Tag: Witness

  • ಪುಸ್ತಕ ರೂಪದಲ್ಲಿ ಹೊರಬರಲಿದೆ ಸಾಕ್ಷಿ ಮಲಿಕ್‌ ಬದುಕು – ಅಕ್ಟೋಬರ್‌ನಲ್ಲಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ!

    ಪುಸ್ತಕ ರೂಪದಲ್ಲಿ ಹೊರಬರಲಿದೆ ಸಾಕ್ಷಿ ಮಲಿಕ್‌ ಬದುಕು – ಅಕ್ಟೋಬರ್‌ನಲ್ಲಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ!

    ನವದೆಹಲಿ: ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್‌ (Sakshi Malik) ಅವರ ʻಆತ್ಮ ಚರಿತ್ರೆʼ ಪುಸ್ತಕ ಮುಂದಿನ ಅಕ್ಟೋಬರ್‌ ತಿಂಗಳಲ್ಲಿ ಬಿಡುಗಡೆಯಾಲಿದೆ ಎಂದು ತಿಳಿದುಬಂದಿದೆ.

    ಜಗ್ಗರ್ನಾಟ್ ಬುಕ್ಸ್ (Juggernaut Books) ಪ್ರಕಾಶನ ಈ ಪುಸ್ತಕ ಹೊರತರುತ್ತಿದ್ದು, ಜೋನಾಥನ್ ಸೆಲ್ವರಾಜ್ (Jonathan Selvaraj) ಸಹ-ಲೇಖಕರಾಗಿದ್ದಾರೆ. ʻವಿಟ್ನೆಸ್‌ʼ (Witness) ಹೆಸರಿನ ಪುಸ್ತಕ ಇದಾಗಿದೆ, ಅಂದ್ರೆ ಸಾಕ್ಷಿ ಎಂದರ್ಥ. ಈ ಪುಸ್ತಕದಲ್ಲಿ ಸಾಕ್ಷಿ ಮಲಿಕ್‌ ಅವರ ಬಾಲ್ಯದದಿಂದ ಜೀವನದುದ್ದಕ್ಕೂ ನಡೆದ ಸಿಹಿ-ಕಹಿ ಘಟನೆಗನ್ನು ಎಳೆಎಳೆಯಾಗಿ ವಿವರಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಕ್ಫ್ ಬೋರ್ಡ್ ವಿರೋಧ – ಖಂಡನಾ ನಿರ್ಣಯ ಅಂಗೀಕರಿಸುವಂತೆ ಸಿಎಂಗೆ ಮನವಿ

    ಬಾಲ್ಯದಿಂದಲೂ ಸಾಕ್ಷಿ ಮಲಿಕ್‌ ನಡೆದು ಬಂದ ಹಾದಿ, ಜೀವನದಲ್ಲಿ ಕಂಡ ಏಳು-ಬೀಳುಗಳು, ರೋಹ್ಟಕ್‌ನಲ್ಲಿ ಕುಸ್ತಿಯ ಪರಿಚಯವಾಗಿದ್ದು, ರಿಯೋ ಒಲಿಂಪಿಕ್ಸ್‌ನ ಗೆಲುವು, ಒಲಿಂಪಿಕ್ಸ್ ನಂತರದ ಪ್ರಯಾಣ, ಜೀವನದ ಹೋರಾಟಗಳು ಮತ್ತು ಕ್ರೀಡೆಯಲ್ಲಿನ ಸೋಲು-ಗೆಲುವುಗಳ ಬಗ್ಗೆ ಹೇಳಿಕೊಂಡಿದ್ದಾರೆ. ಕೊನೆಯಲ್ಲಿ ಲೈಂಗಿಕ ಕಿರುಕುಳ ವಿರೋಧಿಸಿ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ನಡೆಸಿದ ಹೋರಾಟದ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

    ಸಾಕ್ಷಿ ಮಲಿಕ್‌ ಅವರ ಕಥೆಯ ಉದ್ದಕ್ಕೂ ಭಾರತದಲ್ಲಿ ಮಹಿಳಾ ಕುಸ್ತಿ ಪ್ರಪಂಚದ ಆಕರ್ಷಕ ಒಳನೋಟಗಳು ಕಂಡುಬಂದಿವೆ. ಕುಸ್ತಿ ತರಬೇತಿ, ಶಿಬಿರದ ಜೀವನ, ದೇಹ ಚಿತ್ರಣ, ಡೇಟಿಂಗ್, ಅಂತಾರಾಷ್ಟ್ರೀಯ ಕುಸ್ತಿಪಟುವಾಗಲು ಏನೆಲ್ಲಾ ಮಾಡಬೇಕು? ಅನ್ನೋದನ್ನ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನೂತನ ಮೆಂಟರ್‌ ಆಗಿ ಜಹೀರ್‌ ಖಾನ್‌ ನೇಮಕ

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್‌, ಇದು ನನ್ನ ಜೀವನದ ನೈಜ ಮತ್ತು ಪ್ರಾಮಾಣಿಕ ಕಥೆ. ನನ್ನ ಬದುಕಿನ ಸಮಗ್ರವನ್ನೂ ಈ ಪುಸ್ತಕಕ್ಕೆ ಅರ್ಪಿಸಿದ್ದೇನೆ. ಓದುಗರು ಖಂಡಿತಾ ಇಷ್ಟಪಡುತ್ತಾರೆಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ. ಇನ್ನೂ ಜಗ್ಗರ್‌ನಾಟ್ ಬುಕ್ಸ್‌ನ ಪ್ರಕಾಶಕ ಚಿಕಿ ಸರ್ಕಾರ್ ಪ್ರಕಾರ ಮಾತನಾಡಿ, ʻವಿಟ್ನೆಸ್‌ʼ ಅಂದ್ರೆ ಸಾಕ್ಷಿ ಎಂಬುದು ನಮ್ಮ ಕಾಲದ ಮಹಾನ್ ಆತ್ಮಚರಿತ್ರೆಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಇದನ್ನೂ ಓದಿ: IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    ಕಳೆದ ವರ್ಷ ಡಿಸೆಂಬರ್‌ 24ರಂದು ಸಾಕ್ಷಿ ಮಲಿಕ್‌ ಕುಸ್ತಿಗೆ ವಿದಾಯ ಹೇಳಿದರು. ಇದನ್ನೂ ಓದಿ: T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

    ಏನಾಗಿತ್ತು?
    ಈ ಹಿಂದೆ ಕುಸ್ತಿ ಫೆಡರೇಷನ್‌ (Wrestling Federation of India) ಅಧ್ಯಕ್ಷರಾಗಿದ್ದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ವಿನೇಶ್‌ ಫೋಗಟ್‌, ಬಜರಂಗ್‌ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು.

    ಕೊನೆಗೆ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದರು. 2024ರ ವರ್ಷಾರಂಭದಲ್ಲಿ ಬ್ರಿಜ್‌ ಭೂಷಣ್‌ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಜಗನ್‌ ರೆಡ್ಡಿಗೆ ಭಾರಿ ಹಿನ್ನಡೆ – ಪಕ್ಷದ ಇಬ್ಬರು ರಾಜ್ಯಸಭಾ ಸಂಸದರು ರಾಜೀನಾಮೆ; ಟಿಡಿಪಿ ಸೇರ್ಪಡೆಗೆ ಸಜ್ಜು

  • ಕೊರೊನಾ ವೈರಸ್ ಲ್ಯಾಬ್‍ನಲ್ಲಿ ಸೃಷ್ಟಿಯಾಗಿಲ್ಲ- WHO ಹೇಳಿಕೆಯನ್ನು ಮುಂದಿಟ್ಟ ಚೀನಾ

    ಕೊರೊನಾ ವೈರಸ್ ಲ್ಯಾಬ್‍ನಲ್ಲಿ ಸೃಷ್ಟಿಯಾಗಿಲ್ಲ- WHO ಹೇಳಿಕೆಯನ್ನು ಮುಂದಿಟ್ಟ ಚೀನಾ

    – ಲ್ಯಾಬ್‍ನಲ್ಲಿ ಸೃಷ್ಟಿಯಾಗಿದ್ದಕ್ಕೆ ಯಾವುದೇ ಸಾಕ್ಷಿ ಇಲ್ಲ

    ಬೀಜಿಂಗ್: ಲ್ಯಾಬ್‍ನಲ್ಲಿ ಕೊರೊನಾ ವೈರಸ್ ಸೃಷ್ಟಿ ಮಾಡಿರುವುದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಎರಡು ಬಾರಿ ಹೇಳಿದೆ ಎಂದು ಚೀನಾ ತಿಳಿಸಿದೆ.

    ಇಂದು ಇಡೀ ವಿಶ್ವಕ್ಕೆ ದೊಡ್ಡ ತಲೆನೋವಾಗಿರುವ ಕೊರೊನಾ ವೈರಸ್ ಮೊದಲು ಕಾಣಿಸಿಕೊಂಡಿದ್ದು ಚೀನಾದಲ್ಲಿ. ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರದೇಶದಲ್ಲಿ ಕಾಣಿಸಿಕೊಂಡ ಸೋಂಕು ಇಂದು ವಿಶ್ವವ್ಯಾಪಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆದರೆ ಇದನ್ನು ಚೀನಾ ಬಯೋವೆಪನ್ ಆಗಿ ಬಳಸುತ್ತಿದೆ. ಇದು ಚೀನಾದ ಲ್ಯಾಬ್‍ನಲ್ಲಿ ತಯಾರದ ಭಯಾನಕ ವೈರಸ್ ಎಂಬ ಮಾತುಗಳು ಜಾಗತಿಕ ಮಟ್ಟದಲ್ಲಿ ಕೇಳಿ ಬಂದಿದ್ದವು. ಇದನ್ನು ಓದಿ: ಕೊರೊನಾ ವೈರಸ್ ಸೃಷ್ಟಿ ಆಗಿದ್ದು ಎಲ್ಲಿ – ರಹಸ್ಯ ಭೇದಿಸಲು ಹೊರಟ ಅಮೆರಿಕ

    ಈ ಮಾತುಗಳನ್ನು ಚೀನಾ ಮುಂಚೆಯಿಂದಲೂ ತಳ್ಳಿ ಹಾಕಿಕೊಂಡು ಬಂದಿತ್ತು. ಈಗ ಮತ್ತೆ ಈ ವಿಚಾರವಾಗಿ ಮಾತನಾಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝೋವೋ ಲಿಜಿಯಾನ್, ಕೊರೊನಾ ಚೀನಾದ ವೈರಸ್ ಅಲ್ಲ. ಇದು ಯಾವುದೇ ಪ್ರಯೋಗಾಲಯಗಳಲ್ಲಿ ಮಾಡಲ್ಪಟ್ಟ ವೈರಸ್ ಅಲ್ಲ. ಇದಕ್ಕೆ ಯಾವುದೇ ಸಾಕ್ಷಿ ಕೂಡ ಇಲ್ಲ. ಇದೇ ಮಾತನ್ನು ವಿಶ್ವ ಆರೋಗ್ಯ ಸಂಸ್ಥೆ ಎರಡು ಬಾರಿ ಹೇಳಿದೆ ಎಂದು ಹೇಳಿದ್ದಾರೆ.

    ಬುಧವಾರ ಮಾತನಾಡಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಸಂಭವಿಸಿರುವ ಈ ಭಯಾನಕ ಪರಿಸ್ಥಿತಿ ಯಾಕೆ ಸೃಷ್ಟಿ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದರು. ಟ್ರಂಪ್ ಅವರ ಪ್ರತಿಕ್ರಿಯೆಗೆ ಮಾಧ್ಯಮಗಳು ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ಬಳಿ ಈ ಬಗ್ಗೆ ನೀವು ಮಾತನಾಡಿದ್ದೀರಾ ಎಂದು ಮರು ಪ್ರಶ್ನೆ ಹಾಕಿದ್ದಕ್ಕೆ, ಲ್ಯಾಬ್ ಬಗ್ಗೆ ಮಾತನಾಡಿದ ವಿಚಾರವನ್ನು ಚರ್ಚಿಸಲು ಇಷ್ಟ ಪಡುವುದಿಲ್ಲ. ಈ ವಿಚಾರವನ್ನು ಚರ್ಚಿಸುವ ಸರಿಯಾದ ಸಮಯ ಇದಲ್ಲ ಎಂದು ಉತ್ತರಿಸಿದ್ದರು. ಇದನ್ನು ಓದಿ: ಕೊರೊನಾ ಚೀನಾ ವೈರಸ್ ಅನ್ನಬೇಡಿ: ಭಾರತಕ್ಕೆ ಚೀನಾ ಮನವಿ

    ಈ ಹಿಂದೆಯೂ ಕೂಡ ಟ್ರಂಪ್ ಅವರು ಕೊರೊನಾ ವೈರಸ್ ನ್ನು ಚೀನಾ ವೈರಸ್ ಎಂದು ಹೇಳಿದ್ದರು. ಈ ವಿಚಾರವಾಗಿ ಕಿಡಿಕಾರಿದ್ದ ಚೀನಾ ಕೆಲ ಅಮೆರಿಕದವರು ಬೇಕು ಎಂದೇ ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಹೇಳುತ್ತಿದ್ದಾರೆ. ಯಾವುದೇ ಒಂದು ವೈರಸ್ ಅನ್ನು ಒಂದು ದೇಶಕ್ಕೆ ಸೀಮಿತಗೊಳಿಸುವುದು ತಪ್ಪು ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ ಎಂದು ಜಾಗತಿಕ ಮಟ್ಟದಲ್ಲಿ ಕೊರೊನಾ ಚೀನಾ ವೈರಸ್ ಅಲ್ಲ ಎಂದು ಅಭಿಯಾನ ಆರಂಭಿಸಿತ್ತು.

    ಒಂದು ಭಯಾನಕ ವೈರಸ್ ಅನ್ನು ಒಂದು ದೇಶಕ್ಕೆ ಸೀಮಿತ ಮಾಡಿದರೆ, ಅದೂ ದೇಶದ ಮುಂದಿನ ಬೆಳವಣಿಗೆಗೆ ಮಾರಕವಾಗುತ್ತದೆ. ಈ ಕಾರಣಕ್ಕೆ ಕೊರೊನಾವನ್ನು ಚೀನಾ ವೈರಸ್ ಎನ್ನಬೇಡಿ ಎಂದಿತ್ತು. ಜೊತೆಗೆ ಭಾರತ ಕೊರೊನಾ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆಯುವ ಸಂಕುಚಿತ ಮನೋಭಾವನೆಯನ್ನು ಹೊಂದಿಲ್ಲ ಎಂದು ಚೀನಾ ರಾಯಭಾರಿ ಅಂದು ಹೇಳಿದ್ದರು.