Tag: Witchcraft

  • ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ

    ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ

    ದಿಸ್ಪುರ್: ವಾಮಾಚಾರ (Witchcraft) ಮಾಡುತ್ತಿರುವುದಾಗಿ ಶಂಕಿಸಿ, ಮಹಿಳೆಯೊಬ್ಬಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಅಪರಾಧಿಗಳಿಗೆ ಆಸ್ಸಾಂ (Assam) ಚರೈಡಿಯೋ (Charaideo) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಇದನ್ನೂ ಓದಿ: 47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?

    2012ರಲ್ಲಿ ಮಾಟ ಮಂತ್ರ ಮಾಡುತ್ತಿರುವುದಾಗಿ ಶಂಕಿಸಿ ಮೇಲೆ ಮಹಿಳೆಯೊಬ್ಬರ ಹತ್ಯೆ ನಡೆದಿತ್ತು. ಮೃತ ಮಹಿಳೆ ಚರೈಡಿಯೋದಲ್ಲಿರುವ ಜಲ್ಹಾ ಗ್ರಾಮದಲ್ಲಿ ಮಾಟಮಂತ್ರ ಮಾಡುತ್ತಿದ್ದರು ಎಂದು ಶಂಕಿಸಿ, ಜನರ ಗುಂಪೊಂದು ಆಕೆಗೆ ದೈಹಿಕ ಚಿತ್ರಹಿಂಸೆ ನೀಡಿ, ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಆ ಸಮಯದಲ್ಲಿ ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ 13 ವರ್ಷಗಳ ವಿಚಾರಣೆಯ ಬಳಿಕ ನ್ಯಾಯಾಲಯ ಆದೇಶ ಹೊರಡಿಸಿದೆ.

    ಚರೈಡಿಯೋ ಜಿಲ್ಲಾ ಮತ್ತು ಸೆಷನ್ಸ್ ನ್ಯಾ.ಅಬುಬಕ್ಕರ್ ಸಿದ್ದೀಕ್ ಅವರು 12 ಪುರುಷರು ಮತ್ತು 11 ಮಹಿಳೆಯರನ್ನು ಅಪರಾಧಿಗಳೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ಮತ್ತು ತಲಾ 5,000 ರೂ. ದಂಡ ವಿಧಿಸಿದ್ದಾರೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ ನೀಡುವಂತೆ ಅಪರಾಧಿಗಳಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಪಾಕ್‌ನಿಂದ ಯಾವುದೇ ಪರಮಾಣು ದಾಳಿಯ ಸೂಚನೆ ಬಂದಿಲ್ಲ, ಕದನ ವಿರಾಮದಲ್ಲಿ ಅಮೆರಿಕದ ಪಾತ್ರ ಇಲ್ಲ: ವಿಕ್ರಂ ಮಿಸ್ರಿ

  • Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

    Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

    ತುಮಕೂರು: ವಾಮಾಚಾರ (Witchcraft) ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ (Kempamma Devi Temple) ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ.

    ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ. ಇಂದು ಬೆಳಗ್ಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ‘ಡೆವಿಲ್’ ಚಿತ್ರೀಕರಣ ಆರಂಭಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ದಾಸ

    ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Kolar| 2 ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

  • ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಮಲೆನಾಡು

    ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಮಲೆನಾಡು

    ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ (Witchcraft) ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ ಮೂಡಿಗೆರೆ (Mudigere) ತಾಲೂಕಿನ ಹೆಡದಾಳು ಗ್ರಾಮದ ಚೇತನ್ ಎಂಬವರ ಮನೆ ಹಾಗೂ ಚೇತನ್ ಮನೆಯ ಮೂರು ದಾರಿ ಕೂಡಿರುವ ಕಡೆ ವಾಮಾಚಾರ ಮಾಡಿದ್ದಾರೆ. ಒಂದು ಗುಚ್ಚು ಹಸಿರು ಬಳೆಯ ಮೇಲೆ ಮಣ್ಣಿನ ಮಡಕೆ ಕೂರಿಸಿ, ಆ ಮಡಿಕೆಗೆ ಗೊಂಬೆ ರೂಪ ನೀಡಿ ಕಾಳಿಯ ಮುಖದಂತೆ ಮಾಡಿ ಮಾಟ ಮಾಡಿದ್ದಾರೆ. ಬೆಳಗಿನ ಜಾವ 4 ರಿಂದ 5 ಗಂಟೆ ಸುಮಾರಿಗೆ ಐವರು ಕಿಡಿಗೇಡಿಗಳ ಈ ದುಷ್ಕೃತ್ಯವನ್ನ ಸ್ಥಳೀಯರು ತಮ್ಮ ಮನೆಯ ಒಳಭಾಗದಿಂದ ನೋಡಿದ್ದಾರೆ. ಆದರೆ, ಯಾರೋ? ಏನೋ? ಎಂದು ಹೋಗಲು ಭಯಗೊಂಡು ಮನೆಯಲ್ಲೇ ಇದ್ದರು. ಬೆಳಗ್ಗೆ ನೋಡಿದಾಗ ಮಾಟ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಮಾಟದ ಜಾಗದಲ್ಲಿ ಅರಿಶಿನ-ಕುಂಕುಮ, ಹಣ್ಣು-ಕಾಯಿ ಸೇರಿ ವಿವಿಧ ವಸ್ತುಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಾಟ ಮಾಡುವವರು ಪ್ರಾಣಿ ಬಲಿ ನೀಡಿ ಮಾಟ ಮಾಡುತ್ತಾರೆ. ಆದರೆ ಹಸಿರು ಬಳೆ ಮೇಲೆ ಮಡಿಕೆಗೆ ಮಣ್ಣಿನ ರೂಪದಲ್ಲಿ ಕಾಳಿಯಂತೆ ಮಾಡಿ ವಾಮಾಚಾರ ಮಾಡಿರುವುದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಗ್ರಾಮಸ್ಥರು ಈ ಕುರಿತು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಬಿಎಂಪಿಯಿಂದ ತುರ್ತು ಇ-ಖಾತಾ ಪಡೆಯಲು ಮಾರ್ಗಸೂಚಿ ಬಿಡುಗಡೆ – ಗೈಡ್‌ಲೈನ್‌ನಲ್ಲಿ ಏನಿದೆ?

  • ಮಸ್ಕಿ ಬಿಜೆಪಿ ಕಚೇರಿ ಮುಂದೆ ವಾಮಾಚಾರದ ಶಂಕೆ: ಕಾರ್ಯಕರ್ತರ ಆಕ್ರೋಶ

    ಮಸ್ಕಿ ಬಿಜೆಪಿ ಕಚೇರಿ ಮುಂದೆ ವಾಮಾಚಾರದ ಶಂಕೆ: ಕಾರ್ಯಕರ್ತರ ಆಕ್ರೋಶ

    ರಾಯಚೂರು: ಮಸ್ಕಿ ಪಟ್ಟಣದ ಬಸವೇಶ್ವರ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ವಾಮಚಾರದ (Witchcraft) ಶಂಕೆ ವ್ಯಕ್ತವಾಗಿದೆ. ಕಚೇರಿ ಮುಂಭಾಗದ ಮೂರು ರಸ್ತೆಗಳು ಸೇರುವ ಜಾಗದಲ್ಲಿ ರಾತ್ರಿ ವೇಳೆ ಅಪರಿಚಿತರು ಪೂಜೆ ನಡೆಸಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಬಿಂದಿಗೆಯಲ್ಲಿ ಎಕ್ಕದ ಎಲೆ, ರಸ್ತೆಯಲ್ಲಿ ಐದು ಸಣ್ಣ ಕಲ್ಲುಗಳನ್ನ ಇಟ್ಟು ಪೂಜಿಸಲಾಗಿದೆ. ಬಿಜೆಪಿ (BJP) ಕಚೇರಿ ಮುಂಭಾಗದಲ್ಲೇ ಪೂಜೆ ನಡೆದಿರುವುದರಿಂದ ಇದು ವಿರೋಧ ಪಕ್ಷದವರ ಕೃತ್ಯ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

    ಮಸ್ಕಿ (Maski) ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾದಾಟವಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ (Congress) ಮಧ್ಯೆ ತೀವ್ರ ಪೈಪೋಟಿಯಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಎರಡೂ ಪಕ್ಷದ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಕಚೇರಿ ಮುಂದಿನ ಬೆಳವಣಿಗೆಗೆ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: 4 ಚುನಾವಣೆಯಲ್ಲೂ ಜಾತಿ ದಂಡ, ಸಿಟಿ ರವಿ ಗೆಲುವಿಗೆ ಹಿಂದುತ್ವ – ಅಭಿವೃದ್ಧಿಯೇ ಮಾನದಂಡ

  • ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ

    ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ

    ಪಾಟ್ನಾ: ವಾಮಾಚಾರ (Witchcraft) ಮಾಡಿರುವ ಆರೋಪದ ಮೇಲೆ ಸ್ಥಳೀಯರು ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯನ್ನು (Woman) ತನ್ನ ಮನೆಯಲ್ಲಿಯೇ ಸಜೀವ ದಹನ ಮಾಡಿರುವ ಆಘಾತಕಾರಿ ಘಟನೆ ಶನಿವಾರ ಸಂಜೆ ಬಿಹಾರದಲ್ಲಿ (Bihar) ನಡೆದಿದೆ.

    ಜಾರ್ಖಂಡ್ ಅರಣ್ಯಕ್ಕೆ ಹೊಂದಿಕೊಂಡಿರುವ ಮೈಗ್ರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪಚ್ಮಾಹ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರ್ಜುನ್ ದಾಸ್ ಅವರ ಪತ್ನಿ ರೀಟಾ ದೇವಿ (45) ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಗೆ ಧಾವಿಸಿದ್ದ ಸ್ಥಳೀಯ ಪೊಲೀಸ್ ತಂಡವನ್ನು ಕೂಡಾ ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

    ಬಳಿಕ ಇಮಾಮ್‌ಗಂಜ್ ಎಸ್‌ಡಿಪಿಒ ಮನೋಜ್ ರಾಮ್ ನೇತೃತ್ವದಲ್ಲಿ ಸ್ಥಳಕ್ಕೆ ಹೆಚ್ಚಿನ ಅಧಿಕಾರಿಗಳು ಬಂದಿದ್ದಾರೆ. ಈ ವೇಳೆ ಮಹಿಳೆಯ ಮೃತ ದೇಹವನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಗಯಾಕ್ಕೆ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಯುವತಿಗೆ ಆ್ಯಸಿಡ್ ಹಾಕಿ ಜೈಲು ಸೇರಿರುವ ನಾಗನಿಗೆ ಗ್ಯಾಂಗ್ರಿನ್

    ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ಮತ್ತು 436 ಹಾಗೂ ವಾಮಾಚಾರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 9 ಮಹಿಳೆಯರನ್ನು ಬಂಧಿಸಲಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಹರ್‌ಪ್ರೀತ್ ಕೌರ್ ಪ್ರಕಾರ, ಕೊಲೆ ನಡೆಸಿರುವ ಆರೋಪದಲ್ಲಿ ಇನ್ನೂ ಹೆಚ್ಚಿನವರ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

     

    ವರದಿಗಳ ಪ್ರಕಾರ ಅದೇ ಗ್ರಾಮದ ನಿವಾಸಿಯಾಗಿದ್ದ ಪರಮೇಶ್ವರ್ ಭುಯಾನ್ ಅವರು ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿ, ಕಳೆದ ತಿಂಗಳು ಮೃತಪಟ್ಟಿದ್ದರು. ಆದರೆ ಅವರ ಕುಟುಂಬ ರೀಟಾ ದೇವಿ ವಾಮಾಚಾರದ ಮೂಲಕ ಕೊಲೆ ಮಾಡಿರುವುದಾಗಿ ಆರೋಪಿಸಿ, ನಿನ್ನೆ ಆಕೆಯನ್ನು ಕೊಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ – ಬೈಕ್‌ನಿಂದ ಬಿದ್ದು ವ್ಯಕ್ತಿ ಕೋಮಾ

    Live Tv
    [brid partner=56869869 player=32851 video=960834 autoplay=true]

  • ವಾಮಾಚಾರದ ಅಭ್ಯಾಸ- ವೃದ್ಧೆಯ ನಾಲಿಗೆ ಕತ್ತರಿಸಿದ ಗ್ರಾಮಸ್ಥರು!

    ವಾಮಾಚಾರದ ಅಭ್ಯಾಸ- ವೃದ್ಧೆಯ ನಾಲಿಗೆ ಕತ್ತರಿಸಿದ ಗ್ರಾಮಸ್ಥರು!

    ಪಾಟ್ನಾ: ಬುಡಕಟ್ಟು ಜನಾಂಗದ 70 ವರ್ಷದ ವೃದ್ಧೆಯೊಬ್ಬಳು ವಾಮಾಚಾರ ಅಭ್ಯಾಸ ಮಾಡುತ್ತಿದ್ದಾಳೆ ಅಂತಾ ಆಕೆಯ ನಾಲಿಗೆಯನ್ನೇ ಕತ್ತರಿಸಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

    ಬಿಹಾರದ ರೋಹ್ತಾಸ್ ಜಿಲ್ಲೆಯ ರೆದಿಯಾ ಗ್ರಾಮದ ನಿವಾಸಿ ರಾಜ್‍ಕಾಲೊ ಕುನ್ವಾರ್ ಹಲ್ಲೆಗೆ ಒಳಗಾದ ಮಹಿಳೆ. ಅದೇ ಗ್ರಾಮದ ನನ್ಹಾಕ್ ರಜ್ವಾರ್, ಉದಯ್ ರಜ್ವಾರ್ ಮತ್ತು ಛತ್ತು ರಜ್ವಾರ್ ಎಂಬವರು ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಮೂವರ ವಿರುದ್ಧ ತಿಲೌತು ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

    ಆಗಿದ್ದೇನು?:
    ರಾಜ್‍ಕಾಲೊ ಕುನ್ವಾರ್ ವಿಧವೆಯಾಗಿದ್ದು, ಎಂದಿನಂತೆ ಭಾನುವಾರ ರಾತ್ರಿ ತಮ್ಮ ಮೊಮ್ಮಕ್ಕಳ ಜೊತಗೆ ಮಲಗಿದ್ದರು. ಈ ವೇಳೆ ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಪುಟ್ಟ ಮಕ್ಕಳಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಮಕ್ಕಳು ಹಾಗೂ ವೃದ್ಧೆ ರಾಜ್‍ಕಾಲೊ ಕುನ್ವಾರ್ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ದುಷ್ಕರ್ಮಿಗಳು ವೃದ್ಧೆಯ ನಾಲಿಗೆ ಕತ್ತರಿಸಿ, ಪರಾರಿಯಾಗಿದ್ದಾರೆ.

    ಮಕ್ಕಳ ಅಳುತ್ತಿರುವ ಧ್ವನಿ ಕೇಳಿಸಿಕೊಂಡ ಕೆಲ ಗ್ರಾಮಸ್ಥರು ವೃದ್ಧೆಯ ಮನೆಗೆ ಬಂದಿದ್ದಾರೆ. ಈ ವೇಳೆ ರಕ್ತಸ್ರಾವದಿಂದ ಬಳಲುತ್ತಿದ್ದ ರಾಜ್‍ಕಾಲೊ ಕುನ್ವಾರ್ ಅವರನ್ನು ತಿಲೌತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದು, ಸಾಸರಾಮ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಲೌತು ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ. ಬಳಿಕ ವೃದ್ಧೆಯನ್ನು ಸಾಸರಾಮ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಈ ಕುರಿತು ಆರೋಪಿಗಳಾದ ನನ್ಹಾಕ್ ರಜ್ವಾರ್, ಉದಯ್ ರಜ್ವಾರ್ ಮತ್ತು ಛತ್ತು ರಜ್ವಾರ್ ವಿರುದ್ಧ ವೃದ್ಧೆಯು ತಿಲೌತು ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ. ಆಕೆಯ ಹಾಗೂ ಮಕ್ಕಳ ಹೇಳಿಕೆ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

    ರಾಜ್‍ಕಾಲೊ ಕುನ್ವಾರ್ ಪುತ್ರ ಹಾಗೂ ಸೊಸೆ ಪಂಜಾಬ್‍ನ ಕಾರ್ಖಾನೆಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಒಬ್ಬ ಮಗನನ್ನು ವೃದ್ಧೆಯ ಬಳಿ ಬಿಟ್ಟು ಹೋಗಿದ್ದಾರೆ.

    ವೃದ್ಧೆ ವಾಮಾಚಾರ ಅಭ್ಯಾಸ ಮಾಡುತ್ತಿದ್ದಾಳೆ. ಇದರಿಂದಾಗಿ ತಮ್ಮ ಮನೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಅಂತಾ ಶಂಕೆ ವ್ಯಕ್ತಪಡಿಸಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿಧಿ ತಗೆಯಲು ಹೋಗಿ ಸ್ಥಳೀಯರ ಕೈಗೆ ಸಿಕ್ಕು ಗೂಸಾ ತಿಂದರು!

    ನಿಧಿ ತಗೆಯಲು ಹೋಗಿ ಸ್ಥಳೀಯರ ಕೈಗೆ ಸಿಕ್ಕು ಗೂಸಾ ತಿಂದರು!

    ದಾವಣಗೆರೆ: ನಿಧಿ ಆಸೆಗಾಗಿ ವಾಮಾಚಾರ ಮಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ಥಳಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯಲ್ಲಿ ನಡೆದಿದೆ.

    ಮೌನಾಚಾರಿ ಹಾಗೂ ಭಾಷಾ ವಾಮಾಚಾರ ಮಾಡುತ್ತಿದ್ದ ಆರೋಪಿಗಳು. ವಾಮಾಚಾರ ವಿಷಯ ತಿಳಿಯುತ್ತಿದ್ದಂತೆ ಮೌನಾಚಾರಿ ಹಾಗೂ ಭಾಷಾ ಎನ್ನುವ ವ್ಯಕ್ತಿಯನ್ನು ಅಕ್ಕಪಕ್ಕದ ಮನೆಯವರು ಹಿಡಿದಿದ್ದಾರೆ. ಆದರೆ ಇವರ ಜೊತೆಗಿದ್ದ ಮತ್ತಿಬ್ಬರು ಆರೋಪಿಗಳು ಸ್ಥಳೀಯರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

    ಮುಂಜಾನೆ ಯಾರು ಇಲ್ಲದ ಸಮಯ ನೋಡಿ, ಮೌನಾಚಾರಿ, ಭಾಷಾ ಹಾಗೂ ಪರಾರಿಯಾದ ಇಬ್ಬರು ಸೇರಿ ಕೃತ್ಯ ಎಸಗಿದ್ದಾರೆ. ಮನೆಯೊಂದರ ಮುಂಭಾಗದಲ್ಲಿ ಗುಂಡಿ ತೆಗೆದು, ಕೋಳಿ, ಸಲಿಕೆ ಹಾಗೂ ಹಾರಿಗೆ ಪೂಜೆ ಮಾಡಿ, ಕೋಳಿ ಬಲಿಕೊಟ್ಟಿದ್ದರು. ಅಕ್ಕ ಪಕ್ಕದ ಮನೆಯವರಿಗೆ ಶಂಕೆ ವ್ಯಕ್ತವಾಗಿ ಸ್ಥಳಕ್ಕೆ ಬಂದಿದ್ದು, ಮೌನಾಚಾರಿ ಹಾಗೂ ಭಾಷಾರನ್ನು ಹಿಡಿತು ಥಳಿಸಿದಾಗ ಸತ್ಯ ಬಾಯಿಬಿಟ್ಟಿದ್ದಾರೆ. ಇವರ ಜೊತೆಗಿದ್ದ ಮತ್ತಿಬ್ಬರು ಪರಾರಿಯಾಗಿದ್ದಾರೆ.

    ಮೌನಾಚಾರಿ ಹಾಗೂ ಭಾಷಾರನ್ನು ಸ್ಥಳೀಯರು ಜಗಳೂರು ಪೊಲೀಸರಿಗೆ ಒಪ್ಪಿಸಿದ್ದು, ಈ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.