲ್ಲಾ ಅಸೋಸಿಯೇಷನ್‌ಗಳ ಜೊತೆ ನಾನು ಸಭೆ ಮಾಡಿದ್ದೇವೆ. ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಕಮೀಷನರ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಆರ್ಥಿಕ ವಿಚಾರದ ಬೇಡಿಕೆ ಬಗ್ಗೆ ಅರ್ಥಿಕ ಇಲಾಖೆಗೆ ಕಡತ ಕಳಿಸಲಾಗಿದೆ ಎಂದರು.

    ಗೌರವ ಧನ ಹೆಚ್ಚಳ ಬಗ್ಗೆ ಪ್ರಸ್ತಾಪ ಅಗಿದೆ. ಕೇರಳ ಮಾದರಿಯಲ್ಲಿ ವೇತನ ಜಾಸ್ತಿ ಮಾಡಿ ಎನ್ನುತಿದ್ದಾರೆ‌. ಕೇರಳದಲ್ಲಿ 900 ಪಂಚಾಯತಿಗಳು ಮಾತ್ರ ಇವೆ. ಕರ್ನಾಟಕದಲ್ಲಿ 6 ಸಾವಿರ ಪಂಚಾಯತಿಗಳು ಇವೆ. ಹೀಗಾಗಿ ಕೇರಳ ಮಾದರಿ ವೇತನ ಹೆಚ್ಚಳ ಸಾಧ್ಯವಿಲ್ಲ. ಆದರೂ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರ ವೇತನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಕೆ ಮಾಡ್ತೀವಿ. ಇದನ್ನ ಹೊರೆತುಪಡಿಸಿ ಬೇರೆ ಬೇರೆ ಬಸ್ ಪಾಸ್, ಪಿಂಚಣಿ, ವಿಮೆ ಸೇರಿ ಹಲವು ಬೇಡಿಕೆ ಇಟ್ಟಿದ್ದಾರೆ. ನಾವು ಬೇಡಿಕೆಗಳ ಪರಿಹಾರಕ್ಕೆ 3 ತಿಂಗಳು ಸಮಯ ಕೇಳಿದ್ದೇವೆ‌. ಈಗ ಒಂದು ತಿಂಗಳು ಅಗಿದೆ. 2 ತಿಂಗಳ ಒಳಗೆ ಯಾವುದು ಸಾಧ್ಯವೋ ಆ ಬೇಡಿಕೆಗಳ ಬಗ್ಗೆ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.

  • ರಾಜ್ಯಾದ್ಯಂತ ಪಂಚಮಸಾಲಿ ಹೋರಾಟದ ಕಿಚ್ಚು – ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ರಾಜ್ಯಾದ್ಯಂತ ಪಂಚಮಸಾಲಿ ಹೋರಾಟದ ಕಿಚ್ಚು – ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಾಠಿ ಚಾರ್ಜ್ ಖಂಡಿಸಿ ಅಥಣಿಯಲ್ಲಿ (Athani) ರಾಷ್ಟ್ರೀಯ ಹೆದ್ದಾರಿ (National Highway) ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಬೆಳಗಾವಿ ಅಧಿವೇಶನದಲ್ಲಿ (Belagavi Session) ಪಂಚಮಸಾಲಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಹಿನ್ನೆಲೆ ಇಂದು (ಡಿ.12) ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಯುತ್ತಿದೆ. ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆ ನಡೆಯುತ್ತಿದೆ.ಇದನ್ನೂ ಓದಿ: ಅಂತರ್ಜಾತಿ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಜಾತಿನಿಂದನೆ ಕೇಸ್!

    2ಎ ಮೀಸಲಾತಿಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾ ಸರ್ಕಾರದ ಗೂಂಡಾ ವರ್ತನೆಯನ್ನು ಖಂಡಿಸಿ ಹೋರಾಟಗಾರರು ಬೀದಿಗಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಯಲ್ಲಿ ವಕೀಲರು ಸೇರಿದಂತೆ ಬಿಜೆಪಿ ಸಹ ಕಾರ್ಯಕರ್ತರು ಭಾಗಿಯಾಗಿದ್ದಾರೆ.

    ಇನ್ನೂ ಅಥಣಿ ತಾಲೂಕಿನ ಗುಂಡೆವಾಡಿ ಗ್ರಾಮದಲ್ಲಿ ಜತ್ತ -ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಲಾಠಿ ಚಾರ್ಜ್ ನಡೆಸಿದ್ದಕ್ಕೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆಯನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

    ಚಿಕ್ಕೋಡಿಯಲ್ಲಿ ಮಾತ್ರವಲ್ಲ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಇದಕ್ಕೆ ಕೈಜೋಡಿಸಿದ್ದಾರೆ.

    ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದೇಕೆ?
    ಇದೇ ಮಂಗಳವಾರ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಇದರಿಂದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದರು.ಇದನ್ನೂ ಓದಿ: ವಯನಾಡಿಗೆ 100 ಮನೆ – ರಾಜಕೀಯ ಗುಲಾಮಗಿರಿಯ ಸಂಕೇತ: ಸಿಎಂ ವಿರುದ್ಧ ಸಿ.ಟಿ.ರವಿ ಕಿಡಿ

  • 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    – ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.

    ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.

    ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.

    ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.

    ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
    ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

  • ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

    ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

    ಬೆಳಗಾವಿ/ಬೆಂಗಳೂರು: ಬಿಜೆಪಿಯವ್ರು (BJP) ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ (Muslim Community) ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಬೆಳಗಾವಿ ಚಳಿಗಾಲ ಅಧಿವೇಶನದ (Belagavi Winter Session)ಮೊದಲ ದಿನ ಸದನದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಕುರಿತು ಸಿಎಂ ಮಾತನಾಡಿದರು. ಪಂಚಮಸಾಲಿ (Panchamasali) ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

    ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದರು. ಈ ವೇಳೆ ಸ್ಪಷ್ಟನೆ ನೀಡಿದ ಗೃಹ ಸಚಿವರು 5,000 ಟ್ರ‍್ಯಾಕ್ಟರ್‌ಗಳನ್ನು ತರಲು ಮುಂದಾಗಿದ್ದಾರೆ. ಹಾಗಾಗಿ ಲಾ ಅಂಡ್ ಆರ್ಡರ್ ಸಮಸ್ಯೆ ಆಗುತ್ತೆ ಅಂತ ಅನುಮತಿ ಕೊಡಲಿಲ್ಲ. ನಂತರ ಜನ ಬರ್ತಾರೆ ವಾಹನಗಳಲ್ಲಿ ಅಂದ್ರು, ಜನ ಬರೋ ವಾಹನಗಳಿಗೂ ನಾವು ಮಿತಿ ಹಾಕಿದ್ದೇವೆ. ಪ್ರತಿಭಟನೆ ಮಾಡಲು ಅಡ್ಡಿ ಇಲ್ಲ, ಆದ್ರೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಷ್ಟೇ ಎಂದು ಗೃಹಸಚಿವರು ತಿಳಿಸಿದ್ರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ

    ಬಳಿಕ ಮಾತು ಮುಂದುವರಿಸಿದ ಸಿಎ, ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    ಈ ಹಿಂದೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸುವುದಿಲ್ಲ. ಯತಾಸ್ಥಿತಿ ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಕೋರ್ಟ್‌ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ ಎಂದು ಹೇಳಿದರು.

  • 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ‌ಕ್ರಮ: ಈಶ್ವರ್ ಖಂಡ್ರೆ

    – 9 ಕಂಪನಿಗಳಿಂದ ಒಟ್ಟು 1,492.18 ಕೋಟಿ ರೂ. ಬಡ್ಡಿ, ದಂಡ ಬಾಕಿ

    ಬೆಂಗಳೂರು: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5,150 ಎಕರೆ ಅರಣ್ಯ ಭೂಮಿಯ(Forest Land) ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ತಿಳಿಸಿದ್ದಾರೆ.

    ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕುಶಾಲಪ್ಪ (Kushalappa) ಪ್ರಶ್ನೆ ಕೇಳಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ಮರ್ಕೆರಾ ರಬ್ಬರ್ ಕಂಪನಿ (1074 ಎಕರೆ), ನೀಲಾಂಬುರ್ ರಬ್ಬರ್ ಕಂಪನಿಗೆ (713.03 ಎಕರೆ), ಥಾಮ್ಸನ್ ರಬ್ಬರ್ ಕಂಪನಿ (625 ಎಕರೆ), ಪೋರ್ಟ್ ಲ್ಯಾಂಡ್ ರಬ್ಬರ್ ಕಂಪನಿ (1289.29 ಎಕರೆ), ಟಾಟಾ ಕಾಫಿ ಲಿ. (923.378 ಎಕರೆ), ಗೈನ್ ಲೋರೆನ್ ಪ್ಲಾಂಟೇಷನ್ (279.748 ಎಕರೆ), ಚಾಮರಾಜನಗರ ಜಿಲ್ಲೆಯ ಎಮರಾಲ್ಡ್ ಹೆವೆನ್ ಎಸ್ಟೇಟ್, ಬೇಡಗುಳಿ (37.25 ಎಕರೆ), ಬಿಳಿಗಿರಿ ರಂಗನ ಎಸ್ಟೇಟ್, ಬೇಡಗುಳಿ (25 ಎಕರೆ), ನೀಲಗಿರಿ ಪ್ಲಾಂಟೇಷನ್ ಲಿ. ಹೊನ್ನಮೇಟಿ 184 ಎಕರೆ ಸೇರಿ ಒಟ್ಟು 5150 ಎಕರೆ ಜಮೀನನ್ನು ಗುತ್ತಿಗೆ ನೀಡಲಾಗಿದೆ ಎಂದು ವಿವರಿಸಿದರು.

    ಈ ಕಂಪನಿಗಳು ಹಲವು ದಶಕಗಳಿಂದ ಗುತ್ತಿಗೆ ಹಣವನ್ನೂ ಪಾವತಿಸಿರುವುದಿಲ್ಲ. ಈ 9 ಕಂಪನಿಗಳಿಂದ ಇಲಾಖೆಗೆ ಬಡ್ಡಿ ಮತ್ತು ದಂಡ ಸೇರಿ ಒಟ್ಟು 1492.18 ಕೋಟಿ ರೂ. ಬರಬೇಕಿದೆ ಎಂದೂ ತಿಳಿಸಿದರು. ಕಂಪನಿಗಳು ತಮಗೆ 999 ವರ್ಷಗಳಿಗೆ ಲೀಸ್ ನೀಡಲಾಗಿತ್ತು ಎಂದು ಕಂಪನಿಗಳು ವಾದಿಸುತ್ತಿದ್ದವು. 2012ರಲ್ಲಿ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ಈ ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ತಗ್ಗಿಸಿದ್ದು, ಅವಧಿ ಮುಗಿದ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ನೋಟಿಸ್ ನೀಡಿತ್ತು. ಆ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದು, ಪ್ರಸ್ತುತ ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಡಿ.12ರಂದು ವಿಚಾರಣೆಗೆ ಬರಲಿದೆ ಎಂದೂ ಮಾಹಿತಿ ನೀಡಿದರು.

    ತಾವು ಸಚಿವರಾದ ಬಳಿಕ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ಪಡೆಯಲು 5 ಜನ ಸದಸ್ಯರ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಪಡೆಯು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ, ದಾಖಲೆಗಳನ್ನು ಒಗ್ಗೂಡಿಸಿ ಭೂಮಿ ಮರಳಿ ಪಡೆಯಲು ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ

    ವಿವಿಧ ಉದ್ದೇಶಗಳಿಗೆ ಅರಣ್ಯ ಭೂಮಿಯನ್ನು ಗುತ್ತಿಗೆ ನೀಡಿರುವ ಪ್ರಕರಣಗಳ ಪರಿಶೀಲನೆ, ಗೇಣಿ ವಸೂಲಾತಿ, ಅರಣ್ಯ ಪ್ರದೇಶವನ್ನು ಇಲಾಖೆಗೆ ಹಿಂಪಡೆಯುವ ಬಗ್ಗೆ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರು ಹಲವು ಸಭೆ ನಡೆಸಿ, ಆದ್ಯತೆಯ ಆಧಾರದಲ್ಲಿ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲು ಶ್ರಮಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

  • ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ

    ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ

    ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.ಇದನ್ನೂ ಓದಿ: ಹಾಸನ| ಹೃದಯಾಘಾತದಿಂದ ಟೆಕ್ಕಿ ಸಾವು

    ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಟೀಕಿಸಿದ್ದಾರೆ.

    ಕಾಂಗ್ರೆಸ್ಸಿಗರು (C0ngress) ಭ್ರಷ್ಟಾಚಾರ ಮಾಡುವ ಕಡೆ ಗಮನ ಕೊಡುತ್ತಿದ್ದು, ಆಸ್ಪತ್ರೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ. ಔಷಧಿ ಕೊಂಡುಕೊಳ್ಳುವಾಗ ಬ್ಲಾಕ್ ಮಾಡಿದ ಕಳಪೆ ಔಷಧಿಗಳನ್ನು ಖರೀದಿಸಿದ್ದಾರೆ. ಅವುಗಳನ್ನು ಬಳಸಿದ್ದರಿಂದ ಅನೇಕ ಕಡೆ ಈ ರೀತಿಯ ದಾರುಣ ಘಟನೆಗಳು ನಡೆದಿವೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಸೇರಿ ನಾವೆಲ್ಲ ಇಲ್ಲಿಗೆ ಭೇಟಿ ಕೊಟ್ಟಿದ್ದೇವೆ. ವಸ್ತುಸ್ಥಿತಿಯನ್ನು ವೈದ್ಯರಿಂದ ತಿಳಿದುಕೊಳ್ಳುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ

     

  • ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ

    ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ

    ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ.ವಿಜಯೇಂದ್ರ (BY Vijayendra) ಆರೋಪಿಸಿದರು.ಇದನ್ನೂ ಓದಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಬೆಳಗಾವಿಯಲ್ಲಿ (Belagavi)ಇಂದು (ಡಿ.9) ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ರಾಜಕಾರಣದ ಪ್ರಶ್ನೆ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.

    ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ. ಈ ಬೇಜವಾಬ್ದಾರಿತನ ಏನಿದೆಯೋ? ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಗಮನ ಸೆಳೆಯುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ

  • ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಬೆಳಗಾವಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 12 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.ಇದನ್ನೂ ಓದಿ: ಹಾಸನ| ಹೃದಯಾಘಾತದಿಂದ ಟೆಕ್ಕಿ ಸಾವು

    ಬೆಳಗಾವಿಯಲ್ಲಿ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಆಡಳಿತಕ್ಕೆ ಬಂದು 18 ತಿಂಗಳು ಕಳೆದಿವೆ. 17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ. ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ. ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಇದೀಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ ಎಂದು ವ್ಯಂಗ್ಯವಾಡಿದರು.

    ಬೆಳಗಾವಿ (Belagavi) ಜಿಲ್ಲೆಯೊಂದರಲ್ಲಿಯೇ ಮುನ್ನೂರಕ್ಕೂ ಹೆಚ್ಚು ನವಜಾತ ಶಿಶುಗಳ ಸಾವಾಗಿದೆ. ಸಿದ್ದರಾಮಯ್ಯ ಹೊಸದಾಗಿ ಬಂದಾಗ ಪ್ರತಿ ತಿಂಗಳು ಜನತಾದರ್ಶನ ಮಾಡುತ್ತೇನೆ ಎಂದಿದ್ದರು. ಆದರೆ ಮಂತ್ರಿಗಳು ದುಡ್ಡು ಮಾಡುವುದರಲ್ಲಿ ಮುಳುಗಿದ್ದಾರೆ. ಜಿಲ್ಲೆಗಳಿಗೆ ಮಂತ್ರಿಗಳು ಭೇಟಿ ಕೊಡುತ್ತಿಲ್ಲ. ದುಡ್ಡು ಮಾಡಲು ಮಾತ್ರ ಜಿಲ್ಲೆಗಳಿಗೆ ಹೋಗುತ್ತಾರೆ. ಯಾವ ಮಂತ್ರಿಗಳು ಆಯಾ ಜಿಲ್ಲೆಗೆ ಹೋಗುತ್ತಿಲ್ಲ. ಇದು ಗುರುವಾರದ ಸರ್ಕಾರ, ಗುರುವಾರ ಮಾತ್ರ ಸಚಿವರು ವಿಧಾನಸೌಧಕ್ಕೆ ಬರುತ್ತಾರೆ. ಉತ್ತರ ಕರ್ನಾಟಕದ ಬಗ್ಗೆ ಸರ್ಕಾರ ಹೇಳಿದ್ದೇನು, ಮಾಡಿದ್ದೇನು? ಅತ್ಯಂತ ಕಳಪೆ ಸರ್ಕಾರ ಇದು. ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: 5 ಲಕ್ಷ ಹೆಕ್ಟರ್ ತೊಗರಿ ಹೂ ಬಿಡದೇ ಸರ್ವನಾಶ – ಬೆಳೆ ಹಾನಿ ಸಮೀಕ್ಷೆಗೆ ರೈತರ ಒತ್ತಾಯ